Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳಿಗೆ ಪರಿಸರ ಜಾಗೃತಿ ಮೂಡಿಸಿದರೆ ಮುಂದಿನ ದಿನಗಳು ಹಸಿರು ಕ್ರಾಂತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೆ.ಎಂ.ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾಯ ಹೇಳಿದರು. ಅವರು ಕೋಟತಟ್ಟು ಪಡುಕರೆ ಡೈರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಕೋಟತಟ್ಟು ಪಡುಕರೆ ಇವರ ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರು ಕೊಡ ಮಾಡಿದ ಗಿಡಗಳನ್ನು ನಡುವ 261ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಗಿಡ ವಿತರಿಸಿ ಮಾತನಾಡಿದರು. ಪ್ರಕೃತಿಗಾಗಿ ಪಂಚವರ್ಣ ಸಂಘಟನೆ ತನ್ನನ್ನು ತಾನು ಅರ್ಪಿಸಿಕೊಂಡಿದೆ ಇದು ಶಬ್ದಗಳಲ್ಲಿ ಬಣ್ಣಿಸಲು ಸಾಧ್ಯವಿಲ ಪ್ರಸ್ತುತ ಮನುಕುಲದಲ್ಲಿ ಈ ರೀತಿಯ ಸಾಮಾಜಿಕ ಸೇವೆ ಅಮೋಘವಾದದ್ದು ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭವು ಗಂಗೊಳ್ಳಿಯ ಕರಾವಳಿ ಕಾವಲು ಪೋಲಿಸ್ ಠಾಣೆಯಲ್ಲಿ ನಡೆಯಿತು. ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಎಎಸ್ಸೈ ಭಾಸ್ಕರ, ಸಿಬ್ಬಂದಿಗಳಾದ ಸುರೇಂದ್ರ ಡಿ., ಉದಯ ಗೌಡ ಹಾಗೂ ಯಶೋಧ ಅವರನ್ನು ಠಾಣೆಯ ಪರವಾಗಿ ಇನ್ಸಪೆಕ್ಟರ್ ವಸಂತ ರಾಮ ಆಚಾರ್ ಸನ್ಮಾನಿಸಿ ಬೀಳ್ಕೊಟ್ಟರು. ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಎಚ್. ಮತ್ತು ಮುಕ್ತಾ ಬಾಯಿ, ಸಹಾಯಕ ಉಪನಿರೀಕ್ಷಕರಾದ ಬಾಬು ಪೂಜಾರಿ ಮತ್ತು ಮಂಜುನಾಥ ಗಾಣಿಗ, ಸ್ಥಳೀಯ ಮುಖಂಡ ಹರೀಶ್ ಕೊಡಪಾಡಿ, ಠಾಣೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ನಾಗರಾಜ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿಗಳಾದ ರಾಘವೇಂದ್ರ ದೇವಾಡಿಗ ಸ್ವಾಗತಿಸಿ, ದಿನೇಶ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ. ರಾಜೇಂದ್ರ ಭಟ್ ತಿಳಿಸಿದರು. ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜು ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಮಾತನಾಡಿದರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ. ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ ಕೆಲಸ ಮಾಡುವುದೇ ಸ್ಮಾರ್ಟ್ ವರ್ಕ್ ಎಂದು ತಿಳಿಸುತ್ತಾ ಸುದೀರ್ಘವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2021ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ‘ಸಂಪನ್ನಂ‘ ಬೀಳ್ಕೊಡುಗೆ ಸಮಾರಂಭ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಡಾ. ಎಂ. ಮೋಹನ ಆಳ್ವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ನಿರಂತರ ಸಫಲತೆಯನ್ನು ಸಾಧಿಸಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಪದವಿಯನ್ನು ಕೇವಲ ಪಡೆದುಕೊಳ್ಳಬೇಕು ಎಂಬುದಕ್ಕೆ ಮಾತ್ರ ಸೀಮಿತರಾಗದೆ, ಅದನ್ನು ಉಳಿಸಿಕೊಂಡು, ತಾವು ಅಪೇಕ್ಷಿಸಿದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಮತ್ತಷ್ಟು ಬೆಳೆಯಬೇಕಾದ ಜವಾಬ್ದಾರಿಯು ಇದೆ ಎಂದರು.  