Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಂಟರಯಾನೆ ನಾಡವರ ಮಾತೃ ಸಂಘ ರಿ. ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಮಿಲಾಗ್ರಿಸ್ ಕಾಲೇಜುನ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಅವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ದಶಮ ಸಂಭ್ರಮದ ಅಧ್ಯಕ್ಷರಾಗಿ, ಪ್ರತಿಷ್ಠಿತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಲಹಾ ಸಮಿತಿಯ ಸದಸ್ಯರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ರಿ. ಮಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾಗಿ, ಪ್ರಸ್ತುತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್ ಅವರು ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಚ್. ಎಲ್. ಏನ್. ರಾವ್ ಅವರು ವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿದ್ಯಾ ವಾಚಸ್ಪತಿ ಅಂತರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರಾದ ನಾಡೋಜ ಡಾಟ ಮಹೇಶ್ ಜೋಶಿ ಆಗಮಿಸಿ ಶುಭ ಹಾರೈಸಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯುವುದು ಸಾಧಕರಿಗೆ ಹಿಂದೆಂದೂ ಪಡೆಯದೇ ಇರುವ ವಿಶೇಷ ಪ್ರಶಸ್ತಿಯೊಂದಿಗೆ ಗೌರವ ಸಹ ಹೆಚ್ಚಾದಂತೆ, ಅಲ್ಲದೆ ಇಂತಹ ಬಹುಮುಖ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದರಿಂದ ಪ್ರತಿಷ್ಠಿತ ಸಂಸ್ಥೆಯ ಪ್ರತಿಷ್ಠೆಯು ಸಹ ಹೆಚ್ಚಾಗುತ್ತದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಹಾಗೂ  ಪ್ರಾಥಮಿಕ ವಿಭಾಗದ ಶಿಕ್ಷಕರಿಗೆ ಆಂಗ್ಲ ಭಾಷಾ ಪ್ರಾವಿಣ್ಯತೆಯೊಂದಿಗೆ ಸಂವಹನ ಕೌಶಲ್ಯಗಳು ಎಂಬ ಶೀರ್ಷಿಕೆಯಡಿ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಅರುಣ ಎಸ್. ಶಿಕ್ಷಣ ಸಮಾಲೋಚಕಿ ಹಾಗೂ ಮೃದು ಕೌಶಲ್ಯಗಳ ತರಬೇತುಗಾರ್ತಿ ಕಾರ್ಯಗಾರದಲ್ಲಿ ಆತ್ಮವಿಶ್ವಾಸ, ಧನಾತ್ಮಕ ಆಲೋಚನೆ ಹಾಗೂ ಸಮಯ ನಿರ್ವಹಣೆಯ ಮೂಲಕ ಮಕ್ಕಳ ಮನದಿಂಗಿತವನ್ನು ಅರಿತು ಜ್ಞಾನವನ್ನು ಬಿತ್ತರಿಸಿದ್ದಲ್ಲಿ ಒಬ್ಬ ಶಿಕ್ಷಕ ಯಶಸ್ಸಿನ ಮೆಟ್ಟಿಲೆರುತ್ತಾನೆ. ಹಾಗೆಯೇ ಸಮಯಕ್ಕೆ ತಕ್ಕಂತೆ ಸಮಾಜವನ್ನು ಎದುರಿಸಲು ಮಗುವನ್ನು ತಯಾರಿಸುವುದರೊಂದಿಗೆ ತಾನು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಸಹಾಯಕ ಶಿಕ್ಷಕಿ ಪದ್ಮಾವತಿ ಅವರು ಎಲ್ಲರನ್ನು