Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೊಟೋಗ್ರಾಫರ್ಸ್ ಆಸೋಸಿಯೇಶನ್ ದ.ಕ.-ಉಡುಪಿ ಜಿಲ್ಲೆ, ಕುಂದಾಪುರ-ಬೈಂದೂರು ವಲಯದ 2025-27ನೇ ಸಾಲಿನ ಪದಪ್ರದಾನ ಸಮಾರಂಭ ವಂಡ್ಸೆಯ ಶ್ರಿಯಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು. ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವೂದರ ಮೂಲಕ ಉದ್ಘಾಟಿಸಿ ಮಾತನಾಡಿ, ಛಾಯಾಗ್ರಾಹಕರು ಇಲ್ಲದೆ ಇದ್ದರೆ ನಮ್ಮ ಯಾವುದೇ ನೆನಪುಗಳನ್ನು ಸ್ಮರಿಸಿಕೊಳ್ಳಲು ಸಾಧ್ಯವಿಲ್ಲ. ಜೀವನದ ಯಾವುದೇ ಸಿಹಿ ಘಟನೆಗಳನ್ನು ನೀವು ತೆಗೆದಿರುವ ಛಾಯಾಚಿತ್ರ ನೆನಪಿಸಿಡುತ್ತದೆ. ಜೀವನದಲ್ಲಿ ಯಾವುದೇ ಕೆಲಸವು ನಿಕೃಷ್ಟವಲ್ಲ. ಇಂದು ಸಮಾಜದಲ್ಲಿ ತಾವು ಮಾಡುವ ಕೆಲಸದಿಂದ ಸಮಾಜದಲ್ಲಿ ಎತ್ತರದ ಸ್ಥಾನಕ್ಕೆ ಹೋಗಲು ಸಾಧ್ಯ. ವೃತ್ತಿಯನ್ನು ಪ್ರೀತಿಸಿದರೆ ವ್ಯಕ್ತಿ ಯಾವ ಸ್ಥಾನಕ್ಕೂ ಹೋಗಬಹುದು. ನಾವು ಜೀವನದಲ್ಲಿ ನಾವು ಏನಾಗಬೇಕು ಅಂತ ಬಯಸಿತ್ತೇವೋ, ಹಾಗೇ ನಮ್ಮ ಜೀವನ ಆಗಲಿಕ್ಕೆ ಆರಂಭವಾಗುತ್ತದೆ. ಯಾವ ವ್ಯಕ್ತಿಯಲ್ಲಿ ಅದ್ಭುತವಾದ ಚಿಂತನೆಗಳು, ಆತ್ಮಾಭಿಮಾನ, ಪರಿಶ್ರಮ ಇದ್ದರೆ ಅವನು ಜೀವನದಲ್ಲಿ ಅತ್ಯುತ್ತಮ ಸ್ಥಾನಕ್ಕೆ ಏರುತ್ತಾನೆ. ಕಠಿಣ ಪರಿಶ್ರಮ ಹಾಕಿ ಕೆಲಸ ಮಾಡಿದಾಗ ಯಾವ ಕೆಲಸಲದಲಿದ್ದರೂ ಜೀವನದಲ್ಲಿ ಗೆಲ್ಲಲು ಸಾಧ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜೀವನದಲ್ಲಿ ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆ ಮೂಲಕ ಸಮಾಜದಲ್ಲಿ ಸ್ಪಂದಿಸುವ ಸಮಾಜಮುಖಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಸಾಧ್ಯ. ಇದಕ್ಕೆ ಪಂಚವರ್ಣ ಸಂಘಟನೆಯೇ ಸಾಕ್ಷಿ ಎಂದು ಕೋಟದ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಅಭಿಪ್ರಾಯಪಟ್ಟರು. ಅವರು ಬುಧವಾರ ಕೋಟದ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸಂಘದ ಸದಸ್ಯರೊರ್ವರ ಹುಟ್ಟುಹಬ್ಬದ ಅಂಗವಾಗಿ ಅಶಕ್ತರಿಗೆ ನೆರವು ಎಂಬ ಶೀರ್ಷಿಕೆಯಡಿ ಮೂಡುಗಿಳಿಯಾರಿನ ಆಶಾ ಕಾರ್ಯಕರ್ತೆ ಲಕ್ಷ್ಮೀ ಎನುವಾಕೆಗೆ ನೆರವು ಹಾಗೂ ದಿನಸಿ ಪರಿಕರ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿ ಮಾತನಾಡಿದರು. ಸದಾ ಕ್ರೀಯಾಶೀಲತೆಯೇ ಜೀವಾಳವಾಗಿರಿಸಿಕೊಂಡು