Author: ನ್ಯೂಸ್ ಬ್ಯೂರೋ

ಪಾದಾಚಾರಿ ಕೋಟ ಜೋಗಿ ಸಮಾಜದ ಅಧ್ಯಕ್ಷ ನಾರಾಯಣ ಬಳೆಗಾರ್ ಗಂಭೀರ ನ್ಯಾಯವಾದಿ ಬನ್ನಾಡಿ ಸೋಮಶೇಖರ ಹೆಗ್ಡೆ ಅವರ ಸಮಯಪ್ರಜ್ಞೆಯಿಂದ ಗಾಯಾಳುಗಳು ಶೀಘ್ರ ಆಸ್ಪತ್ರೆಗೆ ದಾಖಲು ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಮೂರುಕೈ ರಾಷ್ಟ್ರೀಯ ಹೆದ್ದಾರಿಯ ಬಳಿ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ, ರಸ್ತೆಯ ಬದಿಯಲ್ಲಿ ಸಾಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿ ಮೂವರೂ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆಯ ವೇಳೆಗೆ ವರದಿಯಾಗಿದೆ. ಕೋಟ ಮೂರುಕೈ ಯಿಂದ ಗೋಳಿಯಂಗಡಿ ತೆರಳಲು ಯುಟರ್ನ್ ಇರುವ ಮಾರ್ಗ ಹಾಗೂ ವಿವೇಕ ಪದವಿಪೂರ್ವ ಕಾಲೇಜು ಇರುವಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋಟ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು. ಸಂಜೆ ವೇಳೆಗೆ ಉಡುಪಿ ಕಡೆಯಿಂದ ವೇಗವಾಗಿ ಬಂದ 407 ಗೂಡ್ಸ್ ವಾಹನವು ಕೋಟ ಮೂರು ಕೈ ಬಳಿಯ ಬ್ಯಾರಿಕೇಡ್ ಗಮನಿಸದೆ, ಹಠಾತ್ ಬ್ರೇಕ್ ಹಾಕುವ ಪ್ರಯತ್ನ ನಡೆಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ವಾಹನ ಪಲ್ಟಿಯಾಗಿತ್ತು. ಇದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾಡ ಗ್ರಾಮದ ಚುಂಗಿಗುಡ್ಡೆ ಪ್ರಕಾಶ ಹೆಬ್ಬಾರ್ ಅವರನ್ನು ಮಂಡ್ಯದ ಡಾ. ಜೀ.ಶಂ.ಪ ಸಾಹಿತ್ಯ ವೇದಿಕೆಯು ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ. ವೇದಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಂಬಾಡಿ ದಿನಪತ್ರಿಕೆಯ ಸಹಯೋಗದಲ್ಲಿ ಮೇ 26ರಂದು ಮಂಡ್ಯ ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿರುವ ಕವಿಕಾವ್ಯ ಮೇಳದಲ್ಲಿ ಪ್ರಶಸ್ತಿ ಪ್ರದಾನ ನಡೆಯುವುದು. ಕವಿಗಳೂ, ಸಾಹಿತ್ಯ ಪರಿಚಾರಕರೂ ಆಗಿರುವ ಹೆಬ್ಬಾರ್ ಚುಂಗಿಗುಡ್ಡೆ ಪರಮೇಶ್ವರ ಹೆಬ್ಬಾರ್, ಅಕ್ಕಮ್ಮ ಹೆಬ್ಬಾರ್ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ದುಡಿಯುವವರಿಗೆ ಹತ್ತಾರು ತೊಡಕುಗಳು ಎದುರಾಗುವುದು ಸಹಜ. ಅವುಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನುಗ್ಗಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ. ಕ್ರೀಯಾತ್ಮಕ ಚಟುವಟಿಕೆಗಳಿಂದ ಸಂಘಟನೆಯ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಪರ್ಕಳ ಅರುಣ್ ಭಂಡಾರಿ ಹೇಳಿದರು. ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆದ ಸವಿತಾ ಸಮಾಜದ ವಾರ್ಷಿಕ ಮಹಾಸಭೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಮಾಜದವರು ಈಗ ಎಲ್ಲಾ ಕ್ಷೇತ್ರಗಳಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಾಣುತ್ತಿದ್ದಾರೆ. ನಮಗೆ ಜಾತಿ ಪ್ರಜ್ಞೆ ಇಲ್ಲದಿದ್ದರೆ ಏನೂ ಸಾಧಿಲಾಗದು. ಈ ದಿಸೆಯಲ್ಲಿ ಸಂಘಟನೆಯ ಮೂಲಕ ಒಗ್ಗಟ್ಟಿನಿಂದ ಹೋರಾಟಮಾಡಿ ನಮ್ಮ ಸವಲತ್ತುಗಳನ್ನು ಕೇಳಿ ಪಡೆಯಬೇಕು. ನಮ್ಮ ಮುಂದಿನ ಪೀಳಿಗೆಗೆ ಕುಲಕಸುಬುಗಳ ಅರಿವು ಮೂಡಿಸುವ ಅನಿವಾರ್ಯತೆಯಿದೆ ಎಂದರು. ಬೈಂದೂರು ವಲಯ ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಮಲ್ಯ ಅಧ್ಯಕ್ಷತೆವಹಿಸಿದ್ದರು. ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೮೦ಕ್ಕಿಂತ ಅಧಿಕ ಅಂಕಗಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ ಒಟ್ಟು 304 ವಿದ್ಯಾರ್ಥಿಗಳ ಪೈಕಿ 98 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರೇ, 167 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 26 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 186 ವಿದ್ಯಾರ್ಥಿಗಳ ಪೈಕಿ 174 ಮಂದಿ ತೇರ್ಗಡೆ ಹೊಂದಿದ್ದರೇ, ವಾಣಿಜ್ಯ ವಿಭಾಗದಲ್ಲಿ 118 ವಿದ್ಯಾರ್ಥಿಗಳ ಪೈಕಿ 116 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಾಲೇಜಿನಲ್ಲಿ ವಿಶಿಷ್ಟ ಸಾಧನೆಗೈದಿರುವ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ನವೀನ್‌ಕುಮಾರ್ ಶೆಟ್ಟಿ ಹಾಗೂ ಕುಂದಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು 98.68% ಫಲಿತಾಂಶ ಗಳಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 33 ವಿಶಿಷ್ಟ ಶ್ರೇಣಿ, 41 ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕುಮಾರಿ ಸಹನಾ ಭಟ್ ಕೆ (581) ಹಾಗೂ ವಿಜ್ಞಾನ ವಿಭಾಗದಲ್ಲಿ ಕುಮಾರಿ ಚೈತನ್ಯಲಕ್ಷ್ಮಿ (572) ಪ್ರಥಮ ಸ್ಥಾನ ಗಳಿಸಿರುತ್ತಾರೆ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರತಿಶತ 100 ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, 85% ಫತಿತಾಂಶ ದಾಖಲಾಗಿದೆ. ಪರಿಕ್ಷೇಗೆ ಹಾಜರಾದ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ಒಟ್ಟು 475 ವಿದ್ಯಾರ್ಥಿಗಳ ಪೈಕಿ, 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 256 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 87 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.  ವಿಶಿಷ್ಟ ಸಾಧನೆಗೈದ ಕಾಲೇಜಿಗೆ ಅಗ್ರಸ್ಥಾನಿ ವಿದ್ಯಾರ್ಥಿಗಳಾದ ಶರತ್ ಪಿ. 570 ರಮ್ಯಾ 568, ಎ. ನವ್ಯ 561, ದೇವರಾಜ್ 561 ರಾಜೇಶ್ ಪೂಜಾರಿ 560 ಅಂಕ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಜಿಎಸ್‌ವಿಎಸ್ ಅಸೋಶಿಯೇಶನ್ ಆಡಳಿತಕ್ಕೆ ಒಳಪಟ್ಟಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ಇತ್ತೀಚಿಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಶೇ.88 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 176 ವಿದ್ಯಾರ್ಥಿಗಳ ಪೈಕಿ 155 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 97 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಸ್ಕೃತದಲ್ಲಿ ಏಳು ವಿದ್ಯಾರ್ಥಿಗಳು, ವ್ಯವಹಾರ ಅಧ್ಯಯನದಲ್ಲಿ ಮೂವರು ವಿದ್ಯಾರ್ಥಿಗಳು ಮತ್ತು ರಸಾಯನಶಾಸ್ತ್ರದಲ್ಲಿ ಓರ್ವ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿಶಿಷ್ಟ ಶ್ರೇಣೀಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ವಿಜ್ಞಾನ ವಿಭಾಗ : ಅಖಿಲೇಶ್ ಖಾರ್ವಿ – 573, ಕಾರ್ತಿಕೇಯ – 554, ದೀಕ್ಷಿತ್ ಎಸ್ – 553, ಕಾರ್ತಿಕ್ ಕುಮಾರ್ – 541, ದೀಪಿಕಾ ಕೆ – 542, ಅಭಿಷೇಕ್ – 535, ಶಾಝಿಯಾ – 511 ವಾಣಿಜ್ಯ ವಿಭಾಗ : ಅಶ್ವಿನಿ ನಾಯಕ್ – 565, ಪ್ರಸಾದ್ – 539, ಗಣೇಶ ಶೆಣೈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ರಾಜ್ಯದಲ್ಲೇ ಗರಿಷ್ಠ ಪದವಿ ಪೂರ್ವ ವಿದ್ಯಾರ್ಥಿಗಳನ್ನು ಹೊಂದಿರುವ ಆಳ್ವಾಸ್ ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶೇ.99.20 ಫಲಿತಾಂಶ ಪಡೆದಿದೆ. ಇದರೊಂದಿಗೆ ಪಡೆದಿದ್ದು ಕಳೆದ 8 ವರ್ಷಗಳಿಂದ 99 ಶೇ ಪಡೆದ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಲೇಜಿನಿಂದ ಒಟ್ಟು 4,285 