ಸ್ವಾಗತಿಸಿದರು. ಸಹಾಯಕ ಶಿಕ್ಷಕಿ ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಥಮಿಕ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ಸೋಮವಾರ “ಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್”ಕಾರ್ಯಕ್ರಮ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಕೌಶಲ್ಯಗಳು, ಸಂದರ್ಶನ ಸಿದ್ಧತೆ ಹಾಗೂ ಕಾರ್ಪೊರೇಟ್ ಕ್ಷೇತ್ರಕ್ಕೆ ತಯಾರಾಗುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರೀತಿ ಹೆಗ್ಡೆ ಸ್ವಾಗತಿಸಿದರು. ಮೇಘಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಹಾಗೂ ಐಟಿ ಅಸೋಸಿಯೇಷನ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 119ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಟಿ.ಎನ್.ಪ್ರಭು, ತಲ್ಲೂರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ, ಬ್ಯಾನರ್ ಕಲಾವಿದ ಕೆ.ಕೆ. ರಾಮನ್, ರಜನಿ ಎನ್. ಪ್ರಭು, ವಿಶ್ವನಾಥ್ ಶ್ಯಾನುಭಾಗ್, ಆಶಾಕಾರ್ಯಕರ್ತೆ ಜ್ಯೋತಿ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖ್ಯಾತ ಬ್ಯಾನರ್ ಕಲಾವಿದ ಕೆ.ಕೆ.ರಾಮನ್, ಕುಂದಾಪುರ ಮತ್ತು ಶಾಲಿನಿ, ಉಪ್ಪಿನಕುದ್ರು ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ತದನಂತರ ಯಕ್ಷೇಶ್ವರಿ ತಂಡ ಉಪ್ಪಿನಕುದ್ರು ಇವರಿಂದ ಕುಣಿತ ಭಜನೆ ಜರುಗಿತು. ರಾಜೇಂದ್ರ ಪೈ ಅವರು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಇಂದಿನ ಸಮಾಜದಲ್ಲಿ ನಾವು ಸ್ವಾತಂತ್ರವಾಗಿ ಬದುಕಬೇಕೆಂದರೆ ಕಾನೂನು ಸುವ್ಯವಸ್ಥೆಗಳ ಕುರಿತು ಮಾಹಿತಿ ಎಲ್ಲರಿಗೂ ಅಗತ್ಯ ಎಂದು ಬ್ರಹ್ಮಾವರ ಪೋಲಿಸ್ ಸ್ಟೇಷನ್‌ನ ಸಬ್ ಇನ್ಸ್‌ಪಕ್ಟೆರ್‌ ಮುಕ್ತಾ ಬಾಯಿ ಹೇಳಿದರು. ಅವರು ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ನಡೆಯುತ್ತಿರುವ ಬ್ಯೂಟೀಪಾರ್ಲರ್ ಮತ್ತು ಕಂಪ್ಯೂಟರ್ ಡಿ.ಟಿ.ಪಿ. ಶಿಭಿರಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸೈಬರ್ ಕ್ರೈಮ್‌ ಬಗ್ಗೆ ವಾಟ್ಸಪ್ ಗ್ರೂಪ್‌ಗಳಿಗೆ ಪರಿಚಯವಿಲ್ಲದವರಿಂದ ಗ್ರೂಪ್‌ಗೆ ಸೇರಿಸಿದರೆ ಗ್ರೂಪ್‌ನಿಂದ ಹೊರಬಂದು ಸುರಕ್ಷಿತವಾಗಿರಬೇಕು ಹಾಗೂ ಪೋಕ್ಸೋ ಕಾಯ್ದೆಯ ಬಗ್ಗೆ ತಿಳಿಸಿದರು. ಸ್ನಾಪ್ ಚಾಟ್‌ಗಳನ್ನು ತುಂಬಾ ಜಾಗರೂಕತೆಯಿಂದ ಬಳಸಿ ಇದರಲ್ಲಿ ತೊಂದರೆ ಆಗುವ ಸಾಧ್ಯತೆ ಜಾಸ್ತಿ ಇರುತ್ತದೆ. ಆತ್ಯಹತ್ಯೆಗೆ ಯುವ ಜನಾಂಗ ಆಲೋಚನೆ ಮಾಡದೇ ಸಹನೆಯಿಂದ ಯೋಚಿಸಿ ಬಾಳಬೇಕು. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇದೆ, ಜೀವನ ಇರುವುದು ಒಂದು ಸಾರಿ ಹಾಗಾಗಿ ಉತ್ತಮ ರೀತಿಯಲ್ಲಿ ಬದುಕನ್ನು ಜೀವಿಸಿ ಎಂದು ಹೇಳಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾದಂತಹ ಬ್ರಹ್ಮಾವರ ಅಸಿಸ್ಟಂಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಾಯಿಯೇ ಮೊದಲ ಗುರು. ಮನೆಯೇ ಮೊದಲ ಪಾಠಶಾಲೆ. ಈ ಮಾತಿನಂತೆ ಇಂದು ತಾಯಂದಿರೇ ತಮ್ಮ ಮಕ್ಕಳನ್ನು ತಿದ್ದಿ ತೀಡಬೇಕು. ಇಳಿ ವಯಸ್ಸಿನಲ್ಲಿಯೇ ನಾವು ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಕಲಿಸಿದಾಗ ಮಾತ್ರ ಸಮಾಜದಲ್ಲಿ ದೌರ್ಜನ್ಯವೇ ಕಾಣದಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು. ಜಿಲ್ಲಾ ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಉಡುಪಿ, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಸಂಘ ಉಡುಪಿ ಹಾಗೂ ವಿವಿಧ ಸಂಘಟನೆಯ ಸಹಯೋಗದೊಂದಿಗೆ ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಮಹಿಳಾ ಸ್ಪಂದನಾ ಸಮಾವೇಶ ನಿಮ್ಮ ದೂರು ನಮ್ಮ ಪರಿಹಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಚೈತನ್ಯ ಸ್ತ್ರೀ ಶಕ್ತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೇಮಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ದಾನಿಗಳ ನೆರವಿನಿಂದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್ ಹಾಗೂ ಲೇಖನ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಮೇಲ್‌ಗಂಗೊಳ್ಳಿಯ ಡಾ. ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ಜರಗಿತು. ಕೆನರಾ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಪ್ರಮೋದ ಗಾಣಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ನೋಟ್ಸ್ ಬುಕ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅವರು ಶಿಕ್ಷಣ ಮಾಹಿತಿ ನೀಡಿದರು. ಗಂಗೊಳ್ಳಿ ಜೇಸಿಐ ಕಾರ್ಯದರ್ಶಿ ನಾಗರಾಜ ಖಾರ್ವಿ, ಮಹಮ್ಮದ್ ಹುಸೇನ್, ಸರಸ್ವತಿ, ಜಿ.