Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿನ ೭ನೇ ತರಗತಿ ವಿದ್ಯಾರ್ಥಿ ಸುಜನ್ ಉದ್ದ ಜಿಗಿತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈಗಾಗಲೇ ವೃತ್ತ ಮಟ್ಟದಲ್ಲಿ ಚಾಂಪಿಯನ್ ಆಗಿ, ಬೈಂದೂರು ವಲಯ ಮಟ್ಟದಲ್ಲಿ ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ಪದಕ ಪಡೆದಿದ್ದಾನೆ. ವಂಡ್ಸೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಗುಜ್ಜಾಡಿ ತರಬೇತಿ ನೀಡಿದ್ದು, ಈತ ಉದ್ದಿನಬೆಟ್ಟು ಸುಧಾಕರ ಪೂಜಾರಿ ಮತ್ತು ಭಾರತಿ ದಂಪತಿಗಳ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ಸೌಕರ್ಯ ಇಲ್ಲದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಕರಾವಳಿ ಭಾಗಗಳಲ್ಲಿ ಸರಕಾರಿ ಬಸ್‌ಗಳನ್ನು ಓಡಿಸಬೇಕು ಎಂದು ಜಿಲ್ಲಾ ಪ್ರಸಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ವತಿಯಿಂದ ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ,ಬೈಂದೂರು ಶಾಸಕ ಗೋಪಾಲ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಾಲಾ ಸಮಯದಲ್ಲಿ ಸಾಸ್ತಾನದಿಂದ ಪ್ರಾರಂಭಿಸಿ ಕರಾವಳಿಯ ರಸ್ತೆ ಮೂಲಕ ಕೋಡಿಕನ್ಯಾಣ, ಕೋಡಿತಲೆ, ಪಾರಂಪಳ್ಳಿ ಪಡುಕರೆ, ಕೋಟ ಪಡುಕರೆ, ಮಣುರು ಪಡುಕೆರೆ, ಕೊಮೆ, ಕೊರವಡಿ, ಗೋಪಾಡಿಯ ಮೂಲಕ ಬೀಜಾಡಿ ಫಿಶರೀಸ್ ರಸ್ತೆಯ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್‌ನ್ನು ನಿಗದಿತ ಸಮಯದಲ್ಲಿ ಓಡಿಸಬೇಕೆಂದು ಮನವಿ ಮಾಡಲಾಯಿತು.ಮನವಿಯ ಜತೆಯಲ್ಲಿ ಸರಕಾರಿ ಬಸ್ ಓಡಿಸುವ ಕುರಿತು ಬೀಜಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾಡಿದ ನಿರ್ಣಯದ ಪ್ರತಿಯನ್ನು ಲಗತ್ತಿಸಲಾಯಿತು. ಮನವಿ ಸ್ವೀಕರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪರದ ರೋಟರಿ ಕ್ಲಬ್ ಮಿಡ್‌ಟೌನ್ ಇವರಿಂದ ನೇಷನ್ ಬಿಲ್ಡರ್ ಅವಾರ್ಡ್‌ಗೆ ಭಾಜನರಾದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಸತೀಶ ಶೆಟ್ಟಿಗಾರರಿಗೆ ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ, ಪೋಷಕರು ಹಾಗೂ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಗೌರವಾರ್ಪಣೆ ಹಾಗೂ ಅಭಿನಂದನಾ ಸಮಾರಂಭವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಲಾಲರ ಅಧ್ಯಕ್ಷತೆಯಲ್ಲಿ ಜರುಗಿತು. ಮೊಳಹಳ್ಳಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ದಿನಪಾಲ ಶೆಟ್ಟಿಯವರು ಸತೀಶ ಶೆಟ್ಟಿಗಾರರನ್ನು ಫಲ ಪುಷ್ಪಗಳನ್ನಿತ್ತು ಗೌರವಿಸಿದರು. ನಂತರ ಮಾತನಾಡಿದ ಅವರು ’೧೯೯೮ರಲ್ಲಿ ಮೊಳಹಳ್ಳಿ ಶಾಲೆಯಿಂದ ಸೇವೆ ಪ್ರಾರಂಭಿಸಿದ ಶೆಟ್ಟಿಗಾರರು ತಮ್ಮ ಕ್ರಿಯಾಶೀಲ ವ್ಯಕ್ತಿತ್ವದ ಮೂಲಕ ಮಾದರಿ ಶಿಕ್ಷಕರಾಗಿ ಈ ಭಾಗದಲ್ಲಿ ಜನಾನುರಾಗಿಯಾಗಿದ್ದಾರೆ. ಪಠ್ಯಪುಸ್ತಕ ರಚನಾ ಸಮಿತಿ, ಪರಿಷ್ಕರಣಾ ಸಮಿತಿ, ಪ್ರಶ್ನೆ ಪತ್ರಿಕೆ ತಯಾರಿಕೆ, ನಲಿಕಲಿ ಹೀಗೆ ವಿವಿಧ ವಿಷಯಗಳಲ್ಲಿ ರಾಜ್ಯಮಟ್ಟದ ಸಂಪನ್ಮೂಲ ಶಿಕ್ಷಕರಾಗಿ ಸೇವೆಗೈದು ಅನುಭವ ಹೊಂದಿರುವ ಇವರ ಅವಿರತ ಸೇವೆಗೆ ರೋಟರಿ ಮಿಡ್‌ಟೌನ್ ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತ್ತೀಚಿಗೆ ಮೃತಪಟ್ಟ ಕಂಚುಗೋಡು ನಿವಾಸಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯ ಬಾಬು ಖಾರ್ವಿ ಕುಟುಂಬಕ್ಕೆ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಸಹಾಯಧನವನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ ಅವರು ೨೫ ಸಾವಿರ ರೂ.ಗಳ ಸಹಾಯ ಧನದ ಚೆಕ್‌ನ್ನು ಮೃತರ ಪತ್ನಿ ಶಾಂತಿ ಖಾರ್ವಿ ಅವರಿಗೆ ಹಸ್ತಾಂತರಿಸಿದರು. ಸಂಘದ ಉಪಾಧ್ಯಕ್ಷ ಗುರುನಾಥ ಪಟೇಲ್, ಕಾರ್ಯದರ್ಶಿ ದೇವದಾಸ ಖಾರ್ವಿ, ಮಾಜಿ ಕಾರ್ಯದರ್ಶಿ ಚೌಕಿ ವಿಠಲ ಖಾರ್ವಿ, ನಾಗಪ್ಪಯ್ಯ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಮೂಡುಬೆಳ್ಳೆಯ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸಿದ ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟದಲ್ಲಿ ಕುಂದಾಪುರ ವಲಯದ ವಿವಿಧ ಶಾಲೆಗಳಿಂದ ಭಾಗವಹಿಸಿದ ೧೮ ವಿದ್ಯಾರ್ಥಿಗಳು ೧೨ ಚಿನ್ನ,೮ ಬೆಳ್ಳಿ ಹಾಗೂ ೧೦ ಕಂಚಿನ ಪದಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಕುಂದಾಪರ ವಲಯದ ಬಿ.ಐ.ಇ.ಆರ್.ಟಿ.ಶ್ರೀ ಸೀತಾರಾಮ ಶೆಟ್ಟಿಯವರು ತಂಡದ ವ್ಯವಸ್ಥಾಪಕರಾಗಿ ಮಾರ್ಗದರ್ಶನ ಮಾಡಿರುತ್ತಾರೆ. ಸಮಗ್ರ ಪ್ರಶಸ್ತಿ ಪಡೆದ ಕುಂದಾಪುರ ವಲಯದ ಈ ತಂಡವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಅಶೋಕ್ ಕಾಮತ್ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀ ಸದಾನಂದ ಬೈಂದೂರು ಅಭಿನಂದಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ ಎಂಬುದು ಜಾತಿ, ಪಂಗಡ ಧರ್ಮದ ಪರಿಧಿಯನ್ನು ಮೀರಿ ಎಲ್ಲರನ್ನೂ ಸುಲಭವಾಗಿ ಸೆಳೆಯುವ ಮಾಧ್ಯಮವಾಗಿದ್ದು, ಅದರಲ್ಲಿ ತೊಡಗಿಕೊಳ್ಳುವ ಪ್ರತಿ ಕಲಾವಿದನೂ ಸಮಾಜದಲ್ಲಿ ವಿಶೇಷ ಮನ್ನಣೆಗೆ ಪಾತ್ರನಾಗುತ್ತಾನೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಅವರು ಹೊಸೂರು ಪರಿಶಿಷ್ಟ ಪಂಗಡದ ಸಭಾಭವನಲ್ಲಿ ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಇದರ ದಶಮಾನೋತ್ಸವದ ಕಾರ್ಯಕ್ರಮಗಳಿಗೆ ಮಡಿಕೆಗೆ ಕಳಸದಲ್ಲಿ ತುಂಬಿದ ಹಾಲೇರೆದು ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಮೊದಲ ಭಾರಿಗೆ ಪರಿಶಿಷ್ಟ ಪಂಗಡದ ಯುವಕರು ಒಗ್ಗಟ್ಟಾಗಿ ರಂಗತಂಡವನ್ನು ಕಟ್ಟಿರುವುದಲ್ಲದೇ ವರ್ಷಂಪ್ರತಿ ತರಬೇತಿ ಕಾರ್ಯಾಗಾರ, ಉತ್ಸವ, ನಾಟಕ ಪ್ರದರ್ಶನದಂತಹ ಕಾರ್ಯಕ್ರಮಗಳನ್ನು ಹಳ್ಳಿಯಲ್ಲಿಯೇ ಆಯೋಜಿಸುತ್ತಾ ಕಲೆಯ ಬಗೆಗೆ ಹಳ್ಳಿಯ ಜನರಲ್ಲಿ ಆಸಕ್ತಿ ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ. ಕಲಾ ಮಾಧ್ಯಮಕ್ಕೆ ಸಮಾಜ ಹಾಗೂ ವ್ಯವಸ್ಥೆಯನ್ನು ಕಲೆಯ ಮೂಲಕವೇ ಪ್ರಶ್ನಿಸುವ, ಎಚ್ಚರಿಸುವ ಶಕ್ತಿಯಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ರೋವರ್ ರೇಂಜರ್ ಘಟಕ ಹಾಗೂ ಬೈಂದೂರು ಪೋಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮಾದಕ ವಸ್ತುಗಳ ನಿಷೇಧ ಅರಿವು ಪ್ರಯುಕ್ತ ಬೈಂದೂರು ಪೇಟೆಯಲ್ಲಿ ಜಾಥಾ ನಡೆಯಿತು. ಬೈಂದೂರು ವೃತ್ತ ನಿರೀಕ್ಷಕ ರಾಘವ ಎಸ್. ಪಡೀಲ್ ಜಾಥಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಮಾದಕ ವಸ್ತುಗಳಿಗೆ ಬಲಿಯಾಗದೇ ತಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಮಾದಕ ವಸ್ತುಗಳ ನಿಷೇಧದ ಬಗ್ಗೆ ಅರಿವು ಮೂಡಿಸುವ ಬಗ್ಗೆ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವಿಚಂದ್ರ, ಉಪನ್ಯಾಸಕರಾದ ವಿನೋದ್, ನಾಗರಾಜ ಶೆಟ್ಟಿ, ನವೀನ್ ಉಪಸ್ಥಿತರಿದ್ದರು. ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ. ಎನ್. ಹಾಗೂ ಸಿಬ್ಬಂದಿ ವರ್ಗದವರು ಜಾಥಕ್ಕೆ ಸಹಕರಿಸಿದರು. ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯ ವತಿಯಿಂದ ಹಕ್ಲಾಡಿಯ ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ಸೇವನೆ ಅರಿವು ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಂಗವಾಗಿ ಹಕ್ಲಾಡಿ, ಹೊಳೆಮೊಗ್ಗೆ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೈಂದೂರು ವಲಯ ಸಮತಿ ನೇತೃತ್ವದಲ್ಲಿ, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳ ಸದಸ್ಯರ ರಾಜಕೀಯ ಸಮಾವೇಶವು ಬೈಂದೂರು ರೋಟರಿ ಭವನದಲ್ಲಿ ಜರಗಿತು. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಿತ್ಯಾನಂದ ಸ್ವಾಮಿ ರಾಜಕೀಯ ಸಮಾವೇಶ ಉದ್ಘಾಟಿಸಿ ಮಾತನಾಡುತ್ತ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಣಾಳಿಕೆಯಲ್ಲಿ ಹಾಗೂ ಮೋದಿಯವರ ಚುನಾವಣಾ ಪ್ರಚಾರ ಭಾಷಣದಲ್ಲಿ ಅಭಿವೃದ್ಧಿಯೇ ಬಿಜೆಪಿ ಮೂಲಮಂತ್ರ, ೬೦ ವರ್ಷದಲ್ಲಾಗದ ಅಭಿವೃದ್ಧಿ ಕೆಲಸ ಆರು ತಿಂಗಳಲ್ಲಿ ಸಾಧಿಸುತ್ತೇವೆ. ಎಲ್ಲಾ ಸಮಸ್ಯೆಗಳಿಗೆ ಬಿಜೆಪಿ ಪರಿಹಾರ ಅಚ್ಚೆದಿನ ಆನೆವಾಲೆ ಹೈ – ಒಳ್ಳೆಯ ದಿನಗಳು ಬರಲಿವೆ, ಅಧಿಕಾರಕ್ಕೆ ಬಂದ ೧೦೦ ದಿನಗಳಲ್ಲಿ ಬೆಲೆ ಏರಿಕೆ ತಡೆಯಾಡೆಯಲಾಗುತ್ತದೆ, ಬೃಷ್ಠಾಚಾರ ರಹಿತ ದೇಶ ಕಟ್ಟುತ್ತೇವೆ ಎಂದು ಮೋದಿ, ಅಮಿತ್‌ಷಾ ಹೇಳಿದರು. ನ ಕಾವೂಂಗ ನ ಕಾನೆ ದೂಂಗ ತಾನೂ ತಿನ್ನೊಲ್ಲ, ತಿನ್ನಲೂ ಬಿಡೋಲ್ಲ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್…

Read More

ಕ್ಷೇತ್ರದ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಶಾಸಕ ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಮಾಜಿಕವಾಗಿ ಧ್ವನಿಯಿಲ್ಲದ, ಶಕ್ತಿಯಿಲ್ಲದ ಜನರಿಗೆ ಸಮಸ್ಯೆ ಹೇಳಿಕೊಳ್ಳಲು ಜನಸಂಪರ್ಕ ಸಭೆಗಳ ಮೂಲಕ ಸರಕಾರ ನೇರ ಅವಕಾಶ ಕಲ್ಪಿಸಿದೆ. ಇಲ್ಲಿ ಜನರೇ ಸಾಹೇಬರು ಎಂಬುದನ್ನು