ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕಾದ ಕುಂದಾಪುರ ಪುರಸಭೆ ಮಾತ್ರ ಗಾಡ ನಿದ್ರೆಗೆ ಜಾರಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆಗಳಲ್ಲಿ ಚುನಾಯಿತ ಜನಪ್ರತಿನಿದಿನಗಳು ಇಲ್ಲದೆ ಇರುವ ಕಾರಣ ಪುರಸಭಾ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಕುಂದಾಪುರ ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ಸಮಸ್ಯೆಗೆ ಸಿಲುಕಿದ್ದರೂ ಕೂಡ ಇದನ್ನು ಪರಿಹರಿಸಬೇಕಾದ ಪುರಸಭೆ ಅಧಿಕಾರಿಗಳು ಬೇರೆ ಬೇರೆ ಸಬೂಬು ಹೇಳಿ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಬಿಟ್ಟರೆ ಇಲ್ಲಿಯ ತನಕ ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಈ ಭಾರಿ ಮಳೆಗಾಲ ಕೈಕೊಟ್ಟ ಕಾರಣ ಹೆಚ್ಚಿನ ಬಾವಿಗಳಲ್ಲಿ ಈಗಾಗಲೇ ನೀರಿನ ಕೊರತೆ ಏರ್ಪಟ್ಟಿದೆ. ಕುಂದಾಪುರ ಪುರಸಭೆಯ ನೀರನ್ನು ನಂಬಿರುವ ಗ್ರಾಮ ಪಂಚಾಯತುಗಳು ಕೂಡ ನೀರಿನ ಸರಬರಾಜು ವ್ಯತ್ಯಯದಿಂದ ಸಮಸ್ಯೆಗೆ ಈಡಾಗಿವೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಟ್ಟೆ ಎನ್.ಎಮ್.ಎ.ಎಮ್ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ. ಕೀರ್ತಿ ಶೆಟ್ಟಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಭಾಗವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿ ಭಾಗದಲ್ಲಿ ಆನಂದ್ ಸಿ ಕುಂದರ್ ಶೈಕ್ಷಣಿಕ ಕ್ರಾಂತಿಯನ್ನು ಪಸರಿಸಿದ್ದಾರೆ ಈ ಮೂಲಕ ಗ್ರಾಮೀಣ ಹಳ್ಳಿ ಭಾಗದ ಮಕ್ಕಳು ವಿದ್ಯಾರ್ಜನೆ ಪಡೆದು ಸುಸಂಸ್ಕೃತರಾದರೆ ಶೈಕ್ಷಣಿಕ ದಾನಿಗಳಾದ ಕುಂದರ್ ರವರು ಸಾರ್ಥಕ್ಯ ಕಂಡಂತೆ ಎಂದು ಪ್ರಸಿದ್ಧ ಮನೋವೈದ್ಯ ಡಾ.ಸಿ ಪ್ರಕಾಶ್ ತೋಳಾರ್ ಅಭಿಪ್ರಾಯಪಟ್ಟರು. ಅವರು ಶನಿವಾರ ಕೋಟದ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಇಲ್ಲಿನ ಪಡುಕರೆ ಶಾಲೆಯ ಹಿಂದಿನ ವಿದ್ಯಾರ್ಥಿ ಶಿರಿಯಾರ ಮನೆತನದ ಸಂದೇಶ್ ಕುಮಾರ್ ಇನ್ಫೋಸಿಸ್ ಮೂಲಕ 15 ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು ಶಿಕ್ಷಣ ಸಂಸ್ಥೆಯಲ್ಲಿ ಶಿಸ್ತು ಸಂಯಮ ಕಾಯ್ದುಕೊಳ್ಳಬೇಕು ಸಮಾಜಕ್ಕೆ ಮಾದರಿ ವ್ಯಕ್ತಿತ್ವವನ್ನು ನೀಡುವ ರೀತಿಯಲ್ಲಿ ಬೆಳೆದುತೊರಬೇಕು ಎಂದು ಕಂಪ್ಯೂಟರ್ ಕೊಡುಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಶಿರಿಯಾರ ಮನೆತವನ್ನು ಸ್ಮರಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಕಂಪ್ಯೂಟರ್ ಅನ್ನು ಸಂದೇಶ್ ಪೂಜಾರಿ ಇವರ ತಂದೆ ಕೃಷ್ಣ ಪೂಜಾರಿ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಿ ಅವರಿಗೆ ಹಸ್ತಾಂತರಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನಲ್ಲಿ ಖೇಲೋ ಕ್ರಿಯೇಟಿವ್ ಜೂನಿಯರ್ಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯು ಶನಿವಾರದಂದು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಸಪ್ತಗಿರಿ ಕ್ಯಾಂಪಸ್ನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಚಿನ್ನದ ಪದಕ ಗೆದ್ದಿರುವ ನಿಧಿ ಯು. ಆಚಾರ್ ಹಾಗೂ ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ, ಆದರ್ಶ್ ಎಂ. ಕೆ., ಶುಭಲಕ್ಷ್ಮಿ ಅಶ್ವಥ್ ಹಾಗೂ ಆಂಗ್ಲ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಶಿಸ್ತು ಮುಖ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಕ್ರೀಡಾಕೂಟದಲ್ಲಿ ಮಕ್ಕಳ ಕ್ರೀಡಾ ಕೌಶಲ್ಯ, ತಂಡದ ಮನೋಭಾವ ಮತ್ತು ಆತ್ಮವಿಶ್ವಾಸ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ವಿಜೇತ ಮಕ್ಕಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು. ಶಾಲೆಯ ಪ್ರಾಂಶುಪಾಲರಾದ ಅಕ್ಷತಾ ಆರ್. ಶೆಣೈ, ಶಿಕ್ಷಕ ವೃಂದ,…
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ – ಪಿಯುಸಿ ಶಿಕ್ಷಣಕ್ಕೆ ಶೇ.100ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ರಮೇಶ್ ಶೆಟ್ಟಿ ಅವರ ನೇತೃತ್ವದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6ರಂದು ಕುಂದಾಪುರದ ಯಡಾಡಿ–ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿರುವ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಈ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸುಜ್ಞಾನ ಸಂಸ್ಥೆ:ಕಳೆದ ಐದು ವರ್ಷಗಳಿಂದ ಕುಂದಾಪುರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸಿಇಟಿ, ನೀಟ್, ಜೆಇಇ, ಸಿಎ ಮತ್ತು ಸಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಪಡಿಸುತ್ತಿದೆ. ವಿದ್ಯಾರ್ಥಿಗಳನ್ನು ಐಐಟಿ, ವೈದ್ಯಕೀಯ ಕಾಲೇಜುಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ತಗ್ಗರ್ಸೆ ಇದರ ದಶಮ ಸಂಭ್ರಮ ಕಾರ್ಯಕ್ರಮದ ಪೋಸ್ಟರ್ ಅನಾವರಣವು ಆದಿತ್ಯವಾರದಂದು ತಗ್ಗರ್ಸೆ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನೆರವೇರಿಸಲಾಯಿತು. ಪೋಸ್ಟರನ್ನು ಹಿರಿಯ ರಂಗ ಕಲಾವಿದರಾದ ಗಣೇಶ್ ಕಾರಂತ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಸಮಿತಿಯ ಸರ್ವ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೊಸೆಸಾಂವ್ ಮಾತೆಯ ದೇವಾಲಯ ಗಂಗೊಳ್ಳಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕರ್ನಾಟಕ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಹಾಗೂ ಆರೋಗ್ಯ ಆಯೋಗ, ಸ್ತ್ರೀ ಆಯೋಗ ಮತ್ತು ಸ್ಪರ್ಶ ಸಂಪದ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕ್ಯಾನ್ಸರ್, ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿಯ ಕೊಸೆಸಾಂವ್ ಮಾತೆಯ ಚರ್ಚ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಶಿಬಿರವನ್ನು ಸಂಪದದ ನಿರ್ದೇಶಕ, ಧರ್ಮಗುರು ರೀಕ್ಸನ್ ಮೊಂತೆರೊ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚರ್ಚಿನ ಧರ್ಮಗುರು ಥೋಮಸ್ ರೋಶನ್ ಡಿಸೋಜ ಶುಭ ಹಾರೈಸಿದರು. ಡಾ. ತನ್ಮಯ್, ಪಾಲನಾ ಮಂಡಳಿಯ ಕಾರ್ಯದರ್ಶಿ ಗ್ಲೋರಿಯಾ ಡಿಸೋಜ, 20 ಆಯೋಗಗಳ ಸಂಯೋಜಕಿ ಜಸಿಂತ ಡಿಸೋಜ, ಸಚೇತಕಿಯಾದ ಧರ್ಮಭಗಿನಿ ಗ್ರೇಸಿ ಲೋಬೊ, ಸ್ವಸಹಾಯ ಸಂಘದ ಮಾರ್ಗದರ್ಶಕಿ ಸಿಂತಿಯಾ ರೊಡ್ರಿಗಸ್, ಸ್ತ್ರೀ ಸಂಘಟನೆಯ ಅಧ್ಯಕ್ಷೆ ಅನಿತಾ ಫೆನಾಂಡಿಸ್ ಹಾಗೂ ಸ್ಟ್ಯಾನ್ಲಿ ಫೆನಾಂಡಿಸ್ ಉಪಸ್ಥಿತರಿದ್ದರು. ಗ್ಲೋರಿಯಾ ಡಿಸೋಜ ಸ್ವಾಗತಿಸಿದರು. ಐರಿನ್ ನಜರೆತ್ ವಂದಿಸಿದರು. ರೀಟಾ ಡಾಯಸ್ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಶಿಕ್ಷಣ ಕ್ಷೇತ್ರದಲ್ಲೇ ಮೊಟ್ಟಮೊದಲ ಬಾರಿಗೆ ಪ್ರೀ ಕೆಜಿ, ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ, ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುವುದು ಅಗತ್ಯ. