ಕುಂದಾಪ್ರ ಡಾಟ್ ಕಾಂ ವರದಿ | ಸುತ್ತಲೂ ಗಿಡಮರಗಳಿಂದ ಕಂಗೊಳಿಸುವ ಪ್ರಶಾಂತ ಪರಿಸರದ ನಡುವೆ ಪ್ರಾಚೀನ ಮಾದರಿಯ ಶಿಕ್ಷಣ ಪದ್ದತಿಯನ್ನು ನೆನಪಿಸುವ ಸುಂದರ ವಾತಾವರಣ. ಇದರ ನಡುವೆ ಆಧುನಿಕ ಶಿಕ್ಷಣದ ಎಲ್ಲಾ ಆಯಾಮಗಳನ್ನು ಒಳಗೊಂಡು ರಾಷ್ಟ್ರ ಮಟ್ಟದಲ್ಲಿ ಗುರುತಿಸಬಹುದಾದ ಉತ್ಕೃಷ್ಟ ಶೈಕ್ಷಣಿಕ ಸಂಸ್ಥೆಯಾಗಿ ಖ್ಯಾತಿವೆತ್ತಿರುವ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು. ಕ್ಯಾಂಪಸ್‌ನ ಹೊರನೋಟದಲ್ಲೇ ಒಂದು ಸಾತ್ವಿಕ ಶೈಕ್ಷಣಿಕ ವಾತಾವರಣ ಮನಸ್ಸಿನ ಒಡಮೂಡುತ್ತದೆ. ನೋಟಕ್ಕೆ ನಿಲುಕಿದಂತೆ ಎಲ್ಲವೂ ಅಚ್ಚುಕಟ್ಟಾಗಿ ಅನುಷ್ಠಾನಗೊಂಡಿದೆ. ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿರುವ ಪ್ರತಿಷ್ಠಿತ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಗುರುಕುಲ ಪಿಯು ಕಾಲೇಜು ತನ್ನದೇ ಆದ ಹತ್ತಾರು ವೈಶಿಷ್ಟ್ಯತೆಗಳಿಂದ ಇಂದು ಮನೆಮಾತಾಗಿದೆ. ಶಿಕ್ಷಣವೂ ಅರಿವು, ಉದ್ಯೋಗವನ್ನು ನೀಡುವುದರ ಜೊತೆಗೆ ಅದು ಪ್ರತಿ ವಿದ್ಯಾರ್ಥಿಯನ್ನು ಒಬ್ಬ ಸಜ್ಜನ ನಾಗರಿಕನನ್ನಾಗಿಸಬೇಕು ಎಂಬ ಮಾತಿಗೆ ಕಟಿಬದ್ಧರಾಗಿ, ವಿಶ್ವಾಸವೇ ನಮ್ಮ ಯಶಸ್ಸೆಂಬ ಧ್ಯೇಯವಾಕ್ಯದೊಂದಿಗೆ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಮೂಲಕ ಆರಂಭಗೊಂಡ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯ ಬೆಳಕು ಚಲ್ಲಿ ಆಂತರ್ಯದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಮಕ್ಕಳನ್ನು ಸಂಸ್ಕಾರವಂತರಾಗಿ ಬೆಳೆಸಬೇಕಾದ ಹೊಣೆ ಮಾತೆಯರಿಗೆ ಸೇರಿದೆ. ಅವರು ಆ ಕೆಲಸಕ್ಕೆ ಮುಂದಾದರೆ ಮಾತ್ರ ದೇಶ ಸುಸಂಸ್ಕೃತ ಪ್ರಜೆಗಳನ್ನು ಹೊಂದಲು ಸಾಧ್ಯ ಎಂದು ಯಳಜಿತ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕ ವೈ. ಮಂಗೇಶ ಶೆಣೈ ಹೇಳಿದರು. ಖಂಬದಕೋಣೆ ಮಾಣಿಕ್ಯನಾಗ ಸನ್ನಿಧಿಯ ೧೪ನೆ ವಾರ್ಷಿಕೋತ್ಸವದ ನಿಮಿತ್ತ ನಡೆದ ’ಅರಿಸಿನ ಕುಂಕುಮ’ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಭಾರತೀಯ ಪರಂಪರೆಯಲ್ಲಿ ಎಲ್ಲ ಮಹಿಳೆಯರಿಗೆ ಎಲ್ಲ ಕಾಲದಲ್ಲಿ ಧಾರ್ಮಿಕ ವಿಧಿಗಳಲ್ಲಿ ಭಾಗವಹಿಸುವ ಅವಕಾಶವಿತ್ತು. ಅದಕ್ಕೆ ಹಲವು ನಿದರ್ಶನಗಳು ದೊರೆಯುತ್ತವೆ. ಆದರೆ ಯಾವುದೋ ಒಂದು ಹಂತದಲ್ಲಿ ನಿರ್ಧಿಷ್ಟ ಸಂದರ್ಭಗಳಲ್ಲಿ ಅವರನ್ನು ದೂರ ಇಡುವ ಪದ್ಧತಿ ಆರಂಭವಾಯಿತು. ಅದಕ್ಕೆ ಅಂತ್ಯ ಕಾಣಿಸಬೇಕಾದ ಕಾಲ ಬಂದಿದೆ ಎಂದು ಅವರು ನುಡಿದರು. ಕುಂದಾಪುರದ ಮೂಕಾಂಬಿಕಾ ಮಹಿಳಾ ಮಂಡಳಿ ಒಕ್ಕೂಟದ ಕಾರ್ಯದರ್ಶಿ ಜಯಂತಿ ಎನ್. ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಮರವಂತೆ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಐ. ವಸಂತಕುಮಾರಿ, ಕೊಲ್ಲೂರು ಡಾಟ್‌ಕಾಂನ ಸಂಯೋಜಕಿ ಪ್ರಿಯದರ್ಶಿನಿ…
ಕುಂದಾಪುರ ಕೋಣಿಯಲ್ಲಿ ಕರ್ಣಾಟಕ ಬ್ಯಾಂಕಿನ 728ನೇ ಶಾಖೆ ಹಾಗೂ ಎಟಿಎಂ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾಂಕುಗಳು ಹಣದ ವಹಿವಾಟು ನಡೆಸಲಷ್ಟೇ ಸೀಮಿತವಾಗರದೇ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯವಾದ ಸಲಹೆ, ಸಹಕಾರ, ಮಾರ್ಗದರ್ಶವನ್ನು ನೀಡುವ ಸಂಸ್ಥೆಗಳಾಗಿ ರೂಪುಗೊಳ್ಳುತ್ತಿದೆ. ಆರ್ಥಿಕ ಚಟುವಟಿಕೆಯನ್ನು ನಡೆಸುವ ಮೂಲಕ ಸಮಾಜದ ವಿವಿಧ ರಂಗಗಳಲ್ಲಿ ಅಗತ್ಯವಾದ ಸಹಕಾರ ಬ್ಯಾಂಕಿಂಗ್ ಕ್ಷೇತ್ರದಿಂದ ದೊರೆಯುತ್ತಿದೆ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಕುಂದಾಪುರ ತಾಲೂಕಿನ ಕೋಣಿಯಲ್ಲಿ ಕರ್ಣಾಟಕ ಬ್ಯಾಂಕಿನ ವಿತ್ತೀಯ ಶಾಖೆ ಹಾಗೂ ಎಟಿಎಂ ಉದ್ಘಾಟಿಸಿ ಮಾತನಾಡಿದರು. ಬ್ಯಾಂಕುಗಳಿಂದ ಸಾಲ ಪಡೆದ ಉದ್ದೇಶಕ್ಕಾಗಿ ಹಣವನ್ನು ವಿನಿಯೋಗಿಸದಿದರೇ ಅದರ ಮುರುಪಾವತಿಯ ಕಷ್ಟವೆನಿಸುತ್ತದೆ. ಮರುಪಾವತಿ ಮಾಡದಿದರೇ ಬಡ್ಡಿಯ ಮೇಲೆ ಬಡ್ಡಿ ಬೇಳೆಯುತ್ತದೆ. ಅದರ ಬದಲು ಬ್ಯಾಂಕಿನಿಂದ ಸಲಹೆ ಪಡೆದರೇ ಸಾಲ ಮಾಡಿದವನೂ ಹೊರೆಯಾಗದಂತೆ ಮರುಪಾವತಿ ಮಾಡಬಹುದಾಗಿದೆ. ತಂತ್ರಜ್ಞಾನ ಯುಗದಲ್ಲಿ ಹೊಸ ಸವಲತ್ತುಗಳನ್ನು ನೀಡುತ್ತಾ ಗ್ರಾಹಕರಿಗೆ ನೀಡುತ್ತಿರುವ ಬ್ಯಾಂಕುಗಳು ಕಾರ್ಯ ಸ್ವಾಗತಾರ್ಹ ಎಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಸಾಲಿಗ್ರಾಮ: ಪೇಟೆಯ ಪಟ್ಟಣ ಪಂಚಾಯಿತಿ ಮೀನು ಮಾರುಕಟ್ಟೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ೬೬ರ ಪೂರ್ವಕ್ಕಿರುವ ತೆರೆದ ಬಾವಿಯೊಂದರಲ್ಲಿ ಮಧ್ಯ ವಯಸ್ಸಿನ ವ್ಯಕ್ತಿಯ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವದ ಗುರುತು ಈವರೆಗೆ ಪತ್ತೆಯಾಗದ ಕಾರಣ ಮೃತ ಯಾರಿರಬಹುದು ಎಂಬ ಕುತೂಹಲ ಸಾರ್ವಜನಿಕರನ್ನು ಕಾಡುತ್ತಿದೆ. ಬೆಳಿಗ್ಗೆ ಸಾಲಿಗ್ರಾಮ ಮೀನು ಮಾರುಕಟ್ಟೆಯ ರಾಷ್ಟ್ರೀಯ ಹೆದ್ದಾರಿಯ ಪೂರ್ವ ಭಾಗದ ಟೈರ್ ರಿಸೋಲ್ ಅಂಗಡಿಯ ಬಳಿ ಬಂದಿದ್ದ ವ್ಯಕ್ತಿಯೋರ್ವರು ನೀರು ನೋಡು ಬಾವಿಗೆ ಇಣುಕಿದಾಗ ಗಂಡಸಿನ ಶವವೊಂದು ಮಕಾಡೆ ಮಲಗಿರುವುದನ್ನು ನೋಡಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ತಕ್ಷಣ ಸ್ಥಳಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ ಅಮೀನ್, ಅಚ್ಯುತ ಪೂಜಾರಿ ಮೊದಲಾದವರು ಆಗಮಿಸಿ ಕೋಟ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದರು. ಸರಿಯಾದ ಆವರಣವಿಲ್ಲದೇ ನೀರು ತುಂಬುವ ಸಂಪಿನಂತೆ ಕಾಣುವ ಬಾವಿಯೊಳಗೆ ಇಳಿಯಲು ಅನುಭವಿಗಳು ಬಂದ ಬಳಿಕ ಕೋಟ ಪೊಲೀಸ್ ಠಾಣಾಧಿಕಾರಿ ಕಬ್ಬಾಳ್‌ರಾಜ್ ಸಮ್ಮುಖದಲ್ಲಿ ಹಗ್ಗ ಹಾಕಿ ಶವವನ್ನು ಮೇಲೆ ತೆಗೆಯಲಾಗಿದೆ. /ಕುಂದಾಪ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಅತಿ ನಂಬಿಕಸ್ಥರು ಎಂದೆನಿಸಿಕೊಂಡಿರುವ ಮೀನುಗಾರಿಕೆ ನಡೆಸುತ್ತಿರುವ ಸಮುದಾಯವು ಇತರ ಸಮುದಾಯಗಳಿಗಿಂತ ಆರ್ಥಿಕವಾಗಿ ಹಿಂದುಳಿದಿದ್ದು, ಸರಕಾರ ಸವಲತ್ತುಗಳನ್ನು ಈ ಸಮುದಾಯಗಳಿಗೆ ಒದಗಿಸುವ ಸಲುವಾಗಿ ಈ ಸಮುದಾಯವನ್ನು ಪಂಗಡಕ್ಕೆ ಸೇರಿಸುವ ಬಗ್ಗೆ ಸರಕಾರಕ್ಕೆ ಶಿಪಾರಸ್ಸು ಮಾಡಲಾಗಿದೆ ಎಂದು ರಾಜ್ಯ ಬಂದರು ಮತ್ತು ಜವಳಿ ಖಾತೆ ಸಚಿವ ಬಾಬೂರಾವ್ ಚಿಂಚನಸೂರ್ ಹೇಳಿದರು. ಉಪ್ಪುಂದ-ಅಂಬಾಗಿಲು ಗ್ರಾಮ ಪಂಚಾಯತ್ ಮೈದಾನದಲ್ಲಿ ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ನಾಡದೋಣಿ ಭವನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೀನುಗಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಕಳೆದ 40 ವರ್ಷಗಳಿಂದ ಸತತ ಹೋರಾಟ ಮಾಡುತ್ತಿದ್ದೇನೆ. ಮೀನುಗಾರಿಕೆಯನ್ನು ನೆಚ್ಚಿಕೊಂಡಿರುವ ಖಾರ್ವಿ, ಗಂಗಾಪುತ್ರರು ಮೊದಲಾದ ಸಮಾಜದ ಕೆಳಮಟ್ಟದಲ್ಲಿರುವ ಜನಾಂಗದವರನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆನ್ನುವ ನೆಲೆಯಲ್ಲಿ ಈಗಾಗಲೇ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು. ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ರಾಜ್ಯ ಸಚಿವ ಅಭಯ್‌ಚಂದ್ರ ಜೈನ್ ನಾಡದೋಣಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಯೊಬ್ಬ ಮನುಷ್ಯರಲ್ಲಿ ಎರಡು ರೀತಿಯ ವ್ಯಕ್ತಿತ್ವವಿರುತ್ತದೆ. ಕೆಲವರು ನೋಡಲು ಸುಂದರವಾಗಿ ಕಂಡರು ಮನಸ್ಸು ಕುಟಿಲತೆಯಿಂದ ತುಂಬಿರುತ್ತದೆ. ಒಳ್ಳೆಯ ಮನಸ್ಸು ಉಳ್ಳವರು ಕೆಲವೊಮ್ಮೆ ನೋಡಲು ಸುಂದರವಾಗಿರುವುದಿಲ್ಲಾ. ಒಳ್ಳೆತನ ಹಾಗೂ ಬಾಹ್ಯ ಸೌಂದರ್ಯ ಎರಡು ಗುಣಗಳಿರುವ ಕೆಲವೇ ಮನುಷ್ಯರಲ್ಲಿ ಸುರೇಶ ಡಿ ಪಡುಕೋಣೆ ಓರ್ವರು. ಯಾರಿಗೂ ನೋಯಿಸದ ಮುಗ್ದ ಮನಸ್ಸಿನವರು. ಎಲ್ಲರಿಗೂ ಒಳಿತನ್ನು ಬಯಸುವ, ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿರುವ ಮಹಾನ್ ವ್ಯಕ್ತಿ ಎಂದು ಉದ್ಯಮಿ ದತ್ತಾನಂದ ಗಂಗೊಳ್ಳಿ ಹೇಳಿದರು ಅವರು ಕುಂದಾಪುರ ಹಂಗಳೂರಿನ ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನದ ೧೨ ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಸದಸದ್ಯರಾದ ಲಕ್ಷ್ಮೀ ಎಂ.ಬಿಲ್ಲವ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ರಾಜು ದೇವಾಡಿಗ, ಸೇವಾಕರ್ತರಾದ ಸುರೇಶ ಡಿ ಪಡುಕೋಣೆ ದಂಪತಿಗಳು ಹಾಗೂ ಹಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಲಜ ಆರ್ ಚಂದನ್, ಮುಂಬೈನ ಉದ್ಯಮಿ ನಾಗರಾಜ ಪಡುಕೋಣೆ,…
ಶ್ರೀ ರಾಮ ಗೃಹ ನಿರ್ಮಾಣ ಯೋಜನೆಯಡಿಯಲ್ಲಿ ರಾಮಕ್ಷತ್ರಿಯ ಸಮಾಜದ ಕಡು ಬಡವರಿಗೆ ಮನೆ ನಿರ್ಮಾಣ ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಒಂದು ಸಮಾಜ ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಬೇಕಾದರೆ ಆ ಸಮಾಜದ ಧಾರ್ಮಿಕ ಬೇರುಗಳು ಗಟ್ಟಿಯಾಗಿರಬೇಕು. ಧಾರ್ಮಿಕ, ಸೇವಾರಂಗದಲ್ಲಿ ಮುಂಚೂಣಿಯಲ್ಲಿರುವವರು ಸಾಮಾಜಿಕವಾಗಿಯೂ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಬದುಕಿನಲ್ಲಿ ಯಶಸ್ಸು ಸಾಧಿಸಿದ್ದಾರೆ ಎಂದು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಹೇಳಿದರು. ಅವರು ಬೈಂದೂರು ಗ್ರಾಮದ ಬಾಡಾದಲ್ಲಿ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಿ. ಇದರ ಶ್ರೀ ರಾಮ ಗೃಹ ನಿರ್ಮಾಣ ಯೋಜನೆಯಡಿಯಲ್ಲಿ ನಿರ್ಮಿಸಲಾದ ಗೃಹವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು. ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಳದಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಮೂಲಕ ನಿರಂತರವಾಗಿ ರಾಮಕ್ಷತ್ರಿಯ ಸಮಾಜದ ಕಡು ಬಡವರಿಗೆ ನೆರವಾಗುತ್ತಿರುವ ಸಾರ್ಥಕತೆ ಇದೆ. ಈವರೆಗೆ ಟ್ರಸ್ಟ್‌ನಿಂದ 4 ಮನೆಗಳು ನಿರ್ಮಿಸಲಾಗಿದ್ದು, ಮಾಸಿಕ ವಿಧವಾ ವೇತನ, ಬಡ ವೈದ್ಯಕೀಯ ಇಂಜಿನಿಯರಿಂಗ್ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿಧ್ಯಾರ್ಥಿ ವೇತನಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೆಮ್ಮಾಡಿಯ ಪುರಾಣೇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನಾರಾಯಣ ದೇವಳದ ವಾರ್ಷಿಕ ಬ್ರಹ್ಮರಥೋತ್ಸವದ ಅಂಗವಾಗಿ ಸ್ಥಳೀಯ ಎಸ್. ಆರ್. ಡೆಕೋರೇಟರ‍್ಸ್ ಸಂಸ್ಥೆ ಆಶ್ರಯದಲ್ಲಿ ಇಲ್ಲಿನ ಶಾಲಾ ಮೈದಾನದಲ್ಲಿ ಜರಗಿದ ಸಂಗೀತ ರಸಸಂಜೆ ಮತ್ತು ನೃತ್ಯ ಕಾರ್ಯಕ್ರಮ ಜನಮನ ರಂಜಿಸಿತು. ನವೀನ್‌ಚಂದ್ರ ಕೊಪ್ಪ ನೇತೃತ್ವದ ಮಂಗಳೂರಿನ ಶಿವಾನಿ ಮ್ಯೂಸಿಕಲ್‌ನ ಕಲಾವಿದರು ನಡೆಸಿಕೊಟ್ಟ ಕಾರ್ಯಕ್ರಮವು ನೆರೆದ ಸಾವಿರಾರು ಜನರಿಗೆ ಸಾಂಸ್ಕೃತಿಕ ರಸದೌತಣ ನೀಡಿತು. ಉದ್ಯಮ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಪ್ರಸಿದ್ಧವಾದ ಎಸ್. ಆರ್. ಡೆಕೋರೇಟರ‍್ಸ್ ಸಂಸ್ಥೆ ಆಶ್ರಯದಲ್ಲಿ ನಡೆದ ೩ನೇ ವರ್ಷದ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮದ ಅಂಗವಾಗಿ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಹರೀಶ್ ಭಂಡಾರಿ ಅವರು ಮಾತನಾಡಿ, ಶ್ರೀ ಲಕ್ಷ್ಮೀನಾರಾಯಣ ದೇವರ ಬ್ರಹ್ಮರಥೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಸಾಂಸ್ಕೃತಿಕ ಮನರಂಜನೆ ಒದಗಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಇದು ಕೇವಲ ಮನರಂಜನೆ ನೀಡುವ ಕಾರ್ಯಕ್ರಮವಷ್ಟೇ ಅಲ್ಲದೇ ಊರ ಹಬ್ಬದ ನೆನಪಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾರ್ಯತತ್ಪರತೆ, ಕರ್ಮನಿಷ್ಠೆಯು ಭಗವಂತನಿಗೆ ಪ್ರಿಯವಾಗುತ್ತದೆ. ಕೇವಲ ಜೀವಿಸಿದ ಮಾತ್ರಕ್ಕೆ ಶ್ರೇಷ್ಠತ್ವ ಪ್ರಾಪ್ತಿಯಾಗುವುದಿಲ್ಲ. ಸಾಧನೆಯಿಂದ ಮಾತ್ರ ಬ್ರಹ್ಮತ್ವ ಸಿದ್ಧಿ ಸಾಧ್ಯ ಎಂದು ವಿದ್ಯಾವಾಚಸ್ಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದರು ನುಡಿದರು. ಹರ್ಕೂರು ಗ್ರಾಮದ ನಾರ್ಕಳಿ ಬ್ರಾಹ್ಮಣರಬೆಟ್ಟುವಿನ ನವನಿರ್ಮಿತ ಕಾರಣಿಕ ಕ್ಷೇತ್ರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ಮಹಿಷಮರ್ದಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ ಬ್ರಹ್ಮಕುಂಭಾಭಿಷೇಕ ಅಂಗವಾಗಿ ಶನಿವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಕುಂಕುಮ ಧಾರಣೆಯು ದೇವಿ ಸಾನ್ನಿಧ್ಯದ ಪ್ರತೀಕವಾಗಿದೆ. ಸ್ತ್ರೀ ಜಾಗೃತಿಯಿಂದ ಭಾರತೀಯ ಸಂಸ್ಕೃತಿ ಉಳಿದಿದೆ. ದೇವರ ಹೆಸರಿನಲ್ಲಿ ಕಟ್ಟಿದ ಸಂಘಟನೆ ಬಲಿಷ್ಠವಾಗಿ ಉಳಿಯುತ್ತದೆ. ದೇಶ, ಧರ್ಮಕ್ಕಾಗಿ ಯುವಕರು ಒಂದಾಗಿ ಕೆಲಸ ಮಾಡಿದಾಗ ದೇಶ ಸುಭದ್ರವಾಗಬಲ್ಲುದು ಎಂದರು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಜಾಗೃತಿಯಿಂದ ಹಿಂದುತ್ವದ ರಕ್ಷಣೆ ಸಾಧ್ಯ ಎಂದರು. ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಲಯಾಳಂ ಮನೋರಮ ಸಂಸ್ಥೆಯ ಪತ್ರಿಕಾ ವಿತರಕರ ಸಮಾವೇಶವನ್ನು ಕುಂದಾಪುರದ ಎಜೆಂಟರಾದ ಶಂಕರ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಲಯಾಳಂ ಮನೋರಮ ಪತ್ರಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.
