Author: ನ್ಯೂಸ್ ಬ್ಯೂರೋ

ಮೂಡುಬಿದಿರೆ: ಸಾಹಿತ್ಯ-ಸಂಗೀತ ಇತರ ಲಲಿತ ಕಲೆಗಳು ಮನುಷ್ಯನ ವ್ಯಕ್ತಿತ್ವವನ್ನು ಪರಿಷ್ಕರಿಸಿ, ಅತನಲ್ಲಿನ ದುಷ್ಟಶಕ್ತಿಗಳನ್ನು ನಾಶಗೊಳಿಸಿ ಮನಸ್ಸನ್ನು ಪರಿಶುದ್ಧಗೊಳಿಸಿ ಅವನನ್ನು ದೈವತ್ವದೆಡೆಗೆ ಕರೆದೊಯ್ಯುವ ಸಾಧನಗಳಾಗಿವೆ. ಎಲ್ಲೆಡೆ ತಾಂಡವವಾಡುತ್ತಿರುವ ಅಶಾಂತಿ, ಅಸಹನೆ, ಅಸಹಿಷ್ಣುತೆ ಇತ್ಯಾದಿ ಅನಿಷ್ಟಗಳನ್ನು ಸಮರ್ಥವಾಗಿ ಎದುರಿಸಿ ಹಿಮ್ಮೆಟ್ಟಿಸಲು ಅವಶ್ಯವಿರುವ ಮಾನಸಿಕ ಸ್ಥೈರ್ಯ ಪಡೆಯಲು ಇವೇ ಪೂರಕವಾದುದು. ಈ ನಿಟ್ಟಿನಲ್ಲಿಯೂ ನುಡಿಸಿರಿಯಂತಹ ಕಾರ್ಯಕ್ರಮಗಳು ಮುಖ್ಯವೆನಿಸುತ್ತದೆ ಎಂದು ಸಾಹಿತಿ ಡಾ. ವೀಣಾ ಶಾಂತೇಶ್ವರ ಹೇಳಿದರು. ಅವರು ಮೂಡುಬಿದಿರೆ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಸಮ್ಮೇಳನ ಆಳ್ವಾಸ್ ನುಡಿಸಿರಿ ೨೦೧೫ ಉದ್ಘಾಟಿಸಿ ಮಾತನಾಡಿದರು. ಹೊಸದಕ್ಕಾಗಿ ಹುಡಕಾಟ ಮನುಷ್ಯನ ಮೂಲಭೂತ ಸ್ವಭಾವ. ಸಾಹಿತ್ಯದಲ್ಲಷ್ಟೇ ಅಲ್ಲದೇ ವಿಜ್ಞಾನ-ಕೃಷಿ-ಕೈಗಾರಿಕೆ-ಶಿಕ್ಷಣ ಎಲ್ಲಾ ಕ್ಷೇತ್ರಗಳಲ್ಲಿಯೂ ಎಲ್ಲಾ ಕಾಲಗಳಲ್ಲಿಯೂ ಕ್ರಿಯಾಶೀಲ ಮನಸ್ಸುಗಳು ಹೊಸತನಕ್ಕಾಗಿ, ಭಿನ್ನತೆಗಾಗಿ, ಅನನ್ಯತೆಗಾಗಿ, ಅಸ್ಮಿತೆಗಾಗಿ, ಹುಡುಕಾಟ ನಡೆಸಿಯೇ ಇರುತ್ತವೆ. ಸಾಹಿತ್ಯದೊಳಗಂತೂ ‘ಹಳೆಯಸಾಹಿತ್ಯ’, ‘ಆಧುನಿಕ ಸಾಹಿತ್ಯ’ ಅಂತನ್ನುವುದು ವಿಶ್ಲೇಷಣೆಯ ಅನುಕೂಲಕ್ಕಾಗಿ ನಾವು ಕೊಟ್ಟಿರುವ ಕಾಲಸೂಚಕ ವಿಶೇಷಣಗಳಷ್ಟೇ. ಪ್ರತಿಯೊಂದು ಕಾಲಘಟ್ಟದ ಶ್ರೇಷ್ಠ ಸಾಹಿತ್ಯವೂ ಆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ 10.45ರಿಂದ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿ ಪ್ರಸನ್ನ ಕುಮಾರ ಐತಾಳ್ ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ 5.15ಗಂಟೆಗೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಅಲೆವೂರು ಶ್ರೀ ವಿಷ್ಟುಪೂರ್ತಿ ಸೇವಾ ಬಳಗದವರ ಚಂಡೆ ವಾದನ, ಹಾಗೂ ಕೆರಳ ಚಂಡೆ ವಾದನ, ಉಡುಪಿಯ ಮಂಜುಷಾ ಮಹಿಳಾ ಚಂಡೆ ಬಳಗ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ದಾವಣಗರೆಯ ಕೆ.ವಿ. ಆನಂದರಾವ್ ಮತ್ತು ಮಕ್ಕಳಿಂದ ಉಚಿತ ಪಾನಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಆಂಜನೇಯ ದೇವಸ್ಥಾನದ ಬಳಿ ಬೈಂದೂರು ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಬರುತ್ತಿದ್ದ ಸೈಕಲ್ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ, ಸೈಕಲ್ ಸವಾರ ನಾಗೂರು ನಿವಾಸಿ ಸುರೇಶ್ ಎಂಬುವವರ ಮಗ ನಾಗೇಶ್(16) ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಸಹಸವಾರ ಅಕ್ಷಯ(16) ಗಾಯಗೊಂಡ ಘಟನೆ ಸಂಜೆ ವರದಿಯಾಗಿದೆ. ಘಟನೆಯ ವಿವರ: ಕಿರಿಮಂಜೇಶ್ವರ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾಗಿರುವ ನಾಗೇಶ್ ಹಾಗೂ ಅಕ್ಷಯ್ ತರಗತಿ ಅವಧಿಯ ಬಳಿಕ ಗ್ರೂಫ್ ಸ್ಟಡಿ ಮುಗಿಸಿಕೊಂಡು ರಾ.ಹೆ.66ರಲ್ಲಿ ನಾಗೂರು ಆಂಜನೇಯ ದೇವಸ್ಥಾನದ ಸಮೀಪದ ತಮ್ಮ ಮನೆಗೆ ತೆರಳುತ್ತಿದ್ದರು. ಇದೇ ವೇಳೆ ಮಂಗಳೂರಿನಿಂದ ಶಿವಮೊಗ್ಗ ಹೊರಟ್ಟಿದ್ದ ಸ್ವಿಫ್ಟ್ ಕಾರು ಒಂದೇ ಸಾರಿ ಬಲಕ್ಕೆ ಚಲಾಯಿಸಿದ್ದರಿಂದ ಎದುರಿಗಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟರೇ, ಹಿಂದೆ ಕುಳಿತಿದ್ದ ಅಕ್ಷಯ್‌ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.(ಕುಂದಾಪ್ರ ಡಾಟ್ ಕಾಂ ಸುದ್ದಿ) ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಬಳಿಕ ನಿಲ್ಲಿಸದೇ ಮುಂದೆ…

