ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾಲ್ತೂರು ಕೊಕ್ಕೋಡಿಗೆ ಹೋಗುವ ದಾರಿಯ ಬಳಿ ಗೇರು ಹಾಡಿಯಲ್ಲಿ ಮೇಯುತ್ತಿದ್ದ ದನವನ್ನು ದುಷ್ಕರ್ಮಿಗಳು ಕಳವಿಗೆ ಯತ್ನಿಸಿ, ಕಾರು ಬಿಟ್ಟು ಪರಾರಿಯಾಗಿರುವ ಘಟನೆ ಅ.15ರಂದು ಮಧ್ಯಾಹ್ನ ವೇಳೆ ನಡೆದಿದೆ. ಕಾವ್ರಾಡಿ ಗ್ರಾಮದ ಪ್ರಕಾಶ್ ಎಂಬವರ ದನವನ್ನು ಆರೋಪಿಗಳಾದ ಇಮಿಯಾಝ್, ರಿಜ್ವಾನ್ ದಸ್ತಗೀರ್ ಮತ್ತು ಜಿಮಾಮ್ ಎಂಬವರು ಕಾರಿಗೆ ತುಂಬಿಸಲು ಎಳೆದುಕೊಂಡು ಹೋಗಿ ಕಳವಿಗೆ ಯತ್ನಿಸುತ್ತಿದ್ದು ಈ ವೇಳೆ ವ್ಯಕ್ತಿಯನ್ನು ನೋಡಿ ಆರೋಪಿಗಳು ದನವನ್ನು ಬಿಟ್ಟು ಕಾರು ಮತ್ತು ಸ್ಕೂಟರ್ನಲ್ಲಿ ಪರಾರಿಯಾದರು. ಬಳಿಕ ಸುಮಾರು 2ಕಿ.ಮೀ. ದೂರದ ಕಾವ್ರಾಡಿ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಕಾರು ರಸ್ತೆಯ ಬದಿಯಲ್ಲಿ ಬಿಟ್ಟು ಸ್ಕೂಟಿಯಲ್ಲಿ ಓಡಿ ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ. ಬಿ. ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಶ್ರಮದಾನವನ್ನು ಪ್ರಗತಿಪರ ಕೃಷಿಕರಾದ ಶ್ರೀ ಕೆ. ಶಂಭುಶಂಕರ್ ರಾವ್ ಹೆಗ್ಗುಂಜೆ ಅವರು ಉದ್ಘಾಟಿಸಿ ಶುಭ ಹಾರೈಸಿದರು. ವಾರ್ಷಿಕ ವಿಶೇಷ ಶಿಬಿರದ ಶಿಬಿರಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್, ಪ್ರಾಧ್ಯಾಪಕ ಹರೀಶ್ ಕಾಂಚನ್ ಹಾಗೂ ಎನ್ಎಸ್ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಎನ್ಎಸ್ಎಸ್ ಸ್ವಯಂಸೇವಕರಾದ ಸನ್ನಿಧಿ ಬಿ.ಎಸ್. ಸ್ವಾಗತಿಸಿ, ಮಣಿಕಂಠ ಅಥಿತಿಗಳನ್ನು ಪರಿಚಯಿಸಿ, ಕೃತಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ–2026ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ. ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ವಿವಿಧ ತಂಡ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿ, ಕ್ರೀಡಾಕೂಟದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ತಂಡ ಸ್ಪರ್ಧೆಗಳಲ್ಲಿ ಆಳ್ವಾಸ್ಗೆ ಮೇಲುಗೈ:ಪುರುಷರ ವಿಭಾಗದ ಕಬಡ್ಡಿ ಸ್ಪರ್ಧೆಯಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಾಲ್ಬ್ಯಾಡ್ಮಿಂಟನ್ ಮತ್ತು ಖೋ ಖೋ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಿಳೆಯರ ವಿಭಾಗದಲ್ಲಿ ಕಬಡ್ಡಿ ಹಾಗೂ ಬಾಲ್ಬ್ಯಾಡ್ಮಿಂಟನ್ ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಆಳ್ವಾಸ್ ಕ್ರೀಡಾಪಟುಗಳು ಶ್ರೇಷ್ಠತೆ ಮೆರೆದಿದ್ದಾರೆ. ವೈಯಕ್ತಿಕ ಸ್ಪರ್ಧೆಗಳಲ್ಲೂ ಪದಕಗಳ ಬೇಟೆ:ಅಥ್ಲೆಟಿಕ್ಸ್ನಲ್ಲಿ ಆಳ್ವಾಸ್ ಕ್ರೀಡಾಪಟುಗಳು 4 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವೇಟ್ಲಿಫ್ಟಿಂಗ್ನಲ್ಲಿ 6 ಚಿನ್ನ, 6 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಯೋಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೆಳಕಿನ ಹಬ್ಬವಾದ ದೀಪಾವಳಿ ಹಬ್ಬ ಆಚರಣೆಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯನ್ನು ಜಾಗೃತಿಯಿಂದ ಮಾಡುವುದರೊಂದಿಗೆ ಆಚರಣೆ ಮಾಡಬೇಕು. ಇವುಗಳ ಮಾರಾಟಕ್ಕೆ ಪರವಾನಿಗೆ ನೀಡುವಾಗ ಸುರಕ್ಷತಾ ದೃಷ್ಠಿಯಿಂದ ನಿಯಮಾನುಸಾರ ತಪ್ಪದೇ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದರು. ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಪಟಾಕಿ ಮಾರಾಟದ 10*10 ವಿಸ್ತೀರ್ಣದ ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ನ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು…
ಕುಂದಾಪ್ರ ಡಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಶುಕ್ರವಾರದಂದು ನಡೆಯಿತು. ಅಂಕಗಳಾಚೆಗೆ ಜ್ಞಾನ, ಪಠ್ಯಕ್ರಮದಾಚೆಗೆ ಗುರಿ, ಶಿಕ್ಷಣದಾಚೆಗೆ ಬದುಕಿನ ಸಾಧನೆ ಎಂಬ ಆಶಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕಲಿಕಾ ಸಾಮರ್ಥ್ಯ, ಶಿಸ್ತು, ಭವಿಷ್ಯದ ಗುರಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ. ಎಸ್. ಅವರು ಶಿಕ್ಷಣದ ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅವರ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ದಾರಿದೀಪವಾಗುತ್ತವೆ. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಗಳಲ್ಲಿಯೂ ಯಶಸ್ಸು ಸಾಧಿಸಲು ಅಗತ್ಯವಾದ ಮಾರ್ಗದರ್ಶನವನ್ನು ನೀಡುತ್ತಿದೆ. ಅಲ್ಲದೇ ಪಿಯುಸಿ ಪಠ್ಯಕ್ರಮದೊಂದಿಗೆ JEE ,KCET,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು (ಎಫ್ಎಸ್ಟಿಪಿ) ಉಳ್ಳೂರು ಗ್ರಾಮದಲ್ಲಿ ಸ್ಥಾಪಿಸಲು ಜಿಲ್ಲಾಡಳಿತ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಪವನ್ ಚಂದ್ರಶೆಟ್ಟಿ, “ಯೋಜನೆಗೆ ಅನುಮೋದನೆ ನೀಡುವಾಗ ಕಾನೂನುಬದ್ಧ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದ್ದು, ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಆದೇಶಿಸಿದ್ದಾರೆ” ಎಂದು ಪ್ರಬಲವಾಗಿ ಪ್ರತಿಪಾದಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ ಪ್ರಸಾದ್ ಅವರಿದ್ದ ಹೈಕೋರ್ಟ್ನ ಏಕಸದಸ್ಯ ನ್ಯಾಯಾಪೀಠವು, ಅರ್ಜಿದಾರರ ವಾದವನ್ನು ಪುರಸ್ಕರಿಸಿ ಕಾಮಗಾರಿ ಹಾಗೂ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ. ವಕೀಲ ಪವನ್ ಚಂದ್ರ ಶೆಟ್ಟಿ ಮಂಡಿಸಿದ ಪ್ರಮುಖ ವಾದಗಳು: ಅಧಿಕಾರ ವ್ಯಾಪ್ತಿ ಹಾಗೂ ನಿಯಮಗಳ ಉಲ್ಲಂಘನೆ (No Delegation of Power):ಯೋಜನೆಗಾಗಿ ಜಮೀನಿನ ಮೂಲ ಉದ್ದೇಶವನ್ನು ಬದಲಾಯಿಸಿ ಅನುಮೋದನೆ ನೀಡುವ ಪೂರ್ಣ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಮಾತ್ರ ಇರುತ್ತದೆ. ಆದರೆ, ಜಿಲ್ಲಾಧಿಕಾರಿಗಳ ಪರವಾಗಿ ಯೋಜನಾ ನಿರ್ದೇಶಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೈಸೂರಿನ ದಸರಾ ಪ್ರಯುಕ್ತ ನಡೆಯುತ್ತಿರುವ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ವರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ ಬಿ. ಪೂಜಾರಿ ಭಾಗವಹಿಸಿ 90ಕೆಜಿ ಬಲ ಕೈ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವುದರ ಮೂಲಕ ನಿರಂತರ 5ನೇ ವರ್ಷ ಚಿನ್ನದ ಪದಕ ಮೂಡಿಗೆರಿಸಿಕೊಂಡಿದ್ದಾರೆ. ಅವರು ಬ್ರಹ್ಮಾವರದ ಬಾಡಿ ಜೋನ್ ಜಿಮ್ ಸಂಸ್ಥೆಯ ಸದಸ್ಯರಾಗಿದ್ದು ಅಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅಲ್ಲದೆ ರಾಜ್ಯ ರಾಷ್ಟ್ರ ,ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅತಿ ಮುಖ್ಯ. ಯಾವುದೇ ಕ್ಷೇತ್ರದಲ್ಲಿ ಉತ್ತಮ ಉದ್ಯೋಗ ಹೆಸರು ಗಳಿಸಿದ್ದರೂ ಎಲ್ಲಕ್ಕಿಂತ ಹೆಚ್ಚಾಗಿ ಜೀವನದಲ್ಲಿ ಒಳ್ಳೆಯ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು. ಆಗ ಜೀವನ ಹೆಚ್ಚು ಸಾರ್ಥಕ್ಯವನ್ನು ಪಡೆಯುತ್ತದೆ ಎಂದು ಶ್ರೀ ಕುಂದೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಾಸುದೇವ ಯಡಿಯಾಳ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಜೀವನ ಮೌಲ್ಯ ಶಿಕ್ಷಣ” ಕುರಿತ ಒಂದು ದಿನದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಜನಸಾಮಾನ್ಯರೊಂದಿಗೆ ಬದುಕಬೇಕು. ಅಲ್ಲದೇ ಭಂಡಾರ್ಕಾರ್ಸ್ ಕಾಲೇಜು ಶೈಕ್ಷಣಿಕವಾಗಿ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವವನ್ನು ರೂಪಿಸುತ್ತಿದೆ. ಹಾಗಾಗಿ ಈ ಸಂಸ್ಥೆ ತನ್ನ ಹೆಸರನ್ನು ಘನತೆಯನ್ನು ಹೆಚ್ಚಿಸಿಕೊಂಡಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳು ಸಹ ಜೀವನವನ್ನು ರುಪಿಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯುತ್ತಿರುವ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧನಂಜಯ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿ ಪ್ರಗತಿಪರ ಕೃಷಿಕ, ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶೇಡಿಕೊಡ್ಲು ವಿಠ್ಠಲ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸಮಾಜಮುಖಿಯಾಗಿ ಚಿಂತನೆ ಬೆಳೆಯಬೇಕಾದರೆ ರಾಷ್ಟ್ರಿಯ ಸೇವಾ ಯೋಜನೆ ಸಹಕಾರಿ. ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ ಮತ್ತು ಸಹಬಾಳ್ವೆ ಕಲಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಯೋಜನಕಾರಿಯಾಗಲಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ದೇವಳದ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಶೆಟ್ಟಿ ಆಶಯ ನುಡಿಗಳನ್ನಾಡಿದರು. ಕಾಲೇಜು ಆಡಳಿತ ಮಂಡಳಿಯ ಸದಸ್ಯ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ, ಮಂದಾರ್ತಿ ದೇವಳ ಪ್ರೌಢ ಶಾಲೆಯ…
