ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜ್ಞಾನಕ್ಕೆ ಸರಿಸಾಟಿಯಾದ ಸಂಪತ್ತು ವಿಶ್ವದಲ್ಲಿ ಯಾವುದೂ ಇಲ್ಲ. ಜ್ಞಾನ ಪವಿತ್ರವಾದುದು. ಶ್ರೇಷ್ಠವಾದ ಜ್ಞಾನಕ್ಕೆ ಎಂದೂ ತುಕ್ಕು ಹಿಡಿಯದು. ಜ್ಞಾನವನ್ನು ನೀಡುವ ಶಾಲೆ ಹಾಗೂ ಶಿಕ್ಷಕರ ಪಾತ್ರ ಕೂಡಾ ಅತ್ಯಂತ ಶ್ರೇಷ್ಠವಾದುದು ಎಂದು ಪುರೋಹಿತರಾದ ವೇ|ಮೂ|ರಾಮಕೃಷ್ಣ ಭಟ್ ಶಾರ್ಕೆ ಹೇಳಿದರು. ಕುಂದಾಪುರ ತಾಲೂಕು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು ಅದ್ಯಕ್ಷತೆ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ನರಸಿಂಹ ಭಟ್ ನೆಂಪು ದಾನಿಗಳಿಗೆ ಗೌರವಾರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಕಲ್ಮಾಡಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಹರ್ಜಿ ಕರುಣಾಕರ ಶೆಟ್ಟಿ, ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಹೈದರಬಾದ್ ಉದ್ಯಮಿ ಕೃಷ್ಣಮೂರ್ತಿ ಮಂಜರು, ಗ್ರಾಮ ಪಂಚಾಯತ್ ಸದಸ್ಯರಾದ ಉದಯ್ ಕೆ.ನಾಯ್ಕ್, ಸಿಂಗಾರಿ, ಲಕ್ಷ್ಮೀ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ರಾಹೆ-66ರ ಸೇತುವೆಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಹಾಗೂ ಮಹಿಂದ್ರಾ ಬೊಲೆರೊ ನಡೆದ ಸಂಭವಿಸಿದ ಅಪಘಾತದಲ್ಲಿ ವಾಹಗಳು ನುಜ್ಜುಗುಜ್ಜಾಗಿ, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ವರದಿಯಾಗಿದೆ. ಧರ್ಮಸ್ಥಳದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದ ಬೊಲೆರೊ ವಾಹನ ಡಿಕ್ಕಿಯಾಗಿ ವಾಹನಗಳು ಜಖಂಗೊಂಡಿದ್ದವು. ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು. ಡಿಕ್ಕಿಯ ರಭಸಲ್ಲಿ ಕೂದಲೆಳೆ ಅಂತರದಲ್ಲಿ ಸೇತುವೆ ಕೆಳಗೆ ಬೀಳದೇ ಬಚಾವಾಗಿದೆ. ಈ ಅಪಘಾತಕ್ಕೆ ಬೊಲಿರೊ ವಾಹನದ ಚಾಲಕನ ನಿರ್ಲಕ್ಷವೇ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಾಹನದ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದು, ಭಟ್ಕಳದಲ್ಲಿಯೂ ಕೂಡಾ ಕೆಲವು ವಾಹನಗಳಿಗೆ ಜಖಂ ಮಾಡಿ ಅಲ್ಲಿಂದ ಪಾರಾಗಿ ಬಂದಿದ್ದ ಎನ್ನಲಾಗಿದೆ. ಈ ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸಗೊಂಡಿತ್ತು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶ್ರೀ ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ, ಅಂಜಲಿ ಆಸ್ಪತ್ರೆ, ಬೈಂದೂರು, ಸಿನಿಯರ್ ಸಿಟಿಜನ್ ಅಸೋಸಿಯೇಷನ್ ಬೈಂದೂರು ಇವರ ಆಶ್ರಯದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ ಚಾರಿಟೀಸ್ (ರಿ.), ಲಯನ್ಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ, ಲಯನ್ಸ್ ಲಯನೆಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು ಸಹಯೋಗದಲ್ಲಿ ಮೇ 14 ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಸಂಪೂರ್ಣ ಉಚಿತ ಕಣ್ಣಿನ ತಪಾಸಣಾ ಶಿಬಿರ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಕಣ್ಣಿನ ತಪಾಸಣೆಗೆ ಒಳಪಡುವ ರೋಗಿಗಳಿಗೆ ಅಗತ್ಯವಿದ್ದಲ್ಲಿ ಪೊರೆ ರೋಗ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಗುವುದು. ಗ್ಲೊಕೋಮಾ ಕಾಯಿಲೆಯನ್ನು ಆಧುನಿಕ ‘ಹಮ್ಫ್ರೀ ಫೀಲ್ಡ್ ಅನಾಲೈಸರ್’ ಉಪಕರಣದಿಂದ ರಿಯಾಯಿತಿ ದರದಲ್ಲಿ ತಪಾಸಣೆ ಮಾಡಲಾಗುವುದು. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವಾ ಪರೀಕ್ಷೆಯ 2015ನೇ ಸಾಲಿನ ಫಲಿತಾಂಶ ಪ್ರಕಟಿಸಿದ್ದು ಕುಂದಾಪುರ ಮೂಲದ ನಿವ್ಯಾ ಪಿ. ಶೆಟ್ಟಿ 274ನೇ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ನಿವ್ಯಾ ಶೆಟ್ಟಿ ಕುಂದಾಪುರ ತಾಲೂಕಿನ ತೊಂಭಟ್ಟು ಮಾಜಿ ಪಟೇಲ್ ಸದಾಶಿವ ಶೆಟ್ಟಿ ಅವರ ಪುತ್ರ ಮಾಜಿ ಸರಕಾರಿ ಅಭಿಯೋಜಕ ಪ್ರಕಾಶ್ ಶೆಟ್ಟಿ ಅವರ ಪುತ್ರಿಯಾಗಿದ್ದಾರೆ. ರ್ಯಾಂಕ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ನಿವ್ಯಾ ಶೆಟ್ಟಿ ತೇರ್ಗಡೆ ಹೊಂದಿರುವ ಬಗ್ಗೆ ಹೆಮ್ಮೆ ಇದೆ. ಈ ಮೂಲಕ ಸಾಧನೆಗೊಂದು ಆರಂಭ ದೊರಕಿದಂತಾಗಿದೆ. ದೇಶ ಸೇವೆಗಾಗಿ ಮುಂದಿನ ಬದುಕನ್ನು ಮುಡಿಪಾಗಿಸುತ್ತೇನೆ. ಈ ಸಾಧನೆ ಮಾಡಲು ಕಾರಣರಾದ ತನ್ನ ಪೋಷಕರನ್ನು ಸ್ಮರಿಸುತ್ತೇನೆ ಎಂದ್ದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 6ನೇ ಶಾಖೆ ಹೆಮ್ಮಾಡಿಯ ವಿಘ್ನೇಶ್ವರ ಕಾಂಪ್ಲೆಕ್ಸ್ನಲ್ಲಿ ಲೋಕಾರ್ಪಣೆಗೊಂಡಿತು. ಸಾಗರ್ ಕೋ-ಆಪರೇಟಿವ್ ಕ್ರೆಡಿಟ್ ಕೋ-ಆಪರೇಟಿವ್ನ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೆಮ್ಮಾಡಿಯ ನೂತನ ಶಾಖೆಯನ್ನು ಲೋಕಾರ್ಪಣೆಗೊಳಿಸಿದರು. ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ನಾಯಕ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್ ಗಣಕೀಕರಣವನ್ನು ಉದ್ಘಾಟಿಸಿರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಗ್ರಾಮ ಪಂಚಾಯತ್ ಅಧ್ಯಕ್ಷೆ, ಜ್ಯೋತಿ ಹರೀಶ್ ಭಂಡಾರಿ, ಉಪಾಧ್ಯಕ್ಷ ಅಂತೋನಿ ಲೂವಿಸ್, ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ. ಎಂ. ಜೆ, ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ನಾಯ್ಕ್, ಪ್ರಗತಿ ಮಹಿಲಾ ವಿವಿಧೋದ್ದೇಶ ಸಹಕಾರಿ ಅಧ್ಯಕ್ಷ ಸಾಧು ಬಿಲ್ಲವ, ಹೆಮ್ಮಾಡಿ ಮೂರ್ತೇದಾರರ ಸೇವಾ ಸಹಕಾರಿ ಅಧ್ಯಕ್ಷ ಮಹಾಬಲ ಪೂಜಾರಿ, ಶ್ರೀ ಭದ್ರಮಹಾಂಕಾಳಿ ದೈವಸ್ಥಾನ ಅಧ್ಯಕ್ಷ ಕೆ. ಆನಂದ ಶೆಟ್ಟಿ, ಉದ್ಯಮಿ…
ಭಾರತೀಯ ಹಿಂದೂ ಹಬ್ಬಗಳಲ್ಲಿ ಯುಗಾದಿ ನಂತರದ ಸ್ಥಾನ ಅಕ್ಷಯ ತೃತೀಯಕ್ಕೆ ಸಲ್ಲುತ್ತದೆ. ಅಕ್ಷಯ ತೃತೀಯ ದಿವಸ ಶುಭ ಮುಹೂರ್ತಗಳೇ ತುಂಬಿ ಕೊಂಡಿರುವ, ಜೀವನದ ಅಭಿವೃದ್ಧಿ ಕುರಿತು ಸಂಕಲ್ಪಗಳೆಲ್ಲವನ್ನೂ ಸಾಕಾರಗೊಳಿಸುವ ಮಹಾ ಸುದಿನವಾಗಿದೆ. ಅಕ್ಷಯವೆಂದರೆ, ಕ್ಷಯವಿಲ್ಲದ್ದು, ಕಡಿಮೆಯಿಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನತೆ ಇಲ್ಲದ್ದು, ಇದು ಸಂವೃದ್ಧಿಯ ಸಂಕೇತ, ಶುಭಾರಂಭದ ದ್ಯೋತಕ, ನಿರಂತರೆಯ ಪ್ರತೀಕ. ಆದ್ದರಿಂದಲೇ ಈ ದಿನವಸ ಶುಭಕಾರ್ಯಗಳ ಪ್ರಾರಂಭ, ಗೃಹಪ್ರವೇಶ, ಅಕ್ಷರಾಭ್ಯಾಸ, ಹೊಸ ಉದ್ಯಮ, ವ್ಯಾಪಾರ, ವ್ಯವಹಾರಗಳ ಪ್ರಾರಂಭ ಉಪನಯನ, ವಿವಾಹ, ಹಣ ಹೂಡಿಕೆ, ಬಂಗಾರದ ಖರೀದಿ, ದಾನ ಕಾರ್ಯ, ಪೂಜೆ, ಪುನಸ್ಕಾರಗಳಿಗೆ ಅತ್ಯಂತ ಶ್ರೇಷ್ಠವಾಗಿದೆ. ಈ ದಿವಸ ಯಾವುದೇ ಸತ್ಕಾರ್ಯ, ಸಮಾರಂಭ, ಖರೀದಿಸಿದ ಬಂಗಾರ, ವಿಶೇಷವಾಗಿ ಆಭರಣ, ಮಾಡಿದ ಪೂಜೆ-ಪುನಸ್ಕಾರ, ಜಪ-ತಪ, ದಾನ-ಧರ್ಮಗಳಿಗೆ ಅಕ್ಷಯಫಲ ಪ್ರಾಪ್ತಿ ಎಂದು ಹೇಳಲಾಗಿದೆ. ಈ ದಿವಸ ಸಾಮಾನ್ಯವಾಗಿ ಎಲ್ಲ ಶುಭ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ…
