ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 94ಸಿ ಅರ್ಜಿದಾರರಿಗೆ ಶೀಘ್ರ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರಡಿ ಸಂಘದ ನೇತೃತ್ವದಲ್ಲಿ ಇಲ್ಲಿನ ವಿಶೇಷ ತಹಶೀಲ್ದಾರರ ಕಛೇರಿಯ ಎದುರು ಪ್ರತಿಭಟನೆ ಜರುಗಿತು. ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ರಾಜ್ಯ ಅಧ್ಯಕ್ಷ ನಿತ್ಯಾನಂದಸ್ವಾಮಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು, ಕೃಷಿಕೂಲಿಕಾರರ ಸಂಘದ ಮುಖಂಡರಾದ ವೆಂಕಟೇಶ ಕೋಣಿ, ಕೆ. ಶಂಕರ್, ಬಾಲಕೃಷ್ಣ ಶೆಟ್ಟಿ, ಸುರೇಶ್ ಕಲ್ಲಾಗರ, ರಾಜೀವ ಪಡುಕೋಣೆ, ಗಣೇಶ ತೊಂಡೆಮಕ್ಕಿ, ನಾಗರತ್ನ ನಾಡ, ಶೀಲಾವತಿ, ಮುತ್ತ ಮಾರ್ಕೊಡು ಮೊದಲಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಭಾಗದ ವಿದಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲಾ ಮಕ್ಕಳಿಗೂ ಸರ್ಕಾರಿ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಮಕ್ಕಳ ಸಂಖ್ಯೆಗನುಗುಣವಾಗಿಯೇ ಶಿಕ್ಷಕರಿದ್ದಾರೆ. ಆದರೆ ಹೆಚ್ಚುವರಿ ನೆಪದಲ್ಲಿ ಇಲ್ಲಿನ ಶಿಕ್ಷಕರನ್ನು ವರ್ಗಾವಣೆಗೊಳಿಸಿದರೇ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುವುದು. ಇಲಾಖೆ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶಾಲಾಭಿವೃದ್ದಿ ಸಮಿತಿ, ಪೋಷಕರು ಹಾಗೂ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ಮೂರನೇ ದಿನ ತಲುಪಿದ್ದು, ತರಗತಿಗೆ ಕೊಠಡಿಗೆ ಬೀಗ ಜಡಿದು ಪ್ರತಿಭಟನೆ ಮುಂದುವರಿಸಿದ್ದಾರೆ. ಶಿಕ್ಷಣ ಇಲಾಖೆಯು ಹೆಚ್ಚುವರಿಯಾಗಿ ಶಿಕ್ಷಕರನ್ನು ವರ್ಗಾವಣೆಗೊಳಿಸುವುದರಿಂದ ಶಾಲೆಗೆ ವ್ಯಾಸಂಗ ಮಾಡುತ್ತಿರುವ 219 ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಲಿದ್ದು, ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಎರಡನೇ ದಿನ ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಎದುರು ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದಾಗ್ಯೂ ಮೂರನೇ ದಿನವೂ ಪ್ರತಿಭಟನೆಯನ್ನು ಮುಂದುವರಿಸಿದ್ದು, ಶಾಲಾ ಮಕ್ಕಳು, ಎಸ್‌ಡಿಎಂಸಿ ಸದಸ್ಯರು, ಜನಪ್ರತಿನಿಧಿಗಳು