Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಸೋಮವಾರ ನಡೆಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ಠೇವಣಿ ಸಂಗ್ರಹ, ಸಾಲ ನೀಡಿಕೆ, ವಸೂಲಿ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದೆ. ಅದರ ದುಡಿಯುವ ಬಂಡವಾಳ 34 ಕೋಟಿಗೇರಿದೆ. ವರ್ಷದ ಅಂತ್ಯಕ್ಕೆ ಅದು ಹೊಂದಿರುವ ಠೇವಣಿಯ ಮೊತ್ತ ರೂ. 23.59 ಕೋಟಿಯಾಗಿದ್ದು ಪ್ರಸಕ್ತ ವರ್ಷ ಅದನ್ನು ರೂ. 30 ಕೋಟಿಗೆ ಏರಿಸುವ ಗುರಿ ಹೊಂದಲಾಗಿದೆ. ರೂ 35 ಕೋಟಿ ಸಾಲ ವಿತರಿಸಿ, ರೂ 30 ಕೋಟಿ ಸಂಗ್ರಹಿಸಲಾಗಿದೆ. ಸಂಘ ರೂ 72.5 ಲಕ್ಷ ಲಾಭ ಗಳಿಸಿದೆ. ಸದಸ್ಯರ ಒತ್ತಾಯದ ಹಿನ್ನೆಲೆಯಲ್ಲಿ ಶೇ. 14 ಡಿವಿಡೆಂಡ್ ನೀಡಲಾಗುವುದು ಎಂದು ಅವರು ಹೇಳಿದರು. ಆರಂಭದಲ್ಲಿ ಗಣೇಶ ಗಂಗೊಳ್ಳಿ ರೈತಗೀತೆ ಹಾಡಿದರು. ವ್ಯವಸ್ಥಾಪಕ ಬಿ. ರಮೇಶ ಅಡಿಗ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಸೆಪ್ಟೆಂಬರ್ ೨೫ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹೊಳಪು ೨೦೧೬ ಇದರ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ಅವಳಿ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜನೆಯ ಮೂಲಕ ಒಗ್ಗೂಡಿಸಲು ಹೊರಟ ಕೋಟತಟ್ಟು ಪಂಚಾಯಿತಿಯ ಕಾರ್ಯ ಶ್ಲಾಘನಾರ್ಹ. ರಾಜ್ಯದಲ್ಲಿ ಕಾರಂತರ ಹುಟ್ಟೂರ ಪಂಚಾಯಿತಿ ಅಪರೂಪ ಮತ್ತು ವಿಶಿಷ್ಟ ಚಿಂತನೆಯ ಕಾರ್ಯಕ್ರಮದ ಮೂಲಕ ರಾಜ್ಯದಲ್ಲಿ ಗುರುತಿಸಿಕೊಂಡಿದೆ ಇದು ಸಂತಸದ ವಿಚಾರ ಎಂದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಎಚ್.ಪ್ರಮೋದ್ ಹಂದೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಆದರ್ಶ ಆಸ್ಪತ್ರೆ, ಉಡುಪಿ ಆಶ್ರಯದಲ್ಲಿ ಡಾ|| ಸರ್ವಪಳ್ಳಿ ರಾಧಾಕೃಷ್ಣನ್‌ರವರ ಜನ್ಮಜಯಂತಿ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಅನುಪಮ ಸೇವೆಯನ್ನು ಗುರುತಿಸಿ ಕುಂದಾಪುರ ತಾಲೂಕಿನ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗೇಶ್ ಶ್ಯಾನುಭಾಗ್ ಅವರಿಗೆ ’ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಂಟ್ವಾಡಿಯ ಶಾಲೆಯಲ್ಲಿ ಕಳೆದ 34 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಶಾಲೆಯ ಬೆಳವಣಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸದಲ್ಲಿ ಅತ್ಯುತ್ತಮ ಪಾತ್ರ ನಿರ್ವಹಿಸಿದ ಹಿನ್ನಲೆಯಲ್ಲಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕೋಡಿಯ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ. ಅನುಷಾ, ಸಂಪ್ರೀತಾ, ರಶ್ಮಿತಾ, ಸುಪ್ರೀತಾ, ನಿಖಿತಾ, ದೀಕ್ಷಿತಾ, ಭೂಮಿಕಾ ಟ್ರೋಫಿಯೊಂದಿಗೆ.