ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಪಾರದರ್ಶಕ ಹಾಗೂ ನ್ಯಾಯಬದ್ಧವಾದ ಚುನಾವಣಾ ಮಾದರಿಯನ್ನು ಪ್ರಾತ್ಯಕ್ಷಿಕೆಯ ಮೂಲಕವೇ ತಿಳಿಸಿಕೊಟ್ಟಲ್ಲಿ ಭವಿಷ್ಯದಲ್ಲಿ ಚುನಾವಣಾ ರೀತಿನೀತಿಗಳ ಬಗ್ಗೆ ಸ್ಪಷ್ಟ ಕಲ್ಪನೆ ಮೂಡಿಸಲು ಸಾಧ್ಯ ಎಂಬ ಸದಾಶಯದೊಂದಿಗೆ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ರಚನೆಗೆ ರಾಜ್ಯ ವಿಧಾನಸಭಾ ಚುನಾವಣಾ ಮಾದರಿಯಲ್ಲಿಯೇ ವಿದ್ಯಾರ್ಥಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿ ವಿದ್ಯಾರ್ಥಿ ನಾಯಕನನ್ನು ಆಯ್ಕೆ ಮಾಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ನಾಗರತ್ನ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆಯನ್ನು ನಿಯಮಬದ್ಧವಾಗಿ ಮನ್ನೆಡೆಸಿದರು. ಚುನಾವಣೆಗೆ 10 ದಿನ ಮುಂಚೆ ಅಧಿಸೂಚನೆ ಹೊರಡಿಸಲಾಗಿತ್ತು. ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂತೆಗೆತ, ಚುನಾವಣಾ ಪ್ರಚಾರ, ಮತದಾನ, ಮತಗಳ ಎಣಿಕೆ, ಪ್ರಮಾಣವಚನ ಸ್ವೀಕಾರ.. ಹೀಗೆ ಎಲ್ಲಾ ಪ್ರಕ್ರಿಯೆಗಳೂ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ, ನಿಗದಿತ ಸಮಯದ ಚೌಕಟ್ಟಿನಲ್ಲೇ ನಡೆಯಿತು. ನಾಮಪತ್ರ ಸಲ್ಲಿಕೆ: ನಾಮಪತ್ರದ ನಮೂನೆ ಹಾಗೂ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳನ್ನು ಚುನಾವಣಾಧಿಕಾರಿಗಳು ಮೊದಲೇ ಘೋಷಿಸಿದ್ದರು. ಅದರಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸ್ಥಾನದ 7…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ) ಕುಂದಾಪುರ ಇದರ 2016-17ನೇ ಸಾಲಿನ ವಿದ್ಯಾರ್ಥಿ ವೇತನ ನಿರ್ವಾಹಣಾ ಸಮಿತಿಯ ಸಂಚಾಲಕರಾಗಿ ಅಲ್ಸಾಡಿ ಗಣೇಶ ಶೆಟ್ಟಿ ಆಯ್ಕೆಯಾಗಿದ್ದಾರೆ. ಯುವ ಉದ್ಯಮಿ ಗಣೇಶ ಶೆಟ್ಟಿಯವರ ನಾಯಕತ್ವದಲ್ಲಿ ಯುವ ಬಂಟರ ಸಂಘದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಅಗಸ್ಟ್ ತಿಂಗಳಲ್ಲಿ ನಡೆಯಲಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ನಿಗಧಿತ ಅಂಕ ಗಳಿಸಿ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರೀಯರಾಗಿ ಪಾಲ್ಗೋಳ್ಳಬೇಕಾಗಿ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಿಸಿದ ಪೂರ್ವ ಪ್ರಾಥಮಿಕ ತರಗತಿಯನ್ನು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಸಂಖ್ಯೆ ಕುಸಿದು, ಶಾಲೆ ಮುಚ್ಚುವ ಭೀತಿ ಎದುರಾಗಿದೆ. ಮರವಂತೆ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಮತ್ತು ಪೋಷಕರು ಒಂದಾಗಿ ಅಗತ್ಯ ಸೌಲಭ್ಯಗಳನ್ನು ಸೃಜಿಸಿಕೊಂಡು ಪೂರ್ವ ಪ್ರಾಥಮಿಕ ತರಗತಿ ಆರಂಭಿಸುತ್ತಿರುವುದು ಒಂದು ಆಶಾದಾಯಕ ಬೆಳವಣಿಗೆ. ಇದರಿಂದ ಮಕ್ಕಳು ಊರಿನ ಶಾಲೆಯಲ್ಲಿ ಕಲಿಯುವಂತಾಗುತ್ತದೆ. ಶಾಲೆಯಲ್ಲಿ ವಿದ್ಯಾರ್ಥಿ ಸಂಖ್ಯೆಯೂ ಹೆಚ್ಚುತ್ತದೆ. ಇಲ್ಲಿನ ಪ್ರಯತ್ನ ಅನುಕರಣೀಯ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ ಪಟಗಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಸುನಿಲ್‌ಕುಮಾರ ಶೆಟ್ಟಿ, ದಾನಿ ಸತೀಶ ಪೂಜಾರಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಭಟ್ಕಳಕ್ಕೆ ತೆರಳಿದ್ದ ಬೈಂದೂರಿನ ಕೆನರಾ ಸ್ಟಿಕರ್ ಕಟ್ಟಿಂಗ್ ಅಂಗಡಿ ಮಾಲೀಕ ಸಯೀದ್ ಸಾರಂಗ್ (36) ನಾಪತ್ತೆಯಾಗಿರುವ ಘಟನೆ ನಡೆದಿದೆ. ಮರಳಿ ಮನೆಗೆ ಬರುತ್ತೇನೆ ಎಂದು ಹೇಳಿ ಹೊರಟವನ್ನು ವಾರ ಕಳೆದರೂ ಹಿಂತಿರುಗದ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಹುಡುಕಿ ಪರಿಚಯ, ಸಂಬಂಧಿಕರಲ್ಲಿ ವಿಚಾರಿಸಿದರೂ ಫಲಕಾರಿಯಾಗದ ಬೈಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. (08254-251033) ತಿಳಿಸಬೇಕಾಗಿ ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ವಿದ್ಯಾ ಸಂಸ್ಥೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಛಾತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಉದ್ದೇಶಗಳನ್ನು ಈಡೇರಿಸುಕೊಳ್ಳುವಲ್ಲಿ ಛಲ ಮತ್ತು ಪರಿಶ್ರಮ ಇದ್ದಾಗ ಮಾತ್ರ ಯಶಸ್ಸು ನಮ್ಮದಾಗಲು ಸಾಧ್ಯ ಎಂದು ಜಿ.ಎಸ್. ವಿ. ಎಸ್ ಅಸೋಷಿ ಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ರೋಟರಿ ಸಭಾ೦ಗಣದಲ್ಲಿ ನಡೆದ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರ೦ಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿ ಸರಸ್ವತಿ ವಿದ್ಯಾಲಯ ಕಾಲೇಜಿನ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕನ್ನಡ ಉಪನ್ಯಾಸಕ ಎಚ್ ಸುಜಯೀಂದ್ರ ಹಂದೆ ವಿದ್ಯಾಲಯ ಬಳಗವನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶಿಸ್ತು ಪಾಲನೆ ನೀತಿ ನಿಯಮಗಳ ಬಗೆಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ದೊರೆಯುವ ವಿವಿಧ ಸೌಲಭ್ಯ ಗಳ ಬಗೆಗೆ ಹಿಂದಿ ಉಪನ್ಯಾಸಕ ನಾರಾಯಣ ನಾಯ್ಕ್ ಮತ್ತು ಕಛೇರಿ ಪ್ರಬಂಧಕ ಭಾಸ್ಕರ್ ಎಚ್ ಜಿ ವಿವರಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ನಿಷ್ಪಕ್ಷಪಾತವಾದ ವರದಿಗಳ ಮುಂಗಾರು ಪತ್ರಿಕೆಗೆ ತನ್ನದೇ ಆದ ಘನತೆ ತಂದುಕೊಟ್ಟಿದ್ದ ವಡ್ಡರ್ಸೆ ರಘುರಾಮ ಶೆಟ್ಟರು ನಿರ್ಭಿತ ಪತ್ರಿಕೋದ್ಯಮದ ಮೂಲಕ ಸಮಾಜದಲ್ಲಿ ಸಂಚಲನ ಉಂಟು ಮಾಡಿದ ಪತ್ರಕರ್ತರಾಗಿದ್ದರು. ಅವರ ಆದರ್ಶ, ಧ್ಯೇಯ ಧೋರಣೆಗಳನ್ನು ಇಂದಿನ ಪತ್ರಕರ್ತರು ಮನಗಾಣಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಜ್ಞಾನವಸಂತ ಶೆಟ್ಟಿ ಬ್ರಹ್ಮಾವರ ತಿಳಿಸಿದರು. ವಡ್ಡರ್ಸೆ ಮಹಾಲಿಂಗೇಶ್ವರ ಸಭಾಭವನದಲ್ಲಿ ನಿಮ್ಮ ಅಭಿಮತ ಪಾಕ್ಷಿಕ ಪತ್ರಿಕೆ ಹಾಗೂ ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ವಡ್ಡರ್ಸೆಯವರ ಬದುಕು, ಬರಹದ ಕುರಿತು ಅವರು ಮಾತನಾಡಿದರು. ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ ವಡ್ಡರ್ಸೆಯವರು, ಮುಂದೆ ಮುಂಗಾರು ಪತ್ರಿಕೆ ಆರಂಭಿಸುವ ಮೂಲಕ ಹಲವಾರು ಪತ್ರಕರ್ತರಿಗೆ ಅವಕಾಶ ಒದಗಿಸಿದ್ದಾರೆ. ಪತ್ರಿಕೋಧ್ಯಮದ ಜವಾಬ್ದಾರಿ, ಕರ್ತವ್ಯ, ಪತ್ರಕರ್ತನ ಜವಾಬ್ದಾರಿ ಇತ್ಯಾದಿಗಳನ್ನು ಅವರ ವರದಿ, ಬರಹಗಳ ಮೂಲಕ ಮನಗಾಣಬಹುದು ಎಂದರು. ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಭಾಕರ ಆಚಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ನೂತನವಾಗಿ ರಚನೆಗೊಂಡ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗೋಪಾಲ ಪೂಜಾರಿ ಅವರ ಅಭಿಮಾನಿಗಳು ಬೈಂದೂರು ಕಾಂಗ್ರೆಸ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ನಾಲ್ಕು ಭಾರಿ ಶಾಸಕರಾಗಿ ಹತ್ತಾರು ಜನಪರ ಯೋಜನೆಗಳನ್ನು ಈ ಭಾಗದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದಲ್ಲದೇ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಶಾಸಕರನ್ನು ಈ ಭಾರಿಯೂ ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಸರಿಯಲ್ಲ. ಮುಖ್ಯಮಂತ್ರಿಗಳ ಈ ನಡೆಯನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಿಶೇಷ ಪುಷ್ಪಲಂಕಾರ ಸೇವೆಯು ಭಕ್ತಾಧಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ಸುಮಾರು 25 ಸಾವಿರ ರೂ. ಮೌಲ್ಯದ ಮಲ್ಲಿಗೆ ಹೂಗಳಿಂದ ಶ್ರೀ ದೇವಿಯನ್ನು ಅಲಂಕರಿಸಿ, ಮಂಗಳ ವಾದ್ಯ ಘೋಷಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಳದ ಅರ್ಚಕ ಗಣಪತಿ ಸುವರ್ಣ ಪೂಜೆ ನೆರವೇರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು, ವಂಡ್ಸೆ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ಹಾಗೂ ಕೋಟದ ವತಿಯಿಂದ ನಾಲ್ಕನೇ ಭಾರಿಗೆ ರಾಜ್ಯಸಭೆಗೆ ಆಯ್ಕೆಯಾದ ಆಸ್ಕರ್ ಫೆರ್ನಾಂಡಿಸ್ ಅವರನ್ನು ಕಟ್‌ಬೆಲ್ತೂರು ಶ್ರೀ ಭದ್ರಮಹಾಕಾಳಿ ಸಭಾಭವನ ಹಾಗೂ ಕುಂದಾಪುರದ ಆರ್.ಎನ್. ಶೆಟ್ಟಿ ಮಿನಿ ಹಾಲಿನಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಕಟ್‌ಬೆಲ್ತೂರಿನಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಹಿರಿಯಣ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ, ತಾಪಂ ಸದಸ್ಯ ರಾಜು ದೇವಾಡಿಗ, ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಂ.ಎ.ಗಫೂರ್, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ತಾಲೂಕು ಕೆಡಿಪಿ ಸದಸ್ಯ ಪ್ರಸನ್ನಕುಮಾರ್, ಸೇವಾದಳ ಅಧ್ಯಕ್ಷ ಅಶೋಕ್ ಕೊಡವೂರು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಗರಿಗೆ ಯಕ್ಷರಸವನ್ನು ಸವಿಯುವ ಸದಾವಕಾಶ ಸಾಕಷ್ಟು ಒದಗಿ ಬರುತ್ತಿದೆ. ಜೂನ್. 18ರ ಶನಿವಾರ ಬೆಂಗಳೂರಿನ ಕಲಾಕ್ಷೇತ್ರದಲ್ಲಿ ಸಾಲಿಗ್ರಾಮ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷ ಸಮಾಗಮ ನಡೆಯಲಿದೆ. ಸುದೀಪ್ ಶೆಟ್ಟಿ ಹೆಬ್ಬಾಡಿ ಹಾಗೂ ಮೋಹನ್ ಅಂಪಾರು ಅವರ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಯಕ್ಷಗಾನದಲ್ಲಿ ಮೂರು ಪ್ರಸಂಗಗಳಿದ್ದು ಯುಕ್ತಿ ವಿಜಯದಲ್ಲಿ ತೆಂಕು ಬಡಗಿನ ಸವ್ಯಸಾಚಿ ರವೀಂದ್ರ ಶೆಟ್ಟಿ ಹೊಸಂಗಡಿ ಅವರ ಗಾನ, ಸೀತರಾಂ ಕುಮಾರ್, ಅರುಣ್ ಕುಮಾರ್ ಜಾರ್ಕಳ, ಕ್ಯಾದಗಿ ಮಹಾಬಲೇಶ್ವರ ಭಟ್ ಅವರುಗಳ ಹಾಸ್ಯ ರಂಜಿಸಲಿದೆ. ಶಿಷ್ಯ ವಿಜಯದಲ್ಲಿ ಅಂಕೋಲ ಮತ್ತು ಹಿಲ್ಲೂರರ ಸ್ವರ್ಧಾತ್ಮಕ ಭಾಗವತಿಕೆ, ಯಕ್ಷರಂಗದ ಅನುಭವಿ ಕಲಾವಿದರಾದ ಆರ‍್ಗೋಡು, ಕೃಷ್ಣಯಾಜಿ, ಪ್ರಸನ್ನ ಶಶಿಕಾಂತ್ ಅವರುಗಳ ಪಾತ್ರ ಮನಮೆಚ್ಚಲಿದೆ. ಭಕ್ತ ವಿಜಯದಲ್ಲಿ ಅಮೀನ್ ಹಾಗೂ ಮಯ್ಯರ ಸ್ನೇಹಪೂರ್ವಕ ದ್ವಂದ್ವ ಒಂದೆಡೆ, ಜಲವಳ್ಳಿ ಮಂಕಿ, ಬೆದ್ರಾಡಿ ಅವರುಗಳ ಮಾತು, ಗತ್ತು, ಗಾಂಭೀರ್ಯ ಯಕ್ಷಗಾನದ ಮೆರಗು ಹೆಚ್ಚಿಸಲಿದೆ. ಹೀಗೆ ಹತ್ತಾರು ವಿಶೇಷತೆಗಳಿರುವ…
