ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರೇ, ಕೋ ಕೋ ವಿದ್ಯಾರ್ಥಿನಿಯ ವಿಭಾಗದ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಡಿಸ್ಕಸ್ ತ್ರೋ ವಿಭಾಗದಲ್ಲಿ ತೃತೀಯ ಬಿ.ಎ. ವಿದ್ಯಾರ್ಥಿ ಜಯಂತ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮಣಿಕಂಠ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರಳಿನ ಅಭಾವದಿಂದ ಕರಾವಳಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಿರ್ಮಾಣ ಕಾರ್ಯಗಳಿಗೂ ಮರಳಿಲ್ಲದೆ ಮಂದಗತಿಯಲ್ಲಿ ಸಾಗುತ್ತಿದೆ. ಕಾನೂನು ತೊಡಕಿರುವುದರಿಂದ ಸ್ಪಷ್ಟವಾದ ಮರಳು ನೀತಿಯನ್ನು ರೂಪಿಸಲು ಸಾಧ್ಯವಾಗಿಲ್ಲ ಎಂದು ಯುವಜನ, ಕ್ರೀಡೆ, ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲ್ಲಿನ ಆರ್.ಎನ್. ಶೆಟ್ಟಿ ಮಿನಿ ಹಾಲ್‌ನಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ಸರಕಾರ ಕರಾವಳಿಗೆ ಪ್ರತ್ಯೇಕ ಮರಳು ನೀತಿಯನ್ನು ರೂಪಿಸಲು ಬದ್ಧವಾಗಿದ್ದು, ಶೀಘ್ರದಲ್ಲಿಯೇ ಕಾನೂನು ಸಚಿವರೊಡಗೂಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಕರ್ನಾಟಕದಲ್ಲಿ ದೇವರಾಜು ಅರಸು ಅವರ ಬಳಿಕ ಹಿಂದುಳಿದವರ ಪರ ಕಾರ್ಯಕ್ರಮಗಳನ್ನು ರೂಪಿಸಿದ ಏಕೈಕ ಮುಖ್ಯಮಂತ್ರಿಯಿದ್ದರೆ ಅದು ಸಿದ್ಧರಾಮಯ್ಯ ಮಾತ್ರ. ಕಳೆದ ಮೂರು ವರ್ಷಗಳಲ್ಲಿ ಅವರು ಜಾರಿಗೆ ತಂದ ಹತ್ತಾರು ಜನಪರ ಯೋಜನೆಗಳು ಬಡವರ ಬದುಕಿಗೆ ಆಶಾಕಿರಣವಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಪ್ರಥಮ ಭಾರಿಗೆ ಶಾಸಕರಾಗಿ ಮಂತ್ರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ 2015-16ನೇ ಸಾಲಿನಲ್ಲಿ ಸಂಘದ ಇತಿಹಾಸದಲ್ಲಿ ಗಮನಾರ್ಹ ಸಾಧನೆ ಮಾಡಿರುವುದನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರಕುಮಾರ್ ಅವರು ಸಹಕಾರಿ ಅಧ್ಯಕ್ಷ ವಿಶ್ವೇಶ್ವರ ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಯಡ್ತರೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಹಕಾರಿ ಸಂಘವು 2015-16ನೇ ಸಾಲಿನಲ್ಲಿ ಎಲ್ಲಾ ವ್ಯವಹಾರದಲ್ಲಿರೂ ಗುರಿ ಮೀರಿದ ಸಾಧನೆಗೈದಿದ್ದು, ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡಿ ಪ್ರಗತಿ ಸಾಧಿಸಿರುವುದಲ್ಲದೇ ೫೭.೭೭ಲಕ್ಷ ಲಾಭ ಗಳಿಸಿದೆ. ಸಮಾರಂಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಿರ್ದೇಶಕರಾದ ರಾಜು ಪೂಜಾರಿ, ರಘುರಾಮ ಶೆಟ್ಟಿ, ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿಯ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ, ನಿರ್ದೇಶಕ ಚಂದ್ರ ಬಳೆಗಾರ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಟ್ಟಿಯಂಗಡಿ : 1008ತೆಂಗಿನ ಕಾಯಿ ಮಹಾಗಣಪತಿ ಹವನ, 108 ಶ್ರೀ ಸತ್ಯಗಣಪತಿ ವ್ರತ ಸಂಪನ್ನ ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.5ರಂದು ಶ್ರೀ ಮಹಾಗಣಪತಿ ಹೋಮ ಸಂಕಲ್ಪ, ೧೦೦೮ ತೆಂಗಿನ ಕಾಯಿ ಮಹಾಗಣಪತಿ ಹವನದ ಪೂರ್ಣಾಹುತಿ, ಮಹಾ ಪೂಜೆ ವಿದ್ಯುಕ್ತವಾಗಿ ಋತ್ವಿಜರ ವೇದ ಮಂತ್ರಘೋಷಗಳೊಂದಿಗೆ ದೇವಳದ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ರಾತ್ರಿ ರಂಗಪೂಜಾದಿ ಸೇವೆಗಳು ಜರುಗಿತು. ಸತ್ಯಗಣಪತಿ ವ್ರತ : ಸೆ. 6ರಂದು 108 ಶ್ರೀ ಸತ್ಯಗಣಪತಿ ವ್ರತ ಹಾಗೂ ಕಥಾ ನಿರೂಪಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಭಕ್ತರ ಅನುಕೂಲಕ್ಕಾಗಿ ಆಡಳಿತ ಮಂಡಳಿ ಉತ್ತಮ ವ್ಯವಸ್ಥೆಯನ್ನು ರೂಪಿಸಿತ್ತು. ನೂಕುನುಗ್ಗಲುಗಳಿಲ್ಲದೆ ಭಕ್ತರು ಸಾಂಗವಾಗಿ ಶ್ರೀ ದೇವರ ದರ್ಶನ ಪಡೆದರು. ಸಂಜೆ ನೃತ್ಯ ವಸಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಣೇಶ ಚತುರ್ಥಿಯ ಅಂಗವಾಗಿ ತಾಲೂಕಿನ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ಆನೆಗುಡ್ಡೆ ಶ್ರಿ ವಿನಾಯಕ ದೇವಳದಲ್ಲಿ ಹಬ್ಬದ ಅಂಗವಾಗಿ ಗಣಯಾಗ, ವಿಶೇಷ ಪೂಜೆ ನಡೆಯಿತು. ಸಹಸ್ರಾರು ಭಕ್ತರು ವಿಶೇಷ ದಿನದಂದು ದೇವಶ ದರ್ಶನ ಪಡೆದು ಪುನೀತರಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಹಕಾರಿ ಸಂಘವು ಆರಂಭವಾಗಿ ಕೇವಲ ಮೂರು ವರ್ಷದಲ್ಲಿ 9ಕೋಟಿಗೂ ಅಧಿಕ ವಹಿವಾಟುಗಳನ್ನು ನಡೆಸಿ ಸದಸ್ಯರ, ನಿರ್ದೇಶಕರ ಸಹಕಾರದಿಂದ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಿದೆ. ಆದುದರಿಂದ ಪ್ರಸಕ್ತ ಸಾಲಿನಲ್ಲಿ ಉತ್ತಮ ಆದಾಯ ಗಳಿಸಿದ ಹಿನ್ನೆಲೆಯಲ್ಲಿ ಶೇ.15 ಡಿವಿಡೆಂಟ್‌ನ್ನು ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷರಾದ ರಾಜೇಂದ್ರ ಹೆಗ್ಡೆ ಹೇಳಿದರು. ಇತ್ತಿಚಿಗೆ ಸಂಘದ ಕಛೇರಿಯಲ್ಲಿ ಜರುಗಿದ ಹಂಗಳೂರಿನ ಆದಿತ್ಯ ವಿವಿಧೋದ್ದೇಶ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಕಳೆದ ವರ್ಷದ ಆಯವ್ಯಯವನ್ನು ಮಂಡಿಸಿ 2016-17ನೇ ಸಾಲಿನ ಅಂದಾಜು ಆಯವ್ಯಯವನ್ನು ಸಭೆಯ ಗಮನಕ್ಕೆ ತರಲಾಯಿತು. ಆಡಳಿತ ಮಂಡಳಿಯ ಉಪಾಧ್ಯಕ್ಷ ವಿ. ದಿನೇಶ್ ದೇವಾಡಿಗ, ನಿರ್ದೇಶಕರಾದ ರತ್ನಾಕರ ಕೊಟೇಕಾರ್, ಸಂಜೀವ ದೇವಾಡಿಗ, ಕೃಷ್ಣ ದೇವಾಡಿಗ, ಪ್ರವೀಣಕುಮಾರ್ ಕೆ.