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕ್ರೀಡಾಕೂಟಗಳು ಮಕ್ಕಳ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ” ಎಂದು ನುಡಿದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ಯಾಮಲಾ ಗಣೇಶ್, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪೋಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಮತ್ತು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆಗೆ ಹಟ್ಟಿಅಂಗಡಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಪುಷ್ಪಾರ್ಪಣೆ ಸಲ್ಲಿಸಿ, ಮಾತನಾಡಿ, ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಭವಿಷ್ಯದ ನಾಯಕರು. ಜಪಾನ್, ರಷ್ಯಾದಂತಹ ರಾಷ್ಟ್ರಗಳಲ್ಲಿ ಮಾತೃಭಾಷೆಯನ್ನು ಬಿಟ್ಟು ಬೇರೆ ಭಾಷೆಯನ್ನು ಜನ ನುಡಿಯದೆ ತಮ್ಮ ಸ್ವಾಭಿಮಾನವನ್ನು ತೋರಿಸಿಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ನಾವು ಕನ್ನಡ ಮಾತಾಡಲು ಹಿಂಜರಿಯುತ್ತಿದ್ದೇವೆ. ನಾವಿಂದು ಮಕ್ಕಳಿಗೆ ಈ ನೆಲ, ನುಡಿಗಳ ಬಗ್ಗೆ ತಿಳಿಸಲು ಅನುಕೂಲವಾದ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುತ್ತೇವೆ. ಮಕ್ಕಳು ಉದ್ಯೋಗಾದಿಗಳಿಗಾಗಿ ಅನಿವಾರ್ಯವಾಗಿ ಇಂಗ್ಲೀಷ್ ಭಾಷೆಯನ್ನು ಚೆನ್ನಾಗಿ ಅಭ್ಯಾಸ ಮಾಡಬೇಕಾಗಿದ್ದರಿಂದ ನಾವು ಇಂಗ್ಲೀಷ್ಗೆ ಒತ್ತು ನೀಡುತ್ತಿದ್ದೇವೆ. ಆದರೂ, ಹುಟ್ಟಿದ ನೆಲದ ನುಡಿಯನ್ನು ಎಂದಿಗೂ ಮರೆಯಬಾರದು. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಎನ್ನುತ್ತಾ ಕನ್ನಡದ ಸಂಸ್ಕೃತಿಯ ಪರಿಚಯಗೈಯ್ದರು. ಈ ಸಮಯದಲ್ಲಿ ಶಾಲಾ ಉಪಪ್ರಾಂಶುಪಾಲರಾದ ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಮಹಿಳಾ ಸಬಲೀಕರಣ ಘಟಕದ ಜಂಟಿ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಅಂಗವಾಗಿ ಮುಳ್ಳುಗುಡ್ಡೆಯ ಸೌಪರ್ಣಿಕಾ ಗೇರುಬೀಜ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕರಿಗಾಗಿ ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವವನ್ನು ವಿವರಿಸುವ ಪವರ್ಪಾಯಿಂಟ್ ಪ್ರಸ್ತುತಿಯನ್ನು ನೀಡಿದರು. ವೈಯಕ್ತಿಕ ಸ್ವಚ್ಛತೆ, ಕೈತೊಳೆಯುವ ಸರಿಯಾದ ವಿಧಾನ, ಆರೋಗ್ಯಕರ ಆಹಾರ ಪದ್ಧತಿ, ಮುಟ್ಟಿನ ಸಮಯದ ನೈರ್ಮಲ್ಯ ಹಾಗೂ ಕೆಲಸದ ಸ್ಥಳದಲ್ಲಿ ವಹಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು. ಜೊತೆಗೆ ವಿದ್ಯಾರ್ಥಿಗಳು ಕಿರು ಪ್ರಹಸನದ ಮೂಲಕ ನೈರ್ಮಲ್ಯ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಿದರು. ಈ ಚಟುವಟಿಕೆ ಮಹಿಳಾ ಕಾರ್ಮಿಕರಿಗೆ ದೈನಂದಿನ ಜೀವನದಲ್ಲಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡಿತು. ಕಾಲೇಜಿನ ಪ್ರಾಂಶುಪಾಲ ಡಾ. ಕೆ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ,…
