ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಅ.27: ಇಂದು ಮುಂಜಾನೆಯ ಹೊತ್ತಿನಲ್ಲಿ ಅಪರೂಪವೆಂಬಂತೆ ತಾಲೂಕಿನಾದ್ಯಂತ ಮಂಜು ಮುಸುಕಿದ ವಾತಾವರಣ ಕಂಡುಬಂತು. ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಷ್ಟೇ ಕಾಣಸಿಗುವ ಮಂಜಿನ ಮುಂಜಾವು ಕಂಡು ಕರಾವಳಿಗರು ಉಲ್ಲಾಸಿತರಾಗಿದ್ದರು. ಕುಂದಾಪುರ ತಾಲೂಕಿನ ಬಹುಭಾಗಗಳಲ್ಲಿ ಮಂಜಿನ ವಾತಾವರಣವಿತ್ತು. ಕೊಲ್ಲೂರು ಘಾಟಿ, ಬಾಳೆಬರೆ ಘಾಟಿಯ ತನಕ ಸಹಜವಾಗಿ ನಿತ್ಯವೂ ಮಂಜಿನ ವಾತಾವರಣವಿದ್ದರೂ ಸಮುದ್ರ ತೀರಕ್ಕೆ ಹತ್ತಿರವಿರುವ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವುದು ತೀರಾ ಕಡಿಮೆ. ಚಳಿಗಾಲ ಆರಂಭಗೊಳ್ಳುತ್ತಿದ್ದಂತೆ ಮುಂಜಾನೆಯಲ್ಲಿ ಕರಾವಳಿಯ ಭಾಗಗಳಲ್ಲಿ ಕಂಡುಬಂದ ಮಂಜು ಮುಸುಕಿದ ವಾತಾವರಣ ಮಲೆನಾಡು ಸೊಬಗನ್ನು ನೆನಪಿಸುವಂತಿತ್ತು. ತಾಲೂಕಿನ ಬೈಂದೂರು, ಗಂಗೊಳ್ಳಿ, ತಲ್ಲೂರು, ಕುಂದಾಪುರ ಭಾಗಗಳಲ್ಲಿ ಕಂಡುಬಂದ ಮಂಜು ಮುಸುಕಿದ ವಾತಾವರಣದ ಚಿತ್ರಗಳು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ೮೯ನೇ ಜನ್ಮದಿನಾಚರಣೆಯನ್ನು ಜಾತ್ಯತೀತ ಜನತಾ ದಳ ಬೈಂದೂರು ಘಟಕದ ವತಿಯಿಂದ ಆಚರಿಸಲಾಯಿತು ಈ ಸಂದರ್ಭ ಬೈಂದೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಬೈಂದೂರು ಜಾತ್ಯತೀತ ಜನತಾ ದಳದ ಬ್ಲಾಕ್ ಅಧ್ಯಕ್ಷ ಬಿ. ಟಿ ಮಂಜುನಾಥ, ಮನ್ಸೂರ್ ಮರವಂತೆ, ಸದಾನಂದ ಕಾಂಚನ್, ರಮ್ಯ ಮೇಸ್ತ್, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಮಹೇಂದ್ರ ಶೆಟ್ಟಿ, ಹಾಗೂ ಡಾ. ರುದ್ರ ಗೌಡ ಪಾಟೀಲ್ ಮತ್ತಿತ್ತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾದಲ್ಲಿ ನಡೆದ ಜೇನ್-ಅಓ ಸಿನಿಯರ್ ಕಾಮನ್ವೆಲ್ತ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ತಾಲೂಕಿನ ವಂಡ್ಸೆ ಸಮೀಪದ ಜಡ್ಡುವಿನ ಗುರುರಾಜ್ ಪೂಜಾರಿ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಕಾಮನ್ವೆಲ್ತ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಗುರುರಾಜ್ 108ಕೆ.ಜಿ ಸ್ನಾಚ್ ಹಾಗೂ 141ಕೆ.ಜಿ ಜರ್ಕ್ ಸೇರಿ ಒಟ್ಟು 249ಕೆ.ಜಿ ಭಾರವನ್ನು ಎತ್ತುವ ಮೂಲಕ ಪದಕದ ಗುರಿ ತಲುಪಿದ್ದಾರೆ. ಗುರುರಾಜ್ ಪೂಜಾರಿ ಅವರಿಗೆ ‘ಕುಂದಾಪ್ರ ಡಾಟ್ ಕಾಂ’ನ ಅಭಿನಂದನೆಗಳು ಇದನ್ನೂ ಓದಿ ► ಕ್ರೀಡಾಕ್ಷೇತ್ರದ ಹೊಸ ಭರವಸೆ ಗುರುರಾಜ್ ಪೂಜಾರಿ – http://kundapraa.com/?p=18402
