ಬೈಂದೂರು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ವಾರ್ಷಿಕ ಜಾತ್ರೆಯು ಡಿಸೆಂಬರ್ ೨೬ರಂದು ನಡೆಯಲಿದ್ದು, ಶಾಸಕ ಕೆ. ಗೋಪಾಲ ಪೂಜಾರಿ ನೇತೃತ್ವದಲ್ಲಿ ದೇವಳದ ಸಭಾಭವನದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಪ್ರದಾಯದಂತೆ ನಡೆಸಿಕೊಂಡು ಬರುವುದರೊಂದಿಗೆ, ಜಾತ್ರೆಯು ಶಿಸ್ತುಬದ್ದವಾಗಿ ನಡೆಸಲು ಸ್ವಯಂ ಸೇವಕರನ್ನು ಬಳಸಿಕೊಳ್ಳಬೇಕು ಅದಕ್ಕಾಗಿ ಸ್ಥಳಿಯ ಮಿನೂಗಾರ ಸಂಘಟನೆ, ಸ್ವಸಹಾಯ ಗುಂಪುಗಳು ಹಾಗೂ ಯುವಕಮಂಡಳಿಗಳ ಸದಸ್ಯರ ಸೇವೆಗಳನ್ನು ಬಳಸಿಕೊಳ್ಳಬೇಕು ಎಂದು ಶಾಸಕರು ಸಲಹೆ ನೀಡಿದರು. ಮುಖ್ಯವಾಗಿ ಕುಡಿಯುವ ನೀರು, ಸ್ವಚ್ಚತೆ ಹಾಗೂ ಸುವ್ಯವಸ್ಥೆಗೆ ಹೆಚ್ಚು ಪಾಮುಖ್ಯತೆ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೆಶನ ನೀಡಿದರು, ಜಾತ್ರಾ ಮಹೋತ್ಸವವು ಯಶಸ್ವಿಯಾಗಿ ನಡೆಯಲು ಹಾಗೂ ದೇವಳದ ಕೆರೆಯ ಪುನರನಿರ್ಮಾಣ ಹಾಗೂ ರಥಬೀದಿ ಕಾಂಕ್ರೇಟ್ ರಸ್ತೆ ನಿರ್ಮಿಸಿ ಕೊಡುವ ಸಂಪೂರ್ಣ ಭರವಸೆಯನ್ನು ಸಹ ಶಾಸಕರು ನೀಡಿದರು. ಉಪ್ಪುಂದ ಗ್ರಾಪಂ ಅಧ್ಯಕ್ಷೆ ದುಗ್ಗಮ್ಮ, ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ದೇವಳದ ಪ್ರದಾನ ಅರ್ಚಕ ಪ್ರಕಾಶ ಉಡುಪ, ವ್ಯವಸ್ಥಾಪನಾ ಸಮಿತಿ…
Author: ನ್ಯೂಸ್ ಬ್ಯೂರೋ
ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ಗಾಯನ ಸ್ಪರ್ಧೆಯಲ್ಲಿ ಉದ್ಯಮಿ ರವಿರಾಜ್ ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರೋಟರಿ ಕ್ಲಬ್ ಕುಂದಾಪುರದ ಪೂರ್ವಾದ್ಯಕ್ಷರಾಗಿ, ಪ್ರಸಕ್ತ ಸಾಲಿನಲ್ಲಿ ರೋಟರಿ ವಲಯ 1ರ ಕ್ರೀಡಾ ಸಂಯೋಜಕರಾಗಿ, ಹಂಗಳೂರಿನ ಗೆಳೆಯರ ಬಳಗದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ.
