Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರ ವಿಫುಲ ಅವಕಾಶಗಳಿವೆ. ಪಾಠದ ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆಯಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚು ಸಹಾಯಕವಾಗುತ್ತದೆ ಎಂದು ಪತ್ರಕರ್ತ ಬಿ. ರಾಘವೇಂದ್ರ ಪೈ ಹೇಳಿದರು. ಅರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿ ಮಾತನಾಡಿದರು. ಉದ್ಯಮಿ ಸುರೇಶ ಪೂಜಾರಿ ಧ್ವಜಾರೋಹಣಗೈದು ಶುಭ ಹಾರೈಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಸದಸ್ಯ ಅಶೋಕ ಪೂಜಾರಿ, ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ದೈ.ಶಿ.ಶಿಕ್ಷಕಿ ಪವಿತ್ರ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಉಷಾ ಕುಮಾರಿ ಸ್ವಾಗತಿಸಿ, ಸಹಶಿಕ್ಷಕಿ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯಾದ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಪಡೆದುಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಮತ್ತು ಪಠ್ಯೇತರ ಚಟುವಟಿಕೆ ವಿಭಾಗದಲ್ಲಿ ಶಾಲೆಯು ತೋರಿಸುತ್ತಿರುವ ವಿಶೇಷ ಆಸಕ್ತಿ ಮತ್ತು ಪ್ರೋತ್ಸಾಹಗಳನ್ನು ಗಮನಿಸಿ ಈ ಗೌರವ ನೀಡಲಾಗಿದೆ. ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಅಧ್ಯಾಪಕಿಯಾದ ಬೇಬಿ ಎಸ್. ನಾಯ್ಕ್ ಅವರು ಶಾಲೆಯ ಪರವಾಗಿ ಸಮಾರಂಭದಲ್ಲಿ ಸ್ವೀಕರಿಸಿದರು. ಮುಂಬೈನಲ್ಲಿ ನಡೆದ ಈ ಕಾರ್ಯಕ್ರಮವು ESFE ಹಾಗೂ ಟೈಮ್ಸ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಎಜುಕೇಶನ್ ಸಪ್ಲೈ ಮತ್ತು ಫ್ರಾಂಚೈಸಿ ಎಕ್ಸ್ಪೋ ಕೂಡ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರು ಶಾಲೆಯ ಸಿಬ್ಬಂದಿವರ್ಗ ಮತ್ತು ಆಡಳಿತ ಮಂಡಳಿಯು ಪ್ರೋತ್ಸಾಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೇವಾ ಮನೋಭಾವದಿಂದ ಮಾಡುವ ಯಾವುದೇ ಕೆಲಸ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಆದ್ದರಿಂದ ರಾಷ್ಟ್ರೀಯ ಸೇವಾ ಯೋಜನೆ ಇಂತಹ ಸೇವೆಯನ್ನು ಸಮುದಾಯಕ್ಕೆ ನೀಡಲು ಒಳ್ಳೆಯ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತದೆ. ವಿದ್ಯಾರ್ಥಿಗಳು ಒಂದು ದಿನದ ವಿಶೇಷ ಶಿಬಿರದಲ್ಲಿ ಪಡೆದ ಅನುಭವವನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಹೇಳಿದರು. ಅವರು ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ, ಬಾಂಡ್ಯದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. , ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ ಬಾಂಡ್ಯ ಇಲ್ಲಿನ ಮುಖ್ಯೋಪಾಧ್ಯಾಯರಾದ ಸಂತೋಷ ಕುಮಾರ್ ಶೆಟ್ಟಿ ಚೋನಾಳಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವೆಯ ಮನೋಭಾವನೆ ರೂಪುಗೊಳ್ಳಬೇಕಾದರೆ ಎನ್.ಎಸ್.