ಈಶ್ವರ, ಕಲಾಶ್ರೀ ಶಿಕ್ಷಣ ಬಳಗದ ಅಧ್ಯಕ್ಷೆ ಸುಮಿತ್ರಾ ಜಿ., ನವೀನ್ ಜಿ., ವಿಜೇತ ಕೆ., ಸುನೀತಾ, ಹೇಮಾ, ಸುಕನ್ಯಾ, ಮಂಜುನಾಥ ಜಿ., ನವೀನ್ ಜಿ. ಉಪಸ್ಥಿತರಿದ್ದರು. ಸುಮಿತ್ರಾ ಸ್ವಾಗತಿಸಿದರು. ವಿಜೇತ ಕಾರ್ಯಕ್ರಮ ನಿರ್ವಹಿಸಿದರು. ಸರಸ್ವತಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಸರಕಾರಿ ಪದವಿ ಪೂರ್ವ ಕಾಲೇಜಿನ 1990ರ ಎಸ್.ಎಸ್.ಎಲ್.ಸಿ ಸಮಾನ ಮನಸ್ಕ ವಿದ್ಯಾರ್ಥಿಗಳ SSLC-1990LM ಫ್ಯಾಮಿಲಿ ವಾಟ್ಸಪ್ಪ್ ಬಳಗದ 6ನೇ ಕುಟುಂಬ ಮಿಲನ ಕಾರ್ಯಕ್ರಮವು ಬಳಗದ ಸದಸ್ಯರಾದ ಸಿದ್ದಾಪುರ ಮೇಲ್ ಕಡ್ರಿ ವಿದ್ವಾನ್ ಗಣೇಶ್ ಅಡಿಗರ ಮನೆಯಲ್ಲಿ ನೆರವೇರಿತು. ಸುಮಾರು 50ಕ್ಕೂ ಅಧಿಕ ಕುಟುಂಬ ಸದಸ್ಯರು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ತಮಾಷೆಯ ಪಂದ್ಯಗಳನ್ನು ನಡೆಸಿ ಬಹುಮಾನಗಳನ್ನು ನೀಡಲಾಯಿತು. 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದಲ್ಲಿ 92% ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾದ ಹೊಸಂಗಡಿ ಕಾಲೇಜಿನ ಸುವಿಧಾ ಗಣಪತಿ ಶೆಟ್ಟಿ ಅವರಿಗೆ ನಗದು ಪುರಸ್ಕಾರದೊಂದಿಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಶಾಲೆಗಳಲ್ಲಿ ಕಲಿತು   ಉತ್ತಿರ್ಣರಾದ ಬಳಗದ ಸದಸ್ಯರ ಮಕ್ಕಳಾದ ಪ್ರಣಮ್ಯ ಗುರುಪ್ರಸಾದ್ ಉಪ್ಪೂರ್, ಶ್ರೇಯಾಂಕಾ ಶಂಕರ್ ಚಿಟ್ಟೆ, ಅಂಶು ಯೋಗೇಂದ್ರ ನಾಯ್ಕ್, ಸ್ಕಂದ ಸುಭಾಸ್ ರಾವ್ ಅವರನ್ನು ಅಭಿನಂದಿಸಿ ಸನ್ಮಾನಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಲಾಯಿತು.  ತಸ್ಮಯಿ ಎನ್. ತಲ್ಲಂಜೆ ಮತ್ತು ತನ್ಮಯಿ ಎನ್. ತಲ್ಲಂಜೆ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಅಶೋಕ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಸ್ವಚ್ಛತೆ ಎನ್ನುವುದು ಆರೋಗ್ಯಕರ ಸಮಾಜದ ಅಡಿಪಾಯ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಇದೇ ಉದ್ದೇಶವನ್ನು ಮನಗಂಡು ಮೂಡುಬಿದಿರೆಯಲ್ಲಿ ವಿವಿಧ ಸಂಘ–ಸಂಸ್ಥೆಗಳು ಕೈಜೋಡಿಸಿ “ಸ್ವಚ್ಛ ಸಂಕಲ್ಪ” ಎಂಬ ಮಹತ್ವದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿವೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್‌ನಿಂದ ಕಳೆದ 12 ವರ್ಷಗಳಿಂದ ಅಳಿವೆ ಪ್ರದೇಶದಲ್ಲಿ ನಿರಂತರವಾಗಿ ಸ್ವಚ್ಛತಾ ಅಭಿಯಾನ ನಡೆಸುತ್ತ ಬರಲಾಗಿದೆ. ನಂದಿನಿ ಹಾಗೂ ಫಾಲ್ಗುಣಿ ನದಿಗಳು ಈ ಭಾಗದಲ್ಲಿ ಹರಿಯುತ್ತಿದ್ದು, ಅವುಗಳಿಗೆ ಸಂಪರ್ಕ ಹೊಂದಿರುವ ಚರಂಡಿಗಳ ಮೂಲಕ ತ್ಯಾಜ್ಯಗಳು ನದಿಗೆ…

Read More