ಕುಂದಾಪುರ: ದೃಶ್ಯ ಮಾಧ್ಯಮಗಳು ನಮ್ಮನ್ನು ಮಾನಸಿಕವಾಗಿ ಬಡವರನ್ನಾಗಿಸುತ್ತಿವೆ. ಇಂದಿನ ಯುವಕರು ಟಿ.ವಿ ಮೊಬೈಲಿನಲ್ಲಿಯೇ ಕಳೆದುಹೋಗುತ್ತಿದ್ದಾರೆ. ಏನನ್ನಾದರೂ ಮಾಡಿ ಪ್ರಸಿದ್ಧಿ ಪಡೆಯುವ ಗೀಳು ಹತ್ತಿಸಿಕೊಂಡಿದ್ದಾರೆ. ಆದರೆ ಪುಸ್ತಕದ ಓದು, ಸಾಹಿತ್ಯ ನಮ್ಮನ್ನು ಶ್ರೀಮಂತಗೊಳಿಸುವುದಲ್ಲದೇ, ಮಾನಸಿಕವಾಗಿಯೂ ಸದೃಡರನ್ನಾಗಿಸುತ್ತದೆ ಎಂದು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಆರ್ಥಿಕ ನಿಯಂತ್ರಕ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು. ಅವರು ಕಂದಾವರ ರಘುರಾಮ ಶೆಟ್ಟಿ ಅಭಿನಂದನಾ ಸಮಾರಂಭ ’ಕಂದಾವರ-೮೦’ರಲ್ಲಿ ಅಭಿನಂದನಾ ಗ್ರಂಥ ಕೆಂದಾವರೆ ಬಿಡುಗಡೆಗೊಳಿಸಿ ಮಾತನಾಡಿದರು. ಯಕ್ಷಗಾನ ಕಲಾವಿದರು, ವೇಷಭೂಷಣ ಸೇರಿದಂತೆ ಎಲ್ಲಾ ಪ್ರಕಾರಗಳ ದಾಲೀಕಣವಾದಾಗ ಅದು ಮುಂದಿನ ಜನಾಂಗ ತಲುಪಿ ತನ್ನ ನಿರಂತರತೆ ಕಾಯ್ದುಕೊಳ್ಳುತ್ತದೆ. ಕಂದಾವರ ರಘುರಾಮ ಶೆಟ್ಟಿಯವರಂತಹ ಪ್ರಸಂಗಕರ್ತರ ಉತ್ಕೃಷ್ಟವಾದ ಸಾಹಿತ್ಯ ಕೃತಿಗಳು ಮುಂದಿನ ಜನಾಂಗಕ್ಕೆ ಬೆಳಕಾಗಬೇಕಿದೆ ಎಂದರು. ಬಸ್ರುರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೆಶ್ವರ ದೇವಸ್ಥಾನ ಧರ್ಮದರ್ಶಿ ಸೀತಾರಾಮ ಶೆಟ್ಟಿ, ಪೋಲ್ಯ ಉಮೇಶ್ ಶೆಟ್ಟಿ, ಎಂಐಟಿ ಮಣಿಪಾಲದ ಪ್ರಾಧ್ಯಾಪಕ ಎಸ್.ವಿ. ಉದಯಕುಮಾರ್ ಶೆಟ್ಟಿ, ಬಸ್ರೂರು…
ಕುಂದಾಪುರ: ಮನೆಯ ಎದುರಿಗೆ ಹಾಕುವ ರಂಗೋಲಿ ಮಂಗಳ ಸೂಚಕ. ಇದು ನಮ್ಮ ಸಂಸ್ಕೃತಿಯ ಪ್ರತಿಬಿಂಬವಿದ್ದಂತೆ. ಇಂತಹ ಕಲೆಗಳು ಬದುಕಿನ ಅವಿಭಾಜ್ಯ ಅಂಗವಾಗಿ ಬೆಳೆದಾಗ ಅದು ಕಲಾಕಾರನಿಗೂ ಮುದ ನೀಡುತ್ತದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು. ಕುಂದಪ್ರಭ ಕುಂದಾಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆನೆಗುಡ್ಡೆ ಶ್ರೀ ವಿನಾಯಕ ದೇವಳದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ರಂಗೋಲಿ ಸ್ವರ್ಧೆಯಲ್ಲಿ ಹಾಗೂ ಪ್ರದರ್ಶನವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಬ್ಯಾಂಕ್ ನಿರ್ದೇಶಕ ಡಾ. ಎಚ್, ರಾಮಮೋಹನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಧರ್ಮದರ್ಶಿ ರಮಣ ಉಪಾಧ್ಯಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ದುಗ್ಗೇ ಗೌಡ, ಜನಪದ ಸಂಶೋಧಕ ಕನರಾಡಿ ವಾದಿರಾಜ ಭಟ್, ಕುಂದಾಪುರ ಶ್ರೀ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಸುರೇಶ್ ಬೆಟ್ಟಿನ್, . ಕೆ.ಕೆ ರಾಮನ್, ಎಸ್. ಸೋಮಶೇಖರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕುಂದಪ್ರಭ ಸಂಪಾದಕ ಯು.ಎಸ್. ಶೆಣೈ ಸ್ವಾಗಿತಿಸಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ…
