ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನುಮಾನದ ದೃಷ್ಟಿಯೇ ಅಶಾಂತಿಗೆ ಕಾರಣವಾಗುತ್ತಿದೆ. ನಾವೆಲ್ಲರೂ ಒಂದೇ ಎಂಬ ಭಾವನೆಯಲ್ಲಿ ಒಂದೇ ರಾಗದಿಂದ ಹಾಡುವ ಕಾಲ ಬರಬೇಕು. ಎಲ್ಲರನ್ನೂ ಗೌರವದೃಷ್ಟಿಯಲ್ಲಿ ನೋಡಬೇಕು, ಮಾನವ ಗುಣ ಕಾಣಬೇಕು. ಈ ಎಲ್ಲಾ ಬದಲಾವಣೆಯಿಂದ ರಾಗದ್ವೇಷವಿಲ್ಲದ ಬದುಕು ಸಾಧ್ಯ. ಎಲ್ಲರೂ ವಿಶ್ವ ಮಾನವರಾಗೋಣ ಎಂದು ಕನ್ನಡದ ಖ್ಯಾತ ಸಾಹಿತಿ ವೈದೇಹಿ ಹೇಳಿದರು. ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ವಿವಿಧ ಸಂಘಟನೆ ಆಶ್ರಯದಲ್ಲಿ ಮಂಗಳವಾರ ನಡೆದ ಸೌಹಾರ್ದತೆಗಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾತನಾಡಿ, ಮಹಾತ್ಮ ಗಾಂಧಿ ಕೂಡಾ ಎಲ್ಲರಲ್ಲೂ ಮಾನವೀಯ ಗುಣ ಕಂಡಿದ್ದರಿಂದ ಮಹಾತ್ಮರಾದರು. ಹಂತಕರ ಗುಂಡಿಗೆ ಬಲಿಯಾದ ದಿನ ಮಾನವ ಸರಪಳಿ ಮೂಲಕ ಗಾಂಧಿ ಆಶಯ ಈಡೇರಿಸಬೇಕಾಗಿದೆ ಎಂದು ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್, ಮುಖಂಡರಾದ ವಿನೋದ್ ಕ್ರಾಸ್ತಾ, ಸುರೇಶ್ ಕಲ್ಲಾಗರ, ವಿ.ನರಸಿಂಹ, ಪುರಸಭೆ ಸದಸ್ಯೆ ಕಲಾವತಿ, ಪುರಸಭೆ ಮಾಜಿ ಅಧ್ಯಕ್ಷ ಹೆಚ್.ವಿ.ನರಸಿಂಹ, ಹಿರಿಯ ಕಾಂಗ್ರೆಸಿಗ ಮಾಣಿ ಗೋಪಾಲ, ಕಾಂಗ್ರೆಸ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವುದು ನಿಚ್ಚಳವಾಗಿದ್ದು ಸ್ಪೀಕರ್ ಕೆ. ಬಿ. ಕೋಳಿವಾಡ ಅವರನ್ನು ರಾಣಿಬೆನ್ನೂರಿನಲ್ಲಿ ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಪಕ್ಷಕ್ಕೆ ಮರುಸೇರ್ಪಡೆಗೊಂಡು ಮುಂದಿನ ವಿಧಾನಸಭಾ ಚುವಾವಣೆಯಲ್ಲಿ ಮತ್ತೆ ಸ್ವರ್ಧಿಸುವ ಆಕಾಂಕ್ಷೆ ಹೊಂದಿದ್ದ ಶಾಸಕ ಶ್ರೀನಿವಾಸ ಶೆಟ್ಟಿ ಅವರು ಪಕ್ಷಾಂತರ ನಿಷೇಧ ಕಾಯ್ದೆಯಿಂದಾಗಿ ಬಿಜೆಪಿ ಸೇರ್ಪಡೆಯಿಂದ ಈ ತನಕ ದೂರ ಉಳಿಸಿದ್ದರು. ಈ ಚುನಾವಣೆ ಸಮೀಪಿಸಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ವರ್ಷದ ಹಿಂದೆ ಬಿಜೆಪಿ ಸಭೆಯಲ್ಲಿ ಸಭಿಕರ ಸಾಲಿನಲ್ಲಿ ಬಹಿರಂಗವಾಗಿ ಕಾಣಿಸಿಕೊಂಡಿದ್ದ ಪಕ್ಷೇತರ ಶಾಸಕ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಬಿಜೆಪಿಗೆ ಮರಳುವ ಸೂಚನೆ ನೀಡಿದ್ದರಾದರೂ ತಾಂತ್ರಿಕ ಕಾರಣಗಳಿಂದಾಗಿ ಸುಮ್ಮನುಳಿದಿದ್ದರು. ಬಿಜೆಪಿ ಪರಿವರ್ತನಾ ಯಾತ್ರೆಯ ವೇಳೆ ಹಾಲಾಡಿ ಬಣ ಹಾಗೂ ಮೂಲ ಬಿಜೆಪಿಗರ ಬಣದ ನಡುವೆ ಜಟಾಪಟಿ ಉಂಟಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀನಿಧಿ ಟ್ರಸ್ಟ್ ಕೆರ್ಗಾಲು, ಕರ್ನಾಟಕ ಕಾರ್ಮಿಕ ವೇದಿಕೆ ಉಪ್ಪುಂದ, ಅಂಜಲಿ ಆಸ್ಪತ್ರೆ ಬಂದೂರು ಇವರ ಸಹಯೋಗದೊಂದಿಗೆ ಉಪ್ಪುಂದ ಸಪಪೂ ಕಾಲೇಜಿನಲ್ಲಿ ನಡೆದ ಉಚಿತ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ ಮತ್ತು ಸಂಪೂರ್ಣ ಉಚಿತ ಕಣ್ಣು ಮತ್ತು ದಂತ ಹಾಗೂ ಆರೋಗ್ಯ ತಪಾಸಣೆ ಶಿಬಿರ ಜರುಗಿತು. ಶಿಬಿರವನ್ನು ಉದ್ಘಾಟಿಸಿದ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ ಪ್ರತಿಯೊಂದು ಜೀವಗಳು ಅಮೂಲ್ಯವಾಗಿದ್ದು, ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ ಅತೀ ಮುಖ್ಯವಾಗಿರುತ್ತದೆ. ತತ್ಕ್ಷಣ ಅಂಬ್ಯುಲೆನ್ಸ್ ಸೇವೆ ಲಭ್ಯವಾದರೆ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಲು ಸಾಧ್ಯವಾಗುತ್ತದೆ. ನಾನು ಮತ್ತು ನನ್ನ ಸಂಸಾರ ಎಂಬ ತತ್ವವನ್ನು ಬಿಟ್ಟು ಪರರ ಸುಖ, ಕಷ್ಟಗಳಿಗೂ ಸ್ಪಂದಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು. ತಾನು ದುಡಿದ ಸ್ವಲ್ಪ ಭಾಗವನ್ನು ಇಂತಹ ಸಾಮಾಜಿಕ ಸೇವೆಗೆ ಮಿನಿಯೋಗಿಸಿದಾಗ ಮನುಷ್ಯ ತನ್ನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ನಿಸ್ವಾರ್ಥ ಹಾಗೂ ಮಾನವೀಯತೆಯಿಂದ ಇಂತಹ ಮಹತ್ಕಾರ್ಯಗಳನ್ನು ಮಾಡುವುದರಿಂದ ದೇವರು ಕೂಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ಎಸ್ಜಿಎಸ್ ಇಂಟರ್ನ್ಯಾಶನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಸಂಶೋಧನಾ ಕೇಂದ್ರವು ಮಲೇಷ್ಯಾದ ಕೌಲಾಲಂಪುರ್ನಲ್ಲಿ ಆಯೋಜಿಸಿದ್ದ ೬ನೇ ಅಂತರರಾಷ್ಟ್ರೀಯ ಯೋಗೋತ್ಸವ ಸ್ಪರ್ಧೆಯಲ್ಲಿ ಭಾರತದ ತಂಡವನ್ನು ಪ್ರತಿನಿಧಿಸಿದ್ದ ಮರವಂತೆಯ ಯೋಗಪಟು ಕುಶ ಪೂಜಾರಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಬಾಲ್ಯದಿಂದಲೇ ಯೋಗ ತರಬೇತಿ ಪಡೆದು ಶಾಲೆ, ಕಾಲೇಜುಗಳಲ್ಲಿ ಕಲಿಯುತ್ತಿರುವಾಗ ನಡೆದ ಹಲವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಶಸ್ತಿಗಳನ್ನು ಪಡೆದ ಸಾಧನೆ ಕುಶ ಅವರದು. ಬಿ. ಕಾಂ ಪದವಿ ಮುಗಿಸಿರುವ ಅವರು ಪ್ರಸಕ್ತ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಯೋಗವಿಜ್ಞಾನದಲ್ಲಿ ಎಂ.ಎಸ್ಸಿ ಪದವಿ ಅಧ್ಯಯನ ನಡೆಸುತ್ತಿದ್ದಾರೆ. ಕುಶ ಪೂಜಾರಿ ಮರವಂತೆ ಗುಳದಾಳಿಬೆಟ್ಟು ರಾಮಚಂದ್ರ ಪೂಜಾರಿ, ಲೀಲಾವತಿ ಪೂಜಾರಿ ದಂಪತಿಯ Also read: ► ಅಂತರರಾಷ್ಟ್ರೀಯ ಯೋಗೋತ್ಸವ ಸ್ಪರ್ಧೆಗೆ ಕುಶ ಪೂಜಾರಿ – http://kundapraa.com/?p=27277
