Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆಗೆ ವಿಶ್ವದಲ್ಲೇ ವಿಶಿಷ್ಟ ಸ್ಥಾನಮಾನವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಾವು ಮೈಮರೆತಿರುವುದರಿಂದ ಬಲಿಷ್ಠ ಹಿಂದು ಸಮಾಜದ ಮೇಲೆ ವ್ಯವಸ್ಥಿತ ರೀತಿಯಲ್ಲಿ ಷಡ್ಯಂತ್ರಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಮತಾಂತರ ಮೊದಲಾದವುಗಳು ನಿರಂತರವಾಗಿ ನಮ್ಮ ಸಮಾಜದ ಬುಡಕ್ಕೆ ಕೈಹಾಕಿದೆ. ಸಮಸ್ತ ಹಿಂದುಗಳು ಜಾಗೃತರಾದರೆ ಮಾತ್ರ ಇಂತಹ ಸವಾಲುಗಳಿಗೆ ಉತ್ತರ ನೀಡಲು ಸಾಧ್ಯವಿದೆ. ಹಿಂದು ಸಮಾಜದ ಮೇಲೆ ಆಕ್ರಮಣಗಳು ನಡೆದಾಗ ಸಮಸ್ತ ಹಿಂದು ಸಮಾಜ ಜಾತಿ ಮತ ಬೇಧವಿಲ್ಲದೆ ಎಚ್ಚೆತ್ತುಕೊಳ್ಳಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ಕೇಂದ್ರ ಕಾರ್ಯಕಾರಿಣಿ ಚೈತ್ರಾ ಕುಂದಾಪುರ ಹೇಳಿದರು. ಅವರು ಪರಶುರಾಮ ಘಟಕ ಮಲ್ಯರಬೆಟ್ಟು ಗಂಗೊಳ್ಳಿ ಇವರ ಆಶ್ರಯದಲ್ಲಿ ಮಲ್ಯರಬೆಟ್ಟು ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಭಾರತ ಮಾತಾ ಪೂಜನ ಮತ್ತು ರಾಷ್ಟ್ರ ಚಿಂತನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಭಾರತ ಮಾತೆಯ ಸೇವೆಗೆ, ದೇಶದ ರಕ್ಷಣೆಗೆ ಸಿದ್ಧರಾಗಿರುವ ಯುವ ಜನರು ಪ್ರೋತ್ಸಾಹಿಸುವ ಕೆಲಸ ನಡೆಯಬೇಕು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಿರೂರು: ಮಾದರಿ ಗ್ರಾಮವಾಗಿ ರೂಪುಗೊಳ್ಳುತ್ತಿರುವ ಶಿರೂರಿಗೆ ಸುಸಜ್ಜಿತ ಮೀನು ಮಾರುಕಟ್ಟೆ ರಾಜ್ಯ ಸರಕಾರದ ಮಹತ್ವದ ಕೊಡುಗೆ. ಮಾದರಿ ಗ್ರಾಮ ಯೋಜನೆಯನ್ವಯ ಶಿರೂರು ಸಮಗ್ರ ಅಭಿವೃದ್ಧಿ ಸಾಧಿಸಲಿದೆ. ಅಳ್ವೆಗದ್ದೆ ಮೀನುಗಾರಿಕಾ ಬಂದರಿನ ಮೊದಲ ಹಂತದ ಕಾಮಗಾರಿ ಮುಗಿದ ತಕ್ಷಣ ಎರಡನೆ ಹಂತವನ್ನು ಕೈಗೆತ್ತಿಕೊಳ್ಳಲಾಗುವುದು. ಎಲ್ಲ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಆಸ್ಪತ್ರೆ ನಿರ‍್ಮಾಣ ಶೀಘ್ರ ಆಗಲಿವೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಶಿರೂರಿನ ಮಾರುಕಟ್ಟೆ ಪ್ರದೇಶದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ 90 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸುಸಜ್ಜಿತ ಮೀನು ಮಾರುಕಟ್ಟೆ ಸಂಕೀರ್ಣಕ್ಕೆ ಮಂಗಳವಾರ ಅವರು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ಶಿರೂರು ಗ್ರಾಪಂ ಅಧ್ಯಕ್ಷೆ ಜಿ.ಯು. ದಿಲ್‌ಶಾದ್ ಬೇಗಂ ಅಧ್ಯಕ್ಷತೆವಹಿಸಿದ್ದರು. ಶಿರೂರಿಗೆ ಹೈ-ಟೆಕ್ ಮಾರ್ಕೇಟ್ ನಿರ್ಮಾಕ್ಕೆ ರೂ. ೯೦ ಲಕ್ಷ ಅನುದಾನ ನೀಡಿದ ನೀಡಿದ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವರಿಗೆ ಂಚಾಯತ್ ವತಿಯಿಂದ ಪೌರಸನ್ಮಾನ ನೀಡಲಾಯಿತು. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪ್ರ ಭಾಷಿ ಉಳ್ಸಕ್ ಬೆಳ್ಸಕ್ ಅಂದೇಳಿ ಮಾಡದ್ ಪ್ರಯತ್ನು ಖುಷಿ ಕೊಟ್ಟಿತ್. ಚಿತ್ರ ಹೌಸ್‌ಪುಲ್ ಪ್ರದರ್ಶನು ಕಾಣ್ತ್‌ಇತ್. ಜನ್ರ್ ಭಾಷಾಭಿಮಾನಕ್ಕೆ ತಲಿಬಾಗ್ತೆ. ದುಡ್ಡ್ ಮಾಡುಕ್ ಚಿತ್ರು ಮಾಡ್ಲ. ಚಟಕ್ಕಾಯಿ ಮಾಡದ್ ಚಿತ್ರಕ್ಕೆ ಜನ್ರ್ ಕೊಟ್ಟ್ ಬೆಂಬ್ಲು ಮಾತ್ರ ಬಾರಿ ದೊಡ್ಡದ್. ನಮ್ದೇನಾರೂ ತಪ್ಪ್ ಇದ್ರೇ ಹೇಳಿ ತಿದ್ದಕಂತು. ಆರೆ ದುಯ್ವಿಟ್ ಕಾಲ್ ಎಳಿಬೇಡಿ. ಕುಂದಾಪುರದ ಶರೋನ್ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ಸಂಗೀತ ನಿರ್ದೇಶಕ, ಬಿಲಿಂಡರ್ ಚಿತ್ರದ ನಿರ್ದೇಶಕ ರವಿ ಬಸ್ರೂರ್ ಭಾವುಕರಾಗಿ ಆಡಿದ ಮಾತುಗಳಿವು. ಎ.22ರಂದು ಕುಂದಾಪುರದ ವಿನಾಯಕ ಹಾಗೂ ಉಡುಪಿ ಕಲ್ಪನಾ ಚಿತ್ರಮಂದಿರಗಳಲ್ಲಿ ತೆರೆಕಂಡ ಕುಂದಾಪುರ ಕನ್ನಡದ ಸಿನೆಮಾ ’ಬಿಲಿಂಡರ್’ಗೆ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಅಭಿನಂದಿಸಿದ ಅವರು, ನಮ್ಮ ಹೊಸ ಪ್ರಯತ್ನಗಳನ್ನು ಮೆಚ್ಚಿ ಸಿನೆಮಾ ಮಂದಿರಗಳಿಗೆ ಬರುತ್ತಿರುವುದು ಸಂತೋಷ ನೀಡುತ್ತಿದೆ. ಥಿಯೇಟರ್‌ಗಳಿಗೆ ಪ್ರೇಕ್ಷಕರು ಬರುವುದಿಲ್ಲ ಎನ್ನುವ ಅಪವಾದದ ನಡುವೆ ನಮ್ಮ ಚಿತ್ರ ಹೌಸ್‌ಪುಲ್ ಪ್ರದರ್ಶನ ಕಾಣುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗೋ ಸಂತತಿ ರಕ್ಷಣೆಯಿಂದ ದೇಶದಲ್ಲಿ ಸುಭಿಕ್ಷೆ ಉಂಟಾಗಿ ಸಮೃದ್ಧಿ ನೆಲೆಸುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಯಲು ಗೋವುಗಳು ಸಹಕಾರಿಯಾಗಲಿದ್ದು, ರೈತರ ಬಂಜರು ಭೂಮಿಯನ್ನು ಹಸನಾಗಿಸಲು ಗೋವುಗಳು ಅತ್ಯವಶ್ಯಕ. ಗೋವಿನ ಉತ್ಪನ್ನಗಳು ಮನುಷ್ಯನ ಆರೋಗ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ವಾರಣಾಸಿಯ ಪ್ರಸಿದ್ಧ ಗೋ ಕಥಾ ನಿರೂಪಕ ಫೈಜ್ ಖಾನ್ ಹೇಳಿದರು. ಅವರು ವೀರ ಸಾವರ್ಕರ್ ದೇಶ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಬಸ್ ನಿಲ್ದಾಣದ ವಠಾರದಲ್ಲಿ ಆಯೋಜಿಸಲಾಗಿದ್ದ ಗೋವಿನ ಮಹತ್ವವನ್ನು ಸಾರುವ ’ಅಂಬೆಯ ಕೂಗು’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಗೋವಿಗೆ ಕೊಡುವುದು ಮಾತ್ರ ತಿಳಿದಿದೆಯೇ ವಿನಹ ಪಡೆಯುವುದು ಗೊತ್ತಿಲ್ಲ. ಗೋವಿನ ಗೊಬ್ಬರ ರೈತರ ಭೂಮಿಯನ್ನು ಫಲವತ್ತತೆ ಗೊಳಿಸಿದರೆ, ಗೋಮೂತ್ರವನ್ನು ಔಷಧವನ್ನಾಗಿ ಉಪಯೋಗಿಸುತ್ತಿದ್ದಾರೆ. ಪಂಚಗವ್ಯವನ್ನು ಹಿಂದು ಸಂಸ್ಕೃತಿಯ ಶುಭ ಕಾರ್ಯಗಳಲ್ಲಿ ಅತಿ ಶ್ರೇಷ್ಠ ಎಂದು ಬಳಸಲಾಗುತ್ತಿದೆ. ಒಂದು ಗೋವಿನಿಂದ ಸುಮಾರು ೩೦೦ ಎಕ್ರೆ ಭೂಮಿಯನ್ನು ಕೃಷಿಗೆ ಪೂರಕವಾಗುವಂತೆ ಪರಿವರ್ತಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಂಚಾಯತ್ ರಾಜ್ ವ್ಯವಸ್ಥೆಗೆ ಈಗ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಹಳ ಒತ್ತು ನೀಡುತ್ತಿವೆ. ಹೆಚ್ಚು ಅಧಿಕಾರ, ಸಂಪನ್ಮೂಲ ಬರುತ್ತಿದೆ. ಅದರೊಂದಿಗೆ ಗ್ರಾಮದ ಜನರೇ ತಮ್ಮ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಳ್ಳಲು ಸಾಧ್ಯವಾಗುವ ’ನಮ್ಮ ಗ್ರಾಮ ನಮ್ಮ ಯೋಜನೆ’ ಚಾಲ್ತಿಗೆ ಬಂದಿದೆ. ಜನ ಪ್ರತಿನಿಧಿಗಳು, ಜನರು ಸೇರಿಕೊಂಡು ಅವುಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಿಸಿದರೆ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ಸಾಕಾರಗೊಳ್ಳುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಜಿ. ಪುತ್ರನ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಪಂಚಾಯತ್, ವಿವಿಧ ಸರಕಾರಿ ಇಲಾಖೆಗಳು ಮತ್ತು ತ್ರಾಸಿ, ಹೊಸಾಡು ಗ್ರಾಮ ಪಂಚಾಯತ್ ಸಂಯುಕ್ತವಾಗಿ ತ್ರಾಸಿಯ ಅಂಬೇಡ್ಕರ್ ಭವನದ ಎದುರು ಆಯೋಜಿಸಿದ್ದ ’ಗ್ರಾಮ ಉದಯ್ ಸೇ ಭಾರತ್ ಉದಯ್ ಅಭಿಯಾನ’ ಹಾಗೂ ’ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಹೊಸಾಡು ಗ್ರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಪ್ಪುಂದ ಜೇಸಿಐ ಘಟಕದ ಸ್ಥಾಪನಾ ದಿನದ ಅಂಗವಾಗಿ ಜೇಸಿ ವತಿಯಿಂದ ಸಾಯಂಕಾಲ ಹಳಗೇರಿಯಲ್ಲಿ ’ಸಿಂಹ ಘರ್ಜನೆ’ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಹೆಚ್ಚು ಯುವಜನರನ್ನು ಹೊಂದಿದ ನಮ್ಮ ದೇಶದಲ್ಲಿ ಸೇವಾ ಮನೋಭಾವನೆಯಿರುವ ಯುವಕರನ್ನು ಜೇಸಿಐನಂತಹ ಸಂಸ್ಥೆಗೆ ಸೇರಿಸಿಕೊಂಡು ಗ್ರಾಮೀಣಾಭಿವೃದ್ಧಿಯತ್ತ ಗಮನ ಹರಿಸಬೇಕು. ಸಂಘ ಸಂಸ್ಥೆಗಳು ಗ್ರಾಮದ ಅಭಿವೃದ್ಧಿಗೆ ಪೂರಕವಾಗಿದ್ದು, ಸೇವೆಯೇ ನಮ್ಮೆಲ್ಲರ ಪ್ರಮುಖ ಅಜೆಂಡವಾಗಬೇಕು ಎಂದರು. ಜೇಸಿಐ ಅಧ್ಯಕ್ಷ ನರಸಿಂಹ ಹಳಗೇರಿ ಅಧ್ಯಕ್ಷತೆವಹಿಸಿ ಸ್ವಾಗತಿಸಿದರು. ಈ ಸಂದರ್ಭ ಕೃಷಿ ಮತ್ತು ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವ್ಯವಹಾರ ಕ್ಷೇತ್ರದ ಸಾಧಕ ಸಹೋದರರಾದ ರಾಮ-ಲಕ್ಷ್ಮಣ ಪೂಜಾರಿ ತೆಂಕಬೆಟ್ಟು, ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರತಿಭೆ ಹಿಬಾ ಶಾಹೀನ್ ಇವರಿಗೆ ಸನ್ಮಾನಿಸಲಾಯಿತು. ಉಪ್ಪುಂದ ಜೇಸಿಐ ಪೂರ್ವಾಧ್ಯಕ್ಷ ಗಿರೀಶ್ ಶ್ಯಾನುಭಾಗ್ ಇವರಿಗೆ ಜೇಸಿ ಸ್ವರ್ಣ ಕಮಲ ಪ್ರಶಸ್ತಿ ಪ್ರದಾನಿಸಲಾಯಿತು. ಜೇಸಿಐ ವಲಯ ೧೫ರ ವಲಯಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಿಕೋದ್ಯಮ ಹಾಗೂ ಸಾಮಾಜಿಕ ರಂಗದ ಸೇವೆಯನ್ನು ಗುರುತಿಸಿ ಕುಂದಾಪುರ ಸುದ್ದಿಮನೆ ವಾರಪತ್ರಿಕೆ ಸಂಪಾದಕ ಸಂತೋಷ ಕೋಣಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಜನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಚಿನ್ನಪ್ಪ ಗೌಡ, ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪುರಸ್ಕೃತ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಶ್ರೀಧರ್ ಹಂದೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಿನಿಯರ್ ಮ್ಯಾನೆಜರ್ ಬಾಬುರಾಯ್ ಶೆಣೈ, ಕುಂದಾಪುರದ ಚಾರ್ಟೆಟ್ ಅಕೌಂಟೆಂಟ್ ಪಿ. ಪ್ರಭಾಕರ ಮಯ್ಯ, ಹಿರಿಯ ಪತ್ರಕರ್ತ ಎಸ್. ಜನಾರ್ಧನ, ಉದ್ಯಮಿ ನಾರಾಯಣ ಮೇಲಾಡ್, ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಕಲಚೇತನರು ದೈಹಿಕ ನ್ಯೂನ್ಯತೆಗೆ ಹಿಂಜರಿಯದೇ, ಮಾನಸಿಕ ಕೀಳರಿಮೆಯನ್ನು ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ವಿಕಲಚೇತನರು ಅವಕಾಶಗಳಿಂದ ವಂಚಿತರಾಗದಂತೆ ಸಮಾಜವೂ ಅವರೊಂದಿಗೆ ಧ್ವನಿಯಾಗಬೇಕು ಎಂದು ಯುವ ಉದ್ಯಮಿ ಕಾರ್ತಿಕೇಯ ಮಧ್ಯಸ್ಥ ಹೇಳಿದರು. [quote font_size=”16″ bgcolor=”#ffffff” bcolor=”#dd3333″ arrow=”yes” align=”right”]*ವಿಕಲಚೇತನರ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವುದು, ವಿಕಲಚೇತನರಿಗಿರುವ ಸರಕಾರಿ ಸೌಲತ್ತುಗಳ ಬಗ್ಗೆ ಮಾಹಿತಿ ನೀಡುವುದು. ಅವರಲ್ಲಿನ ಪ್ರತಿಭೆ ಅನಾವರಣಕ್ಕಾಗಿ ವೇದಿಕೆ ಕಲ್ಪಿಸುವುದು, ವಿಕಲಚೇತನರ ಅಭ್ಯುದಯಕ್ಕಾಗಿ ದುಡಿಯುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗುರುತಿಸುವ ಉದ್ದೇಶದಿಂದ ವಿಕಲಚೇತನರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.  – ಜಿ.ಎಂ ಉದಯಕುಮಾರ್ ಕಾರ್ಯಕ್ರಮ ಸಂಯೋಜಕ[/quote] ಸೋಮವಾರ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಹಮ್ಮಿಕೊಂಡ ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ವಿಕಲಚೇತನರ ಬಗ್ಗೆ ಕರುಣೆ ಇದ್ದರೇ ಸಾಲದು. ಬದಲಾಗಿ ಎಲ್ಲರೂ ಸಮಾನರೂ ಎಂಬ ಭಾವನೆ ತಳೆದು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ…

Read More

