Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯೋತ್ಸವ ಹಾಗೂ ಭಜನೋತ್ಸವ ಕಾರ್ಯಕ್ರಮ ಗುರುವಾರದಂದು ನಡೆಯಿತು. ಬೆಳಿಗೆ 7:30ಕ್ಕೆ ಭಜನಾ ದೀಪ ಸ್ಥಾಪನೆ ಶ್ರೀದೇವಿಗೆ ಕಲಶಾಭಿಷೆಕ ಚಂಡಿಕಾಹೋಮ, ನಾಗದೇವರ ಸನ್ನಿಧಿಯಲ್ಲಿ ಕಲಾಹೋಮ ಮಹಾಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿಯ ಮಾರ್ಗದರ್ಶನದಲ್ಲಿ ಫೀಲ್ಡ್ ಟ್ರಿಪ್ ಹಮ್ಮಿಕೊಳ್ಳಲಾಯಿತು. ಮಕ್ಕಳನ್ನು ಸ್ಥಳೀಯ ಪ್ರದೇಶಗಳಾದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಿಗೆ ಕರೆದುಕೊಂಡು ಹೋಗಲಾಯಿತು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಅಲ್ಲಿಗೆ ಬರುವ ಹಾಗೂ ಅಲ್ಲಿಂದ ತೆರಳುವ ಬಸ್ಸುಗಳನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ಬಸ್ಸು ನಿಲ್ದಾಣದ ಕಾರ್ಯವೈಖರಿಯನ್ನು ತಿಳಿಸಿ ಹೇಳಲಾಗಿದ್ದು, ಅವರು ಪ್ರಯಾಣಿಕರ ಚಲನವಲನವನ್ನು ಗಮನಿಸಿದರು. ಅಲ್ಲಿಂದ ರೈಲ್ವೆ ನಿಲ್ದಾಣಕ್ಕೆ ತೆರಳಿದ ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತು ರೈಲಿನ ಆಗಮನವನ್ನು ನಿರೀಕ್ಷಿಸಿದರು. ಮಕ್ಕಳಿಗೆ ಹೋಗಿ ಬರುವ ಎರಡು ರೈಲುಗಳನ್ನು ಕಾಣುವ ಅವಕಾಶ ಲಭಿಸಿದ್ದು, ಪ್ರಯಾಣದ ಸುರಕ್ಷತೆಗಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಯಿತು. ವಿದ್ಯಾರ್ಥಿಗಳ ಜೊತೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಸುಜಾತಾ ಸದಾರಾಮ್, ಶಿಕ್ಷಣ ಸಂಯೋಜಕಿಯರಾದ ದೀಪಿಕಾ ದೇವಾಡಿಗ ಹಾಗೂ ಫರ್ನಾಜ್, ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜನವರಿಯಲ್ಲಿ ನಡೆಸಿದ ಜೆಇಇ ಮೈನ್ಸ್ 2026ರ ಹಂತ ಒಂದರ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ನಿಹಾಲ್ ಎಚ್.ಜಿ. ಅವರು 98.5578 ಪರ್ಸೆಂಟೈಲ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಕೃತಿಯ ಮೇಲಿನ ಅನಾಚಾರದಿಂದ ವ್ಯತಿರಿಕ್ತ ಪರಿಣಾಮ ಅನುಭವಿಸುತ್ತಿದ್ದೇವೆ. ಇದು ಅತ್ಯಂತ ಶೋಚನೀಯ ವಿಚಾರವಾಗಿದೆ. ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು. ಅವರು ಇಲ್ಲಿನ ಸಾಸ್ತಾನದ ಬ್ರಹ್ಮಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಶಿವಕೃಪಾ ಯುವಕ ಮಂಡಲ ಸಾಸ್ತಾನ ಶಿವರಾತ್ರಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಶಿವನಾದ ಸಾಂಸ್ಕೃತಿಕ ಪರ್ವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಕೃಪಾ ಸಂಘಟನೆ ಪರಿಸರದ ಬಗ್ಗೆ ಹೆಚ್ಚಿನ ಒಲವು ತೊರುತ್ತಿದೆ. ಅದೇ ರೀತಿ ಪ್ರತಿಯೊರ್ವರು ಕಾಳಜಿ ವಹಿಸಿ ಮುಂದಾಗಬಹುದಾದ ಅನಾಹುತವನ್ನು ತಪಿಸಬಹುದು ಎಂದು ಶಿವಕೃಪಾ ಸಂಘಟನೆಗೆ ಶುಭಹಾರೈಸಿದರು. ಕಾರ್ಯಕ್ರಮವನ್ನು ಹೊಂಬಾಡಿ ಮಂಡಾಡಿ ಗ್ರಾ.ಪಂ ಪಿಡಿಒ ಚಂದ್ರಕಾಂತ್  ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉದ್ಯಮಿ ನಾಗೇಶ್ ಪೈ ವಹಿಸಿದ್ದರು. ಸಭೆಯಲ್ಲಿ ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟು ಸುರೇಶ್ ಪೂಜಾರಿ ಪಾಂಡೇಶ್ವರ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಲಿಂಗೇಶ್ವರ ದೇಗುಲದ ಮುಖ್ಯಸ್ಥ ಭಾಸ್ಕರ್ ತುಂಗ, ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಕಾರ್ಯದರ್ಶಿ ಲಕ್ಷ್ಮೀನಾರಾಯಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿರುವುದು, ಅವರೊಂದಿಗೆ ಸಂವಾದ ನಡೆಸಿರುವುದು ನಿಜಕ್ಕೂ ಒಂದು ಅವಿಸ್ಮರಣೀಯ ಕ್ಷಣಗಳಲ್ಲಿ ಒಂದು ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅಭಿಪ್ರಾಯಿಸಿದ್ದಾರೆ. ಅವರು ಹರ್ಕೂರು ಗ್ರಾಮದ ನಾರ್ಕಳಿ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳ ಮನೆಯಲ್ಲಿ ಗ್ರಾಮ ವಾಸ್ತವ್ಯ ಕೈಗೊಂಡ ವೇಳೆ ಶಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊರಗ ಸಮುದಾಯದ ಬಗ್ಗೆ ವಿಶೇಷ ಒಲವು ಹೊಂದಿರುವ ಗಂಟಿಹೊಳೆ ಅವರ ಬಗ್ಗೆ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳು ಇದೇ ವೇಳೆ ಅಭಿಮಾನ ವ್ಯಕ್ತಪಡಿಸಿದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಗಂಟಿಹೊಳೆ ಅವರು, ಸಮಾಜದ ಮುಖ್ಯವಾಹಿನಿಗೆ ತೆರೆದುಕೊಳ್ಳುತ್ತಿರುವ ಕೊರಗ ಸಮಾಜವನ್ನು ಹಿಂದೂ ಸಮಾಜ ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದೆ. ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೊಸ ಪ್ರೇರಣೆಯನ್ನು ನೀಡಿದೆ ಮಾತ್ರವಲ್ಲದೆ ಅವರ ನೋವು ನಲಿವುಗಳನ್ನು ಅರಿತುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಬರೆದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಲಾ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ವಾರ್ಷಿಕ ಸಂಭ್ರಮ ಸುರಭಿ ಜೈಸಿರಿಯಲ್ಲಿ ಹಿರಿಯ ನಟಿ, ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಫೆಬ್ರವರಿ 19 ರಿಂದ 22 ಫೆಬ್ರವರಿ 2026ರ ತನಕ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ದಿ. ಹೊಸಾಡು ಸುಬ್ರಾಯ ಶೇರುಗಾರ್‌ ಸಂಸ್ಮರಣೆಯ ಸಾಂಸ್ಕೃತಿಕೋತ್ಸವವು ಪ್ರತಿದಿನ ಸಂಜೆ 6:00ಕ್ಕೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ. ಫೆ.20ರಂದು ಬಿಂದುಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ. ಉದ್ಯಮಿ ಕೃಷ್ಣಮೂರ್ತಿ ಮಂಜ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ► ಫೆ.19ರಿಂದ 22ರ ತನಕ ಸುರಭಿ ರಿ. ಬೈಂದೂರು ಇದರ ವಾರ್ಷಿಕ ಸಂಭ್ರಮ ಸುರಭಿ ಜೈಸಿರಿ – https://kundapraa.com/?p=95886 .