ಗಮನದಲ್ಲಿಟ್ಟುಕೊಂಡು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ ಬಂದು ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಜನಸಂಪರ್ಕ ಸಭೆಗಳ ಮೂಲಕ ಸಾವಿರಾರು ಮಂದಿ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ತಾಲೂಕು ಆಡಳಿತದಿಂದ ಇಲ್ಲಿನ ಯಡ್ತರೆ ಜೆಎನ್‌ಆರ್ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಬೈಂದೂರು ಹೋಬಳಿ ಮಟ್ಟದ ಜನಸಂಪರ್ಕ ಸಭೆಗೆ ಚಾಲನೆ ನೀಡಿ ಮಾತನಾಡಿಜನರ ತೆರಿಗೆ ಹಣದಿಂದ ಸಂಬಳ ಪಡೆಯುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವಾಗಲೂ ಜನರ ಸೇವಕರೇ ಆಗಿರುತ್ತಾರೆ. ಜನರಿಗೆ ಅಗತ್ಯವಾದ ಸೌಕರ್ಯವನ್ನು ಸೂಕ್ತ ಸಮಯದಲ್ಲಿ ಒದಗಿಸುವುದು ನಮ್ಮಲ್ಲರ ಕರ್ತವ್ಯ ಎಂದರು. ರಾಜ್ಯ ಕಾಂಗ್ರೆಸ್ ಸರಕಾರ ಬಂದ ಬಳಿಕ ಜಿಲ್ಲೆಯಲ್ಲಿ ಹೊಸತಾಗಿ ೬೬,೦೦೦ ಜನರಿಗೆ ಬಿಪಿಎಲ್ ಕಾರ್ಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವರಾಮ ಕಾರಂತರು ಅವಗಣನೆಗೆ ಈಡಾಗಿದ್ದ ಯಕ್ಷಗಾನಕ್ಕೆ ವಿಶೇಷ ಮಾನ್ಯತೆ ತಂದು ಕೊಟ್ಟ ಪರಿಣಾಮ ಈಗ ಈ ಕಲೆ ವ್ಯಾಪಕವಾಗಿ ಬೆಳೆದಿದೆ. ಹೊಸ ಪ್ರಯೋಗಗಳ ಮೂಲಕ ಹೊಸ ಪ್ರದೇಶಗಳಿಗೆ ವಿಸ್ತರಿಸಿದೆ. ಕಲಾವಿದರ ಆರ್ಥಿಕ ಮಟ್ಟ ಸುಧಾರಿಸಿದೆ. ಇದು ಇನ್ನಷ್ಟು ಬೆಳೆಯಬೇಕು. ಅದಕ್ಕೆ ಸಾಂಸ್ಕೃತಿಕ ಸಂಘಟನೆಗಳು ಪೋಷಣೆ ನೀಡಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು. ನಾಗೂರು ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದ ಭಾಗವತ ಜಿ. ಆರ್. ಕಾಳಿಂಗ ನಾವುಡ ಸ್ಮರಣ ವೇದಿಕೆಯಲ್ಲಿ ಶನಿವಾರ ೫ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪದಲ್ಲಿ ಮಾತನಾಡಿದರು. ಅಕ್ಷರ ಜ್ಞಾನ ಮತ್ತು ಶಿಕ್ಷಣ ಒಂದೇ ಅಲ್ಲ. ಅಕ್ಷರದ ಅರಿವು ಇಲ್ಲದೆಯೂ ವಿದ್ಯಾವಂತನಾಗಬಹುದು ಎನ್ನುವುದಕ್ಕೆ ಯಕ್ಷಗಾನ ಕಲಾವಿದರಲ್ಲಿ ಉದಾಹರಣೆ ದೊರೆಯುತ್ತದೆ. ಅವರು ತಾವೂ ಬೆಳೆದು ಜನರಿಗೂ ಅನೌಪಚಾರಿಕ ಶಿಕ್ಷಣ ನೀಡುತ್ತಾರೆ. ಪೌರಾಣಿಕ ಕಥಾಪ್ರಸಂಗದ ಪ್ರದರ್ಶನಗಳ ಮೂಲಕ ಜನರಿಗೆ ಪುರಾಣಗಳ ಅರಿವು ಮೂಡಿಸುವುದರ ಜತೆಗೆ ಶುದ್ಧ ಕನ್ನಡ ಭಾಷೆಯನ್ನು ಕಲಿಸುತ್ತಾರೆ. ಆ ನೆಲೆಯಲ್ಲಿ…

Read More