ಪರಿಸರದ ಬಗೆಗಿನ ಕಾಳಜಿ ಕಾರ್ಯಕ್ರಮ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಹತ್ತು ಹಲವು ಕಾರ್ಯಕ್ರಮಗಳಿಂದ ಜನಮನದಿ ಅಚ್ಚಳಿಯದೆ ಉಳಿದ ಪಂಚವರ್ಣ ಸಂಘಟನೆ ಕಾರ್ಯನಿರ್ವಹಣೆ ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲದಾಗಿದೆ ಅಶಕ್ತರಿಗೆ ನೆರವು ನಿತ್ಯನಿರಂತರ ಬಡವರ ಹಾಗೂ ಅನಾರೋಗ್ಯ ಪೀಡಿತರಿಗೆ ಧ್ವನಿಯಾಗಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ, ಗೊಂಬೆಗಳ ಮತ್ತು ಆಟಿಕೆಗಳ ವೈವಿಧ್ಯಮಯ ಪ್ರದರ್ಶನವು ಸಂಸ್ಥೆಯ ಕಾರ್ಯದರ್ಶಿಗಾಳಾದ ಕೆ. ರಾಧಕೃಷ್ಣ ಶೆಣೈ ಅವರು ದೀಪ ಬೆಳಗಿಸುವುದರ ಮುಖೇನ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು. ಚಿತ್ತಾಕರ್ಷವಾದ ಗೊಂಬೆಗಳು ಮತ್ತು ಆಟಿಕೆಗಳೊಂದಿಗೆ, ಪುಟಾಟಿಗಳ ಸಂಗೀತ ನರ್ತನವು ಎಲ್ಲರ ಮನಸೊರೆಗೊಂಡವು.ಸಂಧ್ಯಾ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿದರು. ಶಿಕ್ಷಕಿಯರಾದ ಸುನೀತಾ ಡಿ. ಎಲ್ಲರನ್ನೂ ಸ್ವಾಗತಿಸಿ, ವಂದನಾರ್ಪಣೆ ಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶರಧಿ ಪ್ರೆಂಡ್ಸ್ ಕ್ರಿಕೆಟರ್ಸ್ ಎಚ್.ಬಿ ಪ್ರೆಂಡ್ಸ್ ಕ್ರಿಕೆಟರ್ಸ್ ಇವರ ಸಂಯೋಜನೆಯಲ್ಲಿ ಕಾರ್ತಟ್ಟು ಚಿತ್ರಪಾಡಿಯ ಹುಣ್ಸೆಬೆಟ್ಟು ಗಿರಿಯಮ್ಮ ಕ್ರಿಕೆಟ್ ಮೈದಾನದಲ್ಲಿ ಶರಧಿ ಪ್ರೆಂಡ್ಸ್ ಹಾಗೂ ಎಚ್.ಬಿ ಪ್ರೆಂಡ್ಸ್ ಸದಸ್ಯರಿಗಾಗಿ ಶಿವರಾತ್ರಿ ಟ್ರೋಫಿ 2026 ಕ್ರಿಕೆಟ್ ಪಂದ್ಯಾಟ ಇತ್ತೀಚಿಗೆ ಜರಗಿತು. ನಿವೃತ್ತ ಪಶುವೈದ್ಯಾಧಿಕಾರಿ ಡಾ. ಮೋಹನ್ ಎಸ್. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಂ.ಕಾಂ ಪದವಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ತೃತಿಯ ರ್ಯಾಂಕ್‌ನೊಂದಿಗೆ ತೇರ್ಗಡೆಯಾದ ರಶ್ಮಿತಾ ಸಿ.ಆರ್. ಅವರಿಗೆ ಗೌರವ ಅಭಿನಂದನೆಯನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಸ್ಥಳೀಯ ವಿದ್ಯಾರ್ಥಿಗಳಾದ ಸೌಮ್ಯ, ಕಿಶನ್, ಅಮೂಲ್ಯ, ಚಿರಂತನ್ ಭಟ್, ಅನ್ವಿತ್ ಅವರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. 1980-1990 ದಶಕದಲ್ಲಿ ಶರಧಿ ಹಾಗೂ ಎಚ್.