Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ, ನ.೩೦: ‘ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಕೇವಲ ಸಾಕ್ಷರರನ್ನಾಗಿಸುತ್ತಿದೆ. ಆದರೆ ವಿದ್ಯೆಯ ಆಶಯ ಪೂರ್ಣವಾಗುವುದು ಸಾಂಸ್ಕೃತಿಕ ಶಿಕ್ಷಣ ದೊರೆತಾಗ ಮಾತ್ರ. ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ, ಸಾಂಸ್ಕೃತಿಕ ತಳಹದಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿಯುತ ಕೆಲಸವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮಾಡುತ್ತಿದೆ. ಆಳ್ವಾಸ್ ವಿದ್ಯಾರ್ಥಿಸಿರಿಯಂತಹ ಸಮ್ಮೇಳನಗಳು ವಿಚಾರವಂತಿಕೆಯನ್ನು, ಸಾಕಷ್ಟು ವಿಷಯಗಳನ್ನು ಏಕಕಾಲಕ್ಕೆ ಲಕ್ಷಗಟ್ಟಲೇ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿವೆ’ ಎಂದು ಪ್ರಸಿದ್ಧ ರಂಗಕರ್ಮಿ ಮಂಡ್ಯ ರಮೇಶ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಆಳ್ವಾಸ್ ವಿದ್ಯಾರ್ಥಿಸಿರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಮಾನವೀಯತೆಯನ್ನು ತಿಳಿಸಿಕೊಡುವ, ಬೇರಿನ ಮಟ್ಟದಲ್ಲಿ ಆಪ್ತತೆಯನ್ನು ಹೆಚ್ಚಿಸುವ ಕೆಲಸ ಈ ಸಮ್ಮೇಳನದಲ್ಲಿ ನಡೆಯುತ್ತಿದೆ. ಇಲ್ಲಿರುವ ಅಚ್ಚುಕಟ್ಟನದ ಹಿಂದಿನ ಶ್ರಮ ವಿಸ್ಮಯಕಾರಿಯಾದುದು. ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯಗಳನ್ನು ಒಂದೇ ನೆಲೆಯಲ್ಲಿ ಕಟ್ಟಿಕೊಡುತ್ತಿರುವ ಆಳ್ವಾಸ್ ಬಹುತ್ವದ ನೆಲೆಯಲ್ಲಿ ಬೆಳೆಯುತ್ತಿರುವ ಸಂಸ್ಥೆ ಎಂದರು. ಆಳ್ವಾಸ್ ವಿದ್ಯಾರ್ಥಿಸಿರಿ ಸರ್ವಾಧ್ಯಕ್ಷತೆ ವಹಿಸಿದ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಶೆಣೈ…

Read More

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಿಂದೂ ಧರ್ಮದಲ್ಲಿ ಮದುವೆ ಎಂದ ಮೇಲೆ ಸಂಭ್ರಮ ಸಡಗರದೊಂದಿಗೆ ವಾದ್ಯ, ಪುರೋಹಿತರ ಸಂಸ್ಕೃತ ಮಂತ್ರ ಪಠಣ ಸರ್ವೇಸಾಮಾನ್ಯ. ಆ ಸಂಭ್ರಮವೆನ್ನುವುದು ವಧುವರರ ಪಾಲಿಗೆ ವಿಶಿಷ್ಟವಾದದ್ದು. ಹಾಗಾಗಿ ವಿಶಿಷ್ಟ ಕ್ಷಣ ವಿಶೇಷವಾಗಿರಬೇಕೆಂದು ಆಲೋಚಿಸಿದ ಜೋಡಿ ಸಂಸ್ಕೃತ ಮಂತ್ರಘೋಷದ ಬದಲಿಗೆ ಕನ್ನಡ ಮಂತ್ರಘೋಷ ಪಠಣಕ್ಕೆ ಅವಕಾಶ ಮಾಡಿಕೊಟ್ಟು ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ. ಪತ್ರಕರ್ತ ಹಾಗೂ ಜೆಸಿಐ ನಿಕಟಪೂರ್ವಾಧ್ಯಕ್ಷ ಅರುಣಕುಮಾರ್ ಶಿರೂರು ಹಾಗೂ ಬಿಂದು ಅವರು ಭಟ್ಕಳದ ಶ್ರೀ ನಾಗಯಕ್ಷೆ ದೇವಸ್ಥಾನದ ಸಭಾಭವನದಲ್ಲಿ ಇತ್ತಿಚಿಗೆ ಅಚ್ಚಕನ್ನಡದ ಮಂತ್ರಘೋಷದೊಂದಿಗೆ ಗೃಹಸ್ಥಾಶ್ರಮಕ್ಕೆ ಕಾಲಿರಿಸಿ ಕನ್ನಡ ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ. ಅಂದಹಾಗೆ ಕಾಸರಗೋಡು ಮೂಲದ ಹಿರೆಮಗಳೂರು ಕಣ್ಣನ್ ಅವರ ಮಕ್ಕಳು ಹಾಗೂ ಶಿಷ್ಯರು ಕನ್ನಡ ಮಂತ್ರದ ಮೂಲಕ ಮದುವೆ ಸಂಪ್ರದಾಯಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಯೋಜನೆಯಡಿ ಪರಿಶಿಷ್ಟ ಪಂಗಡದ ಜನತೆಯ ಉಪಯೋಗಕ್ಕಾಗಿ ನಡ್ಪಾಲು ನಲ್ಲಿ ನಿರ್ಮಿಸಿರುವ ಕಿಂಡಿ ಅಣೆಕಟ್ಟಿನಿಂದ , ಪ.ವರ್ಗದ ಜನತೆಗೆ ಪ್ರಯೋಜನ ದೊರೆಯದೇ ಇದ್ದು, ಈ ಕಾಮಗಾರಿ ನಡೆಸಿರುವವರ ವಿರುದ್ದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡೆ , ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಅವರು, ಕುಂದಾಪುರ ತಾಲೂಕು ಪಂಚಾಯತ್ ನಲ್ಲಿ ಉಡುಪಿ ಜಿಲ್ಲಾ ವಾರಾಹಿ ಯೋಜನೆಗೆ ಸಂಬಂದಿಸಿದಂತೆ, ವಾರಾಹಿ ಯೋಜನೆಯೆ ಎಡ ದಂಡೆ ಮತ್ತು ಬಲದಂಡೆ ಹಾಗೂ ಉಪ ಕಾಲುವೆ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡು ಬಂದ ಕಾಮಗಾರಿಗಳ ನ್ಯೂನತೆಗಳನ್ನು ಸರಿಪಡಿಸಲು ನೀಡಲಾದ ನಿರ್ದೇಶನ ಮತ್ತು ಕೈಗೊಂಡ ಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾರಾಹಿ ಯೋಜನೆಯಡಿ ಬುಡಕಟ್ಟು ಜನರ ಉಪಯೋಗಕ್ಕಾಗಿ , ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಪಾಲು ಗ್ರಾಮದಲ್ಲಿ ೯೦…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಲ್ಕೂವರೆ ವರ್ಷದ ಸತತ ಪ್ರಯತ್ನದ ಫಲವಾಗಿ ನಾಡ ಗ್ರಾಮ ಪಂಚಾಯತಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಯಶಸ್ವಿಯಾಗಿದ್ದು, ಮುಂದಿನ ಹನ್ನೊಂದು ತಿಂಗಳ ಅವಧಿಯಲ್ಲಿ ನಾಡಾ, ಸೇನಾಪುರ, ಬಡಾಕೆರೆ ಹಾಗೂ ಹಡವು ಗ್ರಾಮದ ಜನರಿಗೆ ಕುಡಿಯುವ ನೀರು ದೊರೆಯಲಿದೆ. ಸೌಪರ್ಣಿಕ ಹೊಳೆಯಲ್ಲಿ ಸಾಕಷ್ಟು ನೀರು ದೊರೆಯುವುದರಿಂದ ಈ ಯೋಜನೆಯನ್ನು ಒಂದು ಗ್ರಾಮಕ್ಕೆ ವಿಸ್ತರಿಸುವ ಬಗೆಗೆ ಪ್ರಯತ್ನಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣ್ಕಿ ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರೂ. 10.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ ಮಾತನಾಡಿದರು. ಆರ್‌ಡಿಪಿಆರ್ ಕಮಿಟಿ ಛೇರ್‌ಮೆನ್ ಆದ ಬಳಿಕ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಿ, ಎಂಟು ಭಾರಿ ಟೆಂಡರ್ ಕರೆದರೂ ಯಾರೊಬ್ಬರೂ ಟೆಂಟರ್ ತೆಗೆದುಕೊಳ್ಳಲು ಮುಂದೆ ಬಂದಿರಲಿಲ್ಲ. ಅಂತಿಮವಾಗಿ ಮಂಗಳೂರಿನ ಸಂಸ್ಥೆಯೊಂದು