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ಮತ್ತು ತಂಡ ನಿರ್ವಾಹಕಿ ಭವಾನಿ ಅವರು ಚಿತ್ರದಲ್ಲಿದ್ದಾರೆ. ವರದಿ : ನರೇಂದ್ರ ಎಸ್ ಗಂಗೊಳ್ಳಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಕೊನೆಯ ದಿನ ಜೇಸಿಐ ಕುಂದಾಪುರ ಸಿಟಿಯ ನಿಕಟಪೂರ್ವಾಧ್ಯಕ್ಷ ಚಂದ್ರಕಾಂತ್ ಅವರು ಜೇಸಿ ಸಂಸ್ಥೆಗೆ ನೀಡಿದ ಅನುಪಮ ಸೇವೆಯನ್ನು ಸ್ಮರಿಸಿ ಕಮಲ ಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಅಧ್ಯಕ್ಷ ಕುಂಭಾಸಿ ಮಂಜುನಾಥ ಕಾಮತ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜೇಸಿ ಪೂರ್ವಾ ವಲಯಾಧ್ಯಕ್ಷರಾದ ಅನಿಲ್ ಕುಮಾರ್, ವೈ. ಸುಕುಮಾರ್, ಕೃಷ್ಣಮೋಹನ್ ಪಿ. ಎಸ್, ಉದ್ಯಮಿಗಳಾದ ಆನಂದ ಕುಂದರ್, ಮಹಮ್ಮದ್ ಮೌಲ, ಜೇಸಿ ವಲಯ ಉಪಾಧ್ಯಕ್ಷ ನಿತಿನ್ ಅವಭೃತ, ಪೂರ್ವಾಧ್ಯಕ್ಷರಾದ ಕೆ. ಕಾರ್ತಿಕೇಯ ಮಧ್ಯಸ್ಥ, ಸಪ್ತಾಹ ಸಭಾಪತಿಗಳಾದ ಹುಸೇನ್ ಹೈಕಾಡಿ, ರಾಘವೇಂದ್ರ ಚರಣ ನಾವಡ, ಪೂರ್ವಾಧ್ಯಕ್ಷರಾದ ನಾಗೇಂದ್ರ ಪೈ, ವೆಂಕಟೇಶ ಪ್ರಭು, ಕಾರ್ಯದರ್ಶಿ ಗೌತಮ್ ನಾವಡ, ಜೇಸಿರೆಟ್ ಅಧ್ಯಕ್ಷೆ ಪುಷ್ಪಾ ಶೇಟ್, ಜ್ಯೂ.ಜೇಸಿ ಅಧ್ಯಕ್ಷ ಸ್ವಪ್ನಿಲ್ ತಂಕಪ್ಪನ್, ಯೋಜನಾಧಿಕಾರಿ ರಾಘವೇಂದ್ರ ಭಟ್, ಪ್ರಶಾಂತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ’ಗುರುವಂದನಾ’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಂಗೇಶ್ ಶೆಣೈ ಯಳಜಿತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಯಾವ ರೀತಿ ಗುರುಗಳು ಕಾರಣಿಭೂತರಾಗಿರುತ್ತಾರೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲೆಯ ಸಂಸ್ಥಾಪಕರಾದ ಡಾ. ಎನ್. ಕೆ. ಬಿಲ್ಲವ, ಶಾಲಾ ಸಂಚಾಲಕರಾದ ಶಂಕರ ಪೂಜಾರಿ, ಮುಖ್ಯೋಪಾಧ್ಯಾಯ ಪ್ರವೀಣ ಕುಮಾರ್ ಕೆ.ಪಿ., ಮೇಲ್ವಿಚಾರಕ ಎ.ಬಿ.ಪೂಜಾರಿ ಉಪಸ್ಥಿತರಿದ್ದರು ಗುರುವಂದನಾ ಕಾರ್ಯಕ್ರಮದ ಬಗ್ಗೆ ಕು. ಗೀತಾ ಆಚಾರ್ಯ ಪ್ರಾಸ್ತಾವಿಕ ನುಡಿಯನ್ನಾಡಿದರು. ಪಲ್ಲವಿ ಆಚಾರ್ಯ ಸ್ವಾಗತಿಸಿ, ರೇಷ್ಮಾ ಧನ್ಯವಾದಗೈದುರು. ಶಿಕ್ಷಕ ಗೋವಿಂದರಾಜ್ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದಿನ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ದುಶ್ಚಟಗಳು ನಮ್ಮ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಯುವಜನರು ತಮ್ಮ ಉತ್ತಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರುವ ಬಗ್ಗೆ ಮತ್ತು ದುಶ್ಚಟಗಳನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಗೊಳ್ಳಿ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಜಾಗೃತಿ ವೇದಿಕೆ ತ್ರಾಸಿ ವಲಯ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸತೀಶ ಎಂ.ನಾಯಕ್ ಅವರು ಮಾಹಿತಿ ನೀಡಿದರು. ಜನಜಾಗೃತಿ ವೇದಿಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮ ಹಾಗೂ ಗೋರಕ್ಷಣೆಯ ಮುಖವಾಡ ಧರಿಸಿರುವ ಬಿಜೆಪಿ ಪಕ್ಷ ನಿರಂತರವಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮ ವಿರೋಧಿ ನಿಲುವನ್ನು ತಳೆದಿಲ್ಲ. ಎಲ್ಲಾ ಜಾತಿ, ಮತ, ಪಂಥದವರನ್ನೂ ಸಮಾನವಾಗಿ ಕಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡುರಾವ್ ಹೇಳಿದರು. ಬೈಂದೂರು ಯಡ್ತರೆಯ ಜೆ.