Read More

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯದ ಹತ್ತನೇ ವರ್ಷದ ಸಂಭ್ರಮದ ಪ್ರಯುಕ್ತ ಕೋಟೇಶ್ವರದ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್‌ನಲ್ಲಿ ದಶಾರ್ಪಣಂ ಎಂಬ ವಿನೂತನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ನೀರಿನಲ್ಲಿ ಹಣತೆಯನ್ನು ತೇಲಿಸಿ ಕಾರ್ಯಕ್ರಮದ ಉಧ್ಘಾಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ ನಮ್ಮ ಪೂರ್ವಜರು ಕಲೆಯನ್ನು ನಮ್ಮ ಸಂಪ್ರದಾಯ ಹಾಗೂ ಶಿಕ್ಷಣದೊಂದಿಗೆ ಸೇರಿಸಿ ಶಾಸ್ತ್ರೀಯ ಮತ್ತು ಜಾನಪದ ಚೌಕಟ್ಟನ್ನು ನಮಗೆ ಒದಗಿಸಿ ಕೊಟ್ಟಿದ್ದಾರೆ. ಪ್ರದೇಶಗಳಿಗನುಗುಣವಾಗಿ, ಜನ ಸಮುದಾಯಗಳಿಗನುಗುಣವಾಗಿ ನಮ್ಮಲ್ಲಿ ಹಲವು ಸಂಸ್ಕೃತಿ ಹಾಗೂ ಕಲೆಗೆ ಬಹಳಷ್ಟು ಒತ್ತು ನೀಡಲಾಗುತ್ತಿದೆ. ನಮ್ಮೆಲ್ಲಾ ಶಿಕ್ಷಣಗಳ ಹಂತದಲ್ಲಿ ನಮ್ಮ ಕಲೆಯನ್ನು ಮುಂದೆಯೂ ಜೋಡಿಸಿಕೊಂಡು ಹೋಗಬೇಕಾದ ಅಗತ್ಯವಿದೆ. ನಮ್ಮ ಬದುಕಿನ ಕಾಲಘಟ್ಟದಲ್ಲಿ ಭರತನಾಟ್ಯಕ್ಕೆ ನೂರು ವರ್ಷಗಳ ಇತಿಹಾಸದಲ್ಲಿ ಆರಂಭದಿಂದ ಇವತ್ತಿನ ವರೆಗೆ ಹಂತ ಹಂತವಾಗಿ ಬೆಳೆಯುತ್ತಾ ಹೋಗಿದೆ ಎನ್ನುವುದನ್ನು ಗಮನಿಸಿದ್ದೇವೆ. ಅಂದು ಕಲೆ ಹೇಗಿತ್ತು, ಇಂದು ಹೇಗಿದೆ ಎನ್ನುವುದನ್ನು ನಾವು ಅವಲೋಕಿಸಿದರೆ ಕಲೆಗೆ ಬಹಳಷ್ಟು ಗೌರವ ದೊರಕುತ್ತಿದೆ ಎನ್ನುವುದು ಗಮನಾರ್ಹ.…

Read More

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಕುಂದಪ್ರಭ ಕುಂದಾಪುರ, ಸಾಹಿತ್ಯ ವೇದಿಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು.ಶೇಷಗರಿ ಶೆಣೈ ಸ್ಮರಣಾರ್ಥ ಆಯೋಜಿಸಿದ್ದ ಸವಿ-ನುಡಿ ಹಬ್ಬ 2015ಕಾರ್ಯಕ್ರಮದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉದ್ಯಮಿಗಳಾದ ದತ್ತಾನಂದ ಗಂಗೊಳ್ಳಿ, ಪ್ರಶಾಂತ ಕುಂದರ್ ಕೋಟ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಕುಂದಪ್ರಭ ಸಂಪದಕ ಯು.ಎಸ್.ಶೆಣೈ, ಕಾಲೇಜಿನ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಎಸ್.ವಿ.ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕವಿತಾ ಎಂ.ಸಿ., ಪ್ರೌಢಶಾಲೆಯ ಉಪಪ್ರಾಂಶುಪಾಲ ವಾಮನದಾಸ ಭಟ್, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.

