ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಇಲ್ಲಿನ ಪಟ್ಟಣ ಪಂಚಾಯತ್ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ನೂತನ ಇಂದಿರಾ ಕ್ಯಾಂಟಿನ್ ಸೇವೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಬಳಿಕ ರೋಟರಿ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಶೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಅಪ್ ಪ್ಯಾರಾಮೆಡಿಕಲ್ ಸೈನ್ಸಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಆಯುಷ್ಮಾನ್ ಅರೋಗ್ಯ ಕೇಂದ್ರದ ಯೋಗ ಗುರುಗಳಾದ ಶೋಭಾ ಶೆಟ್ಟಿ ಹಾಗೂ ಚೆನ್ನಮ್ಮ ಉಡುಪ, ಐಎಂಜೆ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಇನ್ಸ್ಟಿಟ್ಯೂಟ್ನ ಡೀನ್ ಡಾ. ಪದ್ಮಚರಣ ಸ್ವೈನ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಹಾಗೂ ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ನ ಉಪಪ್ರಾಂಶುಪಾಲರಾದ ಸೌಜನ್ಯಾ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಪದ್ಮಚರಣ ಸ್ವೈನ್ ಅವರು ಯೋಗದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿ ಶೋಭಾ ಶೆಟ್ಟಿ ಅವರು ಪ್ರತಿದಿನ ಯೋಗಾಭ್ಯಾಸ ಮಾಡುವ ಮಹತ್ವವನ್ನು ಒತ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.21: ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಅಧಿಕಾರ ಶಾಶ್ವತ ಅಲ್ಲದೇ ಇರಬಹುದು ಆದರೆ ಜನರ ನೋವಿಗೆ ಸ್ಪಂದಿಸುವ ಕಾರ್ಯವನ್ನು ಜನಪ್ರತಿನಿಧಿಗಳು ನಿರಂತರವಾಗಿ ಮಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಶನಿವಾರ ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ ಎಂದರು. ಬೈಂದೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಗೋಪಾಲ್ ಪೂಜಾರಿ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಇಬ್ಬರು ಕ್ಷೇತ್ರದ ದೃಷ್ಟಿಯಿಂದ ಯಾವುದೇ ರಾಜಕೀಯ ಇಲ್ಲದೆ, ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ರಾಜಕಾರಣಿಗಳಿಗೆ ಬೇಕಿರುವ ಬದ್ಧತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಪರಿಕಲ್ಪನೆ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ 2025-26ನೇ ಸಾಲಿನ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯ ಅರಿವು ಮೂಡಿಸುವ ಸಲುವಾಗಿ ಚುನಾವಣೆಯನ್ನು ಇ.ವಿ.ಎಮ್ ಆಪ್ ಮೂಲಕ ನಡೆಸಲಾಯಿತು. ಶಾಲಾ ನಾಯಕನಾಗಿ ಹರಿದಾಸ್ ಆರ್ ಮಲ್ಯ 10ಆ, 215 ಮತಗಳಿಂದ ಮತ್ತು ಉಪನಾಯಕಿಯಾಗಿ ಪ್ರಣತಿ 9ಆ, 314 ಮತಗಳಿಂದ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ – ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಲಸಿಕೆ ಉಗ್ರಾಣ ನೂತನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. ಶಾಸಕ ಯಶಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿ ಕಾರಿ ಸ್ವರೂಪ ಟಿ.ಕೆ., ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಪ್ರತೀಕ್ ಬಾಯಲ್, ಡಿಎಚ್ಒ ಡಾ.ಬಸವರಾಜ್ ಹುಬ್ಬಳ್ಳಿ ಉಪಸ್ಥಿತರಿದ್ದರು.
