Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇಲ್ಲಿಯ ವಿದ್ಯಾರ್ಥಿಗಳು ಸ. ಹಿ. ಪ್ರಾ. ಶಾಲೆ ಮರವಂತೆಯಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಎನ್. ಕೆ. ಬಿಲ್ಲವ, ಆಡಳಿತ ಮಂಡಳಿಯವರಾದ ಬಿ.ಎ.ರಝಾಕ್, ಮುಖ್ಯೋಪಾಧ್ಯಾಯರಾದ ಪ್ರವೀಣ್ ಕುಮಾರ್ ಕೆ.ಪಿ., ದೈಹಿಕ ಶಿಕ್ಷಕರುಗಳಾದ ಕಿರಣ್ ಗೌಡ ಮತ್ತು ಗೋವಿಂದರಾಜು ಹಾಗೂ ಶಾಲಾ ಶಿಕ್ಷಕರುಗಳು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಸ್ಟಾಪ್ ಕ್ಲಬ್‌ನವರು ಶಿಕ್ಷಕರ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದ್ದು ಇದೀಗ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಶಿಕ್ಷಕರನ್ನು ಗೌರವಿಸಿ, ಪ್ರತಿಭೆ ಪುರಸ್ಕಾರಕ್ಕೆ ಅವಕಾಶ ಕಲ್ಪಿಸುತ್ತಿರುವುದು ಅರ್ಥಪೂರ್ಣವಾಗಿದೆ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ಹೇಳಿದರು ಅವರು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಶಿಕ್ಷಕರ ಪ್ರತಿಭಾ ಸ್ಪರ್ಧೆ ಮತ್ತು ಮನೋರಂಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಂಡಾರ್‌ಕಾರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ. ಎಂ.ಗೋಂಡ, ಹಳೆ ವಿದ್ಯಾರ್ಥಿ ಸಂಘದ ಪೂರ್ವಾಧ್ಯಕ್ಷರಾದ ಮಡಾಮಕ್ಕಿ ಶಶಿಧರ ಶೆಟ್ಟಿ, ರಾಘವೇಂದ್ರ ಚರಣ ನಾವಡ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಿಕ್ಷಕರ ಬಗೆಗಿನ ಗೌರವ ಮತ್ತು ಪ್ರೀತಿ ಕೇವಲ ತೋರಿಕೆ ಮತ್ತು ತಾತ್ಕಾಲಿಕವಾಗಿರಬಾರದು. ವಿದ್ಯಾರ್ಥಿಗಳು ನಿಜವಾದ ಗೌರವವನ್ನು ಬೆಳೆಸಿಕೊಳ್ಳಬೇಕು.ಶಿಕ್ಷಕರು ಕೂಡ ಗೌರವದ ವ್ಯಕ್ತಿತ್ವವನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ರಸಾಯನ ಶಾಸ್ತ್ರ ಪ್ರಾಧ್ಯಾಪಕ ಆರ್ ಎನ್ ರೇವಣ್‌ಕರ್ ಹೇಳಿದರು. ಅವರು ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದರು. ಶಿಸ್ತುಬದ್ಧತೆ ಎನ್ನುವುದು ಎಲ್ಲರಲ್ಲೂ ಅಗತ್ಯ.