Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.      ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳು ಬ್ಯಾಂಕ್‌ಗಳಲ್ಲಿ ಪಡೆದ ಸಾಲವನ್ನು ಹೊರತುಪಡಿಸಿ ತಾವು ತೊಡಗಿಸುವ ಬಂಡವಾಳದ ಅರ್ಧದಷ್ಟು ಹಣವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ನೀಡಲಾಗುವುದು, ಘಟಕದ ಸ್ಥಿರ ಬಂಡವಾಳದ ಶೇ.60 ರಷ್ಟು ಸಹಾಯಧನ, ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಸಂದರ್ಭದಲ್ಲಿ ಬ್ಯಾಂಕ್‌ಗಳಿಂದ ವಿಧಿಸಲಾಗುವ ಸಾಲ ಪ್ರಕ್ರಿಯೆ ಶುಲ್ಕ ಮರುಪಾವತಿ ಹಾಗೂ ವಿದ್ಯುತ್ ಇಲಾಖೆಯಿಂದ ವಿಧಿಸಲಾಗುವ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಮೇಲ್ಕಂಡ ಸೌಲಭ್ಯಗಳು ಗುರಿ ಆಧಾರಿತವಾಗಿದ್ದು, ಹೊಸದಾಗಿ ಅತೀಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಸಕ್ತ ಉದ್ಯಮಿಗಳು ಸೆಪ್ಟಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸೆಪ್ಟಂಬರ್ 30ರ ಒಳಗಾಗಿ ಸಲ್ಲಿಸಬಹುದಾಗಿದೆ. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳು ಮತ್ತೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂ.ಸಂಖ್ಯೆ :0820-2574978 ಅನ್ನು ಕಚೇರಿ ವೇಳೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿಯಲ್ಲಿ  ರಾಜ್ಯ ಸರಕಾರದ ನೂತನ ಪ್ರಜಾಸೇವೆ ಆಂದೋಲನದ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ದೇಶಿಸಿ ಮಾತನಾಡಿ, ಜನರ ಸಮಸ್ಯೆ ಗಳನ್ನು ಆಲಿಸಲು ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಜನ ಸ್ಪಂದನ ಕಾರ್ಯಕ್ರಮಗಳನ್ನು ಕೈಗೊಂಡಿದ್ದರೂ ಜನ ಸ್ಪಂದನ ಸಭೆಗಳಲ್ಲಿ ಇತ್ಯರ್ಥವಾದ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತಾದ ಮಾಹಿತಿ ಅಧಿಕಾರಿಗಳಿಗೆ ಇಲ್ಲ. ಈ ಸಭೆಯಲ್ಲೂ ಹಾಜರಾಗಲು ನೋಟಿಸು ಕಳುಹಿಸಿರುವ ಹೆಚ್ಚಿನ ಇಲಾಖೆಗಳು ಗೈರು ಹಾಜರಾಗಿದ್ದು ಹಾಗೂ ಪ್ರಜಾ ಸೇವೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದಾಗಿದೆ. ಹಾಗಾಗಿ ಪ್ರಜಾಸೇವೆ ಆಂದೋಲನವೂ ಮತ್ತೊಂದು ಕಾಟಾಚಾರದ ಜನ ಸ್ಪಂದನ ಕಾರ್ಯಕ್ರಮವಾಗದೇ ಕ್ಷೇತ್ರದ ಜನ ಸಾಮಾನ್ಯರ ಬೇಡಿಕೆಗಳಿಗೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಎಲ್ಲಾ ಇಲಾಖೆಗಳು ತಮ್ಮ ತಮ್ಮ ಹೊಣೆಯರಿತು,ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂ: 0820-2574978 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ. ಬೋಟ್‌ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತಕ್ಕೀಡಾದ ಬೋಟನ್ನು ಸದ್ಯ ಯಶಸ್ವಿಯಾಗಿ ದಡಕ್ಕೆ ತರಲಾಗಿದೆ. ಕಳೆದ ವಾರಷ್ಟೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲೂ ಕ್ಷಿಪ್ರ ಕಾರ್ಯಚರಣೆ ನಡೆಸಿ ಬೋಟ್ ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಬೋಟ್ ಅಪಘಾತಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ. ಇದನ್ನೂ ಓದಿ► ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ – https://kundapraa.com/?p=101294 