Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ವಿಜೇತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಶ್ಯಾನುಭಾಗ್ ಅವರನ್ನು ಶ್ರೀ ಬಸವೇಶ್ವರ ದೇವಸ್ಥಾನ ಮೇಲ್‌ಗಂಗೊಳ್ಳಿ, ಓಂ ಶ್ರೀ ಮಾತೃ ಮಂಡಳಿ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗುಜ್ಜಾಡಿಯ ಅವರ ಸ್ವಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಮೇಲ್‌ಗಂಗೊಳ್ಳಿ, ಓಂ ಶ್ರೀ ಮಾತೃ ಮಂಡಳಿ ಮೇಲ್‌ಗಂಗೊಳ್ಳಿ ಗಂಗೊಳ್ಳಿ ಇವರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಯು. ರವೀಂದ್ರ ಶ್ಯಾನುಭಾಗ್, ಗೀತಾ ಆರ್.ಶ್ಯಾನುಭಾಗ್, ಮಾಜಿ ಮಂಡಳ ಪ್ರಧಾನ ಬಿ.ಸದಾನಂದ ಶೆಣೈ, ಸಮಾಜಸೇವಕ ಜಿ.ಗಣಪತಿ ಶಿಪಾ, ದೇವಸ್ಥಾನದ ಪ್ರಧಾನ ಅರ್ಚಕ ಜಗದೀಶ ಎಂ.ಜಿ., ದೇವಸ್ಥಾನದ ಅಧ್ಯಕ್ಷ ಶ್ರೀಧರ ಎನ್, ಕಾರ್ಯದರ್ಶಿ ಶಂಕರ ಎಂ.ಜಿ., ಮಾತೃ ಮಂಡಳಿ ಅಧ್ಯಕ್ಷೆ ಭೂದೇವಿ, ಗೌರವಾಧ್ಯಕ್ಷೆ ಪದ್ಮಾವತಿ, ಈಶ್ವರ ಜಿ. ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಲಯದ ಸ. ಹಿ. ಪ್ರಾ. ಶಾಲೆ ವಸ್ರೆ ಯಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಬೈಂದೂರು ವಿಭಾಗದ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು, ಮತು ಶಿಕ್ಷಕ ಗಣಪತಿ ಹೋಬಳಿದಾರ್ ಉದ್ಘಾಟಿಸಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ, ಇಂದಿನ ಮಕ್ಕಳೆಲ್ಲಿ ಪೋಷಕರು ಈ ಬಗ್ಗೆ ಜಾಗೃತಿಯನ್ನು ಮೂಡಿಸಿ ಎಂದು ತಿಳಿಸಿದರು . ವಸ್ರೆ ಒಕ್ಕೂಟದ ಅಧ್ಯಕ್ಷರಾದ ರಾಮ ಗಾಣಿಗರವರು ಅಧ್ಯಕ್ಷತೆಯನ್ನು ವಹಿಸಿದರು . ಶ್ರೀ . ಕ್ಷೇ. ಧ . ಗ್ರಾ. ಯೋಜನೆಯ ಮೇಲ್ವಿಚಾರಕರಾದ ಪ್ರಕಾಶ್ರವರು ಪ್ರತಿಯೊಬ್ಬ ವ್ಯಕ್ತಿ ತಮ್ಮ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡರೆ ನಮ್ಮ ಪರಿಸರ ಸ್ವಚ್ಚವಾಗಿರುತ್ತದೆಂದು ಪ್ರಾಸ್ತವಿಕ ಮಾತನ್ನು ಆಡಿದರು. ಸಭೆಯಲ್ಲಿ ಶಿಕ್ಷಕರಾದ ವೆಂಕಟೇಶ್‌ರವರು ಒಕ್ಕೂಟದ ಪದಾಧಿಕಾರಿಗಳಾದ ಸುಮಲತಾ, ನಾಗರತ್ನ, ಲಕ್ಷಣ ಗಾಣಿಗ ಉಪಸ್ಥಿತರಿದ್ದರು. ಗ್ರಾಮದ ಸೇವಾಪ್ರತಿನಿಧಿಯಾದ ಶೋಭಾ ಕಾರ್ಯಕ್ರಮವನ್ನು ನಿರೂಪಿಸಿದರು. ಗೋಪಾಲ ಪೂಜಾರಿಯವರು ಸ್ವಾಗತಿಸಿದರು, ಮತ್ತು ಸುಬ್ಬಯ್ಯ ಸರ್ವರನ್ನು ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕ್ಷಿತಿಜ ಇಕೋ ಕ್ಲಬ್ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕ್ಷಿತಿಜ ಇಕೋ ಕ್ಲಬ್‌ನ ಸಂಚಾಲಕಿ ಹಾಗೂ ಶಿಕ್ಷಕಿ ಮುಕ್ತಾ .