ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ ಮತ್ತು ಶಾಲಾ ಶಿಕ್ಷಣ ಇಲಾಖೆ ಬೈಂದೂರು ಇವರ ಆಶ್ರಯದಲ್ಲಿ ವಂಡ್ಸೆ ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ 14 ಮತ್ತು 17ರ ವಯೋಮಿತಿ ಬಾಲಕ, ಬಾಲಕಿಯರ ಕಬ್ಬಡಿ ಪಂದ್ಯಾಟ ಮೂಕಾಂಬಿಕಾ ಕ್ರೀಡಾಂಗಣ ಮಾವಿನಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಂಡ್ಲೂರು ಠಾಣಾಧಿಕಾರಿಗಳಾದ ನಿರಂಜನ್ ಗೌಡ ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ನಾಯಕ ನೇರಳಕಟ್ಟೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀಶ ಶೆಟ್ಟಿ, ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಾಡ್ಕಟು ಅಶೋಕ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಕುಶಲ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಇಂಟರ್ಯಕ್ಟ್ ಕ್ಲಬ್ ಚೇರಮಾನ್ ಶೇಖರ ಎನ್. ಶೆಟ್ಟಿ, ಪ್ರಭಾರ ದೈಹಿಕ ಶಿಕ್ಷಣ ಅಧಿಕಾರ ಅರುಣ ಕುಮಾರ್ ಶೆಟ್ಟಿ, ರೋಟರಿ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ,ದೈಹಿಕ ಶಿಕ್ಷಣ ಶಿಕ್ಷಕ ಸತೀಶ ಕುಮಾರ್ ಶೆಟ್ಟಿ ಉಪಸ್ಥಿತಿತರಿದರು. ಮುಖ್ಯೋಪಾಧ್ಯಾಯಿನಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆದರ್ಶ ಆಸ್ಪತ್ರೆ ಉಡುಪಿ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾI ಎಸ್. ರಾಧಾಕೃಷ್ಣನ್‌ರ ಜನ್ಮ ಜಯಂತಿಯ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ಅವರು ಭಾಜನರಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಮಗುವಿಗೆ ಹಿತವಲ್ಲದ ಆಹಾರವನ್ನು ತಾಯಿ ಅಡುಗೇ ಮನೆಯಲ್ಲಿ ಕಾಣದಂತೆ ಅಡಗಿಸಿಡುವಂತೆ, ಪ್ರಕೃತಿಯು ಜೀವಿಗೆ ಹಿತವಲ್ಲದ ಆಹಾರಗಳನ್ನು ನಮ್ಮಿಂದ ಆದಷ್ಟು ದೂರವಿಟ್ಟಿರುತ್ತದೆ. ನಮಗೆ ಹಿತವಾದದ್ದು ರಮಣೀಯವಾದರೆ, ಪ್ರಿಯ ಆಹಾರವನ್ನು ಮರಣೀಯ ಎನ್ನಬಹುದಾಗಿದೆ. ಹಾಗಾಗಿ ಪ್ರಿಯ ಹಾಗೂ ಹಿತ ಆಹಾರಗಳ ವ್ಯತ್ಯಾಸವನ್ನು ಗಮನಿಸಿ ಸ್ವೀಕರಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಔಷಧದ ಅಂಗಡಿಯಲ್ಲಿ ಅನೇಕ ಔಷಧಗಳಿರುತ್ತವೆ. ಆದರೆ ಎಲ್ಲವೂ ನಾವು ಸೇವಿಸಲು ಇರುವುದಲ್ಲ. ಹಾಗೆಯೇ ಸೃಷ್ಟಿಯಲ್ಲಿ ಅನೇಕ ಬಗೆಯ ಆಹಾರವಿದೆ. ಆದರೆ ಎಲ್ಲವೂ ನಮಗೆ ಸೂಕ್ತವಲ್ಲ. ನಮಗೆ ಸೂಕ್ತವಾದ ಆಹಾರವನ್ನು ಆಯುರ್ವೇದದಲ್ಲಿ ಹಿತಾಹಾರ ಎನ್ನಲಾಗಿದ್ದು, ಪ್ರಕೃತಿ ನಮಗಾಗಿ ಕೊಟ್ಟಿರುವುದನ್ನು ನಿಹಿತ ಎಂದರೆ, ಶಾಸ್ತ್ರಗಳು ಸೂಚಿಸಿರುವುದನ್ನು ವಿಹಿತ ಎಂದು ಕರೆಯಲಾಗಿದೆ ಎಂದು ಹಿತ – ಅಹಿತ ಆಹಾರಗಳ ಕುರಿತಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನವು ಕೇವಲ ಸಾಮಾಜಿಕ ಸೇವೆಯಲ್ಲ. ಜೀವವೊಂದನ್ನು ಉಳಿಸುವ ಮಹತ್ವದ ಮಾನವೀಯ ಕಾರ್ಯವಾಗಿದೆ. ಯುವಜನರು ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕುಂದಾಪುರದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಅಧ್ಯಕ್ಷ ಜಯಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಬಿಹೈವ್ ಕನ್ವೆನ್ನನ್ ಹಾಲ್‌ನಲ್ಲಿ ಗುರುವಾರ ನಡೆದ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯವು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದಲ್ಲಿ ಯುವ ರೆಡ್‌ಕ್ರಾಸ್ ಘಟಕಗಳ ವತಿಯಿಂದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಯುವ ರೆಡ್‌ಕ್ರಾಸ್ ಘಟಕದ ಪಾತ್ರ ಮಹತ್ವದ್ದಾಗಿದೆ ಎಂದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಆಸೀಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಬಗ್ಗೆ ಮಾತ್ರ ಯೋಚಿಸದೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಶೋಕ್ ತೆಕ್ಕಟ್ಟೆ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ದೊರಕಿದೆ. ಬೆಂಗಳೂರಿನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಶೋಕ್ ತೆಕ್ಕಟ್ಟೆ ಅವರು ಕಳೆದ 24 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ, ಸಾಂಸ್ಕತಿಕ ವಿಕಸನ, ಕಲಿಕೆಯಲ್ಲಿ ನಾವಿನ್ಯತೆಯ ಶೋಧ, ಹೊಸ ಹೊಸ ಪ್ರಯೋಗಗಳ ಅನುಷ್ಠಾನದ ಮೂಲಕ ಶಾಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಮೂಡಿಸುವಲ್ಲಿ ಶ್ರಮಿಸಿದ್ದಾರೆ. ಇಂಗ್ಲೀಷ್ ಭಾಷೆಯ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ ಬೇರೆ ಬೇರೆ ಶಾಲಾ ಶಿಕ್ಷಕರಿಗೂ ತರಬೇತಿ ನೀಡುತ್ತಿದ್ದಾರೆ. ರಾಜ್ಯದಲ್ಲೇ ಮೊದಲ ಬಾರಿಗೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಲ್ಯಾಂಗ್‌ಜ್ ಲ್ಯಾಬ್ ಸ್ಥಾಪನೆ, ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆ, ಪ್ರತಿ ದಿನದ ಬೆಳಿಗ್ಗೆ ಸ್ಪೋಕನ್ ಇಂಗ್ಲಿಷ್ ತರಗತಿ, 2015 ರಿಂದ ಪ್ರತಿ ದಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಸದಸ್ಯತ್ವವನ್ನು ಮತ್ತಷ್ಟು ಬಲಪಡಿಸುವುದು, ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವುದು ಹಾಗೂ ಸಮಾಜದಲ್ಲಿ ರೋಟರಿಯ ಸೇವಾ ಕಾರ್ಯಗಳ ಕುರಿತು ಉತ್ತಮ ಸಾರ್ವಜನಿಕ ಅಭಿಪ್ರಾಯ ಮೂಡಿಸುವ ಉದ್ದೇಶದಿಂದ “ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ” ವಿಷಯದ ಕುರಿತು ಝೋನಲ್ ಸೆಮಿನಾರ್ ಬ್ರಹ್ಮಾವರ ಹೋಟೆಲ್ ಆಶ್ರಯದ ಆನಂದ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು P.D.G. ರಾಜಾರಾಮ್ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು, ರೋಟರಿಯ ಬೆಳವಣಿಗೆಗೆ ಸದಸ್ಯತ್ವ ವಿಸ್ತರಣೆ ಹಾಗೂ ಉತ್ತಮ ಸಾರ್ವಜನಿಕ ಸಂಪರ್ಕ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬ ರೋಟೇರಿಯನ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಸಮಾಜದ ಹೆಚ್ಚಿನ ಜನರಿಗೆ ತಲುಪಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ಹೇಳಿದರು. ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಬನ್ನಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಸಂತ್ ಹೋಬ್ಳಿದಾರ್, DG 2027–28, ಅಲೆನ್ ಲೂವಿಸ್, DG 2028–29, ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ, ಝೋನಲ್ ಲರ್ನಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂದೇ ಮಾತರಂ ಗೀತೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟ ಪಡಿಸಿದೆ. ಈ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಾಪುರ ಮಂಡಲ ಬಿಜೆಪಿ ಅವರು ವಂದೇ ಮಾತರಂ ವಿಚಾರದಲ್ಲಿ ಪಾದಯಾತ್ರೆ ಮಾಡುವುದಕ್ಕೆ ಕಾಂಗ್ರೆಸ್ ಪಕ್ಷದ ಯಾವುದೇ ವಿರೋಧವಿಲ್ಲಾ. ಆದರೆ ವಂದೇ ಮಾತರಂ ವಿಚಾರವನ್ನು ಇಟ್ಟುಕೊಂಡು ಅವರು ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳಾದ ನಾವು ಶಾಲಾ ದಿನಗಳಿಂದ ವಂದೇ ಮಾತರಂ ಗೀತೆಯನ್ನು ಹಾಡಿದವರು ಇಂದಿಗೂ ಹಾಡುತ್ತಿದ್ದೇವೆ ಮುಂದೆ ಹಾಡುತ್ತೇವೆ. ಆದರೆ ವಂದೇ ಮಾತರಂ ಗೀತೆಯ ಅಷ್ಟೂ ಚರಣವನ್ನು ಹಾಡಬೇಕು, ಅದನ್ನು ಹೀಗೆಯೇ ಹೇಳಬೇಕು ಎಂದು ಕಾಂಗ್ರೆಸ್ ನವರಿಗೆ ಭೋದನೆ ಮಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲಾ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರುಗಳಿಗೆ ಬಿಜೆಪಿಯ ಕಪಟ ರಾಷ್ಟ್ರ ಪ್ರೇಮದ ಪಾಠದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ವರ್ಷದ ಗುರು ಜಯಂತಿ ಉತ್ಸವವು ಗುರುವಾರ ಬಸ್ರೂರು ಕೋಟಿ ಚೆನ್ನಯ್ಯ ಪಂಜೂರ್ಲಿ ಗರಡಿಯಲ್ಲಿ ನಡೆಯಿತು. ಬಿಲ್ಲವ ಸಮಾಜ ಸೇವಾ ಸಂಘ ಬಸ್ರೂರು ವಲಯ ಇವರ ವತಿಯಿಂದ ನಡೆದ ಗುರು ಜಯಂತಿ ಉತ್ಸವ ಸಂಜೆ 06.30ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ನಡೆಯಿತು. ಶ್ರೀ ಕಾಳಿಗರಡಿ ಭಜನಾ ತಂಡ ಕೋಳ್ಕೇರಿ ಬಸ್ರೂರು ಇವರ ಕುಣಿತ ಹಾಗೂ ಕುಳಿತು ಭಜನಾ ಕಾರ್ಯಕ್ರಮ ನಡೆಯಿತು. ತದ ನಂತರ ಪ್ರಸಾದ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಸ್ರೂರು ಬಿಲ್ಲವ ಸಂಘದ ಅಧ್ಯಕ್ಷರಾದ ಜಯಸೂರ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ಜಿ. ಪೂಜಾರಿ, ದೈವಸ್ಥಾನದ ಅಧ್ಯಕ್ಷರು ಬಿ.ಟಿ. ಮಂಜುನಾಥ ಪೂಜಾರಿ, ಕೇಶವ ಪೂಜಾರಿ, ಶಿವರಾಮ ಪೂಜಾರಿ, ನರಸಿಂಹ ಪೂಜಾರಿ, ಅಶೋಕ್ ಕೆರೆಕಟ್ಟೆ ಮಹಿಳಾ ಘಟಕದ ಅಧ್ಯಕ್ಷರಾದ ಬೇಬಿ ಶ್ರೀಕಾಂತ್ ಇವರೊಂದಿಗೆ ಬಿಲ್ಲವ ಸಮಾಜದ ಅನೇಕ ಮುಖಂಡರು ಭಾಗವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಹಂಗಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ (42) ಎಂದು ಗುರುತಿಸಲಾಗಿದೆ. ಅವರು ಕೆಲಸ ಮಾಡಿ ಕಟ್ಟಡದ 1ನೇ ಮಹಡಿಯಲ್ಲಿ ಉಳಿದುಕೊಂಡಿದ್ದು, ಸೆ.1ರಂದು ರಾತ್ರಿ ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.3ರಂದು ರಾತ್ರಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ ಎನ್ನುವುದರ ಬಗ್ಗೆ ನಮ್ಮಲ್ಲಿ ಮೂಲಭೂತ ಮಾಹಿತಿಗಳು ಇರಬೇಕು ಮತ್ತು ಆ ಮೂಲಕ ಪರಿಸರವನ್ನು ರಕ್ಷಿಸುವಲ್ಲಿ ನಾವುಗಳು ಒಂದಾಗಿ ಕೈಜೋಡಿಸಬೇಕು ಎಂದು ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ ಉಡುಪಿಯ ಸೂಪರ್ವೈಸರ್ ಸರೋಜಾ ಎಸ್. ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಇ – ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್‌ನ ಸೂರಜ್ ಕೆ. ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್.ಕೆ. ಉಪಸ್ಥಿತರಿದ್ದರು. ಎಸ್.ವಿ ಕಾಮರ್ಸ್ ಕ್ಲಬ್ ಸಂಯೋಜಕರಾದ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ಸ್ನೇಹಾ ಖಾರ್ವಿ ಸ್ವಾಗತಿಸಿ, ತನ್ವಿ ವಂದಿಸಿದರು.
