ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಉದ್ಯಮಿ ರಾಜೇಂದ್ರ ಕೋಡಿ ಅವರು ಪುಸ್ತಕ ಹಾಗೂ ಸಮವಸ್ತ್ರವನ್ನು ಬೈಂದೂರಿನ ಸುಬ್ರಹ್ಮಣ್ಯ ಬಿಜೂರು ಅವರ ಮುಖಾಂತರ ಈ ಕೊಡುಗೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದ್ದಾರೆ. ತದನಂತರ ಮಾತನಾಡಿ, ವಿದ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಮುಖ್ಯ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮುಂದೆ ಬರಬೇಕು ಹಾಗೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಕಲ ಸೌಲಭ್ಯಗಳನ್ನು ನೀಡುವುದರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿಯಲು ಉತ್ತೇಜಿಸಬೇಕು ಎನ್ನುವ ನಿಟ್ಟಿನಲ್ಲಿ ಶಾಲೆಗಳಿಗೆ ಈ ರೀತಿಯ ಕೊಡುಗೆಗಳನ್ನು ನೀಡುತ್ತ ಬಂದಿದ್ದಾರೆ ಎಂದರು. ಉದ್ಯಮಿ ರಾಜೇಂದ್ರ ಕೋಡಿ ಅವರು ಬೆಂಗಳೂರಿನಲ್ಲಿದ್ದುಕೊಂಡು ಸಮಾಜಕ್ಕೆ ಹಾಗೂ ತನ್ನ ಊರಿಗೆ ಏನಾದರೂ ಕೊಡುಗೆಯನ್ನು ಕೊಡಬೇಕು ಎನ್ನುವ ಉದ್ದೇಶದಿಂದ ಹಲವಾರು ಈ ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಕೊಂಡಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಅಕ್ಷಯ್ ತಗ್ಗರ್ಸೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಮುಖ್ಯ ಶಿಕ್ಷಕಿ ಮಾಲತಿ ಹಾಗೂ ರಾಘವೇಂದ್ರ ಉಪಸ್ಥಿತರಿದ್ದರು .ಶಿಕ್ಷಕಿ ಸಾರಿಕ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇದರ ಡಾ. ಹೆಚ್ ಶಾಂತರಾಮ್ ಕಂಪ್ಯೂಟರ್ ಸೈನ್ಸ್ ಬ್ಲಾಕ್ ನಲ್ಲಿ ಹೊಸದಾಗಿ ನಿರ್ಮಿಸಲಾದ ಡೇಟಾ ಸೈನ್ಸ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಪ್ರಯೋಗಲಾಯವನ್ನು ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತರಾಮ್ ಪ್ರಭುಗಳು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಮ್. ಗೊಂಡ, ಗಣಕಯಂತ್ರ ವಿಭಾಗ ಮುಖ್ಯಸ್ಥರಾದ ಗಣೇಶ್ ಕೆ., ವಿಭಾಗದ ಎಲ್ಲಾ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನೋವನ್ಸಾ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ಶಿಪ್ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಗಳಾದ ಆದ್ಯ ಪಡ್ರೆ, ಚಿರಾಯು, ಸುಜೀತ್, ಶ್ರೇಯಸ್, ಮಂಗಿಲಲ್, ಅನ್ವಿತ್, ಕಿಶನ್, ಚಿನ್ಮಯ್, ಸೃಷ್ಟಿ, ಅರುಷಿ, ಸೋನಿಯಾ, ಸಂಜನಾ, ಪ್ರೇರಣಾ, ಹರ್ಷಿತ, ಅನಿಷಾ,ವೃದ್ಧಿ, ದ್ಯುತಿ, ಪೂರ್ವಿ ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದು ಕಾಲೇಜಿನ ಕೀರ್ತಿ ಹೆಚ್ಚಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ’ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ಬುಧವಾರ ಬೆಳಿಗ್ಗೆ 9.೦5ರ ಸಿಂಹ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಪ್ರಾರಂಭವಾಯಿತು. ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ಹಾಗೂ ಜಿ. ಅನಂತಕೃಷ್ಣ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ದೇವಳದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್ ಮತ್ತು ಆಡಳಿತ ಮಂಡಳಿ ಸದಸ್ಯ ಜಿ. ವೆಂಕಟೇಶ ನಾಯಕ್ ಜಂಟಿಯಾಗಿ ದೀಪ ಪ್ರಜ್ವಲನೆ ಮಾಡಿದರು. ಸಮಾಜದ ಹಿರಿಯರಾದ ಎಂ. ವಿನೋದ ಪೈ, ಜಿ. ನಿತ್ಯಾನಂದ ಶೆಣೈ, ಯು. ನಾರಾಯಣ ಪೈ, ಡಾ. ಕಾಶೀನಾಥ ಪಿ.ಪೈ, ಬಿ. ಕೃಷ್ಟ್ರಾಯ ಪೈ, ಎಂ.ಜಿ. ಮಾಧವ ಪೈ, ಎನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನ ಒಂದು ಸುವರ್ಣಾವಕಾಶವಾಗಿದೆ. ವಿದ್ಯಾರ್ಥಿಗಳು ಸಮಾಜದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜು ಟ್ರಸ್ಟ್ ಇದರ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ಕರೆ ನೀಡಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಬೆಳವಣಿಗೆಯನ್ನು ಮಾಡಿಕೊಳ್ಳಲು ಈ ಸಂಸ್ಥೆಯಲ್ಲಿ ಬಹಳ ಅವಕಾಶಗಳಿವೆ. ಇಲ್ಲಿನ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಪಾಠ ಮತ್ತು ಪಾಠೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಅಲ್ಲದೆ ಕಲಿತ ಸಂಸ್ಥೆಯೊಂದಿಗೆ ಅವಿನಾಭಾವ ಸಂಬಂಧ ಬೆಳೆಸಿಕೊಂಡು ಕಾಳಜಿಯನ್ನು ಹೊಂದಿರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಪ್ರಾಧ್ಯಾಪಕರಾದ ವಿಜಯಲಕ್ಷ್ಮಿ ಶೆಟ್ಟಿ ಕಾಲೇಜಿನ ಸೌಲಭ್ಯಗಳ, ಗಣೇಶ್ ಕೆ. ಪದವಿ ಅಧ್ಯಯನ ಪಠ್ಯಕ್ರಮ, ನಿಶಾ ಎಮ್. ವಿದ್ಯಾರ್ಥಿ ವೇತನಗಳ ಮಾಹಿತಿ ಮತ್ತು ಮುಕುಂದ ಭಟ್ ಅವರು ಕಂಪ್ಯೂಟರ್ ಆಧಾರಿತ ಹಾಜರಾತಿ ಮತ್ತು ಯು.ಯು.ಸಿ.ಎಮ್.ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಮತ್ತು ಶಿಕ್ಷಕರ ಸಮಾಲೋಚನ ಸಭೆಯು ನಡೆಯಿತು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೊಜೆಕ್ಟ್ ರಿಸರ್ಚ ಸೈಂಟಿಸ್ಟ್ಗಳಾದ ಅರುಣ ಕುಮಾರ್ ಎಸ್. ಮತ್ತು ನ್ಯುಟ್ರಿಶಿಯನ್ ಪ್ರೊಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಗಳಾದ ಅಶ್ವಿನಿ ಪೈ.ಕೆ ಮತ್ತು ಸೈಕಾಲಜಿ ಪ್ರೊಜೆಕ್ಟ್ ಟೆಕ್ನಿಕಲ್ ಸಪೋರ್ಟ್ಗಳಾದ ರುತುಜಾ ಎಸ್. ರಾವ್ ಅವರು ಮಕ್ಕಳ ಆರೋಗ್ಯದ ಕಾಳಜಿಯ ಬಗ್ಗೆ ವಿಚಾರಗಳನ್ನು ಪೋಷಕರಿಗೆ ತಿಳಿಸುತ್ತಾ ಮಕ್ಕಳು ತಿನ್ನುವ ಪದಾರ್ಥಗಳು ಆರೋಗ್ಯಪೂರ್ಣವಾಗಿರುವಂತೆ ಗಮನಿಸುವುದು ಅತ್ಯವಶ್ಯ. ಮಾದಕಪದಾರ್ಥಗಳು ಎಲ್ಲಿಂದ ಹೇಗೆ ಮಕ್ಕಳ ಕೈಗೆಟಕುವುದೆಂದು ಹೇಳಲಸಾಧ್ಯವಾದ್ದರಿಂದ ಹೊರಗಿನ ತಿಂಡಿ, ತಿನಿಸು, ಪಾನೀಯಗಳನ್ನು ನಿರಂತರ ಸೇವಿಸದಂತೆ ಜಾಗ್ರತೆ ವಹಿಸುವುದು ಅತ್ಯಗತ್ಯ. ಮಕ್ಕಳನ್ನು ಖಾಲಿಹೊಟ್ಟೆಯಲ್ಲಿ ಶಾಲೆಗೆ ಕಳುಹಿಸಬಾರದು. ಸದಾ ಮಕ್ಕಳು ಲವಲವಿಕೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಶಾಲೆಯಲ್ಲಿ ನಡೆದ ಘಟನೆಗಳನ್ನು ಮಕ್ಕಳು ತಂದೆತಾಯಿಯರ ಜೊತೆ ಪ್ರತಿನಿತ್ಯ ಹೇಳಿಕೊಳ್ಳುವಂತೆ ಸಮಯ ನೀಡಬೇಕು. ಎಂದು ತಿಳಿಹೇಳಿದರು. ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಮೂಡುಬಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಶಾಲಾ ವಾಹನ ಅಕ್ಷರ ರಥ 2 ಇದರ ಪೂಜಾ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ ಶೆಟ್ಟಿ ಹೆಚ್., ಕಾರ್ಯದರ್ಶಿ ರಮೇಶ್ ಕನ್ನಲಿ, ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಮೂಡುಬಗೆ ಅವರು ಶಾಲಾ ವಾಹನ ಅಕ್ಷರ ರಥ 2ನ್ನು ಕೊಡುಗೆಯಾಗಿ ಶಾಲಾ ಅಭಿವೃದ್ಧಿ ಸಮಿತಿಯವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ದಿನಕರ್ ಶೆಟ್ಟಿ ಶಾನ್ಕಟ್ಟು ಶಾಲೆಯ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಭಾವತಿ ನಾಗರಾಜ್ ನಾಯ್ಕ್, ಅಂಪಾರು ಗ್ರಾಮ ಪಂಚಾಯತ್ ಸದಸ್ಯರಾದ ಕಿರಣ್ ಹೆಗ್ಡೆ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ವನಜ ಮೊಗವೀರ, ಸದಸ್ಯರಾದ ಶಕೀಲಾ ಮಹೇಂದ್ರ ಭೋವಿ, ಜಯಂತಿ ಶಂಕರ್ ನಾಯ್ಕ್ ಶೇಡಿನ್ ಕೊಡ್ಲು, ಅಂಪಾರು ಹಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸನ್ನಡತೆಯನ್ನು ಬೆಳೆಸಿಕೊಂಡಾಗ ಭವಿಷ್ಯದ ಜೀವನದಲ್ಲಿ ಯಶಸ್ಸು ಸಾಧ್ಯ. ಮೌಲ್ಯ ಆಧಾರಿತ ಶಿಕ್ಷಣ ವರ್ತಮಾನದ ತುರ್ತು ಎಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ನಡತೆ ಮತ್ತು ಶಿಸ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮದ ಸಂಯೋಜಕ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಧೀರ್ ಕುಮಾರ್, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗಂಗನಾಡು ನಿವಾಸಿ ಕೃಷ್ಣ ಮರಾಠ (75) ಎಂಬವರು ಕ್ಯಾರತೋಡ ಹೊಳೆ ದಾಟುವಾಗ ಕಾಲು ಜಾರಿ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆ. ಅವರು ಜು.25ರಂದು ಪುತ್ರಿ ಜಯಂತಿ ಮನೆಗೆ ಹೋಗಿದ್ದು, ಸಂಜೆ ವಾಪಾಸು ಬರುವುದಾಗಿ ಹೇಳಿದವರು ನಾಪತ್ತೆಯಾಗಿದ್ದರು. ಜು.28ರಂದು ಮೃತಪಟ್ಟ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಹೊಳೆ ದಾಟುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪುತ್ರ ಭಾಸ್ಕರ ಮರಾಠ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ 21 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಪತ್ತೆ ಹಚ್ಚಿದ್ದಾರೆ. 2004ರಲ್ಲಿ ಶಂಕರನಾರಾಯಣ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರ ಆರೋಪಿ ಕಾಸರಗೋಡು ಜಿಲ್ಲೆಯ ಪುತ್ತೂರು ಮೊಗ್ರಾಲು ನಿವಾಸಿ ಫಾರೂಕ್ ಬಂಧಿತ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾ ಲಯದ ವಿಚಾರಣೆಗೆ ಹಾಜರಾಗದೆ ಇದ್ದ ಈತನ ವಿರುದ್ಧ ಎಲ್ಪಿಸಿ ವಾರಂಟ್ ಹೊರಡಿಸಲಾಗಿತ್ತು. ಅದರಂತೆ ಎಸ್ಪಿ ಹರಿರಾಮ್ ಶಂಕರ್, ಅಡಿಶನಲ್ ಎಸ್ಪಿ ಸುಧಾಕರ ಎಸ್. ನಾಯ್ಕ ಮಾರ್ಗದರ್ಶನದಲ್ಲಿ ಕುಂದಾಪುರ ಉಪ ವಿಭಾ ಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ ನಿರ್ದೇಶನದಲ್ಲಿ ಅಮಾಸೆ ಬೈಲು ಪಿಎಸ್ಐ ಅಶೋಕ್ ಕುಮಾರ್, ಪೊಲೀಸ್ ಉಪ ನಿರೀಕ್ಷಕ ಚಂದ್ರ ಎ.ಕೆ. ಅವರ ತಂಡ ಹಲವು ಆಯಾಮಗಳ ಮೂಲಕ ಮಾಹಿತಿ ಕಲೆ ಹಾಕಿ ಜು.28ರಂದು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಚ್ಸಿ ರಾಘವೇಂದ್ರ, ಪರಮೇಶಪ್ಪ, ಪಿಸಿಗಳಾದ ಸುಧಾಕರ್,…