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 4,251 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಶೇ 99.20 ಫಲಿತಾಂಶ ಕಾಮರ್ಸ್ ‘ಡಬಲ್’ರ್ಯಾಂಕ್ ಸಾಧನೆವಿಜ್ಞಾನ ವಿಭಾಗದಲ್ಲಿ 3,409 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 3,386 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.99.33 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 815 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 806 ವಿದ್ಯಾರ್ಥಿಗಳು ಉತ್ರ್ತೀಣರಾಗುವುದರೊಂದಿಗೆ ಶೇ.98.90 ಫಲಿತಾಂಶ ಲಭಿಸಿದೆ. 61 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಹಾಜರಾಗಿದ್ದು, 59 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ 96.72 ಫಲಿತಾಂಶ ಗಳಿಸಿದೆ. ವಾಣಿಜ್ಯ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ರಾಜ್ಯಮಟ್ಟದಲ್ಲಿ ಟಾಪ್ ಟೆನ್ ಪಟ್ಟಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯೊಬ್ಬಳು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 98.33% ಅಂಕಗಳಿಸಿ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾಳೆ. ಸುಣ್ಣಾರಿ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ, ಸಳ್ವಾಡಿಯ ಶಹರಿ ಶೆಟ್ಟಿ ವಿಜ್ಞಾನ ವಿಭಾಗದಲ್ಲಿ 590 ಅಂಕಗಳಿಸಿದ ಪ್ರತಿಭಾನ್ವಿತೆ. ತಾಲೂಕಿನ ಕಾಳವಾರ ಗ್ರಾಮದ ಸಳ್ವಾಡಿ ನಡುಮನೆಯಲ್ಲಿ ನೆಲೆಸಿರುವ ಬಿ. ಸದಾನಂದ ಶೆಟ್ಟಿ ಆಲೂರು ಹಾಗೂ ಶಾಂತಾ ಎಸ್. ಶೆಟ್ಟಿ ದಂಪತಿಗಳ ಏಕೈಕ ಪುತ್ರಿಯಾದ ಶಹರಿ ಶೆಟ್ಟಿ ಬಾಲ್ಯದಿಂದಲ್ಲೂ ಶೈಕ್ಷಣಿಕವಾಗಿ ಉತ್ತಮ ಸಾಧನೆಗೈಯುತ್ತಲೇ ಬಂದಿದ್ದಾಳೆ. ಎಸ್.ಎಸ್.ಎಲ್‌ಸಿಯಲ್ಲಿ 98.54% ಅಂಕದೊಂದಿಗೆ ರ‍್ಯಾಂಕ್ ಪಡೆದಿದ್ದ ಶಹರಿ, ಪ್ರಥಮ ಪಿಯುಸಿಯಲ್ಲಿಯೂ 98.56% ಅಂಕಗಳಿಸಿ ದ್ವಿತೀಯ ಪಿಯುಸಿಯಲ್ಲಿಯೂ ಉತ್ತಮ ಸಾಧನೆಗೈಯುವ ಸೂಚನೆ ನೀಡಿದ್ದಳು. ಕಾಳಾವರದ ಸಳ್ವಾಡಿ ಗ್ರಾಮದಿಂದ ಕಾಲೇಜಿಗೆ ತೆರಳಿದರೂ, ಯಾವುದೇ ಟ್ಯೂಷನ್ ಪಡೆಯದೇ ಸ್ವಂತ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾಳೆ. ಪಠ್ಯಪುಸ್ತಕ ಓದಿನ ಜೊತೆಗೆ ಕಥೆ, ಕಾದಂಬರಿಗಳನ್ನು ಓದುವುದರಲ್ಲಿಯೂ ಆಕೆಗೆ ಅತೀವ ಆಸಕ್ತಿ ಹೊಂದಿದ್ದಾಳೆ. ರ‍್ಯಾಂಕ್ ಗಳಿಸಿರುವ ಬಗ್ಗೆ ‘ಕುಂದಾಪ್ರ ಡಾಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಗುರುಕುಲ ಪಿಯು ಕಾಲೇಜಿನಲ್ಲಿ ಪ್ರಸ್ತತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ತೇರ್ಗಡೆ ಹೊಂದುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ. ತೇರ್ಗಡೆಹೊಂದಿದವರ ಪೈಕಿ ೯ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದರೇ, ಉಳಿದವರು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ದ್ವಿತೀಯ ಪ್ರಿಯುಸಿ ವಿದ್ಯಾರ್ಥಿಗಳಾದ ರೆನ್ವಿಕ್ 93.8%, ವಿಲ್ಶಾ93.6 %, ಸಾತ್ವಿಕ್ 93.5%, ಪ್ರಜ್ವಲ್ 89.5%, ಚಂದನ್ 86.6%, ವೈಷ್ಣವಿ 86.3%, ಒಲ್ವಿಯಾ 85.8%, ಜಾಸ್ಮಿನ್ 85.3%, ಸಿದ್ದಾರ್ಥ್ 85% ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳ ಸಾಧನೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ನಿರ್ದೇಶಕರುಗಳಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್. ಶೆಟ್ಟಿ ಅಭಿನಂದಿಸಿದ್ದಾರೆ.

Read More