ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಜವಹರಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕ, ಬೈಂದೂರಿನ ಸಂತೋಷ್ ಶ್ಯಾನುಭಾಗ್ ಮಂಡಿಸಿದ ‘ಮಾರ್ಕೇಟಿಂಗ್ ಆಫ್ ಹೆಲ್ತ್ ಇನ್ಸೂರೆನ್ಸ್ ಇನ್ ರೂರಲ್ ಎರಿಯಾಸ್, ಎ ಸ್ಟಡಿ ವಿತ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಎಂಡ್ ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ’ ಎಂಬ ಪ್ರೌಢ ಪ್ರಬಂಧಕ್ಕೆ ಬೆಳಗಾವಿಯ ಸರ್. ಎಂ. ವಿಶ್ವೇಶ್ವರಯ್ಯ ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ಪ್ರದಾನಿಸಿದೆ. ಈ ಸಂಶೋಧನೆಗೆ ಎಂ.ಬಿ.ಎ. ವಿಭಾಗದ ನಿರ್ದೇಶಕ ಡಾ. ಎಂ. ಜಿ. ಕೃಷ್ಣಮೂರ್ತಿ ಮಾರ್ಗದರ್ಶನ ನೀಡಿದ್ದರು. ಶಿರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಪದವಿಪೂರ್ವ ಕಾಲೇಜು, ಭಟ್ಕಳ ಅಂಜುಮಾನ್ ಕಾಲೇಜು ಹಾಗೂ ನಿಟ್ಟೆಯ ಎನ್‌ಎಂಎಐಟಿಯ ಹಳೆವಿದ್ಯಾರ್ಥಿಯಾಗಿರುವ ಇವರು ಬೈಂದೂರು ಶ್ಯಾನುಭಾಗ್ ಹೋಟೆಲ್‌ನ ದಿ. ಶ್ರೀನಿವಾಸ್ ಶ್ಯಾನುಭಾಗ್ ಹಾಗೂ ರತ್ನಾವತಿ ಎಸ್. ಶ್ಯಾನುಭಾಗ್ ಇವರ ಪುತ್ರರಾಗಿರುತ್ತಾರೆ. ಮೇ.5ರಂದು ನಡೆಯಲಿರುವ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವದಲ್ಲಿ ಸಂತೋಷ್ ಶ್ಯಾನುಭಾಗ್ ಪದವಿ ಸ್ವೀಕರಿಸಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಲ್ಕನ್ ಕ್ಲಬ್ ಕಣ್ಣುಕೆರೆ ಹಾಗೂ ಮುಸ್ಲಿಂ ಭಾಂದವರು ಬೇಳೂರಿನ ಸ್ಪೂರ್ತಿ ಧಾಮಕ್ಕೆ ಕೊಡಮಾಡಿದ ಆಂಬ್ಯುಲೆಸ್‌ನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಮಾರುತಿ ಒಮ್ನಿಯ ಕೀಲಿ ಕೈಯನ್ನು ಸ್ಪೂರ್ತಿಧಾಮದ ಸಂಚಾಲಕರಾದ ಡಾ.ಕೇಶವ ಕೋಟೇಶ್ವರ ಅವರಿಗೆ ಹಸ್ತಾಂತರಿಸಿದರು. ಬಿಜೆಪಿ ಕುಂದಾಪುರ ಕ್ಷೇತ್ರಾಕ್ಷಧ್ಯ ರಾಜೇಶ ಕಾವೇರಿ, ಉದ್ಯಮಿ ವಿ.ಕೆ.ಮೋಹನ್, ಬಿ.ಎಮ್.ಹಂಜಾ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಧಾರ್ಮಿಕತೆಯ ಭಾವನೆಗಳು ಹೆಚ್ಚುತ್ತಿರುವುದರಿಂದ ಧಾರ್ಮಿಕ ಕೇಂದ್ರಗಳು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ನಮ್ಮಲ್ಲಿರುವ ದೈವೀಕ ಭಾವನೆಗಳನ್ನು ಉದ್ದೀಪನೆಗೊಳಿಸುವ ಮೂಲಕ ಶ್ರದ್ದಾ, ಭಕ್ತಿಯಿಂದ ಆರಾಧಿಸಿದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯ ಎಂದು ವಿಹಿಂಪ ದಕ್ಷಿಣ ಕನ್ನಡ ಪ್ರಾಂತ ಮಠಮಂದಿರಗಳ ಸಂಪರ್ಕ ಪ್ರಮುಖ್ ಹೆಚ್. ಪ್ರೇಮಾನಂದ ಶೆಟ್ಟಿ ಹೇಳಿದರು. ಹೇರೂರು ಗ್ರಾಮದ ಪಡುಬೆಟ್ಟು ಯರುಕೋಣೆ ಶ್ರೀ ಮರ್ಲುಚಿಕ್ಕು ಮತ್ತು ಸಪರಿವಾರ ದೈವಸ್ಥಾನದ ನೂತನ ಗುಡಿಸಮರ್ಪಣೆ ಮತ್ತು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಭಕ್ತಿಯಿಂದ ದೇವರ ಪ್ರೀತಿಗಳಿಸಲು ಸಾಧ್ಯವಿದೆ. ಭಕ್ತಿ, ಶ್ರದ್ಧೆ ಹಾಗೂ ಪ್ರಾಮಾಣಿಕತೆಗೆ ದೇವರು ಒಲಿಯುತ್ತಾನೆ. ನಮ್ಮಲ್ಲಿ ಕರುಣೆ, ಮಿತೃತ್ವ ಭಾವನೆ ಇರಬೇಕು. ಯಾರೊಬ್ಬರನ್ನು ದ್ವೇಷಿಸದೆ ಎಲ್ಲರನ್ನೂ ಪ್ರೀತಿಯಿಂದ ನಾವೆಲ್ಲರೂ ಒಂದೇ ಎಂಬ ಭಾವದಿಂದ ನೋಡಬೇಕು. ನಮ್ಮಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಸಮಾಜದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಬೆಳೆಯಬೇಕು ಎಂದ ಅವರು ಜಾತಿ, ಧರ್ಮದ ವಿಷಬೀಜ ಬಿತ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಇಲ್ಲಿನ ಕೊರಗ ಕಾಲನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಆರೋಗ್ಯ ತಪಾಸಣೆ ಈಚೆಗೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಉದ್ಘಾಟಿಸಿ, ಆರೋಗ್ಯ ಮಾಹಿತಿ ನೀಡಿದರು. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್ಯ ವಂದಿಸಿದರು. ಕೊರಗ ಯುವ ಕಲಾವೇದಿಕೆಯ ಶೇಖರ ಮರವಂತೆ ನಿರೂಪಿಸಿದರು. ವೈದ್ಯಾಧಿಕಾರಿ ಮತ್ತು ಆರೋಗ್ಯ ಕೇಂದ್ರದ ಸಿಬಂದಿ, ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸಿ, ಅಗತ್ಯ ಇರುವವರಿಗೆ ಔಷಧಿ ವಿತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಆರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಜ್ಯದ ೩೦ ಜಿಲ್ಲೆಗಳಿಗೂ ವಿಸ್ತರಿಸಿದೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ ಜನರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಟ್ಟು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಎ ಮತ್ತು ಬಿ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯಿಂದ ಜನರು ಸಹಬಾಳ್ವೆ ನಡೆಸುವಂತಾಗಿದ್ದು, ಜನರಲ್ಲಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಸಮಾಜದಲ್ಲಿ ಕಡೆಗಣಿಸಲ್ಪಟ್ಟವರಿಗೆ ಉಸಿರು ನೀಡಿ ಹಸಿರು ಜೀವನ ನಡೆಸಲು ಸಹಕಾರಿಯಾಗಿರುವ ಗ್ರಾಮಾಭಿವೃದ್ಧಿ ಯೋಜನೆಯು ಜನರ ಸರ್ವತೋಮುಖ ಅಭಿವೃದ್ಧಿಗೆ ನಾಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ನೀಡಬೇಕೆಂಬ ಉದ್ದೇಶದಿಂದ ನಮ್ಮ ಹಿರಿಯರು ಸ್ವಾತಂತ್ರ್ಯವನ್ನು ತಂದುಕೊಟ್ಟರು. ಆದರೆ ನಾವು ಇಂದಿಗೂ ಸಂಘಗಳನ್ನು ಕಟ್ಟಿಕೊಂಡು ಕನಿಷ್ಠ ಕೂಲಿಗಾಗಿ ಬೇಡಿಕೆಯಿಡುವ ದುಸ್ಥಿತಿಯಲ್ಲಿದ್ದೇವೆ ಎಂದು ಸಿಐಟಿಯು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ವಿಷಾದ ವ್ಯಕ್ತಪಡಿಸಿದರು. ಅವರು ಶಾಸ್ತ್ರೀ ವೃತ್ತದ ಬಳಿ ಸಿಐಟಿಯು ಕುಂದಾಪುರ ತಾಲೂಕು ಸಮಿತಿ ಮೇ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸರಕಾರ ಹಾಗೂ ಸ್ವಾತಂತ್ರ್ಯದ ವ್ಯಾಖ್ಯಾನ ಕೂಡ ಬದಲಾಗುತ್ತಿದೆ. ಭಾರತದಲ್ಲಿ ಗುತ್ತಿಗೆ ಪದ್ದತಿಯಡಿ ನಿಯಮಗಳನ್ನು ಗಾಳಿಗೆ ತೂರಿ ಕೆಲಸಗಾರರನ್ನು ಜಾಗತಿಕ ಒತ್ತೆಯಾಳಾಗಿಸುವ ಹುನ್ನಾರ ನಿರಂತರವಾಗಿ ಸಾಗಿದೆ. ಬೆಲೆಏರಿಕೆಯನ್ನು ಮಾಡುವ ಸರಕಾರಗಳು ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸುವ ಬಗ್ಗೆ ಒಮ್ಮೆಯೂ ಚಿಂತಿಸಿಲ್ಲ. ಪ್ರಜೆಗಳ ಕಷ್ಟ, ನಷ್ಟಗಳಿಗೆ ಸ್ಪಂದಿಸಬೇಕಾದ ಸರಕಾರಕ್ಕೆ ತಾಯಿ ಮನಸ್ಸು ದೂರವಾಗಿ ಕ್ರೌರ್ಯ ತುಂಬಿಕೊಂಡಿದೆ ಎಂದರು. ಸಿಐಟಿಯು ಕುಂದಾಪುರ ತಾಲೂಕು ಸಮಿತಿ ಅಧ್ಯಕ್ಷ ಎಚ್. ನರಸಿಂಹ…
ಸಾಮಾಜಿಕ ತಾಣಗಳಲ್ಲಿ ಕುಂದಾಪ್ರ ಕನ್ನಡದ ಆಡಿಯೋ, ವಿಡಿಯೋಗಳ ಬಿಡುಗಡೆಗೊಳಿಸುತ್ತಾ ಎಲ್ಲರ ಮುಖದಲ್ಲೊಂದಿಷ್ಟು ನಗು ತರಿಸಿ, ಮನೆಮಾತಾದ ಮನು ಹಂದಾಡಿ(ಮನೋಹರ್) ಮೇ.1ರಂದು ಬ್ರಹ್ಮಾವರದ ಬಂಟರ ಭವನದಲ್ಲಿ ಪಾವನ ಅವರೊಂದಿಗೆ ತಮ್ಮ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ► ಕುಂದಾಪ್ರ ಡಾಟ್ ಕಾಂ ಮೊಬೈಲ್ App ಬಿಡುಗಡೆಗೊಳಿಸಿ ಮಾತನಾಡಿದ ವಾಟ್ಸಪ್ ಹೀರೋ ಮನು ಹಂದಾಡಿ – http://kundapraa.com/?p=8608
ಗುರುಕುಲ ಪಬ್ಲಿಕ್ ಸ್ಕೂಲ್ & ಪಿಯು ಕಾಲೇಜು | Gurukula Public school and PUC ಬಾಂಡ್ಯ ಎಜುಕೇಶನಲ್ ಟ್ರಸ್ಟ್ | Bhandya Education Trust ® Prospectus 2017-18 ►► ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ – http://kundapraa.com/?p=23044 ►► ವಕ್ವಾಡಿ ಗುರುಕುಲ ಪದವಿಪೂರ್ವ ಮಹಾವಿದ್ಯಾಲಯ: ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ! – http://kundapraa.com/?p=23057 ಗುರುಕುಲ ಪಬ್ಲಿಕ್ ಸ್ಕೂಲ್ & ಪಿಯು ಕಾಲೇಜು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಅನುಪಮಾ ಎನ್‌ಕ್ಲೇವ್, ವಕ್ವಾಡಿ, ಕೋಟೇಶ್ವರ ಕುಂದಾಪುರ ತಾಲೂಕು ಉಡುಪಿ ಜಿಲ್ಲೆ – 576257 Ph : +91 8254 262887, 311397 Mob : +91 94820 98367 Email : gurukulpublicschool@gmail.com Website : www.bhandyagurukula.com ►► ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ – http://kundapraa.com/?p=23044 ►► ವಕ್ವಾಡಿ ಗುರುಕುಲ ಪದವಿಪೂರ್ವ ಮಹಾವಿದ್ಯಾಲಯ: ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ! – http://kundapraa.com/?p=23057…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಲ್ಲಿನ ಸೃಜನಾತ್ಮಕ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಸಾಂಸ್ಕೃತಿಕ ಸಂಘಟನೆಗಳು ಹಮ್ಮಿಕೊಳ್ಳುವ ಬೆಸಿಗೆ ಶಿಬಿರಗಳು ಅವರನ್ನು ಮಾನಸಿಕವಾಗಿ ಸದೃಡರನ್ನಾಗಿಸುವುದಲ್ಲದೇ, ಶೈಕ್ಷಣಿಕ ಬೆಳವಣಿಗೆಗೂ ಪೂರಕವಾಗಿ ಪರಿಣಮಿಸುತ್ತದೆ ಎಂದು ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಹೇಳಿದರು. ಅವರು ಲಾವಣ್ಯ ರಿ. ಬೈಂದೂರು ಹಾಗೂ ಯಡ್ತರೆ ಗ್ರಾಪಂ ಸಹಯೋಗದೊಂದಿಗೆ ಆಯೋಜಿಸಲಾದ ರಂಗ ತರಬೇತಿ ಶಿಬಿರದಲ್ಲಿ ರೂಪುಗೊಂಡ ‘ಹೂವುಗಳು ಅರಳಲಿ’ ಹಾಗೂ ‘ನಾಣಿಭಟ್ಟನ ಸ್ವರ್ಗದ ಕನಸು’ ಮಕ್ಕಳ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಲಾವಣ್ಯದ ಅಧ್ಯಕ್ಷ ರಾಮ ಟೈಲರ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಶಂಕರ ಪೂಜಾರಿ, ಬಹುಮಾನದ ಪ್ರಾಯೋಜಕ ಸದಾಶಿವ ಶಾನುಭೋಗ್, ಲಾವಣ್ಯದ ಹಿರಿಯ ಕಲಾವಿದರಾದ ಗಿರೀಶ್ ಬೈಂದೂರು, ಮಹೇಶ್ ನಾಯಕ್, ಲಾವಣ್ಯದ ಪ್ರಾಕ್ತನ ನಟಿ ಡಾ ಪ್ರತಿಭಾ ರೈ, ಲಾವಣ್ಯದ ವ್ಯವಸ್ಥಾಪಕರುಗಳಾದ ಗಣೇಶ ಕಾರಂತ್, ಶ್ರೀನಿವಾಸ ಪ್ರಭು ವೇದಿಕೆಯಲ್ಲಿದ್ದರು. ಲಾವಣ್ಯ ಕಾರ್ಯದರ್ಶಿ ಬಿ. ನರಸಿಂಹ ನಾಯಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಆಶ್ರಯದಲ್ಲಿ ನಡೆದ ಒಂದು ದಿನದ ಎಂ.ಐ.ಟಿ.ಕೆ ಉದ್ಯೋಗ ಮೇಳ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಯಶಸ್ವಿಯಾಗಿ ನೆರವೇರಿತು. ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಎಂ.ಐ.ಟಿ.ಕೆ ಉದ್ಯೋಗ ಮೇಳ ಉದ್ಯೊಗಾಕಾಂಕ್ಷಿಗಳಿಗೆ ಉತ್ತಮ ವೇದಿಕೆಯಾಗಿದ್ದು, ಈ ಸುವರ್ಣಾವಕಾಶವನ್ನ್ನು ಕಲ್ಪಿಸಿಕೊಟ್ಟ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿಯವರನ್ನು ಅಭಿನಂದಿಸಿದರು. ಮುಖ್ಯ ಅತಿಥಿ ರಮಾನಂದ ನಾಯಕ್ ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಮಾತನಾಡಿ ಮುಂದಿನ ವರ್ಷಗಳಲ್ಲಿ ಮೂಡ್ಲಕಟ್ಟೆ ತಾಂತ್ರಿಕ ಕಾಲೇಜಿನ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲು ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಎಸ್. ಅಂಸಾಡಿಯವರು ಎಂ.ಐ.ಟಿ.ಕೆ ಉದ್ಯೋಗ ಮೇಳದ ಸಮಗ್ರ ಚಿತ್ರಣವನ್ನು ನೀಡಿದರು. ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಶಶಿಕಲಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಎಂ.ಐ.ಟಿ.ಕೆ ಉದ್ಯೋಗ ಮೇಳದಲ್ಲಿ 30 ಕ್ಕೂ ಹೆಚ್ಚು ಹೆಸರಾಂತ…