ಎಸ್. ಶಿಬಿರದಲ್ಲಿ ಪಾಲ್ಗೊಂಡಾಗ ಸ್ವಾವಲಂಬನೆ ಬದುಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ, ಮಂಗಳವಾರದಂದು ವಂಡಾರಿನ ‘ಕೃಷ್ಣ ಪ್ರಸಾದ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್’ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯಾಚರಣೆಗಳ ಬಗ್ಗೆ ಪ್ರಾಯೋಗಿಕ ಜ್ಞಾನವನ್ನು ನೀಡುವ ಉದ್ದೇಶದಿಂದ ಈ ಭೇಟಿಯನ್ನು ಆಯೋಜಿಸಲಾಗಿತ್ತು. ಭೇಟಿಯ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಹಂತಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಕಾರ್ಖಾನೆಯ ಅಧಿಕಾರಿಗಳು ಅಲ್ಲಿನ ವಿವಿಧ ಯಂತ್ರೋಪಕರಣಗಳ ಕಾರ್ಯವೈಖರಿ, ಗುಣಮಟ್ಟ ನಿಯಂತ್ರಣ ವ್ಯವಸ್ಥೆ ಮತ್ತು ಒಟ್ಟಾರೆ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವಿವರಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಂಪತ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೃತ್ತಿಜೀವನದ ಅವಕಾಶಗಳು, ವೃತ್ತಿಪರ ಬೆಳವಣಿಗೆ ಹಾಗೂ ಜೀವನದಲ್ಲಿ ಶಿಸ್ತು ಮತ್ತು ಸಮರ್ಪಣಾ ಭಾವದ ಮಹತ್ವದ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ನೀಡಿ ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಮತ್ ಶೆಟ್ಟಿ ಹಾಗೂ ಇತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ಶಾಸಕ ಎ. ಕಿರಣ್‌ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015ರಿಂದ ಒಬ್ಬರೂ ಖಾಯಂ ವೈದ್ಯರಿಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಹೇಳಿದರು. ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ:ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹಕಾರಿ ಸಂಘಗಳು ಸಮಾಜದ ಆಸ್ತಿಯಾಗಿದ್ದು, ಗ್ರಾಮೀಣ ಭಾಗದ ಜನರಲ್ಲಿ ಉಳಿತಾಯದ ಮನೋಭಾವ ಮೂಡಿಸುವುದಲ್ಲದೇ ಸುಲಭವಾಗಿ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುತ್ತಿದೆ. ಇಲ್ಲಿನ ವ್ಯವಹಾರದ ಎಲ್ಲಾ ಲಾಭಗಳು ಒಂದಿಲ್ಲೊಂದು ರೀತಿಯಲ್ಲಿ ಸಮಾಜಕ್ಕೆ ವಿನಿಯೋಗವಾಗುತ್ತಿದೆ ಎಂದು ಮಾಜಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಮರವಂತೆಯಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಎಸ್. ರಾಜು ಪೂಜಾರಿ ಹಿರಿಯ ಸಹಕಾರಿಯಾಗಿದ್ದಾರೆ. ಅವರ ಅಧ್ಯಕ್ಷತೆಯ ಈ ಸಂಸ್ಥೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಪ್ರಸ್ತುತ ಮರವಂತೆಯಲ್ಲಿ 6ನೇ ನೂತನ ಶಾಖೆಯನ್ನು ಆರಂಭಿಸಿದ್ದು, ಇದರಿಂದ ಗ್ರಾಮೀಣ ಭಾಗಕ್ಕೆ ಇನ್ನಷ್ಟು ಆರ್ಥಿಕ ಸಹಕಾರ ದೊರೆಯುವಂತಾಗಲಿ ಎಂದರು. ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಗ್ರಾಹಕರ ವಿಶ್ವಾಸ ಮತ್ತು ಗುಣಮಟ್ಟದ ಸೇವೆ ಮೂಲಕ ಸಂಸ್ಥೆಯು ಪ್ರಗತಿ ಕಂಡಿದೆ. ಗ್ರಾಹಕರ ವಿಶ್ವಾಸದ ಜೊತೆಗೆ ಸಂಸ್ಥೆ ಇನ್ನಷ್ಟು ಹೊಸತನದೊಂದಿಗೆ ಉತ್ಕ್ರಷ್ಟ ಸೇವೆ ನೀಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮೂಡುಬಿದಿರೆ ಜನಸಾಮಾನ್ಯರ ಆರೋಗ್ಯ ಕಾಳಜಿಯನ್ನು ಮನಗಂಡು ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಆರೋಗ್ಯ ಕೇಂದ್ರವು ಮತ್ತೊಂದು ಮಹತ್ವದ ಹೆಜ್ಜೆಯಾಗಿ ಹೃದಯ ಚಿಕಿತ್ಸಾ ಕೇಂದ್ರ (ಕಾರ್ಡಿಯಾಕ್ ಸೆಂಟರ್) ವನ್ನು ಆರಂಭಿಸಿರುವುದು ಅತ್ಯಂತ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ನುಡಿದರು. ಅವರು ಬುಧವಾರ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೂಡುಬಿದಿರೆ, ಮುಲ್ಕಿ, ಕಾರ್ಕಳ ಹಾಗೂ ಬೆಳ್ತಂಗಡಿ ಪ್ರದೇಶಗಳಲ್ಲಿಯೇ ಮೊದಲ ಬಾರಿಗೆ ಸ್ಥಾಪನೆಯಾದ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಈ ಭಾಗದ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು. ಹೃದಯ ಸಂಬಂಧಿತ ರೋಗಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದ್ದು, ಸಮಯೋಚಿತ ಚಿಕಿತ್ಸೆ ದೊರಕದಿದ್ದರೆ ಅವು ಜೀವಕ್ಕೆ ಅಪಾಯಕಾರಿಯಾಗುತ್ತವೆ. ಇಂತಹ ಸಂದರ್ಭದಲ್ಲಿ ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆಯಾಗಿರುವುದು ಈ ಪ್ರದೇಶದ ಜನರಿಗೆ ದೊಡ್ಡ ವರದಾನವಾಗಿದೆ. ಇದರಿಂದಾಗಿ ಈಗ ಚಿಕಿತ್ಸೆಗಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳ ತಯಾರಿಕೆ ಮತ್ತು ಗುಣಮಟ್ಟ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕವಾಗಿರುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ದಿಮೆದಾರರಿಗೆ ಕರೆ ನೀಡಿದರು. ಅವರು ಬುಧವಾರ ನಗರದ ಕಡಿಯಾಳಿಯ ದಿ ಓಷ್ಯನ್ ಪರ್ಲ್ ಹೋಟೆಲ್‌ನಲ್ಲಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ರ್ಯಾಪ್) ಯೋಜನೆಯಡಿಯಲ್ಲಿ ಒಂದು ದಿನದ ಝೆಡ್ ಮತ್ತು ಲೀನ್ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳು ಕೇವಲ ಆರ್ಥಿಕತೆಯ ಲಾಭಕ್ಕೆ ಹೆಚ್ಚು ಒತ್ತು ನೀಡುವ ಜೊತೆಗೆ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕ ಉತ್ಪನ್ನಗಳ ತಯಾರಿಕೆಗೆ ಮುಂದಾಗಬೇಕು. ಇದರಿಂದಾಗಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ. ಕೈಗಾರಿಕೆಗಳು ಸುಧೀರ್ಘವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೈತ ಕಾಯಕ ಪ್ರಸ್ತುತ ಹಿರಿಯ ಜೀವಿಗಳಲ್ಲಿ ಕಾಣುತ್ತಿದ್ದೇವೆ ಆದರೆ ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಹೇಳಿದರು. ಅವರು ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ 50ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ವಿದ್ಯಾಕ್ಷೇತ್ರ ಸಾಕಷ್ಟು ಮುಂದುವರಿಯುವ ಕಾಲದಲ್ಲಿ ಕೃಷಿ ಕ್ಷೇತ್ರವು ಅದೇ ರೀತಿಯಲ್ಲಿ ಮುಂದುವರಿಯಬೇಕು, ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಸಾಕಷ್ಟು ಮುಂಚೂಣಿಗೆ ಬರುವುದನ್ನು ಕಾಣುತ್ತಿದ್ದೇವೆ ಅದೇ ರೀತಿ ರೈತ ಕಾಯಕ ಇಲ್ಲದಿದ್ದರೆ ಬದುಕು ಬರಡಾಗುವುದರಲ್ಲಿಅನುಮಾನವೇ ಇಲ್ಲ ಎಂದು ನೋವು ವ್ಯಕ್ತಪಡಿಸಿದರು. ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಕೆ. ಮಾತನಾಡಿ, ಜೈ ಜವಾನ್ ಜೈ…

Read More