ಗಂಗೊಳ್ಳಿ: ಸಾರ್ವಜನಿಕರಿಗೆ ಹಾಗೂ ಯುವ ಜನರಿಗೆ ರಕ್ತದಾನದ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಗಂಗೊಳ್ಳಿಯ ಯಕ್ಷಾಭಿಮಾನಿ ರಕ್ತದಾನಿಗಳ ಬಳಗದ ಸದಸ್ಯರು ಸತತ 16ನೇ ವರ್ಷ ಗಂಗೊಳ್ಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದರು. ಯಕ್ಷಾಭಿಮಾನಿ ರಕ್ತದಾನಿಗಳ ಬಳಗದ ಸುಮಾರು 36 ಮಂದಿ ರಕ್ತದಾನಿಗಳು ಗುರುಚರಣ್ ಖಾರ್ವಿ ನೇತೃತ್ವದಲ್ಲಿ ಸತತ 16ನೇ ವರ್ಷ ಗಂಗೊಳ್ಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿ ರಕ್ತದಾನಿಗಳು, ರಕ್ತದಾನಿಗಳ ಹಾಗೂ ಗ್ರಾಮದ ಅಭಿವೃದ್ಧಿಗೆ ಪ್ರಾರ್ಥಿಸಿದರು. ದಾರಿಯುದ್ದಕ್ಕೂ ರಕ್ತದಾನದ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿ ಜನರ ಪ್ರಶಂಸೆಗೆ ಪಾತ್ರರಾದರು. ಪಾದಯಾತ್ರೆಗೂ ಮುನ್ನ ಗಂಗೊಳ್ಳಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿ ಸುಮಾರು 69 ಯೂನಿಟ್ ರಕ್ತವನ್ನು ರಕ್ತನಿಧಿ ಕೇಂದ್ರಕ್ಕೆ ನೀಡಿದರು. ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಕಂಡು ಬರುತ್ತಿದೆ. ತುರ್ತು ಸಂದರ್ಭದಲ್ಲಿ ರಕ್ತದಾನಿ ಬಳಗದ ಸದಸ್ಯರು ರಕ್ತದಾನ ಮಾಡುವ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪಿ.ಹೆಚ್.ಡಿ ಮೂರು ವರ್ಷ ಅವಧಿಗೆ ಫೆಲೋಶಿಪ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಕ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಹೊಸನಗರ ತಾಲೂಕಿನ ಕೋಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಅವರು ಶಿವಮೊಗ್ಗ ಕಡೆಗೆ ತೆರಳುವ ವೇಳೆ ಅಪಘಾತ ನಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾಗಿದೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಚಾಲಕ ಜಾನುವಾರು ಅಡ್ಡ ಬಂದ ಕಾರಣ ಹಠಾಟ್ ಬ್ರೇಕ್ ಹಾಕಿ ಕಾರು ನಿಲ್ಲಿಸಿದ್ದಾರೆ. ಇದರಿಂದ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇದೇ ವೇಳೆ ಶಾಸಕರೂ ಕೂಡ ತಮ್ಮ ಸ್ನೇಹಿತರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಸರಣಿ ಅಪಘಾತದಿಂದಲೇ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ/ ಅವರು ಉಡುಪಿಯಲ್ಲಿ ಸಭೆ ಮುಗಿಸಿ, ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದರು. ಘಟನೆಯ ಬಳಿಕ ಪ್ರಯಾಣ ಮೊಟಕುಗೊಳಿಸಿ ಹಿಂದಿರುಗಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50 ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದರು. ಕಾಪು ತಾಲೂಕಿನ ಹೆಜ್ಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬಂದರು ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ಒತ್ತು:ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಒಕ್ಕೂಟ ಮತ್ತು ಪಾಂಡೇಶ್ವರ ವಲಯ ಶೌರ್ಯ ಆಶ್ರಯದಲ್ಲಿ ರುದ್ರ ಭೂಮಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರುದ್ರ ಭೂಮಿ ಅಭಿವೃದ್ಧಿಯ ಸಮಿತಿ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಸಾಸ್ತಾನ ಚಾಲನೆ ನೀಡಿದರು. ಈ ಸಂದಭರ್ಭದಲ್ಲಿ ಪಾಂಡೇಶ್ವರ ಗ್ರಾ.ಪಂ ಸದಸ್ಯೆ ಸುಜಾತ ವೆಂಕಟೇಶ್ ಪೂಜಾರಿ, ಪಾಂಡೇಶ್ವರ ವಲಯದ ಶೌರ್ಯ ಟೀಮ್ನ ಸದಸ್ಯರಾದ ಕಾಳಿಂಗ ಪೂಜಾರಿ, ರವಿ ಪೂಜಾರಿ, ನಾಗೇಶ್, ರಾಜೇಶ್ ಸಾಸ್ತಾನ, ಚಂದ್ರ ಆಚಾರ್ಯ, ಸುರೇಶ್, ಸತೀಶ್, ರೇಣುಕಾ, ಯಶೋಧ, ಘಟಕ ಸೇವಾ ಪ್ರತಿನಿಧಿ ಶೋಭಾ ಮತ್ತು ಪಾಂಡೇಶ್ವರ ಒಕ್ಕೂಟದ ಸದಸ್ಯರಾದ ವಿಶ್ವನಾಥ್ ಆಚಾರ್ಯ, ವೆಂಕಟೇಶ್, ವಿಜಯ್, ನಾಗೇಂದ್ರ, ಚಂದ್ರ, ಪಾರ್ವತಿ ಮತ್ತು ಸೇವಾ ಪ್ರತಿನಿಧಿ ಅಕ್ಷಯ ಹಾಗೂ ಮಂಜುನಾಥ್, ಯೋಗೀಶ್, ವಲಯದ ಮೇಲ್ವಿಚಾರಕರಾದ ಜಯಲಕ್ಷ್ಮಿ ಉಪಸ್ಥಿತರಿದ್ದರು.
