ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೋಟೇಶ್ವರ ಕೋಟಿಲಿಂಗೇಶ್ವರದ ಕೆರೆಗೆ ಸ್ನಾನಕ್ಕೆಂದು ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಖೇದಕರ ಘಟನೆ ವರದಿಯಾಗಿದೆ. ಕೋಟೇಶ್ವರದ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ, ಸೇನಾಪುರದ ನಿವಾಸಿ ಕೀರ್ತನ್ (19) ಬಿಕಾಂ ವಿದ್ಯಾರ್ಥಿ ಕಾಳವಾರದ ನಿವಾಸಿ ಸಚಿನ್ (19) ಮೃತ ದುರ್ದೈವಿಗಳು ಪರೀಕ್ಷೆಯ ಹಾಲ್ ಟಿಕೇಟ್ ತೆಗೆದುಕೊಳ್ಳಲು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಐವರು ವಿದ್ಯಾರ್ಥಿಗಳು ಕಾಲೇಜಿನಿಂದ ಕೋಟೇಶ್ವರದ ಕೋಟಿಲೀಗೇಶ್ವರ ಕೆರೆಯ ಬಳಿ ತೆರಳಿದ್ದರು. ಅವರಲ್ಲಿ ಕೀರ್ತನ್ ಹಾಗೂ ಸಚಿನ್ ಸ್ನಾನಕ್ಕೆಂದು ನೀರಿಗಿಳಿದಿದ್ದರು. ಬಹಳ ಹೊತ್ತು ನೀರಿನಿಂದ ಮೇಲೆ ಬಾರದ್ದನ್ನು ಗಮನಿಸಿದ ಇನ್ನೋರ್ವ ವಿದ್ಯಾರ್ಥಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ. ಕುಂದಾಪ್ರ ಡಾಟ್ ಕಾಂ ಸುದ್ದಿ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಂದು ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಂದಾಪುರ ಪೊಲೀಸ್ ಠಾಣಾಧಿಕಾರಿ ಹರೀಶ್ ಹಾಗೂ ಇತರೆ ಸಿಬ್ಬಂಧಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶ್ರೀನಿವಾಸ್ ಅವರು ನಾಮಪತ್ರ ಸ್ವೀಕರಿಸಿದರು. ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ಗೋಪಾಲ ಪೂಜಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಎಲ್ಲಾ ವರ್ಗದ ಜನರಿಗೂ ರಾಜ್ಯ ಸರಕಾರ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮಗಳನ್ನು ಮೆಚ್ಚಿ ಜನರು ಮತ್ತೆ ತನ್ನನ್ನು ಬೆಂಬಲಿಸಲಿದ್ದಾರೆಂಬ ವಿಶ್ವಾಸವಿದೆ ಎಂದರು. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಎಸ್.