ಗುತ್ತಿಗೆ ಪಡೆದುಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ವೈದ್ಯಕೀಯ ಸೇವೆ ಜಗತ್ತಿನಲ್ಲಿ ಅತ್ಯುನ್ನತವಾದ ಸೇವೆ ಎಂದು ಪರಿಗಣಿಸಲ್ಪಟ್ಟಿದೆ. ವೈದ್ಯರು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬದಿಗೊತ್ತಿ ಸಮಾಜದ ಒಳಿತಿಗೆ ಶ್ರಮಿಸುತ್ತಿದ್ದಾರೆ. ರಾಜ್ಯ ಸರಕಾರ ತರಲುದ್ದೇಶಿಸಿದ ವಿಧೇಯಕಗಳಲ್ಲಿ ಶುಲ್ಕ ಕಡಿತಗೊಳಿಸುವ ವಿಚಾರಗಳಷ್ಟೆ ಎಂದು ಜನ ಭಾವಿಸಿದ್ದರು ಆದರೆ ವೈದ್ಯ ಸಮೂಹಕ್ಕೆ ಭಾದಕವಾಗುವಂತ ಹಲವಾರು ಸಂಗತಿಗಳು ಅದರಲ್ಲಿ ಅಡಕವಾಗಿರುವುದನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ವೈದ್ಯಕೀಯ ಸಂಘ ಮಾಡಬೇಕಿತ್ತು ಎಂದು ಕೆಎಂಸಿ ಮಣಿಪಾಲದ ಇಎನ್‌ಟಿ ವಿಭಾಗದ ಪ್ರೋಫೆಸರ್ ಡಾ. ಬಾಲಕೃಷ್ಣನ್ ಹೇಳಿದರು. ಅವರು ಸಹನಾ ಕನ್‌ವೆನ್‌ಶನ್ ಹಾಲ್‌ನಲ್ಲಿ ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಘಟಕದ ನೂತನ ಸಾಲಿನ ಅಧ್ಯಕ್ಷರು, ಪದಾಧಿಕಾರಿಗಳ ಪದಪ್ರದಾನ ನೆರವೇರಿಸಿ ಮಾತನಾಡಿದರು. ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವ್ಯದ್ಯಕೀಯ ನಿರ್ದೇಶಕರಾದ ಡಾ. ಸತೀಶ ಪೂಜಾರಿ ಅವರು ನೂತನ ಅಧ್ಯಕ್ಷರಾಗಿ ಪದಪ್ರದಾನ ಸ್ವೀಕರಿಸಿ, ಪ್ರತಿಷ್ಠಿತ ಐಎಂಎ ಕುಂದಾಪುರದ ಸರ್ವಸದಸ್ಯರ ವಿಶ್ವಾಸಗಳಿಸಿ ಉತ್ತಮ ರೀತಿಯಲ್ಲಿ ಸಂಸ್ಥೆಯನ್ನು ಮುನ್ನಡೆಸುವುದಾಗಿ ತಿಳಿಸಿದರು. ಐಎಂಎ ಸೆಂಟ್ರಲ್ ಕೌನ್ಸಿಲ್ ಸದಸ್ಯರಾದ ಡಾ. ಕೆ.ಎಸ್. ಕಾರಂತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಯೊಬ್ಬ ಕಲಾವಿದರು ತಮ್ಮ ಕ್ಷೇತ್ರದಲ್ಲಿ ಉತ್ತುಂಗಕ್ಕೇರಿದಾಗ ಆ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಜನರು ಗುರುತಿಸಿ ಗೌರವಿಸುತ್ತಾರೆ. ಆದರೆ ಯಾವ ಕಲಾವಿದರೂ ಕಲೆಗೆ ಕೊಡುವುದು ಏನೂ ಇಲ್ಲ. ಅರ್ಹತೆಗಿಂತ ಶ್ರದ್ಧಾಭಕ್ತಿಯಿಂದ ಮಾಡುವ ಕರ್ತವ್ಯ ಮುಖ್ಯ. ಕಲೆಯಿಂದ ಪಡೆದು ತಾವು ಬೆಳವಣಿಗೆ ಸಾಧಿಸುತ್ತಾರೆ. ಕಲಾವಿದರ ಉತ್ಕೃಷ್ಟ ಸೇವೆಯನ್ನು ಗುರುತಿಸಿ ಗೌರವಿಸಿದಾಗ ಕಲೆಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಖ್ಯಾತ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಹೇಳಿದರು. ಹೆರಗುಡಿ ಬಲಮುರಿ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬುಧವಾರ ರಾತ್ರಿ ಜರುಗಿದ ಸಮಾರಂಭದಲ್ಲಿ ಯಳಜಿತ ಗ್ರಾಮದ ಹೆರಗುಡಿ ಪುಂಡರೀಕ ಭಟ್ ಮತ್ತು ಸಹೋದರರ ಆಯೋಜಕತ್ವದಲ್ಲಿ ಅರೆಶಿರೂರು ರಾಮಚಂದ್ರ ಭಟ್ ಸಂಸ್ಮರಣಾರ್ಥ ನೀಡಲಾದ 2017ನೇ ಸಾಲಿನ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು. ಭಾರತೀಯ ಜೀವವಿಮಾ ನಿಗಮದ ಮಂಗಳೂರು ಶಾಖೆಯ ಮುಖ್ಯ ಪ್ರಬಂಧಕ ಎಚ್. ರಾಧಾಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಯಕ್ಷಗಾನ ಭಾಗವತ ಹೇರಂಜಾಲು ಗೋಪಾಲ ಗಾಣಿಗ, ಧಾರ್ಮಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿಪಿಐ(ಎಂ) ಪಕ್ಷದ ಅಖಿಲ ಭಾರತ ೨೨ನೇ ಮಹಾ ಅಧಿವೇಶನ ಜರಗಲಿರುವುದರ ಪೂರ್ವಭಾವಿಯಾಗಿ ದೇಶದ ಎಲ್ಲಾ ರಾಜ್ಯ, ಜಿಲ್ಲಾ, ತಾಲೂಕು ವಲಯವಾರು ಸಮ್ಮೇಳನಗಳು ಜರಗುತ್ತಿದ್ದು, ಸಿಪಿಐ(ಎಂ) ಪಕ್ಷದ ಪ್ರಾಥಮಿಕ ಘಟಕದ ಶಾಖಾ ಸಮ್ಮೇಳನಗಳು ಜರಗುತ್ತಿದ್ದು, ಸಿಪಿಐ(ಎಂ) ಪಕ್ಷದ ಪ್ರಾಥಮಿಕ ಘಟಕದ ಶಾಖಾ ಸಮ್ಮೇಳನಗಳು ಸಂಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಸಿಪಿಐ(ಎಂ) ಬೈಂದೂರು ವಲಯ ಸಮ್ಮೇಳನವು ಹೆಮ್ಮಾಡಿ ಆದರ್ಶ ಯುವಕ ಮಂಡಲದ ಸಭಾಂಗಣದ ಅಬ್ರಹಾಂ ಕರ್ಕಡ ವೇದಿಕೆಯಲ್ಲಿ ಯಶಸ್ವಿಯಾಗಿ ಜರಗಿತು. ಸಿಪಿಐ(ಎಂ) ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸಮ್ಮೇಳನದ ಉದ್ಘಾಟನೆ ಮಾಡುತ್ತಾ ದೇಶದಲ್ಲಿ ದುಡಿಯುವ ಜನರ ಐಕ್ಯತೆಯನ್ನು ಜಾತಿ, ಧರ್ಮ, ಭಾಷೆಗಳನ್ನು ಬಳಸಿ ವಿಚಿದ್ರಗೊಳಿಸುವ ಸಂಘ ಪರಿವಾರದ ಹುನ್ನಾರಕ್ಕೆ ಪ್ರತಿರೋಧ ಒಡ್ಡಬೇಕು. ಸಾಮೂಹಿಕ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು. ಅವರು ಮುಂದುವರಿದು ಮಾತನಾಡುತ್ತಾ, ಬಡತನ/ಸಮಸ್ಯೆಗಳನ್ನು ಪರಿಹರಿಸಲು ಬಂಡವಾಳಶಾಹಿಗೆ ಸಾಮರ್ಥ್ಯವೂ ಇಲ್ಲ, ನೈತಿಕತೆಯೂ ಇಲ್ಲ ಎಂದು ಟೀಕಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮುಖಂಡ ರಾಜೀವ ಪಡುಕೋಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಟ್ಟುವೆವು ನಾವು ಹೊಸ ನಾಡೊಂದನ್ನು, ರಸದ ಬೀಡೊಂದನ್ನು ಎನ್ನುವ ಗೋಪಾಲಕೃಷ್ಣ ಅಡಿಗರ ಹುಮ್ಮಸ್ಸು ಇಂದಿನ ಯುವಜನತೆಯಲ್ಲಿ ಉಕ್ಕಬೇಕಾಗಿದೆ. ಅಂದು ಅವರು ಕಂಡ ಕನಸು, ಗುರಿ ಸಂಪೂರ್ಣವಾಗಿ ನನಸಾಗಿಲ್ಲ. ಅವರ ಚಿಂತನೆ ಹಾಗೂ ದೂರದೃಷ್ಟಿ ಸಾರ್ವಕಾಲಿಕವಾಗಿ ಪ್ರಸ್ತುತವಾದುದು. ನವ್ಯದ ಹೊಸ ದಾರಿಯನ್ನು ಕನ್ನಡದ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಅಡಿಗರ ಕವಿತೆಗಳು ಇಂದಿಗೂ ಅನ್ವಯಿಸುವ ಸಂದೇಶವನ್ನು ಸಾರುತ್ತವೆ ಎಂದು ವಿಶ್ರಾಂತ ಪ್ರಾಧ್ಯಾಪಕ ಪ್ರೋ. ಉಪೇಂದ್ರ ಸೋಮಯಾಜಿ ಹೇಳಿದರು. ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ಕಂಬದಕೋಣೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಸಾಪ ಮತ್ತು ಗೀತಾನಂದ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ನಡೆದ ಭಾವಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಒಂದು ವರ್ಗದ ಕಣ್ಣು ತೆರೆಸಿದ ಕವಿ ಅಡಿಗರು ಎನ್ನುವ ಮಾತಿದೆ. ಆದರ್ಶ, ಕಲ್ಪನೆಯೊಳಗೆ ತೇಲುತ್ತಿದ್ದ ಸಾಹಿತ್ಯ ಲೋಕವನ್ನು ವಾಸ್ತವದ ನೆಲೆಗಟ್ಟಿನಲ್ಲಿ ಕಟ್ಟಿಕೊಡಬಲ್ಲ ಸಾಹಿತ್ಯಗಳನ್ನು ರಚಿಸುವ ಮೂಲಕ ಹೊಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಉಪ್ಪುಂದದಲ್ಲಿ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಪ್‌ಕಾಮ್ಸ್ ಮಂಗಳೂರು, ಕರ್ನಾಟಕ ತೋಟಗಾರಿಕಾ ಮಹಾಮಂಡಲ ಬೆಂಗಳೂರು ಇವರ ಮೂಲಕ ರಾಜ್ಯ ವಲಯ ಯೋಜನೆಯ ಅನುದಾನದಿಂದ ೪೦ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಧುನಿಕ ಮಾರಾಟ ಮಳಿಗೆ ಮತ್ತು ಸಂಗ್ರಹಣಾ ಕೇಂದ್ರ ಕಟ್ಟಡಕ್ಕೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಅವರು ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ, ಉಪ್ಪುಂದ ಗ್ರಾಪಂ ಅಧ್ಯಕ್ಷೆ ದುರ್ಗಮ್ಮ, ಸದಸ್ಯ ಐ ನಾರಾಯಣ, ಗ್ರಾಮಸ್ಥ ಎಸ್ ಮದನ್‌ಕುಮಾರ್ ಉಪ್ಪುಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭೂಸುಧಾರಣೆ, ಇಪ್ಪತ್ತು ಅಂಶ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ, ಸೂರಿಲ್ಲದವರಿಗೆ ಸೂರು ಹೀಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ದೇಶದಲ್ಲಿ ಮಹತ್ತರವಾದ ಪರಿವರ್ತನೆಯನ್ನು ತಂದ ಕೀರ್ತಿ ಇಂದಿರಾಗಾಂಧಿಯವರಿಗೆ ಸಲ್ಲಬೇಕಿದೆ ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಭಾನುವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಜನ್ಮ ಶತಾಬ್ದಿ ಅಂಗವಾಗಿ ಹಮ್ಮಿಕೊಂಡಿದ್ದ ದೀಪನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದಿರಾ ಗಾಂಧಿಯವರ ದೂರದೃಷ್ಠಿತ್ವದಿಂದ ದೇಶ ಸದೃಢವಾಗಿ ಬೆಳೆಯುತ್ತಿದೆ. ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ನೆನಪಿಸುವುದರೊಂದಿಗೆ ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯೋಣ ಎಂದವರು ಕರೆ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್ ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಜಿಲ್ಲಾ…

Read More