ಬಿ ನಾಯ್ಕ ಪ್ರಾಸ್ತಾವಿಕ ಭಾಷಣದಲ್ಲಿ ಇತ್ತಿಚ್ಚಿನ ದಿನಗಳಲ್ಲಿ ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗುತ್ತಿದ್ದು ಅವುಗಳನ್ನು ಸುಟ್ಟು ಹಾಕಿದರು ಅದರಿಂದ ಕೆಟ್ಟ ವಾಸನೆಗಳು ನಮ್ಮ ದೇಹಕ್ಕೆ ಹರಡುತ್ತದೆ. ಇದರಿಂದ ನಮಗೆ ನಾನಾ ರೀತಿಯ ಕಾಯಿಲೆಗಳು ಉಂಟಾಗುವ ಸಂಭವ ಇರುತ್ತದೆ ಎಂದರು. ಹಾಗೇ ಇತ್ತೀಚ್ಚಿನ ದಿನಗಳಲ್ಲಿ ಗಿಡಮರಗಳ ಸಂಖ್ಯೆಗಳು ಕಡಿಮೆಯಾಗುತ್ತಿದ್ದು, ಮರಗಿಡಗಳಿಂದ ತಂಪಾದ ಗಾಳಿಗಳಿಂದ ನಮ್ಮ ಮನಸು ಹಗುರ ವಾಗುತ್ತದೆ. ಆದರೆ ಮರಗಿಡ ಇಲ್ಲ. ನಾವೂ ಸಮಾರಂಭಗಳಿಗೆ ಕೊಡುಗೆಗಳನ್ನು ನೀಡುತ್ತೇವೆ ಆದರೆ ಪರಿಸರಕ್ಕೆ ಯಾವುದೇ ಕೊಡುಗೆ ಗಳನ್ನು ನೀಡುವುದಿಲ್ಲಾ, ಅವುಗಳು ಮಾತ್ರ ನಮಗೆ ತಂಪಾದ ಗಾಳಿ, ಹಣ್ಣುಗಳನ್ನು, ಕಾಯಿಗಳನ್ನು ಕೊಡುತ್ತದೆ. ನಾವು ಕನಿಷ್ಟ ಮನೆಗಳಲ್ಲಿ ಒಂದು ಗಿಡಗಳನ್ನು ಬೆಳಸಬೇಕು ಎಂದರು. ಈ ಸಂದರ್ಭದಲ್ಲಿ ಮಂಜುನಾಥ ಪಟಗಾರ್, ಯಶೋಧ ಟೀಚರ್, ಸಂತೋಷ ಭಂಡಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಮನುಷ್ಯನು ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಉತ್ತಮ ಆಹಾರವನ್ನು ಸೇವಿಸಿ ಪರಿಸರದ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ನಾವು ನಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದರ ಜೊತೆಗೆ ಆರೋಗ್ಯ ವಿಮೆಯನ್ನು ಮಾಡಿಸಿಕೊಂಡು ಆರೋಗ್ಯ ಭದ್ರತೆ ಮಾಡಿಕೊಳ್ಳಬೇಕಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ನೀಡಿದೆ ಎಂದು ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಸಂಪೂರ್ಣ ಸುರಕ್ಷಾ ಯೋಜನೆ ಕುರಿತು ಮಾಹಿತಿ ನೀಡಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯ ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಸಂಪೂರ್ಣ ಸುರಕ್ಷಾ ಯೋಜನೆ ಕುರಿತು ಮಾಹಿತಿ ನೀಡಿ ಮಾತನಾಡಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕರ್ನಾಟಕ ಸರಕಾರದ ಜಿಲ್ಲಾ ಮಟ್ಟದ ಕೆಡಿಪಿ ಸಮಿತಿ ಕಾರ್ಯಾಚರಿಸುತ್ತಿದ್ದು ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರನ್ನು ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಸರಕಾರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಅನುಭವ ಹೊಂದಿರುವ ರಾಜು ಪೂಜಾರಿ ಅವರನ್ನು ಕೆಡಿಪಿ ಸಮಿತಿಯ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರವು ಆದೇಶ ಹೊರಡಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಇಲ್ಲಿನ ಪರಿಸರದಲ್ಲಿ ನಡೆಸುತ್ತಿರುವ ಉಚಿತ ಮಾನಸಿಕ ಆರೋಗ್ಯ ಶಿಬಿರದ ಪ್ರಯೋಜನ ಪರಿಸರದ ಬಡ ರೋಗಿಗಳು ಪಡೆದುಕೊಳ್ಳುವಂತಾಗಲಿ ಎಂದು ಕೋಟ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಘವೇಂದ್ರ ಕಾಂಚನ್ ಹೇಳಿದರು. ಮನಸ್ಮಿತ ಫೌಂಡೇಶನ್ ಕೋಟ, ಪರಿವರ್ತನ ಪುನರ್ವಸತಿ ಕೇಂದ್ರ ಕೋಟ, ಲಯನ್ಸ್ ಕ್ಲಬ್ ಬ್ರಹ್ಮಾವರ, ಬಾರ್ಕೂರು ಇವರ ವತಿಯಿಂದ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ತಪಾಸಣೆ ಮತ್ತು ಔಷಧಿ ವಿತರಣೆ ಶಿಬಿರವನ್ನು ಉದ್ಘಾಟಿಸಿ ಮಾನಾಡಿದರು. ಇಂತಹ ಒಂದು ಉತ್ತಮ ಕಾರ್ಯವನ್ನು ಪ್ರತಿ ತಿಂಗಳು ಹಮ್ಮಿಕೊಂಡಿರುವ ಈ ಸಂಸ್ಥೆಗಳ ಪ್ರಯತ್ನ ನಿಜವಾಗಲೂ ಶ್ಲಾಘನೀಯ ಎಂದರು. ಮುಖ್ಯ ಅತಿಥಿಗಳಾಗಿ ಭರತ್ ಸೆಲೆಬ್ರೇಶನ್‌ನ ಚೇರ್‌ಮನ್, ಉದ್ಯಮಿ ಭರತ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರಂತರವಾಗಿ ಸಾಗಲಿ, ಜನರು ಯಾವುದೇ ಹಿಂಜರಿಕೆಯಿಲ್ಲದೆ ಮಾನಸಿಕ ಶಿಬಿರಕ್ಕೆ ಚಿಕಿತ್ಸೆ ಪಡೆಯಬೇಕು ಎಂದು ಅಭಿಪ್ರಾಯಪಟ್ಟರು. ಮನೋವೈದ್ಯರಾದ ಡಾ| ಪ್ರಕಾಶ್ ತೋಳಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಿವಿ, ಮೂಗು, ಗಂಟಲು ವೈದ್ಯರಾದ ಡಾ| ಸತೀಶ್ ಪೂಜಾರಿ ಸಭೆಯ ಅಧ್ಯಕ್ಷೆ ವಹಿಸಿದ್ದರು. ಲಯನ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪರಿಸರವನ್ನು ಉಳಿಸಿಬೆಳೆಸುವಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದು. ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಇತರರಲ್ಲೂ ಆ ಬಗೆಗ ಪ್ರಜ್ಞೆಯನ್ನು ಮೂಡಿಸಬೇಕು ಎಂದು ಜಿ.ಎಸ್.ವಿ.ಎಸ್ ಅಸೋಷಿಯೇಶನ್ನಿನ ಅಧ್ಯಕ್ಷರಾದ ಡಾ.