ತೊಡಕುಗಳನ್ನು ಸವಾಲಾಗಿ ಸ್ವೀಕರಿಸಬೇಕು: ಪ್ರತಾಪಚಂದ್ರ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ದುಡಿಯುವವರಿಗೆ ಹತ್ತಾರು ತೊಡಕುಗಳು ಎದುರಾಗುವುದು ಸಹಜ. ಅವುಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನುಗ್ಗಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ. ಸಮಾಜ ಮುಖಿ ಕಾರ್ಯಗಳಲ್ಲಿ ಫಲಾಪೆಕ್ಷೆ ನುಸುಳದಿದ್ದರೆ ಮಾತ್ರ ಅವುಗಳು ಸೇವೆ ಎನಿಸುತ್ತವೆ. ಖಂಬದಕೋಣೆಯ ಪ್ರೀತಿ ಸೇವಾ ಸಂಸ್ಥೆ ಸಮುದಾಯದ ಶಿಕ್ಷಣ ಮತ್ತು ಆರೋಗ್ಯದ ಕಡೆಗೆ ತೋರುತ್ತಿರುವ ಕಾಳಜಿ ಅನುಕರಣೀಯ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಖಂಬದಕೋಣೆಯ ಪ್ರೀತಿ ಫೌಂಡೇಶನ್ನ ಎರಡನೆಯ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮಾತನಾಡಿ ಸೇವಾ ಕಾರ್ಯದಲ್ಲಿ ಹೊಂದಿರುವ ಪ್ರೀತಿಗೆ ಸಮಾನವಾದ ತೃಪ್ತಿ ಮಾಡಿದವನಿಗೆ ಲಭಿಸುತ್ತದೆ ಎಂದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಹಾಲಿ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಮಹೇಂದ್ರ ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ…
ಕುಂದಾಪ್ರ ಡಾಟ್ ಕಾಂ ಶಿವಮೊಗ್ಗ ಜಿಲ್ಲೆಯಲ್ಲಿ ದಕ್ಷ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹೆಸರು ಮಾಡಿರುವ ರವಿ. ಡಿ. ಚನ್ನಣ್ಣನವರ್ ಅವರು ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿವೆ. ಐಪಿಎಸ್ ಅಧಿಕಾರಿಯಾಗುವ ಮೊದಲು ಅವರು ಪಟ್ಟಿ ಪಡಿಪಾಟಲು, ಪೊಷಕರು ಮಗುವನ್ನು ಹೇಗೆ ಬೆಳೆಸಬೇಕು ಎಂಬ ಬಗ್ಗೆ ಅವರಿತ್ತ ಸಲಹೆ ಕೇಳಿದವರ ಮನದಲ್ಲಿ ಸ್ಥೂರ್ತಿ ಚಿಲುಮೆ ಉಕ್ಕಿ ಹರಿದರೇ ಅಚ್ಚರಿಪಡಬೇಕಿಲ್ಲ… ಕುಂದಾಪ್ರ ಡಾಟ್ ಕಾಂ ವಿಡಿಯೋ ನೋಡಿ ಅವರಾಡಿದ ಮಾತುಗಳ ಹೈಲೆಟ್ಸ್ ಇಲ್ಲಿದೆ. ದುಡ್ಡು ದೊಡ್ಡಪ್ಪನಾದರೇ, ವಿದ್ಯೆ ಅದರಪ್ಪ…. ಜಗತ್ತನ್ನು ಆಳುತ್ತಿರುವುದುವುದು ಹಣ ಅಲ್ಲ, ಗತ್ತಲ್ಲ, ಅಧಿಕಾರವಂತೂ ಅಲ್ಲವೇ ಅಲ್ಲ. ಅದು ಜ್ಞಾನ ಮಾತ್ರ. ಬಲಪಂಥೀಯರು, ಎಡಪಂಥೀಯರು, ಮಾವೋವಾದಿಗಳು ಎಂದರೆ ಯಾರು? ಅವರ ಸಿದ್ಧಾಂತಗಳೇನು ಎಂಬುದನ್ನು ಮೊದಲು ಮಕ್ಕಳಿಗೆ ತಿಳಿಸಿ ದೇಶಪ್ರೇಮ ಎಂದರೆ ಏನು? ರಾಜ್ಯವನ್ನು ಪ್ರೀತಿಸುವುದೇ ದೇಶವನ್ನು ಪ್ರೀತಿಸುವುದೇ ಅಥವಾ ಅದಕ್ಕೂ ಮೀರಿದ್ದೇ? ಅದನ್ನೂ ಹೇಳಿ ಕುಂದಾಪ್ರ ಡಾಟ್ ಕಾಂ ಮನೆಯಲ್ಲಿ ಪುಸ್ತಕ ೪ ಪುಸ್ತಕವನ್ನಾದರೂ ಇಡಿ. ಮಕ್ಕಳಿಗೆ ಎಲ್ಲವನ್ನೂ ಹೇಳಿಕೊಡುವ ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ ಹೆಮ್ಮಾಡಿ: ಅಧಿಕಾರ ಮತ್ತು ಜವಾಬ್ದಾರಿ ಎರಡನ್ನೂ ಸಮಾನವಾಗಿ ನಿರ್ವಹಿಸಿದಾಗ ಅಭಿವೃದ್ಧಿ. ಜೀವನದಲ್ಲಿ ಶಿಸ್ತು, ಬದ್ಧತೆಯನ್ನು ಅಳವಡಿಸಿಕೊಂಡಾಗ ಮಾತ್ರ ವ್ಯವಸ್ಥೆ ಸುಗಮ. ಸಮಾಜದಲ್ಲಿ ಅತ್ಯಂತ ತಳಮಟ್ಟದಲ್ಲಿ ಜೀವಿಸುತ್ತಿರುವ ಜನರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆ ತರುವಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ ತಾಲೂಕು ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕಟ್ಬೇಲ್ತೂರು ಶ್ರೀ ಭದ್ರಮಹಾಕಾಳಿ ಸಭಾಭವನದಲ್ಲಿ ಶನಿವಾರ ಜರಗಿದ ಹೆಮ್ಮಾಡಿ ಎ, ಕಟ್ಬೇಲ್ತೂರು ಮತ್ತು ದೇವಲ್ಕುಂದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಕಟ್ಬೇಲ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಅನ್ನಪೂರ್ಣ ಅವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಭದ್ರಮಹಾಕಾಳಿ ದೈವಸ್ಥಾನದ ಮೊಕ್ತೇಸರ ಹೆರಿಯಣ್ಣ ಶೆಟ್ಟಿ ಅವರು ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದರು.…
ಮೇ ಎರಡನೇ ಭಾನುವಾರದಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಕರುಣಾಮುಯಿ ತಾಯಿ ಹಾಗೂ ತಾಯಂದಿರ ದಿನದ ಕುರಿತಾಗಿ ಯುವ ಬರಹಗಾರ ಸಂದೇಶ ಶೆಟ್ಟಿ ಆರ್ಡಿ ಬರೆದ ಲೇಖನ ಮತ್ತೆ ಓದುಗರಿಗಾಗಿ… ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನದ ಬೆಳಕನ್ನು ಹರಿಸಲು ತಾಯಿ ಎನ್ನುವ ಎರಡಕ್ಷರದ ಮಹಾಮಂತ್ರವೇ ಸಾಕು ಎಂದು ಬಲ್ಲವರು ಹೇಳಿದ್ದಾರೆ. ನವ ಮಾಸ ಪರ್ಯಂತ ತನ್ನ ಉದರದಲ್ಲಿ ಹೊತ್ತು, ಲೋಕದ ಬೆಳಕನ್ನು ಕಾಣುವಂತೆ ಮಾಡಿದ ತಾಯಿಯ ಪ್ರೀತಿ, ವಾತ್ಸಲ್ಯ, ಒಲುಮೆ ಮನುಕುಲದ ಉನ್ನತಿಯ ಚಿಲುಮೆಯಾಗಿರುವುದಷ್ಟೇ ಅಲ್ಲದೆ ಅಸಂಖ್ಯಾತ ಕವಿಗಳ, ಕಲಾವಿದರ, ಮಹಾನ್ ವ್ಯಕ್ತಿಗಳ ಜೀವನದ ಉತ್ಸಾಹದ ಚಿಲುಮೆಯೂ ಆಗಿದೆ. ವಿಶ್ವದ ಅನೇಕ ರಾಷ್ಟ್ರಗಳು ತಮ್ಮ ದೇಶವನ್ನು ಹಾಗೂ ಭಾಷೆಯನ್ನು ತಾಯಿಯೊಂದಿಗೆ ಗುರುತಿಸಿಕೊಳ್ಳುತ್ತಾರೆ. ಭಾರತದ ವೈಶಿಷ್ಟ್ಯವೂ ಕೂಡ ಇದೆ ಆಗಿದೆ. ನದಿ, ಬೆಟ್ಟ, ಪರ್ವತ, ನಿಸರ್ಗವನ್ನೂ ಮಾತೆಯೆಂದೇ ಆರಾಧಿಸಲಾಗುತ್ತದೆ. ಕಠೋರ ವ್ಯಕ್ತಿತ್ವದ ವ್ಯಕ್ತಿಯೂ ಕೂಡ ನೋವಾದಾಗ ಅಮ್ಮಾ ಎಂದು ಉದ್ಗರಿಸುತ್ತಾನೆ. ತಾಯಿಯ ಮಹಿಮೆಯೇ ಅಂತದ್ದು, ಮನುಕುಲದ ಅಭ್ಯುದಯಕ್ಕೆ, ವಿಕಾಸಕ್ಕೆ ಕಾರಣೀಕರ್ತಳಾದ ಅಮ್ಮನ ನೆನಪು…