ಇಂದಿನ ಯುಗದಲ್ಲಿ ಆಯುರ್ವೇದದ ಜೊತೆಗೆ ವೈಜ್ಞಾನಿಕ, ತಾಂತ್ರಿಕ ಮತ್ತು ಸಂಶೋಧನಾ ವಿಚಾರಗಳನ್ನು ಸಮನ್ವಯಗೊಳಿಸಿ ಹೊಸ ದಿಕ್ಕಿನಲ್ಲಿ ಉತ್ತಮ ಸಾಧನೆಗಳನ್ನು ಮಾಡಬಹುದಾದ ಅನೇಕ ಅವಕಾಶಗಳು ಲಭ್ಯವಿವೆ. ಅಂತಹ ಅವಕಾಶಗಳನ್ನು ವಿದ್ಯಾರ್ಥಿಗಳೇ ತಾವಾಗಿ ಅನ್ವೇಷಿಸಿ, ಮುಂದಕ್ಕೆ ಸಾಗಬೇಕಾಗಿದೆ. ‘ಇಂದಿನಿಂದ ನೀವು ಹೊಸ ಜಗತ್ತಿಗೆ ಹೆಜ್ಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಮ್ಮ ಜೀವನ ಪರಿಭಾಷೆಗೆ ಅಳಿವಿಲ್ಲ ಅದು ನಮ್ಮ ಹಿರಿಯರು ನೀಡಿದ ಬಳುವಳಿಯಾಗಿದೆ ಎಂದು  ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು ಅವರು ಭಾನುವಾರ ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಕೋಟದ ಹರ್ತಟ್ಟು ಗಿಳಿಯಾರು ನಾಗರಿಕರ ಆಶ್ರಯದಲ್ಲಿ ಗಮ್ಮತ್ತಿಗೆ ಆಟ ಗಂಜಿ ಊಟ ಎಂಬ ಗ್ರಾಮೀಣ ಸೋಗಡುಗಳ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ನಮ್ಮ ಜೀವನ ಕ್ರಮಗಳು ಬದಲಾವಣೆಗೊಳ್ಳುತ್ತಿದೆ. ಅದಲ್ಲೂ ಬಹುಮುಖ್ಯವಾಗಿ ಕೃಷಿ ಪದ್ದತಿಗಳು ಆಧುನಿಕತೆಯಲ್ಲಿ ಒಗ್ಗಿ ಹೋಗಿದ್ದು ಅತಿಯಾಗಿ ಬಳಸುವ ರಾಸಾಯನಿಕ ಪದಾರ್ಥಗಳ ಬಳಕೆಯಿಂದ ಮನುಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರ ತೊಂದರೆಗಳನ್ನು ಅರಿಯುವ ಅಗತ್ಯತೆಯನ್ನು ಒತ್ತಿ ಹೇಳಿದರ ಅವರು ಬದಲಾವಣೆ ಇರಬೇಕು. ಅದು ಆರೋಗ್ಯಕರವಾಗಿ ಮನುಕುಲದ ಒಳಿತಿಗಾಗಿ ಪ್ರಜ್ವಲಿಸಬೇಕು, ಕರಾವಳಿಯ ವಿವಿಧ ಪ್ರಕಾರಗಳಲ್ಲಿ ಕಂಬಳವು ಒಂದು ಅದರ ಉಳಿಗಾಗಿ ಸಾಕಷ್ಟು ಶ್ರಮಿಸಿದ್ದೇವೆ, ಯಾವುದೇ ಆಟಗಳಲ್ಲಿ ಜೂಜು ಒಳ್ಳೆಯದಲ್ಲ ಅದರ ಬದಲಾಗಿ ನಾವುಗಳು ನಮ್ಮ ಕುಶಿ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ 2025–26ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ  ಚಟುವಟಿಕೆಗಳಾದ ಸಂಗೀತ, ನೃತ್ಯ, ಶ್ಲೋಕ ಪಠಣ, ಕಥೆ ಹೇಳುವಿಕೆ, ಕರಾಟೆ ಮೊದಲಾದ ಪ್ರತಿಭೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯುವುದರ ಜೊತೆಗೆ, ವೇದಿಕೆಯ ಭಯ ನಿವಾರಣೆಗಾಗಿಯೂ ಸಹಕಾರಿ ಆಯಿತು. ಮಕ್ಕಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಹಾಗೂ ಆತ್ಮವಿಶ್ವಾಸದಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ ಮಲ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ಟಿ. ರಾಜೀವ್‌ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಪದಗ್ರಹಣ ಕಾರ್ಯಕ್ರಮ ಜುಲೈ 6 ರಂದು ತೆಕ್ಕಟ್ಟೆ ಪ್ರೆಸಿಡೆಂಟ್ ಹಾಲ್‌ನ ಕ್ರೌನ್ ಆಡಿಟೋರಿಯಂ ನಲ್ಲಿ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ  ಕಲೆ ಹಾಗೂ ಸಾಹಿತ್ಯಾಸಕ್ತಿ  ಬೆಳೆಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಂಪೇಗೌಡರ ಜನ್ಮದಿನದ ಪ್ರಯುಕ್ತ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಕ್ಷಿತಾ ದ್ವಿತೀಯ ಸ್ಥಾನವನ್ನು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರತಿಕ್ಷಾ ಸಮಾಧಾನಕರ ಬಹುಮಾನವನ್ನು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವರ್ಷಿಣಿ ಸಮಾಧಾನಕರ ಬಹುಮಾನವನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕವಾಗಿ ಸಂಸ್ಥೆಯ ಕೀರ್ತಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ದ ಅವರನ್ನು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವವೊಗ್ಗ ಜಿಲ್ಲೆಯ ಮಂಡಗದ್ದೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಲ್ಲಿನ ತೆಕ್ಕಟ್ಟೆ ಮೂಲದ ಮಹಿಳೆ ಮೃತಪಟ್ಟಿದ್ದಾರೆ. ಆರು ಮಂದಿ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಶಿವವೊಗ್ಗ ಜಿಲ್ಲೆಯ ಮಂಡಗದ್ದೆಯಲ್ಲಿ ಘಟನೆ ಆದಿತ್ಯವಾರದಂದು ಬೆಳಗ್ಗೆ 11ರ ಸುಮಾರಿಗೆ ಸಂಭವಿಸಿದೆ. ತೆಕ್ಕಟ್ಟೆಯ ಮಣಿಕಂಠ ಟ್ರಾನ್ಸ್‌ಪೋರ್ಟ್ ಮಾಲಕ ದೇವಾಡಿಗ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುತ್ತಿದ್ದರು. ಸುರಿಯುತ್ತಿದ್ದ ಭಾರೀ ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ರಸ್ತೆ ಸಮೀಪದ ನದಿಗೆ ಉರುಳಿತು. ಕಾರು ನೀರಿನಲ್ಲಿ ಮುಳುಗುತ್ತಿದಂತೆ ಸ್ಥಳೀಯರು ಧಾವಿಸಿ ಬಂದು ರಕ್ಷಣೆಗಿಳಿದರೂ ಶಂಕರ ದೇವಾಡಿಗ ಅವರ ಪತ್ನಿ ಸವಿತಾ ದೇವಾಡಿಗ (57) ಅಸುನೀಗಿದರು. ಶಂಕರ ದೇವಾಡಿಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪುತ್ರರಾದ ಅರುಣ್ ದೇವಾಡಿಗ ಹಾಗೂ ಎಂಜಿನಿಯರ್ ಅಶ್ವತ್ಥ ದೇವಾಡಿಗ, ಪುತ್ರಿ ಅಮೃತಾ, ಅಳಿಯ ಸುರೇಶ್ ದೇವಾಡಿಗ ಹಾಗೂ 2.5 ವರ್ಷದ ಅಭಿಶ್ರೇಯ್ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ಇದರ 2024-25ರ ಸಾಲಿನ ಭರತನಾಟ್ಯ ಪ್ರಾವೇಶಿಕ ಪೂರ್ಣ ಪರೀಕ್ಷೆಯಲ್ಲಿ ಕುಂದಾಪುರದ ಸಾಧನ ಕಲಾ ಸಂಗಮದ ಭರತನಾಟ್ಯ ವಿದ್ಯಾರ್ಥಿನಿ ಹಾಗೂ ಕುಂದಾಪುರದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ 125ರಲ್ಲಿ 119 ಅಂಕಗಳನ್ನು ಪಡೆದು ಡಿಸ್ಟಿಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಹೊನ್ನಾವರದ ಸೆಂಟರ್ ನಲ್ಲಿ ಪರೀಕ್ಷೆ ಬರೆದಿದ್ದ ಪ್ರಾಪ್ತಿ ಮಡಪ್ಪಾಡಿ, ಪರೀಕ್ಷಾ ಕೇಂದ್ರದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಮೊದಲಿಗರಾಗಿದ್ದಾರೆ. ಅವರು ಕುಂದಾಪುರದ ಪತ್ರಕರ್ತ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ದಂಪತಿಯ ಪುತ್ರಿ. ಉಡುಪಿಯ ಭರತನಾಟ್ಯ ಗುರು, ವಿದುಷಿ. ಲಕ್ಷ್ಮೀ ಗುರುರಾಜ್ ಅವರ ಶಿಷ್ಯೆ ಅರ್ಪಿತಾ ಹೆಗಡೆ ಅವರ ಶಿಷ್ಯೆ. ಪ್ರಾಪ್ತಿ ಮಡಪ್ಪಾಡಿ ಅವರ ಸಾಧನೆಗೆ ಸಾಧನಾ ಕಲಾ ಸಂಗಮದ ವಿಶ್ವಸ್ಥ ನಾರಾಯಣ ಐತಾಳ್ ಹಾಗೂ ಆಡಳಿತ ಮಂಡಳಿ, ಭರತನಾಟ್ಯ ಗುರು ವಿದುಷಿ ಅರ್ಪಿತಾ ಹೆಗಡೆ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ…

Read More