ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನುಕುಲಕ್ಕೆ ಹಸಿರೇ ಯೋಗ್ಯವಾದ ವಾತಾವರ ಕಲ್ಪಿಸಿತ್ತಿದೆ ಆದರೆ ಇತ್ತೀಚಿಗಿನ ದಿನಗಳಲ್ಲಿ ಅದರ ಅವನತಿಗೆ ಮನುಷ್ಯ ಮುಂದಾಗುತ್ತಿರುವುದು ಶೋಚನೀಯ ಈ ದಿಸೆಯಲ್ಲಿ ಮನುಕುಲಕ್ಕೆ ಸಂಕಷ್ಟ ತಪ್ಪಿದಲ್ಲ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಅಜಿತ್ ದೇವಾಡಿಗ ಹೇಳಿದರು. ಅವರು ಭಾನುವಾರ ಕೋಟದ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಇವರ ಸಂಯೋಜನೆಯೊಂದಿಗೆ ಕೋಟದ ರಾಷ್ಟ್ರೀಯ ಹೆದ್ದಾರಿ ಹಾಗೂ ದೇಗುಲದ ವಠಾರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 264ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮಸುತ್ತಮುತ್ತಲಿನ ವನಗಳಿಲ್ಲದೆ ಕಾಂಕ್ರೀಟ್ ಕಾಡಿನಲ್ಲಿ ವಾಸ್ತವ್ಯ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡನೆಟ್ಟು ಮುಂದಿನ ಪೀಳಿಗೆಗೆ ಯೋಗ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆನಗಳ್ಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಜ್ಞಾನವನ್ನು ನೀಡಲು ಕೆಸರಲ್ಲೊಂದಿನ ನೆಟ್ಟಿ ಎನ್ನುವ ವಿಶೇಷ ಕಾರ್ಯಕ್ರಮ ಆಯೋಜಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಚಾಲನೆ ನೀಡಿದರು. ಉಪ ಪ್ರಾಂಶುಪಾಲರಾದ ಸುಜಯ್ ಕೊಟೆಗಾರ್, ವಾಣಿಜ್ಯ ಶಾಸ್ತ್ರ ವಿಭಾಗದ ಇನ್ ಚಾರ್ಜ್ ಲತಾ ಪೈ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಅನೇಕ ಮನೋರಂಜನಾ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು. ತದನಂತರ ವಿದ್ಯಾರ್ಥಿಗಳಿಂದ ಗದ್ದೆ ನಾಟಿಯನ್ನು ಮಾಡಿಸುವುದರ ಮೂಲಕ ನೆಟ್ಟಿಯ ಬಗ್ಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಾಜಿ ಸೈನಿಕರ ಸಂಘ ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭಾನುವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಇಸಿಎಚೆಸ್ ಮಾಜಿ ಸೈನಿಕರು ಹಾಗೂ ವೀರನಾರಿಯರ ಚಿಕಿತ್ಸಾ ಸೌಲಭ್ಯಕ್ಕಾಗಿ ಉಡುಪಿಯಲ್ಲಿ ಯಾವುದೇ ಆಸ್ಪತ್ರೆಗಳಿಲ್ಲದಿರುವುದನ್ನು ಸಂಸದರ ಗಮನಕ್ಕೆ ತರಲಾಯಿತು. ಆದಷ್ಟು ಬೇಗ ಎಂಪನಾಲ್ಡ್ ಹಾಸ್ಪಿಟಲ್‌ಗಳು ಉಡುಪಿಯಲ್ಲಿ ಲಭ್ಯ ಮಾಡಿಕೊಡಬೇಕಾಗಿ ಅವರಲ್ಲಿ ಬೇಡಿಕೆ ಸಲ್ಲಿಸಿ, ಉಡುಪಿಯಲ್ಲಿ ಮಾಜಿ ಸೈನಿಕರ ಪುನರ್ವಸತಿ ಇಲಾಖೆಯನ್ನು ಸ್ಥಾಪಿಸುವುದು ಸೇರಿದಂತೆ ಮಾಜಿ ಸೈನಿಕರಿಗೆ ಜಮೀನು ನೀಡುವುದರ ಬಗ್ಗೆ ಕೂಡ ಮನವಿಯನ್ನು ಕೊಡಲಾಯಿತು. ಇದೇ ವೇಳೆ ಸಂಸದರು ಮಾಜಿ ಸೈನಿಕರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಿ ಕೊಡುವುದಾಗಿ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೇಶವ ಮಲ್ಪೆ, ಉಪಾಧ್ಯಕ್ಷರಾದ ಚಂದ್ರ ಅಮೀನ್, ಖಜಾಂಚಿ ಸುರೇಶ್ ಸಿ. ರಾವ್, ಕಾರ್ಯದರ್ಶಿ ಅಶೋಕ, ಸಂಘಟನೆಯ ಅಡ್ವೈಸರ್ ಶಿವಕುಮಾರ್ ನಾಯಿರಿ ಹಾಗೂ ಸಂಘಟನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೂರದ ಕರಾವಳಿಯ ಕುಂದಾಪುರದಿಂದ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದ್ರೂ ತಾಯಿ ನೆಲದ ಸಂಸ್ಕ್ರತಿ ಒಂದನ್ನು ಬೀಡದೇ ಕುಂದಾಪುರ ಕನ್ನಡದ ಕಂಪನ್ನು ಟೀಮ್ ಕುಂದಾಪುರಿಯನ್ಸ್ ಪಸರಿಸುತ್ತಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು. ಅವರು ಟೀಮ್ ಕುಂದಾಪುರಿಯನ್ಸ್ ಆಯೋಜಿಸಿರೋ ಕುಂದಾಪ್ರ ಕನ್ನಡ ಉತ್ಸವದಲ್ಲಿ ಆಶೀರ್ವದಿಸಿ ಮಾತನಾಡಿದರು. ಭಾಷೆ, ಸಂಸ್ಕ್ರತಿ, ಆಚಾರ ವಿಚಾರವನ್ನು ಯಾವತ್ತೂ ಮರೆಯಬಾರದು. ಕುಂದಾಪುರ ಪುಟ್ಟ ಪ್ರದೇಶ ಆದ್ರೂ ಕುಂದಾಪುರಿಗರು ಸಾಧನೆ ದೊಡ್ಡದು ಎಂದರು. ಬೆಂಗಳೂರಿನ ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಕುಂದಾಪುರ ಉತ್ಸವವು ಅದ್ದೂರಿಯಾಗಿ ನಡೆದಿದೆ. ಬೆಳಿಗ್ಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಕೊಲ್ಲೂರು ಮೂಕಾಂಬಿಕೆಯ ಟ್ಯಾಬ್ಲೋ ಮೆರವಣಿಗೆ ಹಾಗೂ ಸಂಕಲ್ಪಯಾತ್ರೆ ನಡೆಸಲಾಗಿದೆ. ನಾಗಸಾಧುಗಳಾದ ಧನಂಜಯ ಗಿರಿ ಮಹರಾಜ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೇಳೂರು ರಾಘವೇಂದ್ರ ಶೆಟ್ಟಿ, ಕುಂದಾಪುರ ಪ್ರತಿಷ್ಠಾನ ಅಧ್ಯಕ್ಷರಾದ ದೀಪಕ್ ಶೆಟ್ಟಿ ಬಾರ್ಕೂರು ಭಾಗಿಯಾಗಿದ್ದರು. ಕುಂದಾಪುರ ಕನ್ನಡ ಉತ್ಸವದಲ್ಲಿ ಕುಂದಾಪುರ ಪರಿಸರ ಹಳೆ ಕಾಲದ ವಸ್ತುಗಳ ಪ್ರದರ್ಶನ, ಸಂಸ್ಕ್ರತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ಸೀಟುಗಳ ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ಹಾಗೂ ಪದವಿ ಮಟ್ಟದ ವಿದ್ಯಾರ್ಥಿಗಳಿಂದ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ವೆಬ್‌ಸೈಟ್ https://shp.karnataka.gov.in ನಲ್ಲಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596 ಅಥವಾ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದು.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೇಂದ್ರ ಸರಕಾರದ ಬಡವರ ಕಲ್ಯಾಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು ಅದರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಣ ವ್ಯಾಪ್ತಿಯ ಬಡವರಿಗೆ ಸೂರು ಕಲ್ಪಿಸುವ ಮಹತ್ತರ ಯೋಜನೆಯಾಗಿದೆ ಎಂದು ಉಡುಪಿ – ಚಿಕ್ಮ ಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ)2.0 ಯೋಜನೆಯನ್ನು ಅನುಷ್ಠಾನಗೊಳಿಸುವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಆವಾಸ್ ಯೋಜನೆಯ ಫಲಕವನ್ನು ಅನಾವರಣಗೊಳಿಸಿ ಮಾತನಾಡಿದರು. ಈ ಯೋಜನೆಯ ಅನುಷ್ಠಾನ ಹಾಗೂ ಯಾವುದೇ ರಾಜಕಾರಣಗೊಳಿಸದೆ ಫಲಾನುಭವಿಗಳಿಗೆ ಸೂಕ್ತ ನೆರವು ಕಲ್ಪಿಸಲು ಸಂಸದರು ಮನವಿ ಮಾಡಿದರು.ಕೇಂದ್ರ ಸರಕಾರ ಈಗಾಗಲೇ 1ಕೋಟಿ ಮನೆ ಗುರಿ ಹೊಂದಿದ್ದು ಅಧಿಕಾರಿಗಳು ಸ್ಥಳೀಯಾಡಳಿತ ಜನಪ್ರತಿನಿಧಿಗಳು ಫಲಾನುಭವಿಗಳಿಗೆ ಕರಾರುವಾಕ್ಕಾಗಿ ಯೋಜನೆ ತಲುಪಿಸಲುಕರೆ ನೀಡಿದರು. ಕಾರ್ಯಕ್ರಮವನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಉಡುಪಿ ನಗರಾಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಸಮಾಲೋಚನ ಸಭೆಯು ನಡೆಯಿತು. ಶಾಲೆಯ ವಾರ್ಷಿಕಪತ್ರಿಕೆ ಜ್ಯೋತಿಷ್ಮತಿಯನ್ನು ಉದ್ಘಾಟಿಸಿ, ಸಭೆಯ ಅಧ್ಯಕ್ಷತೆಯನ್ನು ನಿರ್ವಹಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್. ಟಿ ತಿಮ್ಮಪ್ಪನವರು ಮಾತನಾಡಿ, ಶಾಲೆಯ ಊಟೋಪಚಾರವು ಇಲ್ಲಿನ ವಾತಾವರಣಕ್ಕೆ ಹೊಂದಿಕೆಯಾಗುವಂತಿದ್ದು, ಅತಿಖಾರ, ಉಪ್ಪು, ಸಿಹಿಗಳಿಂದ ಮುಕ್ತವಾಗಿದ್ದು, ಆರೋಗ್ಯದಾಯಕವಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಯಾವ ಶಿಸ್ತನ್ನು ರೂಢಿಸಿಕೊಂಡಿರುವರೋ ಅದನ್ನು ಮನೆಯಲ್ಲೂ ಮುಂದುವರಿಸಲು ಪಾಲಕರು ಪ್ರೇರೇಪಿಸಬೇಕು. ಮಕ್ಕಳ ಪ್ರೀತಿಯನ್ನು ಉಳಿಸಿ, ಬೆಳೆಸಿಕೊಳ್ಳಿ. ಎನ್ನುತ್ತಾ ಹಿತವಚನಗಳನ್ನಾಡಿದರು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರು ಅಕಾಡೆಮಿಕ್ಸ್ ಮತ್ತು ಟ್ರೈನಿಂಗ್ ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಪರಿಷತ್ ನಿರ್ದೇಶಕರಾದ ಡಾ. ಸಿ. ಕೆ. ಮಂಜುನಾಥ ಅವರು ಮಾತನಾಡಿ, ಭಾರತ ಈ 47% ನಷ್ಟು ಯುವಕರಿಂದ ಕೂಡಿದ ದೇಶ. ಯುವಕರಾಗಲಿರುವ ಮಕ್ಕಳಲ್ಲಿ ಸ್ಪರ್ಧಾತ್ಮಕವಾದ ಜಗತ್ತಿನಲ್ಲಿ ಬದುಕಲು ಹೊಸ ಹೊಸ ನೀತಿಗಳ ಅರಿವು ಅತ್ಯಗತ್ಯ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠ ಎಂಬ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಟ ಆಡುತ್ತಿದ್ದ ಜನರನ್ನು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುಧಾಪ್ರಭು ಅವರು ಬಂಧಿಸಿದ್ದಾರೆ. ಆರೋಪಿಗಳಾದ ರಾಜು, ರಮಾನಂದ, ರಾಜು , ಸಂತೋಷ್, ರಾಜೀವ್ ಹಾಗೂ ಕೃಷ್ಣ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 15,450 ರೂಪಾಯಿ, ಕಾರು-3, ಸ್ಕೂಟರ್ -2, ರೌಂಡ್ ಟೇಬಲ್ -1,ಪ್ಲಾಸ್ಟೀಕ್ ಚೇರಗಳು-6, ಇಸ್ಪೀಟ್ ಎಲೆಗಳನ್ನು ಸ್ವಾಧಿನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ್ ಪುತ್ರನ್ ಅವರನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪದಗ್ರಹಣ ಕಾರ್ಯಕ್ರಮದಲ್ಲಿ ಕ್ಲಬ್ ನ ನೂತನ ಅಧ್ಯಕ್ಷರಾದ ಲ. ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಮಾಜಿ ಜಿಲ್ಲಾ ಗವರ್ನರ್ ಲ. ಎಂಜೆಎಫ್ ದಿವಾಕರ ಶೆಟ್ಟಿ, ಪಿಎಂಜೆಎಫ್ ಲ. ರಂಜನ್ ಕಲ್ಕೂರ, ಪ್ರಾಂತಿಯ ಅಧ್ಯಕ್ಷರಾದ ಲ. ರಜತ ಹೆಗ್ಡೆ, ವಲಯ ಅಧ್ಯಕ್ಷರಾದ ಲ. ವಸಂತರಾಜ್ ಶೆಟ್ಟಿ, ಎಕ್ಸ್ಟೆಂಶನ್ ಚೇರ್ಮನ್ ಲ. ಅರುಣ್ ಕುಮಾರ್ ಹೆಗ್ಡೆ, ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್, ಸ್ಥಾಪಕ ಅಧ್ಯಕ್ಷರಾದ ಲ. ಅಶೋಕ್ ಶೆಟ್ಟಿ ಸಂಸಾಡಿ, ಮಾಜಿ ಅಧ್ಯಕ್ಷರಾದ ಲ .ಉದಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಲ. ವೆಂಕಟರಮಣ ನಾಯಕ್, ಕೋಶಾಧಿಕಾರಿ ಲ. ಅರುಣ್ ಕುಮಾರ್ ಶೆಟ್ಟಿ ನೂತನ ಕಾರ್ಯದರ್ಶಿ ಲ.ಭುಜಂಗ ಶೆಟ್ಟಿ ರಟ್ಟಾಡಿ, ಕೋಶಾಧಿಕಾರಿ ಲ. ಅಣ್ಣಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಸಂತೆ ಮಾರ್ಕೆಟ್ ಬಳಿ ಜು.14ರ ಮಧ್ಯರಾತ್ರಿ 2.30 ಸುಮಾರಿಗೆ ಅಂಗಡಿಯ ಶಟರ್ ಬಾಗಿಲು ಒಡೆದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನಗೈದಿದ್ದ ನಾಲ್ವರು ಕಳ್ಳರನ್ನು ಕುಂದಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಗಳಾದ ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಪಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಅವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಬಂಧಿಸಲಾಗಿದೆ. ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬಂದಿ ಮೋಹನ್, ಸಂತೋಷ್, ಪ್ರೀನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ…
