Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಪ್ರಾಥಮಿಕ-ಪ್ರೌಢ ಶಿಕ್ಷಣವೆಲ್ಲ ನಡೆದದ್ದು ಕನ್ನಡ ಮಾಧ್ಯಮದಲ್ಲಿ. ಪಿಯುಸಿ ತನಕವೂ ಓದಿದ್ದು ಸರಕಾರಿ ಶಾಲೆಯಲ್ಲಿ. ಆದರೇನಂತೆ ಸಾಧಿಸುವವರಿಗೆ ಶಾಲೆ, ಮಾಧ್ಯಮ ಯಾವುದು ಮುಖ್ಯವಾಗುವುದಿಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ವಿ. ಪೂರ್ಣಚಂದ್ರ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 580 ಅಂಕಗಳಿಸಿರುವುದಲ್ಲದೇ ನಾಲ್ಕು ವಿಷಯಗಳಲ್ಲಿ 100ಕ್ಕೆ 100 ಅಂಕಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯ ನೌಕರಾಗಿರುವ ಕೋಣಿಯ ಜಿ.ವಿ. ಕಾರಂತ್ ಹಾಗೂ ಕಂಬದಕೋಣೆ ಸ.ಪ.ಪೂ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಜಯಲಕ್ಷ್ಮೀ ಕಾರಂತ್ ಅವರ ದ್ವಿತೀಯ ಪುತ್ರ ಪೂರ್ಣಚಂದ್ರ. ಪ್ರಥಮ ಪುತ್ರ ಮೇಘ ಸಮೀರ ಮೈಸೂರು ನಟನಾದಲ್ಲಿ ರಂಗಕರ್ಮಿಯಾಗಿ ದುಡಿಯುತ್ತಿದ್ದಾರೆ. ಪೂರ್ಣಚಂದ್ರ ಈ ಭಾರಿ ಪಿಯುಸಿಯಲ್ಲಿ 600ರಲ್ಲಿ 580 ಅಂಕ ಪಡಿದ್ದಿದ್ದರೇ; ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ಸೈನ್ಸ್ ಹಾಗೂ ಸಂಸ್ಕೃತದಲ್ಲಿ ಪೂರ್ಣ ಅಂಕ ಪಡೆದಿದ್ದಾರೆ. ಸರಕಾರಿ ಶಾಲೆಯಲ್ಲಿ ಕಲಿತು, ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಕಲ್ಪನಾ ಭಾಸ್ಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ವೈಲೆಟ್ ಬೆರೆಟ್ಟೋ ಅವರಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸಾಗರ್ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿಯ ನಿರ್ದೇಶಕರಾಗಿ, ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರಾಗಿ, ಕೋಟೇಶ್ವರ ಶಾಂತಿಧಾಮ ಪೂರ್ವ ಗುರುಕುಲ ಪ್ರಾಥಮಿಕ ಶಾಲೆ ಆಡಳಿತ ಮಂಡಳಿ ಸದಸ್ಯರಾಗಿ, ರಾಷ್ಟ್ರ ಸೇವಿಕಾ ಸಮಿತಿಯ ಕುಂದಾಪುರ ತಾಲೂಕು ಕಾರ್ಯ ವಾಹಿಕಾರಾಗಿ, ಬಸ್ರೂರು ನಿವೇದಿತ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಸ್ರೂರು ಶಾರದಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಕುಂದಾಪುರದ ಕಾರ್ಯದರ್ಶಿಯಾಗಿ, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಟ್ರಸ್ಟಿಯಾಗಿ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ನಿಯೋಜಿತ ಅಧ್ಯಕ್ಷರಾಗಿ, ರೋಟರಿ 3182 ಇದರ ವಲಯ ವುಮೇನ್ ಮೆಂಬರ್‌ಶಿಪ್…

Read More