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಸಾಕಷ್ಟು ಅಭಿವೃದ್ಧಿ ಹೊಂದಿದ ಕುಂದಾಪುರ ತಾಲೂಕಿನ ಗ್ರಾಮೀಣ ಪ್ರದೇಶಗಳು ಅದೆಷ್ಟೋ ಕಡೆ ಇನ್ನೂ ಮೂಲಭೂತ ಸೌಕರ್ಯಗಳು ವಂಚಿತವಾಗಿವೆ. ದಬ್ಬಾಳಿಕೆ, ಪಾಳಗಾರಿಕೆಗಳ ನಡುವೆಯೂ ಭೂ ಮಾಲಕರು ಮೂಲಭೂತ ಸೌಕರ್ಯಗಳ ವಂಚನೆಗೆ ಇನ್ನೂ ಕಡಿವಾಣ ಹಾಕುತ್ತಲೇ ಇದ್ದಾರೆ ಎಂಬುದಕ್ಕೆ ತಾಲೂಕಿನ ಹೆಂಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಬತ್ತು ಸಮೀಪದ ನಕ್ಸಲ್ ಪೀಡಿತ ಕೊಡಾಬೈಲ್ ಎನ್ನುವ ಪ್ರದೇಶದ ಸ್ಪಷ್ಟ ಉದಾಹರಣೆ. ಕೊಡಾಬೈಲಿನಲ್ಲಿ ಸುಮಾರು 25 ಮನೆಗಳಿವೆ. ಒಟ್ಟು ಮುನ್ನೂರಾ ಐವತ್ತೆರಡು ಜನ ವಾಸವಿದ್ದಾರೆ. ಆದರೆ ಇವರು ಸಂಪೂರ್ಣವಾಗಿ ಮೂಲಭೂತ ಸೌಕರ್ಯ ವಂಚಿತರಾಗಿದ್ದಾರೆ. ಈ ಪ್ರದೇಶಕ್ಕೆ ಬರಬೇಕಾದರೆ ಒಂದು ರಸ್ತೆ ನಿರ್ಮಾಣ ಇದುವರೆಗೂ ಸಾಧ್ಯವಾಗಿಲ್ಲ. ವಿಶೇಷವೆಂದರೆ ಈ ಪ್ರದೇಶದಲ್ಲಿ ರಸ್ತೆ ಇದೆ. ಆದರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಸ್ಥಳೀಯರೊಬ್ಬರು ಆಕ್ಷೇಪ ಸಲ್ಲಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದೇ ಈ ಎಲ್ಲಾ ಸಮಸ್ಯೆಗೆ ಮೂಲ ಕಾರಣ. ಕೊಡಾಬೈಲಿನಲ್ಲಿ ಸುಮಾರು ಹತ್ತು ವಿದ್ಯಾರ್ಥಿಗಳು ಕಿರಿಯ ಪ್ರಾಥಮಿಕ ಶಾಲೆಗೆ, ೧೫ ಮಕ್ಕಳು ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ವತಿಯಿಂದ ಪೊಲಿಯೋ ನಿರ್ಮೂಲನೆಯಲ್ಲಿ ರೋಟರಿಯ ಪಾತ್ರದ ಬಗ್ಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೃಹತ್ ಬ್ಯಾನರೊಂದನ್ನು ಕುಂದಾಪುರ ಶಾಸ್ತ್ರೀ ಸರ್ಕಲ್ನಲ್ಲಿ ಅನಾವರಣ ಗೊಳಿಸಲಾಯಿತು. ವಿಶ್ವ ಪೊಲೀಯೋ ದಿನಾಚರಣೆ ಸಂಬಂಧ ನಡೆದ ಈ ಬೃಹತ್ ಬ್ಯಾನರನ್ನು ಉದ್ಘಾಟಿಸಿದ ರೋಟರಿ ಜಿಲ್ಲೆ ೩೧೮೨ ನಿಯೋಜಿತ ಗವರ್ನರ್ ಅಭಿನಂನದನ ಶೆಟ್ಟಿಯವರು ಮಾತನಾಡಿ, ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಹೋರಾಟದ ಯಶೋಗಾಥೆಯನ್ನು ಬಿಂಬಿಸುವ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ, ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ನವರ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಎಂದರು. ರೋಟರಿ ಸನ್ರೈಸ್ ಅಧ್ಯಕ್ಷರಾದ ಕೆ. ನರಸಿಂಹ ಹೊಳ್ಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ವಲಯ ೧ರ ಪಲ್ಸ್ ಪೋಲಿಯೋ ಕೊ.ಆರ್ಡಿನೇಟರ್ ಬಿ.ಎಂ. ಚಂದ್ರಶೇಖರ, ಮಾಜಿ ಸಹಾಯಕ ಗವರ್ನರ್ ಸತೀಶ್ ಎನ್. ಶೇರೆಗಾರ್, ರೋಟರಿ ಸನ್ರೈಸ್ ಸ್ಥಾಪಕಾಧ್ಯಕ್ಷರಾದ ದಿನಕರ ಆರ್. ಶೆಟ್ಟಿ ಸಹಕರಿಸಿದರು. ರೋಟರಿ ಸನ್ರೈಸ್ ಸದಸ್ಯರಾದ ಪ್ರಮೋದ ಕುಮಾರ ಶೆಟ್ಟಿ, ಸೀತಾರಾಮ, ಅರುಣಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿಯನ್ನು ಬಿಡುಗಡೆಗೊಳಿಸಲು ಸಹಕಾರಿಸಿದ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರನ್ನು ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಉಪ್ಪುಂದ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಸೋಮಶೇಖರ ಖಾರ್ವಿ, ಶಿರೂರು ವಲಯ ಅಲ್ಪಸಂಖ್ಯಾತ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕಬ್ಸಿ ಮಹಮ್ಮದ್, ಶಿರೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗಪ್ಪ ಮೊಗವೀರ ಹಾಗೂ ನಾಡದೋಣಿ ಮೀನುಗಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಸಾಲಿಗ್ರಾಮ ಘಟಕ ಮತ್ತು ಮಹಿಳಾ ಸಂಘಟನೆ ಸಾಲಿಗ್ರಾಮ ಇವರ ಆಶ್ರಯದಲ್ಲಿ, ಪಟ್ಟಣ ಪಂಚಾಯಿತಿ ಸಾಲಿಗ್ರಾಮ ಇವರ ಸಹಕಾರದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ಮಶಾನಗಳ ಸ್ವಚ್ಛತಾ ಆಂದೋಲನವು ಭಾನುವಾರ ನಡೆಯಿತು. ತೋಡ್ಕಟ್ಟು-ಪಾರಂಪಳ್ಳಿ ಸ್ಮಶಾನ ಸ್ವಚ್ಛತೆಯೊಂದಿಗೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಮೊಗವೀರ ಯುವ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಗಣೇಶ್ ಕಾಂಚನ್ ಚಾಲನೆ ನೀಡಿದರು. ಇದೇ ಸಂದರ್ಭ ಸಂಘಟನೆ ಅಧ್ಯಕ್ಷ ಸತೀಶ್ ಮರಕಾಲ ಮಾತನಾಡಿ, ರಕ್ತದಾನ ಶಿಬಿರಗಳ ಮೂಲಕ ಗುರುತಿಸಿಕೊಂಡಿದ್ದ ಮೊಗವೀರ ಸಂಘಟನೆಯು ಇನ್ನುಳಿದ ಸಮಾಜ ಪರ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ನಾಡೋಜ ಡಾ.ಜಿ.ಶಂಕರ್ ಅವರ ಪ್ರೇರಣೆಯ ಮೇರೆಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಸ್ಥಳೀಯವಾಗಿ ರೂಪಿಸುವ ಉದ್ದೇಶವಿರಿಸಿಕೊಂಡಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾಧ್ಯಕ್ಷರುಗಳಾದ ಜಯ ಸಿ ಕೋಟ್ಯಾನ್, ಎಂ.ಎಸ್.ಸಂಜೀವ, ಸತೀಶ್ ಎಂ.ನಾಯ್ಕ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಘವೇಂದ್ರ ಸುವರ್ಣ ಬೈಕಾಡಿ, ಉದ್ಯಮಿಗಳಾದ ಅರುಣ್ ಕುಂದರ್ ಗಿರಿಮುತ್ತು,…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದೇವಾಲಯಗಳಲ್ಲಿ ನಡೆಯುವ ಕರ್ಮಕ್ಕೆ ವಿಶೇಷ ಫಲ ದೊರಕುವುದಲ್ಲದೇ ಅಚಲವಾದ ನಂಬಿಕೆಯಿಂದ ಪ್ರಾರ್ಥಿಸಿದಲ್ಲಿ ದೇವರ ಪರಿಪೂರ್ಣ ಅನುಗ್ರಹವಾಗುತ್ತದೆ. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ವರ ಸಹಕಾರದೊಂದಿಗೆ ಒಗ್ಗಟ್ಟಿನಿಂದ ಮುಂದುವರಿದರೆ ಏನನ್ನಾದರೂ ಸಾಧಿಸಬಹುದು ಎಂದು ರಾಯಚೂರಿನ ಉದ್ಯಮಿ ಯು. ಸದಾನಂದ ಪ್ರಭು ಹೇಳಿದರು. ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ನೂತನ ಆಡಳಿತ ಟ್ರಸ್ಟಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಹಾಕಿಕೊಟ್ಟ ವಿಚಾರಧಾರೆ ಹಾಗೂ ಸ್ವ-ಪ್ರತಿಭೆಯಿಂದ ಸಪ್ತ ಕೊಂಕಣಿ ಸಮುದಾಯದ ಭವ್ಯ ಪರಂಪರೆ ನಡೆದುಬಂದಿದೆ. ನಮ್ಮಲ್ಲಿರುವ ದ್ವೇಷ, ಮನೆಯ ಸಮಸ್ಯೆಗಳ ಚರ್ಚೆ ಈ ಚೌಕಟ್ಟಿನ ಒಳಗೆ ತಾರದೇ ಸಹಬಾಳ್ವೆ, ನೆಮ್ಮದಿ ಹಾಗೂ ಸಂತೋಷಕ್ಕಾಗಿ ಆತ್ಮ, ದೇಹಶುದ್ದರಾಗಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಪರಮೋನ್ನತಿಗಾಗಿ ದೇವರಲ್ಲಿ ಪ್ರಾರ್ಥಿಸಬೇಕು ಎಂದರು. ಡಾ. ಎಸ್. ಎನ್. ಪಡಿಯಾರ್ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀಧರ ಪ್ರಭು, ಎನ್. ಅಚ್ಚುತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಉಪ್ಪುಂದ ಬಿಜೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ ಬೊಲೆರೊ ಪಿಕ್ಅಪ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಯಡ್ತರೆ ಸಸಿಹಿತ್ಲು ಅಣ್ಣಪ್ಪ ಪೂಜಾರಿ ಅವರ ಪುತ್ರ ಗುರುರಾಜ ಪೂಜಾರಿ (28) ಮೃತ ದುರ್ದೈವಿ. ಗುರುರಾಜ್ ಯಡ್ತರೆಯಿಂದ ಕುಂದಾಪುರದ ಕಡೆಗೆ ತಮ್ಮ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬೈಂದೂರಿಗೆ ಬರುತ್ತಿದ್ದ ಬೊಲೆರೋ ಪಿಕ್ಅಪ್ ವಾಹನಕ್ಕೆ ಢಿಕ್ಕಿಹೊಡೆದ ಪರಿಣಾಮ ಗುರುರಾಜ್ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಗ್ರಾಮಸಭೆ, ಜಮಾಬಂದಿ ಹಾಗೂ ಗ್ರಾಮ ಪಂಚಾಯತ್ನ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಗ್ರಾಮಸ್ಥರ ಭಾಗವಹಿಸುವಿಕೆ ಗರಿಷ್ಠ ಪ್ರಮಾಣದಲ್ಲಿರಬೇಕು. ಇಲ್ಲಿ ನಡೆದ ಪರಸ್ಪರ ಆರೋಗ್ಯಕರ ಚರ್ಚೆಯಿಂದ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುವುದರೊಂದಿಗೆ ಸಭೆಗಳು ಔಚಿತ್ಯ ಪೂರ್ಣವಾಗಿರಲು ಸಾಧ್ಯವಾಗುತ್ತದೆ ಎಂದು ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಭಟ್ನಾಡಿ ಅಣ್ಣಪ್ಪ ಶೆಟ್ಟಿ ಹೇಳಿದರು. ಕಾಲ್ತೋಡು ಅಂಬೇಡ್ಕರ್ ಭವನದಲ್ಲಿ ನಡೆದ ಜಮಾಬಂದಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಗ್ರಾಮಸ್ಥರ ಕುಂದು ಕೊರತೆಗಳನ್ನು ತಿಳಿಸಲು, ಗ್ರಾಮಸ್ಥರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಮತ್ತು ವಿವಿಧ ಯೋಜನೆಗಳ ಮಾಹಿತಿ ಪಡೆಯಲು ಇಂತಹ ವೇದಿಕೆಗಳನ್ನು ಗ್ರಾಮಸ್ಥರು ಬಳಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಿದ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ ಮಾತನಾಡಿ, ಈ ಭಾಗದ ಕೆಲವು ಕಾಮಗಾರಿಗಳನ್ನು ಸ್ಥಳ ಸಮೀಕ್ಷೆ ನಡೆಸಿ ಪರಿಶೀಲಿಸಿದ ನಂತರ ಚಾಲನೆ ನೀಡಲಾಗುವುದು ಎಂದ ಅವರು ಜಮಾಬಂದಿಯಲ್ಲಿ ಮಂಡಿಸಿದ ಗ್ರಾಪಂನ ವಾರ್ಷಿಕ ಲೆಕ್ಕಪತ್ರದ ಬಗ್ಗೆ ಗ್ರಾಮಸ್ಥರು ಯಾರೂ ಆಕ್ಷೇಪಣೆ…
