Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ಉಡುಪಿ ಪರ್ಬ ಅಂಗವಾಗಿ ಕುಂದಾಪುರದ ಕೋಟೇಶ್ವರ ಕಿನಾರ ಬೀಚ್‌ನಲ್ಲಿ ಕೋಟೇಶ್ವರ ಕಿನರಾ ಬೀಚ್ ಉತ್ಸವ ಸಮಿತಿ ಆಯೋಜಿಸಿರುವ ಊರ್‌ಮನಿ ಹಬ್ಬದ ಪೂರ್ವಭಾವಿ ಸಭೆ ಕುಂದಾಪುರದ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿಗಳ ಕೋರ್ಟ್ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಉತ್ಸವ ಸಮಿತಿ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಯ ಲೋಕೋಪಯೋಗಿ ಇಲಾಖೆ, ಪುರಸಭೆ, ಪೊಲೀಸ್, ಗ್ರಾಮ ಪಂಚಾಯತ್ ಬೀಜಾಡಿ ಪಿ.ಡಿ.ಓ, ಕೊಲ್ಲೂರು ದೇವಳ ಅಧಿಕಾರಿ, ಅಗ್ನಿ ಶಾಮಕ ಠಾಣಾಧಿಕಾರಿ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ತಹಸೀಲ್ದಾರ್ ಇವರನ್ನು ಉದ್ದೇಶಿಸಿ ಮಾತನ್ನಾಡಿದ ಉಪವಿಭಾಗಧಿಕಾರಿ ಶಿಲ್ಪಾ ನಾಗ್ ಸಿ.ಟಿ ಅವರು ಕುಂದಾಪುರ ಪ್ರವಾಸೋಧ್ಯಮಕ್ಕೆ ಅತ್ಯಂತ ಸೂಕ್ತವಾದ ಪ್ರದೇಶ. ಇಲ್ಲಿ ನಿಸರ್ಗ ಸೌಂದರ್ಯ ಹಾಗೂ ಭಕ್ತಿ ಕೇಂದ್ರಗಳು ಜಗತ್ತಿನ ಜನರನ್ನು ಆಕರ್ಷಿಸುವಂತಾಗಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾಡಿಳಿತ ಪ್ರವಾಸೋಧ್ಯಮಕ್ಕೆ ಪೂರಕವಾದ ಕಾರ್ಯಕ್ರಮಕ್ಕೆ ಸಹಕರಿಸುತ್ತಿದೆ ಎಂದರು. ಈ ಭಾಗದ ಸರ್ವರೂ ಇದೆ ಡಿ.29 ಮತ್ತು ಡಿ.30 ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣದ ಸುವರ್ಣ ನದಿಯಿಂದ ಉತ್ತರದ ಶಿರಾಲಿ ತನಕ, ಕರಾವಳಿಯಿಂದ ಮಲೆನಾಡಿನ ಮಾಸ್ತಿಕಟ್ಟೆಯ ತನಕ ವ್ಯಾಪಿಸಿಕೊಂಡಿರುವ ಸುಮಾರು ಹದಿನೈದು ಲಕ್ಷಕ್ಕೂ ಹೆಚ್ಚು ಜನರು ಮಾತನಾಡುವ ಕುಂದಾಪ್ರ ಕನ್ನಡ ಭಾಷೆಗೆ ಸೂಕ್ತ ಸ್ಥಾನಮಾನ ದೊರಕದಿರುವುದು ಬೇಸರದ ಸಂಗತಿ. ಅಪಾರ ಶಬ್ದ ಭಂಡಾರ ಹಾಗೂ ಸಾಹಿತ್ಯ ಶ್ರೀಮಂತಿಕೆಯನ್ನು ಹೊಂದಿರುವ ಕುಂದಗನ್ನಡಕ್ಕೆ ಅಕಾಡೆಮಿ, ಕುಂದಾಪುರ ಕೇಂದ್ರಿತವಾದ ಅಧ್ಯಯನ ಪೀಠದ ಅಗತ್ಯವಿದೆ ಎಂದು ೧೬ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಹಕ್ಲಾಡಿ ಎಸ್‌ಎಸ್ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲೆ ಬಾಳೆಮನೆ ಭಾಸ್ಕರ ಶೆಟ್ಟಿ ವೇದಿಕೆಯಲ್ಲಿ ಶನಿವಾರ ೧೬ನೇ ತಾಲೂಕು ಸಾಹಿತ್ಯ ಸಮ್ಮೇಳನ ಭೂಮಿಗೀತ ೨೦೧೭ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ತಾಲೂಕಿನ ಮೇಲೆ ತುಳುವಿನ ಪ್ರಭಾವ ಅಷ್ಟಾಗಿ ಇಲ್ಲದಿದ್ದರೂ, ಸಂಶೋಧಕರು ಆತುರದ ನಿರ್ಧಾರದಿಂದ ತುಳುನಾಡಿನ ಸಂಸ್ಕೃತಿಯೇ ಕುಂದಾನಾಡಿನ ಸಂಸ್ಕೃತಿಯೊಂದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ, ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ, ರಂಗಭೂಮಿ ಕಲಾವಿದ ಯೋಗೀಶ ಬಂಕೇಶ್ವರ ಸಹಿತ ಒಂಬತ್ತು ಜನ ಸಾಧಕರು ಹಾಗೂ ಒಂದು ಸಂಘ ಸಂಸ್ಥೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಸನ್ಮಾನ ಗೌರವಕ್ಕೆ ಪಾತ್ರರಾಗಿದ್ದಾರೆ. ಕುಂದಾಪುರ ತಾಲೂಕು ಹಕ್ಲಾಡಿ ಕೊಳ್ಳೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲೆಯಲ್ಲಿ ಡಿ.೧೬ ಶನಿವಾರ ಹಾಗೂ ಭಾನವಾರ ನಡೆಯುವ ೧೬ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ನಿವೃತ್ತ ಉಪನ್ಯಾಸಕ ಉಪೇಂದ್ರ ಸೋಮಯಾಜಿ ಸನ್ಮಾನಿಸಲಿದ್ದಾರೆ. ೧೬ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆಯಲ್ಲಿ ಎರಡು ದಿನ ಕಾರ‍್ಯಕ್ರಮ ನಡೆಯಲಿದ್ದು, ಸಾಹಿತಿಗಳು, ಜನಪ್ರತಿನಿಧಿಗಳ ಪಾಲ್ಗೊಳ್ಳಲಿದ್ದು, ಗೋಷ್ಠಿ, ಕವಿಸಮಯ ಹಾಗೂ ಸಾಂಸ್ಕೃತಿ ಕಾರ‍್ಯಕ್ರಮ ಜರುಗಲಿದೆ. ಸನ್ಮಾನಿಸಲ್ಪಡುವವರು: ಕುಂದಾಪುರ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಾಳೆಮನೆ ಸಂತೋಷ ಕುಮಾರ್ ಶೆಟ್ಟಿ ಹಕ್ಲಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಆರ್. ಎನ್. ರೇವಣ್ಕರ್, ಯಕ್ಷಗಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬೆಳ್ಳಿರಥ ಸಮರ್ಪಿಸಲಿರುವ ನೂತನ ನೂತನ ಬೆಳ್ಳಿರಥವನ್ನು ಉಪ್ಪುಂದ ಅಂಬಾಗಿಲಿನಿಂದ ಭವ್ಯ ಪುರಮೆರವಣಿಗೆಯ ಮೂಲಕ ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಕೊಂಡೊಯ್ಯಲಾಯಿತು. ಡಿ. 20ರ ಬುಧವಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಉಪ್ಪುಂದ ರಾಣಿಬಲೆ ಮೀನುಗಾರ ಒಕ್ಕೂಟದಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ನೀಡಲಾದ ಬೆಳ್ಳಿರಥವನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಮರ್ಪಣೆ ಮಾಡಲಿದ್ದಾರೆ. ಪುರಮೆರವಣಿಗೆಯ ವೇಳೆ ರಥಶಿಲ್ಪಿ ಬಿ. ಲಕ್ಷ್ಮೀನಾರಾಯಣ ಆಚಾರ್ಯ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಜಯರಾಮ ಶೆಟ್ಟಿ, ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ಅಧ್ಯಕ್ಷ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಸಲಹೆಗಾರರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮಾಂತರ ಪ್ರದೇಶಗಳಲ್ಲಿಯೇ ನಿಜವಾದ ಕಲೆ ಅರಳುತ್ತವೆ. ಕಲಾ ಕ್ಷೇತ್ರದಲ್ಲಿ ನೈಜ ಕೆಲಸವಾಗುತ್ತಿರುವುದು ಹಳ್ಳಿಗಳಲ್ಲಿಯೇ. ಮಾಡುವ ಕೆಲಸದಲ್ಲಿ ಪ್ರೀತಿ ಹಾಗೂ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣವಿದ್ದಲ್ಲಿ ಕಲೆ ಮತ್ತಷ್ಟು ಬೆಳೆಯುತ್ತದೆ ಎಂದು ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ. ತ ಚಿಕ್ಕಣ್ಣ ಹೇಳಿದರು. ಅವರು ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ಆಶ್ರಯದಲ್ಲಿ ನಡೆಯಲಿರುವ ರಂಗ ಸುರಭಿ 2017 ನಾಟಕ ಸಪ್ತಾಹದ ಆಮಂತ್ರಣ ಪತ್ರಿಕೆ ಹಾಗೂ ವಿಡಿಯೋ ಆಮಂತ್ರಣವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಮಕಿ ಎಂ. ಆರ್. ಸತ್ಯನಾರಾಯಣ, ಬೈಂದೂರು ಸರಕಾರಿ ಮಾದರಿ ಶಾಲೆ ಮುಖ್ಯೋಪದ್ಯಾಯರಾದ ಜನಾರ್ದನ್,  ಸುರಭಿ ಬೈಂದೂರು ಅಧ್ಯಕ್ಷ ಶಿವರಾಮ ಕೊಠಾರಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ, ಸಲಹೆಗಾರರದ ಜಿ. ತಿಮ್ಮಪ್ಪಯ್ಯ ಮೊದಲಾದವರು ಉಪಸ್ಥಿತರಿದ್ದರು. ಯಸ್ಕೋರ್ಡ್ ಟ್ರಸ್ಟ್‌ನ ನಿರ್ದೇಶಕರಾದ ಸುಧಾಕರ ಪಿ. ಬೈಂದೂರು ಸ್ವಾಗತಿಸಿದರು,…

Read More

ಕುಂದಾಪ್ರಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿಕಾಂಗ್ರೆಸ್ ಸರಕಾರಅಧಿಕಾರಕ್ಕೆ ಬಂದ ಬಳಿಕ ವ್ಯವಸ್ಥಿತವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನುಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ.ಇದನ್ನು ಪ್ರಶ್ನಿಸುವವರನ್ನು ಕಾನೂನಿನ ಮೂಲಕ ಕಟ್ಟಿಹಾಕುವ ಕೆಲಸವನ್ನು ಮಾಡುತ್ತಿದೆಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದಅಧ್ಯಕ್ಷ ಶ್ರೀಧರ ಬಿಜೂರು ಹೇಳಿದರು. ಅವರು ಹೊನ್ನಾವರ ಪರೇಶ್ ಮೇಸ್ತ ಅವರಅನುಮಾನಾಸ್ಪದ ಸಾವು ಹಾಗೂ ರಾಜ್ಯ ಸರಕಾರದ ಹಿಂದೂ ವಿರೋಧಿ ನಿಲುವು ಖಂಡಿಸಿ ಬೈಂದೂರುಆಂಜನೇಯದೇವಸ್ಥಾನದಆವರಣದಲ್ಲಿಜರುಗಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ ಹಿಂದುಕಾರ್ಯಕರ್ತರು ಹಾಗೂ ಅಮಾಯಕರನ್ನು ಕೊಲೆ ಮಾಡಿ ಬಳಿಕ ಅದನ್ನು ಸಹಜ ಸಾವು ಎಂದು ಬಿಂಬಿಸುವ ಷಡ್ಯಂತ್ರ ನಡೆದಿದೆ. ಹೊನ್ನಾವರದ ಪರೇಶ್ ಮೇಸ್ತನನ್ನು ಹತ್ಯೆಮಾಡಿ ಪ್ರಕರಣವನ್ನು