Read More

ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅಭಿಮಾನಿಗಳ ಪ್ರೀತಿ, ಸ್ನೇಹ, ಮಮತೆ ಎಲ್ಲವೂ ಸಿಗುತ್ತದೆ. ರಂಗಭೂಮಿಯು ಜನರಿಗೆ ಹತ್ತಿರದಿಂದ ಸ್ಪಂದಿಸುವ ಮಾಧ್ಯಮವಾಗಿದೆ. ಇಲ್ಲಿ ಕಲಾವಿದ ತನ್ನ ಕ್ರೀಯಾಶೀಲತೆಯನ್ನು ಬಳಸಿಕೊಂಡು ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಬಹುದಾಗಿದೆ ಎಂದು ಹಿರಿಯ ರಂಗಕಲಾವಿದೆ ಗೀತಾ ಸುರತ್ಕಲ್ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಬೈಂದೂರು ಸುರಭಿ ಸಂಸ್ಥೆ ಮೂರುದಿನಗಳ ಕಾಲ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ಆಯೋಜಿಸಿದ ರಂಗಧ್ವನಿ-2015 ನಾಟಕೋತ್ಸವದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನನಗೆ ಸಿಕ್ಕಿದ ಈ ಸನ್ಮಾನ ನಮ್ಮ ತಂಡಕ್ಕೆ ಅರ್ಪಿಸುತ್ತಿದ್ದೇನೆ. ತುಂತುರು ಮಳೆಯನ್ನೂ ಲೆಕ್ಕೆಸದೇ ಪ್ರೇಕ್ಷಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದೀರಿ ಎಂದು ಹರ್ಷವ್ಯಕ್ತಪಡಿಸಿದರು. ನಂತರ ರಾಜ್ಯ ನಾಟಕ ಅಕಾಡೆಮಿ ಸದಸ್ಯ ಉಮೇಶ್ ಸಾಲಿಯಾನ್ ಮಾತನಾಡಿ, ಯಾವುದೇ ಬಗೆಯ ರಂಗಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ವ್ಯಕ್ತಿಗೆ ಬದುಕಿನಲ್ಲಿ ಆತ್ಮವಿಶ್ವಾಸ ಮೂಡುತ್ತದೆ. ರಂಗಭೂಮಿಯಲ್ಲಿ ಒಮ್ಮೆ ತೊಡಗಿಸಿಕೊಂಡರೆ ಮುಂದೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ…

Read More

ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಯೂರೋಲೋಜಿ ವಿಭಾಗದಲ್ಲಿ ವೈದ್ಯರಾಗಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಜನಾನುರಾಗಿದ್ದರು. ಮೃತರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿವೃತ್ತ ಮ್ಯಾನೇಜರ್ ಜಿ.ಮಾಧವ ಖಾರ್ವಿ, ತಾಯಿ ಆನಂದಿ ಎಂ.ಖಾರ್ವಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Read More

ಕುಂದಾಪುರ: ಖಾರ್ವಿಕೇರಿ ರಸ್ತೆಯ ಪ್ರಕಾಶ್ ಇನ್ಸಿಟ್ಯೂಟ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿನಿ ಕು.ಸೌಭಾಗ್ಯ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಅನಂತರ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ನಿತ್ಯಾನಂದ ಹವಲ್ದಾರ ವಹಿಸಿದ್ದರು. ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಜಯಲಕ್ಷ್ಮೀ ಬಹುಮಾನ ವಿತರುಸಿದರು.. ಅಧ್ಯಾಪಕಿ ಶ್ರೀಮತಿ ಸಂಗೀತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಾಪಕ ಶ್ರೀಧರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರು ಹಾಗೂ ಪ್ರಾಂಶುಪಾಲರಾದ ಪ್ರಶಾಂತ್ ಹವಲ್ದಾರ್ ಉಪಸ್ಥಿತರಿದ್ದರು.