ಕುಂದಾಪುರ: ರಕ್ತದಾನ ಎಲ್ಲಾ ದಾನಗಳಿಗಿಂತ ಮಿಗಿಲಾದುದು. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವೂ ಸುಧಾರಿಸುವುದಲ್ಲದೇ ಇನ್ನೊಂದು ಜೀವವನ್ನು ಉಳಿಸಿದ ಪುಣ್ಯವೂ ಲಭಿಸುತ್ತದೆಎಂದು ಉದ್ಯಮಿ ಸುರೇಶ್ ಡಿ. ಪಡುಕೋಣೆ ಹೇಳಿದರು. ಕುಂದಾಪುರ ದೇವಾಡಿಗ ಸಮಾಜ ಸೇವಾ ಸಂಘ ಹಾಗೂ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಆಶ್ರಯದಲ್ಲಿ ನಡೆದ ಸ್ವಯಂ ಪ್ರೆರೀತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆನ್ನು ಕುಂದಾಪುರ ದೇವಾಡಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ನಾರಾಯಣ ದೇವಾಡಿಗ ವಹಿಸಿದ್ದರು. ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ, ಲಯನ್ಸ್ ಮಣಿಪಾಲದ ಅಧ್ಯಕ್ಷ ಬಿ.ಜಿ. ಮೋಹನ್‌ದಾಸ್, ಕುಂದಾಪು ರೆಡ್‌ಕ್ರಾಸ್ ವೈದ್ಯಾಧಿಕಾರಿ ಎಚ್.ಎಸ್. ಮಲ್ಲಿ, ಮಾಜಿ ಜಿ.ಪಂ ಉಪಾಧ್ಯಕ್ಷ ರಾಜು ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ದೇವಾಡಿಗ ಸಮಾಜದ ಮಾಜಿ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಕಾರ್ಯಕ್ರಮ ನಿರೂಪಿಸಿದರು. ಉದಯ ಹೇರಿಕುದ್ರು ವಂದಿಸಿದರು.
ಬೈಂದೂರು: ಶ್ರೀಕ್ಷೇತ್ರದ ವತಿಯಿಂದ ಮದ್ಯಮುಕ್ತ ಗ್ರಾಮವನ್ನಾಗಿಸಲು ಪ್ರತೀ ಗ್ರಾಮ ಮಟ್ಟದಲ್ಲಿ ಮದ್ಯವರ್ಜನ ಶಿಬಿರಗಳ ಮೂಲಕ ಕುಡಿತಕ್ಕೆ ದಾಸರಾಗಿರುವವರ ಮನಪರಿವರ್ತಿಸಿ ಅವರು ನವಜೀವನ ನಡೆಸುವ ಮಾರ್ಗವನ್ನು ರೂಪಿಸುತ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ವೈನ್ ಶಾಪ್ ಮಾಲಿಕರು ಹಳ್ಳಿ ಹಳ್ಳಿಗಳ ಗೂಡಂಗಡಿಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿ ಅಲ್ಲಿ ಮಾರಾಟ ಮಾಡಿಸುತ್ತಿದ್ದಾರೆ. ಇದರಿಂದ ಆ ಪ್ರದೇಶಗಳ ಪ್ರತೀ ಮನೆಗಳಲ್ಲಿ ಕುಡಿತದ ಚಟವು ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಕಳವಳ ವ್ಯಕ್ತಪಡಿಸಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಉಪ್ಪುಂದ, ಖಂಬದಕೋಣೆ ವಲಯದ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಜನಜಾಗೃತಿ ವೇದಿಕೆ ಕುಂದಾಪುರ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಹಾಗೂ ಇತರ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ೮೯೩ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಹಳ್ಳಿಪ್ರದೇಶಗಳ ಗೂಡಂಗಡಿಯಲ್ಲಿ ಮದ್ಯ…
