ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಲಂ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಲು ಸಂಕ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಂಗಡಿ ಗ್ರಾಮದ ಅಯ್ಯಪ್ಪನಜಡ್ಡು ಕಕ್ಕನಪಾಲು, ಮಚ್ಚಟ್ಟು ಗ್ರಾಮದ ಮಡಿವಾಳ ಕಟ್ಟು, ಆಜ್ರಿ ಗ್ರಾಮದ ತಗ್ಗುಂಜೆ, ಕೆರಾಡಿ ಗ್ರಾಮದ ಕುಳ್ಳಂಬಳ್ಳಿ ಹೊಸಳ್ಳಿಕೊಡ್ಲು ಮತ್ತು ವಂಡ್ಸೆ ಗ್ರಾಮದ ಅಬ್ಬಿ ಬಳಿ ಕಾಲುಸಂಕ ನಿರ್ಮಾಣಕ್ಕೆ ಶಾಸಕ ಗಂಟಿಹೊಳೆ ಹಾಗೂ ಡಾ. ಆರ್. ಅರುಣಾಚಲಂ ಚಾರಿಟೇಬಲ್ ಟ್ರಸ್ಟ್ ಇದರ ಪ್ರವರ್ತಕರಾದ ಕ್ಯಾ. ರಮೇಶ್ ಅರುಣಾಚಲಂ ಅವರೊಂದಿಗೆ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಅರುಣಾಚಲಂ ಟ್ರಸ್ಟ್ ಬೈಂದೂರಿಗರ ಕನಸುಗಳನ್ನು ನನಸು ಮಾಡುತ್ತಿದೆ. ನಮ್ಮ ಬದ್ಧತೆ, ನಮ್ಮ ಇಚ್ಛಾಶಕ್ತಿ ಮತ್ತು ದಾನಿಗಳ ಸಹಕಾರದಿಂದ ಬೈಂದೂರಿನಂತಹ ಗ್ರಾಮೀಣ ಭಾಗದಲ್ಲಿ ಕಾಲು ಸಂಕ ನಿರ್ಮಿಸಿ ಸುಲಭ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದೇವೆ. ಗ್ರಾಮಸ್ಥರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಧರ್ಮದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ನಿರ್ಮಾತೃಗಳಾದ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಸಂಸ್ಮರಣೆಯ ಅಂಗವಾಗಿ ಸಂಸ್ಥಾಪಕರ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆರಾಧನೆ ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಬದುಕು ಮತ್ತು ಸಾಧನೆಯ ವಿವಿಧ ಮಜಲುಗಳನ್ನು ಸಂಸ್ಮರಿಸಲಾಯಿತು. ಮುಂಜಾನೆಯ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲ್ಪಟ್ಟವು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಂಗಳೂರಿನ ಖ್ಯಾತ ಸಾಹಿತಿಗಳಾದ ಡಾ. ಗಜಾನನ ಶರ್ಮರು ಮಾತನಾಡಿ, ಅಕ್ಕಿಯಿಂದ ಅನ್ನವನ್ನು ಮೊದಲಾರು ಕಂಡವರು ಎಂಬಂತೆ ಮಾನವನ ಸಾಧನೆಯ ಪ್ರತಿಹೆಜ್ಜೆಯನ್ನು ಬೋಧಿಸಿದವರ್ಯಾರು ಎಂದು ತಿಳಿಯುವ ಗೊಡವೆಗೆ ಜನ ಹೋಗುವುದಿಲ್ಲ. ಆದರೂ ಪೂರ್ವಜರ ಸ್ಮರಣೆ ಮತ್ತು ಇತಿಹಾಸ ಅರಿಯದವನು ಮುಂದಿನ ಹೆಜ್ಜೆಯನ್ನಿಡಲಸಾಧ್ಯ. ಆದ್ದರಿಂದ ಸಂಸ್ಮರಣೆ ಅತ್ಯಗತ್ಯ. ಸಮಾಜದ ಸರ್ವರೂ ವಿದ್ಯೆಯನ್ನು ಅರಿತು ಬಾಳಬೇಕೆಂದು ಶ್ರಮಿಸಿದವರು. ವೇದಮೂರ್ತಿ ರಾಮಚಂದ್ರ ಭಟ್ಟರು, ಎಲ್. ಟಿ. ತಿಮ್ಮಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರಿನ ಮೆಟ್ರೋ ಪ್ರಯಾಣ ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತಿದ ನಮ್ಮ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ. ಕಾಂಗ್ರೆಸ್ ಆಡಳಿತದಲ್ಲಿ ಜನರ ಪರ ಧ್ವನಿ ಎತ್ತಿದರೆ ಜೈಲು ಗ್ಯಾರಂಟಿ. ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್. ಬೇಲೆಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಆಗಿರುವ ಸಿದ್ದರಾಮಯ್ಯ ಸರ್ಕಾರ ಅಬಕಾರಿ ಇಲಾಖೆಯ ನಂತರ ಮೆಟ್ರೋವನ್ನು ಟಾರ್ಗೆಟ್ ಮಾಡಿಕೊಂಡಿದೆ. ಅವೈಜ್ಞಾನಿಕವಾಗಿ ಮೆಟ್ರೋ ದರ ಏರಿಸಿ ಜನಸಾಮಾನ್ಯರಿಗೆ ಬರೆ ಹಾಕುತ್ತಿದೆ. ಬಂಧನ ಮಾಡುವ ಮೂಲಕ ನೀವು ನಮ್ಮ ದನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಜನಪರ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಜನಪರ ಹೋರಾಟ ಕೈಗೊಂಡಿರುವ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ನಮ್ಮ ಬೆಂಬಲವಿದೆ ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ಗಜೇಂದ್ರ ಎಸ್. ಬೇಲೆಮನೆ ತಿಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ ಇದರ ನಿವಾರಣೆಗಾಗಿ ಉಡುಪಿ ತಾಲೂಕಿನಲ್ಲಿ 1,35,244, ಕುಂದಾಪುರ ತಾಲೂಕಿನಲ್ಲಿ 87,320 ಹಾಗೂ ಕಾರ್ಕಳ ತಾಲೂಕಿನಲ್ಲಿ 49,913 ಸೇರಿದಂತೆ ಒಟ್ಟು 2,72,477 ಮಕ್ಕಳಿಗೆ ಅಲ್‌ಬೆಂಡಾಝೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು. ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರ ಉಪಸ್ಥಿತಿಯಲ್ಲಿ ನೀಡಲಾಗುವುದು. ಶಿಕ್ಷಕರು, ಬಿಸಿಯೂಟ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯವರಿಗೆ ಕೂಡಾ ಮಾತ್ರೆಯನ್ನು ನೀಡಲಾಗುತ್ತದೆ. ಹೊಟ್ಟೆ ಹುಳಗಳ ತೊಂದರೆಯಿಂದ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿಕೊಳ್ಳಬಹುದು. ಅಲ್‌ಬೆಂಡಾಝೋಲ್ ಮಾತ್ರೆ ನೀಡುವುದರಿಂದ ಹೊಟ್ಟೆ ಹುಳಗಳ ನಾಶವಾಗುತ್ತವೆ. ಈ ಕಾರ್ಯಕ್ರಮದಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐ.ಟಿ.ಐ, ಟೆಕ್ನಿಕಲ್ ಇನ್ಸಿಟ್ಯೂಟ್, ನರ್ಸಿಂಗ್ ಕಾಲೇಜು, ಡಿಗ್ರೀ ಕಾಲೇಜು ವಿದ್ಯಾರ್ಥಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಲಿಸುತ್ತಿದ್ದ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ಎನ್.ಹೆಚ್-66ರ ಕುಂದಾಪುರ ಕನ್ನುಕೆರೆ ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಜ.31ರಂದು ಎರಡು ಕಾರುಗಳಲ್ಲಿ ದೇಶ ಸುತ್ತುವ ಪ್ರವಾಸಕ್ಕೆ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ತೆಕ್ಕಟ್ಟೆ ಸಮೀಪದ ಕನ್ನುಕೆರೆ ಪ್ರದೇಶದಲ್ಲಿ ಕಾರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದು ಬಿದ್ದಿದೆ. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೂಡಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿ ಭಾಗದಲ್ಲಿ ಇಂಡಿಕಾ ಸಂಸ್ಥೆ ಜನಸಾಮಾನ್ಯರೊಂದಿಗೆ ಸ್ಪಂದಿಸುವ ಜತೆಗೆ ಸಾಂಸ್ಕೃತಿಕ ಕಲಾರಾಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಭಾನುವಾರ ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲಾ ಗೀತಾನಂದ ರಂಗ ಮಂದಿರದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ ಇದರ 16ನೇ ವರ್ಷದ ಇಂಡಿಕಾ ಸಂಭ್ರಮ-2026 ಯಕ್ಷರತ್ನ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂತೋಷ್ ಮೇಷ್ಟ್ರು ಇಂಡಿಕಾ ಸಂಸ್ಥೆ ಹುಟ್ಟುಹಾಕಿದ ಸದಾ ಸಮಾಜದ ಬಗ್ಗೆ ತುಡಿತ ಹೊಂದಿದ್ದರು. ಅವರ ಅಕಾಲಿಕ ನಿಧನದ ನಂತರವು ಮುಂದುವೆರೆಸಿ ಅವರ ನೆನಪನ್ನು ಸದಾ ಕಾಲ ಉಳಿಯುವಂತೆ ಮಾಡಿರುವುದು ಅವರಿಗೆ ದೊಡ್ಡ ಗೌರವ ಸಲ್ಲಿಸಿದಂತೆ ಅಂತಯೇ ತೀರ್ಥಹಳ್ಳಿ ಗೋಪಾಲ್ ಆಚಾರ್ ಎನ್ನುವ ಹಿರಿಯಯಕ್ಷಕಲಾವಿದರನ್ನು ಗುರುತಿಸಿ ಪುರಸ್ಕಾರ ನೀಡಿದ್ದು ಅತ್ಯಂತ ಪ್ರಶಂಸನೀಯ ಕಾರ್ಯವಾಗಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್.ಡಿ.ಎ ಸರ್ಕಾರ ಕರ್ನಾಟಕದ ಕರಾವಳಿ ತೀರದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ, ‘ಸಾಗರಮಾಲಾ’ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 491 ಕೋಟಿ ರೂ. ವೆಚ್ಚದಲ್ಲಿ 8 ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರಭಾನಂದ ಸೋನೊವಾಲ್ ಅವರು ಮಾಹಿತಿ ನೀಡಿದ್ದಾರೆ. ಈ ವಿಷಯದ ಕುರಿತಂತೆ ಪ್ರಸಕ್ತ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರಿಗೆ ಉತ್ತರ ನೀಡಿರುವ ಸಚಿವರು, ಈ ಯೋಜನೆಗಳು ಬಂದರುಗಳ ಆಧುನೀಕರಣ, ಮೀನುಗಾರಿಕೆ ಮೂಲಸೌಕರ್ಯ ವೃದ್ಧಿ ಮತ್ತು ಕರಾವಳಿ ಸಮುದಾಯದ ಆರ್ಥಿಕ ಪ್ರಗತಿಗೆ ಪೂರಕವಾಗಿವೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಉಡುಪಿಯ ಮಲ್ಪೆ ಬಂದರು ಮತ್ತು ಉತ್ತರ ಕನ್ನಡದ ಅಮದಳ್ಳಿಯ ಮೀನುಗಾರಿಕಾ ಬಂದರುಗಳ ಆಧುನೀಕರಣ ಹಾಗೂ ಕಾರವಾರ ಬಂದರಿನಲ್ಲಿ ಅಗ್ನಿಶಾಮಕ ಉಪಕರಣಗಳ ಅಳವಡಿಕೆ ಕಾರ್ಯಗಳು ಈಗಾಗಲೇ ಪೂರ್ಣಗೊಂಡಿವೆ. ಉಳಿದಂತೆ, ಮಂಗಳೂರಿನ ಕುಲಾಯಿ ಮೀನುಗಾರಿಕಾ ಬಂದರು ನಿರ್ಮಾಣ (196.51 ಕೋಟಿ ರೂ.)…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಇಲ್ಲಿನ ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (MBA) ವತಿಯಿಂದ ಕಾಲೇಜಿನಲ್ಲಿ “ಬಜೆಟ್ ವಿಶ್ಲೇಷಣೆ–2026” ಕುರಿತ ಸ್ಪರ್ಧೆಯನ್ನು ಎಂಬಿಎ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಉಪಸ್ಥಿತರಿದ್ದು, ಸ್ಪರ್ಧೆಗೆ ಶುಭ ಹಾರೈಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದರು. ಈ ಸ್ಪರ್ಧೆಯ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್ 2026 ಕುರಿತು ಆಳವಾದ ಅರಿವು ಮೂಡಿಸುವುದಾಗಿದ್ದು, ವಿದ್ಯಾರ್ಥಿಗಳು ಬಜೆಟ್‌ನ ಆದಾಯ–ವೆಚ್ಚ ವಿನ್ಯಾಸ, ವಿವಿಧ ಕ್ಷೇತ್ರಗಳಿಗೆ ನೀಡಿರುವ ಅನುದಾನ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಪ್ರೆಸೆಂಟೇಷನ್ ನೀಡಿದರು.