ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ನೇಶನಲ್ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ರಾಮ ಭಟ್ ಸಜನ್ಗದ್ದೆ ಅವರು ಕಾರ್ಯಕ್ರಮ ಉದ್ಘಾಟಿಸಿ, ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಬದಕು ಮತ್ತು ಸಾಧನೆಗಳನ್ನು ಸ್ಮರಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಭಾಸ್ಕರ್ ಶೆಟ್ಟಿ ಎಸ್. ಅವರು ಕಾಲೇಜಿನ ಗ್ರಂಥಾಲಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು. ಕಾಲೇಜಿನ ಗ್ರಂಥಪಾಲಕ ಡಾ. ಹರೀಶ್ ಸಿ.ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕಿ ರೋಹಿಣಿ ಹೆಚ್. ಬಿ . ಕಾರ್ಯಕ್ರಮವನ್ನು ನಿರೂಪಿಸಿ, ಅಧ್ಯಾಪಕ ಕಾರ್ಯದರ್ಶಿಗಳಾದ ಪಾಪಣ್ಣ ಎನ್. ಎ. ವಂದಿಸಿದರು. ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ ಇವರ ಆತಿಥ್ಯದಲ್ಲಿ ನಡೆದ ಖಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಮೂರು ವಿದ್ಯಾರ್ಥಿಗಳು ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 14ರ ವಯೋಮಾನದ ಹುಡುಗರ ವಿಭಾಗದಲ್ಲಿ ಹರಿಜಿತ್ (8ನೇ ತರಗತಿ ), ಸನ್ವಿತ್ (8ನೇ ತರಗತಿ) ಮತ್ತು ತನಿಷ್( 8ನೇತರಗತಿ), ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತು ವಿರೋಧಿ ಸಮಿತಿಯ ಆಶ್ರಯದಲ್ಲಿ ಸಾಮೂಹಿಕ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು ನಮ್ಮ ಜಿಲ್ಲೆ, ರಾಜ್ಯ ಹಾಗೂ ದೇಶ ನಶಾ ಮುಕ್ತ ಆಗುವಲ್ಲಿ ಯುವ ಜನತೆ ಪಣ ತೊಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಮಾದಕ ದ್ರವ್ಯ ವಿರೋಧಿ ಸಮಿತಿಯ ಸಂಚಾಲಕರು ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಪ್ರತಿಜ್ಞಾ ವಿಧಿ ಬೋಧಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿಯು ಬುಧವಾರ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಿತ್ಯ ಜೀವನದಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಬಂಟ್ವಾಳದ ಹಿರಿಯ ನ್ಯಾಯವಾದಿ ಶೈಲಜಾ ರಾಜೇಶ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಕಾನೂನಿನ ಮಹತ್ವ ಹಾಗೂ ಜೀವನದಲ್ಲಿನ ಅದರ ಅನ್ವಯ ಕುರಿತು ಮಾರ್ಗದರ್ಶನ ನೀಡಿದರು. ಮನುಷ್ಯನ ಬದುಕಿನ ಪ್ರತಿಯೊಂದು ಹಂತವೂ ಕಾನೂನಿನ ನಿಯಮಗಳು, ಹಕ್ಕುಗಳು ಮತ್ತು ಕರ್ತವ್ಯಗಳಿಂದ ಕೂಡಿರುತ್ತದೆ. ಜನನದಿಂದ ಆರಂಭಿಸಿ ಸಾವಿನವರೆಗಿನ ಪ್ರತಿಯೊಂದು ಪ್ರಕ್ರಿಯೆಯು ಕಾನೂನು ನಿರ್ದಿಷ್ಟಗೊಳಿಸಿದ ವ್ಯವಸ್ಥೆಯೊಳಗೆ ನಡೆಯುತ್ತದೆ. ಕಾನೂನಿನ ಈ ಚೌಕಟ್ಟಿನ ಅರಿವಿದ್ದಾಗ ನಾವೂ ಜವಾಬ್ದಾರಿಯಿಂದ ಸಮಾಜದಲ್ಲಿ ಬದುಕಲು ಸಾಧ್ಯ ಎಂದರು. ಮಹಿಳೆಯರು ಸಮಾಜದಲ್ಲಿ ಅನೇಕ ಬಾರಿ ವಂಚನೆಗೆ ಒಳಗಾಗುತ್ತಾರೆ ಎಂಬುದು ಸತ್ಯ. ಆದರೆ ಕೆಲವರು ಅದೇ ಕಾನೂನನ್ನು ದುರುಪಯೋಗ ಪಡಿಸಿಕೊಂಡ ಉದಾಹರಣೆಗಳಿವೆ ಎಂದರು. ನಾವೆಲ್ಲ ಹಕ್ಕುಗಳ ಬಗ್ಗೆ ಹೆಚ್ಚು ಚರ್ಚಿಸುತ್ತೇವೆ, ಆದರೆ ಕರ್ತವ್ಯಗಳಿಂದ ದೂರವಾಗುತ್ತಿರುವುದು ದುಖಃಕರ. ಮಕ್ಕಳು ಸುಖ ಜೀವನದಲ್ಲೇ ಬೆಳೆದರೆ ಕಷ್ಟದ ಮೌಲ್ಯ ಅರಿಯಲಾರರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ” ಕ್ರಿಯೇಟಿವ್ ಪುಸ್ತಕ ಧಾರೆ – 2025 ” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ…ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಅವರು ಉದ್ಘಾಟಿಸಿ ಮಾತನಾಡಿ, “ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ ” ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, “ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ” ಎಂದರು. ಸಹ ಸಂಸ್ಥಾಪಕರಾದ ಅಶ್ವತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಳ್ಳೆಯ ಯೋಜನೆ, ಚಿಂತನೆ ಜಾರಿಗೆ ಕುಂದಾಪುರ ಮೊದಲ ಆದ್ಯತೆ ನೀಡುತ್ತದೆ. 2018-19ರಲ್ಲಿ ಕುಂದಾಪುರದಲ್ಲಿ ಎಎಸ್ಪಿಯಾಗಿದ್ದ ಸಂದರ್ಭ ಕಳ್ಳತನ ತಡೆಗೆ ಜಾರಿಗೆ ತಂದಿದ್ದ ಸಿಸಿ ಟಿವಿ ಮಾನಿಟರಿಂಗ್ ಸಿಸ್ಟಮ್ ದೇಶದಲ್ಲಿ ಮೊದಲ ಯಶಸ್ವಿ ಪ್ರಯೋಗವಾಗಿ ಇಲ್ಲಿ ಜಾರಿಗೊಂಡಿದೆ. ಅಂದು ಸೊಸೈಟಿ, ದೇವಸ್ಥಾನಗಳಿಗೆ 900ಕ್ಕೂ ಮಿಕ್ಕಿ ಸೇಫ್ ಕ್ಯಾಮರಾ ಅಳವಡಿಸಿ ಲೈವ್ ಮಾನಿಟರಿಂಗ್ ಸಿಸ್ಟಂ ಜಾರಿಗೊಳಿಸಲಾಗಿದ್ದು ಕಳ್ಳತನ ಪ್ರಕರಣಕ್ಕೆ ದೊಡ್ಡಬ್ರೇಕ್ ಬಿದ್ದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಹೇಳಿದರು. ಅವರು ಇಲ್ಲಿನ ಕುಂದೇಶ್ವರ ದೇವಳದ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ಕುಂದಾಪುರ ಪೊಲೀಸ್ ಉಪವಿಭಾಗ ಮತ್ತು ಕುಂದಾಪುರ ಪೊಲೀಸ್ ಠಾಣೆ ಆಶ್ರಯದಲ್ಲಿ ಆಯೋಜಿಸಿದ್ದ ದೃಷ್ಟಿ ಯೋಜನೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 201 ಜಂಕ್ಷನ್ ಮತ್ತು ಗಡಿರೋಡ್ ಗುರುತಿಸಿದ್ದೇವೆ. ಇಲ್ಲಿ ಸೇಫ್ ಕ್ಯಾಮರಾ ಅಳವಡಿಕೆ ನಡೆಯಲಿದೆ. ನೈಟ್ ವಿಷನ್ ಕ್ಯಾಮರಾ ಬಳಕೆ ಮಾಡಲಾಗುತ್ತದೆ. ಇಡಿ ರಾಜ್ಯದಲ್ಲೇ ಮೊದಲ ಬಾರಿಗೆ ಜಂಕ್ಷನ್ ಗುರುತಿಸಿ ಕ್ಯಾಮೆರಾ ಅಳವಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2574964 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಅಂದು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ಮಾದಕ ವಸ್ತು ಸೇವನೆ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು. ಮಾದಕ ವ್ಯಸನವು ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಕೆಲವರು ಅತೀ ಚಿಕ್ಕ ವಯಸ್ಸಿಗೆ ಮಾದಕ ವಸ್ತುಗಳ ದಾಸರಾಗಿ ತಮ್ಮ ಅಮೂಲ್ಯ ಜೀವವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ವ್ಯಕ್ತಿಯು ಯಾವುದೇ ವ್ಯಸನಕ್ಕೆ ಒಳಗಾದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ಎ ಸ್ಪರ್ಧೆಗಳ ಅಂಗವಾಗಿ ಬೆಂಗಳೂರಿನ ಪೋಲೀಸ್ ಸ್ಪಿರಿಟ್ ಶಾಲೆಯಲ್ಲಿ ಪ್ರಾದೇಶಿಕ ಮಟ್ಟದ ಖೋ ಖೋ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ವಿದ್ಯಾರ್ಥಿಗಳಾದ ಸಚೇತ್, ಖುಷಿ ಬಿ. ಟಿ, ಅನುಷ್ಕಾ ಹುರಳಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಹುರಿದುಂಬಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.13: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಗುಣಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಎಲ್ಲರನ್ನೂ ಗೌರವಾದರದಿಂದ ಕಾಣಲು ಸಾಧ್ಯವಾಗುತ್ತದೆ. ಎಲ್ಲಾ ಜಾತಿ, ಧರ್ಮಗಳು ಹಾಗೂ ಸಂಸ್ಕೃತಿಯನ್ನು ಗೌರವಿಸುವ ಬಹುತ್ವ ಈ ನೆಲೆದಲ್ಲಿ ಸಾವಿರಾರು ವರ್ಷಗಳಿಂದಲೂ ಇದೆ. ಈ ಬಹುತ್ವದ ನೆಲಗಟ್ಟನ್ನು ಗಟ್ಟಿಗೊಳಿಸುವ ಕಾರ್ಯ ಮುಖ್ಯವಾದದ್ದು ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಜಾಲ್ಗಿರಿ’ ಕೃತಿಕಾರ ತುಂಬಾಡಿ ರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿ, ಸಾಂವಿಧಾನಿಕ ಮೌಲ್ಯ, ಜಾತ್ಯಾತೀತ ಮೌಲ್ಯ ಹಾಗೂ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಕಾರ್ಯ ಇಂದು ಪ್ರಾಮುಖ್ಯವಾದದ್ದು. ತುಂಬಾಡಿ ಅವರ ಕೃತಿಗಳು ಈ ಮೌಲ್ಯಗಳಿಗೆ ಒತ್ತು ನೀಡಿದೆ ಎಂದರು. ಸಾಂಸ್ಕೃತಿಕ ಚಿಂತಕ, ಪ್ರಶಸ್ತಿ ಸಮಿತಿಯ ತೀರ್ಪುಗಾರರಾದ ಡಾ. ಬಂಜೆರೆ ಜಯಪ್ರಕಾಶ್ ಅವರು ವರ್ಚುವಲ್ ವೇದಿಕೆಯಲ್ಲಿ ಮಾತನಾಡಿ, ತುಂಬಾಡಿ ಅವರ ಕಥನ…