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯಲ್ಲಿ ದಲಿತರಿಗಾಗಿ ಮೀಸಲಿರಿಸಿರುವ ಸುಮಾರು 800 ಏಕ್ರೆ ಡಿಸಿ ಮನ್ನಾ ಭೂಮಿಯಿದ್ದು, ಯಾವ ಪ್ರಮಾಣದಲ್ಲಿ ಯಾವ ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎನ್ನುವುದರ ಬಗ್ಗೆ ಸರ್ಕಾರ ಮಾನದಂಡದ ಅಗತ್ಯವಿದೆ. ಈ ಬಗ್ಗೆ ಶೀಘ್ರ ಹೊಸನೀತಿ ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ರಾಜ್ಯದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಭೂಹಿತ ಶೋಷಿತ ಸಮುದಾಯಗಳಿಗೆ ಡಿಸಿ ಮನ್ನಾ ಭೂಮಿ ಹಂಚಿಕೆ ಆಗ್ರಹಿಸಿ ನಡೆದ ಜನಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಡಿ.ಸಿ. ಮನ್ನಾ ಭೂಮಿಯಲ್ಲಿ ಬಹುತೇಕ ಭೂಮಿ ಹಡಿಲು ಬಿದ್ದಿದೆ, ಇದನ್ನು ಶೀಘ್ರ ದಲಿತರಿಗೆ ಹಂಚಿದ್ದರೆ ಅವರು ಅದನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಿ ಸ್ವಾವಲಂಬಿ ಜೀವನ ನಡೆಸುವಂತಾಗುತ್ತದೆ. ದಲಿತರು ತಮ್ಮಲ್ಲಿರುವ ಕೀಳರಿಮೆ ಬದಿಗೊತ್ತಿಗೆ ನಾನಾ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಆ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಕೋಟಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೌಖಿಕ ಪರಂಪರೆಯಲ್ಲಿ ಹುಟ್ಟಿಕೊಂಡ ಜಾನಪದ, ಸಂಸ್ಕೃತಿಯ ಭಾಗವಾಗಿ ಬದುಕಿನೊಂದಿಗೆ ಬೆಸೆದುಕೊಂಡಿದೆ. ಕರ್ನಾಟಕದ ಕರಾವಳಿಯಲ್ಲಿ ದೈವಾರಾಧನೆಯಂತಹ ಜಾನಪದ ಆಚರಣೆಗಳು ನಂಬಿಕೆ ಹಾಗೂ ಭಯದ ತಳಹದಿಯಲ್ಲಿ ಇಂದಿಗೂ ಉಳಿದುಕೊಂಡಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಇದರ ಉಡುಪಿ ಜಿಲ್ಲಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಇಲ್ಲಿನ ಉಪ್ಪುಂದದ ಶಂಕರ ಕಲಾಮಂದಿರದ ಸಮೃದ್ಧ ಸಭಾಭವನದಲ್ಲಿ ಸುವಿಚಾರ ಬಳಗ, ಕುಂದ ಅಧ್ಯಯನ ಕೇಂದ್ರ ಉಪ್ಪುಂದ ನೇತೃತ್ವದಲ್ಲಿ ಆಯೋಜಿಸಲಾಗಿದ ತಿಂಗಳ ಕಾರ್ಯಕ್ರಮದಲ್ಲಿ ’ಕರಾವಳಿ ಜಾನಪದದ ವಿಶಿಷ್ಟತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಜಾನಪದರಲ್ಲಿ ಭಾಷೆ, ಆಚರಣೆ ಹಾಗೂ ಸಂಪ್ರದಾಯದ ವಿಶಿಷ್ಟತೆಯನ್ನು ಕಾಣುತ್ತೇವೆ. ಕಂಬಳ, ಹೂವಿನಕೋಲು, ಪಾಣರಾಟ ಮುಂತಾದ ಸಾಂಪ್ರದಾಯಿಕ ಕಲೆಗಳು ಅಳಿವಿನಂಚಿನಲ್ಲಿದ್ದರೇ, ಯಕ್ಷಗಾನದಲ್ಲಿ ಹೊಸ ಪ್ರಯೋಗಗಳ ನಡೆಯುತ್ತಿದೆ. ಅಳಿನಂಚಿನಲ್ಲಿರುವ ಕಲೆಗಳನ್ನು ಯುವ ತಲೆಮಾರಿಗೆ ಪರಿಚಯಿಸಿ ಮುಂದುವರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಸುವಿಚಾರ ಬಳಗ ಅಧ್ಯಕ್ಷ ಬಿ. ರಾಮಕೃಷ್ಣ ಶೇರೆಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸತತ ಪರಿಶ್ರಮದಿಂದ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಮಾಜ ಸೇವೆ, ದೇಶಭಕ್ತಿಯ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವ ಅಗತ್ಯವಿದೆ. ಅಂಕಗಳಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿನ ಪ್ರಾವೀಣ್ಯತೆಯ ತೋರಿದಂತೆ ತಾವು ಬೆಳೆದ ಸಮಾಜಕ್ಕೆ ಏನಾದರೂ ಸೇವೆಯನ್ನು ಸಲ್ಲಿಸಬೇಕೆಂಬ ಬದ್ಧತೆ ಇದ್ದರೆ ಶಿಕ್ಷಣದ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ಟಿ. ನಾರಾಯಣ ಹೆಗ್ಡೆ ಹೇಳಿದರು. ಅವರು ಶುಕ್ರವಾರ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಿರ್ಮಿಸಲಾದ ನೂತನ ಧ್ವಜಸ್ಥಂಭವನ್ನು ಉದ್ಘಾಟಿಸಿ, ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಬಳಿಕ ಮಾತನಾಡಿದರು. ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿಯೇ ತಿದ್ದಿ ಉತ್ತಮ ಶಿಕ್ಷಣವನ್ನು ನೀಡಲು ಶಿಕ್ಷಕರ ಶ್ರಮ ಶ್ಲಾಘನೀಯವಾದ್ದು. ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರೊಂದಿಗೆ, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳಿಗೂ ಇದೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟರಮಣ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಸದಸ್ಯ ಶಂಕರ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಶೇ.೧೦೦ರಷ್ಟು ಕೃಷಿಸಾಲವನ್ನು ಮರುಪಾವತಿ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ. ಜನರ ಅಗತ್ಯಕ್ಕೆ ತಕ್ಕಂತೆ ಹತ್ತಾರು ಸಹಕಾರಿ ಸಂಸ್ಥೆಗಳು ಅವಿಭಜಿತ ಜಿಲ್ಲೆಯಲ್ಲಿ ಹುಟ್ಟಿಕೊಳ್ಳುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಸಹಕಾರಿ ರಂಗದಲ್ಲೂ ಪೈಪೋಟಿ ಇದ್ದಾಗಲೇ ಉತ್ತಮವಾಗಿ ಜನಸೇವೆ ಮಾಡಲು ಸಾಧ್ಯವಾಗಲಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ಇಲ್ಲಿನ ಸಾಯಿ ಸೆಂಟರ್ನಲ್ಲಿ ಗುರುವಾರ ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕುಂದಾಪುರ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಬಳಿಕ ಮಾತನಾಡಿದರು. ಬ್ಯಾಂಕಿಂಗ್ ಕ್ಷೇತ್ರದ ನಿಯಮಗಳು ವಾಣಿಜ್ಯ ಬ್ಯಾಂಕುಗಳು ಹಾಗೂ ಸಹಕಾರಿ ಸಂಸ್ಥೆಗಳಿಗೆ ಒಂದೇಯಾಗಿದ್ದರೂ, ಬ್ಯಾಂಕುಗಳಿಗೆ ಸಮನಾಗಿ ಸಹಕಾರಿ ಸಂಸ್ಥೆಗಳು ಬೆಳೆದಿದ್ದರೂ ಕೇಂದ್ರ ಸರಕಾರ ಸಹಕಾರಿ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿದೆ. ನಬಾರ್ಡ್ನ ಹಣ ಸಹಕಾರಿ ಸಂಸ್ಥೆಗಳಿಗೆ ಶೇ.