ಎನ್. ಆರ್ ಕಲಾ ಮಂದಿರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿದ್ಧರಾಮಯ್ಯರ ಸರಕಾರದ್ದು ಜನಪರ ಯೋಜನೆ: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ಮೂರು ವರ್ಷಗಳಿಂದ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಸರಕಾರ ಈ ವರೆಗೆ ಯಾವುದೇ ಹಗರಣಗಳಿಗೆ ಸಿಲುಕಿಲ್ಲ. ಸರಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹೆಚ್ಚು ಕಾಳಜಿ ವಹಿಸಿದ್ದರಿಂದ ಪಕ್ಷದ ಕಾರ್ಯಕ್ರಮಗಳು ಹಿಂದೆ ಬಿದ್ದಿದೆ. ಆದರೆ ಇನ್ನು ಮುಂದೆ ಪಕ್ಷ ಸಂಘಟನೆ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ತೌಹೀದ್‌ ಶಾಲೆಯ ಬಳಿ ರವಿವಾರ ಮುಂಜಾನೆ ಸುಮಾರು 3 ಗಂಟೆಗೆ ಆ್ಯಂಬುಲೆನ್ಸ್‌ ಹಾಗೂ ಮಾರುತಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಓರ್ವರು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇರಳದ ನಿವಾಸಿ ಜಗದಾಂಬಿಕಾ (45) ಮೃತಪಟ್ಟ ವರು. ಕಾರು ಚಾಲಕ ಗೌತಮ್‌, ಅಯ್ಯಪ್ಪ, ಅಂಬಾರಿ ಹಾಗೂ ಅನುಶ್ರೀ ಹಾಗೂ ಗಾಯಗೊಂಡ ವರು. ಐವರು ಕೇರಳದಿಂದ ಪ್ರವಾಸಕ್ಕಾಗಿ ಆಗಮಿಸಿ ಬೆಂಗಳೂರು ಸಾಗರ ರಸ್ತೆಯಲ್ಲಿ ಆಗಮಿಸಿ ಕೊಲ್ಲೂರಿಗೆ ತೆರಳುತ್ತಿದ್ದರು. ಭಟ್ಕಳದ ಸರಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್‌ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಿ ಭಟ್ಕಳಕ್ಕೆ ಹಿಂದಿರುಗುತ್ತಿದ್ದ ವೇಳೆ ಬೈಂದೂರಿನಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಮಾರುತಿ ಕಾರು ಢಿಕ್ಕಿ ಹೊಡೆದಿತ್ತು. ಢಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುನುಜ್ಜಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು ಇದರ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶ ಇಲ್ಲಿನ ಜೆ.ಎನ್. ಆರ್. ಕಲಾಮಂದಿರದಲ್ಲಿ ಜರುಗಿತು. ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಸಮಾರಂಭಕ್ಕೆ ಚಾಲನೆ ನೀಡಿದರು, ಬೈಂದೂರು ಬ್ಲಾಕ್ ಕಾಂಗ್ರೆಸ್ ಪೂರ್ವಧ್ಯಕ್ಷ ರಮೇಶ ಗಾಣಿಗ ಕೊಲ್ಲೂರು ನಿಯೋಜಿತ ಅಧ್ಯಕ್ಷ ಮದನ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ. ಜಿಪಂ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ, ಕೆಪಿಸಿಸಿ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ರಘುರಾಮ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್, ಮಂಜುನಾಥ ಭಂಡಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರಾಮ ಶೆಟ್ಟಿ, ತಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ಪುತ್ರನ್, ಸುಬ್ರಹ್ಮಣ್ಯ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.…

Read More