ತೊಡಕುಗಳನ್ನು ಸವಾಲಾಗಿ ಸ್ವೀಕರಿಸಬೇಕು: ಪ್ರತಾಪಚಂದ್ರ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ದುಡಿಯುವವರಿಗೆ ಹತ್ತಾರು ತೊಡಕುಗಳು ಎದುರಾಗುವುದು ಸಹಜ. ಅವುಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನುಗ್ಗಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ. ಸಮಾಜ ಮುಖಿ ಕಾರ್ಯಗಳಲ್ಲಿ ಫಲಾಪೆಕ್ಷೆ ನುಸುಳದಿದ್ದರೆ ಮಾತ್ರ ಅವುಗಳು ಸೇವೆ ಎನಿಸುತ್ತವೆ. ಖಂಬದಕೋಣೆಯ ಪ್ರೀತಿ ಸೇವಾ ಸಂಸ್ಥೆ ಸಮುದಾಯದ ಶಿಕ್ಷಣ ಮತ್ತು ಆರೋಗ್ಯದ ಕಡೆಗೆ ತೋರುತ್ತಿರುವ ಕಾಳಜಿ ಅನುಕರಣೀಯ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಖಂಬದಕೋಣೆಯ ಪ್ರೀತಿ ಫೌಂಡೇಶನ್‌ನ ಎರಡನೆಯ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮಾತನಾಡಿ ಸೇವಾ ಕಾರ್ಯದಲ್ಲಿ ಹೊಂದಿರುವ ಪ್ರೀತಿಗೆ ಸಮಾನವಾದ ತೃಪ್ತಿ ಮಾಡಿದವನಿಗೆ ಲಭಿಸುತ್ತದೆ ಎಂದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಹಾಲಿ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಮಹೇಂದ್ರ ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಶಿವಮೊಗ್ಗ ಜಿಲ್ಲೆಯಲ್ಲಿ ದಕ್ಷ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹೆಸರು ಮಾಡಿರುವ ರವಿ. ಡಿ. ಚನ್ನಣ್ಣನವರ್ ಅವರು ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿವೆ. ಐಪಿಎಸ್ ಅಧಿಕಾರಿಯಾಗುವ ಮೊದಲು ಅವರು ಪಟ್ಟಿ ಪಡಿಪಾಟಲು, ಪೊಷಕರು ಮಗುವನ್ನು ಹೇಗೆ ಬೆಳೆಸಬೇಕು ಎಂಬ ಬಗ್ಗೆ ಅವರಿತ್ತ ಸಲಹೆ ಕೇಳಿದವರ ಮನದಲ್ಲಿ ಸ್ಥೂರ್ತಿ ಚಿಲುಮೆ ಉಕ್ಕಿ ಹರಿದರೇ ಅಚ್ಚರಿಪಡಬೇಕಿಲ್ಲ… ಕುಂದಾಪ್ರ ಡಾಟ್ ಕಾಂ ವಿಡಿಯೋ ನೋಡಿ ಅವರಾಡಿದ ಮಾತುಗಳ ಹೈಲೆಟ್ಸ್ ಇಲ್ಲಿದೆ. ದುಡ್ಡು ದೊಡ್ಡಪ್ಪನಾದರೇ, ವಿದ್ಯೆ ಅದರಪ್ಪ…. ಜಗತ್ತನ್ನು ಆಳುತ್ತಿರುವುದುವುದು ಹಣ ಅಲ್ಲ, ಗತ್ತಲ್ಲ, ಅಧಿಕಾರವಂತೂ ಅಲ್ಲವೇ ಅಲ್ಲ. ಅದು ಜ್ಞಾನ ಮಾತ್ರ. ಬಲಪಂಥೀಯರು, ಎಡಪಂಥೀಯರು, ಮಾವೋವಾದಿಗಳು ಎಂದರೆ ಯಾರು? ಅವರ ಸಿದ್ಧಾಂತಗಳೇನು ಎಂಬುದನ್ನು ಮೊದಲು ಮಕ್ಕಳಿಗೆ ತಿಳಿಸಿ ದೇಶಪ್ರೇಮ ಎಂದರೆ ಏನು? ರಾಜ್ಯವನ್ನು ಪ್ರೀತಿಸುವುದೇ ದೇಶವನ್ನು ಪ್ರೀತಿಸುವುದೇ ಅಥವಾ ಅದಕ್ಕೂ ಮೀರಿದ್ದೇ? ಅದನ್ನೂ ಹೇಳಿ ಕುಂದಾಪ್ರ ಡಾಟ್ ಕಾಂ ಮನೆಯಲ್ಲಿ ಪುಸ್ತಕ ೪ ಪುಸ್ತಕವನ್ನಾದರೂ ಇಡಿ. ಮಕ್ಕಳಿಗೆ ಎಲ್ಲವನ್ನೂ ಹೇಳಿಕೊಡುವ ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ ಹೆಮ್ಮಾಡಿ: ಅಧಿಕಾರ ಮತ್ತು ಜವಾಬ್ದಾರಿ ಎರಡನ್ನೂ ಸಮಾನವಾಗಿ ನಿರ್ವಹಿಸಿದಾಗ ಅಭಿವೃದ್ಧಿ. ಜೀವನದಲ್ಲಿ ಶಿಸ್ತು, ಬದ್ಧತೆಯನ್ನು ಅಳವಡಿಸಿಕೊಂಡಾಗ ಮಾತ್ರ ವ್ಯವಸ್ಥೆ ಸುಗಮ. ಸಮಾಜದಲ್ಲಿ ಅತ್ಯಂತ ತಳಮಟ್ಟದಲ್ಲಿ ಜೀವಿಸುತ್ತಿರುವ ಜನರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆ ತರುವಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ ತಾಲೂಕು ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕಟ್‌ಬೇಲ್ತೂರು ಶ್ರೀ ಭದ್ರಮಹಾಕಾಳಿ ಸಭಾಭವನದಲ್ಲಿ ಶನಿವಾರ ಜರಗಿದ ಹೆಮ್ಮಾಡಿ ಎ, ಕಟ್‌ಬೇಲ್ತೂರು ಮತ್ತು ದೇವಲ್ಕುಂದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಕಟ್‌ಬೇಲ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಅನ್ನಪೂರ್ಣ ಅವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಭದ್ರಮಹಾಕಾಳಿ ದೈವಸ್ಥಾನದ ಮೊಕ್ತೇಸರ ಹೆರಿಯಣ್ಣ ಶೆಟ್ಟಿ ಅವರು ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದರು.…
ಮೇ ಎರಡನೇ ಭಾನುವಾರದಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಕರುಣಾಮುಯಿ ತಾಯಿ ಹಾಗೂ ತಾಯಂದಿರ ದಿನದ ಕುರಿತಾಗಿ ಯುವ ಬರಹಗಾರ ಸಂದೇಶ ಶೆಟ್ಟಿ ಆರ್ಡಿ ಬರೆದ ಲೇಖನ ಮತ್ತೆ ಓದುಗರಿಗಾಗಿ… ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನದ ಬೆಳಕನ್ನು ಹರಿಸಲು ತಾಯಿ ಎನ್ನುವ ಎರಡಕ್ಷರದ ಮಹಾಮಂತ್ರವೇ ಸಾಕು ಎಂದು ಬಲ್ಲವರು ಹೇಳಿದ್ದಾರೆ. ನವ ಮಾಸ ಪರ್ಯಂತ ತನ್ನ ಉದರದಲ್ಲಿ ಹೊತ್ತು, ಲೋಕದ ಬೆಳಕನ್ನು ಕಾಣುವಂತೆ ಮಾಡಿದ ತಾಯಿಯ ಪ್ರೀತಿ, ವಾತ್ಸಲ್ಯ, ಒಲುಮೆ ಮನುಕುಲದ ಉನ್ನತಿಯ ಚಿಲುಮೆಯಾಗಿರುವುದಷ್ಟೇ ಅಲ್ಲದೆ ಅಸಂಖ್ಯಾತ ಕವಿಗಳ, ಕಲಾವಿದರ, ಮಹಾನ್ ವ್ಯಕ್ತಿಗಳ ಜೀವನದ ಉತ್ಸಾಹದ ಚಿಲುಮೆಯೂ ಆಗಿದೆ. ವಿಶ್ವದ ಅನೇಕ ರಾಷ್ಟ್ರಗಳು ತಮ್ಮ ದೇಶವನ್ನು ಹಾಗೂ ಭಾಷೆಯನ್ನು ತಾಯಿಯೊಂದಿಗೆ ಗುರುತಿಸಿಕೊಳ್ಳುತ್ತಾರೆ. ಭಾರತದ ವೈಶಿಷ್ಟ್ಯವೂ ಕೂಡ ಇದೆ ಆಗಿದೆ. ನದಿ, ಬೆಟ್ಟ, ಪರ್ವತ, ನಿಸರ್ಗವನ್ನೂ ಮಾತೆಯೆಂದೇ ಆರಾಧಿಸಲಾಗುತ್ತದೆ. ಕಠೋರ ವ್ಯಕ್ತಿತ್ವದ ವ್ಯಕ್ತಿಯೂ ಕೂಡ ನೋವಾದಾಗ ಅಮ್ಮಾ ಎಂದು ಉದ್ಗರಿಸುತ್ತಾನೆ. ತಾಯಿಯ ಮಹಿಮೆಯೇ ಅಂತದ್ದು, ಮನುಕುಲದ ಅಭ್ಯುದಯಕ್ಕೆ, ವಿಕಾಸಕ್ಕೆ ಕಾರಣೀಕರ್ತಳಾದ ಅಮ್ಮನ ನೆನಪು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯಶ್ರೀ ಸುಧಾಕರ ಮೊಗವೀರ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣಕುಮಾರ್ ಶೆಟ್ಟಿ ಕಡ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕುಂದಾಪುರದ ಸಹಾಯಕ ಕಮೀಷನರ್ ಚುನಾವಣಾಧಿಕಾರಿಯಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದ ಸದಸ್ಯ ಮೊಳಹಳ್ಳಿ ತಾಪಂ ಕ್ಷೇತ್ರ ಜಯಶ್ರೀ ಸುಧಾಕರ ಮೊಗವೀರ ಎರಡು ನಾಮಪತ್ರ ಸಲ್ಲಿಸಿದ್ದರೇ, ಉಪಾಧ್ಯಕ್ಷ ಸ್ಥಾನಕ್ಕೆ ನಾಡಾ ತಾಪಂ ಸದಸ್ಯ ಬಿಜೆಪಿಯ ಪ್ರವೀಣ ಕುಮಾರ್ ಕಡ್ಕೆ ಮೂರು ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ ಮೂರು ಗಂಟೆಯ ವರೆಗೆ ಯಾವುದೇ ಆಕ್ಷೇಪ ವ್ಯಕ್ತವಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಾಗಿರುವ ಬಗ್ಗೆ ಘೋಷಿಸಿದರು. ಕುಂದಾಪುರ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿದ್ದು ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಯಶಸ್ಸಿಯಾಗಿ ಅನಿಷ್ಠಾನಗೊಳಿಸುವಲ್ಲಿ ಎಲ್ಲರೂ ಒಗ್ಗಟ್ಟಾಗಿ ದುಡಿಯುವುದಾಗಿ ನೂತರ ಅಧ್ಯಕ್ಷ ಉಪಾಧ್ಯಕ್ಷರು ತಿಳಿಸಿದ್ದಾರೆ. ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತ್ರಾಸಿ ಬಳಿ ಬೈಕ್ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಫಘಾತದಲ್ಲಿ ತಾಯಿ ಮಗಳು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಬೈಂದೂರ ಸಮೀಪದ ಮೂಡನಗದ್ದೆ ಸರೋಜಾ ಗಾಣಿಗ (35) ಹಾಗೂ ಆಕೆಯ ಮಗಳು ಮೃತಪಟ್ಟಿದ್ದು, ಮೃತರ ಸಹೋದರ ಬೈಕ್ ಸವಾರ ವಿಶ್ವನಾಥ ಗಾಣಿಗ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಘಟನೆಯ ವಿವರ: ವಿಶ್ವನಾಥ ಗಾಣಿಗ ತನ್ನ ಬೈಕಿನಲ್ಲಿ ಸಹೋದರಿ ಸರೋಜಾ ಹಾಗೂ ಆಕೆ ಮಗಳನ್ನು ಕೂರಿಸಿಕೊಂಡು ಕುಂದಾಪುರದ ಆಸ್ಪತ್ರೆಗೆ ತೆರಳುತ್ತಿದ್ದರು. ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದ ಬಳಿ ಪ್ರಯಾಣಿಕರನ್ನು ಹತ್ತಿಸಲು ರಸ್ತೆಯ ಮೇಲೆಯೆ ನಿಂತಿದ್ದ ಬಸ್ಸನ್ನು ಹಿಂದಿಕ್ಕಿ ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಬಸ್ಸಿನ ಬಲಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ ತಾಯಿ ಮಗು ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಎದುರಿಗೆ ಇದ್ದ ಟ್ಯಾಂಕರ್ ತಾಯಿ ಮಗುವಿನ ಮೇಲೆ ಹರಿದಿದ್ದರಿಂದ ಈರ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಸವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಯುವ, ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕ್ರತಿಕ ಸಂಸ್ಥೆಯಾದ ಯುಸ್ಕೊರ್ಡ್ ಟ್ರಸ್ಟ್(ರಿ) ಬೈಂದೂರು ಇದರ ಪ್ರಾಯೋಜಕತ್ವದಲ್ಲಿ ಸಾಂಸ್ಕ್ರತಿಕ ಸಂಸ್ಥೆ ಸುರಭಿ(ರಿ) ಬೈಂದೂರು ಸಹಯೋಗದಲ್ಲಿ ರಂಗ ಸುರಭಿ 23ದಿನಗಳ ರಂಗ ತರಬೇತಿ ಶಿಬಿರವನ್ನು ಹಿರಿಯ ರಂಗನಟ ನಿರ್ದೇಶಕ ರವೀಂದ್ರ ಕಿಣಿ ಉಪ್ಪುಂದ ಇವರು ಉದ್ಘಾಟಿಸಿದರು. ಶಿಬಿರದ ಪ್ರಧಾನ ನಿರ್ದೇಶಕರಾದ ರಂಗ ತಜ್ಞ ಡಾ|| ಶ್ರೀಪಾದ ಭಟ್ , ಶ್ರೀ ಗಣೇಶ ಉಡುಪಿ, ಪ್ರಥ್ವಿನ್ ಉಡುಪಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಶಿವರಾಮ ಕೊಠಾರಿ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ಉಪಸ್ಥಿತರಿದ್ದು, ಸುರಭಿಯ ನಿರ್ದೇಶಕರ ಸುಧಾಕರ. ಪಿ ಬೈಂದೂರು ನಿರೂಪಿಸಿ, ಗಣಪತಿ ಹೋಬಳಿದಾರ್ ವಂದಿಸಿದರು. ಶಿಬಿರದಲ್ಲಿ ಸುಮಾರು 25 ಜನ ಯುವ ಕಲಾವಿದರು ಹಾಗೂ ಕಿರಿಯ ಕಲಾವಿದ ಹಾಗೂ ಕಲಾವಿದೆಯರು ತರಬೇತಿ ಪಡೆಯುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟ ಪಂಚಾಯಿತಿ ವ್ಯಾಪ್ತಿಯ ಗಿಳಿಯಾರು ಪರಿಸರದಲ್ಲಿರುವ ಹರಿಯುವ ನೀರಿನ ಸೂಲಡ್ಪು ಹೊಳೆಯ ಪಕ್ಕದಲ್ಲಿ ಸುಮಾರು 8 ಎಕರೆ ಹಡಿಲು ಭೂಮಿಯಲ್ಲಿ ಕಳೆದ ಕೆಲವು ದಿನಗಳಿಂದ ವಾಣಿಜ್ಯ ಉದ್ದೇಶಕ್ಕೆ ಮಣ್ಣು ತುಂಬಿಸಿ ಎತ್ತರಿಸುವ ನಡೆಸುತ್ತಿದ್ದು, ಇದರಿಂದ ನೆರೆ ಹಾವಳಿ ಮತ್ತಿತರ ಪ್ರಾಕೃತಿಕ ಸಮಸ್ಯೆಗಳು ಮುಂದೆ ಎದುರಾಗಲಿದೆ ಎಂದು ಗಿಳಿಯಾರಿನ ಸ್ಥಳೀಯರು ಹಡೋಲಿಗೆ ಮಣ್ಣು ತುಂಬಿಸುತ್ತಿದ್ದ ಲಾರಿಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಕಳೆದ ಎರಡು ವಾರಗಳಿಂದ ಗಿಳಿಯಾರಿನ ಸೂಲಡ್ಪು ಹೊಳೆಯ ಹಡಿಲಿ ಭೂಮಿಯಲ್ಲಿ ನಿರಂತರವಾಗಿ ಮಣ್ಣು ತುಂಬಿಸುವ ಕಾರ‍್ಯ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಕೋಟ ಪಂಚಾಯಿತಿ ಮಾಹಿತಿ ನೀಡಿದ್ದರು. ಆ ಸಂದರ್ಭ ಕೋಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಭಾಷ್ ಖಾರ್ವಿ, ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್ ಅವರು ಸ್ಥಳೀಯರೊಂದಿಗೆ ಆಗಮಿಸಿ ಕಾಮಗಾರಿಯ ಬಗ್ಗೆ ಮಾಹಿತಿ ಕೇಳಿದ್ದರು. ಸ್ಥಳ ಖರೀದಿಸಿ ಮಣ್ಣು ತುಂಬಿಸುತ್ತಿರುವ ಮಾಲಕರು ಹೊಳೆಯ ನೀರು ಹೋಗಲು ಸಮಸ್ಯೆಯಾಗದಂತೆ, ನೆರೆ ಹಾವಳಿಯಾಗದಂತೆ ವ್ಯವಸ್ಥೆ ಕಲ್ಪಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ರೈತರು ಮಳೆ ಬರುವ ಮುಂಚಿತವಾಗಿ ಮಣ್ಣನ್ನು ಸಂಗ್ರಹಿಸಿ ಇಟ್ಟುಕೊಂಡರೆ ಯಂತ್ರ ನಾಟಿ ಮಾಡಲು ಮಾಡಲು ಅನುಕೂಲವಾಗುತ್ತದೆ ಎಂದು ಹೊಸಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಹೇಳಿದರು. ಅವರು ಹೊಸಾಡು ದೇವಸ್ಥಾನದ ಆವರಣದಲ್ಲಿ ನಬಾರ್ಡ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ತೆಂಗು ಬೆಳೆಗಾರರ ಸಂಘ ಇವರ ಆಶ್ರಯದಲ್ಲಿ ನಡೆದ ಯಂತ್ರ ನಾಟಿ ಮಣ್ಣು ಸಂಗ್ರಹ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಈಶ್ವರ ನಾಯ್ಕ್ ಇವರು ರೈತರಿಗೆ ಯಂತ್ರ ನಾಟಿ ಮತ್ತು ಇದರ ಉಪಯೋಗದ ಬಗ್ಗೆ ಮಾಹಿತಿ ನೀಡಿ ಹೆಚ್ಚು ಇಳುವರಿ ಕಡಿಮೆ ಖರ್ಚು ಯಂತ್ರ ನಾಟಿಯಿಂದ ಪ್ರಯೋಜನವಾಗುತ್ತದೆ. ಸ್ಥಳೀಯ ಕೃಷಿಕರಾದ ಕೃಷ್ಣಮೂರ್ತಿ ನಾವಡ, ತೆಂಗು ಬೆಳೆಗಾರರ ಸಂಘದ ನರಸಿಂಹ ಗಾಣಿಗ ಹರೆಗೋಡು ಮೊದಲಾದವರು ಉಪಸ್ಥಿತರಿದ್ದರು. ಸ್ಥಳೀಯ ಕೃಷಿಕ ಗಿರಿಜಾ ದೇವಾಡಿಗ ಸ್ವಾಗತಿಸಿದರು. ರಾಮಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2015-16ನೇ ಶೈಕ್ಷಣಿಕ ವರ್ಷದಲ್ಲಿ ನೂರು ಪ್ರತಿಶತ ಫಲಿತಾಂಶವನ್ನು ದಾಖಲಿಸುವ ಮೂಲಕ ಸಂಸ್ಥೆಯ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದೆ. ಕೇಂದ್ರಿಯ ಪಠ್ಯಕ್ರಮ ಆಧಾರಿತ ಶಿಕ್ಷಣದಲ್ಲಿ ಸತತವಾಗಿ ಹದಿಮೂರನೆಯ ಬಾರಿಗೆ ಶೇ. 100 ಫಲಿತಾಂಶವನ್ನು ದಾಖಲಿಸಿದ ತಾಲ್ಲೂಕಿನ ಏಕೈಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಐಸಿಎಸಿ ಪಠ್ಯಕ್ರಮದಲ್ಲಿ ಈ ಶೈಕ್ಷಣಿಕ ಸಾಲಿನ ಪರೀಕ್ಷೆಗೆ ಹಾಜರಾದ 62 ವಿದ್ಯಾರ್ಥಿಗಳಲ್ಲಿ , 56 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲೂ, 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲೂ ತೇರ್ಗಡೆಯಾಗಿದ್ದಾರೆ. ಕುಮಾರ ಶೋಧನ್ ಟಿ. ಶೆಟ್ಟಿ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಬದಲಾಗುತ್ತಿರುವ ಶೈಕ್ಷಣಿಕ ಕಾಲಘಟ್ಟದಲ್ಲಿ ಯಾವುದೇ ರಾಜಿಯಿಲ್ಲದೇ ಮೂಲ ಪರಂಪರೆಯನ್ನು ಉಳಿಸಿಕೊಂಡು ಆಧುನಿಕ ಶಿಕ್ಷಣದಲ್ಲಿ ತನ್ನದೇ ಆದ ಅದ್ವಿತೀಯ ಛಾಪನ್ನು ಮೂಡಿಸಿಕೊಂಡು ಕಳೆದ ಹತ್ತೊಂಬತ್ತು ವರ್ಷಗಳಿಂದ ಕರ್ನಾಟಕ ರಾಜ್ಯದ ಅಗ್ರಪಂಕ್ತಿಯ ವಿದ್ಯಾಲಯವಾಗಿ ಬೆಳೆದು ಬಂದಿದೆ. ರಾಜ್ಯದ ಹಾಗೂ…