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ನರ್ಸರಿಯಿಂದ ಆರಂಭಗೊಂಡು ಪದವಿ ಶಿಕ್ಷಣದ ವರಗೆ ಶೈಕ್ಷಣಿಕ ಸಂಸ್ಥೆಯನ್ನು ಹುಟ್ಟುಹಾಕಿ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕುಂದಾಪುರ ಎಜುಕೇಶನ್ ಸೊಸೈಟಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅತ್ಯುನ್ನತ ಶಿಕ್ಷಣವನ್ನು ಪಡೆಯುವ ಕನಸನ್ನು ಯಶಸ್ವಿಯಾಗಿ ಸಾಕಾರಗೊಳಿಸಿದೆ. ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪದವಿ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವ ನೈಜ ಕಳಕಳಿಯೊಂದಿಗೆ ರೂಪ ತಳೆದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕಡಿಮೆ ಅವಧಿಯಲ್ಲಿಯೇ ಶಿಕ್ಷಣ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದೆ. 1,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು ಆರಂಭದ ದಿನಗಳಲ್ಲಿ ಭೌತಿಕ ಕೊರತೆಯ ನಡುವೆಯೂ ಉತ್ಕೃಷ್ಟ ಸಾಧನೆ ಮಾಡುತ್ತಿದ್ದುದು ಸಂಸ್ಥೆಯ ಬೆಳವಣಿಗೆಯ ವೇಗವನ್ನು ಉಲ್ಲೇಕಿಸುವಂತಿದೆ. ಈ ವರ್ಷದಿಂದ ವಾರಾಹಿ ನದಿಯ ಮಗ್ಗಲಿನ ಪ್ರಾಕೃತಿಕ ಸೊಬಗಿನ ನಡುವೆ, ನಗರದ ಗದ್ದಲದಿಂದ ಸಾಕಷ್ಟು ಅಂತರವಿರುವಲ್ಲಿ ನೂತನ ಕಟ್ಟಡ ತಲೆಯೆತ್ತಿ ನಿಂತಿದೆ. ಶಿಕ್ಷಣಕ್ಕೆ ಪೂರಕವಾದ ಭೌತಿಕ ವಾತಾವರಣ ನಿರ್ಮಾಣಗೊಂಡಿದೆ. ಮಾಲ್ಯ ಶಿಕ್ಷಣದ ಸಾಕಾರ…

Read More

ಪಾದಾಚಾರಿ ಕೋಟ ಜೋಗಿ ಸಮಾಜದ ಅಧ್ಯಕ್ಷ ನಾರಾಯಣ ಬಳೆಗಾರ್ ಗಂಭೀರ ನ್ಯಾಯವಾದಿ ಬನ್ನಾಡಿ ಸೋಮಶೇಖರ ಹೆಗ್ಡೆ ಅವರ ಸಮಯಪ್ರಜ್ಞೆಯಿಂದ ಗಾಯಾಳುಗಳು ಶೀಘ್ರ ಆಸ್ಪತ್ರೆಗೆ ದಾಖಲು ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಮೂರುಕೈ ರಾಷ್ಟ್ರೀಯ ಹೆದ್ದಾರಿಯ ಬಳಿ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ, ರಸ್ತೆಯ ಬದಿಯಲ್ಲಿ ಸಾಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿ ಮೂವರೂ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆಯ ವೇಳೆಗೆ ವರದಿಯಾಗಿದೆ. ಕೋಟ ಮೂರುಕೈ ಯಿಂದ ಗೋಳಿಯಂಗಡಿ ತೆರಳಲು ಯುಟರ್ನ್ ಇರುವ ಮಾರ್ಗ ಹಾಗೂ ವಿವೇಕ ಪದವಿಪೂರ್ವ ಕಾಲೇಜು ಇರುವಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋಟ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು. ಸಂಜೆ ವೇಳೆಗೆ ಉಡುಪಿ ಕಡೆಯಿಂದ ವೇಗವಾಗಿ ಬಂದ 407 ಗೂಡ್ಸ್ ವಾಹನವು ಕೋಟ ಮೂರು ಕೈ ಬಳಿಯ ಬ್ಯಾರಿಕೇಡ್ ಗಮನಿಸದೆ, ಹಠಾತ್ ಬ್ರೇಕ್ ಹಾಕುವ ಪ್ರಯತ್ನ ನಡೆಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ವಾಹನ ಪಲ್ಟಿಯಾಗಿತ್ತು. ಇದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾಡ ಗ್ರಾಮದ ಚುಂಗಿಗುಡ್ಡೆ ಪ್ರಕಾಶ ಹೆಬ್ಬಾರ್ ಅವರನ್ನು ಮಂಡ್ಯದ ಡಾ. ಜೀ.ಶಂ.ಪ ಸಾಹಿತ್ಯ ವೇದಿಕೆಯು ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ. ವೇದಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಂಬಾಡಿ ದಿನಪತ್ರಿಕೆಯ ಸಹಯೋಗದಲ್ಲಿ ಮೇ 26ರಂದು ಮಂಡ್ಯ ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿರುವ ಕವಿಕಾವ್ಯ ಮೇಳದಲ್ಲಿ ಪ್ರಶಸ್ತಿ ಪ್ರದಾನ ನಡೆಯುವುದು. ಕವಿಗಳೂ, ಸಾಹಿತ್ಯ ಪರಿಚಾರಕರೂ ಆಗಿರುವ ಹೆಬ್ಬಾರ್ ಚುಂಗಿಗುಡ್ಡೆ ಪರಮೇಶ್ವರ ಹೆಬ್ಬಾರ್, ಅಕ್ಕಮ್ಮ ಹೆಬ್ಬಾರ್ ದಂಪತಿಯ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ದುಡಿಯುವವರಿಗೆ ಹತ್ತಾರು ತೊಡಕುಗಳು ಎದುರಾಗುವುದು ಸಹಜ. ಅವುಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನುಗ್ಗಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ. ಕ್ರೀಯಾತ್ಮಕ ಚಟುವಟಿಕೆಗಳಿಂದ ಸಂಘಟನೆಯ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಪರ್ಕಳ ಅರುಣ್ ಭಂಡಾರಿ ಹೇಳಿದರು. ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆದ ಸವಿತಾ ಸಮಾಜದ ವಾರ್ಷಿಕ ಮಹಾಸಭೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಮಾಜದವರು ಈಗ ಎಲ್ಲಾ ಕ್ಷೇತ್ರಗಳಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಾಣುತ್ತಿದ್ದಾರೆ. ನಮಗೆ ಜಾತಿ ಪ್ರಜ್ಞೆ ಇಲ್ಲದಿದ್ದರೆ ಏನೂ ಸಾಧಿಲಾಗದು. ಈ ದಿಸೆಯಲ್ಲಿ ಸಂಘಟನೆಯ ಮೂಲಕ ಒಗ್ಗಟ್ಟಿನಿಂದ ಹೋರಾಟಮಾಡಿ ನಮ್ಮ ಸವಲತ್ತುಗಳನ್ನು ಕೇಳಿ ಪಡೆಯಬೇಕು. ನಮ್ಮ ಮುಂದಿನ ಪೀಳಿಗೆಗೆ ಕುಲಕಸುಬುಗಳ ಅರಿವು ಮೂಡಿಸುವ ಅನಿವಾರ್ಯತೆಯಿದೆ ಎಂದರು. ಬೈಂದೂರು ವಲಯ ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಮಲ್ಯ ಅಧ್ಯಕ್ಷತೆವಹಿಸಿದ್ದರು. ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೮೦ಕ್ಕಿಂತ ಅಧಿಕ ಅಂಕಗಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ ಒಟ್ಟು 304 ವಿದ್ಯಾರ್ಥಿಗಳ ಪೈಕಿ 98 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರೇ, 167 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 26 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 186 ವಿದ್ಯಾರ್ಥಿಗಳ ಪೈಕಿ 174 ಮಂದಿ ತೇರ್ಗಡೆ ಹೊಂದಿದ್ದರೇ, ವಾಣಿಜ್ಯ ವಿಭಾಗದಲ್ಲಿ 118 ವಿದ್ಯಾರ್ಥಿಗಳ ಪೈಕಿ 116 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಾಲೇಜಿನಲ್ಲಿ ವಿಶಿಷ್ಟ ಸಾಧನೆಗೈದಿರುವ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ನವೀನ್‌ಕುಮಾರ್ ಶೆಟ್ಟಿ ಹಾಗೂ ಕುಂದಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು 98.68% ಫಲಿತಾಂಶ ಗಳಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 33 ವಿಶಿಷ್ಟ ಶ್ರೇಣಿ, 41 ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕುಮಾರಿ ಸಹನಾ ಭಟ್ ಕೆ (581) ಹಾಗೂ ವಿಜ್ಞಾನ ವಿಭಾಗದಲ್ಲಿ ಕುಮಾರಿ ಚೈತನ್ಯಲಕ್ಷ್ಮಿ (572) ಪ್ರಥಮ ಸ್ಥಾನ ಗಳಿಸಿರುತ್ತಾರೆ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರತಿಶತ 100 ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, 85% ಫತಿತಾಂಶ ದಾಖಲಾಗಿದೆ. ಪರಿಕ್ಷೇಗೆ ಹಾಜರಾದ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ಒಟ್ಟು 475 ವಿದ್ಯಾರ್ಥಿಗಳ ಪೈಕಿ, 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 256 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 87 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.  ವಿಶಿಷ್ಟ ಸಾಧನೆಗೈದ ಕಾಲೇಜಿಗೆ ಅಗ್ರಸ್ಥಾನಿ ವಿದ್ಯಾರ್ಥಿಗಳಾದ ಶರತ್ ಪಿ. 570 ರಮ್ಯಾ 568, ಎ. ನವ್ಯ 561, ದೇವರಾಜ್ 561 ರಾಜೇಶ್ ಪೂಜಾರಿ 560 ಅಂಕ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಜಿಎಸ್‌ವಿಎಸ್ ಅಸೋಶಿಯೇಶನ್ ಆಡಳಿತಕ್ಕೆ ಒಳಪಟ್ಟಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ಇತ್ತೀಚಿಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಶೇ.88 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 176 ವಿದ್ಯಾರ್ಥಿಗಳ ಪೈಕಿ 155 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 97 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಸ್ಕೃತದಲ್ಲಿ ಏಳು ವಿದ್ಯಾರ್ಥಿಗಳು, ವ್ಯವಹಾರ ಅಧ್ಯಯನದಲ್ಲಿ ಮೂವರು ವಿದ್ಯಾರ್ಥಿಗಳು ಮತ್ತು ರಸಾಯನಶಾಸ್ತ್ರದಲ್ಲಿ ಓರ್ವ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿಶಿಷ್ಟ ಶ್ರೇಣೀಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ವಿಜ್ಞಾನ ವಿಭಾಗ : ಅಖಿಲೇಶ್ ಖಾರ್ವಿ – 573, ಕಾರ್ತಿಕೇಯ – 554, ದೀಕ್ಷಿತ್ ಎಸ್ – 553, ಕಾರ್ತಿಕ್ ಕುಮಾರ್ – 541, ದೀಪಿಕಾ ಕೆ – 542, ಅಭಿಷೇಕ್ – 535, ಶಾಝಿಯಾ – 511 ವಾಣಿಜ್ಯ ವಿಭಾಗ : ಅಶ್ವಿನಿ ನಾಯಕ್ – 565, ಪ್ರಸಾದ್ – 539, ಗಣೇಶ ಶೆಣೈ…

Read More