ಬಿ., ಎ. ಜಯರಾಮ ಶೆಟ್ಟಿ, ಹರೀಶ್ ಬಿಲ್ಲವ, ಉದಯ ಮೆಂಡನ್, ಸಂತೋಷ ಕೋಣಿ, ಪ್ರಶಾಂತ ಕೊಲ್ಲೂರು, ಆಶಾ ಚಂದ್ರಶೇಖರ್, ವಿಜಯಲಕ್ಷ್ಮೀ ಗಣೇಶ್, ರವೀಂದ್ರ ಹೆಗ್ಡೆ, ಜಾರ್ಜ್ ಕರ್ವೆಲ್ಲೊ ಇನ್ನಿತರರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ಖ್ಯಾತ ರಾಷ್ಟ್ರ ಮಟ್ಟದ ಕರಾಟೆ ಪಟು ಕಾರ್ತಿಕ್ ಕಟೀಲು ಮತ್ತು ಅವರ ತಾಯಿ ಶೋಭಲತಾ ಕಟೀಲು ಮಹಿಳೆಯರು ಸ್ವರಕ್ಷಣೆ ಮಾಡುವ ಕೆಲವು ಸುಲಭ ಕೌಶಲ್ಯಗಳನ್ನು ಪ್ರಾತ್ಯಕ್ಷಿತೆಯ ಮೂಲಕ ತೋರಿಸಿದರು. ಸುಮಾರು ಏಳು ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿ, ಇದೇ ಸಂದರ್ಭದಲ್ಲಿ ಕಾರ್ತಿಕ್ ಕಟೀಲು ಜೊತೆ ಸಂವಾದ ನಡೆಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ, ಲಲಿತ ಕಲಾ ಸಂಘದ ಸಂಯೋಜಕಿ ಸ್ಫೂರ್ತಿ ಎಸ್. ಫೆರ್ನಾಂಡಿಸ್, ಸಹ ಸಂಯೋಜಕಿ ಅನ್ವಿತಾ, ವಿದ್ಯಾರ್ಥಿ ಪ್ರತಿನಿಧಿಗಳಾದ ವೆಂಕಟೇಶ್, ಶಿಲ್ಪಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಶಾಂತಿ ಸ್ವಾಗತಿಸಿದರು, ರಜತ್ ಅತಿಥಿಗಳನ್ನು ಪರಿಚಯಿಸಿದರು, ಬ್ರಿಟಾ ಡಿ’ಸೋಜಾ ವಂದಿಸಿದರು, ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆರಳೆಣಿಕೆಯಷ್ಟು ಗ್ರಾಮಸ್ಥರಿಂದ ನಡೆಯುತ್ತಿದ್ದ ಮೊಳ್ಳಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಈ ಬಾರಿ ಸಭಾಂಗಣ ತುಂಬಿ ಹೋಗಿದ್ದು ಮೊದಲ ಇತಿಹಾಸವಾದರೆ ಕೇವಲ ಮೂರು ಇಲಾಖೆಯ ಅಧಿಕಾರಿಗಳು ಮಾತ್ರ ಗ್ರಾಮಸಭೆಗೆ ಹಾಜರಾಗುವ ಮೂಲಕ ನಿಯಮ ಉಲ್ಲಂಘಿಸಿದ ಘಟನೆ ಮಂಗಳವಾರ ಮೊಳ್ಳಹಳ್ಳಿ ಗ್ರಾಮ ಪಂಚಾಯತಿ ಸಭಾಗಣದಲ್ಲಿ ಮಂಗಳವಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ, ಪಶುಸಂಗೋಪನಾ ಇಲಾಖಾಧಿಕಾರಿ ಹಾಗೂ ಅರಣ್ಯ ಇಲಾಖೆ ಬಿಟ್ಟರೆ ಮತ್ಯಾವುದೇ ಅಧಿಕಾರಿಗಳು ಗ್ರಾಮಸಭೆಗೆ ಹಾಜರಾಗದೇ ಇರುವುದರ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಸಭೆಯಲ್ಲಿ ಅಧಿಕಾರಿಗಳ ಗೈರಾಗಿರುವುದರಿಂದ ಮೂವರು ಅಧಿಕಾರಿಗಳು ಮಾಹಿತಿ ನಿಡಿದ ತಕ್ಷಣ ಮೊಳಹಳ್ಳಿಯ ಸರ್ವೇ ನಂಬ್ರ ೨೫೨ರಲ್ಲಿ ಅಕ್ರಮ ಕ್ರಶರ್ ನಡೆಯುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಾಪ್ ಶೆಟ್ಟಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಒಂದೂವರೆ ವರ್ಷದಿಂದ ಪರವಾನಿಗೆ ನವೀಕರಣ ಆಗದೇ ಇದ್ದರೂ ಅಲ್ಲಿ ಕಲ್ಲು ಕೋರೆ ಕೆಲಸ ಮಾಡುತ್ತಿದೆ.…
