ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ‘ಆಳ್ವಾಸ್ ಪ್ರಗತಿ’ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅತಿದೊಡ್ಡ ಉಚಿತ ಬೃಹತ್ ಉದ್ಯೋಗ ಮೇಳವಾಗಿದ್ದು, ಕಳೆದ ಎರಡು ದಶಕಗಳಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಅಭೂತಪೂರ್ವ ಉದ್ಯೋಗ ಅಭಿಯಾನವನ್ನು ನಿರಂತರವಾಗಿ ಆಯೋಜಿಸುತ್ತಿದೆ. ಇದೀಗ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026’ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪ್ರಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2007ರಲ್ಲಿ ಆರಂಭಗೊಂಡ ‘ಆಳ್ವಾಸ್ ಪ್ರಗತಿ’ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ಮತ್ತು ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ರಾಜ್ಯದ ಅತ್ಯಂತ ವಿಶ್ವಾಸಾರ್ಹ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದ ಭಾಗವಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುತ್ತಿದ್ದು, ವಿಶೇಷವಾಗಿ ಗ್ರಾಮೀಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇ-ಕಾಮರ್ಸ್ ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮ್ಯಾಟೊ ವಿಧಿಸುತ್ತಿರುವ ಅತಿಯಾದ ಕಮಿಷನ್, ಅಸಮರ್ಪಕ ಪಾವತಿ ವ್ಯವಸ್ಥೆ ಹಾಗೂ ಪೂರ್ವ ಮಾಹಿತಿ ನೀಡದೆ ಏಕಾಏಕಿ ಪಾವತಿಯಲ್ಲಿ ಕಡಿತ ಮಾಡುತ್ತಿರುವ ಕ್ರಮದಿಂದ ಹೋಟೆಲ್ ಉದ್ಯಮಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯಿಂದ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಇ-ಕಾಮರ್ಸ್ ಸೇವೆಗಳ ಮೂಲಕ ಆಹಾರವನ್ನು ಆರ್ಡರ್ ಮಾಡುವ ಗ್ರಾಹಕರ ಮೇಲೆಯೂ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಈ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ರಾಜಾಜಿನಗರದ ಸ್ವಾತಿ ಹೋಟೆಲ್ನಲ್ಲಿ ನಡೆಯಲಿದ್ದು, ಹೋಟೆಲ್ ಉದ್ಯಮಿಗಳು, ಹಿತೈಷಿಗಳು ಹಾಗೂ ಸಂಬಂಧಿತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೊಟೇಲ್ ಉದ್ಯಮಿಗಳಾದ ನವೀನ್ ಶೆಟ್ಟಿ ಐರ್ಬೈಲು, ಅಜಿತ್ ಶೆಟ್ಟಿ ಕಿರಾಡಿ ಹಾಗೂ ಹರೀಶ್ ಶೆಟ್ಟಿ ಅರೆಶಿರೂರು ಮನವಿ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಯೋಧ ಯೋಗೀಶ್ ಕಾಂಚನ್ ಅವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತ ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ದೇಶ ಪ್ರೇಮದ ಭಾವನೆಯನ್ನು ಎಲ್ಲಾ ನೆಲೆಯಲ್ಲಿಯೂ ಬೆಳೆಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಎನ್.ಸಿ.ಸಿ. ಕೇರ್ ಟೇಕರ್ ಶ್ರೀ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ANO Lt. ಹರೀಶ್ ಬಿ. ಸ್ವಾಗತಿಸಿದರು. ಎನ್.ಸಿ.