ಸಿದ್ದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ ಇದರ ಬೈಂದೂರು ವಿಧಾನಸಭಾ ಕ್ಷೇತ್ರದ ಸಂಚಾಲಕರಾಗಿ ಬೈಂದೂರಿನ ಮಣಿಕಂಠ ದೇವಾಡಿಗ ನೇಮಕಗೊಂಡಿದ್ದಾರೆ. ಅವರು ಈ ಹಿಂದೆ ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅತಿಥಿ ಉಪನ್ಯಾಸಕರ ಸಂಘದ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಬೈಂದೂರಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಯುವ ಮುಖಂಡ, ಕುಂದಾಪುರ ಕೋಡಿಯ ಮಹೇಶ್ ಕುಮಾರ್ ಪೂಜಾರಿ ನೇಮಕಗೊಂಡಿದ್ದಾರೆ. ಯುವಮೋರ್ಚಾದ ರಾಜ್ಯ ಕಾರ್ಯದರ್ಶಿ ತಮ್ಮೇಶಗೌಡ, ಮಹೇಶ್ ಅವರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಸಿವಿಲ್ ಇಂಜಿನಿಯರ್ ಪದವೀಧರರಾದ ಮಹೇಶ್ ಕುಮಾರ್, ವಿದ್ಯಾರ್ಥಿ ದಿನಗಳಿಂದಲೂ ಸಮಾಜ ಸೇವೆ, ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಮಣಿಪಾಲ ವಿಶ್ವವಿದ್ಯಾನಿಯಲದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಕಳೆದ ಸಾಲಿನಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ sಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೋದಯ ಸ್ವಸಹಾಯ ಗುಂಪುಗಳ ಮೂಲಕ ಪ್ರತಿ ಮಹಿಳೆಯನ್ನು ಆರ್ಥಿಕ ಸ್ವಾವಲಂಭಿಗಳನ್ನಾಗಿಸಲು ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ ಸಹಕಾರಿ ತತ್ವದಡಿಯಲ್ಲಿ ಆರ್ಥಿಕ ನೆರವಿನೊಂದಿಗೆ ವಿವಿಧ ಸೌಲಭ್ಯಗಳನ್ನು ನಿರಂತರವಾಗಿ ಒದಗಿಸುತ್ತಿರುವುದಲ್ಲದೇ, ಅಗತ್ಯವಿರುವವರ ನೋವಿಗೂ ಸ್ಪಂದಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು. ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕುಂದಾಪುರ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇತ್ತಿಚಿಗೆ ಮೃತರಾದ ಗಂಗೊಳ್ಳಿ ಶ್ರೀ ರಾಮನಾಥ ಸುಹಾಸಿನಿ ನವೋದಯ ಸ್ವಸಹಾಯ ಗುಂಪಿನ ಸದಸ್ಯೆ ಜ್ಯೋತಿ ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಎನ್. ರಾಜೇಂದ್ರಕುಮಾರ್ ಅವರು ನೀಡಿದ 1 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ಹಸ್ತಾಂತರಿಸಿ ಮಾತನಾಡಿದರು. ನವೋದಯ ಸ್ವಸಹಾಯ ಗುಂಪಿನ ಮೇಲ್ವಿಚಾರಕ ಶಿವರಾಮ ಪೂಜಾರಿ, ಕುಂದಾಪುರ ಶಾಖಾ ಪ್ರಬಂಧಕ ರಾಮ ಆಚಾರ್, ತಾಲೂಕು ನವೋದಯ ಸಂಘದ ಮೇಲ್ವಿಚಾರಕ ಮನೋಹರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೂ, ಟೆಂಡರ್ ಪಡೆದ ಕಂಪೆನಿಗಳ ಮಾಹಿತಿ ಕೊರತೆಯೋ ಆದರೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕೋಟೇಶ್ವರ, ಕುಂಭಾಶಿಯ ಪಶುಚಿಕಿತ್ಸಾ ಕೇಂದ್ರದ ಎದುರು, ತೆಕ್ಕಟ್ಟೆ, ಕೋಟ ಮುಂದಾದೆಡೆ ಕೂಡು ರಸ್ತೆಗಳಿರುವಲ್ಲಿ ಅಳವಡಿಸಿರುವ ನಾಮಫಲಕಗಳು ಪ್ರಯಾಣಿಕರ ಗೊಂದಲ ಹುಟ್ಟಿಸುತ್ತವೆ. ಸುರತ್ಕಲ್‌ನಿಂದ ಕುಂದಾಪುರದ ತನಕ ರಾಷ್ಟ್ರೀಯ ಹೆದ್ದಾರಿ-66ರ ಚಥುಷ್ಪತ ಕಾಮಗಾರಿಯನ್ನು ನವಯುಗ ಕಂಪೆನಿ ವಹಿಸಿಕೊಂಡಿದ್ದು ಕಳೆದ ನಾಲ್ಕು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿದೆ. ಅಂಡರ್ ಪಾಸ್, ಡಿವೈಡರ್, ಟರ್ನಿಂಗ್ ಪಾಯಿಂಟ್‌ಗಳನ್ನು ಜನಸಂದಣಿಯಗೆ ಅನುಗುಣವಾಗಿ ನೀಡದೇ ತಮ್ಮದೇ ಲೆಕ್ಕಾಚಾರದಲ್ಲಿ ಹೆದ್ದಾರಿ ಪ್ರಾಧಿಕಾರವು ಕಾಮಗಾರಿಯನ್ನು ನಡೆಸುತ್ತಿರುವುದು ಒಂದೆಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದರೇ, ಅಲ್ಲಲ್ಲಿ ಹಾಕಿರುವ ನಾಮಫಲಕಗಳು ಗೊಂದಲ ಹುಟ್ಟುಹಾಕಿದೆ. ವಿಷ್ಯ ಏನಪ್ಪಾ ಅಂದ್ರೆ, ನವಯುಗ ಕಂಪೆನಿಯವರಿಗೆ ಸುರತ್ಕಲ್ ನಿಂದ ಕುಂದಾಪುರದವರೆಗೆ ಟೆಂಡರ್ ನೀಡಲಾಗಿದೆ. ಹಾಗಾಗಿ ಕುಂದಾಪುರದಿಂದ ಮಂಗಳೂರು ತೆರಳುವವರಿಗೆ ಕೋಟೇಶ್ವರ, ಕುಂಭಾಶಿ, ತೆಕ್ಕಟ್ಟೆ ಹೀಗೆ ಸುರತ್ಕಲ್ ತನವೂ ಕೂಡರಸ್ತೆಗಳಿರುವಲ್ಲಿಯೂ ಮಾರ್ಗಸೂಚಿ ಹಾಕಲಾಗಿದೆ. (ಕುಂಭಾಶಿಯ ಪಶು ಆಸ್ಪತ್ರೆಯ ಎದುರು ಬೋರ್ಡ್ ಹಾಕಲಾಗಿದೆ.) ಆ ಮಾರ್ಗಸೂಚಿಗಳಲ್ಲಿ ಎತ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲಾವಿದರನ್ನು ಸೃಷ್ಠಿಸುವುದೆಂದರೇ ಉತ್ತಮ ಸಮಾಜವನ್ನು ಸೃಷ್ಠಿಸಿದಂತೆ. ಕಲೆಯ ಮೂಲಕ ಮಾತ್ರ ಸದ್ವಿಚಾರಗಳನ್ನು ಜನರಿಗೆ ತಲುಪಿಸಲು ಹಾಗೂ ಸಮಾಜವನ್ನು ಸದಾ ಜಾಗೃತ ಸ್ಥಿತಿಯಲ್ಲಿಡಲು ಸಾಧ್ಯವಿದೆ ಎಂದು ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು. ಪರಿಶಿಷ್ಟ ಪಂಗಡದ ಕಲಾವಿದರ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಬೆಂಗಳೂರು ಕರ್ನಾಟಕ ನಾಟಕ ಅಕಾಡೆಮಿ ಸಹಕಾರದೊಂದಿಗೆ ಬೈಂದೂರು ರೋಟರಿ ಭವನದಲ್ಲಿ ಆಯೋಜಿಸಲಾದ ಸತ್ರೂ ಅಂದ್ರೆ ಸಾಯ್ತಾರಾ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಟಿ.ವಿ, ಸಾಮಾಜಿಕ ತಾಣಗಳ ಪ್ರಭಾವದಿಂದಾಗಿ ಯುವಕರು ಜ್ಞಾನವಂತರಾಗುತ್ತಿದ್ದಾರೆ ಆದರೆ ವಿಚಾರವನ್ನು ಅರ್ಥೈಸಿಕೊಳ್ಳುವ ಹಾಗೂ ವಾಸ್ತವವನ್ನು ವಿಮರ್ಷಿಸುವ ಸಾಮಾನ್ಯ ಪ್ರಜ್ಞೆಯನ್ನು ಮರೆಯುತ್ತಿದ್ದಾರೆ. ರಂಗಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನುಷ್ಯ ಮನುಷ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಲು ಸಾಧ್ಯವಿದೆ ಎಂದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಮೇಶ್ ಸಾಲಿಯಾನ್ ಮಾತನಾಡಿ ಪರಿಶಿಷ್ಟ ಪಂಗಡದವರು ಎಲ್ಲರೊಂದಿಗೆ ಸಮಾನವಾಗಿ ಕೂಡಿ ಬಾಳಲು, ಸಾಂಸ್ಕೃತಿಕವಾಗಿ ಬೆಳೆಯಲು ನಾಟಕ ಅಕಾಡೆಮಿ ಹತ್ತು ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಯೊಬ್ಬ ಪ್ರಜೆಯು ಪಾರದರ್ಶಕವಾಗಿ ಆದಾಯ ಘೋಷಣೆ ಮಾಡಿದಲ್ಲಿ ದೇಶದ ಆರ್ಥಿಕ ಸ್ಥಿತಿ ಸಮತೋಲನ ಸಾಧಿಸುವುದರಲ್ಲಿ ಸಂಶಯವಿಲ್ಲ ಆದುದರಿಂದ ಆದಾಯ ಘೋಷಣೆ 2016ರ ಕಾಯಿದೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಆದಾಯ ತೆರಿಗೆ ಕಮಿಷನರ್ ಸಿದ್ದಪ್ಪಾಜಿ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್, ಅಸೋಸಿಯೇಟ್ ಆಫ್ ಕನ್ಸೆಲ್ಟಿಂಗ್ ಸಿವಿಲ್ ಇಂಜಿನಿಯರ‍್ಸ್ ಆಂಡ್ ಆರ್ಕಿಟೆಕ್ಟ್ ಕುಂದಾಪುರ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಮತ್ತು ಆಡಿಷನಲ್ ಕಮಿಷನರ್ ಆಫ್ ಇನ್‌ಕಮ್ ಟ್ಯಾಕ್ಸ್ ಆಫೀಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಆದಾಯ ಘೋಷಣೆ ೨೦೧೬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷರಾದ ಕೆ. ನರಸಿಂಹ ಹೊಳ್ಳ ಸ್ವಾಗತಿಸಿದರು. ರೋಟರಿ ಸನ್‌ರೈಸ್ ಸ್ಥಾಪಕಾಧ್ಯಕ್ಷರಾದ ದಿನಕರ ಆರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಜಿನಿಯರ‍್ಸ್ ಅಸೋಸಿಯೇಶನ್ ಅಧ್ಯಕ್ಷರಾದ ವಿಠಲ ಆಚಾರ್ಯ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ರೋಟರಿ ದಕ್ಷಿಣದ ಅಧ್ಯಕ್ಷರಾದ ಒಜೊಲಿನ್ ರೆಬೆಲ್ಲೊ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಪತ್ರಿಕೋದ್ಯಮ ಎಂಬುದು ಜ್ಞಾನದ ಕ್ಷೇತ್ರ. ಜ್ಞಾನವನ್ನು ಗಳಿಸುವುದು ಹಾಗೂ ಅದನ್ನು ಶ್ರೀಸಾಮಾನ್ಯನಿಗೆ ತಲುಪಿಸುವುದು ಪರ್ತಕರ್ತನ ಕೆಲಸ. ಆದರೆ ಜ್ಞಾನ ಪ್ರಸರಣದ ಸಮಯದಲ್ಲಿಯೇ ಸಮಾಜದ ನೋವಿಗೆ ಸ್ಪಂದಿಸುವುದು ಹಾಗೂ ಸಾಮಾಜಿಕ ಕಳಕಳಿಯನ್ನು ತೋರಿಸುವುದು ಅತೀ ಮುಖ್ಯ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಮಂಗಳೂರು ವಿಭಾಗದ ಮುಖ್ಯಸ್ಥ ಎಂ. ರಘುರಾಮ್ ಹೇಳಿದರು. ಆಳ್ವಾಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಪತ್ರಕರ್ತರಾದವರಿಗೆ ಸೂಕ್ಷ್ಮ ಒಳನೋಟಗಳಿರಬೇಕು. ತನ್ನ ಸುತ್ತಮುತ್ತ ಏನಾಗುತ್ತಿದೆ ಎಂಬ ಅರಿವಿನ ಜೊತೆಗೆ ಪರೀಕ್ಷಕ ಬುದ್ಧಿಯಿರಬೇಕು. ಆಗ ಮಾತ್ರ ವ್ಯವಸ್ಥೆಯಲ್ಲಡಗಿರುವ ಲೋಪಗಳನ್ನು ಪತ್ತೆ ಹಚ್ಚಲು, ಅವುಗಳಿಗೆ ಒಂದು ತಾರ್ಕಿಕ ಅಂತ್ಯ ನೀಡಲು ಸಾಧ್ಯ. ಪತ್ರಿಕೋದ್ಯಮ ವಿದ್ಯಾರ್ಥಿಗಳು ತಮ್ಮ ಬರವಣಿಗೆಯ ಶೈಲಿಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ‘ಸಂಪಾದಕರಿಗೆ ಪತ್ರ’ ಅಂಕಣ ವಿದ್ಯಾರ್ಥಿಗಳಿಗಿರುವ ಅತೀ ದೊಡ್ಡ ವೇದಿಕೆ. ಗಮನಾರ್ಹ ವಿಷಯಗಳ ಬಗ್ಗೆ ಪತ್ರಗಳನ್ನು ಬರೆಯುವದರಿಂದ ಸಾಮಾಜಿಕ ಕ್ರಾಂತಿಗೆ ವಿದ್ಯಾರ್ಥಿಗಳು ಮುಂದಾಗಬಹುದು ಎಂದರು. ನಂತರ ಸಂವಾದ ನಡೆಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭ ಜರುಗಿತು. ರೋಟರಿ ಸನ್‌ರೈಸ್ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ಅವರು ಇಂಟರ‍್ಯಾಕ್ಟ್ ಕ್ಲಬ್‌ನ ಅಧ್ಯಕ್ಷೆ ಶ್ರೇಯಾ ಎಸ್. ಪೂಜಾರಿ, ಕಾರ್ಯದರ್ಶಿ ಆಶೀಷ್ ಚಂದ್ರನ್, ಖಜಾಂಚಿ ಧನ್ವಿ ಎಸ್. ಜೋಗಿ ಅವರಿಗೆ ಪದಪ್ರದಾನ ನೆರವೇರಿಸಿದರು. ಅತಿ ವಂದನೀಯ ಫಾದರ್ ಅನಿಲ್ ಡಿ,ಸೋಜಾ ಅವರು ಅಧ್ಯಕ್ಷತೆವಹಿಸಿದ್ದರು. ಇಂಟರ‍್ಯಾಕ್ಟ್ ಕ್ಲಬ್ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ರೋಟರಿ ಸನ್‌ರೈಸ್ ಸದಸ್ಯ ಉಲ್ಲಾಸ್ ಕ್ರಾಸ್ತಾ ಕೊಡಮಾಡಿದ ೫ಸಾವಿರ ರೂ.ಗಳನ್ನು ಹಸ್ತಾಂತರಿಸಲಾಯಿತು. ರೋಟರಿ ಜೋನಲ್ ಲೆಫ್ಟಿನೆಂಟ್ ಅಬುಶೇಖ್ ಸಾಹೇಬ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಟರ‍್ಯಾಕ್ಟ್ ಕ್ಲಬ್ ಛೇರ್‌ಮೆನ್ ಜಗದೀಶ್ ಚಂದ್ರನ್, ಶಾಲೆಯ ಇಂಟರ‍್ಯಾಕ್ಟ್ ಕೋ ಆರ್ಡಿನೆಟರ್ ಲೂಯಿಸ್ ಪ್ರಶಾಂತ ರೆಬೆರೋ, ಸಿಸ್ಟರ್ ಜೋಯ್ಸ್‌ಲಿನ್ ಎ.ಸಿ, ರೋಟರಿ ಸನ್‌ರೈಸ್ ಸದಸ್ಯರಾದ ಸದಾನಂದ ಉಡುಪ, ಡುಂಡಿರಾಜ್, ದಿನೇಶ್ ಗೋಡೆ, ಕಲ್ಪನಾ ಭಾಸ್ಕರ್, ಉಲ್ಲಾಸ್ ಕ್ರಾಸ್ತಾ…