ಕಾಶಿನಾಥ ಪೈ ಅಭಿಪ್ರಾಯಪಟ್ಟರು ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಪರಿಸರದ ಅರಿವು ನೆರವು ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ನಿಶ್ಮಿತಾ ಮತ್ತು ಅನುಷಾ ಶೆಣೈ ಪರಿಸರ ರಕ್ಷಣೆಯ ಕುರಿತಂತೆ ವಿಚಾರಗಳನ್ನು ಮಂಡಿಸಿ ನಮ್ಮ ದಿನನಿತ್ಯದ ಸಣ್ಣ ಪುಟ್ಟ ಚಟುವಟಿಕೆಗಳಲ್ಲಿಯೂ ಕೂಡ ಪರಿಸರಕ್ಕೆ ಪೂರಕವಾದ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಇರುವ ಪರಿಸರವನ್ನು ರಕ್ಷಿಸಿಕೊಳ್ಳುವುದು ನಮ್ಮ ಪ್ರಥಮ ಆದ್ಯತೆಯಾಗಬೇಕು ಎಂದು ಹೇಳಿದರು ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಕವಿತಾ ಎಮ್ ಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ವಿದ್ಯಾರ್ಥಿನಿ ಆಶಾ ಪ್ರಾರ್ಥಿಸಿದರು. ನಾಗರಾಜ ನಾಯಕ್ ಕಾರ‍್ಯಕ್ರಮ ನಿರೂಪಿಸಿದರು. ನಾಗೇಂದ್ರ ಮೊಗವೀರ ವಂದಿಸಿದರು. ವರದಿ : ನರೇಂದ್ರ ಎಸ್ ಗಂಗೊಳ್ಳಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ಥಳೀಯ ಪತ್ರಿಕೆಯೊಂದರಲ್ಲಿ ಅಕ್ಷತಾ ದೇವಾಡಿಗ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಕ್ಷಾಧಾರಗಳಿಲ್ಲದೆ ನಿರಂತರವಾಗಿ ವ್ಯಕ್ತಿಯೋರ್ವರ ಮಾನಹಾನಿ ಮಾಡಲಾಗುತ್ತಿರುವುದನ್ನು ಖಂಡಿಸಿ ಬೈಂದೂರು ಹೊಬಳಿಯ ಸಾರ್ವಜನಿಕರು ಬೈಂದೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಗೌರಿ ದೇವಾಡಿಗ ಮಾತನಾಡಿ, ಅಕ್ಷತಾ ದೇವಾಡಿಗಳ ಕೊಲೆಯ ಕುರಿತಾಗಿ ಪತ್ರಿಕೆಯೊಂದರಲ್ಲಿ ಇಲ್ಲ ಸಲ್ಲದ ಆರೋಪಗಳನ್ನು ನಿರಂತವಾಗಿ ಮಾಡುತ್ತಾ ತೇಜೋವಧೆ ಮಾಡಿರುವುದಲ್ಲದೇ ಅಕ್ಷತಾಳ ಕುಟುಂಬಕ್ಕೂ ಮತ್ತೆ ಕರಾಳ ದಿನವನ್ನು ನೆನಪಿಸುವಂತೆ ಮಾಡಲಾಗುತ್ತಿದೆ. ಇಂತಹ ಘಟನೆಗಳು ಸಮುದಾಯಗಳ ನಡುವೆ ಸಂಘರ್ಷವನ್ನು ಹುಟ್ಟುಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸಲು ದಾರಿಮಾಡಿಕೊಡುತ್ತವೆ ಎಂದರು. ಕುಂದಾಪ್ರ ಡಾಟ್ ಕಾಂ ವರದಿ ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಮಾತನಾಡಿ ಅಕ್ಷತಾ ದೇವಾಡಿಗ ಪ್ರಕರಣವನ್ನು ಸ್ವತಃ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಅವರೇ ಕೈಗೆತ್ತಿಕೊಂಡು ತನಿಕೆ ನಡೆಸಿ ನೈಜ ಆರೋಪಿಯನ್ನು ಬಂಧಿಸಿದ್ದಾರೆ. ಆದಾಗ್ಯೂ ಇನ್ನೂ ಕೆಲವು ಆರೋಪಿಗಳನ್ನು ರಕ್ಷಿಸಲಾಗಿದೆ ಎಂದು ಹೇಳಿ ನಿರಂತರವಾಗಿ ಪತ್ರಿಕೆಯಲ್ಲಿ ಬರೆದು ಸಮಾಜಕ್ಕೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಂಡ್ಲೂರು ಸಂತ ಅಂತೋನಿ ಪ್ರಾರ್ಥನಾ ಮಂದಿರದ ಆವರಣದ ಎದುರಿನಲ್ಲಿ ನಿಲ್ಲಿಸಲಾಗಿದ್ದ ಸಂತ ಅಂತೋನಿ ಮೂರ್ತಿಯನ್ನು ದುಷ್ಕರ್ಮಿಗಳು ಒಡೆದುಹಾಕಿದ ಘಟನೆ ವರದಿಯಾಗಿದೆ. ಕಂಡ್ಲೂರಿನ ಪ್ರಾರ್ಥನಾ ಮಂದಿರ ನಾಲ್ಕು ಬದಿಗಳಲ್ಲಿ ಸಂತ ಅಂತೋನಿ ಮೂರ್ತಿಯನ್ನು ನಿರ್ಮಿಸಲಾಗಿದ್ದು, ಅದಕ್ಕೆ ಕೋಣೆಯನ್ನು ನಿರ್ಮಿಸಲಾಗಿತ್ತು. ಭಾನುವಾರ ರಾತ್ರಿ ಬಳಿ ಮಳೆ ಇದ್ದುದನ್ನು ತಮ್ಮ ಕುಕೃತ್ಯಕ್ಕೆ ಬಳಸಿಕೊಂಡ ದುಷ್ಕರ್ಮಿಗಳು ಮೂರ್ತಿಯನ್ನು ಒಡೆದು ಪುಡಿಗೈದಿದ್ದಾರೆ. ಬೆಳಿಗ್ಗೆ ವೇಳೆಗೆ ಒಡೆದ ಮೂರ್ತಿಯನ್ನು ಕಂಡ ಸ್ಥಳೀಯರು ಧರ್ಮಗುರು ವಿಶಾಲೋ ಲೋಬೋ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್‌ನ ಅಧೀನಕ್ಕೊಳಪಟ್ಟಿದ್ದು ಕಂಡ್ಲೂರಿನ ಪ್ರಾರ್ಥನಾ ಮಂದಿರವೂ ಹೆದ್ದಾರಿಯ ಪಕ್ಕದಲ್ಲಿಯೇ ಇದ್ದರೂ ನಿರ್ಭೀತವಾಗಿ ದುಷ್ಕೃತ್ಯ ನಡೆಸಿ ಶಾಂತಿ ಕದಡುವ ಕೆಲಸಕ್ಕೆ ಮುಂದಾಗಿರುವುದನ್ನು ಸರ್ವಧರ್ಮದ ಮುಖಂಡರು ಖಂಡಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲೆಸಿಮೀಯ ಮೇಜರ್ (ರಕ್ತ ಹೀನತೆ) ಕಾಯಿಲೆಯಿಂದ ಬಳಲುತ್ತಿರುವ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಯಾಗಿರುವ ಮೂರು ವರ್ಷದ ಬಾಲಕಿ ಗ್ರಿಷ್ಮಿತಾ ವೈದ್ಯಕೀಯ ಚಿಕಿತ್ಸೆಗಾಗಿ ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾಳೆ. ಬೆಂಗಳೂರಿನಲ್ಲಿ ಬೀಡಾ ಅಂಗಡಿ ನಡೆಸುತ್ತಿರುವ ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿ ಮಧುಕರ ಪೂಜಾರಿ ಎಂಬುವರ ಏಕೈಕ ಪುತ್ರಿ ಮೂರು ವರ್ಷದ ಬಾಲಕಿ ಗ್ರಿಷ್ಮಿತಾಳಿಗೆ ತಲೆಸಿಮೀಯ ಮೇಜರ್ (ರಕ್ತಹೀನತೆ) ಕಾಯಿಲೆ ಇರುವುದು ವೈದ್ಯರ ತಾಪಾಸಣೆಯಿಂದ ಕಂಡು ಬಂದಿದೆ. ಇದರಿಂದಾಗಿ ಪ್ರತಿ ತಿಂಗಳಿಗೊಮ್ಮೆ ರಕ್ತವನ್ನು ಜೀವನ ಪರ್ಯಂತ ನೀಡಬೇಕಾಗುತ್ತದೆ ಅಲ್ಲದೆ ಇದರ ಚಿಕಿತ್ಸೆಗಾಗಿ ಮೋನ್ ಮೆರೋ ಟ್ರಾನ್ಸ್‌ಪ್ಲೆಂಟ್ (ಅಸ್ತಿಮಜ್ಜೆ) ಮಾಡಬೇಕಾಗುತ್ತದೆ. ಈ ಚಿಕಿತ್ಸೆಗೆ ಸುಮಾರು 30 ಲಕ್ಷದಿಂದ ೩೫ ಲಕ್ಷದವರೆಗೆ ಖರ್ಚು ತಗುಲಬಹುದು ಎಂದು ಬೆಂಗಳೂರಿನ ನಾರಾಯಣ ಹೃದಯಾಲಯದ ತಜ್ಞ ವೈದ್ಯರು ತಿಳಿಸಿದ್ದಾರೆ. ಮಧುಕರ ಪೂಜಾರಿ ಆರ್ಥಿಕವಾಗಿ ತೀರ ಬಡವರಾಗಿದ್ದು, ಪತ್ನಿ ಹಾಗೂ ಪುತ್ರಿಯೊಂದಿಗೆ ಬೆಂಗಳೂರಿನಲ್ಲಿ ಬೀಡಾ ಅಂಗಡಿ ಇಟ್ಟು ಜೀವನ ಸಾಗಿಸುತ್ತಿದ್ದಾರೆ. ಊರಿನ ಮನೆಯಲ್ಲಿ ತಾಯಿಯಿಬ್ಬರೇ…

Read More