ಮುಚ್ಚಿಹಾಕಲಾಗುತ್ತಿದೆ. ಪ್ರತಿಭಟನೆಯನ್ನುತಡೆದು ಹಿಂದೂಕಾರ್ಯಕರ್ತರ ಬಲ ಕುಗ್ಗಿಸಲು ಸಾಧ್ಯವಿಲ್ಲ. ಹಿಂದೂಕಾರ್ಯಕರ್ತರು ಸಂಘಟಿತರಾಗಿ ಮುಂದುವರಿದು ನ್ಯಾಯಕ್ಕಾಗಿ ಆಗ್ರಹಿಸುತ್ತೇವೆ ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಪ್ರಚಾರಕ ಗೋಪಾಲಕೃಷ್ಣ ಕೆ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವ ತನಕ ಹಿಂದೂಗಳಿಗೆ ರಕ್ಷಣೆ ಇಲ್ಲ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟಿಸುವುದರಿಂದ ಈವರೆಗೆ ನ್ಯಾಯ ದೊರೆತಿಲ್ಲ. ಶಸ್ತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಸಕುಟುಂಬಿಕ ರಾಗಿ ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಜನಾರ್ದನ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರಾದ ರಮೇಶ್‌ ಗಾಣಿಗ ಕೊಲ್ಲೂರು, ನರಸಿಂಹ ಹಳಗೇರಿ, ಜಿಲ್ಲಾ ಸಹಕಾರಿ ಯುನಿಯನ್‌ ಅಧ್ಯಕ್ಷ ಕಿಶನ್‌ ಹೆಗ್ಡೆ, ಅರ್ಚಕ ಡಾ| ಕೆ.ಎನ್‌. ನರಸಿಂಹ ಅಡಿಗ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಪ್ರಕಾಶ ಶೆಟ್ಟಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ಬೈಂದೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಶೇಖರ ಪೂಜಾರಿ, ಸನತ್‌ ಬಳೆಗಾರ, ವಾಸುದೇವ ಯಡಿಯಾಳ, ದೇವದಾಸ್‌, ಪಿ.ಎಲ್‌. ಜೋಸ್‌, ರಂಗ ನಾಯ್ಕ ಮೊದಲಾದವರು ಸಚಿವರನ್ನು ಸ್ವಾಗತಿಸಿ ಗೌರವಿಸಿದರು. ಮೆಸ್ಕಾಂ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು. ಸಬ್‌ಸ್ಟೇಶನ್‌ಗೆ ಮನವಿ ಇದೇ ಸಂದರ್ಭ…

Read More

ನೇರಪ್ರಸಾರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ’ರೈತ ಸಿರಿ’ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಕೆಳಗಿನ ವೀಡಿಯೋ ಕ್ಲಿಕ್ ಮಾಡಿ ಇದನ್ನೂ ಓದಿ: ► ಲೋಕಾರ್ಪಣೆಗೆ ಸಿದ್ಧಗೊಂಡಿದೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ‘ರೈತ ಸಿರಿ’ – http://kundapraa.com/?p=26704 ► ಡಿ.14ರಂದು ಖಂಬದಕೋಣೆ ರೈತರ ಸೇವಾ ಸಹಕಾರಿಯ ರೈತ ಸಿರಿ ಲೋಕಾರ್ಪಣೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ – http://kundapraa.com/?p=26699

