Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು, ಅಲ್ಲಿಯವರೆಗೆ ಗ್ರಾಮಸ್ಥರ ಹಿತದೃಷ್ಟಿಯಿಂದ ಚರಂಡಿ ಸ್ವಚ್ಛತೆ, ಬೀದಿ ದೀಪ ನಿರ್ವಹಣೆ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ ವೇತನ ಹಾಗೂ ಇಂಧನದ ನಿರ್ವಹಣೆಗೆ ಉಡುಪಿ ಜಿಲ್ಲಾ ಪಂಚಾಯತ್‌ನ ವಿಶೇಷ ತುರ್ತು ಪರಿಹಾರ ನಿಧಿಯಿಂದ ತಕ್ಷಣವೇ ಅನುದಾನ ಒದಗಿಸಬೇಕೆಂದು ಆಗ್ರಹಿಸಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಪಂ ಸದಸ್ಯರು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತು ಕುಂದಾಪುರ ತಾಪಂ ಇಒ ಮಹೇಶ ಕೆ.ಜಿ. ಅವರನ್ನು ಅವರ ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಾದ 15ನೇ ಹಣಕಾಸಿನ ಬಾಕಿ ಹಣ ಹಾಗೂ 16ನೇ ಹಣಕಾಸಿನ ಹೊಸ ಅನುದಾನಗಳು ಕಳೆದ ಎರಡು ವ?ಗಳಿಂದ ಪಂಚಾಯತ್ ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಡಲತೀರದ ಭಾರ್ಗವ, ಜ್ಞಾನಪೀಠ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಹೆಸರಿನಲ್ಲಿ ನೀಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರʼಕ್ಕೆ ಬಿಜೂರಿನ ಉದಯೋನ್ಮುಖ ಪ್ರತಿಭೆ ನಿಹಾರಿಕಾ ಆರ್. ದೇವಾಡಿಗ ಆಯ್ಕೆಯಾಗಿದ್ದಾಳೆ. ​ಈಕೆ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರವಿಕಲಾ ದೇವಾಡಿಗ ಹಾಗೂ ಬೈಂದೂರು ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ದೇವಾಡಿಗ ದಂಪತಿಯ ಸುಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಜನರು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಆಳ್ವಾಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮಹಾಬಲ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ, ಮೂಡುಬಿದಿರೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾದ ‘ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನ’ದ ಅಂಗವಾಗಿ ನಡೆದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾದಕ ದ್ರವ್ಯ ವ್ಯಸನವು ಇಂದಿನ ಸಮಾಜ ಎದುರಿಸುತ್ತಿರುವ ಗಂಭೀರ ಸವಾಲಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಯುವಜನರು ಕುತೂಹಲ, ಸ್ನೇಹಿತರ ಒತ್ತಡ ಅಥವಾ ಕ್ಷಣಿಕ ಆಕರ್ಷಣೆಗೆ ಒಳಗಾಗಿ ಮಾದಕ ವಸ್ತುಗಳ ಸೇವನೆಗೆ ಮುಂದಾಗಬಾರದು. ವ್ಯಸನಕ್ಕೆ ಒಳಗಾದ ಬಳಿಕ ಅದರಿಂದ ಹೊರಬರುವುದು ಕಷ್ಟವಾಗಬಹುದು. ಆದ್ದರಿಂದ ವ್ಯಸನಕ್ಕೆ ತುತ್ತಾಗುವುದಕ್ಕಿಂತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿ ರಸ್ತೆಯ 5 ಕೋಟಿ ರೂ. ವೆಚ್ಚದಲ್ಲಿ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆಯ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಕರೆ ನೀಡಿದರು. ಅವರು ಮಂಗಳವಾರ ಉಡುಪಿ ತಾಲೂಕಿನ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ (ಶಿಲಾನ್ಯಾಸ) ನೆರವೇರಿಸಿ ಮಾತನಾಡಿದರು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 9 ಸೇತುವೆಗಳ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಈಗಾಗಲೇ ಟೆಂಡರ್ ಅನ್ನು ಕರೆಯಲಾಗಿದ್ದು, ಅದರಲ್ಲಿ ಪೆರ್ಡೂರು-ಬೈರಂಪಳ್ಳಿ-ಅಣ್ಣಾಲು ಸಂಪರ್ಕ ಸೇತುವೆಯು ಒಂದಾಗಿದೆ. ಇಂದಿನಿಂದಲೇ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಿ, ತ್ವರಿತವಾಗಿ ಗುಣಮಟ್ಟದೊಂದಿಗೆ ಕೈಗೊಂಡು ಪೂರ್ಣಗೊಳಿಸಲು ಮುಂದಾಗಬೇಕು ಎಂದರು. ಗ್ರಾಮೀಣ ಪ್ರದೇಶಗಳ ರಸ್ತೆ ಸೇರಿದಂತೆ ಮತ್ತಿತರ ಮೂಲ ಸೌಲಭ್ಯಗಳನ್ನು ಒದಗಿಸಲು ಮಾನ್ಯ ಮುಖ್ಯಮಂತ್ರಿಗಳು ವಿಶೇಷ ಅನುದಾನವನ್ನು ನೀಡಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್‌ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಟೂರ್ನಮೆಂಟ್ ’ವಿಂಗ್ಸ್ ಟು ವಿನ್’ ಹೆಸರಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಹಾಗೂ ಎಐಸಿಎಸ್‌ನ ಉಡುಪಿ ಜಿಲ್ಲೆಯ ಕ್ರೀಡಾ ಕಾರ್ಯದರ್ಶಿಗಳಾದ ರೋಲ್ವಿನ್ ಜೊಯ್ ಅರಾನ್ ಅವರು ಮಾತನಾಡಿ, ಆಟವು ಮಕ್ಕಳನ್ನು ಲವಲವಿಕೆಯಿಂದಿರುವಂತೆ ಮಾಡುತ್ತದೆ. ಆಟದಲ್ಲಿ ಗೆಲ್ಲಲು ಎಲ್ಲರೂ ಶ್ರಮಿಸಬೇಕು. ಬೇರೆಯವರು ಗೆದ್ದರೆ ನೋವು ಪಡಬಾರದು. ಬೇರೆ ಬೇರೆ ಶಾಲೆಗಳಾದರೂ ನಾವೆಲ್ಲ ಎಐಸಿಎಸ್‌ನ ವಿದ್ಯಾರ್ಥಿಗಳು. ನಮ್ಮವರ ಸಾಧನೆ ನೋಡಿ ಹೆಮ್ಮೆ ಪಡಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸತತ ಪರಿಶ್ರಮದಿಂದಷ್ಟೇ ಸ್ಪರ್ಧೆಯಲ್ಲಿ ಗೆಲುವು ಸಾಧ್ಯ. ಸ್ವಾಭಿಮಾನದ ಬೆಳವಣಿಗೆಗೆ ಇದು ಪೂರಕ. ಸೋಲು ಕೂಡ ಜೀವನದ ಪಾಠವನ್ನು ನೀಡುತ್ತದೆ. ವಿದ್ಯಾರ್ಥಿಗಳು ಆ ದಿಸೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳು ಸರಕಾರದ ವಿನೂತನ ಕಾರ್ಯಕ್ರಮವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಜನಸಾಮಾನ್ಯರ ಸಮಸ್ಯೆಗಳನ್ನು ಅವರುಗಳ ಮನೆ ಬಾಗಿಲಿನಲ್ಲಿಯೇ ಹೋಗಿ ಆಲಿಸಿ, ನಿಗದಿತ ಸಮಯದಲ್ಲಿ ತ್ವರಿತಗತಿಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಆಶಯವಾಗಿದೆ ಎಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಮಂಗಳವಾರ ಕಾರ್ಕಳದ ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ, ಅವರುಗಳು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಿ, ಆ ಮೂಲಕ ಅವರುಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವ್ಯವಸ್ಥೆಯನ್ನು ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸರಕಾರ ಮಾಡುತ್ತಿದೆ ಎಂದರು. ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅಹವಾಲುಗಳನ್ನು ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ದೀಪಾವಳಿ ಹಾಗೂ ತುಳಸಿ ಪೂಜೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಜಗಮಗಿಸುವ ವಿದ್ಯುತ್ ದೀಪಲಂಕಾರದಿಂದ ಕಾಲೇಜು ಕಂಗೊಳಿಸಿದ್ದು ಮಾತ್ರವಲ್ಲದೆ ವಿಶಿಷ್ಟ ಸುಡುಮದ್ದು ಪ್ರದರ್ಶನವು ಬಾನಂಗಳದಲ್ಲಿ ಬಣ್ಣದ ಚಿತ್ತಾರವನ್ನೇ ಸೃಷ್ಟಿಸಿತು. ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ  ಅಂತರ್ ರಾಷ್ಟ್ರೀಯ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ಮತ್ತು ಬಳಗದವರಿಂದ *ಮಿರಾಕಲ್ ಮ್ಯಾಜಿಕ್* ಜಾದೂ ಪ್ರದರ್ಶನ ನಡೆಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಂಸ್ಥೆಯ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್.ಎಲ್, ಗಣನಾಥ ಶೆಟ್ಟಿ ಬಿ, ಆದರ್ಶ ಎಂ.ಕೆ, ವಿಮಲ್ ರಾಜ್ ಗಣಪತಿ ಭಟ್ ಕೆ.ಎಸ್ , ಅಮೃತ್ ಯು ರೈ ಸಾಕ್ಷಿಭೂತರಾದರು. ದೀಪಾವಳಿ ಹಬ್ಬದ ಆಚರಣೆಯ ವಿಶೇಷತೆ ಹಾಗೂ ಮಹತ್ವದ ಬಗ್ಗೆ ಲೋಹಿತ್ ಎಸ್.ಕೆ. ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಮಂಗಳವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಂಡವು. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ಈ ಭಾರಿ ಡ್ರೋನ್ ಹಾರಾಟ ಹೆಚ್ಚಿದ್ದು ಗರುಡ ಸಂಚಾರಕ್ಕೆ ಅಡಚಣೆಯಾಯಿತು ಎನ್ನಲಾಗಿದೆ. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು ದೇವರಿಗೆ ಪೂಜೆ ಸಲ್ಲಿಸಿದರು. ನವದಂಪತಿ ಕೊಡಿ ಹಬ್ಬದ ದಿನದಂದು ದೇವರ ದರ್ಶನ ಮಾಡಿ ಕಬ್ಬಿನ ಕೊಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಓದು ಬಳಗ, ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ವಿದ್ಯಾರ್ಥಿ ಕವಿಗೋಷ್ಠಿ’ ಕಾರ್ಯಕ್ರಮಕ್ಕೆ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತೃತೀಯ ಬಿ.ಸಿ.ಎ. ವಿದ್ಯಾರ್ಥಿ ವಿಕಾಸ್ ಎಸ್. ಆರ್. ಅವರ ಕವನ ಆಯ್ಕೆಯಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದ್ದ ಕವನಗಳಲ್ಲಿ ವಿಕಾಸ್ ಅವರ ಕವನ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ. ವಿಕಾಸ್ ಎಸ್. ಆರ್. ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್‌.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಮಂಗಳವಾರ ಸಂಭ್ರಮ ಸಡಗರದಿಂದ ನಡೆಯಿತು. ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಿತು. ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಸದಸ್ಯರು ಮತ್ತು ಜಿ.ಎಸ್‌.ಬಿ ಸಮಾಜದ ಪ್ರಮುಖರು ಹಾಗೂ ಭಕ್ತಾಧಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Read More