Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ ದೀಪ ಬೆಳಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರ ಮಹತ್ವ ಅವರ ಸೇವೆ ಮತ್ತು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರದ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕೆಲವು ವಿದ್ಯಾರ್ಥಿಗಳು ಶಿಕ್ಷಕರ ಪಾತ್ರವನ್ನು ನಿರ್ವಹಿಸಿ ತರಗತಿಗಳನ್ನು ನಡೆಸುವ ಮೂಲಕ ವಿಶೇಷ ಅನುಭವ ಪಡೆದರು. ಶಿಕ್ಷಕರಿಗಾಗಿ ವಿವಿಧ ಆಟಗಳು ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋದಿಸುವವರಲ್ಲಿ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಾರ್ಗದರ್ಶಕರು ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಕಾಲೇಜಿನ ಪ್ರಾಂಶುಪಾಲರಾದ ಮನೋಜ್ ಕುಮಾರ್ ಆಡಳಿತ ನಿರ್ದೇಶಕರಾದ ಹರೀಶ್ ಮರವಂತೆ, ವಿದ್ಯಾರ್ಥಿಗಳು, ಪೋಷಕರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತಮ್ಮಲ್ಲಿರುವ ಸಂಪನ್ಮೂಲಗಳನ್ನು ಈ ಸಮಾಜಕ್ಕೆ ಧಾರೆ ಎರೆದು ಸಮರ್ಪಿಸಿಕೊಳ್ಳುವ ಸಂಪತ್ ಕುಮಾರ್‌ರಂತಹ ವ್ಯಕ್ತಿಗಳು ಈ ಸಮಾಜದ ಆಸ್ತಿಗಳಾಗಿ ಹೊರೆಹೊಮ್ಮುತಾರೆ. ಇದು ವಿ. ಶೈನ್ ಕೊಚಿಂಗ್ ಸೆಂಟರ್‌ಗಳ ಮೂಲಕ ಒಂದಿಷ್ಟು ಯುವ ಮನಸ್ಸುಗಳಿಗೆ ಉದ್ಯೋಗ ಸೃಷ್ಠಿಯ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಶ್ರೀ ಕೃಷ್ಣ ಪ್ರಸಾದ್ ಪೌಂಡೇಶನ್‌ನ ಪ್ರಾಯೋಜಕತ್ವದಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ನೇತೃತ್ವದಲ್ಲಿ ರಾಜ್ಯ ಸರ್ಕಾರದಿಂದ ಸರಿಸುಮಾರು 15,000 ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕ, ದೈಹಿಕ ಶಿಕ್ಷಕ ಮತ್ತು ಕಂಪ್ಯೂಟರ್ ಶಿಕ್ಷಕರ ಹುದ್ದೆಗಳನ್ನು ಆಹ್ವಾನಿಸಿದ್ದು , ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಪೂರ್ವಭಾವಿಯಾಗಿ ಉಚಿತ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ಸರಕಾರಿ ಇಲಾಖೆಯಲ್ಲಿ ಅತಿ ಹೆಚ್ಚು ಉತ್ತರ ಕರ್ನಾಟಕದ ಜನ ಆಯ್ಕೆಗೊಳ್ಳುವ ಇಂದಿನ ಕಾಲಘಟ್ಟದಲ್ಲಿ ನಮ್ಮ ಅವಿಭಜಿತ ಜಿಲ್ಲೆಗಳ ಉದ್ಯೋಗಾಂಶಿಗಳಿಗೆ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಅವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು ಕಲಿಯದಿದ್ದರೂ ತನ್ನೂರಿನ ಮಕ್ಕಳು ಅದರಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ತನ್ನೂರಿನಲ್ಲಿ ಒಂದು ಶಾಲೆಯನ್ನು ತೆರೆದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಹರೇಕಳ ಹಾಜಬ್ಬರವರನ್ನು ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾನು ಆ ಸಂದರ್ಭದಲ್ಲಿ ಎದುರಿಸಿದ ಕಷ್ಟಗಳು ಹಾಗೂ ತನ್ನೂರಿನ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡುತ್ತಿದ್ದ ಕಷ್ಟವನ್ನು ನೋಡಲಾರದೆ ನಾನು ವಿದ್ಯಾ ಸಂಸ್ಥೆಯನ್ನು ತೆರೆದಿರುವುದಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ತನಗೆ ಸಹಾಯ ಹಸ್ತವನ್ನು ಚಾಚಿದ ಎಲ್ಲರನ್ನು ಸ್ಮರಿಸಿಕೊಂಡರು. ಹಾಗೂ ಇಂದು ಇಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಿಂದ ಗೌರವಿಸಲ್ಪಡುತ್ತಿರುವುದು ನನ್ನ ಸೌಭಾಗ್ಯವೆಂದು ತಿಳಿಸಿದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದ ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಶಿಕ್ಷಣಕ್ಕಾಗಿ ತನ್ನ ಜೀವನವನ್ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ. ಸಮಾಜದಲ್ಲಿ ಉತ್ತಮ ವಾತಾವರಣ ಸೃಷ್ಠಿಸಲು ಶಿಕ್ಷಕರು ವಹಿಸುವ ಪಾತ್ರ ಅತ್ಯಮುಲ್ಯವಾದದ್ದು. ತಮ್ಮ ಜೀವನದುದ್ದಕ್ಕೂ ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವನ್ನು ಮೂಡಿಸಿ ಜ್ಞಾನಾರ್ಜನೆಯನ್ನು ಎರಕ ಹೊಯ್ಯುವ ಶಿಕ್ಷಕರುಗಳು ಮಕ್ಕಳ ಪಾಲಿಗೆ ಆ ದೇವರು ಕೊಟ್ಟ ವರ. ಇಂತಹ ಶಿಕ್ಷಕರಿಗೆ ಗೌರವ ಸೂಚಿಸಲು ಶಿಕ್ಷಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಹಾಗೂ ಗೀತಾನಂದ ಫೌಂಡೇಶನ್ ರಿ. ಕೋಟ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಟಿವಿ, ಮೊಬೈಲ್‌ ಮತ್ತು ಡಿಜಿಟಲ್‌ ಪರದೆಗಳಿಂದ ಮಕ್ಕಳನ್ನು ಸಾಧ್ಯವಾದಷ್ಟು ದೂರವಿಟ್ಟು, ಪ್ರಕೃತಿಯ ಮಡಿಲಿನಲ್ಲಿ ಸ್ವಚ್ಛಂದವಾಗಿ ಬೆರೆಯಲು ಅವಕಾಶ ನೀಡಬೇಕು. ಮಣ್ಣು, ಗಿಡ-ಮರಗಳ ಒಡನಾಟ ಹಾಗೂ ಹೊರಾಂಗಣ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಶೀಲತೆ ಹೆಚ್ಚಿಸಿ, ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ ಹಾಕುತ್ತವೆ,” ಎಂದು ರಂಗಭೂಮಿ ಹಾಗೂ ಚಿತ್ರನಟಿ ಸಂಯುಕ್ತ ಹೊರನಾಡು ಹೇಳಿದರು. ಅವರು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದ್ದ ‘ಮುದ್ದಕೃಷ್ಣ ಸ್ಪರ್ಧೆ’ಯನ್ನು ಸಾಂಪ್ರದಾಯಿಕವಾಗಿ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. “ಇಂದಿನ ವೇಗದ ಜೀವನಶೈಲಿಯಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬೇರುಗಳಿಂದ ದೂರವಾಗುತ್ತಿದ್ದಾರೆ. ಇಂತಹ ಸ್ಪರ್ಧೆಗಳು ಬರಿ ಮನರಂಜನೆಗೆ ಸೀಮಿತವಾಗದೆ, ಪೌರಾಣಿಕ ಪಾತ್ರಗಳ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುತ್ತವೆ. ಸಂಸ್ಕೃತಿ ಮತ್ತು ಪ್ರಕೃತಿಯನ್ನು ಬೆಸೆಯುವ ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಸಂಸ್ಥೆಯ ಶ್ರಮ ನಿಜಕ್ಕೂ ಶ್ಲಾಘನೀಯ,” ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯು. ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅಮಿತಾ ಶೆಟ್ಟಿ ಮಾತನಾಡಿ, ಪ್ರತಿಭೆಗೆ ವೇದಿಕೆ ಸಿಕ್ಕಾಗ ಆತ್ಮ ವಿಶ್ವಾಸ ಅರಳುತ್ತದೆ.ಅನ್ವೇಷಣೆ, ಅಭಿವ್ಯಕ್ತಿ, ಧೈರ್ಯ ಈ ಮೂರು ಒಂದಾಗಿ ಸೇರಿದಾಗ ಸಾಧನೆಯಾಗಿ ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿ ಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ. ಕೆ. ರಾಧಾಕೃಷ್ಣ ಶೆಣೈಯವರುವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ರಸಾಯನಶಾಸ್ತ್ರ ಉಪನ್ಯಾಸಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ಹಾಗೂ ಅತ್ಯಂತ ಸಂಭ್ರಮದ ಕೃಷ್ಣಾ ಜನ್ಮಾಷ್ಟಮಿಯನ್ನು ಆಯೋಜಿಸಲಾಗಿತ್ತು. ದಿನವಿಡೀ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಬ್ಬದ ಮೆರುಗನ್ನು ಇಮ್ಮಡಿಗೊಳಿಸಿದವು. ಆಕರ್ಷಕ ಮೆರವಣಿಗೆ, ಚಂಡೆ ವಾದನ ಹಾಗೂ ಹುಲಿವೇಷ:ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಆವರಣದಿಂದ ಭವ್ಯ ಮೆರವಣಿಗೆ ಆರಂಭಗೊಂಡಿತು. ಚಂಡೆ ಮದ್ದಳೆಗಳ ಆಕರ್ಷಕ ನಾದ, ಕೃಷ್ಣ ಭಜನೆ, ವರ್ಣರಂಜಿತ ದಾಂಡಿಯಾ ನೃತ್ಯ ಹಾಗೂ ಬಾಲಕೃಷ್ಣನ ವೇಷಧರಿಸಿದ ಪುಟ್ಟ ಮಕ್ಕಳ ನಗುಮುಖ ಎಲ್ಲರ ಗಮನ ಸೆಳೆಯಿತು. ಕರಾವಳಿಯ ವಿಶಿಷ್ಟ ಸಂಸ್ಕೃತಿಯ ಸಂಕೇತವಾದ ಹುಲಿವೇಷ ಧರಿಸಿದ ವಿದ್ಯಾರ್ಥಿಗಳು ಚಂಡೆಯ ನಾದಕ್ಕೆ ತಕ್ಕಂತೆ ಕುಣಿದು ನೆರೆದಿದ್ದವರನ್ನು ರೋಮಾಂಚನಗೊಳಿಸಿದರು. ಸಡಗರದ “ಮೊಸರು ಕುಡಿಕೆ” ಉತ್ಸವ:ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ “ಮೊಸರು ಕುಡಿಕೆ” ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ಎತ್ತರದಲ್ಲಿ ಕಟ್ಟಲಾಗಿದ್ದ ಮೊಸರು ಕುಡಿಕೆಯನ್ನು ಒಡೆಯಲು ವಿದ್ಯಾರ್ಥಿಗಳು ಪೈಪೋಟಿಗೆ ಬಿದ್ದು ಮಾನವ ಪಿರಮಿಡ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಇತಿಹಾಸ ಪ್ರಸಿದ್ಧ ದೇಗುಲವಾದ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ಅಭಿವೃದ್ಧಿ ಕಾರ್ಯದ ನಿಮಿತ್ತ ಸಭಾಭವನ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗಾಗಿ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಇವರ ಬಳಿ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಮನವಿ ನೀಡಿದರು. ಈ ವೇಳೆ ಮಾತನಾಡಿದ ಕುಂದರ್ ರಾಜ್ಯ ಸರಕಾರದ ಧಾರ್ಮಿಕದತ್ತಿ ಇಲಾಖೆಗೆ ಸಂಬಂಧಿಸಿದ ದಾಖಲೆಯನ್ನು ಒದಗಿಸಿದ್ದು ಶೀಘ್ರದಲ್ಲೇ ಸರಕಾರದ ಗಮನ‌ ಸೆಳೆದು ಅನುದಾನ ಬಿಡುಗಡೆಯಾಗುವಲ್ಲಿ ಸಹಕರಿಸಲು ಮನವಿ ನೀಡಿದರು. ಈ ವೇಳೆ ಮಾತನಾಡಿದ ಡಾ‌.