ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೃಕ್ಷ, ನದಿತಟ, ಬನ, ಗುಡ್ಡ-ಬೆಟ್ಟಗಳಲ್ಲಿ ದೈವ-ದೇವರುಗಳು ನೆಲೆಸಿರುವ ಕಾರಣ ನಮ್ಮ ಹಿಂದಿನವರು ಪ್ರಕೃತಿಯನ್ನು ದೇವರೆಂದು ನಂಬಿ ಆರಾಧಿಸುಕೊಂಡು ಬಂದರು. ಮುಂದಿನ ಪೀಳಿಗೆಗೆ ಅನುಕೂಲವಾಗಲೆಂದು ಹಾಗೂ ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ದೈವ, ದೇವರ ಆಲಯಗಳನ್ನು ಇಂತಹ ಪರಿಸರದಲ್ಲಿ ನಿರ್ಮಾಣ ಮಾಡಿದ್ದಾರೆ. ಆದರೆ ಇಂದು ಮಾನವನ ಸ್ವಯಂಕೃತ ಅಪರಾಧಗಳಿಂದ ಪ್ರಕೃತಿ ಮುನಿದು ಕಾಲಕಾಲಕ್ಕೆ ಆಗಬೇಕಿದ್ದ ಮಳೆ-ಬೆಳೆ ಕೂಡಾ ವೈಪರಿತ್ಯಕ್ಕೆ ಮುಟ್ಟುವ ಸ್ಥಿತಿ ಬಂದೊದಗಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಉಪ್ಪುಂದ ಜನತಾ ಕಾಲೋನಿಯ ಶ್ರೀ ಜೈನ ಬೊಬ್ಬರ್ಯ ಮತ್ತು ಪರಿವಾರ ದೈವಗಳ ದೈವಸ್ಥಾನದ ನೂತನ ಹೆಬ್ಬಾಗಿಲು ಉದ್ಘಾಟಿಸಿ ಅನಂತರ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ವೈಜ್ಞಾನಿಕವಾಗಿ ಜಗತ್ತು ಮುಂದುವರಿದಿದ್ದು, ನಾವುಗಳು ಅದನ್ನು ಅಂಗೈಯಲ್ಲಿ ನೋಡಬಹುದಾಗಿದೆ. ದುರದೃಷ್ಟವಶಾತ್ ಹಿಂದಿನ ಗುಲಾಮಗಿರಿಯ ವ್ಯಾಮೋಹ ನಮ್ಮಲ್ಲಿ ಇನ್ನೂ ಹೋಗಲಿಲ್ಲ. ಈ ಗುಂಗಿನಿಂದ ಹೊರಬಂದು ನಮ್ಮ ಕರ್ತವ್ಯ, ಸುತ್ತಮುತ್ತಲಿನವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ದೇಶ ಚನ್ನ… ಈ ಮಣ್ಣು ಚಿನ್ನ…. ಕಣ್ಣು ಕಣ್ಣು ಒಂದಾಯಿತು, ನನ್ನ ನಿನ್ನ ಮನಸೇರಿತು… ನಿಲ್ಲು ನಿಲ್ಲೆ ಪತಂಗ… ದೂರ ದೂರ ಅಲ್ಲೆ ನಿಲ್ಲಿ ನನ್ನ ದೇವರೆ… ಆಚಾರವಿಲ್ಲದ ನಾಲಿಗೆ… ಮುಂತಾದ ಹಳೆಯ ಹಾಡುಗಳು ಹೊಸಬರ ಕಂಠದಲ್ಲಿ ಮೂಡಿಬಂದು ನೆರೆದಿದ್ದ ಶೋತ್ರುಗಳನ್ನು ದಶಕಗಳ ಹಿಂದಕ್ಕೆ ಕೊಂಡ್ಯೊಯ್ದರೇ, ಹಾಡುಗಳ ನಡು ನಡುವೆ ನಡೆದ ನೃತ್ಯರೂಪಕಗಳು ಪ್ರೇಕ್ಷಕರಿಗೆ ಮನೊಲ್ಲಾಸ ನೀಡುತ್ತಿದ್ದವು. ದೂರದರ್ಶನ ಕೇಂದ್ರ ಬೆಂಗಳೂರು, ಬೈಲೂರು ಎಜುಕೇಶನ್ ಟ್ರಸ್ಟ್ ಕುಂದಾಪುರ, ಆಕಾಶವಾಣಿ ಮಂಗಳೂರು, ಇಸಿಆರ್ ಎವಿಯೇಶನ್ ಅಕಾಡೆಮಿ ಕೋಟೇಶ್ವರ, ಯುವ ಇನ್‌ಫ್ರಾಸ್ಟ್ರಕ್ಟರ್ ಕುಂದಾಪುರದ ಸಂಯೋಜನೆಯಲ್ಲಿ ವಿಜಯವಾಣಿ ದಿನಪತ್ರಿಕೆಯ ಮಾಧ್ಯಮ ಸಹಭಾಗಿತ್ವದಲ್ಲಿ ಕೋಟೇಶ್ವರ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರುಗಿದ ಚಂದನ ವಾಹಿನಿಯ ಮಧುರ ಮಧುರವೀ ಮಂಜುಳಗಾನ ಹಳೆಯ ಕನ್ನಡ ಚಲನಚಿತ್ರಗೀತೆಗಳ ಸಂಗೀತ -ನೃತ್ಯಾವಳಿಗಳು ಮಧುರ ಮಧುರವೀ ಮಂಜುಳಗಾನ ಹಾಡಿನ ಮೂಲಕವೇ ಆರಂಭಗೊಂಡು ನೆರೆದಿದ್ದ ನೂರಾರು ಪ್ರೇಕ್ಷಕರ ಮನತುಂಬಿದವು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರದ ಆಸುಪಾಸಿನ ಪ್ರತಿಭೆಗಳಾದ ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕು ಕಸಾಪ ಘಟಕದಡಿಯಲ್ಲಿ ಬರುವ ಕೋಟೇಶ್ವರ ವಲಯ ಕಸಾಪ ಅಧ್ಯಕ್ಷರಾಗಿ ಅಶೋಕ ತೆಕ್ಕಟ್ಟೆಯವರನ್ನು ನೇಮಿಸಲಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ಅಶೋಕ ತೆಕ್ಕಟ್ಟೆಯವರು ಬಹುಮುಖ ಪ್ರತಿಭೆಯಾಗಿದ್ದು ಸ್ನಾತಕೋತ್ತರ ಪದವಿಧರರು. ಕತೆ, ಕವನ, ಲೇಖನ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿರುವ ಇವರು ಕಳೆದ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಇದೀಗ ಅವರನ್ನು 2016-19ರ ಅವಧಿಗೆ ಕಸಾಪ ಕೋಟೇಶ್ವರ ಘಟಕಕ್ಕೆ ಅಧ್ಯಕ್ಷರಾಗಿ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇಮಕ ಮಾಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ಭಾನುವಾರ ರಾತ್ರಿ ಸುರಿದ ಗುಡುಗು ಮಿಂಚು ಸಹಿತ ಮಳೆಗೆ ಅಲ್ಲಲ್ಲಿ ನಷ್ಟ ಸಂಭವಿಸಿದ್ದರೇ, ಚಂದ್ರ ಎಂಬುವವರಿಗೆ ಸಿಡಿಲು ಎರಗಿ ಗಾಯಗಳಾಗಿದ್ದು ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿರೂರು ಗ್ರಾಪಂ ವ್ಯಾಪ್ತಿಯ ಮನೆಯ ಮೇಲೆ ಮರ ಬಿದ್ದು ನಷ್ಟ ಸಂಭವಿಸಿದೆ. ಗೋಪಾಡಿ ಗ್ರಾಪಂ ವ್ಯಾಪ್ತಿಯ ಮನೆಯೊಂದರ ಎದುರಿನ ಬಾವಿಯ ಮೇಲೆ ತೆಂಗಿನ ಮರ ಬಿದ್ದು ದಂಡೆ ಕುಸಿದಿದೆ. ಎರಡು ಮನೆಗಳ ಹೆಂಚು ಹಾರಿ ಹೋಗಿದೆ. ಕುಂದಾಪುರ ತಾಲೂಕಿನಾದ್ಯಂತ ಭಾರಿ ಗುಡುಗು ಸಹಿತ ಮಳೆ ಬಿದ್ದಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕುಂದಾಪುರ, ಕೊಲ್ಲೂರು, ಜಡ್ಕಲ್, ವಂಡ್ಸೆ, ತಲ್ಲೂರು, ಹೆಮ್ಮಾಡಿ, ಕೋಡಿ, ಗಂಗೊಳ್ಳಿ, ಮರವಂತೆ, ಗಂಗೊಳ್ಳಿ, ಬೈಂದೂರು, ಶಿರೂರು ತೆಕ್ಕಟ್ಟೆ, ಶಂಕರನಾರಾಯಣ, ಸಿದ್ಧಾಪುರ, ಅಮಾಸೆಬೈಲು, ಹಾಲಾಡಿ ಮುಂತಾದೆಡೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ತಾಲೂಕಿನಾದ್ಯಂತ ಸುರಿದ ಮಳೆಗೆ ಸುಮಾರು ೨೫,೦೦೦ರೂ ನಷ್ಟ ಸಂಭವಿಸಿರಬಹುದೆಂದು ತಹಶೀಲ್ದಾರ್ ಗಾಯತ್ರಿ ನಾಯಕ್ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ,ಮೇ15: ತಾಲೂಕಿನ ಪ್ರಸಿದ್ಧ ಪ್ರಸಿದ್ಧ ಕೈಗಾರಿಕೋದ್ಯಮಿ ಕೋಟೇಶ್ವರ ಚಂದ್ರಶೇಖರ ಶೆಟ್ಟಿ (70) ಭಾನುವಾರ ಸ್ವಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಹೆಂಚು ಮತ್ತು ಗೇರು ಬೇಜ ಕಾರ್ಖಾನೆ, ಆರ್ಥಿಕ ಸಂಸ್ಥೆ ಸ್ಥಾಪಿಸುವ ಮೂಲಕ ಕುಂದಾಪುರದಲ್ಲಿ ಕೈಗಾರಿಕೋದ್ಯಮಿಯಾಗಿ ಗುರುತಿಸಿಕೊಂಡಿದ್ದ ಅವರು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯುಲ್ಲಿ ತಮ್ಮ ವ್ಯವಹಾರ ಹೊಂದಿದ್ದರು. ಚಂದ್ರಶೇಖರ ಶೆಟ್ಟಿ ಅವರು ಕಾಲೇಜು ದಿನಗಳಲ್ಲಿ ಯುನಿವರ್ಸಿಟಿ ಶೆಟಲ್ ಬ್ಯಾಡ್ಮಿಂಟನ್ ಆಟಗಾರರಾಗಿ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿದ್ದರು. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳ ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಆರ್ಯಭಟ ಕಲ್ಚರಲ್ ಆರ್ಗನೈಜೇಷನ್ ನೀಡಲಾಗುತ್ತಿರುವ 2015ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಬೈಂದೂರು ಮಯ್ಯಾಡಿಯ ಬಾಲಕೃಷ್ಣ ಮದ್ದೋಡಿ ಅವರಿಗೆ ಲಭಿಸಿದೆ. ಪ್ರಸ್ತುತ ಉಡುಪಿಯಲ್ಲಿ ನೆಲೆಸಿರುವ ಅವರ ಸಮಾಜ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆಗಾಗಿ ಈ ಪ್ರಶಸ್ತಿ ದೊರೆತಿದೆ. ಮಣಿಪಾಲದ ಎಂ.ಐ.ಟಿಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತಿರುವ ರೊಟೇರಿಯನ್ ಪಿಹೆಚ್‌ಎಫ್ ಬಾಲಕೃಷ್ಣ ಮದ್ದೋಡಿ ಅವರು ರೊಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪ್ರಸ್ತುತ ರೋಟರಿ ಜಿಲ್ಲೆ 3180 ಇದರ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತಮ ಸಂಘಟಕ, ವಾಗ್ಮಿ, ಸಮಾಜ ಸೇವಕ, ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಶೇಷ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಮೇ 18ರ ಸಾಯಂಕಾಲ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮದ್ದೋಡಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಯವರನ್ನು ನೇಮಕ ಮಾಡಲಾಗಿದೆ. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿಇಡ್ ಪದವಿಧರರಾದ ಇವರು ಕಳೆದ ಒಂದು ದಶಕದಿಂದ ಪತ್ರಕರ್ತರಾಗಿ ಚಿರಪರಿಚಿತರಾಗಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಇವರ ಕಥೆ, ಕವನ, ಲೇಖನಗಳನ್ನು ನಿರಂತರವಾಗಿ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಆಕಾಶವಾಣಿ ಕಲಾವಿದರಾಗಿ ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು, ವಿವಿಧೆಡೆಗಳಲ್ಲಿ ಸಂಗೀತ ರಸಮಂಜರಿ, ಶಾಲಾ ಮಕ್ಕಳ ಹಾಡುಗಳ ಧ್ವನಿಮುದ್ರಿಕೆಗೆ ಹಾಡಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ರಾಜೇಶ ಶಿಬಾಜೆ ಗ್ರಾಮೀಣ ಪತ್ರಿಕೋದ್ಯಮ ಗೌರವ, ಜೇಸಿಐ ಸಾಧನಾಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ. ಇದೀಗ ಅವರನ್ನು 2016-19ನೇ ಸಾಲಿನ ಕಸಾಪ ವಂಡ್ಸೆ ಹೋಬಳಿಯ ಅಧ್ಯಕ್ಷರಾಗಿ ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇಮಕ ಮಾಡಿದ್ದಾರೆ.
ಸೇವಾಮನೋಭಾವದಿಂದ ಆತ್ಮತೃಪ್ತಿ ದೊರೆಯುತ್ತದೆ : ಜಗನ್ನಾಥ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವೃತ್ತಿ ಎಂಬುದು ನಮ್ಮ ಬದುಕಿಗಾಗಿಯಾದರೂ ನಮ್ಮಿಂದಾದ ಸಹಾಯವನ್ನು ಅರ್ಹರಿಗೆ ಮಾಡಬೇಕು. ದುಡಿಮೆಯ ಒಂದಂಶ ಅಶಕ್ತರಿಗೆ, ದೀನದಲಿತರಿಗೆ ನೀಡಿ ಅವರ ಏಳಿಗೆಗೆ ಪ್ರಾಮಾಣಿಕ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಿದಾಗ ಸಮಾಜದಲ್ಲಿ ಸುಧಾರಣೆ ಸಾಧ್ಯ. ಆರೋಗ್ಯದ ವಿಚಾರದಲ್ಲಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ನೇತ್ರ ತಪಾಸಣಾ ಶಿಬಿರಗಳು ಸಹಾಕಾರಿಯಾಗಿವೆ ಎಂದು ನಿವೃತ್ತ ಐಎಫ್‌ಎಸ್ ಅಧಿಕಾರಿ ಬಿ.ಜಗನ್ನಾಥ ಶೆಟ್ಟಿಯವರು ನುಡಿದರು. ಅಂಜಲಿ ಆಸ್ಪತ್ರೆ, ಬೈಂದೂರು, ಶ್ರೀ ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ, ಸಿನಿಯರ್ ಸಿಟಿಜನ್ ಅಸೋಸಿಯೇಷನ್ ಬೈಂದೂರು ಇವರ ಆಶ್ರಯದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ ಚಾರಿಟೀಸ್ (ರಿ.), ಲಯನ್ಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ವಾರಣಾ ವಿಭಾಗ ಉಡುಪಿ, ಲಯನ್ಸ್ ಲಯನೆಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರು ಸಹಯೋಗದಲ್ಲಿ ಅಂಜಲಿ ಆಸ್ಪತ್ರೆಯಲ್ಲಿ ನಡೆದ ಸಂಪೂರ್ಣ ಉಚಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಬೆಳಿಗ್ಗೆ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡು ಉಡುಪಿಯ ಖಾಸಗೀ ಆಸ್ಪತ್ರೆಗೆ ದಾಖಲಿಸಿಲಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸಾಲಿಗ್ರಾಮ ಪಾರಂಪಳ್ಳಿಯ ಲಚ್ಚಿ ಪೂಜಾರ‍್ತಿ (64) ಎಂದು ಗುರುತಿಸಲಾಗಿದೆ. ಇವರು ವಿಶೇಷ ಕಾರ‍್ಯಕ್ರಮವೊಂದಕ್ಕೆ ಭಾಗವಹಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ಉಡುಪಿಯಿಂದ ಕೋಟ ಕಡೆಗೆ ತೆರಳುತ್ತಿದ್ದ ಕಾರೊಂದು ಇವರಿಗೆ ಢಿಕ್ಕಿ ಹೊಡೆದ ಪರಿಣಾಮ ಇವರ ತಲೆ ರಸ್ತೆಯ ಡಿವೈಡರ್‌ಗೆ ಬಡಿದ ಕಾರಣ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಪರಿಶೀಲನೆಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಮಹಿಳೆ ಮೃತಪಟ್ಟಿದ್ದಾರೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಗಾಜು ಒಡೆದು ಹೋಗಿದೆ. ಮಹಿಳೆ ನಾಲ್ವರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇದೇ ಪ್ರದೇಶದಲ್ಲಿ ಕೆಲವು…
ಕುಂದಾಪ್ರ ಡಾಟ್ ಕಾಂ ವರದಿ | ಸಮಾಜದ ಎಲ್ಲಾ ಸ್ತರದ ಮಕ್ಕಳೂ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯಬೇಕು ಎನ್ನುವ ಧ್ಯೇಯದೊಂದಿಗೆ 1982ರಲ್ಲಿ ಪ್ರಾರಂಭಗೊಂಡ ‘ವ್ಯಾಸ ಕುಂಜಿಬೆಟ್ಟು ರಾಮಚಂದ್ರ ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢ ಶಾಲೆಯು’ (ವಿ.ಕೆ.ಆರ್. ಆಚಾರ್ಯ) ಕುಂದಾಪುರದ ಪ್ರಥಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಾಗಿದ್ದು ಗುಣಮಟ್ಟದ ಶಿಕ್ಷಣದ ಮೂಲಕ ಇಂದಿಗೂ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸತತ 10 ವರ್ಷಗಳಿಂದ ಶೇಕಡಾ 100ರ ಫಲಿತಾಂಶವನ್ನು ದಾಖಲಿಸುತ್ತಾ ಬಂದ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ. ಕೇವಲ ಪಾಠವಲ್ಲದೆ ಪಾಠೇತರ ಚಟುವಟಿಕೆಗಳಲ್ಲಿಯೂ ಅಗ್ರಮಾನ್ಯವೆನಿಸಿದ ಈ ಸಂಸ್ಥೆಯು ಹಲವಾರು ವಿಶೇಷತೆಗಳಿಂದ ಕೂಡಿದೆ. ನಿರಂತರ ೫ ವರ್ಷಗಳಿಂದ ಸಾಧಕಶಾಲಾ ಪ್ರಶಸ್ತಿಯನ್ನು ಪಡೆಯುತ್ತಿರುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರದ ಮುಖ್ಯಭಾಗದಲ್ಲಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಶಾಲಾವಾಹನದ ವ್ಯವಸ್ಥೆ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ನೀಡಿದೆ. ಶಿಸ್ತಿಗೆ ಮೊದಲ ಪ್ರಾಶಸ್ತ್ಯವಿರುವ ಈ ಸಂಸ್ಥೆಯಲ್ಲಿ ಸುಸಜ್ಜಿತ ಒಳಾಂಗಣ…
