ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವರಮಹಾಲಕ್ಷ್ಮೀ ಹಬ್ಬದ ಪ್ರಯಕ್ತ ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ವ್ರತ ಜರುಗಿತು. ಕುಂದಾಪುರ, ಗಂಗೊಳ್ಳಿ, ಶಂಕರನಾರಾಯಣ, ಸಿದ್ಧಾಪುರ, ಉಪ್ಪುಂದ, ಬೈಂದೂರು, ಶಿರೂರು ಮುಂತಾದೆಡೆ ವಿವಿಧ ದೇವಸ್ಥಾನಗಳಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಜರುಗಿದವು. ಬೆಳಿಗ್ಗೆ ದೇವತಾ ಪ್ರಾರ್ಥನೆ, ಕಲಶ ಪ್ರತಿಷ್ಠಾಪನೆ, ಕಲ್ಪೋಕ್ತ ಪೂಜೆ, ಕಥಾಶ್ರವಣ, ಮಂಗಳಾರತಿ, ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗಂಗೊಳ್ಳಿಯ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ವತಿಯಿಂದ ೨೬ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತವು ಭಕ್ತಿ ಶ್ರದ್ಧೆಯಿಂದ ಶುಕ್ರವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ವಸಂತ ಭಟ್ ಮತ್ತು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಜರಗಿತು. ಗಂಗೊಳ್ಳಿಯ ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಂಕಾಳಿ ಕಲ್ಲುಕುಟ್ಟಿಗ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೇಳದ ಕಲಾವಿದರ ಜೊತೆ ಅತಿಥಿ ಕಲಾವಿದರು ಆಗಮಿಸಿ ಪೌರಾಣಿಕ ಯಕ್ಷ ರಸದೌತಣ ನೀಡಲು ಸಜ್ಜಾಗಿದ್ದಾರೆ. ವಿಶೇಷ ಆಯೋಜನೆಯ ಪೌರಾಣಿಕ ಆಖ್ಯಾನಗಳನ್ನು ಕಣ್ತುಂಬಿಕೊಳ್ಳಲು ಸಾಲಿಗ್ರಾಮ ಮೇಳದ ಈ ಸುತ್ತಿನ ಪ್ರಪ್ರಥಮ ಆಟ ಆಗಸ್ಟ್ 13 ಶನಿವಾರ ನಡೆಯಲಿದೆ. “ಕೃಷ್ಣಾರ್ಜುನ – ಕಾರ್ತವೀರ್ಯ – ಕೃಷ್ಣ ಪರಂಧಾಮ” ಅಪ್ಪಟ್ಟ ಪೌರಾಣಿಕ ಪ್ರಿಯರು ಅಪೇಕ್ಷೆಯ ಮೆರೆಗೆ ಆಯೋಜಿಸಲಾಗಿದೆ . ಭಾಗವತಿಕೆಯಲ್ಲಿ ಮಯ್ಯ ಹಿಲ್ಲೂರು, ಅಂಕೋಲ, ಜೊತೆ ಹೊಸಂಗಡಿ ರವೀಂದ್ರ ಶೆಟ್ಟಿ ರಂಜಿಸಲಿದ್ದಾರೆ .ಹೊಸ ಹುರುಪಿನ ಸಾಲಿಗ್ರಾಮ ಮೇಳದ ಜೊತೆ ಪ್ರೀತಿಯಿಂದ ಗೋಡೆ ನಾರಾಯಣ ಹೆಗಡೆ, ಜಲವಳ್ಳಿ ವಿಧ್ಯಾಧರ್ ರಾವ್, ಸುಬ್ರಮಣ್ಯ ಚಿಟ್ಟಾಣಿ ,ಕೋಡಿ ವಿಶ್ವನಾಥ್ ಗಾಣಿಗರು ಭಾಗವಹಿಸಲಿದ್ದಾರೆ. ಎಪ್ಪತ್ತರ ಚಿರಯುವಕ ಯಕ್ಷರಂಗದ ಕೌರವ ಖ್ಯಾತಿಯ ಗೋಡೆ ನಾರಾಯಣ ಹೆಗಡೆ ಅರ್ಜುನ ಸುಬ್ರಮಣ್ಯ ಚಿಟ್ಟಾಣಿಯವರ ಕೃಷ್ಣ ಮತ್ತು ಜಲವಳ್ಳಿಯವರ ರಾವಣ ಪ್ರಸನ್ನ ಶೆಟ್ಟಿಗಾರ್ ಪ್ರೇಕ್ಷಕರಿಗೆ ಕುತೂಹಲ ಹೆಚ್ಚಿಸಿದೆ . ಅಪರೂಪದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರಾದ ಅಂಪಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯುತ್ ತಂತಿ ಅಳವಡಿಸುವ ಸಲುವಾಗಿ ವಿದ್ಯುತ್ ಕಡಿತಗೊಳಿಸುವ ಟ್ರಾನ್ಫಾರ್ಮ್ರ್ ಕಂಬ ಏರಿದ್ದ ವ್ಯಕ್ತಿಗೆ ವಿದ್ಯುತ್ ತಗಲಿ ಮೃತಪಟ್ಟ ಘಟನೆ ಕೋಡಿ ರಾಮಮಂದಿರದ ಬಳಿ ನಡೆದಿದೆ. ತಮಿಳುನಾಡು ಧರ್ಮಪುರಿಯ ಮೂಲದ ನರಸಿಂಹ(22) ಮೃತ ದುರ್ದೈವಿ. ಉಡುಪಿಯಲ್ಲಿ ತಂದೆ ಸಂಪತ್ ಹಾಗೂ ಸಹೋದರ ಸರ್ವಣ್ ಅವರೊಂದಿಗೆ ಗುತ್ತಿಗೆ ಆಧಾರದಲ್ಲಿ ಮೆಸ್ಕಾಂ ಇಲಾಖೆಯ ಕೆಲಸಗಳನ್ನು ಮಾಡಿಕೊಂಡಿದ್ದ ನರಸಿಂಹ, ಕೆಲವು ದಿನಗಳಿಂದ ಕೋಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗುರುವಾರ ಮಧ್ಯಾಹ್ನ ಕೋಡಿಯಲ್ಲಿ ವಿದ್ಯುತ್ ಲೈನ್ ಬದಲಿಸಲು ಸಹೋದನೊಂದಿಗೆ ತೆರಳಿದ್ದಾಗ. ಅಲ್ಲಿ ಟ್ರಾನ್ಫಾರ್ಮ್ರ್ನಿಂದ ವಿದ್ಯುತ್ ಕಡಿತಗೊಳಿಸುವ ಸಲುವಾಗಿ ನರಸಿಂಹ ಮೇಲೆರಿದಾಗ ವಿದ್ಯುತ್ ತಗಲಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಒಂದು ವರ್ಷದ ಪುತ್ರನನ್ನು ಅಗಲಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹಾಲಾಡಿ ಪೇಟೆಯ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಹಳ್ನಾಡಿಯ ಚಂದ್ರ ಮಡಿವಾಳ (41) ಮೃತ ದುರ್ದೈವಿ. ಪತ್ನಿಯ ಮನೆಯಿಂದ ಹಳ್ನಾಡಿಗೆ ತೆರಳುತ್ತಿದ್ದ ವೇಳೆ ಹಾಲಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಚಂದ್ರ ಮಡಿವಾಳ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜೀವನದಲ್ಲಿ ಮಾಡಿದ ಉತ್ತಮ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತದೆ. ವಿದ್ಯಾಭ್ಯಾಸಕ್ಕೆ ನೆರವು ನೀಡುವುದರಿಂದ ಅನೇಕ ಪ್ರತಿಭಾವಂತ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ. ನಮ್ಮ ದೇಶದಲ್ಲಿ ಎಲ್ಲಾ ರಂಗಗಳಲ್ಲಿಯೂ ವಿಪುಲ ಉದ್ಯೋಗಾವಕಾಶಗಳಿದ್ದು, ಯುವಶಕ್ತಿಗಳಿಂದ ೨೦೨೦ರಲ್ಲಿ ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಕುಂದಾಪುರ ಪುರಸಭೆಯ ಉಪಾಧ್ಯಕ್ಷ ರಾಜೇಶ ಕಾವೇರಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ಗಂಗೊಳ್ಳಿಯ ಪಂಚಗಂಗಾವಳಿ ಬಳಗ ಪ್ರಾಯೋಜಿತ ಪಂಚಗಂಗಾವಳಿ ವಿದ್ಯಾನಿಧಿ ಯೋಜನೆಯ ೧೨ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು. ಬಸ್ರೂರು ಶ್ರೀ ಶಾರದಾ ಕಾಲೇಜಿನ ಉಪನ್ಯಾಸಕಿ ಸುಮತಿ ಶ್ಯಾನುಭಾಗ್ ಮಾತನಾಡಿ ಇಂದಿನ ದಿನಗಳಲ್ಲಿ ಶಿಕ್ಷಣ ಎನ್ನುವುದು ಬುದ್ಧಿಗೆ ಮಾತ್ರ ನೀಡುವ ಶಿಕ್ಷಣವಾಗಿದೆ. ಇಂತಹ ಶಿಕ್ಷಣದಿಂದ ಮಕ್ಕಳ ಬೌದ್ಧಿಕ ಹಾಗೂ ಭಾವನಾತ್ಮಕ ಬೆಳವಣಿಗೆ ಸಾಧ್ಯವಿಲ್ಲ. ಹೀಗಾಗಿ ಮಕ್ಕಳಿಗೆ ಹೃದಯದ ಶಿಕ್ಷಣದ ಅವಶ್ಯಕತೆ ಇದೆ. ಮನುಷ್ಯನ ಹೃದಯ, ಮನಸ್ಸುಗಳನ್ನು ತಲುಪುವ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ರಕ್ತದಾನ ಮಾಡಿದರೆ ಜೀವಕ್ಕೆ ಹಾನಿಗಾಗಬಹುದೆಂಬ ಭಯದ ವಾತವರಣ ಮೊದಲು ಇದ್ದಿತ್ತು ಆದರೆ ಮೊಗವೀರ ಯುವ ಸಂಘಟನೆ ಸತತ ರಕ್ತದಾನ ಕಾರ್ಯಕ್ರಮಗಳ ಮೂಲಕ ಅದನ್ನು ಹೋಗಲಾಡಿಸಿವೆ ಇವರ ಕಾರ್ಯ ಶ್ಲಾಘನೀಯ. ಎಂದು ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದ್ದಾರೆ. ಮೋಗವೀರ ಯುವ ಸಂಘ, ಮಹಿಳಾ ಘಟಕ ಕೋಟ ಹಾಗೂ ಡಾ.ಜಿ.ಶಂಕರ್ ಫ್ಯಾಮೀಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಪೌಂಡೇಶನ್ ಮಣೂರು ಪಡುಕರೆ ,ಜನತಾ ಫಿಶ್ಮೀಲ್ ಎಂಡ್ ಆಯಿಲ್ ಪ್ರೋಡಕ್ಟ್ ಕೋಟ,ಕೆ.ಎಂ.ಸಿ ಮಣಿಪಾಲ ಮತ್ತು ಉಡುಪಿ ಜಿಲ್ಲಾಡಳಿತಗಳ ಸಯುಂಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಸೋಮವಾರ ಸರಕಾರಿ ಸಯುಂಕ್ತ ಪ್ರೌಡ ಶಾಲೆ ಮಣೂರು ಪಡುಕರೆಯಲ್ಲಿಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ರಕ್ತದಾನ ಮಾಡುವುದರಿಂದ ನಮ್ಮ ದೇಹದ ಚೈತನ್ಯ ಪಡೆಯುದರೊಂದಿಗೆ ಇನ್ನೂಬ್ಬರ ಜೀವ ಉಳಿಸಿದಂತೆ ಆಗುತ್ತದೆ. ರಕ್ತದಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ಥಳೀಯ ಸಂಘ ಸಂಸ್ಥೆಗಳು ಸಮಾಜ ಮುಖಿ ಕಾರ್ಯದಲ್ಲಿ ಇನ್ನಷ್ಟು ತೋಡಗಿಕೊಳ್ಳಬೇಕಿದೆ ಆಗ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆ, ಗುರುಗಳು ಮತ್ತು ಅಧ್ಯಯನ ಮಾಡುತ್ತಿರುವ ವಿಷಯದ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಹೊಂದಿರಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಸದಾಶಿವ ರಾವ್ ಹೇಳಿದರು. ಅವರು ಕಾಲೇಜಿನ ಸಭಾಂಗಣದಲ್ಲಿ ಶೈಕ್ಷಣಿಕ ವರ್ಷ 2016-17ನೇ ಸಾಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಮತ್ತು ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿಸ್ಮಿತಾ ಪರಿಚಯಿಸಿದರು, ಪ್ರಗತಿ ಸ್ವಾಗತಿಸಿದರು, ತನುಷ್ ಡಿ. ರಾವ್ ವಂದಿಸಿದರು, ಶ್ರೀವಿಭಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ವಿವಿಧ ಇಲಾಖೆಗಳ ನೂರು ಸೌಲಭ್ಯ ಒದಗಿಸುವ ವ್ಯವಸ್ಥೆಯಿರುವ ಈ ಯೋಜನೆಯನ್ನು ದೇಶದಲ್ಲಿಯೇ ಪ್ರಥಮವಾಗಿ ರಾಜ್ಯದಲ್ಲಿ ಬಾಪುಜಿ ಸೇವಾ ಕೇಂದ್ರ ಆರಂಭಿಸಲಾಗಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಉಪ್ಪುಂದ ಗ್ರಾಪಂ ಸಭಾಭವನದಲ್ಲಿ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿ ತಾಲೂಕು ಕಚೇರಿಗಳಲ್ಲಿ ಸರತಿ ಸಾಲು ಕಡಿಮೆ ಮಾಡಲು ಜನಸಾಮಾನ್ಯರ ಸಲಹೆಯಂತೆ ಫಲಾನುಭವಿಗಳ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸಂಪುಟ ಸಭೆಯಲ್ಲಿ ಪಂಚಾಯತ್ ರಾಜ್ ತಿದ್ದುಪಡಿ ಮಾಡುವುದರ ಮೂಲಕ ಈ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ದೂರದವರಿಗೆ ತಾಲೂಕು ಕೇಂದ್ರದಲ್ಲಿರುವ ತಹಶೀಲ್ದಾರರ ಕಚೇರಿ ಅಲೆದಾಟ ತಪ್ಪಿದಂತಾಗುತ್ತದೆ. ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ ಎಂದರು. ಗ್ರಾಪಂ ಅಧ್ಯಕ್ಷೆ ದುರ್ಗಮ್ಮ ಅಧ್ಯಕ್ಷತೆವಹಿಸಿದ್ದರು. ಉಪಾಧ್ಯಕ್ಷೆ ಸಿಂಗಾರಿ ಶೆಟ್ಟಿ, ಹಾಗೂ ಸದಸ್ಯರು, ಜಿಪಂ ಸದಸ್ಯರಾದ ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ತಾಪಂ ಸದಸ್ಯೆ ಪ್ರಮಿಳಾ ದೇವಾಡಿಗ, ತಾಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕಾರ್ಕಳದ ಕ್ರಿಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರಿಯಾ ಜಿ.ಪೈ ಮತ್ತು ಅನನ್ಯಾ ಡಿ.ಜಿ. ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟಾ ಮತ್ತು ತಂಡದ ವ್ಯವಸ್ಥಾಪಕಿ ಗೀತಾ ಅವರೊಂದಿಗೆ ವಿದ್ಯಾರ್ಥಿನಿಯರು.
ಸಾಧನೆಯ ಹಾದಿಯಲ್ಲಿ ಯುವ ಉದ್ಯಮಿಗಳು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಟೆಲ್ ಹಾಗೂ ಹಾಸ್ಪಿಟಾಲಿಟಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಗುಣಮಟ್ಟ ಸೇವೆ ಹಾಗೂ ಉತ್ಕೃಷ್ಟ ಸೌಲಭ್ಯವನ್ನು ಪರಿಗಣಿಸಿ ಪ್ರಶಸ್ತಿಗಳು ಅರಸಿ ಬಂದಿವೆ. ದೆಹಲಿಯ ಡಿಡಿಪಿ ಸಂಸ್ಥೆಯು ಹೋಟೆಲ್ ವಿಭಾಗದಲ್ಲಿ ಪ್ರತಿ ವರ್ಷ ನೀಡುತ್ತಿರುವ ದಕ್ಷಿಣ ಹಾಗೂ ಪಶ್ಚಿಮ ಭಾರತದ ಪ್ರತಿಷ್ಟಿತ ‘ಇಂಡಿಯಾ ಹಾಸ್ಪಿಟಾಲಿಟಿ ಅವಾರ್ಡ್-2016ರ ಬೆಸ್ಟ್ ರೆಸಾರ್ಟ್ & ಸ್ಪಾ’ ಪ್ರಶಸ್ತಿಗೆ ರಾಜ್ಯದ ಪ್ರತಿಷ್ಟಿತ ಸ್ಟಾರ್ ಹೋಟೆಲ್ಗಳಲ್ಲಿ ಒಂದಾದ ಕೋಟೇಶ್ವರದ ಯುವ ಮೆರಿಡಿಯನ್ ಬೇ ರೆಸಾರ್ಟ್ & ಸ್ಪಾ ಆಯ್ಕೆಗೊಂಡಿದೆ. ಇದರ ಜೊತೆ ಜೊತೆಗೆ ಯುವ ಮೆರಿಡಿಯನ್ ಸಂಸ್ಥೆಯು ಅಂತಾರಾಷ್ಟ್ರೀಯ ಆಹಾರ ಗುಣಮಟ್ಟ ಹೊಂದಿರುವುದಕ್ಕಾಗಿ ಐಎಸ್ಓ 22000 ಪ್ರಮಾಣ ಪತ್ರ ಲಭಿಸಿದೆ. ಕಳೆದ ಮೂರೂವರೆ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಯುವ ಮೆರಿಡಿಯನ್ಗೆ ಕಳೆದ ಒಂದೂವರೆ ವರ್ಷಗಳಿಂದ ನಿರಂತರ ಭೇಟಿ ನೀಡಿ ಪರಿಶೀಲಿಸಿದ ಐಎಸ್ಓ ತಂಡ, ಈ ಅಂತರ್ರಾಷ್ಟ್ರೀಯ ಪ್ರಮಾಣ ಪತ್ರ ಐಎಸ್ಓ 22000 : 2005…
