ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಕೊಲ್ಲೂರು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ, ನಾಗರಾಜ್ ಅಡಿಗ ಮತ್ತು ಮೊದಲಾದವರು ಉಪಸ್ಥಿರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಕೆ.ಪಿ ಉಪಸ್ಥಿತರಿದ್ದಾರೆ. ಪ್ರಿತೇಶ್ ಮತ್ತು ಸುಖೇಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ವಿಜೇತರನ್ನು ಅಭಿನಂದಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ರಾಷ್ಟ್ರ ನಿರ್ಮಾಣದ ಕನಸಿನಂತೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ರಾಜಕೀಯ ಶಕ್ತಿ ಇದ್ದರೆ ಮತ್ತಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಬಹುದೆಂಬ ಉದ್ದೇಶದಿಂದ ಆತ್ಮೀಯರು ಹಾಗೂ ಹಿತಚಿಂತಕರ ಬೆಂಬಲ ಮತ್ತು ಸೂಚನೆಯಂತೆ ಜಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಕರ್ನಾಟಕ ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಹೇಳಿದರು. ಅವರು ತಮ್ಮ ಸಂಗಡಿಗರ ಜೊತೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿ ಪ್ರತಿ ಬೂತ್ ಮಟ್ಟದಲ್ಲಿಯೂ ಯುವಕರನ್ನು ಸಂಘಟಿಸುವ ಕಾರ್ಯ ಮಾಡಲಾಗುವುದು ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ವಾಸುದೇವ ರಾವ್, ಮಹಾಪ್ರದಾನ ಕಾರ್ಯದರ್ಶಿ ಶ್ರೀಕಾಂತ ಅಡಿಗ ಕೊಲ್ಲೂರು, ಜಿಲ್ಲಾ ಯುವ ಘಟಕದ ಅಧ್ಯಕ್ಷ ರೋಹಿತ್ ಕರಂಬಳ್ಳಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಶೆಟ್ಟಿ ಕೆಂಚನೂರು, ಉಪಾಧ್ಯಕ್ಷೆ ವಿಶಾಲಾಕ್ಷಿ ಶೆಟ್ಟಿ, ಕಾರ್ಯದರ್ಶಿ ಅನಿತಾ ಶೆಟ್ಟಿ, ಜಾತ್ಯಾತೀತ ಜನತಾದಳದ ಅಲ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 2016-17ನೇ ಸಾಲಿನ ಕರ್ನಾಟಕ ಪ್ರೌಡಶಿಕ್ಷಣ ಮಂಡಳಿಯ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡಾ 94.05 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಭ್ರಮರ ಅವರು ಖ್ಯಾತ ಭರತನಾಟ್ಯ ನಿರ್ದೇಶಕ ಕರ್ನಾಟಕ ಕಲಾಶ್ರೀ ವಿದ್ವಾನ್ ಶ್ರೀ ಚಂದ್ರಶೇಖರ ನಾವಡರ ಶಿಷ್ಯೆ ಹಾಗೂ ಬೈಂದೂರು ಸುರಭಿ ಕಲಾಸಂಸ್ಥೆಯ ವಿದ್ಯಾರ್ಥಿನಿಯಾಗಿರುತ್ತಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರವಾಸಿಗರ ಬಗ್ಗೆ ಆ ಪ್ರದೇಶದ ಜನರಿಗೆ ಹೃದಯ ವೈಶಾಲ್ಯತೆ ಇರಬೇಕು. ಈ ನೆಲೆಯಲ್ಲಿ ಇಲಾಖೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರವಾಸಿ ಸ್ಥಳಗಳನ್ನು ಸ್ವಚ್ಛಗೊಳಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ಪ್ರವಾಸಿ ಕಛೇರಿ ಸಹಾಯಕ ನಿರ್ದೇಶಕಿ ಅನಿತಾ ಬಿ. ಆರ್. ಹೇಳಿದರು. ಜಿಲ್ಲಾಡಳಿ ಮತ್ತು ಪ್ರವಾಸೋದ್ಯಮ ಇಲಾಖೆ, ಪಡುವರಿ ಗ್ರಾಮ ಪಂಂಚಾಯತ್, ಬೈಂದೂರು ರೋಟರಿ ಕ್ಲಬ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೈಂದೂರು ಸೋಮೇಶ್ವರ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ನೆಲ, ಜಲದ ಸ್ವಚ್ಛತೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸ್ವಚ್ಛತೆ ಹಾಗೂ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇದರಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹುಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಪ್ರವಾಸಿ ಸ್ಥಳಗಳ ಸ್ವಚ್ಛತೆ ಮತ್ತು ಅಭಿವೃದ್ಧಿಯ ಕುರಿತು ಕಾಳಜಿ ವಹಿಸಬೇಕು ಎಂದರು. ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಪ್ರವಾಸಿಗರನ್ನು ಆಕರ್ಷಿಸಲು ನಾವು ಹಿಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶರನ್ನವರಾತ್ರಿ ಪ್ರಯುಕ್ತ ಶ್ರೀ ಮೂಕಾಂಬಿಕಾ ದೇವಳದ ಸ್ವರ್ಣಮುಖಿ ರಂಗಮಂದಿರದಲ್ಲಿ ಕೇರಳದ ಪ್ರಸಿದ್ದ ಚಂಡೆವಾದನ ಹಾಗೂ ಪಂಚವಾದ್ಯ ತಂಡದವರಿಂದ ನಡೆದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಜನಾರ್ದನ್ ಜಿ. ಸಿ. ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭ ಎಇಒ ಎಚ್. ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಂಜುನಾಥ ಅಡಿಗ, ವಂಡಬಳ್ಳಿ ಜಯರಾಮ ಶೆಟ್ಟಿ, ಕೆ. ರಮೇಶ ಗಾಣಿಗ, ಅಭಿಲಾಷ್ ಪಿ. ವಿ., ಯು. ರಾಜೇಶ್ ಕಾರಂತ್, ನರಸಿಂಹ ಹಳಗೇರಿ, ಜಯಂತಿ ವಿಜಯಕೃಷ್ಣ ಪೊಡುಕೋಣೆ, ಅಂಬಿಕಾ ಆರ್. ದೇವಾಡಿಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೂರಾರು ಭರವಸೆಗಳನ್ನು ನೀಡಿತ್ತು. ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅವುಗಳಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿದೆ. ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಅಭಿವೃದ್ಧಿ ಯೋಜನೆಗಳು ಆಗಿವೆ. ಚುನಾವಣೆ ಎದುರಾಗುತ್ತಿರುವ ಈ ಕಾಲದಲ್ಲಿ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಮತದಾರರಿಗೆ ಸರ್ಕಾರದ ಸಾಧನೆಯ ಲೆಕ್ಕ ಕೊಡುವ ಕೆಲಸ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡೀಸ್ ಹೇಳಿದರು. ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಶನಿವಾರ ಹೆಮ್ಮಾಡಿಯಲ್ಲಿ ಆರಂಭವಾದ ’ಮನೆ ಮನೆಗೆ ಕಾಂಗ್ರೆಸ್’ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಸಾಧನೆ ಮಾಡಿ ಸುಮ್ಮನಾದರೆ ಚುನಾವಣೆ ಗೆಲ್ಲಲು ಸಾಧ್ಯವಾಗದು. ಅದರ ಕುರಿತು ಜನರಿಗೆ ತಿಳಿಹೇಳುವ ಅಗತ್ಯವಿದೆ. ಅದರೊಂದಿಗೆ ಯುವಜನರನ್ನು ಸೇರಿಸಿಕೊಂಡು ಸಂಘಟನೆ ಬಲಪಡಿಸುವ ಕಾರ್ಯವೂ ನಡೆಯಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ಗೋಪಾಲ ಪೂಜಾರಿ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಬ್ಲಾಡಿ ಕೆ. ಶೀನಪ್ಪ ಶೆಟ್ಟರು ರಾಜಕೀಯವಾಗಿ, ಸಾಮಾಜಿಕವಾಗಿ ಅಂದಿನ ದಿನಗಳಲ್ಲಿಯೇ ಸಾಕಷ್ಟು ಕೆಲಸ ಮಾಡಿದವರು.೧೯೬೦ನೇ ಇಸವಿಯಿಂದ ನಾವು ಅನ್ಯೋನ್ಯವಾಗಿಯೇ ಇದ್ದವರು. ಬೇರೆ ಬೇರೆ ಪಕ್ಷಗಳಲ್ಲಿ ತೊಡಗಿಸಿಕೊಂಡರೂ ಸಾಮಾಜಿಕ ಹಿತಚಿಂತನೆಯನ್ನು ಅವರಲ್ಲಿ ಸ್ಪಷ್ಟವಾಗಿ ಗಮನಿಸಬಹುದಾಗಿತ್ತು. ಶೀನಪ್ಪ ಶೆಟ್ಟರ ಹೆಸರಲ್ಲಿ ಟ್ರಸ್ಟ್ ಮೂಲಕ ಇಂಥಹ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದ ಶ್ಲಾಘನಾರ್ಹ ಎಂದು ಮಾಜಿ ಶಾಸಕ ಎ.ಜಿ.ಕೊಡ್ಗಿ ಹೇಳಿದರು. ಸಬ್ಲಾಡಿ ಕೆ.ಶೀನಪ್ಪ ಶೆಟ್ಟಿ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಇದರ ವತಿಯಿಂದ ಕುಂದಾಪುರದ ಬಂಟರ ಯಾನೆ ನಾಡವರ ಸಂಕೀರ್ಣದ ಎಸ್.ಎಸ್.ಹೆಗ್ಡೆ ಹಾಲ್‌ನಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ, ಆರೋಗ್ಯ ಸಹಾಯಧನ ವಿತರಣೆ, ಹಾಗೂ ಕೃಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾತಿನಿಧ್ಯ ಅವಶ್ಯಕತೆ ಇದೆ. ಬಹಳಷ್ಟು ಬದಲಾವಣೆಗಳು ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಿದೆ. ಆ ನೆಲೆಯಲ್ಲಿ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡುತ್ತಿರುವುದು, ಉತ್ತಮ ಕೃಷಿಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವೈದ್ಯಕೀಯ ನೆರವು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೆರಮನೆಯ ಯುವಕ-ಯುವತಿ ನಡುವೆ ಹುಟ್ಟಿದ ಪ್ರೀತಿಗೆ ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಕುಂದಾಪುರ ಮಹಿಳಾ ಸಾಂತ್ವಾನ ಕೇಂದ್ರ ಆಸರೆಯಾಗಿದ್ದು, ಸಾಂತ್ವಾನ ಕೇಂದ್ರದಲ್ಲಿ ವಿವಾಹ ಆಗುವ ಮೂಲಕ ದಾಂಪತ್ಯ ನವ ಜೀವನಕ್ಕೆ ಕಾಲಿಟ್ಟರು. ತಾಲೂಕಿನ ತ್ರಾಸಿ ಗ್ರಾಮದ ನಿವಾಸಿ ಮಣಿಕಂಠ ಎಂಬವರ ಪುತ್ರ ರಾಘವೇಂದ್ರ ಪೂಜಾರಿ (೨೯) ಹಾಗೂ ನೆರೆಮನೆ ನಿವಾಸಿ ಲಕ್ಷ್ಮಣ್ ಎಂಬವರ ಪುತ್ರಿ ವಸಂತಿ ಖಾರ್ವಿ (೨೪) ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಜೋಡಿ. ರಾಘವೇಂದ್ರ ಮೀನುಗಾರಿಕಾ ವೃತ್ತಿ ಮಾಡಿಕೊಂಡಿದ್ದು, ವಸಂತಿ ಕುಂದಾಪುರ ಪುಸ್ತಕ ಮಳಿಗೆಯಲ್ಲಿ ಕೆಲಸದಲ್ಲಿದ್ದರು. ಇಬ್ಬರೂ ಕಳೆದ ೨೦ ವರ್ಷದಿಂದ ಒಡನಾಡಿಗಳಾಗಿದ್ದು, ಎರಡು ವರ್ಷದಿಂದ ಇಬ್ಬರಲ್ಲಿ ಪ್ರೇಮಾಂಕುರವಾಗಿತ್ತು. ಆರು ತಿಂಗಳ ಹಿಂದೆ ಇಬ್ಬರೂ ಮದುವೆ ನಿರ್ಧಾರಕ್ಕೆ ಬಂದಿದ್ದರು. ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದ್ದರಿಂದ ಎರಡೂ ಮನೆಯವರು ಮದುವೆ ವಿರೋಧಿಸಿದ್ದರು. ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಮದುವೆ ಮಾಡಿಸುವಂತೆ ಕುಂದಾಪುರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಾಂತ್ವಾನ ಕೇಂದ್ರ ಅಧ್ಯಕ್ಷೆ ಇಬ್ಬರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಆಭಾರಿ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಗಳ ಸಹಕಾರದೊಂದಿಗೆ ನೂತನ ನಿರ್ಮಾಣದ ಓಲಗ ಮಂಟಪವನ್ನು ಧಾರ್ಮಿಕ ವಿಧಿಗಳ ಮೂಲಕ ಶ್ರೀದೇವರಿಗೆ ಅರ್ಪಿಸಲಾಯಿತು. ಈ ಪ್ರಯುಕ್ತ ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದೇವಳದ ತಂತ್ರಿ ಕೆ. ಮಂಜುನಾಥ ಅಡಿಗ ಆಶೀರ್ವಚನ ನೀಡಿ, ನಮ್ಮ ಉತ್ತಮ ಕಾರ್ಯಗಳಿಗೆ ದೈವ ಪ್ರೇರಣೆಯೇ ಬಲ ನೀಡುತ್ತದೆ. ದೇವರ ಮೇಲೆ ನಿರಂತರವಾಗಿ ಭಕ್ತಿಯನ್ನಿಟ್ಟು ನಿತ್ಯ ನಿರಂತರ ಭಜನೆ ಆರಾಧನೆ ಮಾಡುವುದರಿಂದ ನಮ್ಮ ಜೀವನ ಪಾವನಗೊಳ್ಳಲು ಸಹಕಾರಿಯಾಗುತ್ತದೆ ನಮ್ಮ ಗುರು-ಹಿರಿಯರಿಂದ ಪರಂಪರಾನುಗತವಾಗಿ ಬಂದಿರುವ ಸಂಸ್ಕಾರವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು. ದೇವಾಲಯಗಳಲ್ಲಿ ಸಂಸ್ಕೃತಿ, ಸಮಾನತೆ, ಸಾಮರಸ್ಯ, ಸಭ್ಯತೆ ಉಳಿಯಬೇಕಾದರೆ ಧಾರ್ಮಿಕ ಆಚರಣೆಯಲ್ಲಿ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು ಎಂದರು. ಮಾನವ ಶರೀರವೇ ಒಂದು ದೇಗುಲವಿದ್ದಂತೆ. ಆದರೆ ನಮ್ಮ ಕಾಲಿನಿಂದ ಶಿರದವರೆಗಿನ ನಿದ್ರಾವಸ್ಥೆಯಲ್ಲಿರುವ ಕುಂಡಲಿಶಕ್ತಿಗಳನ್ನು ಜಾಗೃತಗೊಳಿಸಲು ದೇವಸ್ಥಾನಕ್ಕೆ ಹೋಗಲೇಬೇಕು. ಅಲ್ಲದೇ ಯಾರಲ್ಲಿಯೂ ಹೇಳಿಕೊಳ್ಳಲಾಗದ ಕೆಲವು…
