ಕುಂದಾಪ್ರ ಡಾಟ್ ಕಾಂ ಸುದದಿ.ಕುಂದಾಪುರ: ಕೃತಕ ಬುದ್ಧಿಮತ್ತೆ ಚಾಲ್ತಿಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ, ವಿದ್ಯಾರ್ಥಿಗಳಲ್ಲಿ ಸಂವೇದನಾ ಶೀಲತೆಯನ್ನು ಬೆಳೆಸಬೇಕಾಗಿರುವುದು ಅತ್ಯಂತ ಅಗತ್ಯ. ವಿದ್ಯಾರ್ಥಿಗಳನ್ನು ಆಂತರಿಕವಾಗಿ ಮತ್ತು ಭಾವನಾತ್ಮಕವಾಗಿ ಗಟ್ಟಿಗೊಳಿಸಲು ಸಾಹಿತ್ಯದ ಓದು ಮತ್ತು ಬರವಣಿಗೆ ಉಪಯೋಗಕಾರಿ. ಸಾಹಿತ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ತೊಡಗಿಕೊಂಡರೆ ಭವಿಷ್ಯದಲ್ಲಿ ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಹಾಗೂ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಬೆಳ್ವೆ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ (53) ಅವರು ರಕ್ತಸಿಕ್ತ ವಾಂತಿ ಮಾಡಿ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮನೆಯ ಕೋಣೆಯಲ್ಲಿ ಮಲಗಿದ್ದ ಅವರು ರಕ್ತಸಿಕ್ತ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೇ ಅವರನ್ನು ಬೆಳ್ವೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಸ್ತಾನ ಟೋಲ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್‌ನಿಂದ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಸ್ತಾನ ಟೋಲ್ ಅಸಿಸ್ಟಂಟ್ ಮ್ಯಾನೇ ಜರ್ ಆಗಿ ಕೆಲಸ ಮಾಡುತ್ತಿರುವ ಯೋಗೀಶ್ ಕುಮಾರ್ (42) ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಸ್ಸೊಂದು ಟೋಲ್ ಪಾವತಿಸುತ್ತಿದ್ದ ಸಂದರ್ಭ ಅದರ ಹಿಂದೆ ಕಾರಿನಲ್ಲಿ ಇದ್ದ ವ್ಯಕ್ತಿಗಳು ದಾಂಧಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ವೆಂಕಟೇಶ ಪ್ರಸಾದ್ ಎಂಬಾತ ಕೂಗಾಡುತ್ತಾ ಟೋಲ್ ಬ್ಯಾರಿಯರ್‌ಗೆ ಕಾಲಿನಿಂದ ಒದ್ದಿದ್ದಾನೆ. ಅಲ್ಲದೆ ಅಲ್ಲಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ದೂಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ಹೋದಾಗ ಕಾರಿನಲ್ಲಿದ್ದ ವಿನಾಯಕ್ ಎಂಬಾತ ಕಬ್ಬಿಣದ ರಾಡ್ ಹಿಡಿದು ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪಕ್ಕಕ್ಕೆ ಸರಿದ ಕಾರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಚಾಲಕನ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಲಾರಿಯ ಟಯರ್ ಸಿಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನು ಲಾರಿ ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿದ ಸಂದರ್ಭದಲ್ಲಿ ಎದುರಿನಿಂದ ಯಾವುದೇ ವಾಹನಗಳು ಬಾರದ ಕಾರಣ ದೊಡ್ಡ ಅಪಘಾತ ತಪ್ಪಿದಂತಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, 10 ವರ್ಷಗಳ ನಂತರ ಇತ್ತೀಚೆಗಷ್ಟೇ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಶಶಿಕಾಂತ್ ಶೆಟ್ಟಿ (44) ವಿರುದ್ಧದ ಆರೋಪ ಸಾಬೀತಾಗಿದೆ. ವರದಕ್ಷಿಣೆ ಕಿರುಕುಳಕ್ಕಾಗಿ ಆತನಿಗೆ ಕುಂದಾಪುರ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ, ಆದೇಶಿಸಿದೆ. ತಲೆಮರೆಸಿಕೊಂಡಿದ್ದ ಈತನನ್ನು ಮಾ.1 ರಂದು ಪಶ್ಚಿಮ ಬಂಗಾಳದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಪತ್ನಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ► ಕುಂದಾಪುರ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ► https://kundapraa.com/?p=96365 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಯಕ್ಷಗಾನ ಗೊಂಬೆ ಆಟವು ಕರಾವಳಿ ಭಾಗದ ಆಕರ್ಷಕ ಕಲೆಯಾಗಿದ್ದು, ಪಪೆಟ್ (ಗೊಂಬೆ)ಗಳ ಮೂಲಕ ಯಕ್ಷಗಾನದ ಕಥಾವಸ್ತುಗಳನ್ನು ಪ್ರದರ್ಶಿಸುವ ಕಲಾರೂಪಕವಾಗಿದೆ. ಈ ಕಲೆ ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಪರಿಚಯಿಸುವ ಮಹತ್ವದ ಮಾಧ್ಯಮ ಎಂದರು. ಯಕ್ಷಗಾನ ಗೊಂಬೆ ಆಟಕ್ಕೆ ಸುಮಾರು 300 ರಿಂದ 400 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಪುರಾತನ ಕಾಲದಲ್ಲಿ ಜನರಿಗೆ ರಾಮಾಯಣ, ಮಹಾಭಾರತ ಹಾಗೂ ಪುರಾಣಗಳ ಕಥೆಗಳನ್ನು ಸುಲಭವಾಗಿ ತಲುಪಿಸಲು ಈ ಕಲೆಯನ್ನು ಬಳಸಲಾಗುತ್ತಿತ್ತು. ಈ ಗೊಂಬೆಗಳನ್ನು ಸಾಮಾನ್ಯವಾಗಿ ಮರ, ಬಟ್ಟೆ ಮತ್ತು ಚರ್ಮದಿಂದ ತಯಾರಿಸಲಾಗುತ್ತದೆ. ಕಲಾವಿದರು ಬಿದಿರಿನ ಕಡ್ಡಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು ರದ್ದುಪಡಿಸಿ, ನವ ಉದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಪಡೆದಿರುವ ಘಟಕಗಳು ನಿಗಧಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದ್ರಿರವರಿಗೆ ಮಂಜೂರಾಗಿರುವ ನಿವೇಶನವನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿ ಸಲ್ಲಿಸಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಖಿಲ ಕರ್ನಾಟಕ ಸೌಂದರ್ಯ ತಜ್ಞರ ಸಂಘ ಉಡುಪಿ ಕುಂದಾಪುರ ವಲಯದ ಮಹಿಳಾ ದಿನಾಚರಣೆಯನ್ನು ಸಾಲಿಗ್ರಾಮದ ಹೊಸ ಬದುಕು ಆಶ್ರಮದಲ್ಲಿ ಅಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಲಯ ಅಧ್ಯಕ್ಷ ರೇಖಾ.