ಉತ್ತಮ ಜೀವನಕ್ಕೆ ಗುರುವಿನ ಅಗತ್ಯತೆ ಇದೆ ಎಂದು ಅವರು ಹೇಳಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಎಲ್ಲಾ ಉಪನ್ಯಾಸಕರು ಉಪಸ್ಥಿರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ್ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಾಗರಾಜ ನಾಯಕ್ ಸ್ವಾಗತಿಸಿದರು. ಅಶ್ಮಿತಾ ಮತ್ತು ಸುಪ್ರೀತ ಪ್ರಾರ್ಥಿಸಿದರು.ಸ್ವಾತಿ ಬಿಲ್ಲವ ಕಾರ‍್ಯಕ್ರಮ ನಿರ್ವಹಿಸಿದರು. ಸಾಯೀ ಪ್ರಸಾದ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶೈಕ್ಷಣಿಕ ಕ್ಷೇತ್ರ ವ್ಯಾಪ್ತಿಯ ಶಿಕ್ಷಕರ ದಿನಾಚರಣೆಯು ಸೋಮವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆಯಿತು. ಶಾಸಕ ಕೆ. ಗೋಪಾಲ ಪೂಜಾರಿ ಸಮಾರಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕ್ಷಕ ದಿನ ದೇಶದ ಅಪ್ರತಿಮ ತತ್ವವೇತ್ತ ಡಾ. ಎಸ್. ರಾಧಾಕೃಷ್ಣನ್ ಅವರ ಬದುಕು, ಸಾಧನೆ ಮತ್ತು ವಿಚಾರಗಳನ್ನು ಮನನ ಮಾಡಬೇಕಾದ ದಿನ. ಅವರು ರಾಷ್ಟ್ರದ ಗುರು ಸ್ಥಾನದಲ್ಲಿರುವವರು. ಶಿಕ್ಷಕರು ಅವರ ಆದರ್ಶಗಳನ್ನು ಅನುಸರಿಸುವ ಮೂಲಕ ಸಮಾಜ ರೂಪಿಸುವ ತಮ್ಮ ಕೆಲಸ ನಿರ್ವಹಿಸಬೇಕು ಎಂದರು. ಉಡುಪಿ ಜಿಲ್ಲೆಯ ಉತ್ಕೃಷ್ಟ ಶೈಕ್ಷಣಿಕ ಸಾಧನೆಯ ಹಿಂದೆ ಎಲ್ಲ ಶಿಕ್ಷಕರ ಪ್ರಾಮಾಣಿಕ ದುಡಿಮೆ, ಶ್ರಮ ಇದೆ. ಅವರಿಂದಾಗಿ ಜಿಲ್ಲೆಯ ಜನರಿಗೆ, ಜನಪ್ರತಿನಿಧಿಗಳಿಗೆ ಗೌರವ ಬಂದಿದೆ. ಇಲ್ಲಿನ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸದಾ ಸ್ಪಂದಿಸಲಾಗಿದೆ. ಸುಗಮ ಶೈಕ್ಷಣಿಕ ಆಡಳಿತದ ಉದ್ದೇಶದಿಂದ ವಂಡ್ಸೆ ಕೇಂದ್ರಿತವಾಗಿ ಕ್ಷೇತ್ರ ಶಿಕ್ಷಣ ಕಚೇರಿ ತೆರೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬಾರ್ಕೂರು: ಸ್ವರ್ಗಕ್ಕೆ ಸಮನಾದದು ಎನಾದರೂ ಇದ್ದರೆ ಅದು ನಮ್ಮ ತುಳುನಾಡು ಎನ್ನಬಹುದು. ಪ್ರಪಂಚದ ಯಾವುದೇ ಮೂಲೆಗೆ ಹೋದರು ಕೂಡ ಇಲ್ಲಿರುವಷ್ಟು ಸಂಸ್ಕೃತಿ ಸಂಸ್ಕಾರರ ಸಮ್ಮಿಲನ ಬೇರೆಲ್ಲೂ ಕಾಣಲು ಸಿಗುವುದಿಲ್ಲ. ಸುಸಂಸ್ಕೃತರ ಸಮ್ಮಿಳಿತವಾಗಿರುವ ಈ ಭಾಗಕ್ಕೆ ಕಲ್ಚರಲ್ ಲ್ಯಾಂಡ್ ಎಂದು ಕರೆದರೆ ಅತಿಶಯೋಕ್ತಿ ಅಲ್ಲ ಎಂದು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಮೀಠಾಧೀಶ್ವರ ಅಷ್ಟೋತ್ರ ಶತಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು. ಅವರು ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ, ಕಾಸರಗೋಡು ಬದಿಯಡ್ಕದಲ್ಲಿ ಡಿಸೆಂಬರ್ ೯ರಿಂದ ೧೩ರವರೆಗೆ ನಡೆಯಲಿರುವ ವಿಶ್ವ ತುಳುವೆರೆ ಆಯನೋ ೨೦೧೬ರ ರಥ ಯಾತ್ರೆಗೆ ಆರತಿ ಬೆಳಗಿ ಚಾಲನೆ ನೀಡಿ ಮಾತನಾಡಿದರು. ನಮ್ಮಲ್ಲಿ ಇಂದಿಗೂ ಕೂಡ ಕೃಷಿ ಮತ್ತು ಋಷಿ ಸಂಸ್ಕೃತಿಯನ್ನು ಕಾಣಬಹುದು. ನಮ್ಮ ನೆಲ, ಜಲ ಮತ್ತು ನಮ್ಮ ಭಾಷೆಯ ಮೇಲೆ ನಮಗೆ ಅಭಿಮಾನ ಬೇಕು, ಇಂದು ಆ ಅಭಿಮಾನಿದ ಕೊರತೆ ಕಾಣುತ್ತಿದೆ. ಇದನ್ನು ನಿಗಿಸುವ ನಿಟ್ಟಿನಲ್ಲಿ ಸಂಘಟಕ ಆಯೋಜಿಸಿರುವ ಸಮ್ಮೇಳನ ಯಶಸ್ವಿಯಾಗಲಿ…

Read More

ಕುಂದಾಪ್ರ ಡಾಟ್ ಕಾಮ ಸುದ್ದಿ. ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕಿದೆ. ಇಂದಿನ ದಿನಗಳಲ್ಲಿ ಜನರಿಗೆ ಆರೋಗ್ಯದ ಬಗ್ಗೆ ಮಾಹಿತಿ ಅವಶ್ಯವಿದ್ದು, ವಿವಿಧ ಸಂಘ ಸಂಸ್ಥೆಗಳು ಆರೋಗ್ಯ ಮಾಹಿತಿ ಶಿಬಿರಗಳನ್ನು ಹಮ್ಮಿಕೊಳ್ಳಬೇಕಿದೆ. ಮನೆಯ ವಠಾರದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದರ ಮೂಲಕ ಮತ್ತು ಆರೋಗ್ಯ ತಪಾಸಣೆ ನಡೆಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದರು ಜನಜಾಗೃತಿ ವೇದಿಕೆಯ ತ್ರಾಸಿ ವಲಯದ ನಿಕಟಪೂರ್ವ ಅಧ್ಯಕ್ಷ ಬಿ.ರಾಘವೇಂದ್ರ ಪೈ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ಆಶ್ರಯದಲ್ಲಿ ಜರುಗಿದ ಸಾಮಾನ್ಯ ಆರೋಗ್ಯ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪಂಚಗಂಗಾವಳಿ ಒಕ್ಕೂಟದ ಅಧ್ಯಕ್ಷ ಎಚ್.ಎಂ. ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಲಾಶ್ರೀ ಜಿ.ಪಿ. ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಮಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿದೆ. ಈ ನೆಲೆಯಲ್ಲಿ ಇದು ಕೇವಲ ಭಾಷಣಕ್ಕೆ ಸೀಮಿತವಾದ ವೇದಿಕೆಯಾಗದೇ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುವಲ್ಲಿ ಪರಿಪೂರ್ಣತೆ ಕಾಣಬೇಕು ಎಂದು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು. ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಸಿಗದೇ ಅವರ ಪ್ರತಿಭೆ ಕಮರಿ ಹೋಗುತ್ತಿತ್ತು, ಆದರೆ ಈಗ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಅವಕಾಶಗಳು ದೊರಕುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿಪಂ ಸದಸ್ಯ ಶಂಕರ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಶಾಸಕ ಕೆ. ಗೋಪಾಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪರಿಶುದ್ಧವಾದ ನಮ್ಮ ಭರತಭೂಮಿಯಲ್ಲಿ ವೇದಗಳ ಆಧಾರದ ಮೇಲೆ ಹಿಂದೂಧರ್ಮ ಕಟ್ಟಲ್ಪಟ್ಟಿದೆ. ಈ ಧರ್ಮದಲ್ಲಿ ಹಲವಾರು ದೇವರು-ದೈವ ಹಾಗೂ ಸನ್ನಿಧಿಯನ್ನು ಗುರುತಿಸುವುದರಿಂದ ಯಾವುದೇ ಬಿಗುವಾದ ಕಟ್ಟುಪಾಡುಗಳಿಲ್ಲ. ಅಲ್ಲದೇ ಧಾರ್ಮಿಕ ವಿಷಯದಲ್ಲಿ ಎಲ್ಲರಿಗೂ ವಿಶೇಷ ಸ್ವಾತಂತ್ರ್ಯ ಕೊಟ್ಟ ಧರ್ಮ ನಮ್ಮದು ಎಂದು ನಿವೃತ್ತ ಉಪನ್ಯಾಸಕ ಪಡುವರಿ ಶೇಷಪ್ಪಯ್ಯ ಹೇಳಿದರು. ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕಸಭೆಯಲ್ಲಿ ಉಪನ್ಯಾಸ ನೀಡಿದರು. ಧರ್ಮದಿಂದ ಮಾನವನಿಗೆ ಸಹಬಾಳ್ವೆ, ನೆಮ್ಮದಿ ಹಾಗೂ ಸಂತೋಷ ದೊರೆಯುತ್ತದೆ. ಇದರಲ್ಲಿ ಭಕ್ತರ ಪಾಲುದಾರಿಕೆಯೂ ಮುಖ್ಯವಾಗಿರುತ್ತದೆ. ಹಾಗೆಯೇ ಹಿಂದೆ ಸಾರ್ವಜನಿಕ ಗಣೇಶೋತ್ಸವಗಳು ಸ್ವಾತಂತ್ರ ಸಂಗ್ರಾಮ, ದೇಶಭಕ್ತಿಯ ನವಚೇತನ ಉದ್ದೀಪನಗೊಳಿಸುವ ಸಲುವಾಗಿ ಪ್ರಾರಂಭಿಸಲಾಯಿತು ಎಂಬ ಕುರಿತು ವಿವರಿಸಿದರು. ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಶ್ರೀ ಸೇನೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೆ. ಸೀತಾರಾಮ ಅಡಿಗ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉತ್ಸವದ ಪ್ರಯುಕ್ತ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೇಡಿಯೋ ಸಿಟಿ ಎಫ್.ಎಂ ಬೆಂಗಳೂರಿನ ‘ಲವಿಟ್’ ಸಂಸ್ಥೆಯ ಸಹಯೋಗದೊಂದಿಗೆ ನಡೆಸಿದ  ‘ರೇಡಿಯೋ ಸಿಟಿ ಸೂಪರ್ ಸಿಂಗಿಂಗ್ ಸೀಸನ್ – 8’ ಸ್ಪರ್ಧೆಯಲ್ಲಿ ತಾಲೂಕಿನ ಕಂಬದಕೋಣೆ ಗಣೇಶ ಕಾರಂತ ವಿಜೇತರಾಗಿದ್ದಾರೆ. ರಾಷ್ಟ್ರದ ಪ್ರಮುಖ 15 ನಗರಗಳಲ್ಲಿ ಸ್ಪರ್ಧೆ ನಡೆದಿದ್ದು, ಒಟ್ಟು 1.70 ಲಕ್ಷ ಯುವ ಗಾಯಕರು ಭಾಗವಹಿಸಿದ್ದರು. ಬೆಂಗಳೂರು ನಗರದಲ್ಲಿ ನಡೆದ ಸ್ಪರ್ಧೆಯಲ್ಲಿ 