ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿ ವಾಯ್ಸ್ ಆಫ್ ಬೈಂದೂರು ಇವರ ಆಶ್ರಯದಲ್ಲಿ ಕರಾವಳಿ ವಾಯ್ಸ್ ಆಫ್ ಬೈಂದೂರು ಇದರ ಫಿನಾಲೆ ಸ್ಪರ್ಧೆ -2019 ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು. ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ಆಡಳಿತ ನಿರ್ದೇಶಕ ಜಯಾನಂದ ಹೋಬಳಿದಾರ್ ಡ್ರಮ್ ಬಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಭಾವಂತರಿಗೆ ಸೂಕ್ತ ವೇದಿಕೆ ದೊರೆತಾಗ ಉತ್ತಮ ಸಾಧನೆ ಮಾಡಲು ಸಾಧ್ಯ. ಪಟ್ಟಣ ಪ್ರದೇಶಗಳಲ್ಲಿ ಹಲವು ಅವಕಾಶಗಳಿರುತ್ತದೆ. ಆದರೆ ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ಆಯೋಜಿಸುವುದು ಕ್ಲಿಷ್ಟಕರವಾದ ಕೆಲಸ. ಪ್ರಪ್ರಥಮ ಬಾರಿಗೆ ಬಂದೂರಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಪ್ರತಿಭಾವಂತರು ರಾಜ್ಯಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದರು. ಮುಖ್ಯ ಅತಿಥಿಗಳಾಗಿ ಹಿನ್ನೆಲೆ ಗಾಯಕಿ ಅನನ್ಯ ಭಟ್, ಚಲನಚಿತ್ರ ನಿರ್ದೇಶಕ ಡಾ| ಸುರೇಶ್ ಚಿತ್ರಾಪು, ಬಹುಭಾಷ ಚಿತ್ರನಟ ಓಂಗುರು ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ ಸಾರಂಗ್, ಉದ್ಯಮಿ ರಾಮ ಮೇಸ್ತ, ಶಿರೂರು ಗ್ರಾ.ಪಂ ಸದಸ್ಯರಾದ ರಘುರಾಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬಂದೂರು; ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಕರಾವಳಿ ವಾಯ್ಸ್ ಆಫ್ ಬಂದೂರು ಇದರ ಫಿನಾಲೆ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಲಿಷಾ ಕೊಕ್ಕರ್ಣೆ ಪ್ರಥಮ, ಗ್ರೀಷ್ಮಾ ಕಟೀಲು ದ್ವಿತೀಯ, ಧಾರಿಣಿ ಕೆ. ಎಸ್ ಕುಂದಾಪುರ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹಿನ್ನೆಲೆ ಗಾಯಕಿ ಅನನ್ಯ ಭಟ್, ಚಲನಚಿತ್ರ ನಿರ್ದೇಶಕ ಡಾ| ಸುರೇಶ್ ಚಿತ್ರಾಪು, ಬಹುಭಾಷ ಚಿತ್ರನಟ ಓಂಗುರು ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ ಸಾರಂಗ್, ನಿರೂಪಕ ನಾಗರಾಜ ಭಟ್ಕಳ, ಸಾತ್ವಿಕ್ ಮೇಸ್ತ ದೊಂಬೆ ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾದ ಮರವಂತೆಯ ಉಷಾ ಪೂಜಾರಿ ಅವರನ್ನು ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಪ್ರಧಾನ ಕಛೇರಿಯಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಶ್ ಕಾರಂತ್ ಉಪ್ಪಿನಕುದ್ರು, ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ್ ಎಸ್.ವಿ., ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವಿನಾಯಕ ರಾವ್, ನಿರ್ದೇಶಕ ಶಿವರಾಮ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಮೊದಲಾದವರು ಇದ್ದರು.
