Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನೂತನವಾಗಿ ರಚನೆಯಾಗಲಿರುವ ಬೈಂದೂರು ತಾಲೂಕಿಗೆ ಗಂಗೊಳ್ಳಿ ಗ್ರಾಮವನ್ನು ಯಾವುದೇ ಕಾರಣಕ್ಕೂ ಸೇರ್ಪಡೆಗೊಳಿಸಬಾರದು. ಗಂಗೊಳ್ಳಿ ಗ್ರಾಮವನ್ನು ಕುಂದಾಪುರ ತಾಲೂಕಿನಲ್ಲಿಯೇ ಉಳಿಸಿಕೊಳ್ಳಬೇಕು. ಗಂಗೊಳ್ಳಿ ಗ್ರಾಮವನ್ನು ಬೈಂದೂರು ತಾಲೂಕಿಗೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಲ್ಲಿ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಸಂಘಟಿತ ಹೋರಾಟ ನಡೆಸಲು ಹಾಗೂ ಎಪ್ರಿಲ್ ೧೨ರಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಮುಂಭಾಗ ಸಾಂಕೇತಿಕ ಧರಣಿ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಗಂಗೊಳ್ಳಿ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಈ ಒಕ್ಕೊರಲ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗಂಗೊಳ್ಳಿಯ ಜನರಿಗೆ ಕುಂದಾಪುರದೊಂದಿಗೆ ಅನೇಕ ದಶಕಗಳ ಅವಿನಾಭಾವ ಸಂಬಂಧವಿದೆ. ಗಂಗೊಳ್ಳಿಯ ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಕುಂದಾಪುರವನ್ನೇ ಅವಲಂಬಿಸಿದ್ದಾರೆ. ಕುಂದಾಪುರಕ್ಕೆ ಸಾರಿಗೆ ವ್ಯವಸ್ಥೆ ಕೂಡ ಉತ್ತಮವಾಗಿದೆ. ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣಗೊಂಡಲ್ಲಿ ಗಂಗೊಳ್ಳಿ ಜನರು ಕೇವಲ ಒಂದುವರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಾಸ್ತವದ ನೆಲೆಗಟ್ಟಿನಲ್ಲಿ ಸಮರ್ಥವಾದ ಜನಾ ಭಿಪ್ರಾಯ ರೂಪಿಸುವುದು ಮಾಧ್ಯಮ ಗಳ ಬಲುದೊಡ್ಡ ಜವಾಬ್ದಾರಿ. ಮಾಧ್ಯಮಗಳ ಮಾಹಿತಿ ಆಧಾರದಲ್ಲೇ ನಮಗೆ ಸಾವಿರಾರು ಮೈಲಿಗಳ ದೂರದಲ್ಲಿನ ಘಟನೆ ಮತ್ತು ವ್ಯಕ್ತಿಗಳ ಸಾಚಾ ಅಥವಾ ನೀಚತನಗಳ ಅರಿವಾಗುವುದು. ಆದರೆ ಇಂದು ಬಹುತೇಕ ಮಾಧ್ಯಮಗಳು ಕೆಲವು ಪ್ರಭಾವಗಳು, ಪೂರ್ವಾಗ್ರಹಗಳಿಗೆ ಒಳಗಾಗುತ್ತಿರುವುದು ಪ್ರಜಾಪ್ರಭುತ್ವದ ದುರಂತ ಎಂದು ವಂ. ಫಾ. ಚೇತನ್‌ ಲೋಬೋ ಹೇಳಿದರು. ಕುಂದಾಪುರ ಇಗರ್ಜಿಯ ಸಾಮಾಜಿಕ ಸಂಪರ್ಕ ಮಾಧ್ಯಮವು ಆಯೋಜಿಸಿದ ಕುಂದಾಪುರ ಧರ್ಮಕೇಂದ್ರದಲ್ಲಿ ಮಾಧ್ಯಮದವರ ಸೇವೆಗೆ ಅಭಿನಂದನೆ – ಸಹಮಿಲನ- ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸಾಮಾಜಿಕ ಸಂಪರ್ಕ ಮಾಧ್ಯಮದ ಸಂಚಾಲಕ ಬರ್ನಾರ್ಡ್‌ ಡಿ’ಕೋಸ್ತಾ ಪ್ರಸ್ತಾವಿಸಿ, ಸ್ವಾಗತಿಸಿದರು. ಮುಖ್ಯ ಅತಿಥಿ ಪತ್ರಕರ್ತ ಯು.ಎಸ್‌.ಶೆಣೆ„ ಮಾತನಾಡಿ ಪತ್ರಿಕೆಗಳು ದೇಶ ವಿದೇಶಗಳ ಸುದ್ದಿಗಳೊಂದಿಗೆ ಸ್ಥಳೀಯ ಮಾಹಿತಿಗಳನ್ನೂ ಒದಗಿಸಬೇಕು. ಸ್ಥಳೀಯ ಸಮಸ್ಯೆಗಳನ್ನು ಸಂಬಂಧಿತರ ಗಮನಕ್ಕೆ ತರುವುದು ಮಾತ್ರವಲ್ಲದೆ, ಒಳಿತುಗಳ ಶ್ಲಾಘನೆ ಮನೋ ರಂಜನೆ ಎಲ್ಲವನ್ನೂ ಒದಗಿಸುತ್ತಿವೆ. ನಿಸ್ವಾರ್ಥ ಕಾರ್ಯಗಳಿಂದ ಪ್ರಭಲ ಜನಾಭಿಪ್ರಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ವತಿಯಿಂದ ಸುಮಾರು ಓಂಭತ್ತು ದಿನಗಳ ಕಾಲ ವಿಶೇಷ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಪ್ರತಿದಿನ ಸಂಜೆ ೭ ರಿಂದ ರಾತ್ರಿ ೯.೩೦ರ ವರೆಗೆ ದೇವಸ್ಥಾನ ಪರಿಸರದ ದೊಡ್ಡೋಣಿ ರಸ್ತೆಯಲ್ಲಿರುವ ಹಲವಾರು ಮನೆಗಳಿಗೆ ತೆರೆಳಿ ದೇವರ ಭಜನೆ, ಸಂಕೀರ್ತನೆಯೊಂದಿಗೆ ಸಾಗಿ ಬಂದ ಭಜನಾ ತಂಡ ಮನೆಯ ಎದುರುಗಡೆ ಬಿಡಿಸಿದ ರಂಗೋಲಿ, ತುಳಸಿಕಟ್ಟೆ ಹಾಗೂ ದೀಪಕ್ಕೆ ಕುಣಿತ ಭಜನೆಯ ಮೂಲಕ ಸುತ್ತು ಬಂದು ಮುಂದೆ ಸಾಗಿದರು. ಕಾರ್ಯಕ್ರಮದ ಕೊನೆಯ ದಿನದಂದು ದೊಡ್ಮನೆಬೆಟ್ಟು ಶ್ರೀ ಆಂಜನೇಯ ದೇವಸ್ಥಾನ, ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ, ಶ್ರೀ ಕೋದಂಡ ರಾಮ ದೇವಸ್ಥಾನ, ಶ್ರೀ ಮಾರಿಯಮ್ಮ ದೇವಸ್ಥಾನ ಹಾಗೂ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆರಳಿ ದೇವರ ಸಮ್ಮುಖದಲ್ಲಿ ಕುಣಿತ ಭಜನೆ ನೆರವೇರಿಸಿದರು. ಈ ತಂಡದಲ್ಲಿ ಮಕ್ಕಳು, ಯುವಕರು, ಯುವತಿಯರು ಹೀಗೆ ಎಲ್ಲಾ ವಯೋಮಾನದ ಸದಸ್ಯರ ಉಪಸ್ಥಿತಿ ವಿಶೇಷ. ಇತ್ತೀಚೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗವಾದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಳೆದ ೧೦ ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹಲವಷ್ಟು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕ ಜನಮಾನಸದಲ್ಲಿ ಉಳಿದುಕೊಂಡಿದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಹೇಳಿದರು. ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಮೊಗವೀರ ಸೌಹಾರ್ದಯುತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯ ಮೂಲಕ ಯುವ ಸಮುದಾಯದ ಸಂಘಟನೆಯೊಂದಿಗೆ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ದೊರೆಯುತ್ತದೆ. ಸ್ಥಳೀಯ ತಂಡಗಳನ್ನು ರಾಜ್ಯ, ರಾಷ್ಟ್ರಮಟ್ಟದ ಸ್ಪರ್ಧೆಗೆ ಅಣಿಗೊಳಿಸಲು ಹಾಗೂ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಲು ಇಂತಹ ಪಂದ್ಯಾಟಗಳಿಂದ ಸಾಧ್ಯವಾಗಿಸುವ ಜತೆಗೆ ಯುವಜನರನ್ನು ಕ್ರೀಯಾಶೀಲರಾಗಲು ಅವಕಾಶ ಮಾಡಿಕೊಡುತ್ತದೆ. ಯುವಶಕ್ತಿಗೆ ಹೊಸ ಆಯಾಮಾ ನೀಡುವ ಇಂತಹ ಕಾರ್ಯಕ್ರಮಗಳಲ್ಲಿ ಸಮುದಾಯದ ಯುವಕ-ಯುವತಿಯರು ಹೆಚ್ಚಾಗಿ ಪಾಲ್ಗೊಳ್ಳಬೇಕು ಎಂದರು. ಘಟಕದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಚರ್ಚ್‌ಗಳಲ್ಲಿ ಗರಿಗಳ ಭಾನುವಾರ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಹಳ ಪುರಾತನ ಚಾರಿತ್ರ್ಯವುಳ್ಳ ಕುಂದಾಪುರ ರೊಜಾರಿ ಮಾತೆಯ ಇಗರ್ಜಿಯಲ್ಲಿ ‘ಗರಿಗಳ ಬಾನುವಾರ ಹಬ್ಬ’ ವನ್ನು ಬಹಳ ಭಕ್ತಿ ಪೂಜೆಯಿಂದ ಆಚರಿಸಲಾಯಿತು. ಇದರ ನೇತ್ರತ್ವವನ್ನು ಕುಂದಾಪುರ ಚರ್ಚಿನ ಧರ್ಮಗುರು ವಂ|ಜೆರಾಲ್ಡ್ ಸಂದೀಪ್ ಡಿಮೆಲ್ಲೊ ವಹಿಸಿ. ’ಎಸುವಿನ ಕಷ್ಟ ವೇದನೆಯನ್ನು, ಮನದಾಳದಿಂದ ಚಿಂತಿಸಬೇಕು, ಜೀವನದಲ್ಲಿ ಎಸುವಿನಂತೆ ನಿಂದನೆಗೆ, ವಿರೋದಕ್ಕೆ ಸದಾ ಸಿದ್ದನಿರಬೇಕು ಮತ್ತು ಸೋತವರಿಗೆ ಬಡ ಬಗ್ಗರಿಗೆ, ಇನ್ನೂ ಹೆಚ್ಚು ಕೆಳಕ್ಕೆ ಬೀಳಿಸುವಂತ ಕ್ರತ್ಯಗಳನ್ನು ಮಾಡಬೇಡಿ’ ಎಂದು ಸಂದೇಶ ನೀಡಿದರು. ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರುಗಳಾದ ವ|ಅನೀಲ್ ಡಿಸೋಜಾ ಸಹ ಯಾಜಾಕರಾಗಿ ಭಾಗವಹಿಸಿದ್ದ ಈ ಧಾರ್ಮಿಕ ಪೂಜಾ ವಿಧಿಯ ಅಚರಣೆಯಲ್ಲಿ ಬಹಳಸ್ಟು ಭಕ್ತಾದಿಗಳು ಈ ಪವಿತ್ರವಾದ ಆಚರಣೆಯಲ್ಲಿ ಭಾಗಿಯಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳವಾಡಿ ಶ್ರೀ ಮೂಕಾಂಬಿಕಾ ಯೂತ್ ಕ್ಲಬ್ ರಿ. ಇದರ 12ನೇ ವರ್ಷದ ವಾರ್ಷಿಕೋತ್ಸವ ಎಪ್ರಿಲ್ 15 ಶನಿವಾರ ಕಳವಾಡಿಯಲ್ಲಿ ಅದ್ದೂರಿಯಾಗಿ ಜರುಗಲಿದ್ದು, ಸಕಲ ಸಿದ್ಧತೆಗಳು ನಡೆದಿವೆ. ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ವೇದಮೂರ್ತಿ ರಾಮಚಂದ್ರ ಅನಂತ ಭಟ್ಟರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಜರುಗಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಮಾರಿಕಾಂಬ ಯೂತ್ ಕ್ಲಬ್ ಸದಸ್ಯರಿಂದ ಆಕರ್ಷಕ ನೃತ್ಯ ಪ್ರದರ್ಶನ, ಅಂಗನವಾಡಿ ಪುಟಾಣಿಗಳಿಂದ ನೃತ್ಯ; ರಾತ್ರಿ, ನರ್ತಕಿ ಉಡುಪಿ ಕಲಾವಿದರಿಂದ ಭರತನಾಟ್ಯ ಹಾಗೂ ನೃತ್ಯ ರೂಪಕ ಬಳಿಕ ರೂಪಕಲಾ ಕುಂದಾಪುರ ತಂಡದಿಂದ ಪಾಪಾ ಪಾಂಡು ನಾಟಕ ಪ್ರದರ್ಶನಗೊಳ್ಳಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವರ್ಗಾವಣೆಗೆ ಪಟ್ಟು ಹಿಡಿದ ಆಡಳಿತ ಪಕ್ಷದ ಸದಸ್ಯರು. ಕರ್ತವ್ಯ ಲೋಪ, ತಾ.ಪಂ ಸದಸ್ಯರಿಗೆ ಅಗೌರವ ತೋರಿದ ಅಧಿಕಾರಿಯ ವರ್ಗಾವಣೆಗೆ ಆಗುವ ತನಕ ಸಭೆಯಲ್ಲಿ ಭಾಗವಹಿಸಲಾರೆವು ಎಂದು ಸಭಾತ್ಯಾಗ ನಡೆಸಿದ ಘಟನೆಗೆ ಕುಂದಾಪುರ ತಾಲೂಕು ಪಂಚಾಯತ್ ಸಾಕ್ಷಿಯಾಯಿತು. ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆ ಸಭಾತ್ಯಾಗದೊಂದಿಗೆ ಅಂತ್ಯಗೊಂಡಿದ್ದು ಆಡಳಿತ ಪ್ರತಿಪಕ್ಷಗಳ ಭಿನ್ನ ಧ್ವನಿಯ ನಡುವೆಯೂ ಇಒ ವರ್ಗಾವಣೆ ಇಲ್ಲವೇ ಜಿಪಂ ಎದುರು ಪ್ರತಿಭಟನೆ ಎಂದು ನಿರ್ಣಯ ಕೈಗೊಳ್ಳಲಾಯಿತು. ತಾಲೂಕು ಪಂಚಾಯತ್ ಸದಸ್ಯ ಉಮೇಶ್ ಶೆಟ್ಟಿ ಕಲ್ಗದ್ದೆ ಮಾತನಾಡಿ, ತಾಲೂಕು ಪಂಚಾಯತ್ ಸದಸ್ಯರ ಅಹವಾಲುಗಳಿಗೆ ಕಾರ್ಯನಿರ್ವಹಣಾಧಿಕಾರಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಸದಸ್ಯರು ಪ್ರಶ್ನಿಸಿದರೆ ಗಲಾಟೆ ಮಾಡುವುದು, ಏರು ಧ್ವನಿಯಲ್ಲಿ ಮಾತನಾಡುವುದನ್ನು ಮಾಡುತ್ತಿದ್ದಾರೆ. ಮಹಿಳಾ ಸದಸ್ಯರು ಯಾವುದಾದರೂ ವಿಚಾರ ಕೇಳಿ ಕರೆ ಮಾಡಿದರೆ ಅವರನ್ನು ಹೆಂಗಸು ಎಂದು ಸಂಭೋಧಿಸಿ ಸದಸ್ಯರ ಗೌರವಕ್ಕೆ ಚ್ಯುತಿ ತಂದಿದ್ದಾರೆ. ತಮ್ಮ ಮೇಲೆ ಕ್ರಮಕೈಗೊಳ್ಳು ನಿರ್ಣಯ ಕೈಗೊಳ್ಳಲಾವುದು ಎಂದು…

Read More

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಅಮಾಸೆಬೈಲು: ಅಂಧತ್ವ ಅನ್ನೋದು ಕಣ್ಣಿಗೆ ಹೊರತು ಒಳಗಣ್ಣಿಗಲ್ಲ. ಬದುಕುವ ಛಲವಿದ್ದರೆ, ಎಂಥಹ ಸಂದರ್ಭವನ್ನೂ ಎದುರಿಸುವ ತಾಕತ್ತಿದ್ದರೇ ತನ್ನಲ್ಲಿನ ವಿಕಲತೆ ಅಡ್ಡಿಯಾಗದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಕುಂದಾಪುರ ತಾಲೂಕು ಅಮಾಸೆಬೈಲು ಗ್ರಾಮದ ತೊಂಬಟ್ಟಿನ ಅಂಧ ದಂಪತಿಗಳು. ತಮ್ಮ ಕನಸಿನ ಮನೆಯನ್ನು ಕಟ್ಟಿಕೊಳ್ಳಲು ಸ್ಥಳೀಯ ಗ್ರಾಮ ಪಂಚಾಯತ್‌ನೊಂದಿಗೆ ಸೆಣಸುತ್ತಾ, ತಮ್ಮ ಹಕ್ಕಿಗಾಗಿ ಹೋರಾಡುತ್ತಲೇ ಬದುಕು ಕಟ್ಟಿಕೊಂಡು ಮಾದರಿಯಾಗಿದ್ದಾರೆ. ಅಮಾಸೆಬೈಲು ಗ್ರಾಮ ತೊಂಬಟ್ಟು ಭಟ್ರಪಾಲು ನಿವಾಸಿ ನಾರಾಯಣ ಪೂಜಾರಿ ರಾಧಾ ಪೂಜಾರಿ ನಾಲ್ವರ ಮಕ್ಕಳಲ್ಲಿ ಕೊನೆಯವರಾದ ಗಣಪತಿ ಪೂಜಾರಿ ಅವರು ಹುಟ್ಟೂ ಅಂಧರು. ಅವರ ಪತ್ನಿ ಸುಶೀಲಾ ಪೂಜಾರಿ ಕೂಡಾ ಒಂದು ಕಣ್ಣು ದೃಷ್ಠಿ ಕೊಂಡಿದ್ದಾರೆ. ಆದರೇನಂತೆ ಬದುಕಿನಲ್ಲಿ ಒಂದಿಷ್ಟೂ ಧೈರ್ಯಗುಂದದೇ ಸಾಮಾನ್ಯರೂ ನಾಚಿಸುವಂತೆ ಬದುಕಿ ತೋರಿಸುತ್ತಿದ್ದಾರೆ ದಂಪತಿಗಳು. ಆದರೆ ಈ ದಂಪತಿಗಳ ಛಲದ ಬದುಕಿಗೆ ಅಮಾಸೆಬೈಲು ಗ್ರಾ.