ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಳಾಂತರಿತ ಕಛೇರಿಯನ್ನು ಸೋಮವಾರ ಸಂಘದ ಅಧ್ಯಕ್ಷೆ ಶಾರದಾ ಎಸ್. ಖಾರ್ವಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿರುವ ಗೌರಿ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಘದ ಮುಖ್ಯ ಕಛೇರಿಯನ್ನು ಸಹಕಾರಿಯ ಸದಸ್ಯರ ಮತ್ತು ಜನರ ಅನುಕೂಲಕ್ಕಾಗಿ ವಿಸ್ತಾರವಾದ ಪ್ರಥಮ ಮಹಡಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ ಎಂದು ಹೇಳಿದರು. ಪುರೋಹಿತರಾದ ಜಿ.ಅನಂತಕೃಷ್ಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಘದ ಉಪಾಧ್ಯಕ್ಷೆ ಮಾಲತಿ ಜಿ.ಖಾರ್ವಿ, ನಿರ್ದೇಶಕಿಯರಾದ ನೀಲಾವತಿ ಎಸ್.ಖಾರ್ವಿ, ಪಾರ್ವತಿ ಬಿ.ಖಾರ್ವಿ, ಶಾರದಾ ಆರ್.ಹೆಗ್ಡೆ, ದೀಪಾ ಎಸ್.ಖಾರ್ವಿ, ಶೈಲಾ ಎಂ.ಖಾರ್ವಿ, ರೇಖಾ ಜಿ.ಖಾರ್ವಿ, ಮತ್ಸ್ಯೋದ್ಯಮಿ ಶಿವಪ್ಪ ಖಾರ್ವಿ, ಸುರೇಂದ್ರ ಡಿ.ಖಾರ್ವಿ, ಕೃಷ್ಣ ಕೋಟಾನ್, ಸಹಕಾರಿಯ ಸಿಬ್ಬಂದಿಗಳು, ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಸಹಕಾರಿಯ ಕಾರ್ಯದರ್ಶಿ ಗಣಪತಿ ಖಾರ್ವಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಭೇಟಿ ನೀಡಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಬೆಳವಣಿಗೆಯನ್ನು ಶ್ಲಾಘಿಸಿದರು. ಕಾಲೇಜಿನ ಆವರಣದಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಬೋಧಕ-ಬೋಧಕೇತರ ವರ್ಗದವರ ಜೊತೆ ಸಂವಾದ ನಡೆಸಿದರು. ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಈ ಎಜ್ಯುಕೇಶನ್ ಸೊಸೈಟಿಯಲ್ಲಿ ಪ್ರತೀ ವರ್ಷ ಅಧ್ಯಯನ ಮಾಡುತ್ತಿರುವುದು ಉಲ್ಲೇಖನೀಯ. ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚು ಮನ್ನಣೆ ನೀಡುತ್ತಿರುವುದು ಹಾಗೂ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡುತ್ತಿರುವುದು ಮೆಚ್ಚತಕ್ಕ ಸಂಗತಿ. ಈ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಜ್ಞಾವಂತ ಪ್ರಜೆಗಳಾಗಲಿ ಎಂದು ಶುಭ ಹಾರೈಸಿದರು. ಮಟ್ಟಾರ್ ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಸದಾನಂದ ಶೇರೆಗಾರ್ ಬೈಂದೂರು ಮತ್ತು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಗತ್ತಿನ ಹೆಚ್ಚುತ್ತಿರುವ ತಾಪಮಾನ ಜನಜೀವನಕ್ಕೆ ಮಾರಕ ಕೋಟಿ ವೃಕ್ಷ ಯೋಜನೆ ಪರಿಸರ ಸಮತೋಲನಕ್ಕೆ ಮುನ್ನುಡಿ ಬರೆದಂತೆ ಎಂದು ಕುಂದಾಪುರ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಕೆ.ಆರ್. ನಾಯ್ಕ್ ಹೇಳಿದರು. ಅವರು ಸ.ಕಿ.ಪ್ರಾ.ಶಾಲೆ ಯಳೂರು-ತೊಪ್ಲು ಇಲ್ಲಿನ ಪರಿಸರದ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಉದಯ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸಿಂಗಾರಿ, ಶಾಲಾ ಮುಖ್ಯ ಶಿಕ್ಷಕ ಸಾಲ್ಗದ್ದೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಶಶಿಧರ ಶೆಟ್ಟಿ ಸ್ವಾಗತಿಸಿ, ವಂದಿಸಿದರು.
ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಕಳೆದೊಂದು ವಾರದಿಂದ ನಡೆಯುತ್ತಿರುವ ಪ್ರತಿಭಟನೆ ಕಾವು ರಾಜ್ಯಾದಾದ್ಯಂತ ವ್ಯಾಪಿಸಿದ್ದು ಕುಂದಾಪುರ ತಾಲೂಕಿನಲ್ಲಿಯೂ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಭಂಡಾರ್‌ಕಾರ್ಸ್ ಕಾಲೇಜು ಹಾಗೂ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೇ, ಬಸ್ರೂರಿನಲ್ಲಿ ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿವಾದಿತ ಸಂಸ್ಥೆಯ ವಿರುದ್ಧ ತನಿಕೆ ನಡೆಸುದಲ್ಲದೇ, ದೇಶದ ಅಖಂಡತೆಗೆ ಭಂಗ ಸಂಸ್ಥೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆಯಿಂದ ಕುಂದಾಪುರಕ್ಕೆ ಹೋಗಿಬರುವುದಾಗಿ ತೆರಳಿ ಮರಳಿ ಬಾರದೇ ಕಾಣೆಯಾಗಿದ್ದ ಯುವತಿ ಇಂದು ತೀರಾ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ ಮರಳಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಮರಳಿದ ಬಳಿಕ ಯುವತಿಯ ವರ್ತನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದ್ದು, ಆಪಹರಣಗೈಯಲಾಗಿತ್ತೆ ಎಂಬ ಶಂಕೆ ವ್ಯಕ್ತವಾಗಿದೆ. kundapraa.com ಕೊಲ್ಲೂರು ಸಮೀಪದ ಯಲ್ಲೂರಿನ ಯುವತಿ ಸೋಮವಾರ ಮನೆಯಿಂದ ಕುಂದಾಪುರಕ್ಕೆ ತೆರಳಿದ್ದವಳು ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾದರಾದರೂ ಸ್ಥಳೀಯರೋರ್ವರು ಹಿಂದಿರುಗಿ ಬರಬಹುದು ಎಂದು ಹೇಳಿದ್ದರಿಂದ ಸುಮ್ಮನಾಗಿದ್ದರು. ಇಂದು ಬೆಳಿಗ್ಗೆ ರಿಕ್ಷಾವೊಂದರಲ್ಲಿ ಮನೆಗೆ ಮರಳಿದ್ದ ಯುವತಿ ತೀರಾ ಅಸ್ವಸ್ಥಳಾಗಿರುವುದನ್ನು ಗಮನಿಸಿದ ಮನೆಯವರು ಕೂಡಲೇ ಕುಂದಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಅಪಹರಣದ ಶಂಕೆ: ಕುಂದಾಪುರಕ್ಕೆ ತೆರಳಿದ್ದ ಯುವತಿಯನ್ನು ಅಪಹರಣಗೈಯಲಾಗಿತ್ತೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಿಕರೂ ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿದ್ದು ಪ್ರಕರಣದಲ್ಲಿ ಒಟ್ಟು ಮೂವರ ಕೈವಾಡ ಇದೆ ಎಂಬ ಮಾತುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ಇತಿಹಾಸ ಕಲೆಯ ತಳಹದಿಯಲ್ಲಿ ನಿಂತಿದೆ. ನೂರು ಮಾತುಗಳಿಂದ ಪರಿವರ್ತನೆಯಾಗದ್ದನ್ನು ಒಂದು ಚಿತ್ರದ ಮೂಲಕ ಬದಲಾವಣೆ ತರಲು ಸಾಧ್ಯವಿದೆ. ಕಲೆಗೆ ಮನಸ್ಸನ್ನು ಪರಿವರ್ತಿಸುವ ಶಕ್ತಿಯಿದ್ದು, ಯುವಕರು ಕಲಾ ಸಾಹಿತ್ಯದ ತೊಡಗಿಸಕೊಳ್ಳುವ ಮೂಲಕ ಸಮಾಜದ ಬದಲಾವಣೆ ಸಾಧ್ಯವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು. ಯುವ ಮೆರಿಡಿಯನ್ ಸಮೂಹ ಸಂಸ್ಥೆ ಬೇ ಸ್ಪಾ ರೆಸಾರ್ಟ್ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಯುವ ಮೆರಿಡಿಯನ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ನಾಲ್ಕು ದಿನಗಳ ರಾಷ್ಟ್ರಮಟ್ಟದ ‘ಮಾನ್ಸೂನ್ ಕಲರ್ಸ್’ ಕಲಾ ಶಿಬಿರದಲ್ಲಿ ಅವರು ಮಾತನಾಡಿ ಕರಾವಳಿಯಲ್ಲಿ ವೈವಿದೈತೆಯ ಪ್ರವಾಸ ಹಾಗೂ ಯತ್ರಾ ಸ್ಥಳಗಳಿದ್ದು, ಅಧಿಕಾರಿಗಳ ಜೊತೆ ಸಮಾಲೋಚಿಸಿ ಕರಾವಳಿ ಅಭಿವೃದ್ಧಿಗೆ ಪ್ರಯತ್ನಸಲಾಗುತ್ತದೆ. ಕುಂದಾಪುರದಂತಹ ಪ್ರವಾಸಿ ತಾಣಗಳ ನಡುವೆ ಕಲಾವಿದರಿಗೆ ಕಲಾರಚನೆ ಅವಕಾಶ ಹೆಚ್ಚಿದೆ. ಉಡುಪಿ ಸಾಯಿರಾಧಾ ಡೆವಲಪರ್ರ‍್ಸ್ ಮಾಲೀಕ ಮನೋಹರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ವೈವಿಧತೆ ತವರೂರು ಕುಂದಾಪುರ ಪರಿಸರದಲ್ಲಿ ರಾಷ್ಟ್ರೀಯ ಮಟ್ಟದ ಕಲಾವಿದರ ಕಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂತನವಾಗಿ ರಚನೆಗೊಂಡ ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ವೈಫಲ್ಯ ಹಾಗೂ ಆಡಳಿತ ಪಕ್ಷದ ಸದಸ್ಯರು ಸರ್ವಾಧಿಕಾರಿ ಧೋರಣೆ ತಳೆಯುತ್ತಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು, ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇಡೂರು ಕುಂಜ್ಙಾಡಿ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಆಯ್ಕೆಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮರು ನೇಮಕಾತಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮಕ್ಕೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ ಎಂಬುದಾಗಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಆರೋಪಿಸಿದರು. ಬಡ ಜನರಿಗೆ ಹಕ್ಕು ಪತ್ರ ನೀಡುವಲ್ಲಿಯೂ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಹೊಸೂರು ಗ್ರಾಮದಲ್ಲಿ ಅಂಗಡಿಗಳಲ್ಲಿ ಮದ್ಯ ಮಾರಾಟವನ್ನು ಅಕ್ರಮವಾಗಿ ನಡೆಸಲಾಗುತ್ತಿದೆಯಾದರೂ ಪಂಚಾಯಿತಿ ಮೌನ ವಹಿಸಿದೆ. ಸರ್ಕಾರೀ ಶಾಲೆಯೊಂದರ ಆವರಣ ಗೋಡೆ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹಸ್ತಕ್ಷೇಪ ನಡೆಸಿ ಅಡಚಣೆ ಉಂಟುಮಾಡಿದ್ದಾರೆ. ಪಂಚಾಯಿತಿ ವ್ಯಾಪ್ತಯ ಬಹುತೇಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ಕೆಲವು ಸದಸ್ಯರು ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೃತ್ಯ ಸಂಗೀತ ಮುಂತಾದ ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸಿದಾಗ ಮಾತ್ರ ಅದರ ಉಳಿವು ಸಾಧ್ಯ. ಕಲೆ, ಸಂಸ್ಕೃತಿಗಳಿಗೆ ಪೂರಕ ವಾತಾವರಣವಿರುವ ಬಸ್ರೂರಿನಂತಹ ಪರಿಸರದಲ್ಲಿ ಹುಟ್ಟಿಕೊಂಡ ಸಂಸ್ಥೆಗಳು ಜನರ ಮಧ್ಯೆಯೇ ಚಿರಸ್ಥಾಯಿಯಾಗಿ ಉಳಿಯುತ್ತದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಶಾರದಾ ಸಂಗೀತ ಮತ್ತು ಲಲಿತ ಕಲಾ ಅಕಾಡೆಮಿ ರಿ. ಹಾಗೂ ನರ್ತನ್ ಡಾನ್ಸ್ ಅಕಾಡೆಮಿ ರಿ. ಆಯೋಜಿಸಿದ್ದ ನೃತ್ಯ-ಸಂಗೀತ ತರಬೇತಿಯನ್ನು ಉದ್ಘಾಟಿಸಿ ಶುಭಹಾರೈಸಿದರು. ನೃತ್ಯ ತರಬೇತುದಾರರಾದ ದೀಕ್ಷಾ ಹಾಗೂ ದಿವ್ಯರಾಜ್ ಅವರನ್ನು ಗೌರವಿಸಲಾಯಿತು. ಬಸ್ರೂರು ಗ್ರಾಪಂ ಅಧ್ಯಕ್ಷ ಸಂತೋಷಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಉಪಾಧ್ಯಕ್ಷ ಪ್ರಕಾಶ್ ಟಿ. ಮೆಂಡನ್, ಪತ್ರಕರ್ತ ಜಾನ್ ಡಿಸೋಜಾ, ಬಸ್ರೂರು ಸೇವಾಸಂಗಮ ಶಿಶುಮಂದಿರದ ಅಧ್ಯಕ್ಷ ನಾಗರಾಜ ಸಂತೆಕಟ್ಟೆ, ವ್ಯವಸ್ಥಾಪಕ ಅಶೋಕ್ ಕೆರೆಕಟ್ಟೆ, ಬಸ್ರೂರು ಗ್ರಾಪಂ ಮಾಜಿ ಅಧ್ಯಕ್ಷ ಮಹಾಲಿಂಗ ಕೊಳ್ಕೆರೆ, ಬಿ. ಮೋಹನಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೈನಂದಿನ ವ್ಯವಹಾರದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಆರಂಭಿಸಿರುವ ಇ-ಸ್ಟಾಂಪಿಂಗ್ ಸೌಲಭ್ಯ, ಠಸ್ಸೆ ಪತ್ರಕ್ಕಾಗಿ ದೂರದ ಊರುಗಳಿಗೆ ತೆರಳುತ್ತಿದ್ದ ಸಾರ್ವಜನಿಕ ಬಹಳಷ್ಟು ಅನುಕೂಲವಾಗಿದೆ. ಇಂದಿನ ದಿನಗಳಲ್ಲಿ ಸರಕಾರದ ಪ್ರತಿ ವ್ಯವಹಾರಕ್ಕೂ ಇ-ಸ್ಟಾಂಪ್ ಅಗತ್ಯವಿದ್ದು, ಈ ಸೌಲಭ್ಯದ ಸದುಪಯೋಗ ಎಲ್ಲರೂ ಪಡೆದುಕೊಳ್ಳುವಂತಾಗಲಿ ಎಂದು ಬೈಂದೂರು ವಿಶೇಷ ತಹಶಿಲ್ದಾರ್ ಕಿರಣ್ ಜಿ. ಗೌರಯ್ಯ ಹೇಳಿದರು. ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಸಿಂಡಿಕೇಟ್ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಚಂದ್ರಶೇಖರ ಎಸ್., ಕರ್ಣಾಟಕ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಹರೀಶ್, ವಿಜಯಾ ಬ್ಯಾಂಕ್ ಖಂಬದಕೋಣೆ ಶಾಖಾ ವ್ಯವಸ್ಥಾಪಕ ಸುಕೇಶ್ ಕುಮಾರ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ ಜಿ., ಮುಖ್ಯ ಅತಿಥಿಳಾಗಿದ್ದರು. ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷರುಗಳಾದ ಈಶ್ವರ ದೇವಾಡಿಗ, ಸುಧಾಕರ ಶೆಟ್ಟಿ, ಉದ್ಯಮಿ ಗೋಕುಲ್ ಶೆಟ್ಟಿ, ಕಿರಿಮಂಜೇಶ್ವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರ್ಕಾರದ ಹಣ ಸದ್ಬಳಕೆ ಆಗಬೇಕು. ಗ್ರಾಮೀಣ ಪ್ರದೇಶಗಳಿಗೆ ಅನುದಾನ ತಲುಪಬೇಕು ಎನ್ನುವ ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿಯೇ ಸಾಕಷ್ಟು ಕಾಮಗಾರಿಗೆ ಅತೀ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ ಇದರ ಅಧ್ಯಕ್ಷ ನಿವೇದಿತ್ ಆಳ್ವ ಹೇಳಿದರು. ಅವರು ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಣಕಟ್ಟೆಯಲ್ಲಿ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹತ್ತಿರದಿಂದ ಸಂನ್ಯಾಸಿಬೆಟ್ಟುವಿಗೆ ಕಾಲು ಸಂಕ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೈಂದೂರು ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕೊಲ್ಲೂರು ಗ್ರಾ. ಪಂ. ವ್ಯಾಪ್ತಿಯ ಕೊಲ್ಲೂರು ಗ್ರಾಮದ ಹಳ್ಳಿಬೇರು ರಾಮ ಮನೆ ಹತ್ತಿರ ಕಾಲುಸಂಕ ನಿರ್ಮಾಣ, ವಂಡ್ಸೆ ಗ್ರಾ.ಪಂ…
