ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚಿಗಷ್ಟೇ ಉತ್ತಮ ಸಾಧಕ ಪ್ರಶಸ್ತಿಯನ್ನು ಪಡೆದಿರುವ ಹಾಜಿ ಕೆ. ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ ಹಾಗೂ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್‌ನ ಚಿತ್ರಕಲಾ ಶಿಕ್ಷಕ ರಮೇಶ ಹಾಂಡ ಇವರಿಗೆ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನ ಆಡಳಿತ ಮಂಡಳಿ ಮತ್ತು ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮ್ಮೂದ್, ಸಲಹಾ ಸಮಿತಿಯ ಸದಸ್ಯರಾದ ಅಬುಷೇಕ್ ಹಾಗೂ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್‌ನ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜ ರವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೂಡಬಿದಿರೆ ಮಹಾವೀರ ಕಾಲೇಜು ಆಡಿಟೋರಿಯಮ್ ನಡೆದ ಎರಡನೇ ರಾಜ್ಯ ಮಟ್ಟದ ಮುಕ್ತ ಕರ್ನಾಟಕ ಕರಾಟೆ ಚಾಪಿಂಯನ್‌ಶಿಪ್ 2016ಸ್ಪರ್ಧೆಯಲ್ಲಿ ಉಪ್ಪುಂದ ಅರೆಹಾಡಿ ವಿಶ್ವನಾಥ ದೇವಾಡಿಗ ಇವರು ಪೈಟಿಂಗ್‌ನಲ್ಲಿ ಚಿನ್ನದ ಪದಕ ಹಾಗೂ ಕಟಾದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಡ್ರಾಗನ್ ಪಿಸ್ಟನ ವಿದ್ಯಾರ್ಥಿಯಾಗಿದ್ದು ಇವರು ಅಬ್ಜಲ್ ಅವರಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ದೇಶದ ಜನಮಾನಸ ಭಾಷೆ ಹಿಂದಿ. ದೇಶದ ಏಕತೆ, ಗೌರವಗಳು ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ಅರಿತು ಗೌರವಿಸುವುದರಲ್ಲಿದೆ. ಮನಸ್ಸಿಗೆ ಹಿತವಾಗಿ ಸರಳವಾಗಿ ಸ್ಪಂದಿಸುವ ಹಿಂದಿ ಭಾಷೆಯಲ್ಲಿ ಎಲ್ಲರೂ ಮಾತನಾಡುವಂತಾಗಬೇಕು ಎಂದು ಕಿನ್ನಿಗೋಳಿ ಐಕಳದ ಪಾಂಪೈ ಮಹಾವಿದ್ಯಾಲಯದ ನಿವೃತ್ತ ಹಿಂದಿ ಪ್ರಾಧ್ಯಾಪಕ ಪ್ರೊ.ಗೋವಿಂದ ಭಟ್ ಕೆ.ಅವರು ಕರೆ ನೀಡಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ್ದ ರಾಷ್ಟ್ರೀಯ ಹಿಂದಿ ದಿವಸ್ ‘ಜ್ಯೋತ್ಸ್ನಾ’ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು. ಹಿಂದಿ ಸಾಹಿತ್ಯದಲ್ಲಿ ಹಲವು ಪ್ರಾದೇಶಿಕ ಭಾಷೆಗಳ, ಹಲವು ಪ್ರಾದೇಶಿಕ ಸಂಸ್ಕೃತಿಗಳ ಜ್ನಾನ ಅಡಗಿದ್ದು, ದೇಶದ ಸಂಪೂರ್ಣ ಪರಿಚಯವನ್ನು ಅದರಿಂದ ಪಡೆಯಬಹುದು. ವಿಶ್ವದ ಜನರಲ್ಲಿ ಅತೀ ಹೆಚ್ಚು ಬಳಕೆಯಲ್ಲಿಅರುವ ಭಾಷೆಗಳಲ್ಲಿ ನಮ್ಮ ರಾಷ್ಟ್ರಭಾಷೆ ಹಿಂದಿ ಮೂರನೇ ಸ್ಥಾನದಲ್ಲಿದೆ. ಹಿಂದಿ ಸಾಹಿತ್ಯದ ಸತ್ವವನ್ನು ಅರಿಯುವ ತವಕ ಬೆಳೆಯಬೇಕು. ಈ ಉತ್ಸವ ಒಂದು ದಿನಕ್ಕೆ ಸೀಮಿತವಾಗಿರದೇ ವರ್ಷವಿಡಿ ಭಾಷಾ ಪ್ರೇಮ ಮತ್ತು ವಿಕಾಸದ ಜಾಗೃತಿಯ ಕಾರ್ಯ ನಡೆಯಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಸೋಮವಾರ ನಡೆಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ಠೇವಣಿ ಸಂಗ್ರಹ, ಸಾಲ ನೀಡಿಕೆ, ವಸೂಲಿ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದೆ. ಅದರ ದುಡಿಯುವ ಬಂಡವಾಳ 34 ಕೋಟಿಗೇರಿದೆ. ವರ್ಷದ ಅಂತ್ಯಕ್ಕೆ ಅದು ಹೊಂದಿರುವ ಠೇವಣಿಯ ಮೊತ್ತ ರೂ. 23.59 ಕೋಟಿಯಾಗಿದ್ದು ಪ್ರಸಕ್ತ ವರ್ಷ ಅದನ್ನು ರೂ. 30 ಕೋಟಿಗೆ ಏರಿಸುವ ಗುರಿ ಹೊಂದಲಾಗಿದೆ. ರೂ 35 ಕೋಟಿ ಸಾಲ ವಿತರಿಸಿ, ರೂ 30 ಕೋಟಿ ಸಂಗ್ರಹಿಸಲಾಗಿದೆ. ಸಂಘ ರೂ 72.5 ಲಕ್ಷ ಲಾಭ ಗಳಿಸಿದೆ. ಸದಸ್ಯರ ಒತ್ತಾಯದ ಹಿನ್ನೆಲೆಯಲ್ಲಿ ಶೇ. 14 ಡಿವಿಡೆಂಡ್ ನೀಡಲಾಗುವುದು ಎಂದು ಅವರು ಹೇಳಿದರು. ಆರಂಭದಲ್ಲಿ ಗಣೇಶ ಗಂಗೊಳ್ಳಿ ರೈತಗೀತೆ ಹಾಡಿದರು. ವ್ಯವಸ್ಥಾಪಕ ಬಿ. ರಮೇಶ ಅಡಿಗ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಸೆಪ್ಟೆಂಬರ್ ೨೫ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹೊಳಪು ೨೦೧೬ ಇದರ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ಅವಳಿ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜನೆಯ ಮೂಲಕ ಒಗ್ಗೂಡಿಸಲು ಹೊರಟ ಕೋಟತಟ್ಟು ಪಂಚಾಯಿತಿಯ ಕಾರ್ಯ ಶ್ಲಾಘನಾರ್ಹ. ರಾಜ್ಯದಲ್ಲಿ ಕಾರಂತರ ಹುಟ್ಟೂರ ಪಂಚಾಯಿತಿ ಅಪರೂಪ ಮತ್ತು ವಿಶಿಷ್ಟ ಚಿಂತನೆಯ ಕಾರ್ಯಕ್ರಮದ ಮೂಲಕ ರಾಜ್ಯದಲ್ಲಿ ಗುರುತಿಸಿಕೊಂಡಿದೆ ಇದು ಸಂತಸದ ವಿಚಾರ ಎಂದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಎಚ್.ಪ್ರಮೋದ್ ಹಂದೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಆದರ್ಶ ಆಸ್ಪತ್ರೆ, ಉಡುಪಿ ಆಶ್ರಯದಲ್ಲಿ ಡಾ|| ಸರ್ವಪಳ್ಳಿ ರಾಧಾಕೃಷ್ಣನ್‌ರವರ ಜನ್ಮಜಯಂತಿ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಅನುಪಮ ಸೇವೆಯನ್ನು ಗುರುತಿಸಿ ಕುಂದಾಪುರ ತಾಲೂಕಿನ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗೇಶ್ ಶ್ಯಾನುಭಾಗ್ ಅವರಿಗೆ ’ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಂಟ್ವಾಡಿಯ ಶಾಲೆಯಲ್ಲಿ ಕಳೆದ 34 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಶಾಲೆಯ ಬೆಳವಣಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸದಲ್ಲಿ ಅತ್ಯುತ್ತಮ ಪಾತ್ರ ನಿರ್ವಹಿಸಿದ ಹಿನ್ನಲೆಯಲ್ಲಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕೋಡಿಯ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ. ಅನುಷಾ, ಸಂಪ್ರೀತಾ, ರಶ್ಮಿತಾ, ಸುಪ್ರೀತಾ, ನಿಖಿತಾ, ದೀಕ್ಷಿತಾ, ಭೂಮಿಕಾ ಟ್ರೋಫಿಯೊಂದಿಗೆ.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ಮತ್ತು ತಂಡ ನಿರ್ವಾಹಕಿ ಭವಾನಿ ಅವರು ಚಿತ್ರದಲ್ಲಿದ್ದಾರೆ. ವರದಿ : ನರೇಂದ್ರ ಎಸ್ ಗಂಗೊಳ್ಳಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಕೊನೆಯ ದಿನ ಜೇಸಿಐ ಕುಂದಾಪುರ ಸಿಟಿಯ ನಿಕಟಪೂರ್ವಾಧ್ಯಕ್ಷ ಚಂದ್ರಕಾಂತ್ ಅವರು ಜೇಸಿ ಸಂಸ್ಥೆಗೆ ನೀಡಿದ ಅನುಪಮ ಸೇವೆಯನ್ನು ಸ್ಮರಿಸಿ ಕಮಲ ಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಅಧ್ಯಕ್ಷ ಕುಂಭಾಸಿ ಮಂಜುನಾಥ ಕಾಮತ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜೇಸಿ ಪೂರ್ವಾ ವಲಯಾಧ್ಯಕ್ಷರಾದ ಅನಿಲ್ ಕುಮಾರ್, ವೈ. ಸುಕುಮಾರ್, ಕೃಷ್ಣಮೋಹನ್ ಪಿ. ಎಸ್, ಉದ್ಯಮಿಗಳಾದ ಆನಂದ ಕುಂದರ್, ಮಹಮ್ಮದ್ ಮೌಲ, ಜೇಸಿ ವಲಯ ಉಪಾಧ್ಯಕ್ಷ ನಿತಿನ್ ಅವಭೃತ, ಪೂರ್ವಾಧ್ಯಕ್ಷರಾದ ಕೆ. ಕಾರ್ತಿಕೇಯ ಮಧ್ಯಸ್ಥ, ಸಪ್ತಾಹ ಸಭಾಪತಿಗಳಾದ ಹುಸೇನ್ ಹೈಕಾಡಿ, ರಾಘವೇಂದ್ರ ಚರಣ ನಾವಡ, ಪೂರ್ವಾಧ್ಯಕ್ಷರಾದ ನಾಗೇಂದ್ರ ಪೈ, ವೆಂಕಟೇಶ ಪ್ರಭು, ಕಾರ್ಯದರ್ಶಿ ಗೌತಮ್ ನಾವಡ, ಜೇಸಿರೆಟ್ ಅಧ್ಯಕ್ಷೆ ಪುಷ್ಪಾ ಶೇಟ್, ಜ್ಯೂ.ಜೇಸಿ ಅಧ್ಯಕ್ಷ ಸ್ವಪ್ನಿಲ್ ತಂಕಪ್ಪನ್, ಯೋಜನಾಧಿಕಾರಿ ರಾಘವೇಂದ್ರ ಭಟ್, ಪ್ರಶಾಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ’ಗುರುವಂದನಾ’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಂಗೇಶ್ ಶೆಣೈ ಯಳಜಿತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಯಾವ ರೀತಿ ಗುರುಗಳು ಕಾರಣಿಭೂತರಾಗಿರುತ್ತಾರೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲೆಯ ಸಂಸ್ಥಾಪಕರಾದ ಡಾ. ಎನ್. ಕೆ. ಬಿಲ್ಲವ, ಶಾಲಾ ಸಂಚಾಲಕರಾದ ಶಂಕರ ಪೂಜಾರಿ, ಮುಖ್ಯೋಪಾಧ್ಯಾಯ ಪ್ರವೀಣ ಕುಮಾರ್ ಕೆ.ಪಿ., ಮೇಲ್ವಿಚಾರಕ ಎ.ಬಿ.ಪೂಜಾರಿ ಉಪಸ್ಥಿತರಿದ್ದರು ಗುರುವಂದನಾ ಕಾರ್ಯಕ್ರಮದ ಬಗ್ಗೆ ಕು. ಗೀತಾ ಆಚಾರ್ಯ ಪ್ರಾಸ್ತಾವಿಕ ನುಡಿಯನ್ನಾಡಿದರು. ಪಲ್ಲವಿ ಆಚಾರ್ಯ ಸ್ವಾಗತಿಸಿ, ರೇಷ್ಮಾ ಧನ್ಯವಾದಗೈದುರು. ಶಿಕ್ಷಕ ಗೋವಿಂದರಾಜ್ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದಿನ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ದುಶ್ಚಟಗಳು ನಮ್ಮ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಯುವಜನರು ತಮ್ಮ ಉತ್ತಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರುವ ಬಗ್ಗೆ ಮತ್ತು ದುಶ್ಚಟಗಳನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಗೊಳ್ಳಿ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಜಾಗೃತಿ ವೇದಿಕೆ ತ್ರಾಸಿ ವಲಯ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸತೀಶ ಎಂ.ನಾಯಕ್ ಅವರು ಮಾಹಿತಿ ನೀಡಿದರು. ಜನಜಾಗೃತಿ ವೇದಿಕೆ…
