Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿಯ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ವಿವಿಧ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ವದ ವೇದಿಕೆಯಾಗಿವೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಮುಕ್ತವಾಗಿ ಅಭಿವ್ಯಕ್ತಪಡಿಸಲು ಇಂತಹ ಸ್ಪರ್ಧೆಗಳು ಅವಕಾಶ ಕಲ್ಪಿಸುತ್ತವೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಶಿರೂರು ಕ್ಲಸ್ಟರ್ ವ್ಯಾಪ್ತಿಯ ಸುಮಾರು 19 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವಿಸಿದರು. ಬೈಂದೂರಿನ ಹೋಲಿ ಕ್ರಾಸ್ ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಹೋಲಿ ಕ್ರಾಸ್ ಚರ್ಚ್‌ನ ರೆವರೆಂಡ್ ಫಾದರ್ ಡೆನಿಸ್ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೈಂದೂರು ಸಂಯೋಜಕರಾದ ಪ್ರದೀಪ್ ಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಶವದೇಹ ಗೌರವ ಪ್ರತಿಜ್ಞಾ ಸಮಾರಂಭವು ಗುರುವಾರ ಮಿಜಾರು ಕ್ಯಾಂಪಸ್‌ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾಲಯದ ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ ಹಾಗೂ ಸಿಮ್ಯುಲೇಶನ್ ಪ್ರಯೋಗಾಲಯದ ಸಂಯೋಜಕಿ ಡಾ. ಮೇಘನಾ ಮುಕುಂದ್, “ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು. ಅದನ್ನು ಅತ್ಯಂತ ಗೌರವ ಮತ್ತು ಕೃತಜ್ಞತೆಯಿಂದ ಕಾಣುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಮಾನವ ದೇಹದ ಅಂಗರಚನೆಯನ್ನು ಅರಿತುಕೊಳ್ಳಲು ಹಾಗೂ ವೈದ್ಯಕೀಯ ಜ್ಞಾನದ ಮೂಲಭೂತ ಅಂಶಗಳನ್ನು ಕಲಿಯಲು ಶವದೇಹಗಳ ಕೊಡುಗೆ ಅಪಾರ. ಈ ಅಪರೂಪದ ಕಲಿಕಾ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಮಹಾಬಲ ಶೆಟ್ಟಿ ಮಾತನಾಡಿ, “ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡುವುದು ಸಾಮಾನ್ಯ ನಿರ್ಧಾರವಲ್ಲ. ಅದಕ್ಕೆ…