ಶ್ರೀನಗರ: ಜಮ್ಮು- ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ಬಳಿಕ ಸೈನಿಕರು ಭರ್ಜರಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ರಕ್ತ ರಕ್ಕಸ ಅಬ್ದುಲ್ ರಶೀದ್ ಘಾಸಿಯನ್ನು ಯೋಧರು ಇಂದು ಹತ್ಯೆ ಮಾಡಿದ್ದಾರೆ. ಅಬ್ದುಲ್ ರಶೀದ್ ಜೊತೆ ಜೈಷ್ ಸಂಘಟನೆಯ ಮತ್ತೋರ್ವ ಕಮಾಂಡರ್ ಕರಮ್ ನನ್ನು ಸಹ ಯೋಧರು ಹತ್ಯೆ ಮಾಡಿದ್ದಾರೆ. ಸುದೀರ್ಘ 9 ಗಂಟೆಗಳ ಗುಂಡಿನ ಚಕಮಕಿ ನಂತರ ಈ ಕಾರ್ಯಚರಣೆ ಯಶಸ್ವಿಯಾಗಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪುಲ್ವಾಮಾ ಜಿಲ್ಲೆಯ ಪಿಂಗ್ಲಾನ್ ಪ್ರದೇಶದಲ್ಲಿ ಯೋಧರ ಹಾಗೂ ಉಗ್ರರ ನಡುವೆ ಅಹೋರಾತ್ರಿ ಭೀಕರ ಕಾಳಗ ನಡೆಯುತ್ತಿತ್ತು. 40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೈನಿಕರು ಆ ಪ್ರದೇಶವನ್ನು ಸುತ್ತುವರಿದು ದಾಳಿ ನಡೆಸಿದಾಗ ಉಗ್ರರು ಪ್ರತಿ ದಾಳಿ ನಡೆಸಿದ್ದರು. ಈ ವೇಳೆ ಓರ್ವ ನಾಗರಿಕ ಸಹಿತ ನಾಲ್ವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ತಾವು ಗವರ್ನರ್ ಆಗಿರುವ ಲಯನ್ಸ್ ಜಿಲ್ಲೆ ೩೧೭ಕ್ಕೆ ಸೇರಿದ ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಅತ್ಯಧಿಕ ನೂತನ ಕ್ಲಬ್ ಸ್ಥಾಪನೆಯ ಜತೆಗೆ ದಾಖಲೆ ಗಾತ್ರದ ಸಾಮಾಜಿಕ ಸೇವಾ ಕಾರ್ಯ ನಡೆಸಲಾಗಿದೆ ಎಂದು ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್‌ಗೆ ನೀಡಿದ ಅಧಿಕೃತ ಬೇಟಿ ಸಂದರ್ಭ ನಾಗೂರಿನ ಕುಸುಮಾ ಸಂಕೀರ್ಣದಲ್ಲಿ ಶನಿವಾರ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮತನಾಡಿದರು. ಬ್ರಹ್ಮಗಿರಿ, ಬ್ರಹ್ಮಾವರ ಟೌನ್, ಉಡುಪಿ ನ್ಯೂಸಿಟಿ, ತಲ್ಲೂರು, ಶಂಕರನಾರಾಯಣದಲ್ಲಿ ನೂತನ ಲಯನ್ಸ್ ಕ್ಲಬ್, ಮಲ್ಪೆ, ಬ್ರಹ್ಮಗಿರಿ, ಕುಂದಾಪುರ ಸಿಟಿ ಸೆಂಟರ್, ಉಡುಪಿ ಸೌತ್ ಲಿಯೋ ಕ್ಲಬ್ ತೆರೆದುದಲ್ಲದೆ, ಇನ್ನೂ ೧೨ ಲಯನ್ಸ್ ಕ್ಲಬ್ ಸ್ಥಾಪನೆ ವಿವಿಧ ಹಂತದಲ್ಲಿದೆ. ಹದಿಹರೆಯದ ಮಕ್ಕಳಿಗೆ ಅಗತ್ಯವಾದ ಮಾಹಿತಿ ವರ್ಗಾಯಿಸುವ ನಿಟ್ಟಿನಲ್ಲಿ ೭೦ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ೨೦ ಶಾಲೆಗಳಲ್ಲಿ ಪೀಸ್ ಪೋಸ್ಟರ್ ಸ್ಪರ್ಧೆ, ಚರ್ಚ್‌ನಲ್ಲಿ ಗೂಡುದೀಪ ಸ್ಪರ್ಧೆ, ದೀಪಾವಳಿಯಂದು ಮೂರು ಧರ್ಮಗಳ ಗುರುಗಳ ಉಪಸ್ಥಿತಿಯಲ್ಲಿ ಸರ್ವಧರ್ಮ ದೀಪಾವಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗೌಡ ಸಾರಸ್ವತ ಸಮಾಜ ಸಾರವಂತವಾಗಬೇಕು. ಸಮಾಜ ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಸಮಾಜ ಹಿರಿಯರು ದೇವಾಲಯಗಳನ್ನು