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬೆಳ್ಳಿರಥ ಸಮರ್ಪಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 20ರ ಬುಧವಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಬೆಳ್ಳಿರಥ ಸಮರ್ಪಣೆ ಮಾಡಲಿದ್ದಾರೆ ಎಂದು ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ಅಧ್ಯಕ್ಷ ವೆಂಕಟರಮಣ ಖಾರ್ವಿ ತಿಳಿಸಿದರು. ಅವರು ಉಪ್ಪುಂದದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೂರು ವರ್ಷಗಳ ಹಿಂದೆ ಮತ್ಸ್ಯಕ್ಷಾಮ ಉಂಟಾದ ಸಂದರ್ಭ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ರಾಣಿಬಲೆ ಮೀನುಗಾರರು ಬೆಳ್ಳಿ ರಥ ಸಮರ್ಪಿಸುವ ಹರಕೆ ಹೊತ್ತಿದ್ದರು. ಅದರಂತೆ ಪ್ರತಿವರ್ಷ ಬಂದ ಲಾಭದಲ್ಲಿ ಶೇ.1ರಷ್ಟು ಮೊತ್ತವನ್ನು ಬೆಳ್ಳಿರಥ ನಿರ್ಮಾಣಕ್ಕಾಗಿ ಮೀಸಲಿಟ್ಟು ಬೆಳ್ಳಿರಥ ನಿರ್ಮಾಣ ಮಾಡಲಾಗಿದೆ ಎಂದರು. ಸುಮಾರು ೪೫ಲಕ್ಷ ವೆಚ್ಚದಲ್ಲಿ ರಥಶಿಲ್ಪಿ ಬಿ. ಲಕ್ಷ್ಮೀನಾರಾಯಣ ಆಚಾರ್ಯ ಅವರಿಂದ ಬೆಳ್ಳಿರಥ ನಿರ್ಮಾಣಗೊಂಡಿದೆ. ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮಕ್ಕೆ ಸುಮಾರು ಹದಿನೈದು ಸಾವಿರ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ನೂತನ ಬೆಳ್ಳಿರಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪಂದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡ ರೈತ ಸಿರಿ ಲೋಕಾರ್ಪಣೆಗೆ ಸಜ್ಜುಗೊಂಡಿದ್ದು ಡಿ.14ರ ಗುರುವಾರ ಭವ್ಯ ಕಾರ್ಯಕ್ರಮದೊಂದಿಗೆ ಉದ್ಘಾಟನೆಗೊಳ್ಳಲಿದೆ. ರಾಜ್ಯ ಸಹಕಾರ ಸಚಿವ ರಮೇಶ ಜಾರಕಿಹೋಳಿ ಉದ್ಘಾಟಿಸಲಿದ್ದು, ಪ್ರಧಾನ ಕಛೇರಿಯನ್ನು ಮೀನುಗಾರಿಕೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ಬ್ಯಾಂಕಿಂಗ್ ವಿಭಾಗವನ್ನು ಕ.ರಾ.ಸ.ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ವಹಿಸಲಿದ್ದಾರೆ. ರೈತಸಿರಿ ಸಭಾಭವನವನ್ನು ಶಾಸಕ ಕೆ.ಗೋಪಾಲ ಪೂಜಾರಿ, ರೈತರ ಉತ್ಪತ್ತಿ ದಾಸ್ತಾನು ಮತ್ತು ಕೃಷಿ ಸಲಕರಣೆ ಮಳಿಗೆಯನ್ನು ಮಾಜಿ ಸಚಿವ ವಿನಯಕುಮಾರ ಸೊರಕೆ, ನ್ಯಾಯಬೆಲೆ ಅಂಗಡಿಯನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ನೂತನ ಗಣಕೀಕರಣ ಕೇಂದ್ರವನ್ನು ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ, ಭದ್ರತಾ ಕೋಶವನ್ನು ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ…

Read More