Read More

ಕುಂದಾಪ್ರ ಡಾಟ್‌ ಕಾಂ  ಸುದ್ದಿ.ಕುಂದಾಪುರ: ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರ 66ರ ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಎದುರು 12 ಗಂಟೆ ಸುಮಾರಿಗೆ ನಡೆದ ಬೈಕ್ ಹಾಗೂ ಕಂಟೇನರ್ ಲಾರಿ ನಡುವಿನ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ಬೈರು ಎಂಬವರ ಪುತ್ರ ಜಯರಾಮ್ ಕಾಟ್ಕೋಟ್ (32) ಮೃತಪಟ್ಟವರು. ಕಂಟೈನರ್ ಚಕ್ರದ ಅಡಿಯಲ್ಲಿ ಸಿಲುಕಿದ್ದ ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕನನ್ನು ಕೂಡಲೇ ಸ್ಥಳೀಯರಾದ ಆಟೋ ಚಾಲಕ ಹರೀಶ್ ಪೂಜಾರಿ ಹಾಗೂ ಗಂಗೊಳ್ಳಿಯ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹೊರತೆಗೆದರು. ಉಡುಪಿ ಕಡೆ ರೋಗಿ ಒಬ್ಬರನ್ನು ಬಿಟ್ಟು ವಾಪಸ್ ಬರುತ್ತಿದ್ದು, ತಾಲೂಕು ಆಸ್ಪತ್ರೆ ಹೊನ್ನಾವರ ಇದರ ಆಂಬುಲೆನ್ಸ್ ಚಾಲಕ ನಾಗರಾಜ್ ನಾಯ್ಕ್ aವರಲ್ಲಿ ಗಾಯಾಳುವನ್ನು ಆಸ್ಪತ್ರೆ ಕೊಂಡೆಯಲು ವಿನಂತಿಸಿಲಾಯಿತು. ಕೂಡಲೇ ಗಾಯಾಳುವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯುದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಯುವಕನ ಪ್ಯಾಂಟ್ ಕೀಸೆಯಲ್ಲಿದ್ದ ಲೈಸೆನ್ಸ್  ಆಧಾರದಲ್ಲಿ…

Read More

ಕುಂದಾಪ್ರ ಡಾಟ್‌ ಕಾ ಸುದ್ದಿ.ಕುಂದಾಪುರ: “ವ್ಯಕ್ತಿಗಿಂತ ದೇಶ ದೊಡ್ಡದು. ದೇಶದ ಅಭಿವೃದ್ಧಿಯ ಪ್ರತಿ ಹಂತದಲ್ಲೂ ನಮ್ಮ ಕೊಡುಗೆ ಇರಬೇಕು” ಎಂದು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇದರ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಕೆ. ಜಯಪ್ರಕಾಶ್ ರಾವ್ ಹೇಳಿದರು. ಅವರು ಮಂಗಳವಾರ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ “ತಿಂಗಳ ಅತಿಥಿ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಭಾರತವು ಶಾಂತಿಪ್ರಿಯ ರಾಷ್ಟ್ರ. ಯುದ್ಧದಿಂದ ಮಾನವೀಯತೆ ಕುಸಿಯುತ್ತದೆ. ಸಾವು -ನೋವುಗಳಾಗುತ್ತವೆ ಹೊರತು ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಹೇಳಿದರು. ತಾಂತ್ರಿಕವಾಗಿ ಮತ್ತು ಬಾಹ್ಯಾಕಾಶ, ಉಪಗ್ರಹ ಮತ್ತು ಸೇನಾ ವಲಯದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಹೊಂದುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡ ನಾವುಗಳು ಜಗತ್ತಿನ ಪ್ರಬಲ ದೇಶಗಳಿಗೆ ಪೈಪೋಟಿ ಕೊಡುವಷ್ಟು ಬೆಳೆದಿದ್ದೇನೆ. ಇದರ ಹಿಂದೆ ನಮ್ಭಮದೇ ದೇಶದ ಪ್ರತಿಭಾನ್ವಿತ ವಿಜ್ಞಾನಿಗಳು, ಅಭಿಯಂತರರು ತಂತ್ರಜ್ಞರು ತಮ್ಮ ಕೊಡುಗೆ ನೀಡಿದ್ದಾರೆ. ಅದರಲ್ಲೂ ಮಾಜಿ ರಾಷ್ಟ್ರಪತಿ ಎಪಿಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾವಾಣಿಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ ವಿಜಯವಾಣಿಯ ರವೀಂದ್ರ ಕೆ., ಕಾರ್ಯದರ್ಶಿಯಾಗಿ ಹರೀಶ್ ಕಿರಣ್ ತುಂಗ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರುಗಳನ್ನು ನೋಂದಣಿ ಮಾಡಿಸುವುದರೊಂದಿಗೆ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನೆಯ ಕುರಿತು ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಸಂಘಟಿತ ಕಾರ್ಮಿಕರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ…

Read More