ಕುಂದಾಪುರ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಗೊಂಬೆಯಾಟವನ್ನು ರಾಷ್ಟ್ರೀಯ ರಂಗಕಲೆ ಎಂದು ಗುರುತಿಸದೇ ಹೋದರೇ ಅದು ಕೇವಲ ಒಂದು ಪ್ರದೇಶಕ್ಕಷ್ಟೇ ಸೀಮಿತವಾಗಿಬಿಡುವ ಅಪಾಯವಿದೆ. ಕಲೆಯ ಶಕ್ತಿ ಸಾಮರ್ಥ್ಯಗಳನ್ನು ಗ್ರಹಿಸದಿರುವುದರಿಂದ ಈ ರಂಗಪ್ರಕಾರವನ್ನು ಸಮರ್ಥವಾಗಿ ಬೆಳೆಸಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಜನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಅವರು ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು. ಪುರಾತನ ಕಲೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸುಲಭವಲ್ಲ. ಪರಂಪರೆಯ ಗಾಂಭೀರ್ಯ, ಆಧುನಿಕತೆಯ ವಿಸ್ತಾರವನ್ನು ಒಳಗೊಳ್ಳುವ ಅನಿವಾರ್ಯತೆ ಕಲಾಕಾರನ ಮುಂದಿದೆ. ಸಮಾಜದಲ್ಲಿ ಸ್ವಸ್ಥ, ಸುಸಂಸ್ಕೃತ ಮನಸ್ಸುಗಳನ್ನು ಕಟ್ಟುವ ಕೆಲಸವಾದರೇ ಕಲೆಯ ಉದ್ದೇಶ ಸಾರ್ಥಕ್ಯಗೊಳ್ಳುತ್ತದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ವಾರ್ಷಿಕೊತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಿನಿಯರ್ ಮ್ಯಾನೆಜರ್ ಬಾಬುರಾಯ್ ಶೆಣೈ, ಕುಂದಾಪುರದ ಚಾರ್ಟೆಟ್ ಅಕೌಂಟೆಂಟ್ ಪಿ.…

Read More

ಭರತೇಶ ಅಲಸಂಡೆಮಜಲು. | ಕುಂದಾಪ್ರ ಡಾಟ್ ಕಾಂ ಲೇಖನ ವಾರ್ಷಿಕ ಪರೀಕ್ಷೆ ಮುಗಿದು ಫಲಿತಾಂಶ ಏಪ್ರಿಲ್ 10ಕ್ಕೆ ಪ್ರಕಟಗೊಂಡರೆ ನಂತರ ಮುಂಗಾರಿನ ಮಳೆಯ ಮೊದಲ ಸಿಂಚನದವರೆಗೂ ಪರ್ವಕಾಲ ದೊಡ್ಡ ರಜೆ, ಮಲ್ಲ ರಜೆ, ಬೇಸಗೆ ರಜೆ. ಮಾರ್ನೆಮಿ ರಜೆಯಲ್ಲಿ ಗಳಿಸದೇ ಉಳಿಸಿದನ್ನು ದೊಡ್ಡ ರಜೆಯಲ್ಲಿ ಸಾಧಿಸುವ ಪ್ರಯತ್ನ. ಮೊದಲ ನೀರ ಹನಿಗೆ ಚಾತಕಪಕ್ಷಿ ಕಾಯುವಂತೆ, ಬೇಸಗೆ ರಜೆಗಾಗಿ ಕಾದು ಮೊದಲ ಅದ್ಯತೆಯೆಂಬಂತೆ ಅಜ್ಜಿಮನೆಗೆ ದಾಳಿಯಿಡುವುದು. ಹೆಚ್ಚಾಗಿ ಅಜ್ಜಿ ಮನೆಯೆಂದರೆ ಅಮ್ಮನ ಮನೆಯೇ ಆಗಿರುತಿದ್ದದ್ದು ಅಲಿಖಿತ ನಿಯಮದಂತೆ. ದಿನಕ್ಕೊಂದು ಪುಟ ಕಾಪಿ ಬರಿಯಿರಿ ಎಂದು ನಮ್ಮ ಸರಕಾರಿ ಶಾಲಾ ಶಿಕ್ಷಕಿ ಶೇಸಮ್ಮ ಟೀಚರ್ ನ ಅಜ್ಞಾಪಾಲಕರಾಗಿ ನಾನು ರಜೆ ದೊರೆತ ಮೊದಲೆರಡು ದಿನಗಳಲ್ಲೇ ತಮ್ಮನಿಗೆ ಪೈಪೋಟಿ ನೀಡುತ್ತಾ, ಪುಟ ಸಂಖ್ಯೆ ನಮೂದಿಸುತ್ತಾ, 50 – 60 ಪುಟ ಬರೆದು ಅಜ್ಜಿ ಮನೆಗೆ ಹೊರಡಲು ಸಿದ್ಧರಾಗುತಿದ್ದೇವು. ಆಗ ನಮಗೆ ಬೇಕಿರುತ್ತಿದ್ದದ್ದು ತಿಂಡಿ ಮತ್ತು ಆಟ. ಅಪ್ಪ , ಅಮ್ಮನ ಪ್ರೀತಿಯ ಬೈಗುಳಗಳ ಹೊಡೆತ ತಪ್ಪಿಸಿಕೊಂಡು…

Read More