ಆರತಿ ಕೃಷ್ಣ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿ. ತಿಮ್ಮ ಪೂಜಾರಿ, ದೇಗುಲದ ಟ್ರಸ್ಟಿಗಳಾದ ಸುಭಾಶ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ರತನ್ ಐತಾಳ್, ಶಿವ ಪೂಜಾರಿ, ಜ್ಯೋತಿ ಡಿ. ಕಾಂಚನ್ ಸೇರಿದಂತೆ ಅನೇಕರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಸದಸ್ಯರು ವಿವೇಕ ಪದವಿಪೂರ್ವ ಕಾಲೇಜಿನ ವಿಶ್ರಾಂತ ಹಿಂದಿ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಅವರ ಪಾರಂಪಳ್ಳಿ ಗೆಂಡೆ ಕೆರೆಯ ಮನೆಗೆ ತೆರಳಿ ಗೌರವ ಸಮರ್ಪಣೆ ನಡೆಸಿದರು. ರೋಟರಿ ಅಧ್ಯಕ್ಷೆ ಕುಸುಮಾ ಮನೋಜ್, ರೋಟರಿ ಸದಸ್ಯರುಗಳಾದ ಸಿ. ಚಂದ್ರ ನಾಯರಿ, ಮುರಳೀಧರ ನಾಯರಿ, ಬಾಲಕೃಷ್ಣ ಪೂಜಾರಿ, ಲೀಲಾವತಿ ಗಂಗಾಧರ, ಜಿ ಗಣೇಶ್, ಸಿ. ವೆಂಕಟೇಶ್ ಭಟ್, ಮನೋಜ್ ಕುಮಾರ್, ಕೆ. ಸುನಿಲ್, ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಜಿಲ್ಲೆ 3182ರಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅತ್ಯುತ್ತಮ ತಂಡಗಳಲ್ಲಿ ಒಂದಾಗಿ ಮೂಡಿಬಂದಿದ್ದು, ಉತ್ತಮ ಕ್ಲಬ್ ಪ್ರಶಸ್ತಿ ಸಹಿತ ಒಟ್ಟು 23 ಪ್ರಶಸ್ತಿಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದೆ. ಹಾಸನದಲ್ಲಿ ನಡೆದ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3182ರ ಜಿಲ್ಲಾ ಸಮ್ಮೇಳನದಲ್ಲಿ 2025-26ನೇ ಸಾಲಿನ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅವರು 2025-26ನೇ ಸಾಲಿನ ಗಂಗೊಳ್ಳಿ ರೋಟರಿ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. 2026-27ನೇ ಸಾಲಿನ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ, ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ ಪೆರಾಜೆ ಮತ್ತು ಎಂ. ನಾಗೇಂದ್ರ ಪೈ, ರೋಟರಿ ಜಿಲ್ಲೆ 3182ರ ಪದಾಧಿಕಾರಿ, ವಿವಿಧ ವಲಯಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಲಯ-1ರ ಸಣ್ಣ ಕ್ಲಬ್ ವರ್ಗದಲ್ಲಿ ಸಮುದಾಯ ಸೇವೆ, ಸಹಭಾಗಿತ್ವ, ನೀರು, ನೈರ್ಮಲ್ಯ ಮತ್ತು ಸ್ವಚ್ಛತೆ, ತಾಯಿ ಮತ್ತು ಮಕ್ಕಳ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಯುವಜನ ಕಲ್ಯಾಣ,…

Read More