ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುನೈಟೆಡ್ ಕಿಂಗ್‌ಡಂನ ಭಾರತೀಯ ದೂತಾವಾಸವು ಲಂಡನ್‌ನ ವಿಶಾಲ ಜಿಮ್‌ಖಾನಾ ಬಯಲಿನಲ್ಲಿ ಆಯೋಜಿಸಿದ್ದ ಭಾರತದ 70ನೆಯ ಸ್ವಾತಂತ್ರ್ಯೋತ್ಸವದಲ್ಲಿ ಕುಂದಾಪುರದ ಇಬ್ಬರು ಅನಿವಾಸಿ ಕನ್ನಡಿಗರು ಪ್ರದರ್ಶಿಸಿದ ಯಕ್ಷಗಾನದ ತುಣುಕು ನೆರೆದಿದ್ದ 10 ಸಾವಿರ ಭಾರತೀಯರ ಮೆಚ್ಚುಗೆ ಗಳಿಸಿತು. ಅವರಿಗೆ ನೀಡಲಾಗಿದ್ದ ಹದಿನೈದು ನಿಮಿಷಗಳ ಅವಕಾಶದಲ್ಲಿ ಕಂಸವಧೆಯ ನೃತ್ಯ ರೂಪಕವನ್ನು ಅವರು ಪ್ರಸ್ತುತಪಡಿಸಿದ್ದರು. ಇದರಲ್ಲಿ ಯು.ಕೆಯ ಡಂಕ್ಯಾಸ್ಟರ್‌ನಲ್ಲಿ ವೈದ್ಯ ವೃತ್ತಿ ನಡೆಸುತ್ತಿರುವ ಕುಂದಾಪುರದ ಡಾ. ಗುರುಪ್ರಸಾದ ಪಟ್ವಾಲ್ ಕಂಸನ ಪಾತ್ರ ನಿರ್ವಹಿಸಿದರೆ, ಬ್ರಿಸ್ಟಲ್‌ನ ಏರ್‌ಬಸ್ ವಿಮಾನ ಕಂಪನಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ದುಡಿಯುತ್ತಿರುವ ಯೋಗೀಂದ್ರ ಮರವಂತೆ ಕೃಷ್ಣನ ಪಾತ್ರ ಮಾಡಿದ್ದರು. ಎರಡೂ ಪಾತ್ರಗಳ ಪ್ರಸಾಧನದ ವರ್ಣವಿನ್ಯಾಸ, ಲಯಬದ್ಧ ನೃತ್ಯ, ಸನ್ನಿವೇಶವನ್ನು ಬಿಂಬಿಸುವಂತಿದ್ದ ಭಾವಾಭಿನಯ ವಿವಿಧೆಡೆಯ ಭಾರತೀಯ ಮೂಲದ ಪ್ರೇಕ್ಷಕರನ್ನು ಮುದಗೊಳಿಸಿದುವು. ಪ್ರದರ್ಶನ ಮುಗಿಯುತ್ತಿದ್ದಂತೆ ಉಭಯ ಹವ್ಯಾಸಿ ಕಲಾವಿದರು ಪ್ರೇಕ್ಷರ ಮತ್ತು ಮಾಧ್ಯಮದ ಆಕರ್ಷಣೆಯ ಕೇಂದ್ರವಾದರು. ಹಲವರು ಅವರ ಜತೆ ನಿಂತು ಸೆಲ್ಫೀ ತೆಗೆದುಕೊಂಡರೆ, ಮಾಧ್ಯಮದವರು ಅವರನ್ನು ಸಂದರ್ಶಿಸಿದರು. ಕ್ರಮವಾಗಿ ಕೋಟದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತಕ್ಕೆ ಅವಿಚ್ಛಿನ್ನವಾದ ಸಾಂಸ್ಕೃತಿಕ ಪರಂಪರೆಯಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನ ಶೈಲಿ, ಕೊಳ್ಳುಬಾಕ ಸಂಸ್ಕೃತಿ, ಕೈಗಾರೀಕರಣ, ಪರಿಸರ ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತಿದೆ ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಭಾರತ ಯೋಜನೆ, ಪೌರ ಕಾರ್ಮಿಕರ ಸಮಸ್ಯೆ ಮತ್ತು ಸವಾಲುಗಳು, ದೃಶ್ಯ ಮಾಲಿನ್ಯ ಈ ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ತ್ಯಾಜ್ಯ ವಿಲೇವಾರಿ ಮಾಡಲು ನಾಗರಿಕರ ಸಹಕಾರ ಅನಿವಾರ್ಯ ಮತ್ತು ಸ್ವಚ್ಛ ಕುಂದಾಪುರಕ್ಕೆ ಯುವ ಜನತೆಯ ಪಾತ್ರ ಬಹುಮುಖ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಎನವೈರ‍್ನಮೆಂಟ್ ಎಂಜಿನಿಯರ್ ಮದನ್ ನಾಯ್ಡು, ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಯೋಜನಾಧಿಕಾ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು, ಸಹ ಯೋಜನಾಧಿಕಾರಿ ಕು. ಪ್ರೀತಿ ಹೆಗ್ಡೆ ವಂದಿಸಿದರು. ವಿದ್ಯಾರ್ಥಿನಿ ಪುಷ್ಪಲತಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಹಳ್ಳಿ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜಾಲದ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆಯ ಸದಸ್ಯೆಯರು ತಾಪಂ ಸದಸ್ಯೆ ಗ್ರೀಷ್ಮಾ ಭಿಡೆ ನೇತೃತ್ವದಲ್ಲಿ ಶುಕ್ರವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಕೊಲ್ಲೂರು ದೇವಳದಲ್ಲಿ ಭೇಟಿಮಾಡಿ ಮನವಿ ಸಲ್ಲಿಸಿದರು. ಜಡ್ಕಲ್-ಮುದೂರು ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ತಲೆಯೆತ್ತಿರುವ ಅನಧೀಕೃತ ಗೂಡಂಗಡಿ ಹಾಗೂ ಕೆಲವರ ಮನೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದೆ. ಈ ವಿಷಯ ಗೊತ್ತಿದ್ದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದನ್ನು ನಿಯಂತ್ರಿಸುವ ಹಾಗೂ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವ ಬಗ್ಗೆ ನಿರ್ಲಕ್ಷತನ ತೋರುತ್ತಿದ್ದಾರೆ ಎಂದು ಮಹಿಳೆಯರು ದೂರಿದರು. ಆದಷ್ಟು ಬೇಗ ಅಕ್ರಮ ಮದ್ಯದ ವ್ಯವಹಾರಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಅಲ್ಲಿದ್ದ ಮಾಧ್ಯಮದವರೂ ಕೂಡಾ ಈ ವಿಚಾರವಾಗಿ ಸಚಿವರ ಗಮನ ಸೆಳೆದರು. ಕರಾವಳಿಯಲ್ಲಿ ಹೆಚ್ಚುತ್ತಿರುವ ಆಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೋರಕ್ಷಕನೆಂಬ ಮುಖವಾಡ ಧರಿಸಿ ಕೊಲೆ, ಸುಲಿಗೆ ಹಾಗೂ ನೈತಿಕ ಪೋಲಿಸ್‌ಗಿರಿ ಮೂಲಕ ಮತೀಯ ಭಾನೆಗಳನ್ನು ಕೆರಳಿಸಿ ಸಮಾಜದ ಸ್ವಾಸ್ಥ್ಯ ಹಾಗೂ ಸಾಮರಸ್ಯ ಹಾಳುಮಾಡುವ ಸಂಘಟನೆಗಳನ್ನು ಮಟ್ಟಹಾಕಬೇಕು ಎಂದು ಶಾಸಕ. ಕೆ. ಗೋಪಾಲ ಪೂಜಾರಿ ಸರಕಾರವನ್ನು ಆಗ್ರಹಿಸಿದರು. ಕೆಂಜೂರು ಪ್ರವೀಣ್ ಪೂಜಾರಿ ಹತ್ಯೆ ಖಂಡಿಸಿ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಶುಕ್ರವಾರ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಸಂಘಟನೆ ಹೆಸರಿನಲ್ಲಿ ಕಾಲೇಜಿನ ಯುವಕರನ್ನು ಪ್ರಚೋದಿಸಿ ದಾರಿತಪ್ಪಿಸುತ್ತಿದ್ದಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಎಚ್ಚರವಹಿಸಬೇಕು. ಕೇಸರಿಶಾಲು ಮತ್ತು ಕೆಂಪುನಾಮ ಹಾಕಿಕೊಂಡು ಕೊಲೆ, ಸುಲಿಗೆ, ಗೂಂಡಾಗಿರಿ ಮುಂತಾದ ಹೀನಾಯ ಕೃತ್ಯ ಎಸಗುವವರ ವಿರುದ್ದ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದರು. ದೇಶದ ಸ್ವಾತಂತ್ರ್ಯ ತಂದುಕೊಟ್ಟ ಹಾಗೂ ಇತಿಹಾಸ ಹೊಂದಿರುವ ಪಕ್ಷದ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದವರಿಗೆ ಮಾತನಾಡುವ ನೈತಿಕತೆಯಿಲ್ಲ. ದೇಶಕ್ಕಾಗಿ ಯಾವುದೇ ಬಲಿದಾನ ನೀಡದ ಬಿಜೆಪಿಯವರು ಪ್ರವೀಣ್ ಪೂಜಾರಿಯಂತಹ ಅಮಾಯಕರನ್ನು ಬಲಿಪಶುಗಳನ್ನಾಗಿಸಿ ಹಾಗೂ ದೇಶದ ಜನರ ಮುಂದೆ ಸುಳ್ಳು-ಪೊಳ್ಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಗ್ರಾ.