24,500 ಮಂದಿ ಪಾಲ್ಗೊಂಡಿದ್ದರು. ಅಂತಿಮ ಸುತ್ತಿನಲ್ಲಿ ಆಯ್ಕೆಯಾದ 6 ಪ್ರತಿಭಾನ್ವಿತರಲ್ಲಿ ಗಣೇಶ್ ಕಾರಂತ ಅವರು ‘ಸಂತೋಷಕ್ಕೆ ಹಾಡು ಸಂತೋಷಕ್ಕೆ’ ಎಂಬ ಗೀತೆಯನ್ನು ಹಾಡಿ 1ಲಕ್ಷ ರು. ನಗದು ಪುರಸ್ಕಾರದೊಂದಿಗೆ ವಿಜೇತರಾದರು. ಅಲ್ಲದೇ ಖ್ಯಾತ ಚಲನಚಿತ್ರ ನಟ-ನಿರ್ದೇಶಕ ರಮೇಶ್ ಅರವಿಂದ ಅವರ 100ನೇ ಚಲನಚಿತ್ರ ‘ಪುಷ್ಪಕ ವಿಮಾನ’ದಲ್ಲಿ ಹಾಡುವ ಅವಕಾಶವನ್ನೂ ಪಡೆದುಕೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಗಣೇಶ್ ಕಾರಂತ್ ಬಿಎಸ್‌ಎನ್‌ಎಲ್ ಮಂಗಳೂರು ಜಿಲ್ಲಾ ಉಪಮಹಾಪ್ರಬಂಧಕ ಕೆ.ಶಿವರಾಮ ಕಾರಂತ ಹಾಗೂ ಯಶೋದ ಅವರ ಪುತ್ರರಾಗಿದ್ದು, ‘ಎಮ್‌ಪಸಿಸ್’ ಸಾಪ್ಟ್‌ವೇರ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕತಾರ್‌ನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಕೆ. ಆರ್. ಗಿರೀಶ್ ಕುಮಾರ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಗಿರೀಶ್ ಅವರ ತಾಯಿ, ಪತ್ನಿ ಇಂಧೂ ಗಿರೀಶ್, ಮಕ್ಕಳಾದ ಆದಿತ್ಯ ಕೃಷ್ಣ ಗಿರೀಶ್, ಆದರ್ಶ ಕೃಷ್ಣ ಗಿರೀಶ್ ಅವರೊಂದಿಗೆ ದೇವಳಕ್ಕೆ ಭೇಟಿ ನೀಡಿದ್ದ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಭೇಟಿಯ ಸಂದರ್ಭದಲ್ಲಿ ದೇವಳದ ಆರ್.ಎನ್.ಎಸ್ ವಸತಿಗೃಹಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ವಾಟರ್ ಪ್ಯೂರಿಪೈಯರ್ ಹಾಗೂ ಸಿಸಿ ಕ್ಯಾಮರಾಗಳನ್ನು ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ವಸತಿಗೃಹದ ಸಿಬ್ಬಂಧಿ ನಾಗರಾಜ ಖಾರ್ವಿ, ದೇವಳದ ಸಿಬ್ಬಂಧಿ ಸೀತಾರಾಮ, ಶಬರೀಶ್ ಮೊದಲಾದವರು ಉಪಸ್ಥಿತರಿದ್ದರು. ಕತಾರ್‌ನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಕೆ. ಆರ್. ಗಿರೀಶ್ ಕುಮಾರ್ ವೃತ್ತಿಯಲ್ಲಿ ಇಂಜಿನಿಯರ್. ಕಳೆದ 24ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದು, 10 ವರ್ಷಗಳಿಂದ ಕತಾರ್‌ನ ಪ್ರಸಿದ್ಧ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಇದರೊಂದಿಗೆ ಸಾಮಾಜಿಕ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Read More