ಕೊಲ್ಲೂರು: ಕೊಲ್ಲೂರಿನಲ್ಲಿ ರಾಜ್ಯ ಸರಕಾರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಖಾಂತರ ದೇವಳದ ವತಿಯಿಂದ ನಡೆದ ರೂ. 26 ಕೋಟಿ ವೆಚ್ಚದ ದೇವಳ ಹಾಗೂ ನಗರಕ್ಕೆ ಶುದ್ಧಿಕರಿಸಿದ ನೀರು ಸರಬರಾಜು, ಒಳಚರಂಡಿ ಮತ್ತು ಕೊಳಚೆನೀರು ಶುದ್ಧಿಕರಣ ಘಟಕ ನಿರ್ಮಾಣ ಕಾಮಗಾರಿಗೆ ರಾಜ್ಯ ನಗರಾಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ, ಕಾರ್ಯನಿರ್ವಹಣಾಧಿಕಾರಿ ಟಿ.ಆರ್.ಉಮಾ, ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ವಿ. ಪ್ರಸನ್ನ, ಗ್ರಾಪಂ ಅಧ್ಯಕ್ಷ ಕೆ. ಎನ್. ವಿಶ್ವನಾಥ ಅಡಿಗ, ಸಹಾಯಕ ಇಓ ಹೆಚ್. ಕೃಷ್ಣಮೂರ್ತಿ, ಜಿಪಂ ಸದಸ್ಯೆ ಸುಪ್ರೀತಾ ದೀಪಕ್ ಶೆಟ್ಟಿ, ತಾಪಂ ಸದಸ್ಯ ಕೆ. ರಮೇಶ ಗಾಣಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ.ಅತುಲ್‌ಕುಮಾರ್ ಶೆಟ್ಟಿ, ಶ್ರೀನಿವಾಸ ಕಲ್ಲೂರಾಯ, ಗುತ್ತಿಗೆದಾರ ವಾಸುದೇವ ಶೆಟ್ಟಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರು: ಹಿರಿಯರನ್ನು ಗೌರವಿಸುವುದು ನಮ್ಮ ಮಣ್ಣಿನ ಗುಣ ಹಾಗೂ ನಾಡಿನ ಸಂಸ್ಕೃತಿ. ಇದರಿಂದ ನಮ್ಮನ್ನ ನಾವು ಗೌರವಿಸಿಕೊಂಡಂತೆ. ಪ್ರತಿಯೊಬ್ಬರೂ ಇದನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಸಾರ್ಥಕತೆ ಕಾಣಬಹುದು ಎಂದು ಶಿಕ್ಷಕ ತಿಮ್ಮಪ್ಪ ಗಾಣಿಗ ಹೇಳಿದರು. ಬೈಂದೂರು ಶಾಸಕರ ಮಾದರಿ ಸರಕಾರಿ ಶಾಲೆಯಲ್ಲಿ ನೆಹರೂ ಜನ್ಮದಿನಾಚರಣೆಯ ಅಂಗವಾಗಿ ನಡೆದ ಶಾಲೆಯ ಎಲ್ಲಾ 251 ಮಕ್ಕಳ ಸಾಮೂಹಿಕ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಮೊದಲ ಪ್ರಧಾನಿ ಮಕ್ಕಳ ಪ್ರೀತಿಯ ಚಾಚಾನೆಹರು ಅವರ ಅಪೇಕ್ಷೆಯಂತೆ ಮಕ್ಕಳು ದೇವರಿಗೆ ಸಮಾನ ಎಂಬ ನೆಲೆಯಲ್ಲಿ ನ.14 ಮಕ್ಕಳ ದಿನಾಚರಣೆಯಾಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ. ಮಕ್ಕಳಲ್ಲಿ ಬಡವ-ಬಲ್ಲಿದ, ಜಾತಿ-ಧರ್ಮಗಳ ಭೇಧವಿರಬಾರದು. ಪರಿಸರ, ಸಹವಾಸಗಳಿಂದ ಮಕ್ಕಳು ಕೆಟ್ಟವಿಚಾರಗಳನ್ನು ಕಲಿಯದಂತೆ ಪಾಲಕರು ಎಚ್ಚರವಹಿಸಬೇಕು. ಮಕ್ಕಳಿಗೆ ಎಳೆವೆಯಲ್ಲಿ ಸ್ವಾರ್ಥಬುದ್ಧಿ ಕಲಿಸಿದರೆ ಮುಂದೆ ಅದು ಹೆಮ್ಮರವಾಗುವುದು. ಆದ್ದರಿಂದ ಮನೆಯಿಂದಲೆ ವಿದ್ಯಾರ್ಥಿಗಳಿಗೆ ಜೀವನದ ಪಾಠ ಆರಂಭಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು. ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಅತೀಕಿರಿಯ ವಯಸ್ಸಿನ ಅಭಿರಾಮ್ ಹಾಗೂ ಮಹಿಮ್ ಸಾಂಕೇತಿಕವಾಗಿ 21…