ಮದನ್‌ಕುಮಾರ್ ಉಪ್ಪುಂದ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮರವಂತೆಯ ಸಮುದ್ರದಲ್ಲಿ ಭಾನುವಾರ ಮಧ್ಯಾಹ್ನದ ಬಳಿಕ ತೀವ್ರ ಗಾತ್ರದ ಉಬ್ಬರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವುದರಿಂದ ಮೀನುಗಾರರ ಮನೆಗಳಿಗೆ ಅಪಾಯ ಉಂಟಾಗಿದೆ. ನಿರ್ಮಾಣ ಹಂತದಲ್ಲಿರುವ ಮೀನುಗಾರಿಕಾ ಹೊರಬಂದರಿನ ಎರಡು ತಡೆಗೋಡೆಗಳ ನಡುವಿನ ಪ್ರದೇಶದಲ್ಲಿರುವ ಕರಾವಳಿ ಮಾರ್ಗದ ಒಂದು ಕಡೆ ಕೊರೆತ ಉಂಟಾಗಿದ್ದು, ರಸ್ತೆ ಕಡಿದು ಹೋಗುವ ಹಂತದಲ್ಲಿದೆ. ಅಲೆಗಳು ಚೆಲ್ಲುವ ನೀರು ರಸ್ತೆಯನ್ನು ದಾಟಿ ವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಆ ಪ್ರದೇಶದಲ್ಲಿರುವ ಬುದ್ಧಿವಂತ ಮಂಜುನಾಥ ಖಾರ್ವಿ, ಸುಬ್ರಹ್ಮಣ್ಯ ಖಾರ್ವಿ, ಅಣ್ಣಪ್ಪ ಖಾರ್ವಿ, ಶೇಷಿ ಖಾರ್ವಿ ಮತ್ತು ಬೊಬ್ಬರ್ಯನಕೊಡಿ ರಾಮಚಂದ್ರ ಖಾರ್ವಿ ಮನೆಯ ಅಂಗಳಕ್ಕೆ ನೀರು ಹರಿಯುತ್ತಿದೆ. ಇದರಿಂದ ಮನೆಯಲ್ಲಿ ರಾತ್ರಿ ಕಳೆಯುವುದು ಅಪಾಯಕಾರಿ ಆದುದರಿಂದ ನೆರೆಹೊರೆಯವರ ಸಹಾಯದಿಂದ ಮನೆಯವರನ್ನು ಮತ್ತು ಸಾಮಗ್ರಿಗಳನ್ನು ಅನ್ಯರ ಮನೆಗೆ ಸ್ಥಳಾಂತರಿಸಲಾಗುತ್ತಿದೆ. ರಸ್ತೆ ಪೂರ್ತಿಯಾಗಿ ಕಡಿದುಹೋದಲ್ಲಿ ಹಲವು ಮನೆಗಳಿಗೆ ಅಪಾಯ ತಟ್ಟಲಿದೆ. ಸುದ್ದಿ ತಿಳಿದು ಬಿ. ಎಂ. ಸುಕುಮಾರ ಶೆಟ್ಟಿ, ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ‘ವೇಂದಾತ ವಿಚಾರಗಳು ಅತ್ಯಂತ ತರ್ಕಬಧ್ಧವಾಗಿದ್ದು ಆಧುನಿಕ ವೈಜ್ಞಾನಿಕ ಅವ್ವೇಷಣೆಗಳಿಗೂ ಮೀರಿದ ಸತ್ಯವಾಗಿದೆ. ಸನಾತನ ಧರ್ಮದ ”ಏಕಂ ಸತ್ ವಿಪ್ರಾ ಬಹುಧಾವದಂತಿ”ಎನ್ನುವ ಮಾತನ್ನು ಆಚಾರ್ಯ ಶಂಕರ ಭಗವತ್ಪಾದರು ಒತ್ತಿ ತಿಳಿಸಿದರು. ಜ್ಞಾನದ ಅತ್ಯುತ್ತಮ ಸ್ತರದಲ್ಲಿನ ಅನುಭವವನ್ನು ಸರ್ವರಿಗೂ ತಲುಪುವಂತೆ ಅನೇಕ ಭಕ್ತಿ ಸ್ತೋತ್ರಗಳನ್ನು ರಚಿಸಿದರು. ಅವರ ಸ್ತೋತ್ರ ಸಾಹಿತ್ಯವು ಕಾವ್ಯಾತ್ಮಕವಾಗಿಯೂ ಶ್ರೇಷ್ಠವಾಗಿದ್ದು ಭಾವ ಪೂರ್ಣ ಹಾಡುವಿಕೆಯಿಂದ ಕೇಳುಗರು ತನ್ಮಯರಾಗುತ್ತಾರೆ’ ಎಂದು ಬೆಂಗಳೂರಿನ ಓಪ್ಟೀವ್ ಇಂಡಿಯಾದ ಉಪಾಧ್ಯಕ್ಷ ಶ್ರೀ ಜಗದೀಶ ಮಯ್ಯ ಇವರು ಸುವಿಚಾರ ಬಳಗ ಟ್ರಸ್ಟ್ ರಿ. ಮತ್ತು ಶಾಂಕರ ತತ್ತ್ವ ಪ್ರಸಾರ ಸಮಿತಿಯ ಆಶ್ರಯದಲ್ಲಿ ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಏರ್ಪಡಿಸಿದ ಸರಣಿ ಕಾರ್ಯಕ್ರಮದ ವಿಶೇಷ ಉಪನ್ಯಾಸ ನೀಡುತ್ತಾ ನುಡಿದರು. ನಾಗೂರು ಸಂದೀಪನ್ ವಿದ್ಯಾಸಂಸ್ಥೆಯ ಮುಖ್ಯಸ್ಥ ಬಿ. ವಿಶ್ವೇಶ್ವರ ಅಡಿಗರು ದೀಪ ಬೆಳಗಿಸಿ ಉದ್ಘಾಟಿಸಿ ‘ನಹಿಜ್ಞಾನೇನ ಸದೃಶಂ’ ಶುದ್ಧ ಜ್ಙಾನ ಪ್ರಾಪ್ತಿಯಿಂದ ಭ್ರಮೆಯ ಬಂಧನ ಹರಿದು ಈ ಬದುಕಿನಲ್ಲಿಯೇ ಸಹಜ ಆನಂದಾನುಭೂತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಳಗಾವಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಭಾರತಿ ಎಂಬ ಹೆಸರಿನ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬೈಂದೂರು ಬೈಪಾಸ್ ಬಳಿಯ ರಾ.ಹೆ 66ರಲ್ಲಿ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಕಡೆಯಿಂದ ಬರುತ್ತಿದ್ದ ಬಸ್ಸು ಬೈಂದೂರು ಬೈಪಾಸ್ ಬಳಿ ಡಿವೈಡರ್ ಕಾಮಗಾರಿಗೆ ಹಾಕಲಾಗಿದ್ದ ಪ್ರತಿಬಂಧಕವನ್ನು ದಾಟುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ಮಗುಚಿದೆ. ಬಸ್ಸಿನ ಗಾಜುಗಳು ಸಂಪೂರ್ಣ ಪುಡಿಯಾಗಿದ್ದ, ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 30 ಪ್ರಯಾಣಿಕರಿದ್ದರು ಎನ್ನಲಾಗಿದೆ. ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಬೈಂದೂರು ಪೋಲಿಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿರುವ ಬಿ.ಎಂ ಸುಕುಮಾರ ಶೆಟ್ಟಿ ಅವರು ಬೈಂದೂರು ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ ಸದಸ್ಯ ಶಂಕರ ಪೂಜಾರಿ, ಟಿ.ಬಿ ಶೆಟ್ಟಿ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಮೊದಲಾದವರು ಉಪಸ್ಥಿತರಿದ್ದರು. ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಲ್ಲಾ ಸಮೀಕ್ಷೆಗಳು ಬಿಜೆಪಿ ವಿರುದ್ಧವಾಗಿದ್ದರೂ, ರಾಜ್ಯದಲ್ಲಿ ಅಧಿಕಾರಿ ಹಿಡಿಯುತ್ತೇವೆ ಎಂಬ ಭ್ರಮಾಲೋಕದಲ್ಲಿ ಬಿಜೆಪಿ ನಾಯಕರಿದ್ದಾರೆ. ನಾಲ್ಕು ಬಾರಿ ಕುಂದಾಪುರದಿಂದ ಆಯ್ಕೆಯಾದ ಶಾಸಕರೇ ತನ್ನ ಜವಾಬ್ದಾರಿ ನಿಭಾಯಿಸದೆ ಶಾಸಕರಿಲ್ಲದ ಕ್ಷೇತ್ರಕ್ಕೆ ಮಲ್ಲಿಯಂತಾ ಸಮರ್ಥ ನಾಯಕನ ನಿಲ್ಲಿಸಿದೆ. ಮಾಜಿ ಶಾಸಕರ ಮನೆಯಲ್ಲಿ ಕುರೋದಕ್ಕೆ ಲಾಯ್ಕಾಗಿದ್ದು, ಮಲ್ಲಿ ಶಾಸಕರ ಕರ್ತವ್ಯ ನಿಭಾಯುಸುವ ತಾಕತ್ತಿದ್ದರಿಂದ ಅವರನ್ನು ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ. ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಕ್ಕೆ ಕಳೆದ ಐದು ವರ್ಷದಲ್ಲಿ ಕೋಟ್ಯಾಂತರ ರೂ. ಅನುದಾನ ತಂದು ಅಭಿವೃದ್ಧಿ ಮಾಡಿದರೆ, ಕುಂದಾಪುರ ಶಾಸಕರು ಮನೆಯಲ್ಲಿ ಕೂತು ಕಲಾಹರಣ ಆಡಿದ್ದು, ಬಿಟ್ಟರೆ ಮತ್ತೇನು ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದರು. ಅಭ್ಯರ್ಥಿ ರಾಕೇಶ್ ಮಲ್ಲಿ ಮಾತನಾಡಿ, ಕುಂದಾಪುರ ವಿಧಾನ ಸಭೆ ಅಭಿವೃದ್ಧಿ ನನ್ನ ಕನಸಾಗಿದ್ದು, ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಈ ಬಾರಿ ಮತದಾರರು ಕಾಂಗ್ರೆಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಇಂದು ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಸಾವಿರಾರು ಭಕ್ತಸಮೂಹ ಪಾಲ್ಗೊಂಡು ಪುನೀತರಾಗುತ್ತಾರೆ. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯಕ್ಕೆ ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಮಧ್ಯಾಹ್ನ ರಥೋತ್ಸವಕ್ಕೆ ಚಾಲನೆ ನೀಡಿದರೆ, ಸಂಜೆಯ ವೇಳೆಗೆ ರಥವನ್ನು ರಥಬೀದಿಯ ಉದ್ದಕ್ಕೂ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ರಥೋತ್ಸವದ ಪೂರ್ವದಲ್ಲಿ ಮುಸ್ಲಿಂ ಭಾಂದವರನ್ನು ಆಹ್ವಾನಿಸುವ, ರಥೋತ್ಸವದ ಆರಂಭದಲ್ಲಿ ಬೈಂದೂರಿನ ಪೊಲೀಸ್ ಠಾಣಾಧಿಕಾರಿಯನ್ನು ಕರೆತಂದು ಚಾಲನೆ ದೊರಕಿಸುವ ಸಂಪ್ರದಾಯ ಇಂದಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐ (ಎಂ) ಪಕ್ಷದ ಅಭ್ಯರ್ಥಿ ಸುರೇಶ್ ಕಲ್ಲಾಗಾರ ಅವರು ಬೈಂದೂರು ಚುನಾವಣಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶ್ರೀನಿವಾಸ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭ ಸಿಪಿಐ(ಎಂ) ಪಕ್ಷದ ಬಾಲಕೃಷ್ಣ ಶೆಟ್ಟಿ, ವೆಂಕಟೇಶ ಕೋಣಿ,ದಾಸ ಭಂಡಾರಿ, ಗಣೇಶ ತೊಂಡೆಮಕ್ಕಿ ಮುಂತಾದವರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರವಿ ಶೆಟ್ಟಿ ಬೈಂದೂರು ಚುನಾವಣಾ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜೆ.ಡಿ.ಎಸ್ ಪಕ್ಷದ ಕೆಂಚನೂರು ಶಾಲನಿ ಶೆಟ್ಟಿ, ಸಂದೇಶ್ ಭಟ್ ಉಪ್ಪುಂದ, ಯೋಗೀಶ ಶೆಟ್ಟಿ, ಮಂಜಯ್ಯ ಶೆಟ್ಟಿ, ಮನ್ಸೂರ್ ಇಬ್ರಾಹಿಂ ಹಾಜರಿದ್ದರು. ಚುನಾವಣಾಧಿಕಾರಿ ಶ್ರೀನಿವಾಸ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭ ಬೈಂದೂರು ತಹಶೀಲ್ದಾರ ಪುರಂದರ ಹೆಗಡೆ ಉಪಸ್ಥಿತರಿದ್ದರು.