ಸಿ. ಕೆಡೆಟ್ಗಳಾದ ಸಿಂಚನಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಧಾನಿ ನರೇಂದ್ರ ಮೋದಿ ಅವರ 136ನೇ “ಮನ್ ಕೀ ಬಾತ್” ಕಾರ್ಯಕ್ರಮದ ನೇರ ಪ್ರಸಾರವನ್ನು ಭಾನುವಾರ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿಯಲ್ಲಿ ಸಾಮೂಹಿಕವಾಗಿ ವೀಕ್ಷಿಸಲಾಯಿತು. ಮನ್ ಕೀ ಬಾತ್ ಮೂಲಕ ಪ್ರಧಾನಿಯವರು ದೇಶದ ಮೂಲೆ ಮೂಲೆಗಳಲ್ಲಿನ ಸಕಾರಾತ್ಮಕ ಬದಲಾವಣೆಗಳನ್ನು ಜನರೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಇದು ನಮ್ಮ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮತ್ತು ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್ ಅವರು ಮನ್ ಕೀ ಬಾತ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಿಯವರು ದೇಶದ ವಿವಿಧ ಕ್ಷೇತ್ರಗಳ ಸಾಧನೆಗಳು, ಜನಸಾಮಾನ್ಯರ ಕಥೆಗಳು ಮತ್ತು ರಾಷ್ಟ್ರ ನಿರ್ಮಾಣದ ಕುರಿತು ನೀಡಿದ ಸಂದೇಶವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಹೂವಿನ ಹಡಗಲಿ ವತಿಯಿಂದ ಕೊಡಲ್ಪಡುವ ಕಾವ್ಯಶ್ರೀ ಪ್ರಶಸ್ತಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಲೇಖಕರಾದ ನರೇಂದ್ರ ಎಸ್. ಗಂಗೊಳ್ಳಿ ಆಯ್ಕೆಯಾಗಿರುತ್ತಾರೆ. ವೈವಿಧ್ಯಮಯ ವಿಚಾರಗಳ ಲೇಖಕರಾಗಿ ಗುರುತಿಸಿಕೊಂಡಿರುವ ಹಾಗು ಹೇಳದೆ ಹೋದ ಮಗಳಿಗೆ, ನಾಯಿ ನಾನು, ನಿಭ್ರತ, ರೂಮಿನೊಳಗಿಂದ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ಅವಳ ಕೂಗು ಬಿಡುಗಡೆಯ ತಯಾರಿಯಲ್ಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ನ್ನು ಮುಂಬರುವ ವರ್ಷದ ಜನವರಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರ ಸ್ವಗೃಹದಲ್ಲಿ ನಡೆದ ಪ್ರಥಮ ಸಮಾಲೋಚನಾ ಸಭೆಯಲ್ಲಿ, ಈ ಬಾರಿ ಆಳ್ವಾಸ್ ನುಡಿಸಿರಿ ಹಾಗೂ ಆಳ್ವಾಸ್ ವಿರಾಸತ್ ಉತ್ಸವಗಳನ್ನು ಒಂದೇ ವೇಳೆಯಲ್ಲಿ ಅದ್ದೂರಿಯಾಗಿ ಆಯೋಜಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರತಿವರ್ಷವೂ ಹೊಸ ಆಲೋಚನೆ, ಹೊಸ ಪರಿಕಲ್ಪನೆ ಮತ್ತು ಹೊಸ ತಲೆಮಾರಿನ ಭಾಗವಹಿಸುವಿಕೆಗೆ ಆದ್ಯತೆ ನೀಡುತ್ತಾ ಉತ್ಸವವನ್ನು ವಿಸ್ತರಿಸುತ್ತಿದ್ದೇವೆ. ಜನವರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುವುದರ ಜೊತೆಗೆ, ಯುವಜನತೆ, ಕನ್ನಡದ ಭವಿಷ್ಯ, ದೇಶೀಯತೆ, ಪರಿಸರ ಸಂರಕ್ಷಣೆ ಹಾಗೂ ಸಹಬಾಳ್ವೆಯಂತಹ ಸಮಕಾಲೀನ ವಿಷಯಗಳ ಕುರಿತು ಗಂಭೀರ ಚರ್ಚೆಗಳಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸಮಾಜದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಕ್ಷ ಸಂಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಸದಾ ಮುಂಚೂಣಿಗೆ ನಿಲ್ಲುತ್ತದೆ. ಹಾಗೆಯೇ ಯುವ ಸಮುದಾಯದ ಬೆನ್ನಿ ಸದಾ ನಿಲ್ಲಲಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಭಾನುವಾರ ಸಾಲಿಗ್ರಾಮ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಯ್ಕೆಗೊಂಡ ಜಿ. ತಿಮ್ಮ ಪೂಜಾರಿ ಅವರ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವ ಸಮುದಾಯವನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿದ ದೋರಣೆಯನ್ನು ಖಂಡಿಸಿ ಕಾಕ್ರೋಚ್ ಎಂಬ ಯುವ ಶಕ್ತಿಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಕೈಜೋಡಿಸಿ ಬದಲಾವಣೆಯ ಪರ್ವಕ್ಕೆ ಸಾಕ್ಷಿಯಾಗಿದೆ ಎಂದರಲ್ಲದೆ ಕೇಂದ್ರದ ನರೇಂದ್ರ ಮೋದಿ ಸರಕಾರ ನೀಟ್ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಖಂಡಿಸಿದರು. ಸರಕಾರಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕೆ ವಿನಹ ಅವರ ಹಕ್ಕನ್ನು ಕಸಿಯುವ ಕಾರ್ಯ ಮಾಡಿದೆ. ಇನ್ನೊಂದೆಡೆ ಅಯೋಧ್ಯ ರಾಮನ ಹೆಸರಿನಲ್ಲಿ ಲೂಟಿ ಇಷ್ಟೆಲ್ಲ ನಡೆದರೂ ಮಾಧ್ಯಮಗಳು ಸ್ಪಷ್ಟ ವರದಿಗಾರಿಕೆಯನ್ನು ವಾಸ್ತವಾಂಶದ ಮೂಲಕ ವರದಿ ಪ್ರಕಟಿಸಬೇಕು ಎಂದು ಪತ್ರಿಕೋದ್ಯಮದಲ್ಲಿ ವಡ್ಡರ್ಸೆ ರಘುರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆ.ಎಸ್.ಎಸ್. ಮಹಾವಿದ್ಯಾಪೀಠದ ಅಧಿಕಾರಿಗಳಾದ ರವೀಶ್ ಮತ್ತು ರೇಣುಕಾಸ್ವಾಮೀ, ಜೆ.ಎಸ್.ಎಸ್. ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಧು, ಭೋಧಕರಾದ ತಮ್ಮಯ್ಯ, ವಿನೋದ್ ಕುಮಾರ್, ಕೋ ಆರ್ಡಿನೇಟರ್ ಭರತ್ ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಗೆ ಶ್ರೀಗಳ ಸೂಚನೆ ಮೇರೆಗೆ ಭೇಟಿ ನೀಡಿದರು. ಇಲ್ಲಿರುವ ಐರಿಸ್ ಎ.ಐ. ರೋಬೋ ಶಿಕ್ಷಕಿಯ ಕಾರ್ಯಶೈಲಿಯ ಬಗ್ಗೆ ತಿಳಿದುಕೊಂಡು ಅದನ್ನು ಅವರ ಶಿಕ್ಷಣ ಸಂಸ್ಥೆಗಳಲ್ಲಿ ಅನುಷ್ಠಾನ ಮಾಡುವ ಕುರಿತು ಯೋಜನೆ ರೂಪಿಸಿದ್ದು ಶಾಲೆಯ ಸಂಪೂರ್ಣ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ದೇವಾಡಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯದ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ನಿರ್ದೇಶಕ ಪ್ರತಾಪ್ ಕುಮಾರ್ ಶೆಟ್ಟಿ, ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ವರ ಮೂಲಕ ಸಮಾಜದ ಏಳಿಗೆ ಒಗ್ಗಟ್ಟಾಗಿ ಶ್ರಮಿಸಿದರೆ ಅಭಿವೃದ್ಧಿ ಸಾಧ್ಯವಿದೆ. ಗಳಿಕೆಯ ಹಣ ಟ್ರಸ್ಟ್ ಮೂಲಕ ಸದ್ವಿನಿಯೋಗವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ವಿಶ್ವ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ಶಶಿಧರ್ ನಾಯಕ್ ಹೇಳಿದರು. ಅವರು ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಇದರ ಹದಿನಾಲ್ಕನೆಯ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಭಾನುವಾರ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಟ್ರಸ್ಟ್ ಗಳಾದ ಬಿ. ರಾಮಕೃಷ್ಣ ಶೇರುಗಾರ್ ವಹಿಸಿ ಮಾತನಾಡಿ, ಟ್ರಸ್ಟಿಗೆ ದೇಣಿಗೆ ನೀಡಿದ ಹಣ ಸರಿಯಾದ ರೀತಿಯಲ್ಲಿ ವಿನಿಯೋಗ ಆಗಬೇಕು ಎಂಬುದು ನಮ್ಮ ಕಾಳಜಿ. ಆ ಮೂಲಕ ಸಮಾಜದಲ್ಲಿ ಅಗತ್ಯವುಳ್ಳವರಿಗೆ ನೆರವು ನೀಡಲು ಸಾಧ್ಯವಿದೆ. ಟ್ರಸ್ಟ್ ಮೂಲಕ ಆರಂಭವಾದಗಲಿಂದ ಹಲವಾರು ಮಂದಿಗೆ ನೆರವು ನೀಡಲಾಗಿದೆ ಎಂದರು. ಈ ಸಂದರ್ಭ ಸುವರ್ಣ ವಾಹಿನಿ 2025ರ ಸ್ಟೇಟ್ ಹೆಲ್ತ್ಕೇರ್ ಎಕ್ಸಲೆನ್ಸ್ ಅವಾರ್ಡ್ ಪುರಸ್ಕೃತ ಡಾ. ಪ್ರಭಾಕರ ಹೆಚ್., ಮಾಹೆ ಮಣಿಪಾಲದ ಸಹ ಉಪಕುಲಪತಿ ಡಾ. ಕರುಣಾಕರ ಎ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ, ಚೇತನಾ ಶಾಲೆಯ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನೆ, ಶಾಲಾ ಸರಕಾರ ಹಾಗೂ ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾರ್ಯದರ್ಶಿ ಮುರಳಿ ಕಡೆಕಾರ್ ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿ ಈ ಪಂಚ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಿದರು. ಆಡಳಿತ ಮಂಡಳಿ, ಉಪಾಧ್ಯಕ್ಷ ಎ. ಜಗದೀಶ್ ಕಾರಂತ್ ಅವರು ಶಾಲಾ ಸಂಸ್ಥಾಪನ ದಿನದ ಕುರಿತು ಮಾತನಾಡಿದರು. ಫಾರ್ಚುನ್ ಕಾಲೇಜ್ ಚೇರ್ಮನ್ ತಾರಾನಾಥ ಶೆಟ್ಟಿ ವಿದ್ಯಾರ್ಥಿ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ರಾಜರಾಮ್ ಭಟ್ ಕೊಡಮಾಡಿದ ಐಡಿ ಕಾರ್ಡ್ಗಳನ್ನು ವಿದ್ಯಾರ್ಥಿಗಳಿಗೆ…