ಆರ್. ಆಚಾರ್ಯ ವಹಿಸಿದ್ದರು. ಆಶ್ರಮದ ನಿವಾಸಿಗಳಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು. ಮುಖ್ಯ ಅಭ್ಯಾಗತರಾಗಿ ಜಿಲ್ಲಾ ಅಧ್ಯಕ್ಷೆ ಸುನಿತಾ ಗಣೇಶ್, ಕಾರ್ಯದರ್ಶಿ ಸಂಧ್ಯಾ ದಿನೇಶ್, ಕೋಶಾಧಿಕಾರಿ ಗೀತಾ ದಯಾನಂದ್, ಸ್ಥಾಪಕ ಕಾರ್ಯದರ್ಶಿ ವೇದಾ ಸುವರ್ಣ, ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ದಾಕ್ಷಾಯಿಣಿ ಆಶ್ರಮದ ವ್ಯವಸ್ಥಾಪಕಿ ರಾಜಶ್ರೀ ಹಾಗೂ ಕುಂದಾಪುರ ವಲಯ ಕೋಶಾಧಿಕಾರಿ ಮಾಲತಿ, ಪಿ.ಆರ್. ಓ ಸುನೀತಾ ಶೆಟ್ಟಿ ಹಾಗೂ ಜಿಲ್ಲಾ ಮಾಜಿ ಅಧ್ಯಕ್ಷೆ ಕಿಶ್ವರ್ ಜಹಾನ್, ಬೈಂದೂರು ವಲಯ ಅಧ್ಯಕ್ಷೆ ಭಾರತಿ ಶೆಟ್ಟಿ ಕಾರ್ಯದರ್ಶಿ ಶಾಂತ,ಸಂಘದ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಲಯ ಕಾರ್ಯದರ್ಶಿ ಪ್ರಮಿಳ ಪುತ್ರನ್ ನಿರೂಪಿಸಿದರು. ಆಶ್ರಮದ ಮುಖ್ಯಸ್ಥ ವಿನಯಚಂದ್ರ ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಡಿ.ಸಿ ಮನ್ನಾ ಭೂ ಮಂಜೂರು ಮಾಡಲು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಸಮುದಾಯದವರು ಆಗ್ರಹ ಪಡಿಸುತ್ತಿರುವ ವಿಚಾರ ಸರಕಾರದ ಗಮನದಲ್ಲಿದೆಯೇ? ಇದ್ದಲ್ಲಿ ಈ ಬಗ್ಗೆ ಈವರೆಗೆ ಕೈಗೊಂಡ ಕ್ರಮವೇನು ಹಾಗೂ ಭೂಮಿಗಳನ್ನು ಅರ್ಹ ಭೂ ರಹಿತರಿಗೆ ನೀಡಲು ಸರಕಾರ ಕೈಗೊಂಡ ಕ್ರಮಗಳ ಕುರಿತು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಕರ್ನಾಟಕ ಭೂ ಮಂಜುರಾತಿ ನಿಯಮ 1969 ರ ನಿಯಮ 5 ರಂತೆ ಶೇಕಡವಾರು 50% ಜಮೀನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿರಿಸಲು ಅವಕಾಶವಿದ್ದು ನಿಯಮ 7 ರಡಿ ಜಮೀನು ಹಂಚಿಕೆ ಮಾಡಲು ಅವಕಾಶವಿರುತ್ತದೆ. ಬಾಕಿ ಉಳಿದಿರುವ ಡಿ.ಸಿ ಮನ್ನಾ ಜಮೀನುಗಳನ್ನು ಅರ್ಹರಿಗೆ ಶೀಘ್ರವಾಗಿ ಹಂಚಿಕೆ ಮಾಡುವ ಉದ್ದೇಶಕ್ಕಾಗಿ ಪರಿಶೀಲಿಸಿ ಪ್ರಸ್ತಾವನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಜಂಟಿಯಾಗಿ ಆಯೋಜಿಸುವ ಇನ್‌ಸ್ಪಾಯರ್ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಜಯ್ ಕೆ. ಗಾಣಿಗ ಪ್ರದರ್ಶಿಸಿದ್ದ ‘ಸ್ವಯಂಚಾಲಿತ ವಿಸ್ತರಿಸುವ ಕೋಲು ಮಾಡೆಲ್’ ಆಯ್ಕೆಯಾಗಿದೆ. ಈತ ಗಂಗೊಳ್ಳಿಯ ಕೃಷ್ಣ ಗಾಣಿಗ ಹಾಗೂ ಶಾಲಿನಿ ದಂಪತಿಯ ಪುತ್ರ.
