Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹೊರಾಂಗಣ ವೇದಿಕೆಯಲ್ಲಿ ಧ್ವಜಾರೋಹಣ ಪುರಸ್ಸರವಾಗಿ ವಿಜೃಂಭಣೆಯಿಂದ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ದಂತ ವೈದ್ಯರು ಕಾಟಿಪಳ್ಳ ಡಾ. ಅರವಿಂದ ಭಟ್ ಕೆ. ಮತ್ತು ಶ್ರೀ ಎನ್‌ಎಸ್‌ಆರ್ ವಕೀಲರು, ಕುಂದಾಪುರ ಅವರನ್ನು ಶಾಲೆಯ ವಾದ್ಯಮೇಳದೊಂದಿಗೆ ಸ್ವಾಗತಿಸಲಾಯಿತು. ಅತಿಥಿಗಳು ಧ್ವಜಾರೋಹಣಗೈದು ಧ್ವಜವಂದನೆ ಸಲ್ಲಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ದೇಶಭಕ್ತಿಯ ಘೋಷವಾಕ್ಯಗಳನ್ನು ಬೋಧಿಸಿದರು. ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆಗೈದರು. ಡಾ. ಅರವಿಂದ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಾಲೆಯು ಉತ್ತಮ ಶಿಸ್ತನ್ನು ಹೊಂದಿದ್ದು, ಆ ಎಲ್ಲಾ ಶಿಸ್ತನ್ನು ಮಕ್ಕಳು ಜೀವನದಲ್ಲಿ ಸದಾ ಮೈಗೂಡಿಸಿಕೊಳ್ಳಬೇಕು. ದೇಶದ ಮುಂದಿನ ಪ್ರಜೆಗಳು ಇಂದಿನ ವಿದ್ಯಾರ್ಥಿಗಳಾದ ನೀವು. ಈ ಎಲ್ಲಾ ಶಿಸ್ತನ್ನು ಮೈಗೂಡಿಸಿಕೊಂಡರೆ ನಮ್ಮ ದೇಶ ಶಿಸ್ತಿನಲ್ಲೂ, ಸಂಯಮದಲ್ಲೂ ಸಾಧನೆಗೈಯ್ಯುವುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ. ನಾವು ಬೇರೆಲ್ಲ ಹಬ್ಬಗಳನ್ನು ನಮ್ಮ ನಮ್ಮ ಮತ ಧರ್ಮಗಳಂತೆ ಆಚರಿಸಿದರೆ, ಈ ಸಂತೋಷವನ್ನು ಎಲ್ಲರೂ ಸೇರಿ ಆಚರಿಸಿಕೊಳ್ಳುತ್ತಿದ್ದೇವೆ. ಇದುವೇ ರಾಷ್ಟ್ರೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಶ್ರೀ ದುರ್ಗಾಪರಮೇಶ್ವರಿ ಆಟೋ, ಕಾರು, ಗೂಡ್ಸ್ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ಅವರು ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ಈ ಬಾರಿ ಕೂಡ ಮೀನಾಕ್ಷಿ ವಿಜಯಕುಮಾರ್ ಬೆಸ್ಕೂರ್ ಅವರು ರಥಬೀದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ತೋರಿಸಿದರು. ವೇದಿಕೆಯಲ್ಲಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್, ಕಮಲೇಶ್ ಬೆಸ್ಕೂರ್, ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ, ಕಾರ್ಯದರ್ಶಿ ರಾಧಾಕೃಷ್ಣ, ಜೇಸಿ ಪುರುಷೋತ್ತಮ ದಾಸ್, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಗಂಗಾಧರ್ ದೇವಾಡಿಗ, ಅಶೋಕ್ ಪೂಜಾರಿ, ರವೀಂದ್ರ ಪ್ರಭು, ಜಯದುರ್ಗಾ ಕೆಟರರ್ಸ್ ಮಾಲಕರಾದ ಅಶೋಕ್ ಪೂಜಾರಿ, ಹಿರಿಯ ನಾಗರಿಕರಾದ ಪಾಂಡುರಂಗ ಖಾರ್ವಿ, ದುರ್ಗಯ್ಯ ಪೂಜಾರಿ, ಸಂಘದ ಸರ್ವ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಗೌರವಾಧ್ಯಕ್ಷರಾದ ಶೇಖರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರರು ತಮ್ಮ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ತಮ್ಮ ಕೆಲಸ ಕಾರ್ಯಗಳ ಜೊತೆಗೆ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮೀನುಗಾರಿಕೆಗೆ ತೆರಳುವ ಮೀನುಗಾರರ ಸುರಕ್ಷತೆಗೆ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಳೆಗಾಲದಲ್ಲಿ ಸಮುದ್ರ ಪ್ರತಿ ದಿನದಿಂದ ದಿನಕ್ಕೆ ಪ್ರಕ್ಷುಬ್ಧ ಗೊಂಡಿರುವ ಸಮಯದಲ್ಲಿ ಮೀನುಗಾರಿಕೆ ಚಟುವಟಿಕೆ ಗಳಿಗೆ ನಿರ್ಭಧ ಹೇರಿರುತ್ತೇವೆ. ಆದರೆ ಸಂಪ್ರದಾಯಿಕ ನಾಡ ದೋಣಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸುತ್ತಾ ಬಂದಿದೆ. ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ, ಮುಂದೆ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನದಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ. ಈ ಬಾರಿ ಹೊಸತನ ಎಂಬಂತೆ…

Read More

ಕುಂದಾಪ್ರ ಟ್‌ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ ನಾಡೋಜ ಹಂಪನಾ ವಿರಚಿತ ದೇಸೀ ಕಾವ್ಯದ ರಂಗರೂಪ ‘ಚಾರುವಸಂತ’ ನಾಟಕದ ಪ್ರದರ್ಶನವನ್ನು ಆಗಸ್ಟ್ 18 ರಿಂದ 21 ರವರೆಗೆ ನಾಲ್ಕುದಿನ ಸಂಜೆ 6.45 ರಿಂದ ಮೂಡುಬಿದಿರೆಯ ಸ್ಕೌಟ್ಸ್- ಗೈಡ್ಸ್ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಡಾ. ಜೀವನ್ ರಾಂ ಸುಳ್ಯ ನಿರ್ದೇಶಿಸಿದ ಈ ನಾಟಕಕ್ಕೆ ಡಾ. ನಾ.ದಾಮೋದರ ಶೆಟ್ಟಿ ಅವರು ರಂಗರೂಪ ನೀಡಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಯಶಸ್ವೀ 26 ಪ್ರದರ್ಶನಗಳನ್ನು ಕಂಡ ಚಾರುವಸಂತ ನಾಟಕವು ಕನ್ನಡ ರಂಗಭೂಮಿಯಲ್ಲಿ ಬಹುಬೇಡಿಕೆಯ  ದೃಶ್ಯಕಾವ್ಯವಾಗಿದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಸಮಯಕ್ಕೆ ಸರಿಯಾಗಿ ಆರಂಭವಾಗುವ ನಾಟಕಕ್ಕೆ ಪ್ರವೇಶ ಉಚಿತವಾಗಿರುತ್ತದೆ ಎಂದು ಆಳ್ವಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಹೇಳಿದ್ದಾರೆ. 