19ಕ್ಕೂ ಹೆಚ್ಚು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲೆರಿಕಲ್ ಕೇಡರ್‌ನ ಹುದ್ದೆಗಳಿವೆ – ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕುಂದಾಪ್ರ ಡಾಟ್ ಕಾಂ ಮಾಹಿತಿ ರಾಜ್ಯದಲ್ಲಿ 1,467 ಹುದ್ದೆಗಳು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) 19ಕ್ಕೂ ಹೆಚ್ಚು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲೆರಿಕಲ್ ಕೇಡರ್‌ನ ಹುದ್ದೆಗಳಿವೆ. ಒಟ್ಟು 19,243 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ರಾಜ್ಯದಲ್ಲಿಯೇ 1,467 ಹುದ್ದೆಗಳು ಖಾಲಿ ಇವೆ. ಕಳೆದ ಬಾರಿಯಂತೆ ಈ ಬಾರಿಯೂ ಐಎಎಸ್, ಕೆಎಎಸ್ ಮಾದರಿಯಲ್ಲಿ ಎರಡು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಬಾರಿಯೂ ಸಂದರ್ಶನ ಇರುವುದಿಲ್ಲ. ಮುಖ್ಯಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ. ಅರ್ಹತೆ ಏನು? : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಪರೀಕ್ಷೆ ಬರೆಯಬಹುದು. ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಗೆ ಸರಿಸಮನಾದ ಕೋರ್ಸ್ ಮಾಡಿದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಯು ಕಂಪ್ಯೂಟರ್‌ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಇಂಡಿಯ ಲಿಟ್ರಸಿ ಮಿಷನ್ ಅಡಿಯಲ್ಲಿ ಆಶಾಕಿರಣ ಯೋಜನೆ ಅನ್ವಯ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ವತಿಯಿಂದ ನಡೆದ ಆಶಾಕಿರಣ ಯೋಜನೆಯ ವಲಯ ಮಟ್ಟದ ಮಾಹಿತಿ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಮಾತನಾಡಿ ರೂ.೨೧೦೦ ನೀಡಿ ಉತ್ತರ ಭಾರತದ ಒಂದು ಮಗುವನ್ನು ದತ್ತು ತೆಗೆದುಕೊಂಡು ಆ ಮಗುವಿನ ಉಜ್ವಲ ಭವಿಷ್ಯವನ್ನು ರೂಪಿಸುವ ಯೋಜನೆಯೇ ಆಶಾಕಿರಣ ಯೋಜನೆ ಎಂದರು. ರೋಟರಿ ಸನ್ ರೈಸ್ ಅಧ್ಯಕ್ಷ ಕೆ.ನರಸಿಂಹ ಹೊಳ್ಳ ಸ್ವಾಗತಿಸಿ, ರೋಟರಿ ಸನ್‌ರೈಸ್ ಎಂಟು ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ರೋಟರಿ ವಲಯ ಒಂದರ ಸಹಾಯಕ ಗವರ್ನ್‌ರ್ ಮಧುಕರ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು. ವಲಯ ಸೇನಾನಿ ಅಬುಶೇಖ ಸಾಹೇಬ್, ವಲಯ ಲಿಟ್ರಸಿ ಚೇರ‍್ಮನ್ ಲುಯಿಸ್ ಜೆ ಫೆರ್ನಾಂಡಿಸ್ , ರೋಟರಿ ಸನ್‌ರೈಸ್ ಸ್ಥಾಪಕ ಅಧ್ಯಕ್ಷ ದಿನಕರ ಆರ್ ಶೆಟ್ಟಿ, ಹಾಗೂ ವಲಯ ಒಂದರ ಎಲ್ಲಾ ಏಳು ಅಧ್ಷಕ್ಷರು ಮತ್ತು ಕಾರ್ಯದರ್ಶಿ,…