೪೦ರಷ್ಟು ಮಾತ್ರ ದೊರೆಯುತ್ತಿದೆ. ಆದರೆ ಶೇ.೬೦ರಷ್ಟನ್ನು ಸಹಕಾರಿ ಸಂಸ್ಥೆಯ ಸ್ವಂತ ಠೇವಣಿಯನ್ನು ಹೊಂದಿ ಸಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಪ್ರತಿ ತಿಂಗಳು ನಡೆಯುತ್ತಿರುವ ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮವು ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕ ಮಂಗೇಶ ಶೆಣೈ ಯಳಜಿತ್ ಮಾತನಾಡಿ ಜೀವನದಲ್ಲಿ ತ್ಯಾಗದ ಮೂಲಕ ಆಧ್ಯಾತ್ಮದ ತುತ್ತತುದಿಯನ್ನು ತಲುಪಲು ಸಾಧ್ಯವಿದೆ. ಶ್ರೀಮದ್ ಭಗವದ್ಗೀತೆಯ ೯ನೇ ಅಧ್ಯಾಯದಲ್ಲಿ ಶ್ರೀಕೃಷ್ಣ ಪರಮಾತ್ಮನು ವಿವರಿಸಿದ ರಹಸ್ಯವಾದ ವಿದ್ಯೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಎಲ್ಲಾ ವಿದ್ಯೆಗಳ ರಾಜನಂತಿರುವ ಈ ವಿದ್ಯೆಯನ್ನು ಅರಿಯುವುದರಿಂದ ಎಲ್ಲಾ ವಿದ್ಯೆಗಳನ್ನು ಕಲಿಯಲು ಸಾಧ್ಯ. ನಿಸ್ವಾರ್ಥವಾಗಿ ನಮ್ಮ ಕರ್ತವ್ಯವನ್ನು ಮಾಡಿ ಅದನ್ನು ಪರಮಾತ್ಮನಿಗೆ ಶ್ರದ್ಧೆಯಿಂದ ಅರ್ಪಿಸಬೇಕು ಎಂದರು. ಭಗವದ್ಗೀತೆಯ ೧೦ನೇ ಅಧ್ಯಾಯದ ವಿಭೂತಿ ಯೋಗ ಪಠಣ ನಡೆಯಿತು. ವಿದ್ಯಾರ್ಥಿಗಳಾದ ಬಿ.ಪ್ರಾರ್ಥನಾ ಪೈ, ಎನ್.ಚೇತನಾ ನಾಯಕ್ ಮತ್ತು ಅಗ್ನೇಶ್ ನಾಯಕ್ ಅವರು ಭಗವದ್ಗೀತೆಯ ೯ನೇ ಅಧ್ಯಾಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಐದು ವರ್ಷಗಳಿಂದ ಚಿತ್ತೂರು ಪರಿಸರದಲ್ಲಿ ಜನಪರ ಕಾರ್ಯ ಆಯೋಜಿಸುತ್ತ ಬಂದಿರುವ ಪ್ರೇರಣಾ ಯುವ ವೇದಿಕೆ (ರಿ) ನೈಕಂಬ್ಳಿ ಚಿತ್ತೂರು ಇದರ ಐದನೇ ವಾರ್ಷಿಕೋತ್ಸವ ಯಶಸ್ವಿಯಾಯಿತು. ಪ್ರೇರಣಾ ಈ ಭಾಗದಲ್ಲಿ ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿ ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ತಾಲೂಕು ಪಂಚಾಯತ್ ಸದಸ್ಯರಾದ ಉದಯ ಜಿ ಪೂಜಾರಿ ಶುಭ ಹಾರೈಸಿದರು. ಅಶೋಕ ಶೆಟ್ಟಿ ಕೊಡ್ಲಾಡಿ ದಿಕ್ಸೂಚಿ ಭಾಷಣದಲ್ಲಿ ಮಾಡಿದರು. ವಂಡ್ಸೆ ಹೋಬಳಿ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಆಯೋಜಿಸಿದ ಪ್ರೇರಣಾ ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯ ವಿಜೇತರಿಗೆ ಪ್ರಶಸ್ತಿ ಮೊತ್ತ ಮತ್ತು ಫಲಕ ವಿತರಿಸಲಾಯಿತು . ಪ್ರೇರಣಾ ಹಿರಿಯ ನಾಗರಿಕ ಸನ್ಮಾನ ಸುಕ್ರ ಅವರಿಗೆ, ಗುರು ಸಮ್ಮಾನ ಚಂದ್ರ ಶೆಟ್ಟಿ ಅವರಿಗೆ, ಸಾಧಕ ಸಮ್ಮಾನ ವಿಶ್ವನಾಥ ಗಾಣಿಗ ಬಾಳಿಕೆರೆ ಇವರಿಗೆ ಮಾಡಲಾಯಿತು. ವೇದಿಕೆಯಲ್ಲಿ ಚಿತ್ತೂರು ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ , ಡಾ. ಅತುಲ್ ಕುಮಾರ ಶೆಟ್ಟಿ, ವೇದಿಕೆಯ ಗೌರವ ಅಧ್ಯಕರಾಮಚಂದ್ರ…