17 ಭಾಷೆಗಳಿಗೆ ಅನುವಾದಗೊಂಡಿರುವ ಹಂಪನಾರ ಮಹಾಕಾವ್ಯ ‘ಚಾರುವಸಂತ’ವು ಆಳ್ವಾಸ್ ನ ಹೆಮ್ಮೆಯ ರಂಗ ಪ್ರಯೋಗ. ದೇಶದ ಪ್ರಾಚೀನ ಕಥಾ ಪರಂಪರೆಯಲ್ಲಿ ಚಾರುದತ್ತನ ಕಥೆಗೆ ವಿಶಿಷ್ಠ ಸ್ಥಾನವಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಪಡುಕರೆ ಸಹಕಾರಿ ಹಾಲು ಉತ್ಪಾದಕರ ಸಂಘದ ಮಹಾಸಭೆ ಗುರುವಾರ ಪಡುಕರೆ ಸದ್ಯೋಜಾತ ಸಭಾಂಗಣದಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನವಾಗಿ ಕೆ.ಎಂ.ಎಫ್ ನಿರ್ದೇಶಕರಾಗಿ ಆಯ್ಕೆಗೊಂಡ ಕೆ. ಶಿವಮೂರ್ತಿ ಉಪಾಧ್ಯಾ ಅವರನ್ನು ಸಂಘದ ವತಿಯಿಂದ ವಿಶೇಷವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ಭಾಸ್ಕರ್ ಶೆಟ್ಟಿ ಈ ಭಾಗದ ಒರ್ವ ನೈಜ ಹೈನುಗಾರ ಹಾಗೂ ಸಂಘಟಕ ಶಕ್ತಿಯನ್ನು ಕೆ.ಎಂ ಎಫ್ ಗೆ ಆಯ್ಕೆಗೊಳಿಸಿ ಈ ಭಾಗದ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ಕಲ್ಪಿಸಲಿದೆ ಎಂದರಲ್ಲದೆ ಹೈನುಗಾರಿಕೆಗೆ ಒಕ್ಕೂಟದಿಂದ ಪ್ರೋತ್ಸಾಹಕ್ಕೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ ನೀಡಿದರು. ಹೈನುಗಾರಿಕೆ ವೃತ್ತಿಯಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂಬುವುದನ್ನು ಇತ್ತೀಚಿಗಿನ ಅಧ್ಯಯನದ ಮೂಲಕ ತಿಳಿದು ಬಂದಿದೆ. ಈ ದಿಸೆಯಲ್ಲಿ ಹೆಚ್ಚು ಹೆಚ್ಚು ಯುವ ಆಸಕ್ತರು ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಿವಮೂರ್ತಿ ಕೆ. ವಹಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರ್ವೋದಯದ ಸತ್ಯಾಗ್ರಹ, ಸ್ವರಾಜ್ಯದ ಪರಿಕಲ್ಪನೆಯ ಭಾರತವನ್ನು ನಾವು ಕಟ್ಟಬೇಕು. ರಾಜಕೀಯ ಚಿಂತನೆಗಳು ಮೂಲಭೂತ ಚಿಂತನೆಗಳಿಗೆ ಒಳಗಾಗಬೇಕು. ಅಂದಿನ ಚಿಂತನೆಗಳನ್ನು ಇಂದು ನೋಡಲು ಸಾಧ್ಯವಿಲ್ಲ ‌. ಆದರೆ ಸರ್ವಧರ್ಮ ಸಮಭಾವ, ಸರ್ವೋದಯದ ಪರಿಕಲ್ಪನೆಯ ರಾಷ್ಟ್ರೀಯತೆ ರೂಪುಗೊಳ್ಳಬೇಕು ಎಂದು ಮಣಿಪಾಲ ಗಾಂಧಿಯನ್ ಸೆಂಟರ್ ಫಾರ್ ಫಿಲೋಸಾಫಿಕಲ್ ಆರ್ಟ್ಸ್ ಮತ್ತು ಸೈನ್ಸ್ ಹೈಯರ್ ಎಜುಕೇಷನ್ ಇದರ ನಿರ್ದೇಶಕರಾದ ವರದೇಶ್ ಹಿರೆಗಂಗೆ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ, ಮತ್ತು ಮಂಗಳೂರು ವಿಶ್ವವಿದ್ಯಾಲಯದ ರಾಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಗುರುವಾರ ನಡೆದ ತೃತೀಯ ಸೆಮಿಸ್ಟರ್ ರಾಜ್ಯ ಶಾಸ್ತ್ರ ಪಠ್ಯಕ್ರಮದ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು‌. ಪಠ್ಯಕ್ರಮದ ನೆಲೆಯಲ್ಲಿ ರಾಜಕೀಯ ಚಿಂತನೆಗಳಲ್ಲಿ ಆಯಾ ಕಾಲಘಟ್ಟದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕೀಯ ಶಾಸ್ತ್ರ ಎನ್ನುವುದು ವಿಶಾಲ ವ್ಯಾಪ್ತಿಯ ಕ್ಷೇತ್ರ. ಜಗತ್ತಿನಾದ್ಯಂತ ಹರಡಿಕೊಂಡ ಪ್ರಾಚೀನ ಜ್ಞಾನ ಶಾಸ್ತ್ರ. ವಿಶ್ವದೆಲ್ಲೆಡೆ ಹಲವು ಮಜಲುಗಳನ್ನು ಕಾಯ್ದುಕೊಂಡಿದೆ. ಹಲವು ಸಿದ್ಧಾಂತಗಳನ್ನು ಒಳಗೊಂಡಿದೆ. ಪ್ರಪಂಚದ ಬೇರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಒತ್ತೆಯಾಗಿಟ್ಟುಕೊಂಡು ಹೋರಾಡಿ ನಿವೃತ್ತಿ ಹೊಂದಿದ ಯೋಧರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಭಾರತೀಯ ಜನತಾ ಪಕ್ಷ ಮಾಡುತ್ತಿದೆ. ಬೈಂದೂರು ಮಂಡಲದ ವ್ಯಾಪ್ತಿಯ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಸೂಚನೆಯಂತೆ ನಿವೃತ್ತ ಯೋಧರನ್ನು ಗೌರವಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ ಹೇಳಿದರು. ಅವರು ಬಿಜೆಪಿ ಬೈಂದೂರು ಮಂಡಲ ವತಿಯಿಂದ ಗಂಗೊಳ್ಳಿಯಲ್ಲಿ ಗುರುವಾರ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಸಂದರ್ಭ ನಿವೃತ್ತ ವಾಯುಸೇನೆಯ ಯೋಧ ಟಿ. ದಿನಕರ ಶೆಣೈ ಅವರನ್ನು ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಂಡಲ ಉಪಾಧ್ಯಕ್ಷರಾದ ಮಿಥುನ್ ಎಂ.ಡಿ.ಬಿಜೂರು, ಮಾಲತಿ ನಾಯಕ್, ನಾಗರತ್ನ, ಖಜಾಂಚಿ ಗಣೇಶ ಗಾಣಿಗ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇಟೆ, ಯುವಮೋರ್ಚಾ ಪ್ರಮುಖ ಜಯಂತ ಶೇರುಗಾರ್, ಜಿಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇವರ ಸಂಯುಕ್ತಾ ಆಶ್ರಯದಲ್ಲಿ ನಡೆದ , ಕುಂದಾಪುರ  ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರ ಕಲ್ಯಾಣಕ್ಕಾಗಿ, ಒಳಿತಿಗಾಗಿ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತದೆ. ಸರಕಾರದ ವಿಮೆ, ಪಿಂಚಣಿ ಯೋಜನೆಯಲ್ಲಿ ನೊಂದಾಯಿಸಿಕೊಂಡು ಜೀವನದ ಭದ್ರತೆ ಕಡೆಗೆ ಗಮನ ನೀಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಂಗೊಳ್ಳಿ ಶಾಖೆ ಆಶ್ರಯದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಸರಕಾರ ಜಾರಿಗೆ ತಂದಿರುವ ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ಉಪಯುಕ್ತವಾಗಿದ್ದು, ಗ್ರಾಹಕರು ಈ ಯೋಜನೆಯಡಿ ನೊಂದಾಯಿಸಿಕೊಳ್ಳಬೇಕು. ಆಪತ್ಕಾಲದಲ್ಲಿ ಇದರ ಪ್ರಯೋಜನ ನಮ್ಮ ಕುಟುಂಬದ ಸದಸ್ಯರಿಗೆ ದೊರೆಯಲಿದೆ ಎಂದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಪಿಡಿಒ ಶೋಭಾ ಮತ್ತು ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರ…

Read More