ನಿರ್ಮಿಸಿದ್ದಾರೆ. ೩೫೦ ವರ್ಷಗಳ ಹಿಂದೆ ಪಂಚಗಂಗಾವಳಿ ನದಿ ತೀರದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವರು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಎಲ್ಲರಿಗೂ ಒಳಿತನ್ನು ಮಾಡಿದ್ದಾನೆ. ದೇವಾಲಯದ ಅಭಿವೃದ್ಧಿ ಕೂಡ ಕಾಲ ಕಾಲಕ್ಕೆ ನಡೆದಿದ್ದು, ಗುರುಗಳ ಮಾರ್ಗದರ್ಶನದಂತೆ ದೇವಾಲಯ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಐದು ದಿನಗಳ ಮೊಕ್ಕಾಂಗೆ ದೇವಳಕ್ಕೆ ಚಿತ್ತೈಸಿದ ಶ್ರೀಗಳು ಆಶೀರ್ವಚನ ನೀಡಿದರು. ಸಮಾಜ ಬಾಂಧವರ ಅಪೇಕ್ಷೆಯಂತೆ ದೇವಳದ ವಠಾರದಲ್ಲಿ ಸುಸಜ್ಜಿತವಾದ ಕಲ್ಯಾಣ ಮಂಟಪ ನಿರ್ಮಾಣಗೊಂಡಿದೆ ಅಲ್ಲದೆ ನಾಗದೇವರ ಗುಡಿಯ ಜೀರ್ಣೋದ್ಧಾರ ಕಾರ್ಯ ನಡೆದಿದೆ. ಈ ಕಾರ್ಯಕ್ಕೆ ಅನೇಕ ಸಮಾಜಬಾಂಧವರು ಕೈಜೋಡಿಸಿದ್ದು ಶ್ರೀದೇವರು ಅವರಿಗೆ ಉತ್ತರೋತ್ತರ ಅಭಿವೃದ್ಧಿಯನ್ನು ಕರುಣಿಸಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳ ಆದೇಶದಂತೆ ಮತದಾನದ ಬಗ್ಗೆ ಜನಜಾಗೃತಿ ಮೂಡಿಸಲು ಕುಂದಾಪುರದ ಸಂಗಮ್‌ಯಿಂದ ಆನಗಳ್ಳಿಯವರೆಗೆ ಅಭಿಯಾನ ನಡೆಸಲಾಯಿತು. ಕಾಲೇಜಿನ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕುಂದಾಪುರದ ಕಂದಾಯ ಅಧಿಕಾರಿ ಭರತ್ ವಿ. ಶೆಟ್ಟಿ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರದ ಟ್ರಾಫಿಕ್ ಎ.ಎಸ್.ಐ. ಜನಾರ್ದನ ಎಮ್. ಮತ್ತು ಯು ಸುಧಾ ಪ್ರಭು, ಕಾಲೇಜಿನ ಎನ್.ಎಸ್.ಎಸ್, ಅಧಿಕಾರಿ ಸತೀಶ್ ಶೆಟ್ಟಿ ಹೆಸ್ಕತ್ತೂರು, ಪೊಲೀಸ್ ಸಿಬ್ಬಂದಿಗಳಾದ ಪ್ರಸನ್ನ, ಚೇತನ್, ವಿಜಯ್ ಉಪಸ್ಥಿತರಿದ್ದರು. ಕಾಲೇಜಿನ 1250 ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಧುನಿಕತೆಗೆ ತೆರೆದುಕೊಳ್ಳದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಕ್ಷರ ಪ್ರಪಂಚಕ್ಕೆ ಪರಿಚಯಿಸುತಾ, ಆರೋಗ್ಯಕರ ಸಮಾಜ ಕಟ್ಟುವಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಶ್ರಮಿಸುತ್ತಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ-ಶಿಕ್ಷಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇವಲ ಪುಸ್ತಕದ ಓದಿಗೆ ವಿದ್ಯಾರ್ಥಿಗಳನ್ನು ಸೀಮಿತವಾಗಿರಿಸದೆ, ಭವಿಷ್ಯದ ಬದುಕಿಗೆ ಪೂರಕವಾಗುವಂತೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳ ಪರಿಣಿತರನ್ನಾಗಿಸುತ್ತಿದೆ ಎಂದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಗಣಪತಿ ಎಮ್.ಎಮ್. ಮಾತನಾಡಿ, ವಿದ್ಯಾರ್ಥಿಗಳನ್ನು ಸಮರ್ಥ ಪ್ರಜೆಯನ್ನಾಗಿ ರೂಪುಗೊಳಿಸುವಲ್ಲಿ ಹೆತ್ತವರ-ಶಿಕ್ಷಕರ ಸಹಭಾಗಿತ್ವ ಅಗತ್ಯ ಎಂದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ವಿ.ಕೆ.ಆರ್. ಆಚಾರ್ಯ ಮತ್ತು ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲೆ ಚಿಂತನಾ ರಾಜೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕೃತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕೃತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು ಪಿಇಎಸ್ ಯುನಿವರ್ಸಿಟಿಯ ಪ್ರಾಧ್ಯಪಕ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಹೇಳಿದರು. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವಿಂದು ಬಳಸುವ ಇಂಗ್ಲೀಷ್, ಕನ್ನಡ, ಹಿಂದಿ ಇನ್ನಿತರ ಭಾಷೆಗಳ ಮೂ ಅರ್ಥವನ್ನು ತಿಳಿಯುವ ಪ್ರಯತ್ನವನ್ನು ನಾವು ಮಾಡುತ್ತಿಲ್ಲ. ಸಂಸ್ಕೃತ ಭಾಷೆಯೊಂದೆ ಈ ಎಲ್ಲಾ ಭಾಷೆಗಳ ಮೂಲವಾಗಿದೆ ಎಂದರು. ನಮ್ಮತನವನ್ನು ನಮ್ಮ ಸಂಸ್ಕೃತಿಯನ್ನು ನಾವು ಎಲ್ಲಿ ಮರೆತಿದ್ದೇವೆ ಎಂಬುದನ್ನು ಕಂಡುಕೊಳ್ಳುವ ಕಾರ್ಯವಾಗಬೇಕಿದೆ. ನಮ್ಮ ಮೂಲ ಭಾಷೆ ಸಂಸ್ಕೃತವನ್ನು ಮರೆತು ಅನ್ಯ ಭಾಷೆಯನ್ನು ಕಲಿಯಲು ಪ್ರಯತ್ನಿಸುತ್ತಿರುವುದನ್ನು ನೋಡಿದರೆ ಕಸಿವಿಸಿಯಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ನಾವಿಂದು ಆರ್ಯುವೇದ, ರಾಜ್ಯಶಾಸ್ತ್ರ, ವಿಜ್ಞಾನ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ ಆದರೆ ನಮಗೆ ಇದರ ಮೂಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳೆಯರಿಗೆ ಅವಕಾಶ ದೊರೆತರೆ, ಎಲ್ಲರಿಂದ ಉತ್ತಮ ಸಹಕಾರ ದೊರೆತರೆ ಕೈಹಿಡಿದ ಕಾರ್ಯ ಯಶಸ್ವಿಯಾಗುತ್ತದೆ. ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯ ನಡೆಯಬೇಕು. ಉತ್ತಮ ಗುಣಗಳನ್ನು ಬೆಳೆಸಬೇಕು. ಸಂಜೆ ಮನೆ ಮನೆಗಳಲ್ಲಿ ಭಜನೆ, ಪ್ರಾರ್ಥನೆ ನಡೆದರೆ ಯುವಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಬೆಳೆಯುತ್ತದೆ. ಮನುಷ್ಯನಲ್ಲಿ ಉತ್ತಮ ಗುಣವಿದ್ದರೆ ಆದ ಕಲಿತ ವಿದ್ಯೆಗೆ ಬೆಲೆ ಬರುತ್ತದೆ. ಸ್ವಸಹಾಯ ಸಂಘದ ಸದಸ್ಯರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ತಮ್ಮ ಜೀವನದ ಯಶಸ್ಸಿಗಾಗಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ಶ್ರೀ ಪಂಜುರ್ಲಿ ದೈವಸ್ಥಾನದ ಮೊಕ್ತೇಸರ ಜಿ.ಪುರುಷೋತ್ತಮ ಆರ್ಕಾಟಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗಂಗೊಳ್ಳಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರಾಸಿ ವಲಯ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ಜರಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ…
