ಬೈಂದೂರು: ಇಲಾಖೆಯಿಂದ ನೀಡುವ ಮಾಹಿತಿ, ತರಬೇತಿ ಪಡೆಯಲು ರೈತರು ತಯಾರಿಲ್ಲ. ಹಾಗಾಗಿ ಇಲ್ಲಿ ವ್ಯವಸ್ಥೆಗಳ ವೈಪಲ್ಯಕ್ಕಿಂತ ರೈತರ ಹಿಂಜರಿಕೆ ಎದ್ದು ಕಾಣುತ್ತಿದೆ. ಇಲಾಖೆಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದ್ದರೂ ಒಂದುಕಡೆ ಮಾಹಿತಿ ಕೊರತೆ ಹಾಗೂ ಇನ್ನೊಂದೆಡೆ ಮಾರುಕಟ್ಟೆಯ ಸಮಸ್ಯೆಗಳಿಂದ ಇಂದಿನ ದಿನಗಳಲ್ಲಿ ರೈತ ಸೋಲುತ್ತಿದ್ದಾನೆ ಎಂದು ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಭಿಪ್ರಾಯಪಟ್ಟರು. ನಾಗೂರು ಒಡೆಯರ ಮಠ ಲಲಿತಕೃಷ್ಣ ಸಭಾಗೃಹದಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ರೈತ ಮಹಿಳೆಯರಿಗಾಗಿ ಆಯೋಜಿಸಿದ ಹಣ್ಣು-ತರಕಾರಿ ಬೆಳೆಯುವ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಕಡಿಮೆ ವೆಚ್ಚದಲ್ಲಿ ಅಧಿಕ ಉತ್ಪಾದನೆಯಾಗುವ ಇಳುವರಿಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ರೈತರಿಗೆ ಸೂಕ್ತ ಮಾಹಿತಿ ನೀಡಬೇಕಾದ ಅಗತ್ಯವಿದೆ. ರೈತರು ಬೆಳೆದ ಹಣ್ಣು ತರಕಾರಿಗಳನ್ನು ಸಂಸ್ಕರಿಸಿ ಮೌಲ್ಯವರ್ಧಿತ ವ್ಯವಸ್ಥೆಯಿಂದ ಹೆಚ್ಚಿನ ಲಾಭಗಳಿಸಹುದು. ಕೃಷಿಗೆ ಕಾರ್ಮಿಕರ ಕೊರತೆ ಇದ್ದು ಕಾಲಕ್ಕೆ ತಕ್ಕಂತೆ ವ್ಯವಸಾಯ ಬೇಕಾದರೆ…
Author: ನ್ಯೂಸ್ ಬ್ಯೂರೋ
ಕುಂದಾಪುರ: ಬುಧವಾರ ರಾತ್ರಿ ಕೋಟೇಶ್ವರದ ಸನ್ನಿಧಿ ಮೊಬೈಲ್ ಅಂಗಡಿ ಎರಡನೆ ಬಾರಿಗೆ ಕಳವು ಪ್ರಕರಣ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆಳವು ತಿಂಗಳ ಹಿಂದೆ ಕೋಟೇಶ್ವರ ಬೈಪಾಸ್ ಸಮೀಪದ ಸುರರ್ಶ ಎಂಬುವರ ಮಾಲಕತ್ವದ ಸನ್ನಿಧಿ ಅಂಗಡಿಯಲ್ಲಿ ಕಳವು ನಡೆದಿತ್ತು. ಬುಧವಾರ ತಡರಾತ್ರಿ ಮತ್ತೆ ಕಳವು ನಡೆದಿದ್ದು, ಅಂಗಡಿಯ ಸೆಟ್ಟರ್ ಬೀಗ ಮುರಿದು ಹೊರಗಡೆಯ ಗಾಜನ್ನು ಒಡೆದು ಒಳನುಗ್ಗಿದ ಕಳ್ಳರು ಅಂಗಡಿಯೊಳಗಿಡಲಾಗಿದ್ದ ಕಾಣಿಕೆ ಡಬ್ಬಿಯನ್ನು ದೋಚಿದ್ದಾರೆ. ಅಂಗಡಿಯಲ್ಲಿದ್ದ ದುರಸ್ತಿಗಾಗಿ ಬಂದಿದ್ದ ಹಳೆ ಏಳೆಂಟು ಮೊಬೈಲ್‌ಗಳನ್ನು ಹಾಗೂ ಮೂರ‍್ನಾಲ್ಕು ಹೊಸ ಮೊಬೈಲ್ ಫೋನ್‌ಗಳನ್ನು ಮತ್ತು ಸುಮಾರು ಮುರು ಸಾವಿರ ನಗದು ಹಣವನ್ನು ದೋಚಿದ್ದಾರೆ. ಪಕ್ಕದಲ್ಲಿಯೇ ಇದ್ದ ದಿನೇಶ್ ಎಂಬುವರ ಮಾಲಕತ್ವದ ಯೂ ಲೈಕ್ ಫ್ಯಾಷನ್ ಎನ್ನುವ ಹೆಸರಿನ ಬಟ್ಟೆ ಮತ್ತು ಟೈಲರ್ ಅಂಗಡಿಗೆ ನುಗ್ಗಿದ ಕಳ್ಳರು ಅಲ್ಲಿದ್ದ ಐದು ಸಾವಿರ ನಗದು ಮತ್ತು ಟಿವಿಯನ್ನು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಕಳವಾದ ಸೊತ್ತುಗಳ ನಿಖರ ವಿವರಗಳು ಇನ್ನಷ್ಟೇ ತಿಳಿಯಬೇಕಿದ್ದು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದೇವಳದಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣದ ಬಗ್ಗೆ ಸಮಗ್ರ ತನಿಕೆ ನಡೆಸುತ್ತಿದ್ದು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇವಳದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಭದ್ರತೆಯ ಬಗ್ಗೆ ಸಂಪೂರ್ಣ ಗಮನ ಹರಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಕಛೇರಿ ಜಗದಾಂಭಿಕಾದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪ್ರಕರಣದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಯವರು ನೇತೃತ್ವದಲ್ಲಿ ತನಿಕೆ ಪ್ರಗತಿಯಲ್ಲಿದ್ದು ತಪ್ಪಿತಸ್ಥರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಲೋಪ ಕಂಡಬಂದಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲು ಸಿದ್ಧರಿದ್ದು ಸೂಕ್ತ ದಾಖಲೆಗಾಗಿ ಕಾಯುತ್ತಿದ್ದೇವೆ. ಆಡಳಿತಾತ್ಮಕ ದೃಷ್ಠಿಯಿಂದ ದೇವಳದ ಭದ್ರತೆಯನ್ನು ಬಲಪಡಿಸುವ ಬಗ್ಗೆ ಈಗಾಗಲೇ ಕಾರ್ಯೋನ್ಮಕರಾಗಿದ್ದೇವೆ. ಕುಂದಾಪ್ರ ಡಾಟ್ ಕಾಂ ಸುದ್ದಿ ದೇವಳದ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುವುದು ಕಾರ್ಯ ದೊಡ್ಡ ಮಟ್ಟದಲ್ಲಿ ನಡೆಯಬೇಕಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೆಂಗಳೂರು: ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘಟನಾ ಸಭೆಯು ಬೆಂಗಳೂರಿನ ಲಾಲ್‌ಬಾಲ್ ಉದ್ಯಾನವನದಲ್ಲಿ ಜರುಗಿತು. ಕಾಲೇಜಿನ ವಿವಿಧ ಚಟುವಟಿಕೆಗಳು ಹಾಗೂ ಇನ್ನಿತರೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಲುವಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಕಟ್ಟುವ ನಿರ್ಣಯ ಸಭೆಯಲ್ಲಿ ಕೈಗೊಳ್ಳಲಾಯಿತು. ಕುಂದಾಪುರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಮುನ್ನಡೆಸುತ್ತಿರುವ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೋರಿರುವ ಒಲವು ವಿದ್ಯಾರ್ಥಿ ಸಂಘಟನೆಯೊಂದನ್ನು ಕಟ್ಟಲು ಪ್ರೇರೆಪಿಸಿದೆ ಎನ್ನುವ ಹಳೆ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘವನ್ನು ಕಟ್ಟಿ ಕಾಲೇಜಿನ ಚಟುವಟಿಕೆಗಳಿಗೆ ಸಹಕಾರಿಯಾಗುವ ಮತ್ತು ವಿದ್ಯಾರ್ಥಿಗಳಿಗೊಂದು ಮಾದರಿಯಾಗುವ ನಿಟ್ಟಿನಲ್ಲಿ ಮುನ್ನಡೆಯುವ ನಿರ್ಣಯ ಕೈಗೊಂಡರು. ಕುಂದಾಪ್ರ ಡಾಟ್ ಕಾಂ ಸುದ್ದಿ ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ರಚನೆ, ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿ ನೊಂದಣಿಯನ್ನು ಆರಂಭಿಸಲಾಯಿತು. ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಶೀಘ್ರವೇ ಸಂಘವನ್ನು ಅಸ್ತಿತ್ವಕ್ಕೆ ತರುವ ನಿರ್ಣಯ ಕೈಗೊಳ್ಳಲಾಯಿತು.…
ಕುಂದಾಪುರ: ಸಮೀಪದ ಕಂದಾವರ ಗ್ರಾಮದ ಶ್ರೀ ಉಳ್ಳೂರು ಸ್ವಾಮಿ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾವಿನಮನೆ ಕನ್ನಂತ ಕುಟುಂಬಸ್ಥರು ನಡೆಸಿದ ಏಕಪವಿತ್ರ ನಾಗಮಂಡಲೋತ್ಸವ sಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ಅಚ್ಚುಕಟ್ಟಾಗಿ ನೆರವೇರಿತು. ಶ್ರೀ ಕಾರ್ತಿಕೇಯ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ, ಏಕಪವಿತ್ರ ನಾಗಮಂಡಲೋತ್ಸವ ಮದ್ಯಾಹ್ನ ಮಹಾ ಅನ್ನಸಂತರ್ಪಣೆ ಜರುಗಿತು. ರಾತ್ರಿ ಹಾಲಿಟ್ಟು ಸೇವೆ, ರಂಗಪೂಜೋತ್ಸವ, ಮಂಡಲ ಪೂಜೆ, ಮಂಡಲೋತ್ಸವ, ಮಂಡಲ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಮಾವಿನಮನೆ ವಿಶ್ವನಾಥ ಕನ್ನಂತ, ಎಂ. ವೆಂಕಟಾಚಲ ಕನ್ನಂತ, ಎಂ. ಶ್ರೀಕಾಂತ ಕನ್ನಂತ, ಪದ್ಮಾಕ್ಷಿ ಕನ್ನಂತ, ಜಯಶ್ರೀ ಕನ್ನಂತ, ವಾಣಿ ಕನ್ನಂತ ಕುಟುಂಬಸ್ಥರು, ದೇವಳದ ಪ್ರಮುಖರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆಯಲ್ಲಿ ಕಂಡ ಬಿಜೆಪಿ ಅಲೆ ಪಂಚಾಯತ್ ಚುನಾವಣೆಯಲ್ಲೂ ಮುಂದುವರಿದಿದೆ: ಬಿಎಂಎಸ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೋಕಸಭಾ ಚುನಾವಣೆಯಲ್ಲಿ ಆರಂಭವಾದ ಬಿಜೆಪಿ ಅಲೆ ನಂತರ ನಡೆದ ಗ್ರಾಪಂ ಚುನಾವಣೆ ಹಾಗೂ ಜಿಪಂ, ತಾಪಂ ಚುನಾವಣೆಯಲ್ಲಿ ಮುಂದುವರಿದ ಪರಿಣಾಮ ಬೈಂದೂರು ಕ್ಷೇತ್ರದಿಂದ ಐವರು ಜಿಪಂ ಮತ್ತು 15 ಜನ ತಾಪಂ ಸದಸ್ಯರು ಆಯ್ಕೆ ಆಗಲು ಕಾರಣವಾಗಿದೆ. ಬೈಂದೂರಿನಲ್ಲಿ ಇದ್ದ ಬಿಜೆಪಿ ಅಲೆ ಮುಂದಿನ ವಿಧಾನಸಭಾ ಚುನಾವಣೆ ವರೆಗೂ ಮುಂದುವರಿಸಿ ಕೊಂಡು ಹೋಗುವಂತೆ ಕಾರ‍್ಯಕರ್ತರಿಗೆ ಬೈಂದೂರು ಬ್ಲಾಕ್ ಬಿಜೆಪಿ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ ಕರೆ ನೀಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಪಕ್ಷದ ಆಶ್ರಯದಲ್ಲಿ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆದ ಜಿಪಂ ಹಾಗೂ ತಾಪಂ ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನೆ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಜಾತ್ಯಾತೀತ ಪಕ್ಷವಾಗಿದ್ದು, ಮುಸ್ಲಿಂ ವರ್ಗಕ್ಕೂ ಚುನಾವಣೆ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದು, ಮುಸ್ಲಿಂ ಜನರಲ್ಲೂ ಬಿಜೆಪಿ ಕಡೆ ಒಲವು ಮೂಡುತ್ತಿದೆ ಎಂದರು. ಉಡುಪಿ ಜಿಲ್ಲಾ ಬಿಜೆಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಿಂದೂ ಸಮಾಜದ ಸಾಮರಸ್ಯ, ದೇಶಪ್ರೇಮವನ್ನು ಸಾರುವ, ಸ್ವಾಭಿಮಾನಿ ಯುವಕರನ್ನು ರೂಪಿಸುವ ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತೆಕ್ಕಟ್ಟೆ ಘಟಕದ ಆಶ್ರಯದಲ್ಲಿ ವಿರಾಟ ಹಿಂದೂ ಸಮಾಜೋತ್ಸವ ಮಾ.6 ಭಾನುವಾರ ಮಧ್ಯಾಹ್ನ ತೆಕ್ಕಟ್ಟೆ ಹೈಸ್ಕೂಲ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದು ಸುಮಾರು ೫ ಸಾವಿರಕ್ಕೂ ಅಧಿಕ ಹಿಂದೂ ಭಾಂದವರು ಸಮಾರಂಭಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಿಂದ ಬೃಹತ್ ಶೋಭಾಯಾತ್ರೆ, ಬೈಕ್ ರ‍್ಯಾಲಿ ನಡೆಯಲಿದ್ದು ಪ್ರತಿ ಗ್ರಾಮಗಳಿಂದಲೂ ಯುಕವರು, ವಿದ್ಯಾರ್ಥಿಗಳು, ಹಿಂದೂ ಸಮಾಜ ಭಾಂದವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ. ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರ ಆನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ವಿಹಿಂಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿವಿಧ ಹಿಂದೂ ಸಂಘಟನೆಯ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಮಾಜೋತ್ಸವದ ಹಿನ್ನೆಲೆಯಲ್ಲಿ ತೆಕ್ಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಮೈದುನ ಹಾಗೂ ಆಕೆಯ ಪತ್ನಿಯಿಂದ ಕೊಲೆಯಾದ ಗಂಗೊಳ್ಳಿಯ ಉಪ್ಪಿನಕುದ್ರು ಕಳವಿನಬಾಗಿಲು ನಿವಾಸಿ ಜ್ಯೋತಿ ಖಾರ್ವಿ ಮನೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆ ಬಗ್ಗೆ ಆಕೆಯ ಪತಿ, ತಂಗಿ ಹಾಗೂ ಮನೆಯವರಿಂದ ವಿವರ ಪಡೆದ ಎಸ್ಪಿಯವರು, ಘಟನೆಯ ಆರೋಪಿಗಳ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ. ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಇರುವುದರಿಂದ ಪ್ರಕರಣದ ತನಿಖೆಗೆ ಸಹಕಾರಿಯಾಗಲಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಬಗ್ಗೆ ಆಕೆಯ ಮನೆಯವರು ಮಾಡಿದ ಮನವಿಗೆ ಉತ್ತರಿಸಿದ ಅವರು, ಪ್ರಕರಣ ಕೂಲಂಕೂಷ ತನಿಖೆ ನಡೆದು ಆರೋಪ ಸಾಬೀತಾದರೆ ಆರೋಪಿಗಳಿಗೆ 14 ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶಗಳಿವೆ. ಜೀವಾವಧಿ ಶಿಕ್ಷೆ ವಿಧಿಸುವ ಬಗ್ಗೆ ನ್ಯಾಯಾಧೀಶರು ಸೂಕ್ತ ತೀರ್ಮಾನ ಪ್ರಕಟಿಸಲಿದ್ದಾರೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆಯ ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಇಲಾಖೆ ಎಲ್ಲಾ…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಕಳೆದ ಕೆಲವಾರು ದಿನಗಳಿಂದ ಭಾರಿ ಗದ್ದಲ ಎಬ್ಬಿಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸೇವಾ ಕೌಂಟರ್‌ನ ತಿಜೋರಿ ಚಿನ್ನ ಕಳವು ಪ್ರಕರಣವನ್ನು ಭೇದಿಸುವಲ್ಲಿ ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡ ಯಶಸ್ವಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಶಿವರಾಮ ಮಡಿವಾಳ ಸೇರಿದಂತೆ ಇತರೇ ನಾಲ್ವರನ್ನು ಬಂಧಿಸಿದ್ದು, ಎಂಟು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದ ಭಾಗಿಗಳಾದ ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದು ಕಳವುಗೈಯಲಾದ ದೇವಿಯ ಬಹುಪಾಲು ಚಿನ್ನವನ್ನು ಮರಳಿ ವಶಕ್ಕೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಕುಂದಾಪ್ರ ಡಾಟ್ ಕಾಂ ವರದಿ ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಕೊಲ್ಲೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರಕರಣ ಬೆಳಕಿಗೆ ಬಂದದ್ದು ಹೇಗೆ? ದೇವಳದ ಒಂದನೇ ನಂಬರಿನ ಸೇವಾ ಕೌಂಟರ್‌ನಲ್ಲಿ ಕಳೆದ ಹದಿನೈದು ವರ್ಷಗಳಿಂದ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿವರಾಮ ಮಡಿವಾಳ ಕಳೆದ ಫೆ.15ರಿಂದ ತಿಜೋರಿಯ ಕೀಲಿಕೈಯೊಂದಿಗೆ ನಾಪತ್ತೆಯಾಗಿರುವ ಸುದ್ದಿ ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಅಲ್ಲಿಂದಲೇ ಚಿನ್ನ ಕಳವಿನ ಸಂಶಯ…
ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ, ಕೋಟೇಶ್ವರ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಮತ್ತು ರುಡ್‌ಸೆಟ್ ಸಂಸ್ಥೆ ಬ್ರಹ್ಮಾವರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಸ್ವ ಉದ್ಯೋಗ ಮಾಹಿತಿ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಗಾರದಲ್ಲಿ ರುಡ್ ಸೆಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಕರುಣಾಕರ ಜೈನ್ ವಿದ್ಯಾರ್ಥಿಗಳಿಗೆ ಸ್ವ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಅವರು ತಮ್ಮ ಉಪನ್ಯಾಸದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ವ ಉದ್ಯೋಗಿಗಳಾಗಿ ದೇಶದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವಂತೆ ಕರೆನೀಡಿದರು. ಉದ್ಘಾಟನಾ ಭಾಷಣ ಮಾಡಿದ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್ ಸೇರಿಗಾರ್, ಯುವಕರನ್ನು ಸ್ವ ಉದ್ಯೋಗಿಗಳಾಗುವಂತೆ ಮಾಡಿ ಅವರಲ್ಲಿ ಉತ್ಸಾಹ ತುಂಬಿ ದೇಶದ ಜ್ವಲಂತ ಸಮಸ್ಯೆಯಾಗಿರುವ ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು. ಈ ಕಾರ್ಯಗಾರದಲ್ಲಿ ಪ್ರಾಂಶುಪಾಲರಾದ ಶ್ರೀ ನಿತ್ಯಾನಂದ ವಿ ಗಾಂವಕರ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕುಂದಾಪುರ ಸನ್ ರೈಸ್ ಅಧ್ಯಕ್ಷರಾದ ದಿನಕರ ಪಾಟೇಲ…