ಪಂ. ಹಕ್ಲಾಡಿ, ಎಸ್.ಡಿ.ಎಂ.ಸಿ ಸ.ಕಿ.ಪ್ರಾ. ಶಾಲೆ ಯಳೂರು – ತೊಪ್ಲು ಇವುಗಳ ಆಶ್ರಯದಲ್ಲಿ ಸರಕಾರಿ, ಕಿರಿಯ ಪ್ರಾಥಮಿಕ ಶಾಲೆ ಯಳೂರು – ತೊಪ್ಲು ಇಲ್ಲಿ ಪೈಪ್ ಕಂಪೋಸ್ಟ್ ಘಟಕಕ್ಕೆ ರೋಟರಿ ಅಧ್ಯಕ್ಷ ಉದಯ ಕುಮಾರ ಶೆಟ್ಟಿ ಚಾಲನೆ ನೀಡಿದರು. ರೋಟರಿ ಕಾರ್ಯದರ್ಶಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸಾಲ್ಗದ್ದೆ ಶಶಿಧರ್ ಶೆಟ್ಟಿ ಪೈಪ್ ಕಂಪೋಸ್ಟನ ಉದ್ದೇಶ, ತಯಾರಿ, ಬಳಕೆ ಮತ್ತು ವಿಲೇವಾರಿ ಹಾಗೂ ಅದರ ಪರಿಣಾಮವನ್ನು ಪರಿಸರದ ಜನರಿಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ಪಂ. ಸದಸ್ಯರಾದ ಸತೀಶ ಶೆಟ್ಟಿ, ಶ್ರೀಮತಿ ಗುಲಾಬಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸಿಂಗಾರಿ, ಉಪಾಧ್ಯಕ್ಷೆ ಶ್ರೀಮತಿ ಸಾಕು, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಸ್ತಿಪಟು ಆದರ್ಶ ಕುಮಾರ್ ಶೆಟ್ಟಿ ಮಾತನಾಡಿ, ಕುಸ್ತಿಯನ್ನು ಬಹಳ ಶೃದ್ಧೆ, ಭಕ್ತಿ ಮತ್ತು ಶಿಸ್ತಿನಿಂದ ಕಲಿಯಬೇಕು. ಹಾಗೆ ಪ್ರಯತ್ನಪೂರ್ವಕವಾಗಿ ಯಶಸ್ವಿ ಕುಸ್ತಿಪಟುವಾಗಲು ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿಶ್ವಸ್ಥರಾದ ಪ್ರಕಾಶ್ ಟಿ ಸೋನ್ಸ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಆರ್.ಬಿ.ನಾಯ್ಕ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕರಾದ ಶ್ರೀಧರ ಶೆಟ್ಟಿ, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ದೈಹಿಕ ನಿರ್ದೇಶಕರ ಸಂಘದ ಅದ್ಯಕ್ಷರಾದ ವಸಂತ ಶೆಟ್ಟಿ, ಗೌರವಾಧ್ಯಕ್ಷರಾದ ಶರತ್ ರಾವ್, ಬಸ್ರೂರಿನ ಶ್ರಿ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಯಪ್ರಕಾಶ ಶೆಟ್ಟಿ, ಭಂಡಾರ್ಕಾರ್ಸ್ ಪದವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿನೆವಾದಲ್ಲಿ ಕೈಗೊಂಡ ನಿರ್ಣಯಗಳು. ರೆಡ್‌ಕ್ರಾಸ್ ಸಂಸ್ಥೆ ಬೆಳೆದು ಬಂದ ದಾರಿ ಮತ್ತು ಅದು ಅಂತರಾಷ್ಟ್ರೀಯ ಸಂಸ್ಥೆಯಾಗಿ ಗುರುತಿಸಿಕೊಂಡ ಬಗ್ಗೆ ಹಾಗೂ ಇದೇ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಕುಂದಾಪುರದ ಹಿರಿಯ ನ್ಯಾಯವಾದಿ ಗಿಳಿಯಾರು ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ಜಿನೆವಾ ಕನ್‌ವೆನ್‌ಶನ್ ಡೇ ದಿನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ, ರೆಡ್‌ಕ್ರಾಸ್ ಸೊಸೈಟಿಯ ಸಂಯೋಜಕ ಮುತ್ತಯ್ಯ ಶೆಟ್ಟಿ, ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ, ಉಪನ್ಯಾಸಕ ಪ್ರವೀಣ್ ಮೊಗವೀರ ಮತ್ತು ಜ್ಯೋತಿ ಮೊಗವೀರ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿದರು. ಸಹ ಸಂಯೋಜಕ ಶಿವರಾಜ್ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ದೀಕ್ಷಿತ್ ಅತಿಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಗೃಹಸಚಿವ ಡಾ| ಜಿ. ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಸಮೇತರಾಗಿ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದ ಮೂಲ ಉದ್ದೇಶ ಶಿಕ್ಷಣ ಪಡೆಯುವುದು ಮಾತ್ರವಲ್ಲ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಾಗ ಮಾತ್ರ ಕಲಿತ ವಿಷಯಕ್ಕೆ ಗೌರವಕೊಟ್ಟಾಂತಾಗುತ್ತದೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಜೆ.ಪಿ.ಶೆಟ್ಟಿ ಕಾಳಾವರ ಹೇಳಿದರು. ಬುಧವಾರ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ತರಗತಿ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಸಭೆಯ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿ ಬ್ರಹ್ಮಾವರ ಬಿ.ಡಿ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಎಂ. ಹೆಗಡೆ ಮಾತನಾಡಿ ವಿದ್ಯಾರ್ಥಿಗಳು ತಮ್ಮೊಳಗೆ ಇರುವ ಸಾಮರ್ಥ್ಯವನ್ನು ಮೊದಲು ತಿಳಿದುಕೊಳ್ಳಬೇಕು. ಆಗ ಜೀವನದಲ್ಲಿ ಧೈರ್ಯವಾಗಿ ಮುಂದೆ ಬರಲು ಸಾಧ್ಯ. ಇತನ್ನಿತರ ಸಮಾಜಮುಖಿ ವಿಷಯಗಳ ಬಗ್ಗೆ ಹವ್ಯಾಸ ಬೆಳಸಿಕೊಂಡಾಗ ವಿದ್ಯಾರ್ಥಿ ಜೀವನದಲ್ಲಿ ಯಶ್ವಸಿಯಾಗಲು ಸಾಧ್ಯ ಎಂದು ನೂತನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಚಿತ್ತೂರು ವಲಯ ಹಾಗೂ ಗ್ರಾಮ ಪಂಚಾಯತ್ ಚಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸ್ವಚ್ಛತಾ ಅಂದೋಲನ ಇತ್ತೀಚೆಗೆ ಜರಗಿತು. ಡಾ|ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ತೂರು ಪಂಚಾಯತ್ ಅಧ್ಯಕ್ಷರಾದ ಸಂತೋಷ ಮಡಿವಾಳ, ಚಿತ್ತೂರು ವಲಯಾಧ್ಯಕ್ಷರಾದ ದಿವಾಕರ ಆಚಾರ್ಯ, ವಲಯ ಮೇಲ್ವಿಚಾರಕಿ ಪ್ರೇಮಾ, ಗ್ರಾ.ಪಂ.ಸದಸ್ಯರು, ಸೇವಾ ಪ್ರತಿನಿದಿಗಳಾದ ಮಮತಾ, ರೇವತಿ, ಪ್ರೇಮಾ ಉಪಸ್ಥಿತರಿದ್ದರು.