ಕುಂದಾಪುರ: ಸೌತ್ ಕೆನರಾ ಪೊಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ ವಲಯ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಮುದ್ದುಕಂದ ಛಾಯಾಚಿತ್ರ ಸ್ಪರ್ಧೆ ಬಹುಮಾನ ವಿತರಣೆ ಕುಂದಾಪುರ ಅಕ್ಷತಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಆದ್ಯಾ ಜೋಶಿ ಪ್ರಥಮ, ಪರಿಣ್ಯ ದ್ವಿತೀಯ ಮತ್ತು ಪ್ರಾಪ್ತಿ ನೆಲ್ಲಿ ತೃತೀಯ ಹಾಗೂ ವಿಜಯ ಶೆಣೈ, ಆರ್ಯನ್, ಪ್ರಥ್ಯೂಸ್ ಶೆಟ್ಟಿ ಸಮಾಧಾನಕರ ಬಹುಮಾನ ಪಡೆದರು. ಛಾಯಾಚಿತ್ರಗಾಕಾರರಾದ ಅಶೋಕ್ ಕುಮಾರ್ ಶೆಟ್ಟಿ, ಪ್ರಮೋದ್ ಚಂದನ್, ಉದಯ ಪಡಿಯಾರ್, ಗಣೇಶ್ ಕೆ. ತೀರ್ಪುಗಾರರಾಗಿದ್ದರು. ಫಿಕ್ಸಲ್ ಕ್ರಿಯೇಶನ್ ಸುರೇಶ್ ವಿಜೇತರಿಗೆ ಬಹುಮಾನ ವಿತರಿಸಿದರು. ಸಂಸ್ಥೆ ಗೌರವಾಧ್ಯಕ್ಷ ರಾಬರ್ಟ್ ಡಿಸೋಜಾ, ಉಪಾಧ್ಯಕ್ಷ ದೊಟ್ಟಯ್ಯ ಪೂಜಾರಿ, ರಾಜಾ ಮಠದಬೆಟ್ಟು, ಗಿರೀಶ್ ಚಿತ್ತೂರು, ಕೋಶಾಧಿಕಾರಿ ಚಂದ್ರಕಾಂತ್ ಇದ್ದರು. ಸಂಸ್ಥೆ ಅಧ್ಯಕ್ಷ ಗ್ರೇಶನ್ ಡಯಾಸ್ ಸ್ವಾಗತಿಸಿದರು. ಸುರೇಶ್ ಮೊಳಹಳ್ಳಿ ನಿರೂಪಿಸಿದರು. ಪ್ರಮೋದ್ ಚಂದನ್ ವಂದಿಸಿದರು.
ಕುಂದಾಪುರ: ಪುರಸಭೆ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಶ್ರೇಯೋಭಿವೃದ್ಧಿ ಸಮಿತಿ, ಶಿಶು ಅಭಿವೃದ್ಧಿ ಯೋಜನೆ, ರಾಮಕ್ಷತ್ರಿಯ ಸಂಘ, ಅಂಗನವಾಡಿ ಕಾರ‍್ಯಕರ್ತೆಯರ ಸಹಾಯಕಿಯರ ಸಂಘ ಆಶ್ರಯದಲ್ಲಿ ಕುಂದಾಪುರ ರಾಮಮಂದಿರದಲ್ಲಿ ಪುರಸಭೆ ವ್ಯಾಪ್ತಿಯ ಅಂಗನಾವಡಿ ಮಕ್ಕಳ ದಿನಾಚರಣೆ ನಡೆಯಿತು. ಕುಂದಾಪುರ ಮಹಿಳಾ ಮತ್ತು ಮಕ್ಕಳ ಶ್ರೇಯೋಭಿವೃದ್ಧಿ ಸಮಿತಿ ಅಧ್ಯಕ್ಷೆ ಗುಣರತ್ನಾ ಉದ್ಘಾಟಿಸಿದರು. ಕುಂದಾಪುರ ಪುರಸಭೆ ಅದ್ಯಕ್ಷೆ ಕಲಾವತಿ ಯು.ಎಸ್.ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭೆ ಸದಸ್ಯರಾದ ರಾಜೇಶ್ ಕಾವೇರಿ, ರವಿರಾಜ್ ಖಾರ್ವಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಎಲ್.ಗುನ್ಸಾಲ್ವಿಸ್, ಸಿಡಿಪಿಓ ಸದಾನಂದ ನಾಯ್ಕ್ ಇದ್ದರು. ಅಂಗನವಾಡಿ ಕಾರ‍್ಯಕರ್ತೆಯರ ಸಹಾಯಕಿಯರ ಸಂಘ ಅಧ್ಯಕ್ಷೆ ಉಷಾ ಕೆ.ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾಗೀರಥಿ ಹೆಬ್ಬಾರ್ ಸ್ವಾಗತಿಸಿದರು. ಹರ್ಷವರ್ಧನ್ ಖಾರ್ವಿ ನಿರೂಸಿದರು. ಪ್ರೇಮಾ ವಂದಿಸಿದರು.