ಸ್ಪರ್ಧೆಯ ಮೌಲ್ಯಮಾಪನವನ್ನು ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ. ಸುಬ್ರಹ್ಮಣ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟಾ ಅವರು ನೆರವೇರಿಸಿದರು. ಅವರು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ದೃಷ್ಟಿಕೋನ ಮತ್ತು ಪ್ರೆಸೆಂಟೇಶನ್ ಕೌಶಲ್ಯವನ್ನು ಮೆಚ್ಚಿ, ಉಪಯುಕ್ತ ಸಲಹೆಗಳನ್ನು ನೀಡಿದರು. ಜೊತೆಗೆ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪರಿಚರಣ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಗನವಾಡಿ ಶಾಲೆಯೊಳಗೆ ಮದ್ಯಪಾನ ನಡೆಸುತ್ತಿದ್ದವರನ್ನು ಪ್ರಶ್ನಿಸಿದ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಗುಲ್ವಾಡಿ ಗ್ರಾಮದ ಕರ್ಕಿ ಅಂಗನವಾಡಿ ಶಾಲೆ ಆವರಣದಲ್ಲಿ ನಡೆದಿದೆ. ಹಟ್ಟಿಯಂಗಡಿ ಗ್ರಾಮ ನಿವಾಸಿ ವಿನಯ್ (32) ಅವರು ಫೆ.8ರಂದು ಬೆಳಿಗ್ಗೆ ಸುಮಾರು 1 ಗಂಟೆಯ ವೇಳೆಗೆ ಕರ್ಕಿ ಅಂಗನವಾಡಿ ಶಾಲೆಯ ಸಮೀಪದ ಯಕ್ಷಿ ಗ್ರೌಂಡ್‌ನಲ್ಲಿ ಆಯೋಜಿಸಲಾಗಿದ್ದ ಕ್ರಿಕೇಟ್ ಪಂದ್ಯಾಟ ಮುಗಿದ ನಂತರ, ವಿನಯ್ ಹಾಗೂ ಅವರ ಸ್ನೇಹಿತರಾದ ಲೋಕೇಶ್ ಮತ್ತು ಸುದರ್ಶನ ಸ್ವತ್ತುಗಳನ್ನು ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಶಾಲೆಯ ಒಳಭಾಗದಲ್ಲಿ ಆರೋಪಿತ ಪ್ರಸಾದ್ ಹಾಗೂ ಮತ್ತೊಬ್ಬ ವ್ಯಕ್ತಿ ಕುಳಿತುಕೊಂಡು ಮದ್ಯಪಾನ ಮಾಡುತ್ತಿದ್ದುದನ್ನು ಗಮನಿಸಿದ ಲೋಕೇಶ್ ಅವರು, “ಸಣ್ಣ ಮಕ್ಕಳು ಕಲಿಯುವ ಅಂಗನವಾಡಿ ಶಾಲೆಯೊಳಗೆ ಮದ್ಯಪಾನ ನಡೆಸುವುದು ಸೂಕ್ತವಲ್ಲ, ಬೇರೆ ಸ್ಥಳಕ್ಕೆ ಹೋಗಿ” ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಆರೋಪಿತ ಪ್ರಸಾದ್, ಕೈಯಲ್ಲಿದ್ದ ಬಿಯರ್ ಬಾಟಲಿಯನ್ನು ಅಲ್ಲಿಯೇ ಒಡೆದು, ಅದರಿಂದ ಲೋಕೇಶ್ ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಯುವ ವಿಭೂಷಣ” ರಾಜ್ಯ ಮಟ್ಟದ ಪ್ರಶಸ್ತಿಗೆ ಬೈಂದೂರು ಭಾಗದ ಸಮಾಜಮುಖಿ ಮತ್ತು ಧಾರ್ಮಿಕ ಮುಖಂಡರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಶನಿವಾರದಂದು ನಡೆದ ಈ ಪ್ರಶಸ್ತಿ ಪ್ರದಾನ ಸಮಾರಂಭವು ಸಾಧನೆ ಮತ್ತು ಸಂಸ್ಕೃತಿಗೆ ಸಂದ ಗೌರವವಾಗಿದೆ. ಬೈಂದೂರು ಭಾಗದಲ್ಲಿ ತಮ್ಮದೇ ಆದ ಜನಪ್ರಿಯತೆ ಹಾಗೂ ಛಾಪನ್ನು ಮೂಡಿಸಿರುವ ಪ್ರದೀಪ್ ಶೆಟ್ಟಿ ಅವರ ಸಮಾಜಮುಖಿ ಸಾಧನೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಈ ಪ್ರಶಸ್ತಿಯನ್ನು ಘೋಷಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಮುಖಂಡರಾದ ಗುಣರಂಜನ್ ಶೆಟ್ಟಿ, ಜೈ ಕರ್ನಾಟಕ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾದ ಪೂಜಾ ಶೆಟ್ಟಿ, ಶೈಲೇಶ್ ಪೂಜಾರಿ ಹಾಗೂ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.