Read More

ಕುಂದಾಪ್ರ ಡಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಪಿ & ಒ ಇಂಜಿನಿಯರ್ ಮತ್ತು ಲೆದರ್ ವರ್ಕರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ & ಒ ಹುದ್ದೆಗೆ ಬ್ಯಾಚುಲರ್ ಆಫ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಬಿಪಿಒ ಅಥವಾ ಡಿಪ್ಲೋಮಾ ಇನ್ ಪ್ರೋಸ್ಥೆಟಿಕ್ ಅಂಡ್ ಆರ್ಥೆಟಿಕ್ಸ್ ಡಿಪಿಒ ವಿದ್ಯಾರ್ಹತೆ ಮತ್ತು ಸದ್ರಿ ಕ್ಷೇತ್ರದಲ್ಲಿ 2 ರಿಂದ 5 ವರ್ಷ ಅನುಭವ ಹೊಂದಿರುವ ಹಾಗೂ ಲೆದರ್‌ವರ್ಕರ್ ಹುದ್ದೆಗೆ ಲೆದರ್‌ವರ್ಕ್ ಬಗ್ಗೆ ಪ್ರಮಾಣಪತ್ರವನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ನವೆಂಬರ್ 20ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ-576101 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2533372, 9964583433 ಸಂಪರ್ಕಿಸಬಹುದಾಗಿದ್ದು, ಕೊನೆಯ ದಿನಾಂಕದ ನಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇದರ ಕಲಾ ವಿಭಾಗ ಸಾದರ ಪಡಿಸುವ ಆಹ್ವಾನಿತ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಉನ್ಮೇಷ 2k26ರಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ . ಇವರೆಲ್ಲರಿಗೂ ಕಾಲೇಜು ಆಡಳಿತ ಮಂಡಳಿ, ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ವಾಸುದೇವ ಉಡುಪ ಉಪಸ್ಥಿತರಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಭಾ ಕಾರಂಜಿ ಎಂಬುದು ಕೇವಲ ಸ್ಪರ್ಧೆಯಲ್ಲ; ಮಕ್ಕಳಲ್ಲಿರುವ ಕಲಾ ಪ್ರತಿಭೆಗಳಿಗೆ ಜೀವ ತುಂಬಿ, ಅವರ ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಸಾಂಸ್ಕೃತಿಕ ಸಂಭ್ರಮವಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜೊತೆಗೆ ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸ, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಪರಸ್ಪರ ಸಹಕಾರದ ಮನೋಭಾವವನ್ನು ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ನವಂಬರ್ 01 ರಿಂದ 03ರ ವರೆಗೆ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಪಡೆದುಕೊಂಡಿತು. ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ 11 ಚಿನ್ನ, 08 ಬೆಳ್ಳಿ ಮತ್ತು 07 ಕಂಚಿನ ಪದಕಗಳೊಂದಿಗೆ ಒಟ್ಟು 26 ಪದಕಗಳನ್ನು ಪಡೆದುಕೊಂಡು ಬಾಲಕ ಬಾಲಕಿಯರ ಎರಡು ವಿಭಾಗದ ತಂಡ ಪ್ರಶಸ್ತಿ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ 12 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ಫಲಿತಾಂಶ:ಬಾಲಕಿಯರ ವಿಭಾಗದಲ್ಲಿ:ಮೇಘಾ – 400ಮೀ (ಪ್ರಥಮ), 800ಮೀ (ದ್ವಿತೀಯ), 4*400ಮೀ ರಿಲೇ (ಪ್ರಥಮ), ಸುಜಾತ – 4*400ಮೀ ರಿಲೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಮತ್ತು ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ) ತೆಕ್ಕಟ್ಟೆ ಇದರ ಸಹಯೋಗದೊಂದಿಗೆ ತೆಕ್ಕಟ್ಟೆಯ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ನಡೆದ 2026-27ನೇ ಸಾಲಿನ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಣಿಪಾಲ ಜ್ಞಾನಸುಧಾ ಪದವಿ-ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಯುವ ಸಂಸತ್ – 2026 ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಗರತ್ನ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಆಶ್ರಯದಲ್ಲಿ ಸ್ಪರ್ಧೆ ನಡೆಯಿತು. ನಾಗರತ್ನ ಪ್ರಸಿದ್ಧ ಯಕ್ಷಗಾನ ಕಲಾವಿದ ಆಜ್ರಿ ಉದಯ್ ಕುಮಾರ್ ಶೆಟ್ಟಿ, ಜ್ಯೋತಿ ಶೆಟ್ಟಿ ದಂಪತಿಯ ಪುತ್ರಿ. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಭಿನಂದಿಸಿ, ಮುಂದಿನ ಸ್ಪರ್ಧೆಗೆ ಶುಭಕೋರಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಮಹತ್ವದ ಹಂತ. ಈ ಹಂತದಲ್ಲಿಯೇ ಉತ್ತಮ ಗುಣಗಳನ್ನು ಬೆಳೆಸಿಕೊಂಡು, ಶಿಸ್ತು ಮತ್ತು ಪರಿಶ್ರಮವನ್ನು ಜೀವನದ ಮೌಲ್ಯಗಳನ್ನಾಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಅದಕ್ಕೆ ಸೂಕ್ತ ವೇದಿಕೆಯನ್ನು ಬಳಸಿಕೊಳ್ಳಬೇಕು. ಆಗ ಮಾತ್ರ ಅವರ ಭವಿಷ್ಯ ಉಜ್ವಲವಾಗಿ ರೂಪುಗೊಳ್ಳಲು ಸಾಧ್ಯ,” ಎಂದು ಕ್ರೀಡಾಪಟು, ಉದ್ಯಮಿ ಹಾಗೂ ಹಿರಿಯ ರಾಜಕೀಯ ಮತ್ತು ಸಾಮಾಜಿಕ ನಾಯಕರಾದ ರಾಜೇಶ್ ಕಾವೇರಿ ಹೇಳದರು. ಅವರು ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ವಿಕ್ಟರಿ 2026′ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯರಾದ ಕೃಷ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಕ್ಕಳ ಹಕ್ಕುಗಳ ಸಂಘದ ವತಿಯಿಂದ ಆರೋಗ್ಯಕರ ನಡವಳಿಕೆ ಹಾಗೂ ಎಚ್‌ಐವಿ  ಏಡ್ಸ್ ಕುರಿತು ಜಾಗೃತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಎಚ್‌ಐವಿ ಏಡ್ಸ್ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾಹಿತಿ ನೀಡಿದರು. ಉತ್ತಮ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಮತ್ತು ಸಮರ್ಪಕ ವಿಶ್ರಾಂತಿಯು ಆರೋಗ್ಯಕರ ಜೀವನದ ಪ್ರಮುಖ ಆಧಾರಗಳಾಗಿವೆ. ಇವು ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ತೈರ್ಯ ಹಾಗೂ ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುತ್ತವೆ ಎಂದರು. ಆಧುನಿಕ ಆಹಾರ ಪದ್ಧತಿ ಹಾಗೂ ಒತ್ತಡದ ಜೀವನಶೈಲಿಯಿಂದಾಗಿ ಯುವಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿವೆ. ಎಚ್‌ಐವಿ ಎಡ್ಸ್ನಂತಹ ಸಾಂಕ್ರಾಮಿಕ ಕಾಯಿಲೆಗಳ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆ, ಭಯ ಮತ್ತು ಅಜ್ಞಾನವನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು. ಎಚ್‌ಐವಿ ಸೋಂಕಿತ ವ್ಯಕ್ತಿಗಳೊಂದಿಗೆ ಮಾತನಾಡುವುದು, ಆಹಾರ ಹಂಚಿಕೊಳ್ಳುವುದು ಅಥವಾ ಸಾಮಾನ್ಯ ಸಾಮಾಜಿಕ…

Read More