ಪಂ ಎಳ್ಳುನೀರು ಬಿಡುತ್ತಿದೆ. ವೈಯಕ್ತಿಕ ಮರ್ಚಿಗೆ ಅಂಧರೊಂದಿಗೆ ಸೆಣಸಾಡುತ್ತಿರುವ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಣ್ಣತನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಭಾನುವಾರ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್, ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ.ವಾಸುದೇವ ದೇವಾಡಿಗ, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಮಡಿವಾಳ, ಹಿಂದು ಪರ ಸಂಘಟನೆಗಳ ಕಾರ್ಯಕರ್ತರು, ಸೇವಾದಾರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾತಿ, ಧರ್ಮದ ಆಧಾರದಲ್ಲಿ ಸಮಾಜ ಛಿದ್ರವಾಗುತ್ತಿರುವ ಸಂದರ್ಭದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯು ಕಾರ್ಯ ದೊಡ್ಡದು. ಒಕ್ಕೂಟ ವ್ಯವಸ್ಥೆಯಲ್ಲಿ ಸಾಮರಸ್ಯದ ಬದುಕು ಕಂಡುಕೊಳ್ಳಬೇಕಿದ್ದರೆ, ಪರಸ್ಪರರ ಚಿಂತನೆಯನ್ನು ಗೌರವಿಸಿ ಎಲ್ಲರನ್ನೂ ಸಮಾನವಾಗಿ ಕಾಣುವಂತವರಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಜಿ. ಸಿದ್ಧರಾಮಯ್ಯ ಹೇಳಿದರು. ಅವರು ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಗುಲ್ವಾಡಿ ತೋಟದಮನೆ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ 2016ನೇ ಸಾಲಿನ ಪತ್ರಕರ್ತ ಸಂತೋಷ್ ಕುಮಾರ್ ಗುಲ್ವಾಡಿ ಸ್ವಾರಕ ಗೌರವ ಪುರಸ್ಕಾರವನ್ನು ಪತ್ರಕರ್ತ ಕೆ.ಪಿ ಮಂಜುನಾಥ ಸಾಗರ್ ಅವರಿಗೆ ಪ್ರದಾನಿಸಿ ಮಾತನಾಡಿದರು. ಸಂತೋಷ್‌ಕುಮಾರ್ ಗುಲ್ವಾಡಿ ಪತ್ರಿಕೋದ್ಯಮ, ಶಿಕ್ಷಣ ಹಾಗೂ ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿದೆ ಸೇವೆ ಅಪಾರವಾದುದು. ಅವರ ಗರಡಿಯಲ್ಲಿ ಬೆಳೆದು ಎತ್ತರಕ್ಕೇರಿದವರ ಸಂಖ್ಯೆ ದೊಡ್ಡದಿದೆ. ಗುಲ್ವಾಡಿ ಅವರ ಹುಟ್ಟೂರಿನಲ್ಲಿ ಅವರನ್ನು ಸ್ಮರಿಸುವ ಕಾರ್ಯವಾಗುತ್ತಿರುವುದು ಶ್ಲಾಘನೀಯ ಎಂದ ಅವರು ಯಾಕೂಬ್ ಖಾದರ್ ಗುಲ್ವಾಡಿ ಅವರು ಸಂತೋಷ್‌ಕುಮಾರ್ ಗುಲ್ವಾಡಿ ಅವರನ್ನು ಏಕಲವ್ಯನಂತೆ ಅನುಸರಿಸಿದವರು. ಗುಜರಿಯಂಗಡಿಯಲ್ಲಿದ್ದುಕೊಂಡು ಓದು, ಬರವಣಿಗೆಯ ಬಗೆಗೆ…

Read More