ಬಿ ಪ್ರೆಂಡ್ಸ್ ತಂಡಗಳ ಪರವಾಗಿ ಆಡಿದ ಕರಾವಳಿ ಟೆನಿಸ್ ಬಾಲ್ ಕ್ರಿಕೆಟ್‌ನಲ್ಲಿ ಸಾಧನೆತೋರಿದ ಹಿರಿಯ ಕ್ರಿಕೆಟಿಗರಾದ ಕೃಷ್ಣದೇವಾಡಿಗ, ಗಿರೀಶ್ ಕುಂದರ್ , ಸೂರ್ಯ ಆಚಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಹಾಲಾಡಿ ಘಟಕದ ವತಿಯಿಂದ ಅಂಪಾರು ಸಂಜಯಗಾಂಧಿ ಪ್ರೌಢಶಾಲೆಯಲ್ಲಿ  ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಪರೀಕ್ಷೆಗೆ ತಯಾರಾಗುವುದು ಹೇಗೆ ಎನ್ನುವ ಕುರಿತು ಮಾಹಿತಿ ಶಿಬಿರವು ನಡೆಯಿತು. ಖ್ಯಾತ ತರಬೇತುದಾರರಾದ ಜೆಸಿ ಕೃಷ್ಣ ಮೂರ್ತಿ ಹಾಯ್ಕಾಡಿ ಅವರು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾರ್ಗದರ್ಶನ ನೀಡಿದರು. ಹಾಲಾಡಿ ಜೆಸಿಐ ಘಟಕದ ಅಧ್ಯಕ್ಷರಾದ  ಪ್ರದೀಪ ಹಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಉದಯ್ ಕುಮಾರ್ .ಬಿ., ಗೀತಾ ನಾಯಕ್, ಲೇಡಿ ಜೆಸಿಐ ಪ್ರೆಸಿಡೆಂಟ್  ಅವಶ್ಯ ಶೆಟ್ಟಿ, ಜೆಸಿ ಉಪಾಧ್ಯಕ್ಷರಾದ ಜೆಸಿ ಕೃಷ್ಣ ಭಟ್ ಹಾಲಾಡಿ,  ಉಪಸ್ಥಿತರಿದ್ದರು. ಹಾಲಾಡಿ ಬ್ರೈಟ್ ಪರ್ಲ್ ವಿದ್ಯಾಸಂಸ್ಥೆಯ ಜೆಸಿ ಆಶಾ ಆರ್ ಕುಲಾಲ್, ಜೆಸಿ ದೀಪಾ ಶೆಟ್ಟಿ ಹಾಲಾಡಿ, ಜೆಸಿ ಮಂಜುಳಾ ಶೆಟ್ಟಿ ಶಾಲಾ ಸಹಶಿಕ್ಷಕಿ ಸವಿತಾ ಕಾರ್ಯಕ್ರಮದಲ್ಲಿ ಸಹಕರಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೈಕಲ್‌ನಲ್ಲಿ ತೆರಳುವ ವೇಳೆ ತಲೆಸುತ್ತು ಬಂದು ಬಿದ್ದು ಮೃತಪಟ್ಟ ಘಟನೆ ಸಾಲಿಗ್ರಾಮ ಡಿವೈನ್ ಪಾರ್ಕ್‌ ಬಳಿ ಸಂಭವಿಸಿದೆ. ಇಲ್ಲಿನ ಪಾಂಡೇಶ್ವರ ಮೂಡಹಡು ನಿವಾಸಿ, ಮೇಸ್ತ್ರಿ ನಾರಾಯಣ ಪೂಜಾರಿ (69) ಮೃತ ವ್ಯಕ್ತಿ, ಅವರು ಫೆ.18 ರಂದು ಸೈಕಲ್ ನಲ್ಲಿ ಕೆಲಸಕ್ಕೆ ಹೋಗುತ್ತಿರುವಾಗ ಸಾಲಿಗ್ರಾಮದ ಡಿವೈನ್ ಪಾರ್ಕ್‌ ಬಳಿ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಅಂಬ್ಯುಲೆನ್ಸ್‌ ನಲ್ಲಿ ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಫೋಕ್ಸೋ ಮತ್ತು ಸೈಬರ್ ಕ್ರೈಮ್‌ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕುಂದಾಪುರದ ವಕೀಲರಾದ ರಾಘವೇಂದ್ರ ಚರಣ್ ನಾವಡ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಫೋಕ್ಸೋ ಕಾಯ್ದೆ ಹಾಗೂ ಸೈಬರ್ ಕ್ರೈಮ್‌ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭ ಅವರು ಇಂದಿನ ದಿನಗಳಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚುತ್ತಿರುವುದರಿಂದ ಫೋಕ್ಸೋ ಮತ್ತು ಸೈಬರ್ ಅಪರಾಧಗಳ ಬಗ್ಗೆ ಸಮರ್ಪಕ ಅರಿವು ಬಹಳ ಅಗತ್ಯವಾಗಿದೆ. ಸರಿಯಾದ ಮಾರ್ಗದರ್ಶನ ಮತ್ತು ಜಾಗೃತಿ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದರು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಫೋಕ್ಸೋ ಕಾಯ್ದೆ ಕುರಿತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಭಜನೋತ್ಸವ ಕಾರ್ಯಕ್ರಮ ಗುರುವಾರದಂದು ನಡೆಯಿತು. ಬೆಳಿಗೆ 7:30ಕ್ಕೆ ಭಜನಾ ದೀಪ ಸ್ಥಾಪನೆ ಶ್ರೀದೇವಿಗೆ ಕಲಶಾಭಿಷೆಕ ಚಂಡಿಕಾಹೋಮ, ನಾಗದೇವರ ಸನ್ನಿಧಿಯಲ್ಲಿ ಕಲಾಹೋಮ ಮಹಾಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿಯ ಮಾರ್ಗದರ್ಶನದಲ್ಲಿ ಫೀಲ್ಡ್ ಟ್ರಿಪ್ ಹಮ್ಮಿಕೊಳ್ಳಲಾಯಿತು. ಮಕ್ಕಳನ್ನು ಸ್ಥಳೀಯ ಪ್ರದೇಶಗಳಾದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಿಗೆ ಕರೆದುಕೊಂಡು ಹೋಗಲಾಯಿತು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಅಲ್ಲಿಗೆ ಬರುವ ಹಾಗೂ ಅಲ್ಲಿಂದ ತೆರಳುವ ಬಸ್ಸುಗಳನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ಬಸ್ಸು ನಿಲ್ದಾಣದ ಕಾರ್ಯವೈಖರಿಯನ್ನು ತಿಳಿಸಿ ಹೇಳಲಾಗಿದ್ದು, ಅವರು ಪ್ರಯಾಣಿಕರ ಚಲನವಲನವನ್ನು ಗಮನಿಸಿದರು. ಅಲ್ಲಿಂದ ರೈಲ್ವೆ ನಿಲ್ದಾಣಕ್ಕೆ ತೆರಳಿದ ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತು ರೈಲಿನ ಆಗಮನವನ್ನು ನಿರೀಕ್ಷಿಸಿದರು. ಮಕ್ಕಳಿಗೆ ಹೋಗಿ ಬರುವ ಎರಡು ರೈಲುಗಳನ್ನು ಕಾಣುವ ಅವಕಾಶ ಲಭಿಸಿದ್ದು, ಪ್ರಯಾಣದ ಸುರಕ್ಷತೆಗಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಯಿತು. ವಿದ್ಯಾರ್ಥಿಗಳ ಜೊತೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಸುಜಾತಾ ಸದಾರಾಮ್, ಶಿಕ್ಷಣ ಸಂಯೋಜಕಿಯರಾದ ದೀಪಿಕಾ ದೇವಾಡಿಗ ಹಾಗೂ ಫರ್ನಾಜ್, ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜನವರಿಯಲ್ಲಿ ನಡೆಸಿದ ಜೆಇಇ ಮೈನ್ಸ್ 2026ರ ಹಂತ ಒಂದರ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ನಿಹಾಲ್ ಎಚ್.ಜಿ. ಅವರು 98.5578 ಪರ್ಸೆಂಟೈಲ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದರು.

Read More