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ  ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ  ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ  ಓಡನಾಡಿ ಕೋಟತಟ್ಟು ನಿವಾಸಿ  ರಾಮ ಮರಕಾಲ ಅವರು ಆಯ್ಕೆಯಾಗಿದ್ದಾರೆ. ಮಾಲಿನಿ ಮಲ್ಯ,ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಡಾ ನಾ ಮೊಗಸಾಲೆ ಹಾಗೂ ಶಾಕುಂತಲಾ ಭಟ್ ಇವರುಗಳಿಗೆ ಈ ಹಿಂದೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಗಿದೆ. ಗೆಳೆಯರ ಬಳಗ ಕಾರಂತ ಪುರಸ್ಕಾರ-2026ನ್ನು ಅಕ್ಟೋಬರ್ ತಿಂಗಳ 11ರ ಭಾನುವಾರ ಸಂಜೆ  ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ​ಮಣೂರು ನಿವಾಸಿ ದಾಕ್ಷಾಯಿಣಿ ರಾವ್ ಅವರು ಮಣೂರು ಮಹಾಲಿಂಗೇಶ್ವರ ಸನ್ನಿಧಾನದಲ್ಲಿರುವ ಶ್ರೀ ಹೇರಂಬ ಮಹಾಗಣಪತಿಯ ಸನ್ನಿಧಿಗೆ ಸುಮಾರು ₹30,000 ಮೌಲ್ಯದ ಸ್ಫಟಿಕ ರುದ್ರಾಕ್ಷಿ ಮಾಲೆಯನ್ನು ಸಮರ್ಪಿಸಿದರು. ಶ್ರೀ ದೇಗುಲದಲ್ಲಿ ​ಶ್ರೀ ವಿಘ್ನೇಶ್ವರನ ಸನ್ನಿಧಾನದಲ್ಲಿ ಅರ್ಚಕರ ಸಮ್ಮುಖದಲ್ಲಿ ಪವಿತ್ರ ಮಾಲೆಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ, ಮಣೂರು ದೇಗುಲದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಅವರಿಗೆ ಹಸ್ತಾಂತರಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ತೆಕ್ಕಟ್ಟೆ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ರಾಘವೇಂದ್ರ ಹೆಬ್ಬಾರ್ ಹಾಗೂ ಸಿಡಿಪಿಒ ಉಮೇಶ್ ಅವರು ಪೋಷಣ್ ಅಭಿಯಾನದ ಮಹತ್ವ ಮತ್ತು ಮಕ್ಕಳ ಆರೋಗ್ಯಕರ ಬೆಳವಣಿಗೆಯಲ್ಲಿ ಪೌಷ್ಟಿಕಾಂಶದ ಪಾತ್ರದ ಕುರಿತು ಮಾಹಿತಿ ನೀಡಿದರು. ಸುಮಾರು 25 ರಿಂದ 30 ಮಹಿಳೆಯರು, ಮುಖ್ಯವಾಗಿ ಮಕ್ಕಳ ತಾಯಂದಿರು, ಅಂಗನವಾಡಿ ಹಾಗೂ ಪಿಎಚ್‌ಸಿ ಸಿಬ್ಬಂದಿಗಳು, ರೋಟರಿ ಸದಸ್ಯರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೊನೆಯಲ್ಲಿ ರೋಟೇರಿಯನ್ ಚಂದ್ರಶೇಖರ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ: 0820-2562244, ಕಾರ್ಕಳ: 0858-230992, ಕುಂದಾಪುರ: 08254-230807 ಹಾಗೂ ಉಡುಪಿ: 0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಆತ್ಮ ಸಾಕ್ಷಾತ್ಕಾರಕ್ಕೂ ಶರೀರ ಅಗತ್ಯ. ಧರ್ಮಾರ್ಥ ಕಾಮ ಮೋಕ್ಷಗಳು ಶರೀರದಿಂದಲೇ ಸಾಧ್ಯವಾಗುವಂತದ್ದು. ಮನುಷ್ಯ ಶರೀರ ಇರುವುದೇ ಮೋಕ್ಷ ಸಾಧನೆಗೆ. ಹಾಗಾಗಿ ಶರೀರವನ್ನು ಉಳಿಸಿಕೊಂಡು, ಮೋಕ್ಷವನ್ನು ಪಡೆಯಲು ಆಹಾರ ಅಗತ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಮಂಗಳವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಶಿವ ಪಾರ್ವತಿಯರ ಮಧ್ಯೆ ವಾದ ನಡೆದ ಸಂಧರ್ಭವನ್ನು ಉದಾಹರಿಸಿ, ಶಿವನು ಭೌತಿಕ ಜಗತ್ತು ಮಿಥ್ಯೆ, ಶರೀರ ಮಾಯೆ, ಆಹಾರ ಸುಳ್ಳು, ಶುದ್ಧ ಚೈತನ್ಯ ಮಾತ್ರ ಸತ್ಯ ಎಂಬುದಾಗಿ ಹೇಳಿದ, ಆದರಿಂದ ಕುಪಿತಳಾದ ಪಾರ್ವತಿಯು, ಕಾಶಿಯಲ್ಲಿ ಅನ್ನಪೂರ್ಣೇಶ್ವರಿಯಾಗಿ ಅವತರಿಸಿದಳು. ಆನಂತರ ಶಿವನು ಭಿಕ್ಷುಕನ ರೂಪದಲ್ಲಿ ‘ಭವತಿ ಭಿಕ್ಷಾಂ ದೇಹಿ’ ಎಂದು ಕೇಳಿದ ಎಂಬ ಕಥೆಯನ್ನು ಉಲ್ಲೇಖಿಸಿ, ಇದು ಅನ್ನದ ಮಹತ್ವವನ್ನು ಲೋಕಕ್ಕೆ ಸಾರಲು ಆದಿದಂಪತಿಗಳು ಆಡಿದ ನಾಟಕ ಎಂದು ವಿವರಿಸಿದರು.…

Read More