Read More

ಗಂಗೊಳ್ಳಿ: ಪ್ರತಿಯೊಬ್ಬ ವ್ಯಕ್ತಿಯೂ ಮೊದಲು ತಾನು ಎಲ್ಲರಂತೆ ಒಬ್ಬ ಮನುಷ್ಯಜೀವಿ ಎನ್ನುವುದನ್ನು ನೆನಪಿಡಬೇಕು. ಜಾತಿ ಧರ್ಮ ವರ್ಣಗಳ ಆಧಾರದ ಮೇಲೆ ಯಾವ ವ್ಯಕ್ತಿಯನ್ನೂ ಅಳೆಯಬಾರದು. ಬೇರೆಯವರು ನಮಗೇನು ಮಾಡಬಾರದೆಂದು ಬಯಸುತ್ತೇವೋ ನಾವು ಅದನ್ನು ಬೇರೆಯವರಿಗೆ ಮಾಡಬಾರದು. ಭಾವೈಕ್ಯತೆ ಅನ್ನುವುದು ಕೃತಿಯಲ್ಲಿ ಮೂಡಿಬರಬೇಕು ಎಂದು ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿನಿಯರಾದ ಆಯಿಷಾ ರೆಝಿನಾ ಮತ್ತು ಜಯಲಕ್ಷ್ಮಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಸಪ್ತಾಹದ ಉದ್ಘಾಟನಾ ಕಾರ‍್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಅವರು ಸಪ್ತಾಹಕ್ಕೆ ಚಾಲನೆ ನೀಡಿದರು. ಉಪನ್ಯಾಸಕಿ ಕವಿತಾ ಎಮ್ ಸಿ ಸ್ವಾಗತಿಸಿದರು.ದಿಶಾ, ಅನುಷಾ,ಅಶ್ವಿನಿ,ಐಶ್ವರ್ಯ,ಆಶಾ,ಸೌಜನ್ಯ,ದಶಮಿ,ಆಶಾ ಭಾವೈಕ್ಯ ಗಾನ ಹಾಡಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ‍್ಯಕ್ರಮ ನಿರೂಪಿಸಿದರು.ಆಶ್ಮಿತಾ ಧನ್ಯವಾದ ಅರ್ಪಿಸಿದರು.…

Read More

ಬೈಂದೂರು: ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಾಜಘಾತುಕರನ್ನು ಹಿಡಿದು ಶಿಕ್ಷಿಸಲು ಜನತೆಯ ರಕ್ಷಣೆಗೆ ಆರಕ್ಷಕರು ಸದಾ ಎಚ್ಚರವಾಗಿರುತ್ತಾರೆ. ಅಪರಾಧಗಳನ್ನು ಪತ್ತೆಮಾಡುವಲ್ಲಿ ನಮಗೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿರುತ್ತದೆ ಎಂದು ಬೈಂದೂರು ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ಹೇಳಿದರು. ಉಪ್ಪುಂದ ಗ್ರಾಪಂನ 2015-16ನೇ ಸಾಲಿನ ಮಹಿಳಾ ಮತ್ತು ಕಿಶೋರಿಯರ ಪ್ರಥಮ ಗ್ರಾಮಸಭೆಯಲ್ಲಿ ಕಾನೂನು ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಮಹಿಳೆ ಮತ್ತು ಮಕ್ಕಳಿಗೆ ವಿವರಿಸಿ ಮಾತನಾಡಿದರು. ನಿಮ್ಮ ಪರಿಸರದಲ್ಲಿ ಯಾವುದಾದರೂ ಅಹಿತಕರ ಘಟನೆ ನಡೆದರೆ ಪೋಲೀಸ್ ಸಹಾಯವಾಣಿ ಅಥವಾ ಸಮೀಪದ ಠಾಣೆಗೆ ತಿಳಿಸಿ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಅಪರಾಧವನ್ನು ಮುಚ್ಚಿಡುವುದು ಮತ್ತು ಅಪರಾಧಿಗಳನ್ನು ರಕ್ಷಿಸುವುದು ಕೂಡಾ ಶಿಕ್ಷಾರ್ಹ ಅಪರಾಧವಾಗುತ್ತದೆ. ಈ ನೆಲೆಯಲ್ಲಿ ಯವುದೇ ಅಳುಕಿಲ್ಲದೇ ಧೈರ್ಯವಾಗಿ ಠಾಣೆಗೆ ಬಂದು ಮಾಹಿತಿ ಕೊಡಿ. ಅಧಿಕಾರಿಗಳೊಡನೆ ಸಮಸ್ಯೆಗಳನ್ನು ಹೇಳಿಕೊಂಡರೆ ಅದರ ಬಗ್ಗೆ ಕಾನೂನು ರೀತಿಯಲ್ಲಿ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಮಕ್ಕಳ ಹಾಗೂ ಮಹಿಳೆಯರ ರಕ್ಷಣೆ, ಮಹಿಳೆಯರ ಸ್ವಾಭಿಮಾನಿ ಬದುಕು, ಮಹಿಳಾ…

Read More